logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯ ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೇರೋ ವಾಹನ ಹಾಗೂ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೇರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೇರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

9 hrs ago
user_Vinay P palekar
Vinay P palekar
ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
9 hrs ago

ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯ ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೇರೋ ವಾಹನ ಹಾಗೂ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೇರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೇರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

More news from ಕರ್ನಾಟಕ and nearby areas
  • ದೇವರ ಹೆಸರಿನಲ್ಲಿ ಪ್ರಮಾಣದ ಪತ್ರ ಸ್ವೀಕರಿಸಿದ ನೂತನ ಸಚಿವ ಟಿ ರಘುಮೂರ್ತಿ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಟಿ .ರಘುಮೂರ್ತಿ ಅವರಿಗೆ ಮಂತ್ರಿ ಸ್ಥಾನ ಒಲಿದು ಬಂದಿದೆ.. ನೂತನ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ..
    1
    ದೇವರ ಹೆಸರಿನಲ್ಲಿ ಪ್ರಮಾಣದ ಪತ್ರ ಸ್ವೀಕರಿಸಿದ ನೂತನ ಸಚಿವ ಟಿ ರಘುಮೂರ್ತಿ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಟಿ .ರಘುಮೂರ್ತಿ ಅವರಿಗೆ ಮಂತ್ರಿ ಸ್ಥಾನ ಒಲಿದು ಬಂದಿದೆ.. ನೂತನ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಇನ್ನೂ ಸತತ ಮೂರು ಬಾರಿ ಆಯ್ಕಯಾಗಿರುವ ಶಾಸಕ ರಘುಮೂರ್ತಿ ಅವರಿಗೆ ಡಿ ಕೆ ಶಿವಕುಮಾರ್ ರ ನೂತನ ಸಂಪುಟದಲ್ಲಿ ಸಚಿವರಾಗಿ ಆಯ್ಕೆ ಹಿನ್ನೆಲೆ ನಗರದ ಓಬವ್ವ ವೃತ್ತದಲ್ಲಿ ಟಿ ರಘೂಮೂರ್ತಿ ಅಭಿಮಾನಿ ಬಳಗ ಹಾಗೂ ಕರುನಾಡ ವಿಜಯ ಸೇನೆ ಜಿಲ್ಲಾ ಘಟಕದ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದು ಕಾಂಗ್ರೆಸ್ ಕಚೇರಿ ಬಳಿ ಸಂಘಟನೆ ಜಿಲ್ಲಾಧ್ಯಕ್ಷರಾದ ಕೆ ಟಿ ಶಿವಕುಮಾರ್ ಅವರ ನೇತೃತ್ವದಲ್ಲಿ 20 ಅಡಿ‌ ಉದ್ದದ ಫ್ಲಕ್ಸ್ ನಿರ್ಮಿಸಿ ಸಂಭ್ರಮಾಚರಣೆ ನಡೆಸಿದರು. ಇನ್ನೂ ಎರಡನೇ ಹಂತದ ಸಂಪುಟ ವಿಸ್ತರಣೆಗೆ ಇಂದು ಅಧಿಕೃತವಾಗಿ ಮುದ್ರೆ ಬಿದ್ದಿದೆ. ಈ ಬಾರಿ ಮೂರು ಬಾರಿ ಹ್ಯಾಟ್ರಿಕ್ ಜಯಗಳಿಸಿ, ಅಭಿವೃದ್ದಿಯ ಹರಿಕಾರ ಎಂದು ಮಚ್ಚುಗೆ ಗಳಿಸಿರುವ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಇದರಿಂದ ಅವರ ಬೆಂಬಲಿಗರ ಸಂಭ್ರಮಕ್ಕೆ ಎಣೆಯೇ ಇಲ್ಲದಾಗಿದೆ. ಕರುನಾಡ ವಿಜಯಸೇನೆ ಮತ್ತು ಟಿ. ರಘುಮೂರ್ತಿ ತುವ ಸೇನೆ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಬಳಿ ಡಿಕೆಶಿವಕುಮಾರ್ ಮತ್ತು ಶಾಸಕ ಟಿ. ರಘುಮೂರ್ತಿ ಅವರ ರಕ್ತದಿಂದ ಬರೆದಿರುವ ಭಾವಚಿತ್ರ ಹಿಡಿದು ಪಟಾಕಿ ಸಿಡಿಸಿ, ಸಂಭ್ರಮ ಆಚರಿಸಿದರು. ಕಾರ್ಯಕರ್ತರಿಗೆ ಸಿಹಿ ತಿನಿಸಿ ಸಂತೋಷ ಹಂಚಿಕೊಂಡರು.
    1
    ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ
ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಇನ್ನೂ
ಸತತ ಮೂರು ಬಾರಿ ಆಯ್ಕಯಾಗಿರುವ ಶಾಸಕ ರಘುಮೂರ್ತಿ ಅವರಿಗೆ ಡಿ ಕೆ ಶಿವಕುಮಾರ್ ರ ನೂತನ ಸಂಪುಟದಲ್ಲಿ ಸಚಿವರಾಗಿ ಆಯ್ಕೆ ಹಿನ್ನೆಲೆ ನಗರದ ಓಬವ್ವ ವೃತ್ತದಲ್ಲಿ ಟಿ ರಘೂಮೂರ್ತಿ ಅಭಿಮಾನಿ ಬಳಗ ಹಾಗೂ ಕರುನಾಡ ವಿಜಯ ಸೇನೆ ಜಿಲ್ಲಾ ಘಟಕದ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದು ಕಾಂಗ್ರೆಸ್ ಕಚೇರಿ ಬಳಿ ಸಂಘಟನೆ ಜಿಲ್ಲಾಧ್ಯಕ್ಷರಾದ ಕೆ ಟಿ ಶಿವಕುಮಾರ್  ಅವರ ನೇತೃತ್ವದಲ್ಲಿ 20 ಅಡಿ‌ ಉದ್ದದ ಫ್ಲಕ್ಸ್ ನಿರ್ಮಿಸಿ ಸಂಭ್ರಮಾಚರಣೆ ನಡೆಸಿದರು. ಇನ್ನೂ ಎರಡನೇ ಹಂತದ ಸಂಪುಟ ವಿಸ್ತರಣೆಗೆ ಇಂದು ಅಧಿಕೃತವಾಗಿ ಮುದ್ರೆ  ಬಿದ್ದಿದೆ. ಈ ಬಾರಿ ಮೂರು ಬಾರಿ ಹ್ಯಾಟ್ರಿಕ್ ಜಯಗಳಿಸಿ, ಅಭಿವೃದ್ದಿಯ ಹರಿಕಾರ ಎಂದು ಮಚ್ಚುಗೆ ಗಳಿಸಿರುವ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ  ಸಚಿವ ಸ್ಥಾನ ಒಲಿದು ಬಂದಿದೆ. ಇದರಿಂದ ಅವರ ಬೆಂಬಲಿಗರ ಸಂಭ್ರಮಕ್ಕೆ ಎಣೆಯೇ ಇಲ್ಲದಾಗಿದೆ. ಕರುನಾಡ ವಿಜಯಸೇನೆ ಮತ್ತು ಟಿ. ರಘುಮೂರ್ತಿ ತುವ ಸೇನೆ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಬಳಿ ಡಿಕೆಶಿವಕುಮಾರ್ ಮತ್ತು ಶಾಸಕ ಟಿ. ರಘುಮೂರ್ತಿ ಅವರ ರಕ್ತದಿಂದ ಬರೆದಿರುವ ಭಾವಚಿತ್ರ ಹಿಡಿದು ಪಟಾಕಿ ಸಿಡಿಸಿ, ಸಂಭ್ರಮ ಆಚರಿಸಿದರು. ಕಾರ್ಯಕರ್ತರಿಗೆ ಸಿಹಿ ತಿನಿಸಿ ಸಂತೋಷ ಹಂಚಿಕೊಂಡರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಕೂಡ್ಲಿಗಿ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯದ ವತಿಯಿಂದ ಹಿತ ಚಿಂತನಾ ಸಭೆ ಕೂಡ್ಲಿಗಿ: ವಾಲ್ಮೀಕಿ ಸಮುದಾಯದ ಸಂಘಟನೆ, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಯು ಸಮುದಾಯದ ಪ್ರಗತಿಗೆ ಅತ್ಯಗತ್ಯವಾಗಿದೆ. ಶಿಕ್ಷಣವೇ ಪ್ರಬಲ ಅಸ್ತ್ರ, ಮತ್ತು ಒಗ್ಗಟ್ಟಿನಿಂದ ಮಾತ್ರ ಸಮಾನತೆ ಹಾಗೂ ಹಕ್ಕುಗಳನ್ನು ಸಾಧಿಸಲು ಸಾಧ್ಯ ಎಂದು ಹಿರಿಯ ವಕೀಲರಾದ ಡಾ. ಟಿ. ಓಂಕಾರಪ್ಪ ಹೇಳಿದರು‌. ತಾಲೂಕಿನ ಗಾಣಗಟ್ಟೆ ಗ್ರಾಮದ ಶ್ರೀ ಮಾಯಮ್ಮ ದೇವಿಯ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕೂಡ್ಲಿಗಿ ಹಾಗೂ ಕೊಟ್ಟೂರು ತಾಲ್ಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯದ ವತಿಯಿಂದ ಹಿತ ಚಿಂತನಾ ಸಭೆ ಆಯೋಜನೆ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸು. 80-90 ಸಾವಿರದ ಪ್ರಮಾಣದಲ್ಲಿ ವಾಲ್ಮೀಕಿ ಸಮುದಾಯದ ಮತ ಸಂಖ್ಯೆ ಇದ್ದು, ಸು.15 ವರ್ಷಗಳಿಂದ ವಾಲ್ಮೀಕಿ ಸಮುದಾಯದಲ್ಲಿ ಸಂಘಟನೆ ನಿಷ್ಕ್ರಿಯವಾಗಿದ್ದು, ಗ್ರಾಮೀಣ ಭಾಗವಾದ ಉಜ್ಜಿನಿ, ಹೊಸಹಳ್ಳಿ, ಗುಡೇಕೋಟೆ, ಹುಡೇಂ, ಮಟ್ಟದಲ್ಲಿ ಯಾವುದೇ ಸಭೆ, ಜಯಂತಿ, ಸಂಘಟನೆ ಇಲ್ಲದೇ, ಇರುವುದನ್ನು ನಾವು ನೋಡಬಹುದು. ಹೀಗಾಗಿ, ವಾಲ್ಮೀಕಿ ಸಮುದಾಯವನ್ನು ರಾಜಕೀಯ ಭಿನ್ನಾಭಿಪ್ರಾಯ ಮರೆತು, ಶಿಕ್ಷಣ, ಸಂಘಟನೆ ಮತ್ತು ಒಗ್ಗಟ್ಟಿನಿಂದ ಮುನ್ನಡೆಸಲು, ಸರ್ವ ರೀತಿಯಲ್ಲಿ ಒಮ್ಮತದಿಂದ ಸಮುದಾಯದ ಏಳಿಗೆಗಾಗಿ ಶ್ರಮಿಸಲು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ವೇಳೆ ನಿವೃತ್ತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ಮಾತನಾಡಿ, ವಾಲ್ಮೀಕಿ ಸಮುದಾಯದ ಪ್ರತಿಯೊಬ್ಬ ಹಿರಿಯರು, ಮುಖಂಡರು, ಯುವಕರು, ವಾಲ್ಮೀಕಿ ಸಮುದಾಯದ ಸಂಘಟನೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಸಮಿತಿಗಳನ್ನು ರಚಿಸೋಣ. ವಾಲ್ಮೀಕಿ ಸಮುದಾಯ ಅಂದರೇ, ಕೂಡ್ಲಿಗಿ ಮಟ್ಟದಲ್ಲಿ ಅಷ್ಟೇ, ಜಯಂತಿಗೆ, ಕುಣಿತಕ್ಕೆ ಸೀಮಿತವಾಗದೇ, ಹಳ್ಳಿಗಳ ಮಟ್ಟದಲ್ಲಿ ವಾಲ್ಮೀಕಿ ಸಮುದಾಯದ ಸಂಘಟನೆಯನ್ನು ಕಟ್ಟುವ ನಿಟ್ಟಿನಲ್ಲಿ ಸಮುದಾಯವೂ ವಿವಿಧ ಕ್ಷೇತ್ರಗಳಲ್ಲಿ ಏಳಿಗೆ ಶ್ರಮಿಸಲು ಧ್ವನಿಯಾಗೋಣ ಎಂದರು. ಈ ಸಂದರ್ಭದಲ್ಲಿ ಚೋರನೂರು ಅಡಿವೆಪ್ಪ, ತಳವಾರ ಶರಪ್ಪ, ಹೊಸಹಳ್ಳಿ ಸಿದ್ದಣ್ಣ, ಕೆಡಿಪಿ ಸದಸ್ಯ ಪಾಪಣ್ಣ ಯರಗುಂಡ್ಲಹಟ್ಟಿ, ಕೆ ದಿಬ್ಬದಹಳ್ಳಿ ಗೋವಿಂದಪ್ಪ, ಬಸವರಾಜ, ಜಿ. ಓಬಣ್ಣ, ಕುರಿಹಟ್ಟಿ ರಾಮಣ್ಣ, ಗುಂಡುಮುಣುಗು ಮಂಜಣ್ಣ, ಹುಬ್ಬಳ್ಳಿ ವೆಂಕಟೇಶ, ಪಸಲು ಪಾಲಯ್ಯ, ಗುತ್ತಿಗೆದಾರರು ಗಾಣಗಟ್ಟೆ ಮಹಾಂತೇಶ, ಮಾಜಿ ಗ್ರಾ. ಪಂ. ಅಧ್ಯಕ್ಷ ಮಹಾಂತೇಶ್, ಹುಲಿಕೆರೆ ಮಾರಪ್ಪ, ಕಂಡಕ್ಟರ್ ಬಸವರಾಜ, ರೈತ ಮುಖಂಡರಾದ ಮಾರಪ್ಪ, ಉಜ್ಜಿನಿ ರಂಗಪ್ಪ, ಸಕಲಾಪುರದಹಟ್ಟಿ ಹರೀಶ್, ತೂಲಹಳ್ಳಿ ಬಸವರಾಜ, ಕೆ. ದಿಬ್ಬದಹಳ್ಳಿ ವೆಂಕಟೇಶ, ಸಿಎಸ್ ಪುರ ಮಲಿಯಪ್ಪ, ಮಾಡ್ಲನಾಯಕನಹಳ್ಳಿ ಧನಂಜಯ್, ತಿಪ್ಪೇಸ್ವಾಮಿ, ಬೊಮ್ಮಲಿಂಗಣ್ಣ, ಗುಣಸಾಗರ ಕೊಟ್ರೇಶ, ಹುಡೇಂ ಬಸಣ್ಣ, ಡಾ. ಸಿದ್ದೇಶ ಕಾತ್ರಿಕೆಹಟ್ಟಿ, ನಾಗರಕಟ್ಟೆ ದೇವೇಂದ್ರಪ್ಪ ಸೇರಿದಂತೆ ಗಾಣಗಟ್ಟೆ ಗ್ರಾಮದ ಹಿರಿಯರು, ತಾಲೂಕಿನ ವಾಲ್ಮೀಕಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
    1
    ಕೂಡ್ಲಿಗಿ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯದ ವತಿಯಿಂದ ಹಿತ ಚಿಂತನಾ ಸಭೆ
ಕೂಡ್ಲಿಗಿ: ವಾಲ್ಮೀಕಿ ಸಮುದಾಯದ ಸಂಘಟನೆ, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಯು ಸಮುದಾಯದ ಪ್ರಗತಿಗೆ ಅತ್ಯಗತ್ಯವಾಗಿದೆ. ಶಿಕ್ಷಣವೇ ಪ್ರಬಲ ಅಸ್ತ್ರ, ಮತ್ತು ಒಗ್ಗಟ್ಟಿನಿಂದ ಮಾತ್ರ ಸಮಾನತೆ ಹಾಗೂ ಹಕ್ಕುಗಳನ್ನು ಸಾಧಿಸಲು ಸಾಧ್ಯ ಎಂದು ಹಿರಿಯ ವಕೀಲರಾದ ಡಾ. ಟಿ. ಓಂಕಾರಪ್ಪ ಹೇಳಿದರು‌.
ತಾಲೂಕಿನ ಗಾಣಗಟ್ಟೆ ಗ್ರಾಮದ ಶ್ರೀ ಮಾಯಮ್ಮ ದೇವಿಯ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕೂಡ್ಲಿಗಿ ಹಾಗೂ ಕೊಟ್ಟೂರು ತಾಲ್ಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯದ ವತಿಯಿಂದ ಹಿತ ಚಿಂತನಾ ಸಭೆ ಆಯೋಜನೆ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸು. 80-90 ಸಾವಿರದ ಪ್ರಮಾಣದಲ್ಲಿ ವಾಲ್ಮೀಕಿ ಸಮುದಾಯದ ಮತ ಸಂಖ್ಯೆ ಇದ್ದು, ಸು.15 ವರ್ಷಗಳಿಂದ ವಾಲ್ಮೀಕಿ ಸಮುದಾಯದಲ್ಲಿ ಸಂಘಟನೆ ನಿಷ್ಕ್ರಿಯವಾಗಿದ್ದು, ಗ್ರಾಮೀಣ ಭಾಗವಾದ ಉಜ್ಜಿನಿ, ಹೊಸಹಳ್ಳಿ, ಗುಡೇಕೋಟೆ, ಹುಡೇಂ, ಮಟ್ಟದಲ್ಲಿ ಯಾವುದೇ ಸಭೆ, ಜಯಂತಿ, ಸಂಘಟನೆ ಇಲ್ಲದೇ, ಇರುವುದನ್ನು ನಾವು ನೋಡಬಹುದು. ಹೀಗಾಗಿ, ವಾಲ್ಮೀಕಿ ಸಮುದಾಯವನ್ನು ರಾಜಕೀಯ ಭಿನ್ನಾಭಿಪ್ರಾಯ ಮರೆತು, ಶಿಕ್ಷಣ, ಸಂಘಟನೆ ಮತ್ತು ಒಗ್ಗಟ್ಟಿನಿಂದ ಮುನ್ನಡೆಸಲು, ಸರ್ವ ರೀತಿಯಲ್ಲಿ ಒಮ್ಮತದಿಂದ ಸಮುದಾಯದ ಏಳಿಗೆಗಾಗಿ ಶ್ರಮಿಸಲು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಈ ವೇಳೆ ನಿವೃತ್ತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ಮಾತನಾಡಿ,
ವಾಲ್ಮೀಕಿ ಸಮುದಾಯದ ಪ್ರತಿಯೊಬ್ಬ ಹಿರಿಯರು, ಮುಖಂಡರು, ಯುವಕರು, ವಾಲ್ಮೀಕಿ ಸಮುದಾಯದ  ಸಂಘಟನೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಸಮಿತಿಗಳನ್ನು ರಚಿಸೋಣ. ವಾಲ್ಮೀಕಿ ಸಮುದಾಯ ಅಂದರೇ, ಕೂಡ್ಲಿಗಿ ಮಟ್ಟದಲ್ಲಿ ಅಷ್ಟೇ, ಜಯಂತಿಗೆ, ಕುಣಿತಕ್ಕೆ ಸೀಮಿತವಾಗದೇ, ಹಳ್ಳಿಗಳ ಮಟ್ಟದಲ್ಲಿ ವಾಲ್ಮೀಕಿ ಸಮುದಾಯದ ಸಂಘಟನೆಯನ್ನು ಕಟ್ಟುವ ನಿಟ್ಟಿನಲ್ಲಿ ಸಮುದಾಯವೂ ವಿವಿಧ ಕ್ಷೇತ್ರಗಳಲ್ಲಿ ಏಳಿಗೆ ಶ್ರಮಿಸಲು ಧ್ವನಿಯಾಗೋಣ ಎಂದರು.
ಈ ಸಂದರ್ಭದಲ್ಲಿ ಚೋರನೂರು ಅಡಿವೆಪ್ಪ, ತಳವಾರ ಶರಪ್ಪ, ಹೊಸಹಳ್ಳಿ ಸಿದ್ದಣ್ಣ, ಕೆಡಿಪಿ ಸದಸ್ಯ ಪಾಪಣ್ಣ ಯರಗುಂಡ್ಲಹಟ್ಟಿ, ಕೆ ದಿಬ್ಬದಹಳ್ಳಿ ಗೋವಿಂದಪ್ಪ, ಬಸವರಾಜ, ಜಿ. ಓಬಣ್ಣ, ಕುರಿಹಟ್ಟಿ ರಾಮಣ್ಣ, ಗುಂಡುಮುಣುಗು ಮಂಜಣ್ಣ, ಹುಬ್ಬಳ್ಳಿ ವೆಂಕಟೇಶ, ಪಸಲು ಪಾಲಯ್ಯ, ಗುತ್ತಿಗೆದಾರರು ಗಾಣಗಟ್ಟೆ ಮಹಾಂತೇಶ, ಮಾಜಿ ಗ್ರಾ. ಪಂ. ಅಧ್ಯಕ್ಷ ಮಹಾಂತೇಶ್, ಹುಲಿಕೆರೆ ಮಾರಪ್ಪ, ಕಂಡಕ್ಟರ್ ಬಸವರಾಜ, ರೈತ ಮುಖಂಡರಾದ ಮಾರಪ್ಪ, ಉಜ್ಜಿನಿ ರಂಗಪ್ಪ, ಸಕಲಾಪುರದಹಟ್ಟಿ ಹರೀಶ್, ತೂಲಹಳ್ಳಿ ಬಸವರಾಜ, ಕೆ. ದಿಬ್ಬದಹಳ್ಳಿ ವೆಂಕಟೇಶ, ಸಿಎಸ್ ಪುರ ಮಲಿಯಪ್ಪ, ಮಾಡ್ಲನಾಯಕನಹಳ್ಳಿ ಧನಂಜಯ್, ತಿಪ್ಪೇಸ್ವಾಮಿ, ಬೊಮ್ಮಲಿಂಗಣ್ಣ, ಗುಣಸಾಗರ ಕೊಟ್ರೇಶ, ಹುಡೇಂ ಬಸಣ್ಣ, ಡಾ. ಸಿದ್ದೇಶ ಕಾತ್ರಿಕೆಹಟ್ಟಿ, ನಾಗರಕಟ್ಟೆ ದೇವೇಂದ್ರಪ್ಪ ಸೇರಿದಂತೆ ಗಾಣಗಟ್ಟೆ ಗ್ರಾಮದ ಹಿರಿಯರು, ತಾಲೂಕಿನ ವಾಲ್ಮೀಕಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    7 hrs ago
  • ಕೂಡ್ಲಿಗಿ :ವೈಜ್ಞಾನಿಕತೆ ಸಕಾರಾತ್ಮಕ ಕ್ರಿಯ‍ಾಶೀಲತೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ಸೂಚನೆ- ವಿಜಯನಗರ ಜಿಲ್ಲೆ ಕೂಡ್ಲಿಗಿ *ಕೂಡ್ಲಿಗಿ :ವೈಜ್ಞಾನಿಕತೆ ಸಕಾರಾತ್ಮಕ ಕ್ರಿಯ‍ಾಶೀಲತೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ಸೂಚನೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಕಾರಾತ್ಮಕತೆ ಕ್ರಿಯಾಶೀಲತೆ ಮನೋಭಾವ ಬೆಳಸಬೇಕು , ಹಾಗೂ ಗುಣಮಟ್ಟ ಶಿಕ್ಷಣ ನೀಡಬೇಕಿದೆ ಎಂದು ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ಮುಖ್ಯ ಶಿಕ್ಷಕರಿಗೆ ಸೂಚಿಸಿದರು. ಅವರು ಆ 1ರಂದು , ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಜರುಗಿದ. ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ , 2026 ನೇ ಸಾಲಿನ SSLC ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ ಬೇವೂರು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಸರ್ಕಾರಿ ಸರ್ಕಾರಿ ಅನುದಾನಿತ ಅನುದಾನ ರಹಿತ , ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ :ವೈಜ್ಞಾನಿಕತೆ ಸಕಾರಾತ್ಮಕ  ಕ್ರಿಯ‍ಾಶೀಲತೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್  ಸೂಚನೆ- ವಿಜಯನಗರ ಜಿಲ್ಲೆ ಕೂಡ್ಲಿಗಿ
*ಕೂಡ್ಲಿಗಿ :ವೈಜ್ಞಾನಿಕತೆ ಸಕಾರಾತ್ಮಕ  ಕ್ರಿಯ‍ಾಶೀಲತೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್  ಸೂಚನೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಕಾರಾತ್ಮಕತೆ  ಕ್ರಿಯಾಶೀಲತೆ ಮನೋಭಾವ ಬೆಳಸಬೇಕು , ಹಾಗೂ ಗುಣಮಟ್ಟ ಶಿಕ್ಷಣ ನೀಡಬೇಕಿದೆ ಎಂದು ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ಮುಖ್ಯ ಶಿಕ್ಷಕರಿಗೆ ಸೂಚಿಸಿದರು. ಅವರು ಆ 1ರಂದು , ಪಟ್ಟಣದ  ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಜರುಗಿದ. ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ , 2026 ನೇ ಸಾಲಿನ SSLC ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ  ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ ಬೇವೂರು  ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಸರ್ಕಾರಿ ಸರ್ಕಾರಿ ಅನುದಾನಿತ ಅನುದಾನ ರಹಿತ , ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    12 hrs ago
  • ಕೊನೆಗೂ ಉಕ್ಕಿನ ನಗರಕ್ಕೆ ಸಚಿವ ಸ್ಥಾನ ಸಿಗಲಿಲ್ಲ : ಮಂತ್ರಿಗಿರಿ ಇಲ್ಲದೆ ಸಂಗಮೇಶ್ವರ್ ರಾಜಕೀಯ ಅಂತ್ಯ ಭದ್ರಾವತಿ : ವಿಧಾನಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಕೊನೆಯ ಘಳಿಗೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಭರವಸೆ ಹೊಂದಿದ್ದರು. ಆದರೆ ಇದೀಗ ಮಂತ್ರಿಗಿರಿ ಇಲ್ಲದೆ ತಮ್ಮ ರಾಜಕೀಯ ಜೀವನ ಅಂತ್ಯಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.  ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿ ಇತಿಹಾಸ ನಿರ್ಮಿಸಿರುವ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಕ್ಷೇತ್ರದ ಜನರು ಹೊಂದಿದ್ದರು. ಇದುವರೆಗೂ ಕ್ಷೇತ್ರದ ಇತಿಹಾಸದಲ್ಲಿ ಮಂತ್ರಿಗಿರಿ ಭಾಗ್ಯ ಇಲ್ಲಿನ ಜನಪ್ರತಿನಿಧಿಗಳಿಗೆ ಲಭಿಸಿಲ್ಲ. ವೈಯಕ್ತಿಕ ಕಾರಣಗಳಿಂದ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಿಂದ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಸಂಗಮೇಶ್ವರ್ ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಕ್ಷೇತ್ರದಾದ್ಯಂತ ಮಗನ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಆರಂಭದಿಂದಲೂ ಪಕ್ಷ ನಿಷ್ಠೆಯಲ್ಲಿ ತೊಡಗಿಸಿಕೊಂಡಿರುವ ಸಂಗಮೇಶ್ವರ್ ಕಾಂಗ್ರೆಸ್ ಪಕ್ಷದ ಮೇಲೆ ಅಪಾರ ನಂಬಿಕೆ, ವಿಶ್ವಾಸ ಹೊಂದಿದ್ದರು. ಕೊನೆಯ ಘಳಿಗೆಯಲ್ಲಿ ತಮಗೆ ಮಂತ್ರಿಗಿರಿ ಭಾಗ್ಯ ಲಭಿಸುತ್ತದೆ ಎಂಬ ಆತ್ಮವಿಶ್ವಾಸ ಹೊಂದಿದ್ದರು. ಆದರೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲೂ ಮಂತ್ರಿಗಿರಿ ಭಾಗ್ಯ ಇಲ್ಲದಂತಾಗಿದೆ. ಇದರಿಂದಾಗಿ ಸಂಗಮೇಶ್ವರ್ ಅಭಿಮಾನಿ ಬಳಗ ಸೇರಿದಂತೆ ಕ್ಷೇತ್ರದ ನಾಗರೀಕರಲ್ಲಿ ನಿರಾಸೆಯನ್ನುಂಟು ಮಾಡಿದೆ.  ಕಾಂಗ್ರೆಸ್‌ನಿಂದ ನಿರಂತರ ಅನ್ಯಾಯ:  ಕಾಂಗ್ರೆಸ್ ಪಕ್ಷದ ಮೇಲೆ ಹೊಂದಿರುವ ಅಪಾರವಾದ ನಿಷ್ಠೆಯೇ ಸಂಗಮೇಶ್ವರ್ ಅವರನ್ನು ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡುತ್ತಿದೆ ಎಂಬುದು ಸುಳ್ಳಲ್ಲ. ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರೂ ಸಹ ಮುಂದಿನ ಚುನಾವಣೆಯಲ್ಲಿ ಅವರಿಗೆ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡದೇ ಸಿ.ಎಂ ಇಬ್ರಾಹಿಂ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ವಿಧಾನಸಭಾ ಚುನಾವಣೆ ಮತಯಾಚನೆ ಸೇರಿದಂತೆ ಹಲವು  ಸಂದರ್ಭಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಹಾಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಂಗಮೇಶ್ವರ್ ಅವರಿಗೆ ಮಂತ್ರಿಗಿರಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಭರವಸೆ ಈಡೇರಿಲ್ಲ. ಎರಡು ಬಾರಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಂಗಮೇಶ್ವರ್ ಅವರನ್ನು ಸಮಾಧಾನಪಡಿಸಲಾಗಿತ್ತು. ಇದೀಗ ರಾಜಕೀಯ ಜೀವನದ ಅಂತಿಮ ಸಮಯದಲ್ಲೂ ಸಚಿವ ಸ್ಥಾನ ನೀಡದೆ ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡಲಾಗಿದೆ.  ಕಾಂಗ್ರೆಸ್ ಪಕ್ಷದಿಂದ ಮೋಸ:  ಸಚಿವ ಸ್ಥಾನ ಕೈತಪ್ಪಿರುವ ಹಿನ್ನಲೆಯಲ್ಲಿ ಪತ್ರಿಕೆ ಜೊತೆ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ೪ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ೨-೩ ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ನೀಡಲಾಗಿದೆ. ನನಗೆ ಈ ಹಿಂದೆಯೇ ಸಚಿವ ಸ್ಥಾನ ಲಭಿಸಬೇಕಿತ್ತು. ಆದರೆ ನನಗೆ ಸಚಿವ ಸ್ಥಾನ ನೀಡದೆ ಮೋಸ ಮಾಡಲಾಯಿತು. ಈ ಹಿಂದೆ ೫೦ ಕೋ. ರು. ಅಮಿಷ ಬಂದರೂ ಸಹ ಕಾಂಗ್ರೆಸ್ ಪಕ್ಷ ಬಿಡದೆ ನಿಷ್ಟೆಯಿಂದ ಇದ್ದೇನೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ ಈ ಬಾರಿ ಸಹ ನನಗೆ ಮೋಸಲಾಗಿದೆ. ನಾನು ಕಾಂಗ್ರೆಸ್ ಪಕ್ಷ ತೊರೆಯುವುದು ಹಾಗು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ. ಮುಂದಿನ ನಿರ್ಧಾರ ಕ್ಷೇತ್ರದ ಮತದಾರರು, ಕಾರ್ಯಕರ್ತರು ನಿರ್ಧರಿಸಲಿದ್ದಾರೆ ಎಂದರು.
    1
    ಕೊನೆಗೂ ಉಕ್ಕಿನ ನಗರಕ್ಕೆ ಸಚಿವ ಸ್ಥಾನ ಸಿಗಲಿಲ್ಲ : ಮಂತ್ರಿಗಿರಿ ಇಲ್ಲದೆ ಸಂಗಮೇಶ್ವರ್ ರಾಜಕೀಯ ಅಂತ್ಯ


ಭದ್ರಾವತಿ : ವಿಧಾನಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಕೊನೆಯ ಘಳಿಗೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಭರವಸೆ ಹೊಂದಿದ್ದರು. ಆದರೆ ಇದೀಗ ಮಂತ್ರಿಗಿರಿ ಇಲ್ಲದೆ ತಮ್ಮ ರಾಜಕೀಯ ಜೀವನ ಅಂತ್ಯಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 
ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿ ಇತಿಹಾಸ ನಿರ್ಮಿಸಿರುವ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಕ್ಷೇತ್ರದ ಜನರು ಹೊಂದಿದ್ದರು. ಇದುವರೆಗೂ ಕ್ಷೇತ್ರದ ಇತಿಹಾಸದಲ್ಲಿ ಮಂತ್ರಿಗಿರಿ ಭಾಗ್ಯ ಇಲ್ಲಿನ ಜನಪ್ರತಿನಿಧಿಗಳಿಗೆ ಲಭಿಸಿಲ್ಲ. ವೈಯಕ್ತಿಕ ಕಾರಣಗಳಿಂದ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಿಂದ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಸಂಗಮೇಶ್ವರ್ ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಕ್ಷೇತ್ರದಾದ್ಯಂತ ಮಗನ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಆರಂಭದಿಂದಲೂ ಪಕ್ಷ ನಿಷ್ಠೆಯಲ್ಲಿ ತೊಡಗಿಸಿಕೊಂಡಿರುವ ಸಂಗಮೇಶ್ವರ್ ಕಾಂಗ್ರೆಸ್ ಪಕ್ಷದ ಮೇಲೆ ಅಪಾರ ನಂಬಿಕೆ, ವಿಶ್ವಾಸ ಹೊಂದಿದ್ದರು. ಕೊನೆಯ ಘಳಿಗೆಯಲ್ಲಿ ತಮಗೆ ಮಂತ್ರಿಗಿರಿ ಭಾಗ್ಯ ಲಭಿಸುತ್ತದೆ ಎಂಬ ಆತ್ಮವಿಶ್ವಾಸ ಹೊಂದಿದ್ದರು. ಆದರೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲೂ ಮಂತ್ರಿಗಿರಿ ಭಾಗ್ಯ ಇಲ್ಲದಂತಾಗಿದೆ. ಇದರಿಂದಾಗಿ ಸಂಗಮೇಶ್ವರ್ ಅಭಿಮಾನಿ ಬಳಗ ಸೇರಿದಂತೆ ಕ್ಷೇತ್ರದ ನಾಗರೀಕರಲ್ಲಿ ನಿರಾಸೆಯನ್ನುಂಟು ಮಾಡಿದೆ. 
ಕಾಂಗ್ರೆಸ್‌ನಿಂದ ನಿರಂತರ ಅನ್ಯಾಯ: 
ಕಾಂಗ್ರೆಸ್ ಪಕ್ಷದ ಮೇಲೆ ಹೊಂದಿರುವ ಅಪಾರವಾದ ನಿಷ್ಠೆಯೇ ಸಂಗಮೇಶ್ವರ್ ಅವರನ್ನು ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡುತ್ತಿದೆ ಎಂಬುದು ಸುಳ್ಳಲ್ಲ. ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರೂ ಸಹ ಮುಂದಿನ ಚುನಾವಣೆಯಲ್ಲಿ ಅವರಿಗೆ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡದೇ ಸಿ.ಎಂ ಇಬ್ರಾಹಿಂ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ವಿಧಾನಸಭಾ ಚುನಾವಣೆ ಮತಯಾಚನೆ ಸೇರಿದಂತೆ ಹಲವು  ಸಂದರ್ಭಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಹಾಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಂಗಮೇಶ್ವರ್ ಅವರಿಗೆ ಮಂತ್ರಿಗಿರಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಭರವಸೆ ಈಡೇರಿಲ್ಲ. ಎರಡು ಬಾರಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಂಗಮೇಶ್ವರ್ ಅವರನ್ನು ಸಮಾಧಾನಪಡಿಸಲಾಗಿತ್ತು. ಇದೀಗ ರಾಜಕೀಯ ಜೀವನದ ಅಂತಿಮ ಸಮಯದಲ್ಲೂ ಸಚಿವ ಸ್ಥಾನ ನೀಡದೆ ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡಲಾಗಿದೆ. 
ಕಾಂಗ್ರೆಸ್ ಪಕ್ಷದಿಂದ ಮೋಸ: 
ಸಚಿವ ಸ್ಥಾನ ಕೈತಪ್ಪಿರುವ ಹಿನ್ನಲೆಯಲ್ಲಿ ಪತ್ರಿಕೆ ಜೊತೆ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ೪ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ೨-೩ ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ನೀಡಲಾಗಿದೆ. ನನಗೆ ಈ ಹಿಂದೆಯೇ ಸಚಿವ ಸ್ಥಾನ ಲಭಿಸಬೇಕಿತ್ತು. ಆದರೆ ನನಗೆ ಸಚಿವ ಸ್ಥಾನ ನೀಡದೆ ಮೋಸ ಮಾಡಲಾಯಿತು. ಈ ಹಿಂದೆ ೫೦ ಕೋ. ರು. ಅಮಿಷ ಬಂದರೂ ಸಹ ಕಾಂಗ್ರೆಸ್ ಪಕ್ಷ ಬಿಡದೆ ನಿಷ್ಟೆಯಿಂದ ಇದ್ದೇನೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ ಈ ಬಾರಿ ಸಹ ನನಗೆ ಮೋಸಲಾಗಿದೆ. ನಾನು ಕಾಂಗ್ರೆಸ್ ಪಕ್ಷ ತೊರೆಯುವುದು ಹಾಗು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ. ಮುಂದಿನ ನಿರ್ಧಾರ ಕ್ಷೇತ್ರದ ಮತದಾರರು, ಕಾರ್ಯಕರ್ತರು ನಿರ್ಧರಿಸಲಿದ್ದಾರೆ ಎಂದರು.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    4 hrs ago
  • ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ
    1
    ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    4 hrs ago
  • ಲೋಕಭವನದಲ್ಲಿ ಇಂದು ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ
    1
    ಲೋಕಭವನದಲ್ಲಿ ಇಂದು ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    4 hrs ago
  • ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯ ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೇರೋ ವಾಹನ ಹಾಗೂ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೇರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೇರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    1
    ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯ
ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೇರೋ ವಾಹನ ಹಾಗೂ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೇರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೇರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.