logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಕೃಷಿ ಇಲಾಖೆ ಕಟ್ಟಡ ಕಾಮಗಾರಿ ಅರ್ಧಂಬರ್ಧ* *ಯಳಂದೂರು* 2021-22 ನೇ ಸಾಲಿನ ಕೃಷಿ ಇಲಾಖೆಯ ಅನುದಾನವಿದ್ದು ಕಚೇರಿ ದುರಸ್ತಿಗೆ ಬಳಸಿಕೊಳ್ಳಲು ಅವಕಾಶವಿದ್ದು, 4 ವರ್ಷ ಪೂರೈಸಿದರು ಕಾಮಗಾರಿಯನ್ನು ಪೂರ್ಣಮಾಡದೇ ಕಾಲಾಹರಣ ಮಾಡುತ್ತಿರುವ ಪರಿಣಾಮ ಸರ್ಕಾರದ ಹಣ ವ್ಯರ್ಥವಾಗುತ್ತಿದೆ. ಪಟ್ಟಣದ ಕೃಷಿ ಇಲಾಖೆ ಕಚೇರಿಯ ಕಟ್ಟಡದ ದುರಸ್ತಿ ಕಾಮಗಾರಿ ಕೈಗೊಂಡು ಹಲವು ವರ್ಷಗಳು ಕಳೆದಿವೆ. ಆದರೆ ಕಾಮಗಾರಿ ಪೂರ್ಣಮಾಡದೇ ಅರ್ಧಂಬರ್ಧವಾಗಿ ಮಾಡಿ ಗುತ್ತಿಗೆದಾರ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ವರ್ಗ. ಕೈ ಬಿಟ್ಟಿರುವ ಪರಿಣಾಮ ಸರ್ಕಾರದ ಅನುದಾನ ಬೇಕಾ ಬಿಟ್ಟಿಯಾಗಿ ವ್ಯರ್ಥವಾಗಿದೆ. 2021-22 ನೇ ಸಾಲಿನ ಜಿಲ್ಲಾ ಪಂಚಾಯಿತಿ ಯೋಜನೆಯಡಿಯಲ್ಲಿ ಕೃಷಿ ಇಲಾಖೆ ಕಟ್ಟಡ ಕಾರ್ಯಕ್ರಮಮದಡಿಯಲ್ಲಿ 413 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿಪಡಿಸುವ ಕಾಮಗಾರಿಗೆ ಬಿಡುಗಡೆಯಾದ ಅನುದಾನವನ್ನು ಜಿಲ್ಲಾ ಪಂಚಾಯಿತಿ ಲೆಕ್ಕ ಶೀರ್ಷಿಕೆಗೆ ಜಮಾ ಮಾಡಲಾಗಿದೆ. ಆದರೆ ಈ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಂಡಿರುವ ಗುತ್ತಿಗೆದಾರ ಹಾಗು ಸಂಬಧಪಟ್ಟ ಜೆ.ಇ 2024 ನವೆಂಬರ್‌ನಲ್ಲಿ ಕಟ್ಟಡ ದುರಸ್ತಿ ... ಕಾಮಗಾರಿಯನ್ನು ಆರಂಭಿಸಿದ್ದಾರೆ. ಆದರೆ ಕೆಲವು ಸಣ್ಣ ಪುಟ್ಟ ಕೆಲಸಗಳನ್ನು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಬಿಟ್ಟಿದ್ದು 한명이 ಕಾಮಗಾರಿಯನ್ನು ಪಟ್ಟಿ ಅಂದಾಜು ಅನುಷ್ಠಾನಗೊಳಿಸಬೇಕೆಂದು ಪಿಆರ್‌ಇಡಿ ಇಲಾಖೆಯು ಜೆಇ ಹಾಗೂ ಗುತ್ತಿಗೆದಾರ ಕಾಮಗಾರಿ ಪಡೆದಿರುವ ಗುತ್ತಿಗೆದಾರನಿಗೆ ನೋಟೀಸ್ ನೀಡಿ ಕೈ ತೊಳೆದುಕೊಂಡು ಕುಳಿತಿದ್ದಾರೆ. *ವಿದ್ಯುತ್‌ನಿಂದ ಅಪಾಯವಾಗುವ ಸಂಭವ* : ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ವಿದ್ಯುತ್ ಸಂಪರ್ಕ ಹಾಗೂ ವಾಲ್ಸ್ ಸೀಲಿಂಗ್ ಮಾಡುವ ಸಮಯದಲ್ಲಿ ವಿದ್ಯುತ್ ವೈರ್‌ಗಳನ್ನೂ ಎಳೆದು ಬೇಕಾ ಬಿಟ್ಟಿಯಾಗಿ ಬಿಡಲಾಗಿದೆ. ಇದರಿಂದ ಸಹಾಯಕ ನಿರ್ದೇಶಕ ಕೊಠಡಿಯಲ್ಲಿ ವಿದ್ಯುತ್ ವೈರ್‌ಗಳು ಹಾಗೇ ಬಿಟ್ಟಿರುವ ಪರಿಣಾಮ ದಿನನಿತ್ಯ ನೂರಾರು ರೈತರು, ಸಾರ್ವಜನಿಕರು ಆಗಮಿಸುವ ಕಚೇರಿಯಲ್ಲಿ ಪ್ರಾಣಪಾಯಕ್ಕೂ ತೊಂದರೆಯಾಗುವ ಅಪಾಯವಿದೆ. ಈಚೆಗೆ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಚೇರಿಯ 2 ಕಂಪ್ಯೂಟರ್ ಸುಟ್ಟು ಹೋಗಿದೆ. ಜತೆಗೆ ಕಚೇರಿಯಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾವೂ ಸಹ ಕೆಟ್ಟು ಹೋಗಿದೆ. ಇಷ್ಟೆಲ್ಲಾ ಸಮಸ್ಯೆಗಳ ನಡುವೆ ಇಲ್ಲಿನ ಸಿಬ್ಬಂದಿ ಕಾರ್ಯನಿರ್ವಹಿಸಬೇಕಾದ ಅನಿವಾರ್ಯತೆ ಇದೆ. *ಅಂದಾಜು ಪಟ್ಟಿಯಲ್ಲಿರುವ ಕಾಮಗಾರಿ ಮಾಹಿತಿ*: ವಾಲ್ ಸೀಲಿಂಗ್, ಮೀನೀರ್ ಪ್ಯಾನಲ್‌, ಶೌಚಗೃಹಕ್ಕೆ ಬೇಸಿನ್ ಅಳವಡಿಕೆ, ಗೇಟ್, ಕೊಲ್ಯಾಪ್ಪಿಬಲ್ ಶೆಟ್ಟರ್ಸ್, ಹಾಯಕ್ಕಾಗಿ ಮಣ್ಣನ್ನು ಅಗೆಯುವುದು, ಜೆಲ್ಲಿ ಅಳವಡಿಸುವುದು, ಎಂ.20 ರಿಂದ ಕಾಂಕ್ರಿಟ್, ಕಬ್ಬಿಣದ ಸರಬರಾಜು, ಸುಣ್ಣ ಬಣ್ಣ, ಇಂಟರ್ ಲಾಕ್ ಪವರ್ ಅಳವಡಿಸವುದು ಸೇರಿದಂತೆ ಇತರೆ ಕಾಮಗಾರಿಯನ್ನು ಅಂದಾಜು ಪಟ್ಟಿಯಲ್ಲಿ ಸೇರಿಸಲಾಗಿತ್ತು, ಆದರೆ ಕಟ್ಟಡದ ದುರಸ್ತಿಯಲ್ಲಿ ಈ ಕಾಮಗಾರಿಗಳು ಪೂರ್ಣಗೊಳಿಸಿಲ್ಲ. *ಪತ್ರಕ್ಕೆ ಸಿಮೀತವಾದ ಮಾಹಿತಿ*: ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಕಾರ್ಯಪಾಲಕ ಅಭಿಯಂತರ ಸಾಕಷ್ಟು ಬಾರಿ ಪತ್ರದ ಮೂಲಕ ಮಾಹಿತಿ ನೀಡಿದರೂ ಈ ಬಗ್ಗೆ ಗಮನಹರಿಸದೇ ಇರುವುದು ದೊಡ್ಡ ತಲೆ ನೋವಾಗಿದೆ. ದಿನನಿತ್ಯ ರೈತರ ಮಳೆ, ಬೆಳೆ, ಗೊಬ್ಬರ ಖರೀದಿಗೂ ಕಷ್ಟವಾಗಿದೆ. ಕಂಪ್ಯೂಟರ್ ಸುಟ್ಟಿರುವುದರಿಂದ . ತೊಂದರೆಯಾಗಿದೆ. ಕೂಡಲೇ ಸಂಬಂಧಪಟ್ಟವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ವಹಿಸಬೇಕು. ಈ ಕಾಮಗಾರಿಯನ್ನು ಅಂದಾಜು ಪಟ್ಟಿಯಂತೆ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ವರದಿ ಎಸ್.ಪುಟ್ಟಸ್ವಾಮಿ ಹೊನ್ನೂರು ಚಾಮರಾಜನಗರ ಜಿಲ್ಲೆ

on 23 January
user_S.Puttaswamyhonnur
S.Puttaswamyhonnur
Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
on 23 January
1b69f922-c160-44dc-a7fa-eb56784b4f81

*ಕೃಷಿ ಇಲಾಖೆ ಕಟ್ಟಡ ಕಾಮಗಾರಿ ಅರ್ಧಂಬರ್ಧ* *ಯಳಂದೂರು* 2021-22 ನೇ ಸಾಲಿನ ಕೃಷಿ ಇಲಾಖೆಯ ಅನುದಾನವಿದ್ದು ಕಚೇರಿ ದುರಸ್ತಿಗೆ ಬಳಸಿಕೊಳ್ಳಲು ಅವಕಾಶವಿದ್ದು, 4 ವರ್ಷ ಪೂರೈಸಿದರು ಕಾಮಗಾರಿಯನ್ನು ಪೂರ್ಣಮಾಡದೇ ಕಾಲಾಹರಣ ಮಾಡುತ್ತಿರುವ ಪರಿಣಾಮ ಸರ್ಕಾರದ ಹಣ ವ್ಯರ್ಥವಾಗುತ್ತಿದೆ. ಪಟ್ಟಣದ ಕೃಷಿ ಇಲಾಖೆ ಕಚೇರಿಯ ಕಟ್ಟಡದ ದುರಸ್ತಿ ಕಾಮಗಾರಿ ಕೈಗೊಂಡು ಹಲವು ವರ್ಷಗಳು ಕಳೆದಿವೆ. ಆದರೆ ಕಾಮಗಾರಿ ಪೂರ್ಣಮಾಡದೇ ಅರ್ಧಂಬರ್ಧವಾಗಿ ಮಾಡಿ ಗುತ್ತಿಗೆದಾರ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ವರ್ಗ. ಕೈ ಬಿಟ್ಟಿರುವ ಪರಿಣಾಮ ಸರ್ಕಾರದ ಅನುದಾನ ಬೇಕಾ ಬಿಟ್ಟಿಯಾಗಿ ವ್ಯರ್ಥವಾಗಿದೆ. 2021-22 ನೇ ಸಾಲಿನ ಜಿಲ್ಲಾ ಪಂಚಾಯಿತಿ ಯೋಜನೆಯಡಿಯಲ್ಲಿ ಕೃಷಿ ಇಲಾಖೆ ಕಟ್ಟಡ ಕಾರ್ಯಕ್ರಮಮದಡಿಯಲ್ಲಿ 413 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿಪಡಿಸುವ

8f8fb1cf-641c-42eb-af1f-ac45fbdeb749

ಕಾಮಗಾರಿಗೆ ಬಿಡುಗಡೆಯಾದ ಅನುದಾನವನ್ನು ಜಿಲ್ಲಾ ಪಂಚಾಯಿತಿ ಲೆಕ್ಕ ಶೀರ್ಷಿಕೆಗೆ ಜಮಾ ಮಾಡಲಾಗಿದೆ. ಆದರೆ ಈ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಂಡಿರುವ ಗುತ್ತಿಗೆದಾರ ಹಾಗು ಸಂಬಧಪಟ್ಟ ಜೆ.ಇ 2024 ನವೆಂಬರ್‌ನಲ್ಲಿ ಕಟ್ಟಡ ದುರಸ್ತಿ ... ಕಾಮಗಾರಿಯನ್ನು ಆರಂಭಿಸಿದ್ದಾರೆ. ಆದರೆ ಕೆಲವು ಸಣ್ಣ ಪುಟ್ಟ ಕೆಲಸಗಳನ್ನು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಬಿಟ್ಟಿದ್ದು 한명이 ಕಾಮಗಾರಿಯನ್ನು ಪಟ್ಟಿ ಅಂದಾಜು ಅನುಷ್ಠಾನಗೊಳಿಸಬೇಕೆಂದು ಪಿಆರ್‌ಇಡಿ ಇಲಾಖೆಯು ಜೆಇ ಹಾಗೂ ಗುತ್ತಿಗೆದಾರ ಕಾಮಗಾರಿ ಪಡೆದಿರುವ ಗುತ್ತಿಗೆದಾರನಿಗೆ ನೋಟೀಸ್ ನೀಡಿ ಕೈ ತೊಳೆದುಕೊಂಡು ಕುಳಿತಿದ್ದಾರೆ. *ವಿದ್ಯುತ್‌ನಿಂದ ಅಪಾಯವಾಗುವ ಸಂಭವ* : ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ವಿದ್ಯುತ್ ಸಂಪರ್ಕ ಹಾಗೂ ವಾಲ್ಸ್ ಸೀಲಿಂಗ್ ಮಾಡುವ ಸಮಯದಲ್ಲಿ ವಿದ್ಯುತ್ ವೈರ್‌ಗಳನ್ನೂ ಎಳೆದು ಬೇಕಾ ಬಿಟ್ಟಿಯಾಗಿ

ಬಿಡಲಾಗಿದೆ. ಇದರಿಂದ ಸಹಾಯಕ ನಿರ್ದೇಶಕ ಕೊಠಡಿಯಲ್ಲಿ ವಿದ್ಯುತ್ ವೈರ್‌ಗಳು ಹಾಗೇ ಬಿಟ್ಟಿರುವ ಪರಿಣಾಮ ದಿನನಿತ್ಯ ನೂರಾರು ರೈತರು, ಸಾರ್ವಜನಿಕರು ಆಗಮಿಸುವ ಕಚೇರಿಯಲ್ಲಿ ಪ್ರಾಣಪಾಯಕ್ಕೂ ತೊಂದರೆಯಾಗುವ ಅಪಾಯವಿದೆ. ಈಚೆಗೆ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಚೇರಿಯ 2 ಕಂಪ್ಯೂಟರ್ ಸುಟ್ಟು ಹೋಗಿದೆ. ಜತೆಗೆ ಕಚೇರಿಯಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾವೂ ಸಹ ಕೆಟ್ಟು ಹೋಗಿದೆ. ಇಷ್ಟೆಲ್ಲಾ ಸಮಸ್ಯೆಗಳ ನಡುವೆ ಇಲ್ಲಿನ ಸಿಬ್ಬಂದಿ ಕಾರ್ಯನಿರ್ವಹಿಸಬೇಕಾದ ಅನಿವಾರ್ಯತೆ ಇದೆ. *ಅಂದಾಜು ಪಟ್ಟಿಯಲ್ಲಿರುವ ಕಾಮಗಾರಿ ಮಾಹಿತಿ*: ವಾಲ್ ಸೀಲಿಂಗ್, ಮೀನೀರ್ ಪ್ಯಾನಲ್‌, ಶೌಚಗೃಹಕ್ಕೆ ಬೇಸಿನ್ ಅಳವಡಿಕೆ, ಗೇಟ್, ಕೊಲ್ಯಾಪ್ಪಿಬಲ್ ಶೆಟ್ಟರ್ಸ್, ಹಾಯಕ್ಕಾಗಿ ಮಣ್ಣನ್ನು ಅಗೆಯುವುದು, ಜೆಲ್ಲಿ ಅಳವಡಿಸುವುದು, ಎಂ.20 ರಿಂದ ಕಾಂಕ್ರಿಟ್, ಕಬ್ಬಿಣದ ಸರಬರಾಜು, ಸುಣ್ಣ ಬಣ್ಣ, ಇಂಟರ್ ಲಾಕ್

ಪವರ್ ಅಳವಡಿಸವುದು ಸೇರಿದಂತೆ ಇತರೆ ಕಾಮಗಾರಿಯನ್ನು ಅಂದಾಜು ಪಟ್ಟಿಯಲ್ಲಿ ಸೇರಿಸಲಾಗಿತ್ತು, ಆದರೆ ಕಟ್ಟಡದ ದುರಸ್ತಿಯಲ್ಲಿ ಈ ಕಾಮಗಾರಿಗಳು ಪೂರ್ಣಗೊಳಿಸಿಲ್ಲ. *ಪತ್ರಕ್ಕೆ ಸಿಮೀತವಾದ ಮಾಹಿತಿ*: ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಕಾರ್ಯಪಾಲಕ ಅಭಿಯಂತರ ಸಾಕಷ್ಟು ಬಾರಿ ಪತ್ರದ ಮೂಲಕ ಮಾಹಿತಿ ನೀಡಿದರೂ ಈ ಬಗ್ಗೆ ಗಮನಹರಿಸದೇ ಇರುವುದು ದೊಡ್ಡ ತಲೆ ನೋವಾಗಿದೆ. ದಿನನಿತ್ಯ ರೈತರ ಮಳೆ, ಬೆಳೆ, ಗೊಬ್ಬರ ಖರೀದಿಗೂ ಕಷ್ಟವಾಗಿದೆ. ಕಂಪ್ಯೂಟರ್ ಸುಟ್ಟಿರುವುದರಿಂದ . ತೊಂದರೆಯಾಗಿದೆ. ಕೂಡಲೇ ಸಂಬಂಧಪಟ್ಟವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ವಹಿಸಬೇಕು. ಈ ಕಾಮಗಾರಿಯನ್ನು ಅಂದಾಜು ಪಟ್ಟಿಯಂತೆ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ವರದಿ ಎಸ್.ಪುಟ್ಟಸ್ವಾಮಿ ಹೊನ್ನೂರು ಚಾಮರಾಜನಗರ ಜಿಲ್ಲೆ

More news from ಕರ್ನಾಟಕ and nearby areas
  • ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಚಾರಿಸುವ ಮಾರ್ಗ ಆನೆ ತಲೆ ತಿಂಬ ಬಳಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಚರಿಸುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಯವಿತರಾಗಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನ ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
    1
    ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಚಾರಿಸುವ ಮಾರ್ಗ ಆನೆ ತಲೆ ತಿಂಬ ಬಳಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು  ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಚರಿಸುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಯವಿತರಾಗಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನ ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
  • ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...
    1
    ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • ಹನೂರು: ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಮಧ್ಯಾಹ್ನ ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು. ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.
    1
    ಹನೂರು: 
ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು.
ಮಂಗಳವಾರ ಮಧ್ಯಾಹ್ನ  ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು.  ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    20 hrs ago
  • ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು. ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
    1
    ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು.
ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ.
ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer ನಂಜನಗೂಡು, ಮೈಸೂರು, ಕರ್ನಾಟಕ•
    16 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.
    1
    ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    19 hrs ago
  • ಪೀಣ್ಯದ ಮೆಟ್ರೋ ನಿಲ್ದಾಣದ ಬಳಿ ಆಟೋ ಚಾಲಕರಿಬ್ಬರು ಪರಸ್ಪರ ಪಾರ್ಕಿಂಗ್ ಗೋಸ್ಕರ ಮಾತಿನ ಚಕಮಕಿ ನಡೆಸಿದ್ದಾರೆ, ಒಬ್ಬ ಅಟೋ ಚಾಲಕ ಅವಾಚ್ಯಪದಗಳನ್ನು ಉಪಯೋಗಿಸಿ ನಿಂದಿಸಿದ್ದಾನೆ, RMC ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
    1
    ಪೀಣ್ಯದ ಮೆಟ್ರೋ ನಿಲ್ದಾಣದ ಬಳಿ ಆಟೋ ಚಾಲಕರಿಬ್ಬರು ಪರಸ್ಪರ ಪಾರ್ಕಿಂಗ್ ಗೋಸ್ಕರ ಮಾತಿನ ಚಕಮಕಿ ನಡೆಸಿದ್ದಾರೆ, ಒಬ್ಬ ಅಟೋ
ಚಾಲಕ ಅವಾಚ್ಯಪದಗಳನ್ನು ಉಪಯೋಗಿಸಿ ನಿಂದಿಸಿದ್ದಾನೆ, RMC ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.