logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರದುರ್ಗ ಜಿಲ್ಲೆಯ ಭದ್ರಾ ಮೇಲ್ದಂಡೆ ಯೋಜನೆ ಹಣ ಬಿಡುಗಡೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ರೈತರಿಂದ ಪ್ರತಿಭಟನೆ: ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಚಳ್ಳಕೆರೆ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಜಕೀಯ ಗುದ್ದಾಟಗಳಿಂದಾಗಿ ಭದ್ರಾ ಮೇಲ್ದಂಡೆ ಯೋಜನೆ ವಿಳಂಬವಾಗುತ್ತಿದ್ದು ಮಧ್ಯ ಕರ್ನಾಟಕದ ಚಿತ್ರದುರ್ಗ ತುಮಕೂರು ದಾವಣಗೆರೆ ಚಿಕ್ಕಮಗಳೂರು ಜಿಲ್ಲೆಗಳ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈಗಾಗಲೇ ಮೇಲ್ದಂಡೆ ಯೋಜನೆ ಕಾಮಗಾರಿಗೆ 5300 ಕೋಟಿ ಹಣವನ್ನು ಬಜೆಟ್ನಲ್ಲಿ ಘೋಷಣೆ ಮಾಡಿ ಹಲವು ವರ್ಷಗಳ ಕಳೆದರೂ ಸಹ ಇದುವರೆಗೂ ಬಿಡುಗಡೆ ಮಾಡಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಈ ಹಣ ಬಿಡುಗಡೆ ಮಾಡದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಬೆಳೆ ಬೇಯಿಸಿಕೊಂಡು ಕಾಲಹರಣ ಮಾಡಿಕೊಂಡು ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಈಗಾಗಲೇ ರೈತ ಸಂಘ ಜಿಲ್ಲೆಯ ಆರು ತಾಲೂಕುಗಳಲ್ಲಿ ಸಭೆ ನಡೆಸಿದ್ದು ಮುಂದಿನ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನದ ವೇಳೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಎಲ್ಲಾ ರೈತ ಸಂಘಟನೆಗಳ ಸದಸ್ಯರು ಒಗ್ಗಟ್ಟಾಗಿ ಯೋಜನೆಯ ಹಣ ಬಿಡುಗಡೆ ಮಾಡುವಂತೆ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ ಚಿತ್ರದುರ್ಗ ಜಿಲ್ಲೆ, ಬರಪೀಡಿತ ಜಿಲ್ಲೆಯಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು ರಾಜಕೀಯ ಮುಖಂಡರು ಕೇವಲ ಚುನಾವಣಾ ಸಂದರ್ಭದಲ್ಲಿ ಮಾತ್ರ ರೈತರನ್ನು ವಲೈಸಲು ಭದ್ರಾ ಮೇಲ್ದಂಡೆ ಯೋಜನೆ ಜಾರಿಯ ಬಗ್ಗೆ ಮಾತನಾಡುತ್ತಾರೆ ಆದರೆ ಇದುವರೆಗೂ ಜಾರಿಗೆ ತರುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸದರು ಶಾಸಕರು ವಿಫಲರಾಗಿದ್ದಾರೆ ಈ ಭಾಗದ ರೈತರು ಶೇಂಗಾ ತೊಗರಿ ಮೆಕ್ಕೆಜೋಳ ಈರುಳ್ಳಿ ಟೊಮೆಟೊ ಗಳಂತಹ ಬೆಳೆಗಳನ್ನು ಅವಲಂಬಿಸಿದ್ದು ಮಳೆಯ ಅಭಾವದಿಂದ ರೈತರು ನಷ್ಟ ಅನುಭವಿಸುವಂತಾಗಿದೆ ಭದ್ರಾ ಮೇಲ್ದಂಡೆ ಯೋಜನೆ ಸಮರ್ಪಕವಾಗಿ ಜಿಲ್ಲೆಯಲ್ಲಿ ಜಾರಿಯಾದರೆ ಜಿಲ್ಲೆಯ ಕೆರೆಗಳು ತುಂಬಿ ರೈತರಿಗೆ ಜೀವನಾಡಿ ಯಾಗುತ್ತವೆ ಇದುವರೆಗೂ ಸುಮಾರು 10.000 ಕೋಟಿ ಭದ್ರಾ ಮೇಲ್ದಂಡೆ ಯೋಜನೆಗೆ ಖರ್ಚಾಗಿದ್ದು ಆದರೂ ಸಹ ಯೋಜನೆ ಪೂರ್ಣಗೊಳ್ಳದೆ ವಿಳಂಬವಾಗುತ್ತಿದೆ ಯೋಜನೆ ವಿಳಂಬವಾದಂತೆಲ್ಲ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿದ್ದು ತ್ವರಿತ ಗತಿಯಲ್ಲಿ ಕೇಂದ್ರ ಸರ್ಕಾರ ತನ್ನ ಪಾಲಿನ 5300 ಕೋಟಿ ಬಿಡುಗಡೆ ಮಾಡಬೇಕು ಹಾಗೂ ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಬಿಡುಗಡೆಗೊಳಿಸಿದರೆ ಭದ್ರ ಮೇಲ್ದಂಡೆ ಯೋಜನೆ ಪೂರ್ಣಗೊಂಡು ರೈತರ ಬಾಳು ಹಸನಾಗುತ್ತದೆ ಭದ್ರಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಂಘಟನೆಗಳ ಸದಸ್ಯರು ವಿವಿಧ ಸಂಘಟನೆಗಳ ರೈತರು ಒಗ್ಗಟ್ಟಾಗಿ ಹೋರಾಟ ಮಾಡಿ ಜಿಲ್ಲೆಯನ್ನು ಬಂದ್ ಮಾಡುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ರೈತ ಮುಖಂಡರು ಉಪಸ್ಥಿತರಿದ್ದರು.

14 hrs ago
user_ಬೆಳಗೆರೆ ನ್ಯೂಸ್
ಬೆಳಗೆರೆ ನ್ಯೂಸ್
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•

More news from ಕರ್ನಾಟಕ and nearby areas
  • ಬಾಣಗೆರೆ ಗ್ರಾಮದಲ್ಲಿ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಬಾಣಗೆರೆ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದ್ದು 70 ವರ್ಷದ ಜಯಪ್ಪ ಮೃತಪಟ್ಟಿದ್ದಾರೆ.
    1
    ಬಾಣಗೆರೆ ಗ್ರಾಮದಲ್ಲಿ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಬಾಣಗೆರೆ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದ್ದು 70 ವರ್ಷದ ಜಯಪ್ಪ ಮೃತಪಟ್ಟಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • Post by ದಯಾನಂದ ಡಿ ಎಚ್
    1
    Post by ದಯಾನಂದ ಡಿ ಎಚ್
    user_ದಯಾನಂದ ಡಿ ಎಚ್
    ದಯಾನಂದ ಡಿ ಎಚ್
    Davanagere, Davangere•
    11 hrs ago
  • ಶಿಡ್ಲಘಟ್ಟ: ಜಯಂತಿಗಳ ಪೂರ್ವಭಾವಿ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ! ಶಿಡ್ಲಘಟ್ಟ ತಹಶೀಲ್ದಾರ್ ಗಗನ ಸಿಂಧು ಕಟ್ಟುನಿಟ್ಟಿನ ಸೂಚನೆ!
    1
    ಶಿಡ್ಲಘಟ್ಟ:  ಜಯಂತಿಗಳ ಪೂರ್ವಭಾವಿ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ!
ಶಿಡ್ಲಘಟ್ಟ ತಹಶೀಲ್ದಾರ್ ಗಗನ ಸಿಂಧು ಕಟ್ಟುನಿಟ್ಟಿನ ಸೂಚನೆ!
    user_NAYAN NEWS
    NAYAN NEWS
    Sidlaghatta, Chikkaballapura•
    20 hrs ago
  • ಶ್ರೀನಿವಾಸಪುರ ಪಟ್ಟಣದ ಎಂ.ಜಿ. ರಸ್ತೆಯಲ್ಲಿ ನಡೆಯುತ್ತಿರುವ ಅವರೆಕಾಯಿ ವಹಿವಾಟು ವಿರೋಧಿಸಿ ಸುದ್ದಿ ಗೋಷ್ಠಿ
    1
    ಶ್ರೀನಿವಾಸಪುರ ಪಟ್ಟಣದ ಎಂ.ಜಿ. ರಸ್ತೆಯಲ್ಲಿ ನಡೆಯುತ್ತಿರುವ ಅವರೆಕಾಯಿ ವಹಿವಾಟು ವಿರೋಧಿಸಿ ಸುದ್ದಿ ಗೋಷ್ಠಿ
    user_Arunkumar H M
    Arunkumar H M
    Journalist ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    9 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    18 hrs ago
  • ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್ ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲಾ ವಿಶೇಷತೆ ಇರುವಾಗ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಯಾಕೆ ಹಿಂದುಳಿದಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಲ್ಲಿ ತಿಳಿಸಿದರು. “ನಮ್ಮಲ್ಲಿ 320 ಕಿ ಮೀ ಕರಾವಳಿ ಪ್ರದೇಶವಿದೆ. ಇಲ್ಲಿ ಪ್ರಕೃತಿ ಸಂಪತ್ತಿನ ಜೊತೆಗೆ, ಈ ಭಾಗದ ಹಿರಿಯರು ದೇಶಕ್ಕೆ ಅನೇಕ ಬ್ಯಾಂಕುಗಳನ್ನು ಕೊಟ್ಟಿದ್ದಾರೆ. ಬ್ಯಾಂಕುಗಳಲ್ಲಿ ಶಿಸ್ತು ಕೊಟ್ಟ ಜನ ನೀವು. ಪ್ರಪಂಚದಾದ್ಯಂತ ಈ ಕರಾವಳಿ ಭಾಗದ ಜನ ಕೆಲಸ ಮಾಡುತ್ತಿದ್ದಾರೆ. ಇದು ಶೈಕ್ಷಣಿಕ ಕೇಂದ್ರವೂ ಆಗಿದೆ. ಇಲ್ಲಿರುವಷ್ಟು ಮೆಡಿಕಲ್, ಇಂಜಿನಿಯರ್, ಪಿಯುಸಿ ಕಾಲೇಜು ಬೇರೆ ಯಾವುದೇ ಜಿಲ್ಲೆಯಲ್ಲಿ ಇಲ್ಲ. ನೀವು ಹೆಚ್ಚು ಮಾನವ ಸಂಪನ್ಮೂಲವನ್ನು ತಯಾರು ಮಾಡುತ್ತಿದ್ದೀರಿ. ಆದರೂ ಈ ಭಾಗದ ಪ್ರತಿಭಾವಂತ ಜನರು ಬೆಂಗಳೂರು, ಮುಂಬೈ ಸೇರಿದಂತೆ ಪ್ರಪಂಚದ ಮೂಲೆ ಮೂಲೆಗೆ ಹೋಗುತ್ತಿದ್ದಾರೆ” ಎಂದು ತಿಳಿಸಿದರು. “ಈ ಭಾಗದಲ್ಲಿ ಸುಂದರ ಸಮುದ್ರ ತೀರವಿದೆ. ಗೋವಾ ಹಾಗೂ ನಮಗೆ ಇರುವ ವ್ಯತ್ಯಾಸವೇನು? ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ. ಏಳೆಂಟು ತಿಂಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ನೀತಿ ಬಗ್ಗೆ ಚರ್ಚೆ ಮಾಡಲಾಯಿತು. ಆಗ ಪ್ರವಾಸೋದ್ಯಮ ಅಂತಿಮ ನೀತಿಯನ್ನು ತಡೆ ಹಿಡಿಯುವಂತೆ ಹೇಳಿದೆ. ಕರಾವಳಿ ಭಾಗದಲ್ಲಿ ನಾವು ಪ್ರವಾಸೋದ್ಯಮ ನೀತಿ ರೂಪಿಸಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಇಲ್ಲಿರುವ ಅಡಚಣೆ ಹೇಗೆ ಸರಿಪಡಿಸಬಹುದು. ಕಾನೂನು ಚೌಕಟ್ಟಿನಲ್ಲಿ ನಿವಾರಣೆ ಮಾಡಿ ನೂತನ ನೀತಿ ತರಬೇಕು ಎಂದು ಹೇಳಿದೆ” ಎಂದರು. "ಬಹಳಷ್ಟು ಮಂದಿ ವಿದೇಶದಲ್ಲಿ ಇರುವವರು, ಮುಂಬೈ, ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿಗಳು ತಮ್ಮ ಸ್ವಂತ ಊರಲ್ಲಿ ಏನಾದರೂ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದಾರೆ. ಅವರುಗಳು ಸರ್ಕಾರದಿಂದ ಅನುಕೂಲ ಮಾಡಿಕೊಟ್ಟರೆ ಬಂಡವಾಳ ಹೂಡುವುದಾಗಿ ತಿಳಿಸಿದ್ದಾರೆ. ಈ ಕಾರಣಕ್ಕೆ ನಾನು ವಿಧಾನಸಭೆ ಸೇರಿದಂತೆ ಹಲವಾರು ಕಡೆ ಇದರ ಬಗ್ಗೆ ಮಾತನಾಡಿದ್ದೇನೆ" ಎಂದರು. "ಇಲ್ಲಿ ಖಾಸಗಿಯವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಸರ್ಕಾರ ಒಂದಷ್ಟು ಮೂಲಸೌಕರ್ಯಗಳನ್ನು ಒದಗಿಸಿಕೊಡುತ್ತದೆ. ಜೊತೆಗೆ ಅನುಕೂಲತೆ, ಅನಾನುಕೂಲತೆ, ಸಮಸ್ಯೆಗಳನ್ನ ಚರ್ಚೆ ನಡೆಸಬೇಕಿದೆ. ಈ ಭಾಗದ ಎಲ್ಲಾ ಶಾಸಕರ ಬಳಿ ಈ ಬಗ್ಗೆ ಮಾತನಾಡಿದ್ದೇನೆ.‌ ಎಲ್ಲರೂ ಬಹಳ ಆಸಕ್ತಿ ತೋರಿದ್ದಾರೆ" ಎಂದರು. “ಈ ಬಗ್ಗೆ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿದಾಗ ಮಂಗಳೂರಿನಲ್ಲೇ ಈ ವಿಚಾರವಾಗಿ ಚರ್ಚೆ ಮಾಡೋಣ ಎಂದು ಹೇಳಿದರು. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚೆಸುವುಗು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ನಂಬಿದ್ದೇನೆ. ಹೀಗಾಗಿ ಇಂದು ನಿಮ್ಮ ಜೊತೆ ಚರ್ಚೆ ಮಾಡಲು ಬಂದಿದ್ದೇನೆ. ನಮ್ಮ ಈ ಪ್ರಯತ್ನಕ್ಕೆ ನಾವು ಕೈಜೊಡಿಸುತ್ತೇವೆ ಎಂದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಈ ಭಾಗದ ಅಭಿವೃದ್ಧಿ ಮಾಡಲು ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ, ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ಎಲ್ಲರೂ ಬೆಳೆಯುವಂತಾಗಲಿ ಎಂಬುದು ಎಲ್ಲರ ಇಚ್ಛಾಶಕ್ತಿಯಾಗಿದೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯಲಿದೆ” ಎಂದರು. “ನಾನು ಸಹಕಾರಿ ಸಚಿವನಾಗಿದ್ದಾಗ, ಈ ಎರಡು ಜಿಲ್ಲೆಗಳ ಬ್ಯಾಂಕುಗಳು ಸಾಲ ವಸೂಲಾತಿಯಲ್ಲಿ 90% ಯಶಸ್ವಿಯಾಗುತ್ತಿದ್ದನ್ನು ನೋಡಿದ್ದೇನೆ. ಇಂತಹ ಶಿಸ್ತುಬದ್ಧ ಜನರ ಜ್ಞಾನ ಸಂಪತ್ತು ಸರಿಯಾಗಿ ಬಳಸಿಕೊಳ್ಳಲು ಈ ಸಭೆ ಕರೆದಿದ್ದೇನೆ. ” “ಈ ಭಾಗಕ್ಕೆ ಮತ್ತೆ ಮರುಜೀವ ನೀಡಲು ಈ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಅಗತ್ಯವಿದೆ. ಈ ಭಾಗ ರಾತ್ರಿ 7ರ ನಂತರ ಸ್ತಬ್ಧವಾಗುತ್ತದೆ ಎಂದು ನಾನು ಈ ಹಿಂದೆ ಹೇಳಿದ್ದೇನೆ. ಕೆಲವರು ಸ್ವಾಗತಿಸಿದರು, ಕೆಲವರು ಟೀಕಿಸಿದರು. ನನ್ನ ಮಾತನ್ನು ಸುಳ್ಳು ಮಾಡುವ ಛಲ ಬರಲಿ ಎಂದು ನಾನು ಟೀಕೆ ಮಾಡಿದ್ದೆ. ಇಂದು ನಾನು ಎಲ್ಲಾ ಉದ್ಯಮದವರನ್ನು ಈ ಸಮಾವೇಶಕ್ಕೆ ಆಹ್ವಾನಿಸಿದ್ದೇನೆ. ನಿಮ್ಮ ಅಭಿಪ್ರಾಯ ಸ್ವೀಕರಿಸಲು ನಾವು ಬದ್ಧವಾಗಿದ್ದೇವೆ. ನೀವು ಮುಕ್ತವಾಗಿ ನಿಮ್ಮ ಸಲಹೆಗಳನ್ನು ನೀಡಿ, ನಿಮ್ಮ ಸಲಹೆ ಅಭಿಪ್ರಾಯಗಳನ್ನು ಒಟ್ಟು ಸೇರಿಸಿ ಹಣಕಾಸು ಸ್ಥಿತಿಗೆ ಅನುಗುಣವಾಗಿ ನಾವು, ಸಿಎಂ, ಪ್ರವಾಸೋದ್ಯಮ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆ ಮಾಡಿ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಮಾಡುತ್ತೇವೆ” ಎಂದರು. ವರದಿ: ಶಂಶೀರ್ ಬುಡೋಳಿ
    1
    ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್
ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲಾ ವಿಶೇಷತೆ ಇರುವಾಗ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಯಾಕೆ ಹಿಂದುಳಿದಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಲ್ಲಿ ತಿಳಿಸಿದರು.
“ನಮ್ಮಲ್ಲಿ 320 ಕಿ ಮೀ ಕರಾವಳಿ ಪ್ರದೇಶವಿದೆ. ಇಲ್ಲಿ ಪ್ರಕೃತಿ ಸಂಪತ್ತಿನ ಜೊತೆಗೆ, ಈ ಭಾಗದ ಹಿರಿಯರು ದೇಶಕ್ಕೆ ಅನೇಕ ಬ್ಯಾಂಕುಗಳನ್ನು ಕೊಟ್ಟಿದ್ದಾರೆ. ಬ್ಯಾಂಕುಗಳಲ್ಲಿ ಶಿಸ್ತು ಕೊಟ್ಟ ಜನ ನೀವು. ಪ್ರಪಂಚದಾದ್ಯಂತ ಈ ಕರಾವಳಿ ಭಾಗದ ಜನ ಕೆಲಸ ಮಾಡುತ್ತಿದ್ದಾರೆ. ಇದು ಶೈಕ್ಷಣಿಕ ಕೇಂದ್ರವೂ ಆಗಿದೆ. ಇಲ್ಲಿರುವಷ್ಟು ಮೆಡಿಕಲ್, ಇಂಜಿನಿಯರ್, ಪಿಯುಸಿ ಕಾಲೇಜು ಬೇರೆ ಯಾವುದೇ ಜಿಲ್ಲೆಯಲ್ಲಿ ಇಲ್ಲ. ನೀವು ಹೆಚ್ಚು ಮಾನವ ಸಂಪನ್ಮೂಲವನ್ನು ತಯಾರು ಮಾಡುತ್ತಿದ್ದೀರಿ. ಆದರೂ ಈ ಭಾಗದ ಪ್ರತಿಭಾವಂತ ಜನರು ಬೆಂಗಳೂರು, ಮುಂಬೈ ಸೇರಿದಂತೆ ಪ್ರಪಂಚದ ಮೂಲೆ ಮೂಲೆಗೆ ಹೋಗುತ್ತಿದ್ದಾರೆ” ಎಂದು ತಿಳಿಸಿದರು.
“ಈ ಭಾಗದಲ್ಲಿ ಸುಂದರ ಸಮುದ್ರ ತೀರವಿದೆ. ಗೋವಾ ಹಾಗೂ ನಮಗೆ ಇರುವ ವ್ಯತ್ಯಾಸವೇನು? ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ. ಏಳೆಂಟು ತಿಂಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ನೀತಿ ಬಗ್ಗೆ ಚರ್ಚೆ ಮಾಡಲಾಯಿತು. ಆಗ ಪ್ರವಾಸೋದ್ಯಮ ಅಂತಿಮ ನೀತಿಯನ್ನು ತಡೆ ಹಿಡಿಯುವಂತೆ ಹೇಳಿದೆ. ಕರಾವಳಿ ಭಾಗದಲ್ಲಿ ನಾವು ಪ್ರವಾಸೋದ್ಯಮ ನೀತಿ ರೂಪಿಸಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಇಲ್ಲಿರುವ ಅಡಚಣೆ ಹೇಗೆ ಸರಿಪಡಿಸಬಹುದು. ಕಾನೂನು ಚೌಕಟ್ಟಿನಲ್ಲಿ ನಿವಾರಣೆ ಮಾಡಿ ನೂತನ ನೀತಿ ತರಬೇಕು ಎಂದು ಹೇಳಿದೆ” ಎಂದರು.
"ಬಹಳಷ್ಟು ಮಂದಿ ವಿದೇಶದಲ್ಲಿ ಇರುವವರು, ಮುಂಬೈ, ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿಗಳು ತಮ್ಮ ಸ್ವಂತ ಊರಲ್ಲಿ ಏನಾದರೂ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದಾರೆ. ಅವರುಗಳು ಸರ್ಕಾರದಿಂದ ಅನುಕೂಲ ಮಾಡಿಕೊಟ್ಟರೆ ಬಂಡವಾಳ ಹೂಡುವುದಾಗಿ ತಿಳಿಸಿದ್ದಾರೆ. ಈ ಕಾರಣಕ್ಕೆ ನಾನು ವಿಧಾನಸಭೆ ಸೇರಿದಂತೆ ಹಲವಾರು ಕಡೆ ಇದರ ಬಗ್ಗೆ ಮಾತನಾಡಿದ್ದೇನೆ" ಎಂದರು.
"ಇಲ್ಲಿ ಖಾಸಗಿಯವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಸರ್ಕಾರ ಒಂದಷ್ಟು ಮೂಲಸೌಕರ್ಯಗಳನ್ನು ಒದಗಿಸಿಕೊಡುತ್ತದೆ. ಜೊತೆಗೆ ಅನುಕೂಲತೆ, ಅನಾನುಕೂಲತೆ, ಸಮಸ್ಯೆಗಳನ್ನ ಚರ್ಚೆ ನಡೆಸಬೇಕಿದೆ. ಈ ಭಾಗದ ಎಲ್ಲಾ ಶಾಸಕರ ಬಳಿ ಈ ಬಗ್ಗೆ ಮಾತನಾಡಿದ್ದೇನೆ.‌ ಎಲ್ಲರೂ ಬಹಳ ಆಸಕ್ತಿ ತೋರಿದ್ದಾರೆ" ಎಂದರು.
“ಈ ಬಗ್ಗೆ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿದಾಗ ಮಂಗಳೂರಿನಲ್ಲೇ ಈ ವಿಚಾರವಾಗಿ ಚರ್ಚೆ ಮಾಡೋಣ ಎಂದು ಹೇಳಿದರು. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚೆಸುವುಗು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ನಂಬಿದ್ದೇನೆ. ಹೀಗಾಗಿ ಇಂದು ನಿಮ್ಮ ಜೊತೆ ಚರ್ಚೆ ಮಾಡಲು ಬಂದಿದ್ದೇನೆ. ನಮ್ಮ ಈ ಪ್ರಯತ್ನಕ್ಕೆ ನಾವು ಕೈಜೊಡಿಸುತ್ತೇವೆ ಎಂದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಈ ಭಾಗದ ಅಭಿವೃದ್ಧಿ ಮಾಡಲು ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ, ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ಎಲ್ಲರೂ ಬೆಳೆಯುವಂತಾಗಲಿ ಎಂಬುದು ಎಲ್ಲರ ಇಚ್ಛಾಶಕ್ತಿಯಾಗಿದೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯಲಿದೆ” ಎಂದರು.
“ನಾನು ಸಹಕಾರಿ ಸಚಿವನಾಗಿದ್ದಾಗ, ಈ ಎರಡು ಜಿಲ್ಲೆಗಳ ಬ್ಯಾಂಕುಗಳು ಸಾಲ ವಸೂಲಾತಿಯಲ್ಲಿ 90% ಯಶಸ್ವಿಯಾಗುತ್ತಿದ್ದನ್ನು ನೋಡಿದ್ದೇನೆ. ಇಂತಹ ಶಿಸ್ತುಬದ್ಧ ಜನರ ಜ್ಞಾನ ಸಂಪತ್ತು ಸರಿಯಾಗಿ ಬಳಸಿಕೊಳ್ಳಲು ಈ ಸಭೆ ಕರೆದಿದ್ದೇನೆ. ”
“ಈ ಭಾಗಕ್ಕೆ ಮತ್ತೆ ಮರುಜೀವ ನೀಡಲು ಈ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಅಗತ್ಯವಿದೆ. ಈ ಭಾಗ ರಾತ್ರಿ 7ರ ನಂತರ ಸ್ತಬ್ಧವಾಗುತ್ತದೆ ಎಂದು ನಾನು ಈ ಹಿಂದೆ ಹೇಳಿದ್ದೇನೆ. ಕೆಲವರು ಸ್ವಾಗತಿಸಿದರು, ಕೆಲವರು ಟೀಕಿಸಿದರು. ನನ್ನ ಮಾತನ್ನು ಸುಳ್ಳು ಮಾಡುವ ಛಲ ಬರಲಿ ಎಂದು ನಾನು ಟೀಕೆ ಮಾಡಿದ್ದೆ. ಇಂದು ನಾನು ಎಲ್ಲಾ ಉದ್ಯಮದವರನ್ನು ಈ ಸಮಾವೇಶಕ್ಕೆ ಆಹ್ವಾನಿಸಿದ್ದೇನೆ. ನಿಮ್ಮ ಅಭಿಪ್ರಾಯ ಸ್ವೀಕರಿಸಲು ನಾವು ಬದ್ಧವಾಗಿದ್ದೇವೆ. ನೀವು ಮುಕ್ತವಾಗಿ ನಿಮ್ಮ ಸಲಹೆಗಳನ್ನು ನೀಡಿ, ನಿಮ್ಮ ಸಲಹೆ ಅಭಿಪ್ರಾಯಗಳನ್ನು ಒಟ್ಟು ಸೇರಿಸಿ ಹಣಕಾಸು ಸ್ಥಿತಿಗೆ ಅನುಗುಣವಾಗಿ ನಾವು, ಸಿಎಂ, ಪ್ರವಾಸೋದ್ಯಮ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆ ಮಾಡಿ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಮಾಡುತ್ತೇವೆ” ಎಂದರು.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Mangaluru, Dakshina Kannada•
    14 hrs ago
  • ತಳುಕಿನಲ್ಲಿ ಸರಣಿ ಕಳ್ಳತನ ಬೆಚ್ಚಿ ಬಿದ್ದ ಜನ.. ಚಳ್ಳಕೆರೆ: ತಾಲ್ಲೂಕಿನ ತಳಕು ಗ್ರಾಮದಲ್ಲಿ ಸರಣಿಕಳ್ಳತನವಾಗಿದ್ದು ಒಂದು ಗೊಬ್ಬರದ ಅಂಗಡಿ ಹಾಗೂ ಪ್ರಾವಿಜನ್ ಸ್ಟೋರ್ ಬೀಗ ಮುರಿದು ಒಳ್ಳ ನುಗ್ಗಿದ ಕಳ್ಳ ಕೈಗಿ ಸಿಕ್ಕ 3 ಸಾವಿರ ಹಣ ಕಳ್ಳತನ ಮಾಡಿದ್ದು ಉಳಿದಂತೆ 5 ಗೂಡಂಗಡಿಗಳ ಬೀಗ ಮುರಿದಿದ್ದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾನೆ.. ಕಳ್ಳನ ಚಲನ ಒಲನ ಕೆಲವು ಕಡೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ . ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಿತು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
    1
    ತಳುಕಿನಲ್ಲಿ ಸರಣಿ ಕಳ್ಳತನ ಬೆಚ್ಚಿ  ಬಿದ್ದ ಜನ..
ಚಳ್ಳಕೆರೆ: ತಾಲ್ಲೂಕಿನ ತಳಕು ಗ್ರಾಮದಲ್ಲಿ ಸರಣಿಕಳ್ಳತನವಾಗಿದ್ದು ಒಂದು ಗೊಬ್ಬರದ ಅಂಗಡಿ ಹಾಗೂ ಪ್ರಾವಿಜನ್ ಸ್ಟೋರ್  ಬೀಗ ಮುರಿದು ಒಳ್ಳ ನುಗ್ಗಿದ ಕಳ್ಳ ಕೈಗಿ ಸಿಕ್ಕ 3 ಸಾವಿರ ಹಣ ಕಳ್ಳತನ ಮಾಡಿದ್ದು ಉಳಿದಂತೆ 5 ಗೂಡಂಗಡಿಗಳ ಬೀಗ  ಮುರಿದಿದ್ದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾನೆ..
ಕಳ್ಳನ ಚಲನ ಒಲನ ಕೆಲವು ಕಡೆ ಸಿಸಿ ಕ್ಯಾಮೆರಾದಲ್ಲಿ  ಸೆರೆಯಾಗಿದೆ . ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಿತು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 hrs ago
  • ಲಕ್ಷ್ಮಿಪುರದಲ್ಲಿ ನೂರಾಣಿ ಮಸ್ಜಿದ್ ಭವ್ಯ ಉದ್ಘಾಟನೆ ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಭಾಗಿ....
    1
    ಲಕ್ಷ್ಮಿಪುರದಲ್ಲಿ ನೂರಾಣಿ ಮಸ್ಜಿದ್ ಭವ್ಯ ಉದ್ಘಾಟನೆ
ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಭಾಗಿ....
    user_Arunkumar H M
    Arunkumar H M
    Journalist ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    13 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.