logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ವರದಿ: ಹೊಮ್ಮನಂಜುಂಡನಾಯಕ ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ದೇಶದ ಅಭಿವೃದ್ಧಿಗೆ ನರೇಂದ್ರಮೋದಿ ಕೊಡುಗೆ ಅಪಾರ :ಸಿ.ಎಸ್.ನಿರಂಜನ್‌ಕುಮಾರ್ ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ನಗರಮಂಡಲ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಪೂಜೆ ಸಲ್ಲಿಸಿ, ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು. ನಂತರ ದೇವಸ್ಥಾನ ಮುಂಭಾಗದಲ್ಲಿ ನರೇಂದ್ರಮೋದಿ ಪರ ಜೈಕಾರ ಕೂಗಿ ಆಶೀರ್ವಾದದ ದೀಪ ಬೆಳಗಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿ, ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರಮೋ ದಿಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ದೀಪಹಚ್ಚಿ ನರೇಂದ್ರಮೋದಿ ಅವರಿಗೆ ದಿ ರ್ಘಾಯುಷ್ಯ, ಉತ್ತಮ ಆರೋಗ್ಯ ಕರುಣಿಸಿ, ಅವರಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟು, ಅವರ ನವಭಾರತ ನಿರ್ಮಾಣ ಕನಸು ನನಸು ಮಾಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು ಎಂದರು. ನರೇಂದ್ರಮೋದಿ ಅವರ ನೇತೃತ್ವ ಸರ್ಕಾರದ ಪ್ರಮುಖ ಸಾಧನೆಗಳು ಮತ್ತು ಜನಪರ ಯೋಜನೆಗಳು ದೇಶದ ಆರ್ಥಿಕ, ಸಾಮಾಜಿಕ, ಮೂಲಸೌಕರ್ಯಗಳಲ್ಲಿ ಬದಲಾವಣೆಗಳನ್ನು ತಂದಿದ್ದು, ವಿಶ್ವಮಟ್ಟದಲ್ಲಿ ಗಮನ ಸೆಳೆದಿದ್ದು, ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು. ಪ್ರಧಾನಿ ಅವರು ನರೇಂದ್ರಮೋದಿ ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸುತ್ತಿದ್ದು, ಅವರ ಕಾರ್ಯಸಾಧನೆಯನ್ನು ಇಡೀ ವಿಶ್ವವೇ ಮೆಚ್ಚುವಂತದ್ದು, ದೇಶದ ಅಭಿವೃದ್ಧಿಗೆ ಎಲ್ಲ ಆಯಾಮಗಳಲ್ಲೂ ದೊಡ್ಡ ಕೊಡುಗೆ ನೀಡಿರುವುದು ಜಗತ್ ಜಾಹೀರಾತು ಆಗಿದೆ. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17ರವರಗೆ ಒಂದು ತಿಂಗಳಕಾಲ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಎಸ್‌ಟಿ ಮೋರ್ಚಾದ ರಾಜ್ಯ ಉಪಾಧಕ್ಷ ಜಯಸುಂದರ್, ಮುಖಂಡ ಡಾ. ಎ.ಆರ್.ಬಾಬು, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರಾದ ನಾರಾಯಣಪ್ರಸಾದ್, ಆರ್.ಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಪಿ.ವೃಷಬೇಂದ್ರಪ್ಪ, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಸುಂದರ್‌ರಾಜ್, ನಗರಮಂಡಲ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಭಾಸ್ಕರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋ ತ್ತಮ, ಎಸ್‌ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಾ, ಮುಖಂಡರಾದ ನಟರಾಜು, ಮೂಡ್ಲುಪುರ ನಂದೀಶ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆನಂದ್‌ಭಗೀರಥ, ನಗರ ಮಂಡಲ ಕಾರ್ಯದರ್ಶಿ ಬಂಗಾರನಾಯಕ, ನಗರಸಭಾ ಮಾಜಿ ಸದಸ್ಯ ಶಿವಣ್ಣ, ಮುಖಂಡರಾದ ಎಂ.ಎಸ್.ಚಂದ್ರಶೇಖ‌ರ್, ಸುಂದರಪ್ಪ, ಮಹೇಶ್‌ಪಟೇಲ್‌, ಕೃಷ್ಣ ಇತರರು ಹಾಜರಿದ್ದರು

1 hr ago
user_Nanjunda Nayak
Nanjunda Nayak
Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
1 hr ago

ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ವರದಿ: ಹೊಮ್ಮನಂಜುಂಡನಾಯಕ ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ದೇಶದ ಅಭಿವೃದ್ಧಿಗೆ ನರೇಂದ್ರಮೋದಿ ಕೊಡುಗೆ ಅಪಾರ :ಸಿ.ಎಸ್.ನಿರಂಜನ್‌ಕುಮಾರ್ ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ನಗರಮಂಡಲ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಪೂಜೆ ಸಲ್ಲಿಸಿ, ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು. ನಂತರ ದೇವಸ್ಥಾನ ಮುಂಭಾಗದಲ್ಲಿ ನರೇಂದ್ರಮೋದಿ ಪರ ಜೈಕಾರ ಕೂಗಿ ಆಶೀರ್ವಾದದ ದೀಪ ಬೆಳಗಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿ, ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರಮೋ ದಿಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ದೀಪಹಚ್ಚಿ ನರೇಂದ್ರಮೋದಿ

71987147-28bd-43ba-a040-08e2be617c7c

ಅವರಿಗೆ ದಿ ರ್ಘಾಯುಷ್ಯ, ಉತ್ತಮ ಆರೋಗ್ಯ ಕರುಣಿಸಿ, ಅವರಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟು, ಅವರ ನವಭಾರತ ನಿರ್ಮಾಣ ಕನಸು ನನಸು ಮಾಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು ಎಂದರು. ನರೇಂದ್ರಮೋದಿ ಅವರ ನೇತೃತ್ವ ಸರ್ಕಾರದ ಪ್ರಮುಖ ಸಾಧನೆಗಳು ಮತ್ತು ಜನಪರ ಯೋಜನೆಗಳು ದೇಶದ ಆರ್ಥಿಕ, ಸಾಮಾಜಿಕ, ಮೂಲಸೌಕರ್ಯಗಳಲ್ಲಿ ಬದಲಾವಣೆಗಳನ್ನು ತಂದಿದ್ದು, ವಿಶ್ವಮಟ್ಟದಲ್ಲಿ ಗಮನ ಸೆಳೆದಿದ್ದು, ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು. ಪ್ರಧಾನಿ ಅವರು ನರೇಂದ್ರಮೋದಿ ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸುತ್ತಿದ್ದು, ಅವರ ಕಾರ್ಯಸಾಧನೆಯನ್ನು ಇಡೀ ವಿಶ್ವವೇ ಮೆಚ್ಚುವಂತದ್ದು, ದೇಶದ ಅಭಿವೃದ್ಧಿಗೆ ಎಲ್ಲ ಆಯಾಮಗಳಲ್ಲೂ ದೊಡ್ಡ ಕೊಡುಗೆ

ನೀಡಿರುವುದು ಜಗತ್ ಜಾಹೀರಾತು ಆಗಿದೆ. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17ರವರಗೆ ಒಂದು ತಿಂಗಳಕಾಲ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಎಸ್‌ಟಿ ಮೋರ್ಚಾದ ರಾಜ್ಯ ಉಪಾಧಕ್ಷ ಜಯಸುಂದರ್, ಮುಖಂಡ ಡಾ. ಎ.ಆರ್.ಬಾಬು, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರಾದ ನಾರಾಯಣಪ್ರಸಾದ್, ಆರ್.ಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಪಿ.ವೃಷಬೇಂದ್ರಪ್ಪ,

d3b30d80-88b9-4f9d-9959-8e023d9e20bb

ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಸುಂದರ್‌ರಾಜ್, ನಗರಮಂಡಲ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಭಾಸ್ಕರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋ ತ್ತಮ, ಎಸ್‌ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಾ, ಮುಖಂಡರಾದ ನಟರಾಜು, ಮೂಡ್ಲುಪುರ ನಂದೀಶ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆನಂದ್‌ಭಗೀರಥ, ನಗರ ಮಂಡಲ ಕಾರ್ಯದರ್ಶಿ ಬಂಗಾರನಾಯಕ, ನಗರಸಭಾ ಮಾಜಿ ಸದಸ್ಯ ಶಿವಣ್ಣ, ಮುಖಂಡರಾದ ಎಂ.ಎಸ್.ಚಂದ್ರಶೇಖ‌ರ್, ಸುಂದರಪ್ಪ, ಮಹೇಶ್‌ಪಟೇಲ್‌, ಕೃಷ್ಣ ಇತರರು ಹಾಜರಿದ್ದರು

More news from ಕರ್ನಾಟಕ and nearby areas
  • ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಿ: ಹೊಸಹಳ್ಳಿಮಧುಸೂದನ್ ವರದಿ: ಹೊಮ್ಮನಂಜುಂಡನಾಯಕ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಿ: ಹೊಸಹಳ್ಳಿಮಧುಸೂದನ್ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆ ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳು ಗ್ರಾಮಗಳಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆಮನೆಗೆ ಮನವರಿಕೆ ಮಾಡಿಕೊಟ್ಟರೆ ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಹೊಸಹಳ್ಳಿ ಮಧುಸೂದನ್ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಿತಿ ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಕೆಲಸ ಮಾಡಿದರೆ ನಿಮ್ಮ ನಾಯಕತ್ವ. ಬೆಳೆಯುತ್ತದೆ. ಪ್ರಚಾರ ಸಮಿತಿ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ, ಪಕ್ಷದ ಸಂಘಟನೆಯು ಆಗುತ್ತದೆ ಎಂದರು. ಶಾಸಕರ ಅಧ್ಯಕ್ಷತೆಯಲ್ಲಿ ಆಯಾಯ ತಾಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಂಡು ಪ್ರಚಾರ ಸಮಿತಿಯ ಪದಾಧಿಕಾರಿಗಳಿಗೆ ಕಾಂಗ್ರೆಸ್‌ನ ಇತಿಹಾಸ, ಸರ್ಕಾರದ ಯೋಜನೆಗಳನ್ನು ಮನವರಿಕೆ ಮಾಡಿಕೊಡಲಾಗುತ್ತದೆ. ನಮ್ಮ ನಾಯಕತ್ವದ ಗುಣಗಳನ್ನು ಹೇಗೆ ರೂಪಿಸಬೇಕು. ಅದನ್ನು ಮನವರಿಕೆ ಮಾಡಿ ಕೊಡಲಾಗುತ್ತದೆ. ಅವರು ಆಗ ತಳಮಟ್ಟದಲ್ಲಿ ಕಾಂಗ್ರೆಸ್ ಕಟ್ಟಲು ಒಂದು ಅವಕಾಶ ಆಗುತ್ತದೆ ಎಂದರು. ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ ಮಾತನಾಡಿ ಚಾಮರಾನಗರ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರಕ್ಕೆ ಪಂಚಗ್ಯಾರಂಟಿ ಯೋಜನೆಯಿಂದ 200 ಕೋಟಿ ರೂ. ಸಂದಾಯ ಆಗುತ್ತದೆ. ಇದುವರೆಗೂ 600 ಕೋಟಿ ರೂ. ಸಂದಾಯ ಆಗಿದೆ. 5 ವರ್ಷಗಳಿಗೆ ಒಂದು ಸಾವಿರ ಕೋಟಿಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಆಗಿದೆ. ಇದನ್ನು ಪ್ರಚಾರ ಮಾಡಬೇಕು ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಮಹದೇವು ಮಾತನಾಡಿ, ಜಿಲ್ಲಾ ಪ್ರಚಾರ ಸಮಿತಿ ಆದ ಮೇಲೆ ಒಳ್ಳೆಯ ಕೆಲಸಗಳು ನಡೆಯುತ್ತಿವೆ. ಕಾಂಗ್ರೆಸ್‌ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳನ್ನು ತಳಮಟ್ಟದಲ್ಲಿ ಪ್ರಚಾರ ಪಡಿಸಬೇಕು ಎಂದರು. ಮತ್ತೊಬ್ಬ ಜಿಲ್ಲಾ ಕಾರ್ಯದರ್ಶಿ ಚಿಕ್ಕಮಹದೇವು, ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್, ತಾ.ಪಂ.ಮಾಜಿ ಸದಸ್ಯ ಕುಮಾರನಾಯಕ್‌, ಕೆಬ್ಬೇಪುರ ಮಧು ಮಾತನಾಡಿದರು. ಸಭೆಯಲ್ಲಿ ಜಿಲ್ಲಾ  ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ  ಸೈಯದ್ ನಜುರುಲ್ಲಾ, ಅಶೋಕ್ ಕುಮಾರ್, ಮಹಾಲಿಂಗಸ್ವಾಮಿ, ಜಿಲ್ಲಾ ಮುಖ್ಯ ಸಂಯೋಜಕರಾದ ಹೆಗ್ಗವಾಡಿ ಕೆಂಪರಾಜು, ಕೆರೆಹಳ್ಳಿ ರಾಜಕುಮಾರ್,  ಪುಟ್ಟಸ್ವಾಮಿ, ಮೊಹಮ್ಮದ್ ಇಮ್ಮಾದ್ ವುಲ್ಲಾ,  ಸಿದ್ದರಾಜು ನಾಯಕ, ಶಂಕರ್, ರುದ್ರೇಶ್, ಅರ್.ಡಿ .ಉಲ್ಲಾಸ್,ನಿಜಾಂ ಮುದ್ದೀನ್, ಬ್ಲಾಕ್ ಅಧ್ಯಕ್ಷರಾದ ಬಿಸಲವಾಡಿ ರವಿ, ಅಪ್ಸರ್ ಅಹಮದ್, ಮನೋಹರ, ವಿ.ಪ್ರಸಾದ್, ಜಿ.ಕೆ.ಲೋಕೇಶ್, ಬಾಲಕೃಷ್ಣ, ಪದಾಧಿಕಾರಿಗಳು, ಜ್ಯೋತಿ ಪ್ರಕಾಶ್, ಮಹದೇವಮ್ಮ, ಭಾಗವಹಿಸಿದ್ದರು.
    3
    ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಿ: ಹೊಸಹಳ್ಳಿಮಧುಸೂದನ್
 ವರದಿ: ಹೊಮ್ಮನಂಜುಂಡನಾಯಕ

ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಿ: ಹೊಸಹಳ್ಳಿಮಧುಸೂದನ್
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆ
ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳು ಗ್ರಾಮಗಳಲ್ಲಿ ಕಾಂಗ್ರೆಸ್  ಸರ್ಕಾರದ ಸಾಧನೆಗಳು, ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆಮನೆಗೆ ಮನವರಿಕೆ ಮಾಡಿಕೊಟ್ಟರೆ  ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಹೊಸಹಳ್ಳಿ ಮಧುಸೂದನ್ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಿತಿ ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಕೆಲಸ ಮಾಡಿದರೆ ನಿಮ್ಮ ನಾಯಕತ್ವ. ಬೆಳೆಯುತ್ತದೆ. ಪ್ರಚಾರ ಸಮಿತಿ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ, ಪಕ್ಷದ ಸಂಘಟನೆಯು ಆಗುತ್ತದೆ ಎಂದರು.
ಶಾಸಕರ ಅಧ್ಯಕ್ಷತೆಯಲ್ಲಿ ಆಯಾಯ ತಾಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಂಡು ಪ್ರಚಾರ ಸಮಿತಿಯ ಪದಾಧಿಕಾರಿಗಳಿಗೆ ಕಾಂಗ್ರೆಸ್‌ನ ಇತಿಹಾಸ, ಸರ್ಕಾರದ ಯೋಜನೆಗಳನ್ನು ಮನವರಿಕೆ ಮಾಡಿಕೊಡಲಾಗುತ್ತದೆ. ನಮ್ಮ ನಾಯಕತ್ವದ ಗುಣಗಳನ್ನು ಹೇಗೆ ರೂಪಿಸಬೇಕು. ಅದನ್ನು ಮನವರಿಕೆ ಮಾಡಿ ಕೊಡಲಾಗುತ್ತದೆ. ಅವರು ಆಗ ತಳಮಟ್ಟದಲ್ಲಿ ಕಾಂಗ್ರೆಸ್ ಕಟ್ಟಲು ಒಂದು ಅವಕಾಶ ಆಗುತ್ತದೆ ಎಂದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ ಮಾತನಾಡಿ ಚಾಮರಾನಗರ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರಕ್ಕೆ ಪಂಚಗ್ಯಾರಂಟಿ ಯೋಜನೆಯಿಂದ 200 ಕೋಟಿ ರೂ. ಸಂದಾಯ ಆಗುತ್ತದೆ. ಇದುವರೆಗೂ 600 ಕೋಟಿ ರೂ. ಸಂದಾಯ ಆಗಿದೆ. 5 ವರ್ಷಗಳಿಗೆ ಒಂದು ಸಾವಿರ ಕೋಟಿಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಆಗಿದೆ. ಇದನ್ನು ಪ್ರಚಾರ ಮಾಡಬೇಕು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಮಹದೇವು ಮಾತನಾಡಿ, ಜಿಲ್ಲಾ ಪ್ರಚಾರ ಸಮಿತಿ ಆದ ಮೇಲೆ ಒಳ್ಳೆಯ ಕೆಲಸಗಳು ನಡೆಯುತ್ತಿವೆ. ಕಾಂಗ್ರೆಸ್‌ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳನ್ನು ತಳಮಟ್ಟದಲ್ಲಿ ಪ್ರಚಾರ ಪಡಿಸಬೇಕು ಎಂದರು.
ಮತ್ತೊಬ್ಬ ಜಿಲ್ಲಾ ಕಾರ್ಯದರ್ಶಿ ಚಿಕ್ಕಮಹದೇವು, ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್, ತಾ.ಪಂ.ಮಾಜಿ ಸದಸ್ಯ ಕುಮಾರನಾಯಕ್‌, ಕೆಬ್ಬೇಪುರ ಮಧು ಮಾತನಾಡಿದರು. 
ಸಭೆಯಲ್ಲಿ ಜಿಲ್ಲಾ  ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ  ಸೈಯದ್ ನಜುರುಲ್ಲಾ, ಅಶೋಕ್ ಕುಮಾರ್, ಮಹಾಲಿಂಗಸ್ವಾಮಿ, ಜಿಲ್ಲಾ ಮುಖ್ಯ ಸಂಯೋಜಕರಾದ ಹೆಗ್ಗವಾಡಿ ಕೆಂಪರಾಜು, ಕೆರೆಹಳ್ಳಿ ರಾಜಕುಮಾರ್,  ಪುಟ್ಟಸ್ವಾಮಿ, ಮೊಹಮ್ಮದ್ ಇಮ್ಮಾದ್ ವುಲ್ಲಾ,  ಸಿದ್ದರಾಜು ನಾಯಕ, ಶಂಕರ್, ರುದ್ರೇಶ್, ಅರ್.ಡಿ .ಉಲ್ಲಾಸ್,ನಿಜಾಂ ಮುದ್ದೀನ್, ಬ್ಲಾಕ್ ಅಧ್ಯಕ್ಷರಾದ ಬಿಸಲವಾಡಿ ರವಿ, ಅಪ್ಸರ್ ಅಹಮದ್, ಮನೋಹರ, ವಿ.ಪ್ರಸಾದ್, ಜಿ.ಕೆ.ಲೋಕೇಶ್, ಬಾಲಕೃಷ್ಣ, ಪದಾಧಿಕಾರಿಗಳು, ಜ್ಯೋತಿ ಪ್ರಕಾಶ್, ಮಹದೇವಮ್ಮ, 
ಭಾಗವಹಿಸಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    23 hrs ago
  • ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ​ಚಾಮರಾಜನಗರ:ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಬಿಸಿಲಿನ ಬೇಗೆ ಹಾಗೂ ಮಳೆಯೇ ಕಾಣದ ಕಾರಣ ತತ್ತರಿಸಿ ಹೋಗಿದ್ದ ಹನೂರು ತಾಲೂಕಿನ ರೈತ ಕುಲಕ್ಕೆ ಮಳೆರಾಯ ಕರುಣೆ ತೋರಿದ್ದಾನೆ. ತಾಲೂಕಿನ ವಿವಿಧ ಗ್ರಾಮೀಣ ಭಾಗಗಳಲ್ಲಿ ವರುಣನ ಅಬ್ಬರದಿಂದಾಗಿ ದೀರ್ಘಕಾಲದಿಂದ ಮಳೆಯಿಲ್ಲದೆ ಕಂಗೆಟ್ಟು ಹೋಗಿದ್ದ ಜನ-ಜಾನುವಾರುಗಳು ಹಾಗೂ ರೈತರು ನಿಟ್ಟುಸಿರು ಬಿಡುವಂತಾಗಿದೆ. ​ಕುಡಿಯುವ ನೀರಿಗೂ ಬರೆ, ಬೋರ್‌ವೆಲ್‌ಗಳು ಡ್ರೈ: ತಾಲೂಕಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ಅಂತರ್ಜಲ ಕುಸಿದು ಹೋಗಿತ್ತು. ಕೊಳವೆಬಾವಿಗಳಲ್ಲಿ (ಬೋರ್‌ವೆಲ್) ನೀರು ಸಿಗದೆ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಕಣ್ಣೆದುರೇ ಒಣಗಿ ಹೋಗುತ್ತಿವು. ಕುಡಿಯಲು ಕೂಡ ನೀರಿಲ್ಲದೆ ಗ್ರಾಮಸ್ಥರು ಮತ್ತು ಜಾನುವಾರುಗಳು ಪರದಾಡುವಂತಹ ಭೀಕರ ಪರಿಸ್ಥಿತಿ ನಿರ್ಮಾಣವಾಗಿತ್ತು. ರೈತರ ಕಣ್ಣೀರು ನೋಡಲಾರದಂತ ಸ್ಥಿತಿ ತಾಲೂಕಿನ ಹಲವು ಗ್ರಾಮಗಳಲ್ಲಿ ನೆಲೆಸಿತ್ತು. ​ಮಳೆರಾಯನ ಆಗಮನ - ರೈತರ ಮೊಗದಲ್ಲಿ ನಗು: ಸಕಾಲಕ್ಕೆ ಮಳೆಯಾಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದ ಹತಾಶ ಸ್ಥಿತಿಯಲ್ಲಿದ್ದ ರೈತರಿಗೆ ಈಗ ಸುರಿದಿರುವ ಉತ್ತಮ ಮಳೆ ಸಂಜೀವಿನಿಯಾಗಿ ಪರಿಣಮಿಸಿದೆ. ಒಣಗಿ ಹೋಗುತ್ತಿದ್ದ ಬೆಳೆಗಳಿಗೆ ಜೀವಕಳೆ ಬಂದಿದ್ದು, ಗಿಡ-ಮರಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುವ ವಿಶ್ವಾಸ ಮೂಡಿದ್ದು, ಬತ್ತಿಹೋಗಿದ್ದ ಬೋರ್‌ವೆಲ್‌ಗಳೂ ಮರುಜೀವ ಪಡೆಯುವ ನಿರೀಕ್ಷೆಯಿದೆ. ​ಚುರುಕುಗೊಂಡ ಕೃಷಿ ಚಟುವಟಿಕೆಗಳು: ಮಳೆಯ ಅಬ್ಬರದಿಂದ ವಾತಾವರಣ ಸಂಪೂರ್ಣ ತಂಪಾಗಿದ್ದು, ಎಲ್ಲೆಡೆ ನಳನಳಿಸುತ್ತಿರುವ ಹಸಿರು ಕಣ್ಣಿಗೆ ತಂಪು ನೀಡಿದೆ. ಮಳೆಯಿಂದಾಗಿ ರೈತರಲ್ಲಿ ಹೊಸ ಉತ್ಸಾಹ ಮೂಡಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಭರ್ಜರಿಯಾಗಿ ಚುರುಕುಗೊಂಡಿವೆ. ವರುಣನ ಕೃಪೆಯಿಂದ ಒಟ್ಟಾರೆಯಾಗಿ ಹನೂರು ತಾಲೂಕಿನಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಅನ್ನದಾತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
    4
    ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ

ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ
​ಚಾಮರಾಜನಗರ:ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ
ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಬಿಸಿಲಿನ ಬೇಗೆ ಹಾಗೂ ಮಳೆಯೇ ಕಾಣದ ಕಾರಣ ತತ್ತರಿಸಿ ಹೋಗಿದ್ದ ಹನೂರು ತಾಲೂಕಿನ ರೈತ ಕುಲಕ್ಕೆ ಮಳೆರಾಯ ಕರುಣೆ ತೋರಿದ್ದಾನೆ. ತಾಲೂಕಿನ ವಿವಿಧ ಗ್ರಾಮೀಣ ಭಾಗಗಳಲ್ಲಿ ವರುಣನ ಅಬ್ಬರದಿಂದಾಗಿ ದೀರ್ಘಕಾಲದಿಂದ ಮಳೆಯಿಲ್ಲದೆ ಕಂಗೆಟ್ಟು ಹೋಗಿದ್ದ ಜನ-ಜಾನುವಾರುಗಳು ಹಾಗೂ ರೈತರು ನಿಟ್ಟುಸಿರು ಬಿಡುವಂತಾಗಿದೆ.
​ಕುಡಿಯುವ ನೀರಿಗೂ ಬರೆ, ಬೋರ್‌ವೆಲ್‌ಗಳು ಡ್ರೈ:
ತಾಲೂಕಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ಅಂತರ್ಜಲ ಕುಸಿದು ಹೋಗಿತ್ತು. ಕೊಳವೆಬಾವಿಗಳಲ್ಲಿ (ಬೋರ್‌ವೆಲ್) ನೀರು ಸಿಗದೆ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಕಣ್ಣೆದುರೇ ಒಣಗಿ ಹೋಗುತ್ತಿವು. ಕುಡಿಯಲು ಕೂಡ ನೀರಿಲ್ಲದೆ ಗ್ರಾಮಸ್ಥರು ಮತ್ತು ಜಾನುವಾರುಗಳು ಪರದಾಡುವಂತಹ ಭೀಕರ ಪರಿಸ್ಥಿತಿ ನಿರ್ಮಾಣವಾಗಿತ್ತು. ರೈತರ ಕಣ್ಣೀರು ನೋಡಲಾರದಂತ ಸ್ಥಿತಿ ತಾಲೂಕಿನ ಹಲವು ಗ್ರಾಮಗಳಲ್ಲಿ ನೆಲೆಸಿತ್ತು.
​ಮಳೆರಾಯನ ಆಗಮನ - ರೈತರ ಮೊಗದಲ್ಲಿ ನಗು:
ಸಕಾಲಕ್ಕೆ ಮಳೆಯಾಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದ ಹತಾಶ ಸ್ಥಿತಿಯಲ್ಲಿದ್ದ ರೈತರಿಗೆ ಈಗ ಸುರಿದಿರುವ ಉತ್ತಮ ಮಳೆ ಸಂಜೀವಿನಿಯಾಗಿ ಪರಿಣಮಿಸಿದೆ. ಒಣಗಿ ಹೋಗುತ್ತಿದ್ದ ಬೆಳೆಗಳಿಗೆ ಜೀವಕಳೆ ಬಂದಿದ್ದು, ಗಿಡ-ಮರಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುವ ವಿಶ್ವಾಸ ಮೂಡಿದ್ದು, ಬತ್ತಿಹೋಗಿದ್ದ ಬೋರ್‌ವೆಲ್‌ಗಳೂ ಮರುಜೀವ ಪಡೆಯುವ ನಿರೀಕ್ಷೆಯಿದೆ.
​ಚುರುಕುಗೊಂಡ ಕೃಷಿ ಚಟುವಟಿಕೆಗಳು:
ಮಳೆಯ ಅಬ್ಬರದಿಂದ ವಾತಾವರಣ ಸಂಪೂರ್ಣ ತಂಪಾಗಿದ್ದು, ಎಲ್ಲೆಡೆ ನಳನಳಿಸುತ್ತಿರುವ ಹಸಿರು ಕಣ್ಣಿಗೆ ತಂಪು ನೀಡಿದೆ. ಮಳೆಯಿಂದಾಗಿ ರೈತರಲ್ಲಿ ಹೊಸ ಉತ್ಸಾಹ ಮೂಡಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಭರ್ಜರಿಯಾಗಿ ಚುರುಕುಗೊಂಡಿವೆ. ವರುಣನ ಕೃಪೆಯಿಂದ ಒಟ್ಟಾರೆಯಾಗಿ ಹನೂರು ತಾಲೂಕಿನಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಅನ್ನದಾತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಪ್ರಧಾನಿ ಮೋದಿ ದಣಿವರಿಯದ ವಿಶ್ವಶ್ರೇಷ್ಠ ನಾಯಕ, ಪಟ್ಟಣದಲ್ಲಿ ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಬಣ್ಣನೆ ಮಳವಳ್ಳಿ: ಜನ ಸೇವೆಗಾ ಗಿಯೇ ತಮ್ಮ ಜೀವನವನ್ನು ಮುಡಿಪಾಗಿಸಿರುವ ದಣಿವರಿ ಯದ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ಯಮದೂರು ಸಿದ್ದರಾಜು ಬಣ್ಣಿಸಿದ್ದಾರೆ. ಗುರುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣದ ಸಾರ್ವ ಜನಿಕ ಆಸ್ಪತ್ರೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ರೋಗಿ ಗಳಿಗೆ ಹಣ್ಣು ಹಂಪಲು ವಿತರಿ ಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ದೇಶದ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿ ಸುತ್ತಿದ್ದಾರೆ. ಬಡವರ, ರೈತರ, ಮಹಿಳೆಯರ, ಯುವಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವದಲ್ಲೇ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರ ಜನ್ಮದಿನವನ್ನು ಸೇವಾ ದಿನವಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧು ಗಂಗಾಧರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ, ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು. ಮೋದಿ ಅವರು ಹುಟ್ಟುಹಬ್ಬ ವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳದೆ, ಸೇವಾ ಕಾರ್ಯಗಳ ಮೂಲಕ ಆಚರಿಸಲು ಕರೆ ನೀಡಿದ್ದಾರೆ. ಅದರಂತೆ ಇಂದು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ. ಮೋದಿ ಅವರ ಆರೋಗ್ಯ, ದೀರ್ಘಾಯುಷ್ಯ ಕ್ಕಾಗಿ ಪ್ರಾರ್ಥಿಸಿ ಮನೆಗಳಲ್ಲಿ ದೀಪ ಬೆಳಗುವಿಕೆ ದೇವಾಲಯ ಗಳಲ್ಲಿ ವಿಶೇಷ ಪೂಜೆ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿ ದರು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾ ರಿಗಳಾದ ಡಾ. ಶಿವಸ್ವಾಮಿ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಹೆಬ್ಬಣಿ ಬಸವರಾಜು, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಿಕ್ಜಣ್ಣ, ಪ್ರಧಾನ ಕಾರ್ಯದರ್ಶಿ ಉಮೇಶ್, ಜೆಡಿಎಸ್ ಮುಖಂಡ ಕಂಬರಾಜು, ಮುಖಂಡರಾದ ಸಿದ್ದರಾಜು, ದೇವರಾಜು, ವಕ್ಕರಹಳ್ಳಿ ಬಸವರಾಜು, ಮಾದೇಶ, ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.
    1
    ಪ್ರಧಾನಿ ಮೋದಿ ದಣಿವರಿಯದ ವಿಶ್ವಶ್ರೇಷ್ಠ ನಾಯಕ, ಪಟ್ಟಣದಲ್ಲಿ ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಬಣ್ಣನೆ
ಮಳವಳ್ಳಿ: ಜನ ಸೇವೆಗಾ ಗಿಯೇ ತಮ್ಮ ಜೀವನವನ್ನು ಮುಡಿಪಾಗಿಸಿರುವ ದಣಿವರಿ ಯದ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ಯಮದೂರು ಸಿದ್ದರಾಜು ಬಣ್ಣಿಸಿದ್ದಾರೆ.
ಗುರುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣದ ಸಾರ್ವ ಜನಿಕ ಆಸ್ಪತ್ರೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ರೋಗಿ ಗಳಿಗೆ ಹಣ್ಣು ಹಂಪಲು ವಿತರಿ ಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ದೇಶದ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿ ಸುತ್ತಿದ್ದಾರೆ. ಬಡವರ, ರೈತರ, ಮಹಿಳೆಯರ, ಯುವಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವದಲ್ಲೇ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರ ಜನ್ಮದಿನವನ್ನು ಸೇವಾ ದಿನವಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧು ಗಂಗಾಧರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ, ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು.
ಮೋದಿ ಅವರು ಹುಟ್ಟುಹಬ್ಬ ವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳದೆ, ಸೇವಾ ಕಾರ್ಯಗಳ ಮೂಲಕ ಆಚರಿಸಲು ಕರೆ ನೀಡಿದ್ದಾರೆ. ಅದರಂತೆ ಇಂದು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ. ಮೋದಿ ಅವರ ಆರೋಗ್ಯ, ದೀರ್ಘಾಯುಷ್ಯ ಕ್ಕಾಗಿ ಪ್ರಾರ್ಥಿಸಿ ಮನೆಗಳಲ್ಲಿ ದೀಪ ಬೆಳಗುವಿಕೆ ದೇವಾಲಯ ಗಳಲ್ಲಿ  ವಿಶೇಷ ಪೂಜೆ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿ ದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾ ರಿಗಳಾದ ಡಾ. ಶಿವಸ್ವಾಮಿ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಹೆಬ್ಬಣಿ ಬಸವರಾಜು, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಿಕ್ಜಣ್ಣ, ಪ್ರಧಾನ ಕಾರ್ಯದರ್ಶಿ ಉಮೇಶ್, ಜೆಡಿಎಸ್ ಮುಖಂಡ ಕಂಬರಾಜು, ಮುಖಂಡರಾದ ಸಿದ್ದರಾಜು, ದೇವರಾಜು, ವಕ್ಕರಹಳ್ಳಿ ಬಸವರಾಜು, ಮಾದೇಶ,  ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    25 min ago
  • ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.
    1
    ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ  ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು
ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ  ಬಿಜೆಪಿ ಪಕ್ಷದ ವತಿಯಿಂದ  ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು  ನೇತೃತ್ವದಲ್ಲಿ   ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ  ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ.
ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಈ ವೇಳೆ  ಬಿಜೆಪಿ ತಾಲ್ಲೂಕು ಅಧ್ಯಕ್ಷ  ಮಧುಗಂಗಾಧರ್  ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ.
ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು,  ಈ ತಿಂಗಳು 17 ನೇ ತಾರೀಖಿನಿಂದ  ಮುಂದಿನ ತಿಂಗಳು 17 ರವರಗೆ  ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ  ಎಂದರು.
ಈ ವೇಳೆ  ಬಿಜೆಪಿ ಅಧ್ಯಕ್ಷ ಮಧುಗಂಗಾಧರ್,  ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    2 hrs ago
  • All About,How the political Influencial are misuing #WaqfProperties #WaqfFunds to their advantage *ಭಾರತ ನಲ್ಲಿ ವೈರಲ್*
    1
    All About,How the political Influencial are misuing #WaqfProperties #WaqfFunds to their advantage 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಮೈಸೂರಿನಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.. ‘ನಕಲಿ ಹಿಂದುತ್ವವಾದಿ’ ಎಂದು ಘೋಷಣೆ | ಗಡಿಪಾರು ಮಾಡುವಂತೆ ಆಗ್ರಹ ಮೈಸೂರು: ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ನಕಲಿ ಹಿಂದುತ್ವವಾದಿ ಪ್ರತಾಪ್ ಸಿಂಹ’, ‘ಕೋಮುವಾದಿ ಬಿಜೆಪಿ, ಕೋಮುವಾದಿ ಪ್ರತಾಪ್ ಸಿಂಹ’ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಟಿ. ನರಸೀಪುರದಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಗಣೇಶ ಮೂರ್ತಿ ಹಿಡಿದು, ಪಾದರಕ್ಷೆ ಧರಿಸಿ ಪ್ರತಿಭಟನೆ ನಡೆಸಿರುವುದನ್ನು ಪ್ರಶ್ನಿಸಿದ ಕಾರ್ಯಕರ್ತರು, ಧಾರ್ಮಿಕ ಭಾವನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ನಡೆ ಸಮಾಜದಲ್ಲಿ ಅಶಾಂತಿ ಮೂಡಿಸುವುದಲ್ಲದೆ, ಯುವಕರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು. ಪ್ರತಾಪ್ ಸಿಂಹ ಅವರು ದಲಿತರು ಹಾಗೂ ಮುಸ್ಲಿಮರ ವಿರುದ್ಧ ದ್ವೇಷದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿ, ಅವರನ್ನು ಗಡಿಪಾರು ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ಸೂಚನೆಗಳ ಕುರಿತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರೆ, ಇದಕ್ಕೆ ಪ್ರತಿಯಾಗಿ ದಲಿತ ಸಂಘಟನೆಗಳು ಹಾಗೂ ಇತರ ಸಂಘಟನೆಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಪ್ರಕರಣ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.
    1
    ಮೈಸೂರಿನಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.. ‘ನಕಲಿ ಹಿಂದುತ್ವವಾದಿ’ ಎಂದು ಘೋಷಣೆ | ಗಡಿಪಾರು ಮಾಡುವಂತೆ ಆಗ್ರಹ
ಮೈಸೂರು: ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ನಕಲಿ ಹಿಂದುತ್ವವಾದಿ ಪ್ರತಾಪ್ ಸಿಂಹ’, ‘ಕೋಮುವಾದಿ ಬಿಜೆಪಿ, ಕೋಮುವಾದಿ ಪ್ರತಾಪ್ ಸಿಂಹ’ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಟಿ. ನರಸೀಪುರದಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಗಣೇಶ ಮೂರ್ತಿ ಹಿಡಿದು, ಪಾದರಕ್ಷೆ ಧರಿಸಿ ಪ್ರತಿಭಟನೆ ನಡೆಸಿರುವುದನ್ನು ಪ್ರಶ್ನಿಸಿದ ಕಾರ್ಯಕರ್ತರು, ಧಾರ್ಮಿಕ ಭಾವನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ನಡೆ ಸಮಾಜದಲ್ಲಿ ಅಶಾಂತಿ ಮೂಡಿಸುವುದಲ್ಲದೆ, ಯುವಕರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಪ್ರತಾಪ್ ಸಿಂಹ ಅವರು ದಲಿತರು ಹಾಗೂ ಮುಸ್ಲಿಮರ ವಿರುದ್ಧ ದ್ವೇಷದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿ, ಅವರನ್ನು ಗಡಿಪಾರು ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ಸೂಚನೆಗಳ ಕುರಿತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರೆ, ಇದಕ್ಕೆ ಪ್ರತಿಯಾಗಿ ದಲಿತ ಸಂಘಟನೆಗಳು ಹಾಗೂ ಇತರ ಸಂಘಟನೆಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಪ್ರಕರಣ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.
    user_Mysore update
    Mysore update
    Voice of people Mysuru, Karnataka•
    22 hrs ago
  • ಸರ್ಕಾರಿ ಗೋಮಾಳ‌ ರಕ್ಷಣೆಗೆ ಒತ್ತಾಯಿಸಿ ಹೆಗ್ಗೋಠಾರ ಗ್ರಾಮದಿಂದ ರೈತರಿಂದ ಬೃಹತ್ ಪಾದಯಾತ್ರೆ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಹಾಗೂ ಮುತ್ತಿಗೆ ಗ್ರಾಮದಲ್ಲಿ ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದ್ದು ಗಣಿ ಧೂಳು ಹಾಗೂ ಅಧಿಕ ಬರ ಇರುವ ಟಿಪ್ಪರ್ ಗಳು ಓಡಾಟದಿಂದ ಜಮೀನಿನಲ್ಲಿ ಬೆಳೆದಿದ್ದ‌‌ ಬೆಳೆಗಳು ಧೂಳಿನಿಂದ ಹಾಳಾಗುತ್ತಿದೆ‌ ಆದ್ದರಿಂದ ಗೋಮಾಳವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ಗುರುವಾರ ಪಾದಯಾತ್ರೆ ನಡೆಸಿದರು. ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ರೈತ ಮುಖಂಡ ಹೊನ್ನೂರು ಬಸವಣ್ಣ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಹೆಗ್ಗೋಠಾರ ಗ್ರಾಮದಿಂದ‌ ಚಾಮರಾಜನಗರದ ಜಿಲ್ಲಾಡಳಿತ ಭವನದ ವರೆಗೆ ಸುಮಾರು ಹತ್ತು ಕಿಲೋಮೀಟರ್ ಪಾದಯಾತ್ರೆ ನಡೆಸಿ ಜಿಲ್ಲಾಡಳಿತ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    1
    ಸರ್ಕಾರಿ ಗೋಮಾಳ‌ ರಕ್ಷಣೆಗೆ ಒತ್ತಾಯಿಸಿ ಹೆಗ್ಗೋಠಾರ ಗ್ರಾಮದಿಂದ ರೈತರಿಂದ ಬೃಹತ್ ಪಾದಯಾತ್ರೆ 

ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಹಾಗೂ ಮುತ್ತಿಗೆ ಗ್ರಾಮದಲ್ಲಿ ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದ್ದು ಗಣಿ ಧೂಳು ಹಾಗೂ ಅಧಿಕ ಬರ ಇರುವ ಟಿಪ್ಪರ್ ಗಳು ಓಡಾಟದಿಂದ ಜಮೀನಿನಲ್ಲಿ ಬೆಳೆದಿದ್ದ‌‌ ಬೆಳೆಗಳು ಧೂಳಿನಿಂದ ಹಾಳಾಗುತ್ತಿದೆ‌ ಆದ್ದರಿಂದ ಗೋಮಾಳವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ಗುರುವಾರ ಪಾದಯಾತ್ರೆ ನಡೆಸಿದರು. 
ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ರೈತ ಮುಖಂಡ ಹೊನ್ನೂರು ಬಸವಣ್ಣ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಹೆಗ್ಗೋಠಾರ ಗ್ರಾಮದಿಂದ‌ ಚಾಮರಾಜನಗರದ ಜಿಲ್ಲಾಡಳಿತ ಭವನದ ವರೆಗೆ ಸುಮಾರು ಹತ್ತು ಕಿಲೋಮೀಟರ್ ಪಾದಯಾತ್ರೆ ನಡೆಸಿ ಜಿಲ್ಲಾಡಳಿತ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    42 min ago
  • ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇಇ ಮಳವಳ್ಳಿ : ತಾಲ್ಲೂಕಿನ‌ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ವಿರುವುದರಿಂದ ಸೆಪ್ಟಂಬರ್ 18 ರಂದು ಈ ಕೇಂದ್ರ ವ್ಯಾಪ್ತಿ ಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. 18 ರಂದು ಬೆಳಿಗ್ಗೆ 9. ರಿಂದ ಸಾಯಂಕಾಲ 5 ರ ವರೆಗೆ 66/11 ಕೆ ವಿ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಿರುಗಾಬಲು, ದೊಡ್ಡೇಗೌಡನಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ನೇಣನೂರು, ಸಂಶೆಟ್ಟಿಪುರ, ಚಿಕ್ಕಮುಲಗೂಡು, ಮಿಕ್ಕರೆ, ಕಲ್ಕುಣಿ, ಡೋರನಹಳ್ಳಿ, ಹೆಚ್ ಹೆಚ್ ಕೊಪ್ಪಲು, ಭೀಮನಹಳ್ಳಿ, ಬಂಡೂರು, ಆಲದಹಳ್ಳಿ, ಮೂಗನಕೊಪ್ಪಲು, ಹೂವಿನ ಕೊಪ್ಪಲು, ಹಾಗೂ ಸುತ್ತಮು ತ್ತಲ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಪಟ್ಟಣ ದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಚೆಸ್ಕಾಂನ ಕಾರ್ಯಪಾಲಕ ಇಂಜೀನಿಯರ್ ಟಿ ಪುಟ್ಟಸ್ವಾಮಿ ಅವರು ನೀಡಿ ರುವ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.
    1
    ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇಇ
ಮಳವಳ್ಳಿ : ತಾಲ್ಲೂಕಿನ‌ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ವಿರುವುದರಿಂದ   ಸೆಪ್ಟಂಬರ್ 18 ರಂದು  ಈ ಕೇಂದ್ರ ವ್ಯಾಪ್ತಿ ಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ.  18 ರಂದು ಬೆಳಿಗ್ಗೆ 9. ರಿಂದ ಸಾಯಂಕಾಲ 5 ರ ವರೆಗೆ 66/11 ಕೆ ವಿ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಿರುಗಾಬಲು, ದೊಡ್ಡೇಗೌಡನಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ನೇಣನೂರು, ಸಂಶೆಟ್ಟಿಪುರ, ಚಿಕ್ಕಮುಲಗೂಡು, ಮಿಕ್ಕರೆ, ಕಲ್ಕುಣಿ, ಡೋರನಹಳ್ಳಿ, ಹೆಚ್ ಹೆಚ್ ಕೊಪ್ಪಲು, ಭೀಮನಹಳ್ಳಿ, ಬಂಡೂರು, ಆಲದಹಳ್ಳಿ, ಮೂಗನಕೊಪ್ಪಲು, ಹೂವಿನ ಕೊಪ್ಪಲು, ಹಾಗೂ ಸುತ್ತಮು ತ್ತಲ ಗ್ರಾಮಗಳ ವಿದ್ಯುತ್  ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದ್ದು ಗ್ರಾಹಕರು  ಸಹಕರಿಸಬೇಕೆಂದು ಪಟ್ಟಣ ದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಚೆಸ್ಕಾಂನ ಕಾರ್ಯಪಾಲಕ ಇಂಜೀನಿಯರ್ ಟಿ ಪುಟ್ಟಸ್ವಾಮಿ ಅವರು ನೀಡಿ ರುವ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    2 hrs ago
  • All About,Requesting our Hon'ble Minister for #Waqf to hand#AnwarManipaddy and #UpaLokayuta report to #CBI for fair review *ಭಾರತ ನಲ್ಲಿ ವೈರಲ್*
    1
    All About,Requesting our Hon'ble Minister for #Waqf to hand#AnwarManipaddy and #UpaLokayuta report to #CBI for fair review 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.