Shuru
Apke Nagar Ki App…
ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್‌ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.
UMAPRASAD
ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್‌ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.
More news from ಕರ್ನಾಟಕ and nearby areas
- ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್‌ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.1
- ಕಡಬದಲ್ಲಿ ಹೆಚ್ಚಿನ ಬೆಲೆಯ ವಸ್ತುಗಳನ್ನು ಕಡಿಮೆ ದರದಲ್ಲಿ ಪಡೆಯಬಹುದೆಂಬ ಆಮಿಷ: ಕೇಸ್ ದಾಖಲು ಕಡಬ ಠಾಣಾ ವ್ಯಾಪ್ತಿಯ ಕಡಬ ಗ್ರಾಮದ ಅಂಬೇಡ್ಕರ್ ಭವನ ಎಂಬಲ್ಲಿ, ಹಾವೇರಿ ಮೂಲದ KINGS Bazaar ಎಂಬ ಸಂಸ್ಥೆಯ ಹೆಸರಿನಲ್ಲಿ ಸಾರ್ವಜನಿಕರಿಗೆ ಶೀಘ್ರವಾಗಿ ಹಣಗಳಿಸಬಹುದಾಗಿ, ಹೆಚ್ಚಿನ ಬೆಲೆಯ ವಸ್ತುಗಳನ್ನು ಕಡಿಮೆ ದರದಲ್ಲಿ ಪಡೆಯಬಹುದು ಹಾಗೂ ಜನರನ್ನು ಸದ್ರಿ ಯೋಜನೆಗೆ ಜನರನ್ನು ಸೇರಿಸಿದಲ್ಲಿ ಕಮಿಷನ್ ಹಣ ಸಂಪಾದಿಸಬಹುದಾಗಿ ಭರವಸೆ ನೀಡಿ, ಅಕ್ರಮವಾಗಿ ನಿಷೇಧಿತ ಹಣಪರಿಚಲನೆ ಯೋಜನೆ ನಡೆಸಿ ಹಣವನ್ನು ಸ್ವೀಕರಿಸುವ ಯೋಜನೆ ನಡೆಸುತ್ತಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ KINGS Bazaar ಸಂಸ್ಥೆ, ಸಂಸ್ಥೆಯ ಮಾಲಿಕರು ಮತ್ತು ಯೋಜನೆಯನ್ನು ಸ್ಥಳೀಯವಾಗಿ ನಡೆಸುತ್ತಿದ್ದ ಬೆಳ್ತಂಗಡಿ ಕೊಕ್ಕಡ ನಿವಾಸಿಗಳಾದ ಸುಬ್ರಹ್ಮಣ್ಯ ಶಗ್ರಿತ್ತಾಯ (50)ಹಾಗೂ ಗುರುಮೂರ್ತಿ (54), ಕಡಬ ಬಿಳಿನೆಲೆ ನಿವಾಸಿಗಳಾದ ಸುರೇಶ್ ಆರ್ ಎಸ್ (55), ಕಿರಣ ಕುಮಾರ್ (21) ಹಾಗೂ ಶ್ರೀನಾಥ್ (48), ಕಡಬ ಕೌಕ್ರಾಡಿ ನಿವಾಸಿ ಬಾಲಕೃಷ್ಣ ಪಿ ಹೆಚ್ (42), ಪುತ್ತೂರು ನಿವಾಸಿ ಸಂದೇಶ್ ಎಂಬವರುಗಳ ವಿರುದ್ಧ ಕಡಬ ಪೊಲೀಸ್ ಠಾಣಾ ಅ.ಕ್ರ: 100/2026, ಕಲಂ. 4, 5, 6 PRIZE CHIT & MONEY CIR.SCHEMES (BANNING) ACT, 1978 ರಂತೆ ಸ್ವ ಪಿರ್ಯಾದಿ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.1
- ಕುಂಜತ್‌ಬೈಲ್‌ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಂಗಳೂರು: ಸುರತ್ಕಲ್ ಹೋಬಳಿಯ ಕುಂಜತ್ತಬೈಲ್‌ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಯೋಗವು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಆ.21ರಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನೇತೃತ್ವದಲ್ಲಿ ನಿಯೋಗವು ಸಚಿವರನ್ನು ಭೇಟಿ ಮಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಂಜೀವ ಕೋಟ್ಯಾನ್, ಗೌರವಾಧ್ಯಕ್ಷ ರಘುನಾಥ ಅತ್ತಾವರ, ಉಪಾಧ್ಯಕ್ಷ ಅಣ್ಣು ಕುಂಜತ್ತ್ ಬೈಲ್, ಚೈತನ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಸೂಟರ್ ಪೇಟೆ, ಜಿಲ್ಲಾ ವಕ್ತಾರ ರಾಮ್ ಕುಮಾರ್ ಹಾಗೂ ಸದಸ್ಯ ಅಕ್ಷಯ್ ಗೇರುಕಟ್ಟೆ ಉಪಸ್ಥಿತರಿದ್ದರು.1
- ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.1
- ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ. ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ. ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು. ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.1
- ಈದ್ ಮಿಲಾದ್ ಸಂಭ್ರಮದ ಆಚರಣೆ : ರಕ್ತದಾನ, ಅನ್ನದಾನ ಸೇರಿದಂತೆ ವಿವಿಧ ಸೇವಾ ಕಾರ್ಯಗಳು. ಯುವ ಮುಖಂಡ ಬಿ.ಎಸ್ ಗಣೇಶ್ ಬಾಗಿ ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ದೇಶಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ಸಾವಿರಾರು ಮಂದಿಗೆ ಮಜ್ಜಿಗೆ ವಿತರಿಸಲಾಯಿತು. ಯುವ ಮುಖಂಡ ಬಿ.ಎಸ್ ಗಣೇಶ್ ಸೇವಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಸೇವಾ ಕಾರ್ಯವನ್ನು ಅಭಿನಂದಿಸಿದರು. ಇದೆ ಸಂದರ್ಭದಲ್ಲಿ ಬಡಮಹಿಳೆಯರಿಗೆ ಸೀರೆ ಮತ್ತು ರವಿಕೆ ವಿತರಿಸಲಾಯಿತು. ಅನ್ನದಾನ, ತಂಪು ಪಾನೀಯ ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳು ಜರುಗಿದವು. ಮಧ್ಯಾಹ್ನ ಸುಮಾರು ೩.೩೦ ಸಮಯಕ್ಕೆ ಹೊಳೆಹೊನ್ನೂರು ವೃತ್ತದಿಂದ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್‌ರವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಆರಂಭಗೊಂಡಿತು. ಮೆರವಣಿಗೆಯಲ್ಲಿ ಮಹಮ್ಮದ್ ಫೈಗಂಬರರ ಜನ್ಮಸ್ಥಳ ಮೆಕ್ಕಾ-ಮದೀನಾ ಮಾದರಿಗಳು, ಹಸಿರು ದ್ವಜಗಳು ಎಲ್ಲೆಡೆ ರಾರಾಜಿಸುತ್ತಿದ್ದವು. ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು. ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಮಹಾತ್ಮಗಾಂಧಿ ವೃತ್ತ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಯಿತು. ನಗರದ ವಿವಿಧೆಡೆಗಳ ಮಸೀದಿಗಳ ಧರ್ಮಗುರುಗಳು, ಆಡಳಿತ ಮಂಡಳಿಯವರು, ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮೆರವಣಿಗೆ ಹಿನ್ನಲೆಯಲ್ಲಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಹಬ್ಬದ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ಚಿನ ಅಲಂಕಾರ ಕೈಗೊಳ್ಳಲಾಗಿತ್ತು. ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು3
- ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.1
- ಕಡಬದಲ್ಲಿ ಆಸಿಡ್ ದಾಳಿ ಪ್ರಕರಣ ಆರೋಪಿಗೆ ಶಿಕ್ಷೆ ಪ್ರಕಟ: ಕೋರ್ಟ್ ಹೇಳಿದ್ದೇನು? ಕಡಬ ಪೊಲೀಸ್ ಠಾಣಾ ಅ. ಕ್ರ : 06/2020, ಕಲಂ : 354A, 509, 504, 506, 448, 307, 326A IPC ಆಸಿಡ್ ದಾಳಿ ಪ್ರಕರಣದಲ್ಲಿ ತನಿಖೆ ನಡೆಸಿದ, ಪ್ರಕರಣದ ಆಗಿನ ತನಿಖಾಧಿಕಾರಿಗಳು ಹಾಗೂ ಪುತ್ತೂರು ಮಹಿಳಾ ಠಾಣಾ ಪೊಲೀಸ್ ನಿರೀಕ್ಷಕರಾಗಿದ್ದ ಕುಸುಮಧರ ರವರು ಪ್ರಕರಣದ ಆರೋಪಿತನಾಗಿದ್ದ ಕಡಬ ಕೊಡಿoಬಳ ನಿವಾಸಿ ಜಯಾನಂದ. ಕೆ (60) ಎಂಬಾತನ ವಿರುದ್ದ ಸೂಕ್ತ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ. 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ಮಂಗಳೂರು (ಪೀಠಸಿನ ಪುತ್ತೂರು ) ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಶ್ರೀ ಸದಾನಂದ ನಾಗಪ್ಪ ನಾಯ್ಕ್ ರವರು ರವರು ಆರೋಪಿಗೆ * ಕಲಂ 326A IPC ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.3,00,000/- ದಂಡ (ದಂಡ ಪಾವತಿಸಲು ವಿಫಲವಾದಲ್ಲಿ 2 ವರ್ಷಗಳ ಸರಳ ಕಾರಾಗೃಹ ಶಿಕ್ಷೆ). * ಕಲಂ 504 IPC ಅಡಿಯಲ್ಲಿ 1 ವರ್ಷದ ಕಾರಾಗೃಹ ಶಿಕ್ಷೆ ಹಾಗೂ ರೂ.5,000/- ದಂಡ (ದಂಡ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ) ವಿಧಿಸಿ ಆದೇಶಿಸಿರುತ್ತಾರೆ. ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯವರ್, ಪ್ರಕಾಶ್ ಚಂದ್ರ ಶೆಟ್ಟಿ, ಶ್ರೀಮತಿ ಜಯಂತಿ. ಕೆ ರವರು ಮಾನ್ಯ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿರುತ್ತಾರೆ.1