ದಾವಣಗೆರೆ : ಅಹಿಂದ ನಾಯಕ ವಿನಯ್ ಕುಮಾರ್ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಗುಡುಗಿದ್ದು ಯಾಕೆ? ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ವಿಧಾನಪರಿಷತ್ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು 'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. 'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.

- ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ ಹಾಗೂ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಡಾ ಬಿ ಆರ್ ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಶಾಸಕರದಾ ಟಿ. ರಘುಮೂರ್ತಿಯವರು ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮುಂದಿನ ದಿನಗಳಲ್ಲಿ ನಿಮ್ಮ ಗುರಿ ಸಾಧನೆಯನ್ನು ಮಾಡಿ ತಾಲೂಕಿಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತನ್ನಿ ಎಂದರು.1
- ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.1
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು2
- ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.1
- Post by Onlinetv24x71
- Post by Mayur TV Hangal YouTube c1
- ಗ್ಯಾಸ್ ಕಳಸಂತೆಯಲ್ಲಿ ಮಾರಾಟ ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನುಇ ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಅಗ್ರಗಮಹಿಸಿದ್ದಾರೆ1