ಕೂಲಿ ಕಾರ್ಮಿಕರ ಮಗನ ಸಾಧನೆ; ಸರ್ಕಾರಿ ಶಾಲೆಯಿಂದ ರಿಮ್ಸ್‌ನಲ್ಲಿ ಎಂಬಿಬಿಎಸ್ ಸೀಟು ಕುಷ್ಟಗಿ: ಬಡತನದ ನಡುವೆಯೂ ಛಲ, ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸ ಮುಂದುವರಿಸಿದ ಕೊರಡಕೇರಾ ಗ್ರಾಮದ ನಿತ್ಯಾನಂದಯ್ಯ ಶರಣಯ್ಯ ಗುರುವಿನ ಅವರು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ, ರಾಯಚೂರಿನ ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪ್ರವೇಶ ಪಡೆದಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಗ್ರಾಮೀಣ ಭಾಗದ ವಿದ್ಯಾರ್ಥಿಯೊಬ್ಬರು ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆಯಾಗಿರುವುದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ. ಕೊರಡಕೇರಾ ಗ್ರಾಮದ ಶರಣಯ್ಯ ಗುರುವಿನ ಹಾಗೂ ಲೀಲಾವತಿ ದಂಪತಿಯ ಪುತ್ರರಾದ ನಿತ್ಯಾನಂದಯ್ಯ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪ್ರೌಢ ಶಿಕ್ಷಣವನ್ನು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪೂರ್ಣಗೊಳಿಸಿದ್ದಾರೆ. ಬಳಿಕ ಧಾರವಾಡದಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಶಿಕ್ಷಣ ಪಡೆದ ಅವರು, ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದಲ್ಲಿ ನೀಟ್ ಪರೀಕ್ಷೆಗೆ ಕೋಚಿಂಗ್ ಪಡೆದು, ಸತತ ಪರಿಶ್ರಮದ ಫಲವಾಗಿ ವೈದ್ಯಕೀಯ ಸೀಟು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಿತ್ಯಾನಂದಯ್ಯ ಅವರ ಸಾಧನೆಯ ಹಿಂದೆ ತಂದೆ-ತಾಯಿಯ ತ್ಯಾಗವೂ ಮಹತ್ವದ್ದಾಗಿದೆ. ಆರ್ಥಿಕವಾಗಿ ಬಡ ಕುಟುಂಬದವರಾದ ಶರಣಯ್ಯ ಹಾಗೂ ಲೀಲಾವತಿ ಅವರು ಇಂದಿಗೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಕೂಲಿಯಿಂದ ಬಂದ ಆದಾಯದಲ್ಲಿಯೇ ಮಗನ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಾ ಬಂದಿದ್ದಾರೆ. ಬಡತನದ ಸಂಕಷ್ಟಗಳ ನಡುವೆಯೂ ಮಗನ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆಯಾಗದಂತೆ ನೋಡಿಕೊಂಡ ಪೋಷಕರಿಗೆ ಇದೀಗ ಮಗನ ಸಾಧನೆ ಹೆಮ್ಮೆಯ ಕ್ಷಣವಾಗಿದೆ. ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ, ಪ್ರತಿಕೂಲ ಆರ್ಥಿಕ ಪರಿಸ್ಥಿತಿಯ ನಡುವೆಯೂ ನಿತ್ಯಾನಂದಯ್ಯ ಅವರು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದಿರುವುದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಅವರ ಪ್ರತಿಭೆ, ಪರಿಶ್ರಮ ಹಾಗೂ ಸಾಧನೆಯನ್ನು ಕಂಡು ಗ್ರಾಮದ ಗುರು-ಹಿರಿಯರು, ಯುವಕರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲುಮತ ಸಮಾಜದ ಗುರುಗಳಾದ ಶಿವಾನಂದಯ್ಯ ಗುರುವಿನ, ಅಯ್ಯನಗೌಡ ಪಾಟೀಲ, ಆರೋಗ್ಯ ಇಲಾಖೆಯ ಮಾರುತಿ ಕೊಳ್ಳಿ, ಹನಮಪ್ಪ ಕರಡಿ, ಬಸನಗೌಡ ಪಾಟೀಲ, ಅಮೋಘಸಿದ್ಧಯ್ಯ, ಸಿದ್ದಯ್ಯ ಲಿಂಗಯ್ಯ ಗುರುವಿನ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೊಡ್ಡನಗೌಡ ಮಾಲಿ ಪಾಟೀಲ ಸೇರಿದಂತೆ ಗ್ರಾಮದ ಯುವಕರು ಹಾಗೂ ಕುಟುಂಬಸ್ಥರು ನಿತ್ಯಾನಂದಯ್ಯ ಅವರನ್ನು ಗೌರವಿಸಿ, ಸನ್ಮಾನಿಸಿ ಅಭಿನಂದಿಸಿದರು. ‘ಬಡತನ ಸಾಧನೆಗೆ ಅಡ್ಡಿಯಲ್ಲ’ ಎಂಬುದನ್ನು ತಮ್ಮ ಪರಿಶ್ರಮದ ಮೂಲಕ ಸಾಬೀತುಪಡಿಸಿರುವ ನಿತ್ಯಾನಂದಯ್ಯ ಅವರು, ವೈದ್ಯರಾಗಿ ಗ್ರಾಮೀಣ ಭಾಗದ ಜನರಿಗೆ ಸೇವೆ ಸಲ್ಲಿಸುವಂತಾಗಲಿ. ಅವರ ಮುಂದಿನ ವೈದ್ಯಕೀಯ ಶಿಕ್ಷಣದ ಪಯಣ ಯಶಸ್ವಿಯಾಗಲಿ ಎಂದು ಗ್ರಾಮಸ್ಥರು ಶುಭ ಹಾರೈಸಿದರು.
ಕೂಲಿ ಕಾರ್ಮಿಕರ ಮಗನ ಸಾಧನೆ; ಸರ್ಕಾರಿ ಶಾಲೆಯಿಂದ ರಿಮ್ಸ್‌ನಲ್ಲಿ ಎಂಬಿಬಿಎಸ್ ಸೀಟು ಕುಷ್ಟಗಿ: ಬಡತನದ ನಡುವೆಯೂ ಛಲ, ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸ ಮುಂದುವರಿಸಿದ ಕೊರಡಕೇರಾ ಗ್ರಾಮದ ನಿತ್ಯಾನಂದಯ್ಯ ಶರಣಯ್ಯ ಗುರುವಿನ ಅವರು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ, ರಾಯಚೂರಿನ ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪ್ರವೇಶ ಪಡೆದಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಗ್ರಾಮೀಣ ಭಾಗದ ವಿದ್ಯಾರ್ಥಿಯೊಬ್ಬರು ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆಯಾಗಿರುವುದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ. ಕೊರಡಕೇರಾ ಗ್ರಾಮದ ಶರಣಯ್ಯ ಗುರುವಿನ ಹಾಗೂ ಲೀಲಾವತಿ ದಂಪತಿಯ ಪುತ್ರರಾದ ನಿತ್ಯಾನಂದಯ್ಯ ಅವರು
ತಮ್ಮ ಪ್ರಾಥಮಿಕ ಶಿಕ್ಷಣವನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪ್ರೌಢ ಶಿಕ್ಷಣವನ್ನು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪೂರ್ಣಗೊಳಿಸಿದ್ದಾರೆ. ಬಳಿಕ ಧಾರವಾಡದಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಶಿಕ್ಷಣ ಪಡೆದ ಅವರು, ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದಲ್ಲಿ ನೀಟ್ ಪರೀಕ್ಷೆಗೆ ಕೋಚಿಂಗ್ ಪಡೆದು, ಸತತ ಪರಿಶ್ರಮದ ಫಲವಾಗಿ ವೈದ್ಯಕೀಯ ಸೀಟು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಿತ್ಯಾನಂದಯ್ಯ ಅವರ ಸಾಧನೆಯ ಹಿಂದೆ ತಂದೆ-ತಾಯಿಯ ತ್ಯಾಗವೂ ಮಹತ್ವದ್ದಾಗಿದೆ. ಆರ್ಥಿಕವಾಗಿ ಬಡ ಕುಟುಂಬದವರಾದ ಶರಣಯ್ಯ ಹಾಗೂ ಲೀಲಾವತಿ ಅವರು ಇಂದಿಗೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಕೂಲಿಯಿಂದ ಬಂದ
ಆದಾಯದಲ್ಲಿಯೇ ಮಗನ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಾ ಬಂದಿದ್ದಾರೆ. ಬಡತನದ ಸಂಕಷ್ಟಗಳ ನಡುವೆಯೂ ಮಗನ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆಯಾಗದಂತೆ ನೋಡಿಕೊಂಡ ಪೋಷಕರಿಗೆ ಇದೀಗ ಮಗನ ಸಾಧನೆ ಹೆಮ್ಮೆಯ ಕ್ಷಣವಾಗಿದೆ. ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ, ಪ್ರತಿಕೂಲ ಆರ್ಥಿಕ ಪರಿಸ್ಥಿತಿಯ ನಡುವೆಯೂ ನಿತ್ಯಾನಂದಯ್ಯ ಅವರು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದಿರುವುದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಅವರ ಪ್ರತಿಭೆ, ಪರಿಶ್ರಮ ಹಾಗೂ ಸಾಧನೆಯನ್ನು ಕಂಡು ಗ್ರಾಮದ ಗುರು-ಹಿರಿಯರು, ಯುವಕರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲುಮತ ಸಮಾಜದ ಗುರುಗಳಾದ ಶಿವಾನಂದಯ್ಯ ಗುರುವಿನ,
ಅಯ್ಯನಗೌಡ ಪಾಟೀಲ, ಆರೋಗ್ಯ ಇಲಾಖೆಯ ಮಾರುತಿ ಕೊಳ್ಳಿ, ಹನಮಪ್ಪ ಕರಡಿ, ಬಸನಗೌಡ ಪಾಟೀಲ, ಅಮೋಘಸಿದ್ಧಯ್ಯ, ಸಿದ್ದಯ್ಯ ಲಿಂಗಯ್ಯ ಗುರುವಿನ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೊಡ್ಡನಗೌಡ ಮಾಲಿ ಪಾಟೀಲ ಸೇರಿದಂತೆ ಗ್ರಾಮದ ಯುವಕರು ಹಾಗೂ ಕುಟುಂಬಸ್ಥರು ನಿತ್ಯಾನಂದಯ್ಯ ಅವರನ್ನು ಗೌರವಿಸಿ, ಸನ್ಮಾನಿಸಿ ಅಭಿನಂದಿಸಿದರು. ‘ಬಡತನ ಸಾಧನೆಗೆ ಅಡ್ಡಿಯಲ್ಲ’ ಎಂಬುದನ್ನು ತಮ್ಮ ಪರಿಶ್ರಮದ ಮೂಲಕ ಸಾಬೀತುಪಡಿಸಿರುವ ನಿತ್ಯಾನಂದಯ್ಯ ಅವರು, ವೈದ್ಯರಾಗಿ ಗ್ರಾಮೀಣ ಭಾಗದ ಜನರಿಗೆ ಸೇವೆ ಸಲ್ಲಿಸುವಂತಾಗಲಿ. ಅವರ ಮುಂದಿನ ವೈದ್ಯಕೀಯ ಶಿಕ್ಷಣದ ಪಯಣ ಯಶಸ್ವಿಯಾಗಲಿ ಎಂದು ಗ್ರಾಮಸ್ಥರು ಶುಭ ಹಾರೈಸಿದರು.
- ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು. ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯ ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ. ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್, ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.2
- ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು. ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್‌ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.2
- ಇಳಕಲ್ ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2111ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ ಇಳಕಲ್ ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2111ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2111ನೇ ಮಧ್ಯವರ್ಜನ ಶಿಬಿರ ನಗರದ ಅನುಭವ ಮಂಟಪದಲ್ಲಿ ನಡೆಯಿತು. ಈ ಮಧ್ಯವರ್ಜನ ಶಿಬಿರವನ್ನು ನಗರಸಭೆಯ ಅಧ್ಯಕ್ಷರಾದ ಸುಧಾರಣಿ ಸಂಗಮ್, ಸದಸ್ಯರಾದ ರೇಷ್ಮಾ ಮಾರನಬಸರಿ, ಸವಿತಾ ಚಲವಾದಿ, ಯಲ್ಲಪ್ಪ ರಾಜಾಪೂರ,ಹನಮಂತ ತುಂಬದ, ಮಾಹಾಂತೇಶ ಹನಮನಾಳ ಹಾಗೂ ಧರ್ಮಸ್ಥಳ ಸಂಘದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.3
- ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ.... ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ. -----------------1
- ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ1
- ಕರ್ನಾಟಕದಲ್ಲಿ ಗಣಪತಿಗೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲಾ ಎಂದ ಗೃಹ ಮಂತ್ರಿ ಪಿಯಾಂಕ :ಖರ್ಗೆ ವಿರುದ್ಧ ಬಿ ಜೆ ಪಿ ಮುಖಂಡರು ಗಣಪತಿಗೆ ಯಾಕೆ ಡಿಜಿ ಇಲ್ಲಾ ಗೃಹ ಮಂತ್ರಿಯ ರೆ ಮುಸಾಲ್ಮಾನರಿಗೆ ನಾಲಕ್ಕು ಐದು ಸಲಾ ಮೈಕ್ ಹಚ್ಚಿ ನಮಾಜ್ ಮಾಡುತ್ತಾರೆ ನಮಗ ಏಕೆ ಇಲ್ಲ ಹೇಳಿ ಗೃಹ ಮಂತ್ರಿ ಯರೆ ನಮಗೂ ಡಿಜಿ ಪರ್ಮಿಷನ್ ಕೊಡಬೇಕು ಇಲ್ಲಾಂದ್ರೆ ನಾವು ಬಿಡುವುದಿಲ್ಲ ಬಿಜೆಪಿ ಮುಖಂಡ ರಾಜ ಹೇಳಿಕೆ1
- ಇಳಕಲ್‌ದ ಮಹಾಂತೇಶ ಅಂಗಡಿ ನಿವಾಸದಲ್ಲಿ ಪೂಜ್ಯ ಶ್ರೀ ರುದ್ರಾರಾಧ್ಯ ಶ್ರೀಗಳಿಂದ ವಿಶೇಷ ಪೂಜೆ ಪವಿತ್ರ ಶ್ರಾವಣ ಮಾಸದ ನಿಮಿತ್ತ ಇಳಕಲ್ಲ ನಗರದ ಭಕ್ತರಾದ ಮಹಾಂತೇಶ ಅಂಗಡಿ ಅವರ ನಿವಾಸದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಶ್ರೀಗುರುಗಿರಿಸಿದ್ದೇಶ್ವರ ನಿಜೈಕ್ಯ ಕ್ಷೇತ್ರ ಶ್ರೀಮಠದ ಪರಮಪೂಜ್ಯ ವೇದಮೂರ್ತಿ ರುದ್ರಾರಾಧ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ಧಾ-ಭಕ್ತಿಯಿಂದ ಮಂಗಳವಾರ ನೆರವೇರಿತು. ಶ್ರೀಗಳು ಇಷ್ಟಲಿಂಗ ಪೂಜೆ ಹಾಗೂ ಪೂಜಾ ವಿಧಿವಿಧಾನ ಹಾಗೂ ೧೦೮ ಜಂಗಮರಾಧನೆ ಹಾಗೂ ಪ್ರಸಾದ ಸೇವೆ ನೆರವೇರಿಸಿ ಭಕ್ತರಿಗೆ ಆಶೀರ್ವಚನ ನೀಡಿ ಹರಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಾಂತೇಶ ಅಂಗಡಿ, ಅವರ ಕುಟುಂಬಸ್ಥರು, ಬಂಧು-ಮಿತ್ರರು ಹಾಗೂ ನಗರದ ಪ್ರಮುಖ ಗಣ್ಯರು ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದು, ತೀರ್ಥ-ಪ್ರಸಾದ ಸ್ವೀಕರಿಸಿದರು.1
- ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ...... ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ. ತುರ್ವಿಹಾಳ: ಪಟ್ಟಣದ ಸರ್ವೆ ನಂ.14ರ ಶರಣಪ್ಪ ಮೆಗಳಡಕ್ಕಿ ಅವರ ಹೊಲದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೂರು ಎಮ್ಮೆ ಹಾಗೂ ಒಂದು ಆಕಳು ಮೃತಪಟ್ಟಿದ್ದು, ಎರಡು ಎಮ್ಮೆ ಮತ್ತು ನಾಲ್ಕು ಮೇಕೆರಗಳು ಗಾಯಗೊಂಡಿವೆ. ಘಟನೆಯಿಂದ ಸುಮಾರು 15 ಲಕ್ಷ ನಷ್ಟ ಸಂಭವಿಸಿದೆ ಎಂದು ಸಂತ್ರಸ್ತ ಶರಣಪ್ಪ ಮೆಗಳಡಕ್ಕಿ ತಿಳಿಸಿದ್ದಾರೆ. ವಿದ್ಯುತ್ ಅವಘಡದ ಪರಿಣಾಮ ಜಾನುವಾರುಗಳ ಸಾವಿನ ಜತೆಗೆ ಒಂದು ತೊಲೆ ಬಂಗಾರ ಹಾಗೂ 1.60 ಲಕ್ಷ ನಗದು ಹಣವೂ ನಷ್ಟವಾಗಿದೆ. ಜಾನುವಾರುಗಳ ಸಾವಿನಿಂದ ಹಾಗೂ ಇತರೆ ವಸ್ತುಗಳ ಹಾನಿಯಿಂದ ಕುಟುಂಬಕ್ಕೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ. ಆದ್ದರಿಂದ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಸೂಕ್ತವಾಗಿ ಪರಿಶೀಲಿಸಿ, ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಶರಣಪ್ಪ ಮೆಗಳಡಕ್ಕಿ ಮನವಿ ಮಾಡಿದ್ದಾರೆ. ಸ್ಥಳ ಪರಿಶೀಲನೆ: ಘಟನೆ ಕುರಿತು ಮಾಹಿತಿ ಪಡೆದ ತುರ್ವಿಹಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಶರಣಪ್ಪ ಹೋಸಗೌಡರ್ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಜಾನುವಾರುಗಳು ಹಾಗೂ ಸ್ಥಳವನ್ನು ಪರಿಶೀಲಿಸಿದರು. ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ ಅವರು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ (ಆರ್‌ಐ) ಉಮಾಪತಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಕುರಿತು ಪರಿಶೀಲನೆ ನಡೆಸಿ, ಹಾನಿಯ ವಿವರಗಳನ್ನು ದಾಖಲಿಸಿಕೊಂಡರು.2