logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಔಷಧ ಕೌಂಟರ್ ವ್ಯವಸ್ಥೆ‌ಮಾಡುವಂತೆ ಲೋಕಾಯುಕ್ತ ಸೂಚನೆ ಔಷಧಿ ಪಡೆಯಲು ರೋಗಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಮಯ ಸರತಿ ಸಾಲಿನಲ್ಲಿ ಕಾಯುವ ಪರಿಸ್ಥಿತಿ ಉಂಟಾಗದಂತೆ ಕ್ರಮವಹಿಸಬೇಕು. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಔಷಧ ಕೌಂಟರ್‌ಗಳನ್ನು ನಿರ್ಮಿಸುವ ಮೂಲಕ ಔಷಧಿ ವಿತರಣೆ ವ್ಯವಸ್ಥೆಯನ್ನು ಸುಗಮಗೊಳಿಸಬೇಕು. ಇದರಿಂದ ರೋಗಿಗಳಿಗೆ ಸಮಯ ಉಳಿತಾಯವಾಗುವುದರ ಜೊತೆಗೆ ಜನದಟ್ಟಣೆ ಕಡಿಮೆಯಾಗಲಿದೆ. ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ, ರೋಗಿಗಳಿಗೆ ತ್ವರಿತವಾಗಿ ಔಷಧಿ ದೊರೆಯುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು. *ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆಗೆ ಸೂಚನೆ* ಆಸ್ಪತ್ರೆಯಲ್ಲಿರುವ ವೈದ್ಯಕೀಯ ಉಪಕರಣಗಳು, ಹಾಸಿಗೆಗಳು, ವಿದ್ಯುತ್, ಕುಡಿಯುವ ನೀರು, ಶೌಚಾಲಯಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ದುರಸ್ತಿ ಅಗತ್ಯವಿರುವ ಉಪಕರಣಗಳು ಹಾಗೂ ಮೂಲಸೌಕರ್ಯಗಳನ್ನು ತಕ್ಷಣವೇ ದುರಸ್ತಿಪಡಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲ ಉಂಟಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು. ರೋಗಿಗಳೊಂದಿಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ತುರ್ತು ಚಿಕಿತ್ಸೆಗೆ ಆದ್ಯತೆ ನೀಡುವುದರ ಜೊತೆಗೆ, ಆಸ್ಪತ್ರೆಯಲ್ಲಿ ಲಭ್ಯವಿರುವ ಸೇವೆಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸೂಚಿಸಿದರು. ಸಾರ್ವಜನಿಕರಿಗೆ ಸರ್ಕಾರದ ವತಿಯಿಂದ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಬೇಕು. ಆಸ್ಪತ್ರೆಯ ನಿರ್ವಹಣೆ, ಸ್ವಚ್ಛತೆ, ಔಷಧಿ ವಿತರಣೆ ಹಾಗೂ ಮೂಲಸೌಕರ್ಯಗಳ ವಿಚಾರದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭಾರಾಣಿ, ಮದ್ದೂರು ತಾಲ್ಲೂಕು ಆಸ್ಪತ್ರೆಯ ಆರ್.ಎಂ.ಓ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

4 hrs ago
user_Arunprasad G B
Arunprasad G B
Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
4 hrs ago

*ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಔಷಧ ಕೌಂಟರ್ ವ್ಯವಸ್ಥೆ‌ಮಾಡುವಂತೆ ಲೋಕಾಯುಕ್ತ ಸೂಚನೆ ಔಷಧಿ ಪಡೆಯಲು ರೋಗಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಮಯ ಸರತಿ ಸಾಲಿನಲ್ಲಿ ಕಾಯುವ ಪರಿಸ್ಥಿತಿ ಉಂಟಾಗದಂತೆ ಕ್ರಮವಹಿಸಬೇಕು. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಔಷಧ ಕೌಂಟರ್‌ಗಳನ್ನು ನಿರ್ಮಿಸುವ ಮೂಲಕ ಔಷಧಿ ವಿತರಣೆ ವ್ಯವಸ್ಥೆಯನ್ನು ಸುಗಮಗೊಳಿಸಬೇಕು. ಇದರಿಂದ ರೋಗಿಗಳಿಗೆ ಸಮಯ ಉಳಿತಾಯವಾಗುವುದರ ಜೊತೆಗೆ ಜನದಟ್ಟಣೆ ಕಡಿಮೆಯಾಗಲಿದೆ. ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ, ರೋಗಿಗಳಿಗೆ ತ್ವರಿತವಾಗಿ ಔಷಧಿ ದೊರೆಯುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು. *ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆಗೆ ಸೂಚನೆ* ಆಸ್ಪತ್ರೆಯಲ್ಲಿರುವ ವೈದ್ಯಕೀಯ ಉಪಕರಣಗಳು, ಹಾಸಿಗೆಗಳು, ವಿದ್ಯುತ್, ಕುಡಿಯುವ ನೀರು, ಶೌಚಾಲಯಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ದುರಸ್ತಿ ಅಗತ್ಯವಿರುವ ಉಪಕರಣಗಳು ಹಾಗೂ ಮೂಲಸೌಕರ್ಯಗಳನ್ನು ತಕ್ಷಣವೇ ದುರಸ್ತಿಪಡಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲ ಉಂಟಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು. ರೋಗಿಗಳೊಂದಿಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ತುರ್ತು ಚಿಕಿತ್ಸೆಗೆ ಆದ್ಯತೆ ನೀಡುವುದರ ಜೊತೆಗೆ, ಆಸ್ಪತ್ರೆಯಲ್ಲಿ ಲಭ್ಯವಿರುವ ಸೇವೆಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸೂಚಿಸಿದರು. ಸಾರ್ವಜನಿಕರಿಗೆ ಸರ್ಕಾರದ ವತಿಯಿಂದ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಬೇಕು. ಆಸ್ಪತ್ರೆಯ ನಿರ್ವಹಣೆ, ಸ್ವಚ್ಛತೆ, ಔಷಧಿ ವಿತರಣೆ ಹಾಗೂ ಮೂಲಸೌಕರ್ಯಗಳ ವಿಚಾರದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭಾರಾಣಿ, ಮದ್ದೂರು ತಾಲ್ಲೂಕು ಆಸ್ಪತ್ರೆಯ ಆರ್.ಎಂ.ಓ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ' ಮಂಡ್ಯ: ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ವತಿಯಿಂದ ಜಿಲ್ಲೆಯ ಜನರಿಗಾಗಿ `ಉಚಿತ ಔಷಧ ನೆರವು' ಹಾಗೂ ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ' ನಡೆಯಲಿದೆ ಎಂದು ಫೌಂಡೇಷನ್‌ನ ಟ್ರಸ್ಟಿ ಎಂ.ಎನ್.ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೌಂಡೇಷನ್‌ನಿAದ ನಿರಂತರ ಜನಪರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅಂತೆಯೇ ಸಾಮಾಜಿಕ ಜವಾಬ್ದಾರಿಯಿಂದ ಔಷಧ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಆರ್ಥಿಕ ಸಮಸ್ಯೆಯಿಂದಾಗಿ ಉಚಿತ/ರಿಯಾಯಿತಿ ದರದಲ್ಲಿ ಚಿಕಿತ್ಸೆ ಮತ್ತು ಆರ್ಥಿಕವಾಗಿ ಹಿಂದುಳಿದ, ಹಿರಿಯ ನಾಗರಿಕ ಮತ್ತು ವಿಶೇಷ ಚೇತನರಿಗೆ, ಔಷಧ ಪಡೆಯಲು ಸಾಧ್ಯವಾಗದ ಕಾಯಿಲೆ ಪೀಡಿತರಿಗೆ ಈ ಯೋಜನೆಯಡಿ ಉಚಿತ ಔಷಧ ನೀಡಲಾಗುತ್ತದೆ. ಬಿಪಿ, ಶುಗರ್, ಥೈರಾಯ್ಡ್, ಮೆದುಳು, ಮಾನಸಿಕ, ಪಾರ್ಶ್ವವಾಯು (ಸ್ಟ್ರೋಕ್) ಮುಂತಾದ ದೀರ್ಘಕಾಲದ ಕಾಯಿಲೆಗಳಿಗೆ ಔಷಧ ಪಡೆಯುತ್ತಿರುವವರು ವೈದ್ಯರ ಸಲಹಾ ಚೀಟಿ ಮತ್ತು ಆರ್ಥಿಕ ಸಂಕಷ್ಟದ ವಿವರದೊಂದಿಗೆ ಅರ್ಜಿ ಸಲ್ಲಿಸಿ ಉಚಿತ ಔಷಧ ನೆರವು ಪಡೆಯಲು ಹೇಳಿದರು. ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 'ರಸ್ತೆ ಸುರಕ್ಷತಾ ಜಾಗೃತಿ ಬೀದಿ ನಾಟಕ ಅಭಿಯಾನ' ಆಯೋಜಿಸಲಾಗಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಹೆಲ್ಮೆಟ್ ಧರಿಸುವುದು, ಅತಿವೇಗ ಚಾಲನೆ ತಡೆಯುವುದು, ಸೀಟ್ ಬೆಲ್ಟ್ ಬಳಕೆ, ಮತ್ತು ಚಾಲನೆ ವೇಳೆ ಮೊಬೈಲ್ ಬಳಸದಿರುವ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ಟ್ರಸ್ಟ್ನ ಸಂಘಟನಾ ಕಾರ್ಯದರ್ಶಿಗಳಾದ ಎಂ.ಸಿ.ಅಮಿತ್‌ಗೌಡ, ವಿಶ್ವ, ಸದಸ್ಯೆ ಶೋಭ ಇದ್ದರು.
    1
    ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ'
ಮಂಡ್ಯ: ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ವತಿಯಿಂದ ಜಿಲ್ಲೆಯ ಜನರಿಗಾಗಿ `ಉಚಿತ ಔಷಧ ನೆರವು' ಹಾಗೂ ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ' ನಡೆಯಲಿದೆ ಎಂದು ಫೌಂಡೇಷನ್‌ನ ಟ್ರಸ್ಟಿ ಎಂ.ಎನ್.ರವಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೌಂಡೇಷನ್‌ನಿAದ ನಿರಂತರ ಜನಪರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅಂತೆಯೇ ಸಾಮಾಜಿಕ ಜವಾಬ್ದಾರಿಯಿಂದ ಔಷಧ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ಆರ್ಥಿಕ ಸಮಸ್ಯೆಯಿಂದಾಗಿ ಉಚಿತ/ರಿಯಾಯಿತಿ ದರದಲ್ಲಿ ಚಿಕಿತ್ಸೆ ಮತ್ತು ಆರ್ಥಿಕವಾಗಿ ಹಿಂದುಳಿದ, ಹಿರಿಯ ನಾಗರಿಕ ಮತ್ತು ವಿಶೇಷ ಚೇತನರಿಗೆ, ಔಷಧ ಪಡೆಯಲು ಸಾಧ್ಯವಾಗದ ಕಾಯಿಲೆ ಪೀಡಿತರಿಗೆ ಈ ಯೋಜನೆಯಡಿ ಉಚಿತ ಔಷಧ ನೀಡಲಾಗುತ್ತದೆ. ಬಿಪಿ, ಶುಗರ್, ಥೈರಾಯ್ಡ್, ಮೆದುಳು, ಮಾನಸಿಕ, ಪಾರ್ಶ್ವವಾಯು (ಸ್ಟ್ರೋಕ್) ಮುಂತಾದ ದೀರ್ಘಕಾಲದ ಕಾಯಿಲೆಗಳಿಗೆ ಔಷಧ ಪಡೆಯುತ್ತಿರುವವರು ವೈದ್ಯರ ಸಲಹಾ ಚೀಟಿ ಮತ್ತು ಆರ್ಥಿಕ ಸಂಕಷ್ಟದ ವಿವರದೊಂದಿಗೆ ಅರ್ಜಿ ಸಲ್ಲಿಸಿ ಉಚಿತ ಔಷಧ ನೆರವು ಪಡೆಯಲು ಹೇಳಿದರು.
ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 'ರಸ್ತೆ ಸುರಕ್ಷತಾ ಜಾಗೃತಿ ಬೀದಿ ನಾಟಕ ಅಭಿಯಾನ' ಆಯೋಜಿಸಲಾಗಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಹೆಲ್ಮೆಟ್ ಧರಿಸುವುದು, ಅತಿವೇಗ ಚಾಲನೆ ತಡೆಯುವುದು, ಸೀಟ್ ಬೆಲ್ಟ್ ಬಳಕೆ, ಮತ್ತು ಚಾಲನೆ ವೇಳೆ ಮೊಬೈಲ್ ಬಳಸದಿರುವ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಟ್ರಸ್ಟ್ನ ಸಂಘಟನಾ ಕಾರ್ಯದರ್ಶಿಗಳಾದ ಎಂ.ಸಿ.ಅಮಿತ್‌ಗೌಡ, ವಿಶ್ವ, ಸದಸ್ಯೆ ಶೋಭ ಇದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    32 min ago
  • ಮಳವಳ್ಳಿ ತಾಲೂಕು ನಲ್ಲಿ ಅಕ್ರಮ ಮಣ್ಣು ದಂದೆ ಮಳವಳ್ಳಿ : ಮಳವಳ್ಳಿ ತಾಲೂಕಿನಲ್ಲಿ ಮಣ್ಣಿನ ದಂಧೆ ಅಕ್ರಮವಾಗಿ ನಡೆಯುತ್ತಿದ್ದು ಕೆಲ ಗ್ರಾಮಗಳಲ್ಲಿ ಅವೇರಳ್ಳಿ ಹೆಬ್ಬಣಿ ಮುಂತಾದ ಗ್ರಾಮಗಳಲ್ಲಿ ಮಣ್ಣಿನ ದಂಧೆ ಸಾಗುತ್ತಿದೆ ಇದಕ್ಕೆ ಗ್ರಾಮಸ್ಥರ ಆಕ್ರೋಶ ಹಾಗೂ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಸೂಕ್ತವಾದ ಕಾನೂನಿ ಕ್ರಮವನ್ನು ಜರಗಿಸಬೇಕು ಎಂದು ತಹಸಿಲ್ದಾರ್ ಜಿಲ್ಲಾ ಕಚೇರಿ ನಲ್ಲಿ ಮನವಿ ಮಾಡಲು ತೀರ್ಮಾನಿಸಿದ್ದಾರೆ
    1
    ಮಳವಳ್ಳಿ ತಾಲೂಕು ನಲ್ಲಿ ಅಕ್ರಮ ಮಣ್ಣು ದಂದೆ 
ಮಳವಳ್ಳಿ : ಮಳವಳ್ಳಿ ತಾಲೂಕಿನಲ್ಲಿ ಮಣ್ಣಿನ ದಂಧೆ ಅಕ್ರಮವಾಗಿ ನಡೆಯುತ್ತಿದ್ದು ಕೆಲ ಗ್ರಾಮಗಳಲ್ಲಿ ಅವೇರಳ್ಳಿ ಹೆಬ್ಬಣಿ ಮುಂತಾದ ಗ್ರಾಮಗಳಲ್ಲಿ ಮಣ್ಣಿನ ದಂಧೆ ಸಾಗುತ್ತಿದೆ ಇದಕ್ಕೆ ಗ್ರಾಮಸ್ಥರ ಆಕ್ರೋಶ ಹಾಗೂ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಸೂಕ್ತವಾದ ಕಾನೂನಿ ಕ್ರಮವನ್ನು ಜರಗಿಸಬೇಕು ಎಂದು ತಹಸಿಲ್ದಾರ್ ಜಿಲ್ಲಾ ಕಚೇರಿ ನಲ್ಲಿ ಮನವಿ ಮಾಡಲು ತೀರ್ಮಾನಿಸಿದ್ದಾರೆ
    user_ಎ.ಏನ್.ಎಸ್ ನ್ಯೂಸ್
    ಎ.ಏನ್.ಎಸ್ ನ್ಯೂಸ್
    ರಾಜಕೀಯ ಪಕ್ಷದ ಕಚೇರಿ ಮಳವಳ್ಳಿ, ಮಂಡ್ಯ, ಕರ್ನಾಟಕ•
    1 hr ago
  • ಯೋಗಾಭ್ಯಾಸ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ: ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಮಳವಳ್ಳಿ: ಬೆಳದಿಂಗಳಲ್ಲಿ ಶರಣರ ಚಿಂತನ‌ಮಂಥನ ಸಮಿತಿ ವತಿಯಿಂದ ಹುಣ್ಣಿಮೆ ಪ್ರಯುಕ್ತ 142 ನೇ ಚಿಂತನ ಮಂಥನ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪೂರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟಿಸಿ ಮಾತನಾಡಿ,ಪ್ರತಿ ದಿನ ಮನೆಯಲ್ಲಿ ಯೋಗಾಭ್ಯಾಸದಿಂದ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು. ಇದೇ ವೇಳೆ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗಾಸನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ಶಶಿಕಲಾ, ಯೋಗ ಶಿಕ್ಷಕ ಶ್ರೀನಿಧಿ, ಚಿಂತನ ಮಂಥನ ಸಮಿತಿ ಮಲ್ಲೇಶ್, ನಾಗರಾಜು, ಪರಶಿವಮೂರ್ತಿ,ನಟರಾಜಮೂರ್ತಿ ಸೇರಿದಂತೆ ಹಲವರು ಇದ್ದರು.
    1
    ಯೋಗಾಭ್ಯಾಸ ಮಾಡಿ  ಆರೋಗ್ಯ ಕಾಪಾಡಿಕೊಳ್ಳಿ: ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ
ಮಳವಳ್ಳಿ:  ಬೆಳದಿಂಗಳಲ್ಲಿ  ಶರಣರ ಚಿಂತನ‌ಮಂಥನ ಸಮಿತಿ ವತಿಯಿಂದ ಹುಣ್ಣಿಮೆ ಪ್ರಯುಕ್ತ  142 ನೇ ಚಿಂತನ ಮಂಥನ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಶ್ರೀ ಬಸವೇಶ್ವರ  ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು  ಪೂರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟಿಸಿ ಮಾತನಾಡಿ,ಪ್ರತಿ ದಿನ  ಮನೆಯಲ್ಲಿ ಯೋಗಾಭ್ಯಾಸದಿಂದ ಮಾಡಿ  ಆರೋಗ್ಯ ಕಾಪಾಡಿಕೊಳ್ಳಿ ಎಂದರು.
ಇದೇ ವೇಳೆ  ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗಾಸನ  ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ  ಯೋಗ ಶಿಕ್ಷಕಿ ಶಶಿಕಲಾ, ಯೋಗ ಶಿಕ್ಷಕ ಶ್ರೀನಿಧಿ, ಚಿಂತನ ಮಂಥನ ಸಮಿತಿ ಮಲ್ಲೇಶ್, ನಾಗರಾಜು, ಪರಶಿವಮೂರ್ತಿ,ನಟರಾಜಮೂರ್ತಿ  ಸೇರಿದಂತೆ ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    1 hr ago
  • ದೇಶದ ನಂಬರ್ ಒನ್ ವಿಐ Vi ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ದೇಶದ ನಂಬರ್ ಒನ್ ಬಿ ಐ ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ರೂ 325 ರಿಚಾರ್ಜ್ ಮಾಡಿಸಿದರೆ ಅನ್ಲಿಮಿಟೆಡ್ ಡಾಟಾ ಅನ್ಲಿಮಿಟೆಡ್ ಕರೆ 100 ಎಸ್ ಎಮ್ ಎಸ್ ಇಂದೇ ವಿಐ ಗ್ರಹಕರಾಗಿ ಕೊಡುಗೆ ತಮ್ಮದಾಗಿಸಿಕೊಳ್ಳಿ ವಿತರಕರ ವಿಶೇಷ ಪ್ರಕಟಣೆ
    1
    ದೇಶದ ನಂಬರ್ ಒನ್ ವಿಐ Vi ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ
ದೇಶದ ನಂಬರ್ ಒನ್ ಬಿ ಐ ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ರೂ 325 ರಿಚಾರ್ಜ್ ಮಾಡಿಸಿದರೆ ಅನ್ಲಿಮಿಟೆಡ್ ಡಾಟಾ ಅನ್ಲಿಮಿಟೆಡ್ ಕರೆ 100 ಎಸ್ ಎಮ್ ಎಸ್ ಇಂದೇ ವಿಐ ಗ್ರಹಕರಾಗಿ ಕೊಡುಗೆ ತಮ್ಮದಾಗಿಸಿಕೊಳ್ಳಿ ವಿತರಕರ ವಿಶೇಷ ಪ್ರಕಟಣೆ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    22 hrs ago
  • ಮೈಸೂರು : ಅರಣ್ಯ ಭವನದಲ್ಲಿ ನಮ್ಮ ದಸರಾ‌ ಗಜಪಡೆ ಭರ್ಜರಿ ರಿಲ್ಯಾಕ್ಸ್ ನಾಡಹಬ್ಬ ದಸರಾ 2026 ಹಿನ್ನಲೆ ಮೈಸೂರಿಗೆ ಆಗಮಿಸಿದ ಗಜಪಡೆ ಅರಣ್ಯ ಭವನದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿದೆ.ಮೊದಲ ಹಂತದಲ್ಲಿ ಬಂದಿರುವ 9 ಆನೆಗಳ ತಂಡ ಅರಣ್ಯ ಭವನದಲ್ಲಿ ಬೀಡು ಬಿಟ್ಟಿವೆ. ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಆನೆಗಳನ್ನ ಸಂಪ್ರದಾಯವಾಗಿ ಸ್ವಾಗತಿಸಲಾಗುತ್ತದೆ. ಅಕ್ಟೋಬರ್ 21 ರಂದು ನಡೆಯಲಿರುವ ಜಂಬೂಸವಾರಿಗೆ ಗಜಪಡೆ ಸಜ್ಜಾಗಲಿದೆ...
    1
    ಮೈಸೂರು : ಅರಣ್ಯ ಭವನದಲ್ಲಿ ನಮ್ಮ  ದಸರಾ‌ ಗಜಪಡೆ ಭರ್ಜರಿ  ರಿಲ್ಯಾಕ್ಸ್
ನಾಡಹಬ್ಬ ದಸರಾ 2026 ಹಿನ್ನಲೆ ಮೈಸೂರಿಗೆ ಆಗಮಿಸಿದ ಗಜಪಡೆ ಅರಣ್ಯ ಭವನದಲ್ಲಿ ರಿಲ್ಯಾಕ್ಸ್  ಮೂಡ್ ನಲ್ಲಿದೆ.ಮೊದಲ ಹಂತದಲ್ಲಿ ಬಂದಿರುವ 9 ಆನೆಗಳ ತಂಡ ಅರಣ್ಯ ಭವನದಲ್ಲಿ ಬೀಡು ಬಿಟ್ಟಿವೆ. ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಆನೆಗಳನ್ನ ಸಂಪ್ರದಾಯವಾಗಿ ಸ್ವಾಗತಿಸಲಾಗುತ್ತದೆ. ಅಕ್ಟೋಬರ್ 21 ರಂದು ನಡೆಯಲಿರುವ ಜಂಬೂಸವಾರಿಗೆ ಗಜಪಡೆ ಸಜ್ಜಾಗಲಿದೆ...
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    6 hrs ago
  • News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews
    1
    News by dailynews 
ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ!
ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ.
#tanveersait #viral #mysuru #cmdkshivakumar #viralnews
News by dailynews 
ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ!
ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ.
#tanveersait #viral #mysuru #cmdkshivakumar #viralnews
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    12 hrs ago
  • ಹೆಬ್ಬಾಲೆಯಲ್ಲಿ 25 ಲಕ್ಷದಲ್ಲಿ ಪ್ರೇಕ್ಷಕ ಗ್ಯಾಲರಿ ಬನಶಂಕರಿ ಅಮ್ಮನವರ ರಂಗ ಮಂದಿರ ಉದ್ಘಾಟನಾ ಸಮಾರಂಭ. ಕೊಡಗು: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರಂಭದಲ್ಲಿ ಇನ್ನುಳಿಕೆ ಆಗಿರುವ ಪ್ರೇಕ್ಷಕ ಗ್ಯಾಲರಿಯನ್ನು 15 ಲಕ್ಷ ರೂ ವೆಚ್ಚದಲ್ಲಿ ಮುಂದಿನ ದಿನಗಳಲ್ಲಿ ವಿಸ್ತರಿಸಿಕೊಡುವುದಾಗಿ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಮಂತರ್ ಗೌಡ ಭರವಸೆ ನೀಡಿದರು. ತಾಲೂಕಿನ ಹೆಬ್ಬಾಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಿಂದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರೇಕ್ಷಕರ ಗ್ಯಾಲರಿ ಮತ್ತು 5 ಲಕ್ಷದಲ್ಲಿ ಬನಶಂಕರಿ ಅಮ್ಮನವರ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಉದ್ಘಾಟನಾ ಸಮಾರಂಭದಲ್ಲಿ ಭರವಸೇನು ನೀಡಿದರು. ಸಮಾರಂಭದಲ್ಲಿ ಗ್ಯಾರಂಟಿ ಯೋಜನಾ ಅಧ್ಯಕ್ಷರಾದ ವಿಪಿ ಶಶಿಧರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ, ಶಾಲಾ ಅಭಿವೃದ್ಧಿ ಅಧ್ಯಕ್ಷರಾದ ಪ್ರದೀಪ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರಿ, ದಿನೇಶ್, ರಾಜಶೇಖರ್ ಮುಖ್ಯ ಶಿಕ್ಷಕರಾದ ವೆಂಕಟೇಶ್ ಮುಂತಾದ ನಾಯಕರು ಹಾಜರಿದ್ದರು.
    4
    ಹೆಬ್ಬಾಲೆಯಲ್ಲಿ 25 ಲಕ್ಷದಲ್ಲಿ  ಪ್ರೇಕ್ಷಕ ಗ್ಯಾಲರಿ ಬನಶಂಕರಿ ಅಮ್ಮನವರ ರಂಗ ಮಂದಿರ ಉದ್ಘಾಟನಾ ಸಮಾರಂಭ.
ಕೊಡಗು: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರಂಭದಲ್ಲಿ ಇನ್ನುಳಿಕೆ ಆಗಿರುವ ಪ್ರೇಕ್ಷಕ ಗ್ಯಾಲರಿಯನ್ನು 15 ಲಕ್ಷ ರೂ ವೆಚ್ಚದಲ್ಲಿ ಮುಂದಿನ ದಿನಗಳಲ್ಲಿ ವಿಸ್ತರಿಸಿಕೊಡುವುದಾಗಿ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಮಂತರ್ ಗೌಡ ಭರವಸೆ ನೀಡಿದರು. ತಾಲೂಕಿನ ಹೆಬ್ಬಾಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಿಂದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರೇಕ್ಷಕರ ಗ್ಯಾಲರಿ ಮತ್ತು 5 ಲಕ್ಷದಲ್ಲಿ ಬನಶಂಕರಿ ಅಮ್ಮನವರ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಉದ್ಘಾಟನಾ ಸಮಾರಂಭದಲ್ಲಿ ಭರವಸೇನು ನೀಡಿದರು. ಸಮಾರಂಭದಲ್ಲಿ ಗ್ಯಾರಂಟಿ ಯೋಜನಾ ಅಧ್ಯಕ್ಷರಾದ ವಿಪಿ ಶಶಿಧರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ, ಶಾಲಾ ಅಭಿವೃದ್ಧಿ  ಅಧ್ಯಕ್ಷರಾದ ಪ್ರದೀಪ್  ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರಿ, ದಿನೇಶ್, ರಾಜಶೇಖರ್ ಮುಖ್ಯ ಶಿಕ್ಷಕರಾದ ವೆಂಕಟೇಶ್ ಮುಂತಾದ ನಾಯಕರು ಹಾಜರಿದ್ದರು.
    user_ಹೆಚ ಟಿ ಸತ್ಯನಾರಾಯಣ ಪ್ರಸಾದ್
    ಹೆಚ ಟಿ ಸತ್ಯನಾರಾಯಣ ಪ್ರಸಾದ್
    Teacher ನಂಜನಗೂಡು, ಮೈಸೂರು, ಕರ್ನಾಟಕ•
    2 hrs ago
  • ಅತಿಥಿ ಉಪನ್ಯಾಸಕರನ್ನು ಸಂಯೋಜಕರನ್ನಾಗಿ ನೇಮಕಮಾಡಿಕೊಳ್ಳು ಸರ್ಕಾರಕ್ಕೆ ೧೦ ದಿನ ಗಡುವು-ಎನ್.ರಾಜೇಂದ್ರಸಿಂಗ್ ಬಾಬು ಮಂಡ್ಯ: ಅತಿಥಿ ಉಪನ್ಯಾಸಕರನ್ನು ತುರ್ತಾಗಿ ಶೈಕ್ಷಣಿಕ ಸಂಯೋಜಕರನ್ನಾಗಿ ನೇಮಕ ಮಾಡಿಕೊಳ್ಳುವಂತೆ ಯುಜಿಸಿಯೇತರ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಎನ್.ರಾಜೇಂದ್ರಸಿಂಗ್ ಬಾಬು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಸುಮಾರು 3,500ಕ್ಕೂ ಹೆಚ್ಚು ಮಾಜಿ ಯುಜಿಸಿ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಪ್ರಸ್ತುತ ಸಾಲಿನಲ್ಲಿಯೂ ನಿರಂತರವಾಗಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರು ನಿರುದ್ಯೋಗ ಸಮಸ್ಯೆಯಿಂದ ಬಳಲುವಂತಾಗಿದೆ ಎಂದು ಅಳಲು ತೋಡಿಕೊಂಡರು. ​ಹಿAದಿನ ಹೋರಾಟದ ಫಲವಾಗಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ.ಆರ್.ಸೀತಾರಾಂ ನೇತೃತ್ವದ ಸರ್ಕಾರದಲ್ಲಿ ಶೈಕ್ಷಣಿಕ ಸಂಯೋಜಕರ ಹುದ್ದೆಗಳಿಗೆ ಸೇರ್ಪಡೆಗೊಳಿಸಲು ಆದೇಶ ನೀಡಿದ್ದರು. ​ಆದರೆ, ಈಗ ಉನ್ನತ ಶಿಕ್ಷಣ ಇಲಾಖೆಯು ಮರು ಆಯ್ಕೆ ಪ್ರಕ್ರಿಯೆ ಮುಂದುವರಿಸುತ್ತಿರುವುದರಿಂದ ಉಪನ್ಯಾಸಕರಲ್ಲಿ ಆತಂಕ ಮೂಡಿದೆ ಎಂದು ಹೇಳಿದರು. ಕೂಡಲೇ ಕಾಲೇಜು ಶಿಕ್ಷಣ ಇಲಾಖೆಯ ಪದವಿ ಕಾಲೇಜುಗಳಲ್ಲಿ ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳಬೇಕು. ​2025-26ರ ಸೇವೆಯಲ್ಲಿದವರನ್ನು ಕೈಬಿಡದೇ ಎಲ್ಲರನ್ನೂ ಆಯ್ಕೆ ಮಾಡಿಕೊಳ್ಳಬೇಕು. 10 ದಿನದೊಳಗೆ ಕ್ರಮ ವಹಿಸದಿದ್ದರೆ, ರಾಜ್ಯದ ಎಲ್ಲ ಅತಿಥಿ ಉಪನ್ಯಾಸರನ್ನು ಒಗ್ಗೂಡಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಲಾಗುವುದು ಎಂಎದು ಎಚ್ಚರಿಸಿದರು. ಗೋಷ್ಠಿಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಎಂ.ಎಸ್‌ಕೃಷ್ಣ, ಬಿ.ಎಸ್.ಕುಮಾರ್, ಶಿವಕುಮಾರ್ ಇದ್ದರು.
    1
    ಅತಿಥಿ ಉಪನ್ಯಾಸಕರನ್ನು ಸಂಯೋಜಕರನ್ನಾಗಿ ನೇಮಕಮಾಡಿಕೊಳ್ಳು ಸರ್ಕಾರಕ್ಕೆ ೧೦ ದಿನ ಗಡುವು-ಎನ್.ರಾಜೇಂದ್ರಸಿಂಗ್ ಬಾಬು
ಮಂಡ್ಯ: ಅತಿಥಿ ಉಪನ್ಯಾಸಕರನ್ನು ತುರ್ತಾಗಿ ಶೈಕ್ಷಣಿಕ ಸಂಯೋಜಕರನ್ನಾಗಿ ನೇಮಕ ಮಾಡಿಕೊಳ್ಳುವಂತೆ  ಯುಜಿಸಿಯೇತರ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಎನ್.ರಾಜೇಂದ್ರಸಿಂಗ್ ಬಾಬು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಸುಮಾರು 3,500ಕ್ಕೂ ಹೆಚ್ಚು ಮಾಜಿ ಯುಜಿಸಿ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಪ್ರಸ್ತುತ ಸಾಲಿನಲ್ಲಿಯೂ ನಿರಂತರವಾಗಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರು ನಿರುದ್ಯೋಗ ಸಮಸ್ಯೆಯಿಂದ ಬಳಲುವಂತಾಗಿದೆ ಎಂದು ಅಳಲು ತೋಡಿಕೊಂಡರು.
​ಹಿAದಿನ ಹೋರಾಟದ ಫಲವಾಗಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ.ಆರ್.ಸೀತಾರಾಂ ನೇತೃತ್ವದ ಸರ್ಕಾರದಲ್ಲಿ ಶೈಕ್ಷಣಿಕ ಸಂಯೋಜಕರ ಹುದ್ದೆಗಳಿಗೆ ಸೇರ್ಪಡೆಗೊಳಿಸಲು ಆದೇಶ ನೀಡಿದ್ದರು. ​ಆದರೆ, ಈಗ ಉನ್ನತ ಶಿಕ್ಷಣ ಇಲಾಖೆಯು ಮರು ಆಯ್ಕೆ ಪ್ರಕ್ರಿಯೆ ಮುಂದುವರಿಸುತ್ತಿರುವುದರಿಂದ ಉಪನ್ಯಾಸಕರಲ್ಲಿ ಆತಂಕ ಮೂಡಿದೆ ಎಂದು ಹೇಳಿದರು.
ಕೂಡಲೇ ಕಾಲೇಜು ಶಿಕ್ಷಣ ಇಲಾಖೆಯ ಪದವಿ ಕಾಲೇಜುಗಳಲ್ಲಿ ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳಬೇಕು. ​2025-26ರ ಸೇವೆಯಲ್ಲಿದವರನ್ನು ಕೈಬಿಡದೇ ಎಲ್ಲರನ್ನೂ ಆಯ್ಕೆ ಮಾಡಿಕೊಳ್ಳಬೇಕು. 10 ದಿನದೊಳಗೆ ಕ್ರಮ ವಹಿಸದಿದ್ದರೆ, ರಾಜ್ಯದ ಎಲ್ಲ ಅತಿಥಿ ಉಪನ್ಯಾಸರನ್ನು ಒಗ್ಗೂಡಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಲಾಗುವುದು ಎಂಎದು ಎಚ್ಚರಿಸಿದರು.
ಗೋಷ್ಠಿಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಎಂ.ಎಸ್‌ಕೃಷ್ಣ, ಬಿ.ಎಸ್.ಕುಮಾರ್, ಶಿವಕುಮಾರ್ ಇದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    35 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.