ಸಂವಿಧಾನದ ಆಶಯಗಳು ಪ್ರತಿಯೊಬ್ಬರ ಬದುಕಿನ ಮಾರ್ಗದರ್ಶಿಯಾಗಲಿ: ಡಾ. ಶಿವರಾಜ ಗುರಿಕಾರ್,ಎಸ್ಕೆಎನ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಾಗೂ ವಿಶೇಷ ಉಪನ್ಯಾಸ ಗಂಗಾವತಿ: "ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಹಕ್ಕುಗಳನ್ನು ಕಲ್ಪಿಸಿದೆ. ಸಂವಿಧಾನದ ಆಶಯಗಳನ್ನು ಅರಿತು, ಅದರ ಮೌಲ್ಯಗಳನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ" ಎಂದು ಎಸ್ಕೆಎನ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಶಿವರಾಜ ಗುರಿಕಾರ್ ಹೇಳಿದರು.ನಗರದ ಎಸ್ಕೆಎನ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂಬೇಡ್ಕರ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಅಪಾರ ಜ್ಞಾನ, ದೂರದೃಷ್ಟಿ ಹಾಗೂ ಕಾನೂನು ಪರಿಣತಿಯನ್ನು ಸ್ಮರಿಸಿದ ಅವರು, ಜಾತಿ, ಧರ್ಮ, ಅಸ್ಪೃಶ್ಯತೆಯಂತಹ ಸಾಮಾಜಿಕ ಅಸಮಾನತೆಗಳನ್ನು ಮೀರಿ ಪ್ರತಿಯೊಬ್ಬ ಪ್ರಜೆಗೂ ಗೌರವಯುತ ಬದುಕು ಕಲ್ಪಿಸುವ ವ್ಯವಸ್ಥೆಯನ್ನು ಸಂವಿಧಾನ ರೂಪಿಸಿದೆ ಎಂದರು. ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ಹೋರಾಟ ಹಾಗೂ ತ್ಯಾಗವನ್ನು ನೆನೆದು ಭಾವುಕರಾದರು.ಅಧ್ಯಕ್ಷತೆ ವಹಿಸಿದ್ದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಂಜುನಾಥ ಕೆ.ಎಚ್. ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮಹತ್ವ ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ವಿವರಿಸಿದರು. ವಿಶೇಷ ಉಪನ್ಯಾಸ ನೀಡಿದ ಭಾರತ ಸಂವಿಧಾನ ವಿಭಾಗದ ಸಂಯೋಜಕ ಫಣಿರಾಜ್, ಸಂವಿಧಾನದ ಮೂಲ ಆಶಯಗಳು, ಕಾನೂನು ವ್ಯವಸ್ಥೆಯ ಬೆಳವಣಿಗೆ ಹಾಗೂ ಸಂವಿಧಾನದ ಮಾರ್ಗದರ್ಶನದಲ್ಲಿ ದೇಶ ನಡೆದು ಬಂದ ಹಾದಿಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.ಇದಕ್ಕೂ ಮುನ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಉಪನ್ಯಾಸಕ ಪೋಲೇಶವಲಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.ವೇದಿಕೆಯಲ್ಲಿ ಉಪನ್ಯಾಸಕರಾದ ಕುಶ್ ರಾಥೋಡ್, ಇತಿಹಾಸ ವಿಭಾಗದ ಡಾ. ಮಲ್ಲಿಕಾ, ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪವನಕುಮಾರ ಗುಂಡೂರು, ವಿದ್ಯಾರ್ಥಿ ಪ್ರತಿನಿಧಿ ಉಮಾ ಉಪಸ್ಥಿತರಿದ್ದರು. ಉಪನ್ಯಾಸಕ ಶಿವರಾಜ ಜಮಖಂಡಿ ನಿರೂಪಿಸಿದರು. ವಿದ್ಯಾರ್ಥಿನಿ ಉಮಾ ವಂದಿಸಿದರು. ಉಪನ್ಯಾಸಕ ತಾಯಪ್ಪ ಎಂ. ಸೇರಿದಂತೆ ವಿವಿಧ ವಿಭಾಗಗಳ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸಂವಿಧಾನದ ಆಶಯಗಳು ಪ್ರತಿಯೊಬ್ಬರ ಬದುಕಿನ ಮಾರ್ಗದರ್ಶಿಯಾಗಲಿ: ಡಾ. ಶಿವರಾಜ ಗುರಿಕಾರ್,ಎಸ್ಕೆಎನ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಾಗೂ ವಿಶೇಷ ಉಪನ್ಯಾಸ ಗಂಗಾವತಿ: "ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಹಕ್ಕುಗಳನ್ನು ಕಲ್ಪಿಸಿದೆ. ಸಂವಿಧಾನದ ಆಶಯಗಳನ್ನು ಅರಿತು, ಅದರ ಮೌಲ್ಯಗಳನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ" ಎಂದು ಎಸ್ಕೆಎನ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಶಿವರಾಜ ಗುರಿಕಾರ್ ಹೇಳಿದರು.ನಗರದ ಎಸ್ಕೆಎನ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂಬೇಡ್ಕರ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಅಪಾರ ಜ್ಞಾನ, ದೂರದೃಷ್ಟಿ ಹಾಗೂ ಕಾನೂನು ಪರಿಣತಿಯನ್ನು ಸ್ಮರಿಸಿದ ಅವರು, ಜಾತಿ, ಧರ್ಮ, ಅಸ್ಪೃಶ್ಯತೆಯಂತಹ ಸಾಮಾಜಿಕ ಅಸಮಾನತೆಗಳನ್ನು ಮೀರಿ ಪ್ರತಿಯೊಬ್ಬ ಪ್ರಜೆಗೂ ಗೌರವಯುತ ಬದುಕು ಕಲ್ಪಿಸುವ ವ್ಯವಸ್ಥೆಯನ್ನು ಸಂವಿಧಾನ ರೂಪಿಸಿದೆ ಎಂದರು. ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ಹೋರಾಟ ಹಾಗೂ ತ್ಯಾಗವನ್ನು ನೆನೆದು ಭಾವುಕರಾದರು.ಅಧ್ಯಕ್ಷತೆ ವಹಿಸಿದ್ದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಂಜುನಾಥ ಕೆ.ಎಚ್. ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮಹತ್ವ ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ವಿವರಿಸಿದರು. ವಿಶೇಷ ಉಪನ್ಯಾಸ ನೀಡಿದ ಭಾರತ ಸಂವಿಧಾನ ವಿಭಾಗದ ಸಂಯೋಜಕ ಫಣಿರಾಜ್, ಸಂವಿಧಾನದ ಮೂಲ ಆಶಯಗಳು, ಕಾನೂನು ವ್ಯವಸ್ಥೆಯ ಬೆಳವಣಿಗೆ ಹಾಗೂ ಸಂವಿಧಾನದ ಮಾರ್ಗದರ್ಶನದಲ್ಲಿ ದೇಶ ನಡೆದು ಬಂದ ಹಾದಿಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.ಇದಕ್ಕೂ ಮುನ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಉಪನ್ಯಾಸಕ ಪೋಲೇಶವಲಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.ವೇದಿಕೆಯಲ್ಲಿ ಉಪನ್ಯಾಸಕರಾದ ಕುಶ್ ರಾಥೋಡ್, ಇತಿಹಾಸ ವಿಭಾಗದ ಡಾ. ಮಲ್ಲಿಕಾ, ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪವನಕುಮಾರ ಗುಂಡೂರು, ವಿದ್ಯಾರ್ಥಿ ಪ್ರತಿನಿಧಿ ಉಮಾ ಉಪಸ್ಥಿತರಿದ್ದರು. ಉಪನ್ಯಾಸಕ ಶಿವರಾಜ ಜಮಖಂಡಿ ನಿರೂಪಿಸಿದರು. ವಿದ್ಯಾರ್ಥಿನಿ ಉಮಾ ವಂದಿಸಿದರು. ಉಪನ್ಯಾಸಕ ತಾಯಪ್ಪ ಎಂ. ಸೇರಿದಂತೆ ವಿವಿಧ ವಿಭಾಗಗಳ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
- ಗಂಗಾವತಿಯ ನಗರದ ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ಸಂವಿಧಾನ ದಿವಸ್ ಆಚರಣೆ ಗಂಗಾವತಿ: ನಗರದ ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ನ. 26.ಗುರುವಾರ ದಂದು ಸರ್ಕಾರದ ಆದೇಶದಂತೆ ಸಂವಿಧಾನ ಅಂಗೀಕಾರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಕಿ ಶ್ರೀಮತಿ ಸುಮಂಗಲಾ ಅವರು, ಭಾರತದ ಸಂವಿಧಾನದ ಮಹತ್ವ, ರಚನೆ ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಸಹಶಿಕ್ಷಕರಾದ ನೀಲಕಂಠ ಅವರು ಸಂವಿಧಾನದ ಪ್ರಸ್ತಾವನೆಯನ್ನು ವಿವರಿಸಿದರು. ನಂತರ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆಯ ಪ್ರತಿಯನ್ನು ವಾಚಿಸಲಾಯಿತು. ವಿದ್ಯಾರ್ಥಿಗಳು ಸಂವಿಧಾನದ ವಿವಿಧ ಮುಖ್ಯಾಂಶಗಳ ಕುರಿತು ಭಾಷಣ ಮಾಡಿ ಗಮನ ಸೆಳೆದರು. ಕಾರ್ಯಕ್ರಮದ ಅಂತ್ಯದಲ್ಲಿ ಶಾಲೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಿಯಾಕುಮಾರಿ, ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಒಟ್ಟಾಗಿ ಸಂವಿಧಾನದ ಪ್ರಮಾಣ ವಚನ ಸ್ವೀಕರಿಸಿದರು.1
- ಸಿದ್ದಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಅನ್ನಪೂರ್ಣ ವೀರೇಶ ವಕೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಮನವಿ ಸಿದ್ದಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಅನ್ನಪೂರ್ಣ ವೀರೇಶ ವಕೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಮನವಿ ಹಿರಿಯರ ಮಾರ್ಗದರ್ಶನದಲ್ಲಿ, ಯುವಕರ ಆಶಯಗಳಿಗೆ ಧ್ವನಿಯಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ವೀರೇಶ ವಕೀಲರ ಮನವಿ ಕಾರಟಗಿ : ಸಿದ್ದಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರವು ಈ ಬಾರಿ ಪರಿಶಿಷ್ಟ ಜಾತಿ (SC) ಮಹಿಳಾ ಮೀಸಲು ಕ್ಷೇತ್ರವಾಗಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಕ್ಷೇತ್ರದ ಜನರ ಸೇವೆ ಮಾಡಲು ತಮ್ಮ ಕುಟುಂಬಕ್ಕೆ ಒಂದು ಅವಕಾಶ ಕಲ್ಪಿಸುವಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಹಿರಿಯರು ಹಾಗೂ ಕಾರ್ಯಕರ್ತರಲ್ಲಿ ವೀರೇಶ ವಕೀಲರು ಮನವಿ ಮಾಡಿದ್ದಾರೆ. ಈ ಕುರಿತು ಮನವಿ ಮಾಡಿಕೊಂಡಿರುವ ಅವರು, ಸಿದ್ದಾಪುರ ಕ್ಷೇತ್ರವು ನಮ್ಮ ಮನೆಯಂತಿದ್ದು, ಇಲ್ಲಿನ ಜನರ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದವೇ ನಮಗೆ ದೊಡ್ಡ ಶಕ್ತಿಯಾಗಿದೆ. ಈ ಬಾರಿ ಜಿಲ್ಲಾ ಪಂಚಾಯತ್ ಕ್ಷೇತ್ರವು ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಗೆ ಒಳಪಟ್ಟಿರುವುದರಿಂದ, ತಮ್ಮ ಧರ್ಮಪತ್ನಿ ಶ್ರೀಮತಿ ಅನ್ನಪೂರ್ಣ ವೀರೇಶ ವಕೀಲರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಟಿಕೆಟ್ ನೀಡುವಂತೆ ಪಕ್ಷದ ಹಿರಿಯ ನಾಯಕರು ಹಾಗೂ ಸಂಬಂಧಪಟ್ಟ ಮುಖಂಡರಲ್ಲಿ ಕೈಮುಗಿದು ವಿನಂತಿಸಿಕೊಂಡಿದ್ದಾರೆ. ಹಿರಿಯರ ಅನುಭವ ಮತ್ತು ಮಾರ್ಗದರ್ಶನವನ್ನು ಗೌರವಿಸುತ್ತಾ, ಯುವಕರ ಆಶಯಗಳು ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸಲು ನಾವು ಸದಾ ಸಿದ್ಧರಿದ್ದೇವೆ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸಾರ್ವಜನಿಕರ ಸೇವೆಯನ್ನು ಪ್ರಮುಖ ಗುರಿಯಾಗಿಸಿಕೊಂಡು ಮುನ್ನಡೆಯುವ ಸಂಕಲ್ಪ ನಮ್ಮದಾಗಿದೆ ಎಂದು ತಿಳಿಸಿದ್ದಾರೆ. ರಾಜಕೀಯದಲ್ಲಿ ಅಧಿಕಾರಕ್ಕಿಂತ ಜನರ ವಿಶ್ವಾಸ ಮತ್ತು ಸೇವೆಗೆ ಹೆಚ್ಚಿನ ಮಹತ್ವ ನೀಡುತ್ತೇವೆ. ಪಕ್ಷದ ತತ್ವ, ಸಿದ್ಧಾಂತ ಹಾಗೂ ಹಿರಿಯರ ಸಲಹೆಗಳನ್ನು ಪಾಲಿಸಿಕೊಂಡು ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಆಶೋತ್ತರಗಳಿಗೆ ಸ್ಪಂದಿಸುವ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಆದ್ದರಿಂದ ಸಿದ್ದಾಪುರ ಜಿಲ್ಲಾ ಪಂಚಾಯತ್ನ ಪರಿಶಿಷ್ಟ ಜಾತಿ ಮಹಿಳಾ ಮೀಸಲು ಕ್ಷೇತ್ರಕ್ಕೆ ತಮ್ಮ ಧರ್ಮಪತ್ನಿ ಶ್ರೀಮತಿ ಅನ್ನಪೂರ್ಣ ವೀರೇಶ ವಕೀಲರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ಬೆಂಬಲಿಸಿ, ಆಶೀರ್ವದಿಸಿ, ಪಕ್ಷದ ಅಭ್ಯರ್ಥಿಯಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ವೀರೇಶ ವಕೀಲರು ಮನವಿ ಮಾಡಿದ್ದಾರೆ. "ನಿಮ್ಮ ಪ್ರೀತಿಯ ಮನೆಯ ಮಗನಾಗಿ ಸದಾ ನಿಮ್ಮೊಂದಿಗಿದ್ದು, ನಿಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಸೇವೆ ಸಲ್ಲಿಸಲು ಬದ್ಧನಾಗಿದ್ದೇನೆ" ಎಂದು ವೀರೇಶ ವಕೀಲರು ತಿಳಿಸಿದ್ದಾರೆ.1
- "ಬಲ್ಡೋಟಾ ಕಾರ್ಖಾನೆ ವಿರುದ್ಧದ ಹೋರಾಟ, ಸ್ಥಳೀಯರ ಬೇಡಿಕೆ ಹಾಗೂ ಗವಿಸಿದ್ದೇಶ್ವರ ಶ್ರೀಗಳ ಒತ್ತಾಯದ ಹಿನ್ನೆಲೆಯಲ್ಲಿ ಕೆರೆ ನಿರ್ಮಾಣದ ಸಾಧ್ಯತೆ ಕುರಿತು ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ಇದರ ಬಗ್ಗೆ ವರದಿ ಬಂದ ಬಳಿಕ ಚರ್ಚಿಸಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೊಪ್ಪಳದ ಬಸಾಪುರ ಏರ್ ಸ್ಟ್ರಿಪ್ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಬಲ್ಡೋಟಾ ಕಾರ್ಖಾನೆ ಸ್ಥಗಿತಗೊಳಿಸಲು ಹೋರಾಟ ಹಾಗೂ ಶ್ರೀಗಳೂ ಈ ಬಗ್ಗೆ ಧ್ವನಿ ಎತ್ತಿದ್ದಾರೆ ಎಂದು ಕೇಳಿದಾಗ, "ನನಗೂ ಈ ವಿಚಾರ ಗೊತ್ತಿದೆ. ಸಿದ್ದರಾಮಯ್ಯ ಅವರು ಇದ್ದಾಗಲೂ ಈ ಸಮಸ್ಯೆ ಇತ್ತು. ಯಾವುದಾದರೂ ಒಂದು ಕಡೆ ಕೆರೆ ನಿರ್ಮಿಸಬೇಕು ಎಂಬ ಬೇಡಿಕೆಯಿದೆ. ವರದಿ ಬಂದ ನಂತರ ಮಾತನಾಡುತ್ತೇನೆ" ಎಂದರು. ಸಂವಿಧಾನ ವಿಚಾರವಾಗಿ ನಿಮ್ಮ ಹೇಳಿಕೆಗೆ ಬಿಜೆಪಿಯವರ ಟೀಕೆಯ ಬಗ್ಗೆ ಕೇಳಿದಾಗ, "ನಾನು ಹೇಳಿರುವ ಸಂವಿಧಾನ ಬದಲಾವಣೆ ಎಂದರೆ ಬಿಜೆಪಿಯವರು ಹೇಳುವ ರೀತಿಯ ಬದಲಾವಣೆಯಲ್ಲ. ಜನರ ಭಾವನೆ, ಪರಿಸ್ಥಿತಿ, ಸಮಸ್ಯೆ ಮತ್ತು ಅಭಿವೃದ್ಧಿಗೆ ಅನುಗುಣವಾಗಿ ಅಗತ್ಯ ತಿದ್ದುಪಡಿ ಮಾಡುವುದು" ಎಂದು ಹೇಳಿದರು. "371 ಜೆ ಕಲಂ ಜಾರಿಯಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಈ ಭಾಗದ ಜನರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು 371ಜೆ ಜಾರಿಗೆ ತರಲಾಯಿತು. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಾದವು. ಕಾಲೇಜುಗಳಲ್ಲಿ ಪ್ರವೇಶ ದೊರೆಯಿತು. ವೈದ್ಯರು, ಎಂಜಿನಿಯರ್ಗಳು ಹಾಗೂ ಎಸಿ, ಡಿಸಿ ಹುದ್ದೆಗಳನ್ನು ಪಡೆಯಲು ಈ ಭಾಗದವರಿಗೆ ಅವಕಾಶ ಸಿಕ್ಕಿದೆ. ಇಂತಹ ಬದಲಾವಣೆಗಳನ್ನೇ ನಾನು ತಿಳಿಸಿದ್ದು" ಎಂದು ಹೇಳಿದರು. "ಇಂದಿರಾ ಗಾಂಧಿ ಅವರ ಕಾಲದಲ್ಲಿ ಸಂವಿಧಾನಕ್ಕೆ ಜಾತ್ಯತೀತ ಎಂಬ ಪದವನ್ನು ಸೇರ್ಪಡೆ ಮಾಡಲಾಯಿತು" ಎಂದು ಹೇಳಿದರು. *ಸಿದ್ದರಾಮಯ್ಯ ಅವರು ಅಹಿಂದ ಸಭೆ ಮಾಡಿದರೆ ತಪ್ಪೇನಿದೆ?* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ನಾಯಕರ ಸಭೆ ನಡೆಸಿರುವ ಬಗ್ಗೆ ಕೇಳಿದಾಗ, "ಅದರಲ್ಲಿ ತಪ್ಪೇನಿದೆ? ತಪ್ಪೇನೂ ಇಲ್ಲವಲ್ಲ" ಎಂದು ಹೇಳಿದರು. ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಒಟ್ಟಿಗೆ ಇದ್ದಾರೆ ಎಂಬ ಚರ್ಚೆಗೆ, "ಒಂದೇ ಪಕ್ಷದವರು ಚೆನ್ನಾಗಿಯೇ ಇದ್ದಾರೆ. ನೀವು ಯಾಕೆ ತಲೆಕೆಡಿಸಿಕೊಳ್ಳುತ್ತೀರಿ?" ಎಂದರು. *ಲಿಖಿತವಾಗಿ ಭರವಸೆ ನೀಡಲು ಸಾಧ್ಯವಿಲ್ಲ* ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ಬೇಡಿಕೆಗಳ ಬಗ್ಗೆ ಕೇಳಿದಾಗ, "ಆಶಾ ಕಾರ್ಯಕರ್ತರ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ ಇದೆ. ಆದರೆ, ಅವರು ಕೇಳುತ್ತಿರುವ ಎಲ್ಲ ಭರವಸೆಗಳನ್ನು ಲಿಖಿತವಾಗಿ ನೀಡಲು ಸಾಧ್ಯವಿಲ್ಲ" ಎಂದು ಸ್ಪಷ್ಟಪಡಿಸಿದರು. "ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಮೇಲೂ ಒತ್ತಡ ಹೇರಬೇಕು. ರಾಜ್ಯ ಸರ್ಕಾರವೊಂದನ್ನೇ ಗುರಿಯಾಗಿಸಿಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ. ಲಿಖಿತವಾಗಿ ಭರವಸೆ ಕೊಡಿ ಎಂದು ಕೇಳುತ್ತಿದ್ದಾರೆ. ಯಾವ ಸರ್ಕಾರಕ್ಕೂ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತವಾಗಿ ಬರೆದುಕೊಡಲು ಸಾಧ್ಯವಿಲ್ಲ" ಎಂದರು. "ಆಶಾ ಕಾರ್ಯಕರ್ತೆಯರ ಸೇವೆಯನ್ನು ಸರ್ಕಾರ ಗೌರವಿಸುತ್ತದೆ. ಬೇರೆ ಕೆಲವು ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಇರುವ ಸೌಲಭ್ಯಗಳಿಗಿಂತ ಕರ್ನಾಟಕದಲ್ಲಿ ಉತ್ತಮ ರೀತಿಯಲ್ಲಿ ಗೌರವ ನೀಡಲಾಗುತ್ತಿದೆ ಎಂದು ಹೇಳಿದರು. "ಅವರು ನಮ್ಮ ಹೆಣ್ಣುಮಕ್ಕಳು. ಆಶಾ ಕಾರ್ಯಕರ್ತೆಯರ ವ್ಯವಸ್ಥೆಯನ್ನು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಆರಂಭಿಸಲಾಯಿತು. ಅವರ ಶ್ರಮದ ಬಗ್ಗೆ ನಮಗೆ ಗೌರವವಿದೆ. ಕೆಲವು ಪ್ರೋತ್ಸಾಹಧನಗಳ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಅವರ ಬಗ್ಗೆ ನನಗೂ ಸಹಾನುಭೂತಿಯಿದೆ. ಈ ವಿಚಾರವಾಗಿ ನಾನು ಈಗಾಗಲೇ ಅವರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಪ್ರತಿಭಟನೆ ನಡೆಸಿದವರ ನೋವು, ಸಮಸ್ಯೆ ಮತ್ತು ಬೇಡಿಕೆಗಳು ಸರ್ಕಾರಕ್ಕೆ ಅರ್ಥವಾಗಿವೆ" ಎಂದು ತಿಳಿಸಿದರು. ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ರಾಜಕೀಯ ಬೆರೆಸಲಾಗುತ್ತಿದೆ. ಕೆಲವರು ರಾಜಕೀಯಕ್ಕಾಗಿ ಈ ವಿಚಾರವನ್ನು ಬಳಸಿಕೊಳ್ಳುತ್ತಿದ್ದಾರೆ. ಒಬ್ಬೊಬ್ಬರಾಗಿ ಬರುವುದು, ಸಿನಿಮಾ ಕ್ಷೇತ್ರದವರನ್ನು ಕಳುಹಿಸುವುದು, ಕಾರ್ಯಕರ್ತರನ್ನು ಕಳುಹಿಸುವುದು ಹೀಗೆ ಹಲವು ಬೆಳವಣಿಗೆಗಳು ನಡೆಯುತ್ತಿವೆ. ನನಗೆ ಇವೆಲ್ಲವೂ ಗೊತ್ತಿದೆ. ಅವರ ಹೋರಾಟವನ್ನು ರಾಜಕೀಯಗೊಳಿಸಬಾರದು. ಸರ್ಕಾರವನ್ನು ಎದುರಿಸುವ ಹೋರಾಟ ಎಂಬ ಭಾವನೆ ಮೂಡಬಾರದು" ಎಂದು ಹೇಳಿದರು. "ಆಶಾ ಕಾರ್ಯಕರ್ತೆಯರಿಗೆ ಕೆಲಸಕ್ಕೆ ಮರಳುವಂತೆ ಮನವಿ ಮಾಡಿದ್ದೇನೆ. ಸರ್ಕಾರ ಅವರ ಬೇಡಿಕೆಗಳನ್ನು ನಿರ್ಲಕ್ಷಿಸಿಲ್ಲ" ಎಂದರು. ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಅನ್ಫಿಟ್ ಆಗಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಟೀಕೆಯ ಬಗ್ಗೆ ಕೇಳಿದಾಗ, "ಫಿಟ್ ಮಾಡಿಕೊಳ್ಳೋಣ. ಅವರೇ ಫಿಟ್ ಮಾಡಲಿ" ಎಂದು ತಿರುಗೇಟು ನೀಡಿದರು. ಆಶಾ ಕಾರ್ಯಕರ್ತೆಯರಿಗೆ ಅಧಿವೇಶನದಲ್ಲಿ ಗುಡ್ನ್ಯೂಸ್ ನೀಡುವುದಾಗಿ ಹೇಳಿದ್ದೀರಿ ಎಂದು ಕೇಳಿದಾಗ, "ಅದೆಲ್ಲವನ್ನೂ ಚರ್ಚೆ ಮಾಡಬೇಕು. ಮಾಧ್ಯಮದವರು ಹೇಳುತ್ತಾರೆ ಎಂಬ ಕಾರಣಕ್ಕೆ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ನಾನು ಅವರೊಂದಿಗೆ ಮಾತನಾಡಿದ್ದೇನೆ" ಎಂದರು.1
- ಬಂಜಾರ, ಭೋವಿ, ಕೊರಮ, ಕೊರಚ ಸಮುದಾಯದ ಒಕ್ಕೂಟದಿಂದ ನ.30ರಂದು ಬೃಹತ್ ಪ್ರತಿಭಟನೆ ಯಲಬುರ್ಗಾ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣದಲ್ಲಿ ಅವೈಜ್ಞಾನಿಕ ಹಾಗೂ ಸಮರ್ಪಕ ಅಧ್ಯಯನವಿಲ್ಲದ ಕ್ರಮ ಅನುಸರಿಸಲಾಗಿದೆ ಎಂದು ಆರೋಪಿಸಿ, ಬಂಜಾರ, ಭೋವಿ, ಕೊರಮ ಹಾಗೂ ಕೊರಚ ಸಮುದಾಯ ಗಳ ಒಕ್ಕೂಟದಿಂದ ನ.30ರಂದು ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ ಎಂದು ಗೋರಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಬಳೂಟಗಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾಲ್ಕು ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಜನಸಂಖ್ಯೆಯ ವಾಸ್ತವಿಕ ಸ್ಥಿತಿಗತಿಗಳನ್ನು ಸಮರ್ಪಕವಾಗಿ ಪರಿಗಣಿಸದೆ ಒಳಮೀಸಲಾತಿ ವರ್ಗೀಕರಣ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದರಿಂದ ಈಗಾಗಲೇ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಸಮುದಾಯಗಳಿಗೆ ಮತ್ತಷ್ಟು ಅನ್ಯಾಯವಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲಿ ಸರ್ಕಾರದ ಗಮನ ಸೆಳೆಯಲು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದರು. ಪಟ್ಟಣದ ಸೇವಾಲಾಲ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು, ನಾಲ್ಕು ಸಮುದಾಯಗಳ ಮುಖಂಡರು, ಮಹಿಳೆಯರು, ಯುವಕರು ಹಾಗೂ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಯಾವುದೇ ಒಂದು ಸಮುದಾಯದ ಹೋರಾಟವಲ್ಲ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟವಾಗಿದೆ. ಹೀಗಾಗಿ ಎಲ್ಲರೂ ಪಕ್ಷಾತೀತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣವು ಕೇವಲ ಅಂಕಿ-ಅಅಶಗಳ ಆಧಾರದಲ್ಲಿ ನಡೆಯಬಾರದು. ಆಯಾ ಸಮುದಾಯಗಳ ಜನಸಂಖ್ಯೆ, ಸಾಮಾಜಿಕ ಹಿಂದುಳಿದಿರುವಿಕೆ, ಶೈಕ್ಷಣಿಕ ಪ್ರಗತಿ, ಆರ್ಥಿಕ ಪರಿಸ್ಥಿತಿ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ದೊರೆತಿರುವ ಪ್ರಾತಿನಿಧ್ಯ ಸೇರಿದಂತೆ ಸಮಗ್ರ ಅಂಶಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಬೇಕು. ಸಮುದಾಯಗಳ ವಾಸ್ತವಿಕ ಪರಿಸ್ಥಿತಿಯನ್ನು ಅರಿತು ನ್ಯಾಯಸಮ್ಮತ ನಿರ್ಧಾರ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾಧ್ಯತೆಯಿದೆ. ಹೀಗಾಗಿ ಸರ್ಕಾರ ಸಮುದಾಯಗಳ ವಾಸ್ತವ ಸ್ಥಿತಿಗತಿಗಳನ್ನು ಅರಿತು ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಅಧಿವೇಶನಕ್ಕೂ ಮುನ್ನ ಸಮಸ್ಯೆ ಬಗೆಹರಿಸಲು ಆಗ್ರಹ: ರಾಜ್ಯ ಸರ್ಕಾರ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ನಾಲ್ಕು ಸಮುದಾಯಗಳ ಮುಖಂಡ ರೊಂದಿಗೆ ಚರ್ಚಿಸಬೇಕು. ಯಾವುದೇ ಸಮುದಾ ಯದ ಹಕ್ಕುಗಳಿಗೆ ಧಕ್ಕೆಯಾಗದಂತೆ ವೈಜ್ಞಾನಿಕ ಹಾಗೂ ಪಾರದರ್ಶಕ ಅಧ್ಯಯನ ನಡೆಸಿ ನ್ಯಾಯಸಮ್ಮತ ನಿರ್ಧಾರ ಕೈಗೊಳ್ಳಬೇಕು ಎಂದು ಎಚ್ಚರಿಸಿದರು. ನಾಲ್ಕು ಸಮುದಾಯಗಳ ಹಕ್ಕು ಮತ್ತು ಮುಂದಿನ ಪೀಳಿಗೆಯ ಭವಿಷ್ಯವನ್ನು ಕಾಪಾಡುವ ಉದ್ದೇಶದಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಪಕ್ಷಾತೀತವಾಗಿ ಭಾಗವಹಿಸಬೇಕು. ಹಕ್ಕುಗಳ ರಕ್ಷಣೆಗಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತಿದಾಗ ಮಾತ್ರ ಸರ್ಕಾರದ ಗಮನ ಸೆಳೆಯಲು ಸಾಧ್ಯ. ಆದ್ದರಿಂದ ನ.30ರಂದು ನಡೆಯುವ ಪ್ರತಿಭಟನೆ ಯನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಸಹಕರಿಸಬೇಕು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪರಸಪ್ಪ ನಾಯಕ, ಲೋಕೇಶ ಭಜಂತ್ರಿ, ದುರ್ಗಪ್ಪ ವಡ್ಡರ, ಗಣೇಶ ವಡ್ಡರ, ದೇವಪ್ಪ ಪೂಜಾರ, ವಂಕಟೇಶ ಕಾರಭಾರಿ, ವೆಂಕಟೇಶ ನಾಯಕ, ಪ್ರವೀಣ ವಡ್ಡರ, ನಾಗರಾಜ ನಾಯಕ, ಲಕ್ಷ್ಮಣ ಸೇರಿದಂತೆ ನಾಲ್ಕು ಸಮುದಾಯಗಳ ಮುಖಂಡರು ಹಾಜರಿದ್ದರು.1
- ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ' ನಡೆಸುತ್ತಿರುವ ನಿರಂತರ ಧರಣಿ ಸ್ಥಳಕ್ಕೆ ಸಚಿವರು, ಸಂಸದರು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಭೇಟಿ! ಅಧಿವೇಶನ ಮುಗಿದ ತಕ್ಷಣ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ, ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕೊಂಡೊಯ್ಯುತ್ತೇವೆ" — ಸಚಿವ ಶ್ರೀ ಶಿವರಾಜ್ ತಂಗಡಗಿ ಭರವಸೆ ಕೊಪ್ಪಳ: ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಬಲ್ಡೋಟಾ ಸಮೂಹದ (MSPL) ಪೆಲ್ಲೆಟ್ ಘಟಕದಿಂದ ಉಂಟಾಗುತ್ತಿರುವ ತೀವ್ರ ವಾಯುಮಾಲಿನ್ಯ ಹಾಗೂ ಕಂದು ಧೂಳನ್ನು ವಿರೋಧಿಸಿ 'ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ' ನಡೆಸುತ್ತಿರುವ ನಿರಂತರ ಹೋರಾಟದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶಿವರಾಜ್ ತಂಗಡಗಿ, ಕೊಪ್ಪಳ ಶಾಸಕ ಶ್ರೀ ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಚರ್ಚೆ ನಡೆಸಿದರು. "ಬಲ್ಡೋಟಾ ತಡೆಯಿರಿ, ಬೇಕೇ ಬೇಕು ನ್ಯಾಯ ಬೇಕು, ಶುದ್ಧ ಗಾಳಿ ಮತ್ತು ಶುದ್ಧ ಪರಿಸರ ನಮ್ಮ ಹಕ್ಕು" ಎಂಬ ಘೋಷಣೆಗಳೊಂದಿಗೆ ಪ್ರತಿಭಟನಾಕಾರರು ಜನಪ್ರತಿನಿಧಿಗಳನ್ನು ಬರಮಾಡಿಕೊಂಡರು. ಧರಣಿ ಸ್ಥಳದ ಪ್ರಮುಖ ಮುಖ್ಯಾಂಶಗಳು: ಹೋರಾಟಗಾರರ ಮನವಿ ಮತ್ತು ಅಳಲು: 2011ರಿಂದ ಕಾರ್ಯಾಚರಣೆ ನಡೆಸುತ್ತಿರುವ ಎಂಎಸ್ಪಿಎಲ್ (MSPL) ಪೆಲ್ಲೆಟ್ ಘಟಕದ ಕಂದು ಧೂಳು, ದಟ್ಟ ಹೊಗೆ ಮತ್ತು ವಿಷಾನಿಲವು ಕೊಪ್ಪಳ ಜಿಲ್ಲಾ ಕೇಂದ್ರದ ಸುಮಾರು ಶೇ. 40ರಷ್ಟು ಭಾಗಕ್ಕೆ ಹರಡುತ್ತಿದೆ. ಇದರಿಂದ ಜನರ ಆರೋಗ್ಯ ಮತ್ತು ಪರಿಸರಕ್ಕೆ ತೀವ್ರ ಹಾನಿಯಾಗುತ್ತಿದ್ದು, ಕೂಡಲೇ ಮಾಲಿನ್ಯ ತಡೆಗಟ್ಟಬೇಕೆಂದು ಹೋರಾಟ ಸಮಿತಿಯವರು ಮನವಿ ಪತ್ರ ಓದಿ ಒತ್ತಾಯಿಸಿದರು. ಜನಪ್ರತಿನಿಧಿಗಳ ಬೆಂಬಲ: ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಅವರು, "ನಾನಾಗಲಿ, ಶಾಸಕರಾಗಲಿ, ಲೋಕಸಭಾ ಸದಸ್ಯರಾಗಲಿ—ನಮ್ಮ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ನಿಮ್ಮ ಪರವಾಗಿದ್ದೇವೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿರುವ ಸಾಕಷ್ಟು ಉದಾಹರಣೆಗಳು ನಿಮ್ಮ ಕಣ್ಣೆದುರಿಗಿವೆ," ಎಂದು ಸ್ಪಷ್ಟಪಡಿಸಿದರು. ಡಿಸಿ ಕಚೇರಿಯಲ್ಲಿ ಸಭೆ ಹಾಗೂ ಸಿಎಂ ಭೇಟಿಯ ಭರವಸೆ: "ಬೆಳಗಾವಿ/ನಗರ ಅಧಿವೇಶನ ಮುಗಿದ ತಕ್ಷಣ, ಕಾನೂನು ತೊಡಕುಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಮ್ಮೆಲ್ಲರನ್ನೂ ಕರೆದು ಮಹತ್ವದ ಸಭೆ ನಡೆಸಲಾಗುವುದು. ಅಂದೇ ದಿನಾಂಕ ನಿಗದಿಪಡಿಸಿ, ನಿಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕರೆದುಕೊಂಡು ಹೋಗುವ ನಿರ್ಧಾರ ಕೈಗೊಳ್ಳುತ್ತೇವೆ," ಎಂದು ಸಚಿವರು ಭರವಸೆ ನೀಡಿದರು. ಸಚಿವರು ಹಾಗೂ ಅಧಿಕಾರಿಗಳ ಭೇಟಿಯ ಸಂದರ್ಭದಲ್ಲಿ ಇತರೆ ಸ್ಥಳೀಯ ವಿಷಯಗಳ ಬಗ್ಗೆ ಚರ್ಚಿಸಲು ಮುಂದಾದಾಗ, ಹೋರಾಟಗಾರರು ಸದ್ಯಕ್ಕೆ ಪರಿಸರ ಮಾಲಿನ್ಯ ಮತ್ತು ಬಲ್ಡೋಟಾ ವಿಷಯವನ್ನು ಮಾತ್ರ ಕೇಂದ್ರೀಕರಿಸುವಂತೆ ಒತ್ತಾಯಿಸಿದರು. ಕೊಪ್ಪಳದ ಪರಿಸರ ಹಾಗೂ ಜನರ ಆರೋಗ್ಯ ರಕ್ಷಣೆಗಾಗಿ ನಡೆಯುತ್ತಿರುವ 'ಬಲ್ಡೋಟಾ ಹಠಾವೋ' ಹೋರಾಟದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶಿವರಾಜ್ ತಂಗಡಗಿ, ಸಂಸದರು, ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಹೋರಾಟಗಾರರೊಂದಿಗೆ ಚರ್ಚೆ ನಡೆಸಿದರು. ಜನರ ಹಿತಾಸಕ್ತಿ ಕಾಪಾಡುವುದಾಗಿ ಭರವಸೆ ನೀಡಿದ್ದಾರೆ. 📌 ಕೊಪ್ಪಳ ಉಳಿಸಿ ಹೋರಾಟಕ್ಕೆ ಕೈಜೋಡಿಸಿ, ಈ ಸುದ್ದಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ! #KoppalBachavo #BaldotaHatao #KoppalNews #ShivarajTangadagi #RaghavendraHitnal #SaveKoppal #ShuruNews #DigitalNews #KannadaNews1
- ಕುಷ್ಟಗಿ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ದರ ಏರಿಕೆ ಖಂಡಿಸಿ ಪ್ರತಿಭಟನೆ. ಕುಷ್ಟಗಿ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಕಾಂಗ್ರೆಸ್ ಸರಕಾರ ದರ ಏರಿಕೆ ಖಂಡಿಸಿ ಶಾಸಕ ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಲ್ಲಯ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಮೆರವಣಿಗೆ ನಡೆಯಿತು. ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಜಿಪಂ ಸದಸ್ಯ ಫಕೀರಪ್ಪ ಚಳಗೇರಿ, ಕೆ ಮಹೇಶ್, ಶರಣು ತಳ್ಳಿಕೇರಿ ಸೇರಿದಂತೆ ಅನೇಕರು ಇದ್ದರು.1
- ಕುಷ್ಟಗಿಯಲ್ಲಿ ಭಕ್ತಶ್ರೇಷ್ಠ ಕನಕದಾಸರ 539ನೇ ಜಯಂತಿ ಆಚರಣೆ ಕಂಚಿನ ಪ್ರತಿಮೆಗೆ ಶಾಸಕ ದೊಡ್ಡನಗೌಡ ಪಾಟೀಲರಿಂದ ವಿಶೇಷ ಪೂಜೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿ ಕುಷ್ಟಗಿ:* ಇಲ್ಲಿನ ಭಕ್ತಶ್ರೇಷ್ಠ ಕನಕದಾಸ ಸರ್ಕಲ್ನಲ್ಲಿ ಭಕ್ತಶ್ರೇಷ್ಠ ಕನಕದಾಸರ 539ನೇ ಜಯಂತಿ ಅಂಗವಾಗಿ ಶ್ರೀ ಕನಕದಾಸರ ಕಂಚಿನ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ನಮನ ಸಲ್ಲಿಸಲಾಯಿತು. ಶಾಸಕ ದೊಡ್ಡನಗೌಡ ಪಾಟೀಲ ಅವರು ಕಂಚಿನ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಭಕ್ತಿ ಮೆರೆದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ ಅವರು, "ಭಕ್ತಶ್ರೇಷ್ಠ ಕನಕದಾಸರು ಒಬ್ಬ ಮಹಾನ್ ಸಂತ, ನಾಯಕ. ಇವರು ಒಂದೇ ಜಾತಿಗೆ ಸೀಮಿತರಾಗದೆ, ತಮ್ಮ ಕೀರ್ತನೆಗಳ ಮೂಲಕ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ನೀಡಿದವರು. ಇವರ ಒಂದು ತತ್ವವನ್ನು ಸರ್ವರು ಅಳವಡಿಸಿಕೊಂಡಾಗಲೇ ಇವರ ಜಯಂತಿಗೆ ಅರ್ಥ ಬರುತ್ತದೆ" ಎಂದು ಹೇಳಿದರು. ನಂತರ ಮಾತನಾಡಿದ ದಿಶಾ ಸಮಿತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ದೊಡ್ಡಬಸವನಗೌಡ ಪಾಟೀಲ ಬಯ್ಯಾಪೂರ ಅವರು, "ಕನಕದಾಸರು ಹಿಂದುಳಿದ ವರ್ಗದಲ್ಲಿ ಜನಿಸಿದರು. ಅವರು ಸರ್ವರಿಗೂ ಒಳಿತನ್ನು ಬಯಸಿ, ಕುಲದ ನೆಲೆಯನ್ನು ತೊಳೆದುಹಾಕಿ, ಭಕ್ತಿಯಲ್ಲಿ ಶಕ್ತಿಯನ್ನು ತುಂಬಿ, ನಾನು-ನನ್ನದು ಎಂಬುದನ್ನು ತೊಳೆದು, ಸರ್ವರು ಸಮಾನರು, ಸರ್ವರು ಒಂದಾಗಿ ಬಾಳಿ ಬದುಕಬೇಕು ಎಂದು ತೋರಿಸಿಕೊಟ್ಟವರು. ಆದ್ದರಿಂದ ಅವರ ಆದರ್ಶದ ಮಾರ್ಗವನ್ನು ನಾವುಗಳು ಅಳವಡಿಸಿಕೊಂಡು, ಪ್ರತಿಯೊಬ್ಬರು ಕನಕದಾಸರ ತತ್ವಗಳನ್ನು ಪಾಲನೆ ಮಾಡಬೇಕು" ಎಂದು ತಿಳಿಸಿದರು. ತದನಂತರ ಮಾತನಾಡಿದ ಮಾಜಿ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಂಡಳಿ ಅಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಪಕ್ಷದ ಮುಖಂಡ ಶರಣು ತಳ್ಳಿಕೇರಿ ಅವರು, "ನಮ್ಮಲ್ಲಿ ಜಾತಿ ವ್ಯವಸ್ಥೆ ತೊಲಗಬೇಕಾದರೆ, ನಮ್ಮ ಭಾರತದ ಸಂಸ್ಕೃತ ದೇಶದಲ್ಲಿ ಅನೇಕ ಮಹಾನ್ ನಾಯಕರು ಮಾನವ ಕುಲದ ಒಳಿತಿಗಾಗಿ ಸರ್ವರು ಒಂದಾಗಿ ಬಾಳಬೇಕು, ಜಾತಿ ವ್ಯವಸ್ಥೆ ತೊಲಗಬೇಕು ಎಂದು ಹೇಳಿದ್ದಾರೆ. ಇವತ್ತು ಕನಕದಾಸರು ಕೂಡ ಒಂದೇ ಜಾತಿಗೆ ಸೀಮಿತವಾದವರಲ್ಲ. ಅವರ ಮಾರ್ಗದರ್ಶನ ನಮಗೆ ಬಹಳ ಮುಖ್ಯವಾಗಿದೆ. ಇವತ್ತು ಕನಕದಾಸರ ತತ್ವಗಳು ಅವಶ್ಯ" ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಕೆ. ಮಹೇಶ, ಮಾಜಿ ಪುರಸಭೆ ಸದಸ್ಯ ಕಲ್ಲೇಶ ತಾಳದ್, ಹಾಲುಮತ ಸಮಾಜದ ಹಿರಿಯ ಮುಖಂಡರಾದ ಮಾಹಾಲಿಂಗಪ್ಪ ದೋಟಿಹಾಳ, ಹನಮಂತಪ್ಪ ಚೌಡ್ಕಿ, ಸತ್ಯಪ್ಪ ರಾಜೂರು, ಸಂಗಪ್ಪ ಪಂಚಮ್, ಹನಮಂತಪ್ಪ ಹಳ್ಳಿ, ಹನಮಂತಪ್ಪ ವಡಗೇರಿ, ಹನಮಂತಪ್ಪ ಕತ್ತಿ, ಶಿವಕುಮಾರ ಕತ್ತಿ, ಸಂಗನಗೌಡ ಜೈನರ್, ಜಂಬಣ್ಣ ಬೂದರ್, ಯಮನೂರು ಸಂಗಂಟಿ, ದೇವಪ್ಪ ಕಟ್ಟಿಹೊಲ, ಕೊಳ್ಳಪ್ಪ ಬೂದರ್, ಮಂಜುನಾಥ ನಾಲಗಾರ, ಶೈಲಾಜ ಬಾಗಲಿ, ಲಕ್ಷ್ಮಿ ಗಲ್ಲಗೋನಾಳ, ಶರಣಪ್ಪ ಕತ್ತಿ, ನಾಗರಾಜ ಕೋರಿ, ಬಸವರಾಜ ಗದ್ದಿ, ಯಲ್ಲಪ್ಪ ಬಾಗಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.4
- ಸಂವಿಧಾನದ ಆಶಯಗಳು ಪ್ರತಿಯೊಬ್ಬರ ಬದುಕಿನ ಮಾರ್ಗದರ್ಶಿಯಾಗಲಿ: ಡಾ. ಶಿವರಾಜ ಗುರಿಕಾರ್,ಎಸ್ಕೆಎನ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಾಗೂ ವಿಶೇಷ ಉಪನ್ಯಾಸ ಗಂಗಾವತಿ: "ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಹಕ್ಕುಗಳನ್ನು ಕಲ್ಪಿಸಿದೆ. ಸಂವಿಧಾನದ ಆಶಯಗಳನ್ನು ಅರಿತು, ಅದರ ಮೌಲ್ಯಗಳನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ" ಎಂದು ಎಸ್ಕೆಎನ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಶಿವರಾಜ ಗುರಿಕಾರ್ ಹೇಳಿದರು.ನಗರದ ಎಸ್ಕೆಎನ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂಬೇಡ್ಕರ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಅಪಾರ ಜ್ಞಾನ, ದೂರದೃಷ್ಟಿ ಹಾಗೂ ಕಾನೂನು ಪರಿಣತಿಯನ್ನು ಸ್ಮರಿಸಿದ ಅವರು, ಜಾತಿ, ಧರ್ಮ, ಅಸ್ಪೃಶ್ಯತೆಯಂತಹ ಸಾಮಾಜಿಕ ಅಸಮಾನತೆಗಳನ್ನು ಮೀರಿ ಪ್ರತಿಯೊಬ್ಬ ಪ್ರಜೆಗೂ ಗೌರವಯುತ ಬದುಕು ಕಲ್ಪಿಸುವ ವ್ಯವಸ್ಥೆಯನ್ನು ಸಂವಿಧಾನ ರೂಪಿಸಿದೆ ಎಂದರು. ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ಹೋರಾಟ ಹಾಗೂ ತ್ಯಾಗವನ್ನು ನೆನೆದು ಭಾವುಕರಾದರು.ಅಧ್ಯಕ್ಷತೆ ವಹಿಸಿದ್ದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಂಜುನಾಥ ಕೆ.ಎಚ್. ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮಹತ್ವ ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ವಿವರಿಸಿದರು. ವಿಶೇಷ ಉಪನ್ಯಾಸ ನೀಡಿದ ಭಾರತ ಸಂವಿಧಾನ ವಿಭಾಗದ ಸಂಯೋಜಕ ಫಣಿರಾಜ್, ಸಂವಿಧಾನದ ಮೂಲ ಆಶಯಗಳು, ಕಾನೂನು ವ್ಯವಸ್ಥೆಯ ಬೆಳವಣಿಗೆ ಹಾಗೂ ಸಂವಿಧಾನದ ಮಾರ್ಗದರ್ಶನದಲ್ಲಿ ದೇಶ ನಡೆದು ಬಂದ ಹಾದಿಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.ಇದಕ್ಕೂ ಮುನ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಉಪನ್ಯಾಸಕ ಪೋಲೇಶವಲಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.ವೇದಿಕೆಯಲ್ಲಿ ಉಪನ್ಯಾಸಕರಾದ ಕುಶ್ ರಾಥೋಡ್, ಇತಿಹಾಸ ವಿಭಾಗದ ಡಾ. ಮಲ್ಲಿಕಾ, ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪವನಕುಮಾರ ಗುಂಡೂರು, ವಿದ್ಯಾರ್ಥಿ ಪ್ರತಿನಿಧಿ ಉಮಾ ಉಪಸ್ಥಿತರಿದ್ದರು. ಉಪನ್ಯಾಸಕ ಶಿವರಾಜ ಜಮಖಂಡಿ ನಿರೂಪಿಸಿದರು. ವಿದ್ಯಾರ್ಥಿನಿ ಉಮಾ ವಂದಿಸಿದರು. ಉಪನ್ಯಾಸಕ ತಾಯಪ್ಪ ಎಂ. ಸೇರಿದಂತೆ ವಿವಿಧ ವಿಭಾಗಗಳ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.1