ಶಿವಮೊಗ್ಗ-ಕುವೆಂಪು ವಿವಿ ವಿದ್ಯಾರ್ಥಿಗಳ ನಾನಾ ಸಮಸ್ಯೆ ಬಗೆಹರಿಸಲು NSUI ಪ್ರತಿಭಟನೆ ಶಿವಮೊಗ್ಗ: ಕುವೆಂಪು ವಿವಿ ಯ ಪರೀಕ್ಷೆ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಯೊಂದು ಸೆಮಿಸ್ಟರ್‌ನಲ್ಲಿಯೂ ಪರೀಕ್ಷೆ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಮುಂದಿನ ವಿದ್ಯಾಭ್ಯಾಸದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಪರೀಕ್ಷೆಗೆ ಹಾಜರಾಗಿದ್ದರೂ ಫಲಿತಾಂಶದಲ್ಲಿ “Absent” ಎಂದು ತೋರಿಸುವುದು, ಫಲಿತಾಂಶ ಪ್ರಕಟಣೆ ಯಲ್ಲಿ ವಿಳಂಬ, ಫಲಿತಾಂಶದಲ್ಲಿನ ಅಂಕಗಳ ವ್ಯತ್ಯಾಸ, ಡಿಜಿಟಲ್ ಮೌಲ್ಯಮಾಪನದಲ್ಲಿನ ದೋಷಗಳು, UUCMS ಪೋರ್ಟಲ್‌ನ ತಾಂತ್ರಿಕ ಸಮಸ್ಯೆಗಳು, ಮರುಮೌಲ್ಯ ಮಾಪನ ಹಾಗೂ ಮರುಎಣಿಕೆ ಫಲಿತಾಂಶ ಗಳಲ್ಲಿ ವಿಳಂಬ, ಅಂಕಪಟ್ಟಿ ಪಡೆಯುವಲ್ಲಿ ವಿಳಂಬ ಹಾಗೂ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟುಮಾಡುತ್ತಿವೆ. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಳಗಿನ ಬೇಡಿಕೆಗಳನ್ನು ತಕ್ಷಣ ಈಡೇರಿಸ ಬೇಕು ಎಂದು ಶಿವಮೊಗ್ಗದಲ್ಲಿ NSUI ಪ್ರತಿಭಟನೆ ನಡೆಸಿದೆ. ಅದರಂತೆ, 1. ಪರೀಕ್ಷಾ ಫಲಿತಾಂಶಗಳನ್ನು ನಿಗದಿತ ಸಮಯಕ್ಕೆ ಪ್ರಕಟಿಸಬೇಕು. 2. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ “Absent” ಎಂದು ತೋರಿಸುವ ದೋಷವನ್ನು ತಕ್ಷಣ ಸರಿಪಡಿಸಬೇಕು. 3. ಫಲಿತಾಂಶದಲ್ಲಿನ ಅಂಕಗಳ ವ್ಯತ್ಯಾಸ ಹಾಗೂ ಇತರೆ ದೋಷಗಳನ್ನು ಪರಿಶೀಲಿಸಿ ಸರಿಪಡಿಸಬೇಕು. 4. ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆ ಯಲ್ಲಿನ ದೋಷಗಳನ್ನು ನಿವಾರಿಸಬೇಕು. 5. UUCMS ಪೋರ್ಟಲ್‌ನ ಪರೀಕ್ಷಾ ಸಂಬಂಧಿತ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. 6. ಮರುಮೌಲ್ಯಮಾಪನ ಮತ್ತು ಮರು ಎಣಿಕೆ ಫಲಿತಾಂಶಗಳನ್ನು ವಿಳಂಬವಿಲ್ಲದೆ ಪ್ರಕಟಿಸಬೇಕು. 7. ಅಂಕಪಟ್ಟಿ ಹಾಗೂ ಪರೀಕ್ಷಾ ಸಂಬಂಧಿತ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ನೀಡಬೇಕು. 8. ಪರೀಕ್ಷಾ ಶುಲ್ಕದ ಕುರಿತು ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು. 9. ಪರೀಕ್ಷಾ ವೇಳಾಪಟ್ಟಿ ಹಾಗೂ ಇತರೆ ಪರೀಕ್ಷಾ ಮಾಹಿತಿಯನ್ನು ಮುಂಚಿತವಾಗಿ ಪ್ರಕಟಿಸಬೇಕು. 10. ಪರೀಕ್ಷಾ ಫಲಿತಾಂಶ ಪ್ರಕಟಿಸುವ ಮೊದಲು ಫಲಿತಾಂಶಗಳ ಸಂಪೂರ್ಣ ಪರಿಶೀಲನೆ ನಡೆಸಬೇಕು. 11. ಪರೀಕ್ಷಾ ಫಲಿತಾಂಶದ ತಪ್ಪುಗಳಿಂದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ತ್ವರಿತ ಪರಿಹಾರ ವ್ಯವಸ್ಥೆ ಕಲ್ಪಿಸಬೇಕು. 12. ಪರೀಕ್ಷೆ ಮತ್ತು ಫಲಿತಾಂಶಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳ ದೂರುಗಳಿಗೆ ನಿಗದಿತ ಅವಧಿಯಲ್ಲಿ ಪರಿಹಾರ ನೀಡಬೇಕು. ಮೇಲ್ಕಂಡ ಸಮಸ್ಯೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ನೇರವಾಗಿ ಸಂಬಂಧಿಸಿರುವು ದರಿಂದ, ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಮತ್ತು ಫಲಿತಾಂಶ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನಿಖರತೆ ಹಾಗೂ ಸಮಯಪಾಲನೆಯನ್ನು ಖಚಿತ ಪಡಿಸುವಂತೆ ಜಿಲ್ಲಾ NSUI ಶಿವಮೊಗ್ಗ ವತಿಯಿಂದ ಆಗ್ರಹಿಸುತ್ತೇವೆ.ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ತಕ್ಷಣ ಈಡೇರಿಸಿ, ಪ್ರತಿಯೊಂದು ಸೆಮಿಸ್ಟರ್‌ನಲ್ಲೂ ಮರುಕಳಿಸುತ್ತಿರುವ ಪರೀಕ್ಷೆ ಮತ್ತು ಫಲಿತಾಂಶದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಈ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸದೆ ನಿರ್ಲಕ್ಷ್ಯ ವಹಿಸಿದಲ್ಲಿ, ಮುಂದಿನ ದಿನಗಳಲ್ಲಿ ಕುವೆಂಪು ವಿಶ್ವವಿದ್ಯಾಲಯ ಬಂದ್‌ಗೆ ಕರೆ ನೀಡಿ ವಿದ್ಯಾರ್ಥಿಗಳೊಂದಿಗೆ ಹೋರಾಟ ವನ್ನು ತೀವ್ರಗೊಳಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಎಚ್ಚರಿಸಿ ಕುವೆಂಪು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲ ಸಚಿವ ತಿಮ್ಮರಾಯಪ್ಪ ಹಾಗೂ ಪರೀಕ್ಷಾಂಗ ಉಪಕುಲ ಸಚಿವ ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಜಯ ಕುಮಾರ್ , ಜಿಲ್ಲಾ ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರಾಧ್ಯಕ್ಷ ರವಿಕುಮಾರ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಚಂದ್ರು ಜಿ ರಾವ್ ,ಆದಿತ್ಯ, ಸುಭಾನ್ ,ಪರಾಜ್, ವರುಣ್,ಶ್ರೀಕಾಂತ ,ಸಾದುಲ್ಲಾ ,ಯೂಸಫ್ ,ಸೃಜನ್ ,ಪ್ರಜ್ವಲ್, ಆಕಾಶ್, ಇಂದ್ರಸೇನಾ, ಅಭಿ, ಕುಮಾರಸ್ವಾಮಿ ,ದೀಪಕ್, ಜೀವನ್ , ಸುಮಂತ್, ಆದರ್ಶ್, ಸೃಜನ್ ಡಿಂಕು , ರಿಯಾನ್, ಫೈಸ್, ಸುಲ್ತಾನ್, ಅರ್ಮಾನ್, ಜುಬೇರ್, ಇನ್ನೂ ಸಾವಿರಾರು ವಿದ್ಯಾರ್ಥಿ ಗಳು ಪಾಲ್ಗೊಂಡಿದ್ದರು.
ಶಿವಮೊಗ್ಗ-ಕುವೆಂಪು ವಿವಿ ವಿದ್ಯಾರ್ಥಿಗಳ ನಾನಾ ಸಮಸ್ಯೆ ಬಗೆಹರಿಸಲು NSUI ಪ್ರತಿಭಟನೆ ಶಿವಮೊಗ್ಗ: ಕುವೆಂಪು ವಿವಿ ಯ ಪರೀಕ್ಷೆ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಯೊಂದು ಸೆಮಿಸ್ಟರ್‌ನಲ್ಲಿಯೂ ಪರೀಕ್ಷೆ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಮುಂದಿನ ವಿದ್ಯಾಭ್ಯಾಸದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಪರೀಕ್ಷೆಗೆ ಹಾಜರಾಗಿದ್ದರೂ ಫಲಿತಾಂಶದಲ್ಲಿ “Absent” ಎಂದು ತೋರಿಸುವುದು, ಫಲಿತಾಂಶ ಪ್ರಕಟಣೆ ಯಲ್ಲಿ ವಿಳಂಬ, ಫಲಿತಾಂಶದಲ್ಲಿನ ಅಂಕಗಳ ವ್ಯತ್ಯಾಸ, ಡಿಜಿಟಲ್ ಮೌಲ್ಯಮಾಪನದಲ್ಲಿನ ದೋಷಗಳು, UUCMS ಪೋರ್ಟಲ್‌ನ ತಾಂತ್ರಿಕ ಸಮಸ್ಯೆಗಳು, ಮರುಮೌಲ್ಯ ಮಾಪನ ಹಾಗೂ ಮರುಎಣಿಕೆ ಫಲಿತಾಂಶ ಗಳಲ್ಲಿ ವಿಳಂಬ, ಅಂಕಪಟ್ಟಿ ಪಡೆಯುವಲ್ಲಿ ವಿಳಂಬ ಹಾಗೂ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟುಮಾಡುತ್ತಿವೆ. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಳಗಿನ ಬೇಡಿಕೆಗಳನ್ನು ತಕ್ಷಣ ಈಡೇರಿಸ ಬೇಕು ಎಂದು ಶಿವಮೊಗ್ಗದಲ್ಲಿ NSUI ಪ್ರತಿಭಟನೆ ನಡೆಸಿದೆ. ಅದರಂತೆ, 1. ಪರೀಕ್ಷಾ ಫಲಿತಾಂಶಗಳನ್ನು ನಿಗದಿತ ಸಮಯಕ್ಕೆ ಪ್ರಕಟಿಸಬೇಕು. 2. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ “Absent” ಎಂದು ತೋರಿಸುವ ದೋಷವನ್ನು ತಕ್ಷಣ ಸರಿಪಡಿಸಬೇಕು. 3. ಫಲಿತಾಂಶದಲ್ಲಿನ ಅಂಕಗಳ ವ್ಯತ್ಯಾಸ ಹಾಗೂ ಇತರೆ ದೋಷಗಳನ್ನು ಪರಿಶೀಲಿಸಿ ಸರಿಪಡಿಸಬೇಕು. 4. ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆ ಯಲ್ಲಿನ ದೋಷಗಳನ್ನು ನಿವಾರಿಸಬೇಕು. 5. UUCMS ಪೋರ್ಟಲ್‌ನ ಪರೀಕ್ಷಾ ಸಂಬಂಧಿತ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. 6. ಮರುಮೌಲ್ಯಮಾಪನ ಮತ್ತು ಮರು ಎಣಿಕೆ ಫಲಿತಾಂಶಗಳನ್ನು ವಿಳಂಬವಿಲ್ಲದೆ ಪ್ರಕಟಿಸಬೇಕು. 7. ಅಂಕಪಟ್ಟಿ ಹಾಗೂ ಪರೀಕ್ಷಾ ಸಂಬಂಧಿತ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ನೀಡಬೇಕು. 8. ಪರೀಕ್ಷಾ ಶುಲ್ಕದ ಕುರಿತು ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು. 9. ಪರೀಕ್ಷಾ ವೇಳಾಪಟ್ಟಿ ಹಾಗೂ ಇತರೆ
ಪರೀಕ್ಷಾ ಮಾಹಿತಿಯನ್ನು ಮುಂಚಿತವಾಗಿ ಪ್ರಕಟಿಸಬೇಕು. 10. ಪರೀಕ್ಷಾ ಫಲಿತಾಂಶ ಪ್ರಕಟಿಸುವ ಮೊದಲು ಫಲಿತಾಂಶಗಳ ಸಂಪೂರ್ಣ ಪರಿಶೀಲನೆ ನಡೆಸಬೇಕು. 11. ಪರೀಕ್ಷಾ ಫಲಿತಾಂಶದ ತಪ್ಪುಗಳಿಂದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ತ್ವರಿತ ಪರಿಹಾರ ವ್ಯವಸ್ಥೆ ಕಲ್ಪಿಸಬೇಕು. 12. ಪರೀಕ್ಷೆ ಮತ್ತು ಫಲಿತಾಂಶಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳ ದೂರುಗಳಿಗೆ ನಿಗದಿತ ಅವಧಿಯಲ್ಲಿ ಪರಿಹಾರ ನೀಡಬೇಕು. ಮೇಲ್ಕಂಡ ಸಮಸ್ಯೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ನೇರವಾಗಿ ಸಂಬಂಧಿಸಿರುವು ದರಿಂದ, ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಮತ್ತು ಫಲಿತಾಂಶ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನಿಖರತೆ ಹಾಗೂ ಸಮಯಪಾಲನೆಯನ್ನು ಖಚಿತ ಪಡಿಸುವಂತೆ ಜಿಲ್ಲಾ NSUI ಶಿವಮೊಗ್ಗ ವತಿಯಿಂದ ಆಗ್ರಹಿಸುತ್ತೇವೆ.ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ತಕ್ಷಣ ಈಡೇರಿಸಿ, ಪ್ರತಿಯೊಂದು ಸೆಮಿಸ್ಟರ್‌ನಲ್ಲೂ ಮರುಕಳಿಸುತ್ತಿರುವ ಪರೀಕ್ಷೆ ಮತ್ತು ಫಲಿತಾಂಶದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಈ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸದೆ ನಿರ್ಲಕ್ಷ್ಯ ವಹಿಸಿದಲ್ಲಿ, ಮುಂದಿನ ದಿನಗಳಲ್ಲಿ ಕುವೆಂಪು ವಿಶ್ವವಿದ್ಯಾಲಯ ಬಂದ್‌ಗೆ ಕರೆ ನೀಡಿ ವಿದ್ಯಾರ್ಥಿಗಳೊಂದಿಗೆ ಹೋರಾಟ ವನ್ನು ತೀವ್ರಗೊಳಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಎಚ್ಚರಿಸಿ ಕುವೆಂಪು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲ ಸಚಿವ ತಿಮ್ಮರಾಯಪ್ಪ ಹಾಗೂ ಪರೀಕ್ಷಾಂಗ ಉಪಕುಲ ಸಚಿವ ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಜಯ ಕುಮಾರ್ , ಜಿಲ್ಲಾ ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರಾಧ್ಯಕ್ಷ ರವಿಕುಮಾರ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಚಂದ್ರು ಜಿ ರಾವ್ ,ಆದಿತ್ಯ, ಸುಭಾನ್ ,ಪರಾಜ್, ವರುಣ್,ಶ್ರೀಕಾಂತ ,ಸಾದುಲ್ಲಾ ,ಯೂಸಫ್ ,ಸೃಜನ್ ,ಪ್ರಜ್ವಲ್, ಆಕಾಶ್, ಇಂದ್ರಸೇನಾ, ಅಭಿ, ಕುಮಾರಸ್ವಾಮಿ ,ದೀಪಕ್, ಜೀವನ್ , ಸುಮಂತ್, ಆದರ್ಶ್, ಸೃಜನ್ ಡಿಂಕು , ರಿಯಾನ್, ಫೈಸ್, ಸುಲ್ತಾನ್, ಅರ್ಮಾನ್, ಜುಬೇರ್, ಇನ್ನೂ ಸಾವಿರಾರು ವಿದ್ಯಾರ್ಥಿ ಗಳು ಪಾಲ್ಗೊಂಡಿದ್ದರು.
- ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ1
- ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.1
- ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.1
- ಶಿವಮೊಗ್ಗ,: ತನು ಜ್ಯೂಸ್ ಸೆಂಟರ್ ಬೇಟಿ ನೀಡಿದ ಅಧಿಕಾರಿಗಳ ತಂಡ ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ಕೊಳೆತ ಹಣ್ಣುಗಳನ್ನು ಶೇಖರಿಸಿಟ್ಟಿದ್ದ ಬ್ರಿಡ್ಜ್ ತಪಾಸಣೆ ಮಾಡಿದಾಗ ಸೇಬು, ಮೂಸಂಬಿ, ಕಲ್ಲಂಗಡಿ, ಅವಕೊಡ,ದ್ರಾಕ್ಷಿ, ಬಾಳೆಹಣ್ಣು, ಮಾವಿನಹಣ್ಣು , ಬೆಣ್ಣೆ ಹಣ್ಣು,ಹೀಗೆ ಹಲವಾರು ಹಣ್ಣುಗಳಿಂದ ಜ್ಯೂಸ್ ತಯಾರಿಸಿ ಸಾರ್ವಜನಿಕರಿಗೆ ಕೊಡುತ್ತಿರುವುದು ಕಂಡುಬಂದಿದ್ದು ಹಾಗೂ ಕೆಲವರು ಆಸ್ಪತ್ರೆಯ ರೋಗಿಗಳಿಗೂ ಸಹ ಇದೇ ಕೊಳೆತ ಹಣ್ಣಿನಿಂದ ಜ್ಯೂಸ್ ತೆಗೆದುಕೊಂಡು ಹೋಗಿರುವುದು ಕೂಡ ಗಮನಕ್ಕೆ ಬಂದಿರುವುದು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ ಕೂಡಲೇ ಇದನ್ನು ಸೀಜ್ ಮಾಡಲಾಗಿದೆ. ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.1
- ಹಾವೇರಿ: ವಂದೇ ಮಾತರಂನ ಕೇವಲ 2 ಚರಣಗಳನ್ನು ಮಾತ್ರ ಹಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಹಾವೇರಿ ನಗರ ಮಂಡಲ ತೀವ್ರವಾಗಿ ಖಂಡಿಸಿದೆ. 1937ರಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ವಂದೇ ಮಾತರಂಗೆ 2 ಚರಣಗಳಿಗೆ ಕತ್ತರಿ ಹಾಕಿತ್ತು. ಇದು ಸಂವಿಧಾನದ ತೀರ್ಮಾನವಲ್ಲ, ಕಾಂಗ್ರೆಸ್‌ನ ರಾಜಕೀಯ ನಿರ್ಧಾರ. 24 ಜನವರಿ 1950ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಜನಗಣಮನ ಮತ್ತು ವಂದೇ ಮಾತರಂ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಅಧಿಕೃತವಾಗಿ ಹೇಳಿದ್ದರು. ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಇಂದು ಮತ್ತೆ ವಂದೇ ಮಾತರಂಗೆ ಕತ್ತರಿ ಹಾಕಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇಂದು ವಂದೇ ಮಾತರಂಗೆ ಕತ್ತರಿ ಹಾಕುವವರು ನಾಳೆ ಕುವೆಂಪು ರಚಿತ ನಾಡಗೀತೆಗೆ ಕತ್ತರಿ ಹಾಕುತ್ತಾರಾ? ಎಂದು ಪ್ರಶ್ನಿಸಿದೆ. ನೇಣುಗಂಬ ಏರಿದರೂ ವಂದೇ ಮಾತರಂ ಹಾಡುತ್ತೇವೆ ಎಂದಿದ್ದ ಕಾಂಗ್ರೆಸ್, ಈಗ ನೇಣುಗಂಬಕ್ಕೆ ಏರಿಸಿದರೂ ಹಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿರುವುದು ಖಂಡನೀಯ ಎಂದು ಹಾವೇರಿ ವಿಧಾನಸಭಾ ಕೊಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರದ ಸಿದ್ದರಾಜು ಕಲಕೋಟಿ, ನಗರ ಮಂಡಲ ಅಧ್ಯಕ್ಷ *ಕಿರಣ್ ಚನಬಸಪ್ಪ ಕೊಳ್ಳಿ ಈರಣ್ಣ ಹೇರೂರು, ಅಲ್ಲಾಬಾಕ್ಸ್ ತಿಮ್ಮಾಪುರ, ನಿರಂಜನ್ ಹೇರೂರು ನಗರ ಮಂಡಲದ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಲಕ್ಷ್ಮಣ ಬೆಟಗೇರಿ, ಮಾರುತಿ ಸವಣುರ ಗಿರೀಶ್ ಶೆಟ್ಟಿ, ಹೊನ್ನಪ್ಪ ಮಾಳಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸೇರಿ ಭಾಗವಹಿಸಿದ್ದರು *1
- ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.1
- ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್! ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!1
- ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ4