ಬರ ಘೋಷಣೆ ಜೊತೆಗೆ ಪರಿಹಾರ ಘೋಷಣೆಯಾಗಲಿ' ಶಾಸಕರು ಕೆಲಸ ಮಾಡಲಿಲ್ಲವೇ ಅಥವಾ ಸರಕಾರದಲ್ಲಿ ಅವರ ಮಾತಿಗೆ ಬೆಲೆ ಇಲ್ಲವೆ? ಸಿವಿಸಿ ಪ್ರಶ್ನೆ ಕೊಪ್ಪಳ: ಕೊಪ್ಪಳ ಜಿಲ್ಲೆಯಿಂದ ಇಬ್ಬರಿಗೆ ಸಚಿವ ಸ್ಥಾನ ಸಿಕ್ಕರೂ ಜಿಲ್ಲೆಯಲ್ಲಿ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಂಗಳವಾರ ಹೇಳಿದರು. ಕೊಪ್ಪಳವನ್ನು ಬರಪೀಡಿತ ಪಟ್ಟಿಗಳ ತಾಲೂಕಿಗೆ ಸೇರಿಸಬೇಕೆಂದು ಆಗ್ರಹಿಸಿ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ 'ನ್ಯಾಯಕ್ಕಾಗಿ ನಡಿಗೆ' ಪಾದಯಾತ್ರೆಯ ಅಂಗವಾಗಿ ಅಳವಂಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. "ನಮ್ಮ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಸಿಗಲಿಲ್ಲ. ಕೊಪ್ಪಳ ಜಿಲ್ಲೆಯಿಂದ ಇಬ್ಬರು ಸಚಿವರಾದ ನಂತರ ಕೊಪ್ಪಳದ ಸಮಸ್ಯೆಗಳು ಕೊನೆಗೊಳ್ಳುತ್ತವೆ ಎಂದುಕೊಂಡಿದ್ದೆ. ಇಲ್ಲಿನ ಪರಸ್ಥಿತಿ ನೋಡಿದರೆ ಸಚಿವರಿಲ್ಲದ ರಾಯಚೂರು ಜಿಲ್ಲೆ ಕೊಪ್ಪಳ ಜಿಲ್ಲೆಗಿಂತ ಎಷ್ಟೋ ಪಾಲು ಉತ್ತಮ ಎಂದು ಅನ್ನಿಸುತ್ತಿದೆ. ಇಬ್ಬರು ಸಚಿವರು ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ್ ರೈತರ ಸಮಸ್ಯೆಗಳ ಕುರಿತು ಮಾತೇ ಆಡುವುದಿಲ್ಲ ಎಂದರೆ ಹೇಗೆ? ಯಾರು ಉದ್ಧಾರಕ್ಕಾಗಿ ಸಚಿವರಾಗಿದ್ದೀರಿ? ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರದ ಮೇಲೆ ಅವಲಂಬಿತವಾದರೆ ಹೇಗೆ? ನೀವು ಮಾಡಬೇಕಾದ ಕನಿಷ್ಠ ಕೆಲಸವನ್ನು ಮಾಡುತ್ತಿಲ್ಲವೆಂದರೆ ಹೇಗೆ?" ಎಂಬ ಪ್ರಶ್ನೆಗಳ ಸುರಿಮಳೆಗೈದರು. "ಸಮ್ಮಿಶ್ರ ಸರ್ಕಾರದಲ್ಲಿ ಈಗಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ನಾನು ಸಚಿವರಾಗಿದ್ದೆವು. ಅಂದಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರೈತರ ಸಮಸ್ಯೆ ಅರಿತು ಕೇಂದ್ರದ ಮೇಲೆ ಅವಲಂಬಿತರಾಗದೆ 25,000 ಕೋಟಿ ರೂಪಾಯಿ ಬೆಳೆ ಸಾಲ ಮನ್ನಾ ಮಾಡಲಿಲ್ಲವೇ? ಕೇಂದ್ರದ ಕಡೆ ಕೈ ತೋರಿಸಿದರೆ? ಸುಮಾರು 200 ತಾಲೂಕಗಳಲ್ಲಿ ಬರ ಇದೆ ಎಂದು ಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಘೋಷಣೆ ಏಕೆ ಮಾಡುತ್ತಿಲ್ಲ? ಕಾಂಗ್ರೆಸ್ ಸಚಿವರ ಮತ್ತು ಶಾಸಕರ ಕೈಯಲ್ಲಿ ಕೆಲಸ ಮಾಡಲು ಆಗುತ್ತಿಲ್ಲವೆಂದರೆ ರಾಜೀನಾಮೆ ಕೊಟ್ಟು ಮನೆಯಲ್ಲಿ ಕುಳಿತುಕೊಳ್ಳಲಿ. ಬರ ಘೋಷಣೆಯ ಜೊತೆಗೆ ಪರಿಹಾರ ಘೋಷಣೆಯು ಆಗಬೇಕು," ಎಂದು ಒತ್ತಾಯಿಸಿದರು. "ಕೊಪ್ಪಳ ತಾಲೂಕಿನಲ್ಲಿ ನೆಲ ಬರಡಾಗಿ ಬೆಳೆಗಳು ಸಂಪೂರ್ಣವಾಗಿ ಒಣಗಿರುವುದು ಸರಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನಾಲ್ಕೈದು ಹನಿಗಳನ್ನು ಮಳೆ ಎಂದು ಪರಿಗಣಿಸಿ ಕೊಪ್ಪಳವನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗಿಟ್ಟಿರುವುದು ಎಷ್ಟು ಸರಿ? ಕಾಂಗ್ರೆಸ್ ಸರಕಾರ ಹೆಲಿಕಾಪ್ಟರ್ ನಲ್ಲಿ ಬರ ಪರಿಶೀಲನೆ ನಡೆಸುವುದನ್ನು ನಿಲ್ಲಿಸಬೇಕು. ರೈತರ ಜಮೀನುಗಳಿಗೆ ತೆರಳಬೇಕು. ವೆಂಕಟರಾವ್ ನಾಡಗೌಡ, ನಾನು ಮತ್ತು ಸಿ ವಿ ಚಂದ್ರಶೇಖರ್ ಅವರು ಮಳೆಗಾಗಿ ಹಾಗೂ ರೈತರಿಗಾಗಿ ಪಾದಯಾತ್ರೆ ಮಾಡಿದರೆ ಅಧಿಕಾರಕ್ಕಾಗಿ ಇಲ್ಲಿನ ಶಾಸಕರು ಬೆಂಗಳೂರು ಮತ್ತು ದೆಹಲಿಗೆ ಪದೇ ಪದೇ ಪಾದಯಾತ್ರೆ ಮಾಡಿದ್ದಾರೆ," ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಆರೋಪಿಸಿದರು. ನಿಯಮಾವಳಿಗಳನ್ನು ಮೀರಿ ವಿಶೇಷ ಅನುದಾನ ತಂದು ಪರಿಹಾರ ಕಾಮಗಾರಿ ಕೈಗೊಳ್ಳಬಹುದಲ್ಲವೇ? ಆ ಸಾಮರ್ಥ್ಯ ನಿಮ್ಮಲ್ಲಿ ಇಲ್ಲವೇ? ನಿಮ್ಮ ಮಾತಿಗೆ ಸರಕಾರದಲ್ಲಿ ಬೆಲೆ ಇಲ್ಲವೇ? ಕೊಪ್ಪಳವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲು ನೀವು ಕೈಗೊಂಡ ಕ್ರಮಗಳೇನು? ನೀವು ಯಾವುದೇ ಕ್ರಮ ಕೈಗೊಳ್ಳಲಿಲ್ಲವೋ ಅಥವಾ ಸರಕಾರ ನಿಮ್ಮ ಸಲಹೆಯನ್ನು ತಿರಸ್ಕರಿಸಿತೊ? ಬರದ ಪಟ್ಟಿಗೆ ಕೊಪ್ಪಳವನ್ನು ಹೊರಗಿಟ್ಟ ನಂತರವೂ ನೀವು ಮೌನಕ್ಕೆ ಏಕೆ ಶರಣಾದಿರಿ? ಮಂತ್ರಿಯಾಗಲು ಪದೇ ಪದೇ ದೆಹಲಿ ಬೆಂಗಳೂರನ್ನು ಸುತ್ತಿದ ನೀವು ಬರದ ಸಮಸ್ಯೆಗಳನ್ನು ನಿವಾರಿಸಲು ಎಷ್ಟು ಸಲ ಬೆಂಗಳೂರು ಮತ್ತು ದೆಹಲಿಗೆ ಪ್ರಯಾಣಿಸಿದಿರಿ? ಎಂದ ಸಿ ವಿ ಚಂದ್ರಶೇಖರ್ ಶಾಸಕರಿಗೆ ಪ್ರಶ್ನಿಸಿದರು. ಪಾದಯಾತ್ರೆ ಬೆಳಗಟ್ಟಿಯ ಕನಕರಾಯ ದೇವಸ್ಥಾನ - ಮುಸ್ತಫೋ ಖಾದ್ರಿ ದರ್ಗಾ ಆವರಣದಲ್ಲಿ ವಿದ್ಯುಕ್ತವಾಗಿ ಆರಂಭಗೊಂಡಿತು. ರಘುನಾಥನಹಳ್ಳಿ, ಅಳವಂಡಿ, ಕಂಪ್ಲಿ ಹಾಗೂ ಮೊರನಾಳ ಮೂಲಕ ಸಾಗಿತು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ಈಶಪ್ಪ ಮಾದಿನೂರ, ಶರಣಪ್ಪ ಜಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬರ ಘೋಷಣೆ ಜೊತೆಗೆ ಪರಿಹಾರ ಘೋಷಣೆಯಾಗಲಿ' ಶಾಸಕರು ಕೆಲಸ ಮಾಡಲಿಲ್ಲವೇ ಅಥವಾ ಸರಕಾರದಲ್ಲಿ ಅವರ ಮಾತಿಗೆ ಬೆಲೆ ಇಲ್ಲವೆ? ಸಿವಿಸಿ ಪ್ರಶ್ನೆ ಕೊಪ್ಪಳ: ಕೊಪ್ಪಳ ಜಿಲ್ಲೆಯಿಂದ ಇಬ್ಬರಿಗೆ ಸಚಿವ ಸ್ಥಾನ ಸಿಕ್ಕರೂ ಜಿಲ್ಲೆಯಲ್ಲಿ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಂಗಳವಾರ ಹೇಳಿದರು. ಕೊಪ್ಪಳವನ್ನು ಬರಪೀಡಿತ ಪಟ್ಟಿಗಳ ತಾಲೂಕಿಗೆ ಸೇರಿಸಬೇಕೆಂದು ಆಗ್ರಹಿಸಿ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ 'ನ್ಯಾಯಕ್ಕಾಗಿ ನಡಿಗೆ' ಪಾದಯಾತ್ರೆಯ ಅಂಗವಾಗಿ ಅಳವಂಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. "ನಮ್ಮ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಸಿಗಲಿಲ್ಲ. ಕೊಪ್ಪಳ ಜಿಲ್ಲೆಯಿಂದ ಇಬ್ಬರು ಸಚಿವರಾದ ನಂತರ ಕೊಪ್ಪಳದ ಸಮಸ್ಯೆಗಳು ಕೊನೆಗೊಳ್ಳುತ್ತವೆ ಎಂದುಕೊಂಡಿದ್ದೆ. ಇಲ್ಲಿನ ಪರಸ್ಥಿತಿ ನೋಡಿದರೆ ಸಚಿವರಿಲ್ಲದ ರಾಯಚೂರು ಜಿಲ್ಲೆ ಕೊಪ್ಪಳ ಜಿಲ್ಲೆಗಿಂತ ಎಷ್ಟೋ ಪಾಲು ಉತ್ತಮ ಎಂದು ಅನ್ನಿಸುತ್ತಿದೆ. ಇಬ್ಬರು ಸಚಿವರು ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ್ ರೈತರ ಸಮಸ್ಯೆಗಳ ಕುರಿತು ಮಾತೇ ಆಡುವುದಿಲ್ಲ ಎಂದರೆ ಹೇಗೆ? ಯಾರು ಉದ್ಧಾರಕ್ಕಾಗಿ ಸಚಿವರಾಗಿದ್ದೀರಿ? ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರದ ಮೇಲೆ ಅವಲಂಬಿತವಾದರೆ ಹೇಗೆ? ನೀವು ಮಾಡಬೇಕಾದ ಕನಿಷ್ಠ ಕೆಲಸವನ್ನು
ಮಾಡುತ್ತಿಲ್ಲವೆಂದರೆ ಹೇಗೆ?" ಎಂಬ ಪ್ರಶ್ನೆಗಳ ಸುರಿಮಳೆಗೈದರು. "ಸಮ್ಮಿಶ್ರ ಸರ್ಕಾರದಲ್ಲಿ ಈಗಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ನಾನು ಸಚಿವರಾಗಿದ್ದೆವು. ಅಂದಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರೈತರ ಸಮಸ್ಯೆ ಅರಿತು ಕೇಂದ್ರದ ಮೇಲೆ ಅವಲಂಬಿತರಾಗದೆ 25,000 ಕೋಟಿ ರೂಪಾಯಿ ಬೆಳೆ ಸಾಲ ಮನ್ನಾ ಮಾಡಲಿಲ್ಲವೇ? ಕೇಂದ್ರದ ಕಡೆ ಕೈ ತೋರಿಸಿದರೆ? ಸುಮಾರು 200 ತಾಲೂಕಗಳಲ್ಲಿ ಬರ ಇದೆ ಎಂದು ಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಘೋಷಣೆ ಏಕೆ ಮಾಡುತ್ತಿಲ್ಲ? ಕಾಂಗ್ರೆಸ್ ಸಚಿವರ ಮತ್ತು ಶಾಸಕರ ಕೈಯಲ್ಲಿ ಕೆಲಸ ಮಾಡಲು ಆಗುತ್ತಿಲ್ಲವೆಂದರೆ ರಾಜೀನಾಮೆ ಕೊಟ್ಟು ಮನೆಯಲ್ಲಿ ಕುಳಿತುಕೊಳ್ಳಲಿ. ಬರ ಘೋಷಣೆಯ ಜೊತೆಗೆ ಪರಿಹಾರ ಘೋಷಣೆಯು ಆಗಬೇಕು," ಎಂದು ಒತ್ತಾಯಿಸಿದರು. "ಕೊಪ್ಪಳ ತಾಲೂಕಿನಲ್ಲಿ ನೆಲ ಬರಡಾಗಿ ಬೆಳೆಗಳು ಸಂಪೂರ್ಣವಾಗಿ ಒಣಗಿರುವುದು ಸರಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನಾಲ್ಕೈದು ಹನಿಗಳನ್ನು ಮಳೆ ಎಂದು ಪರಿಗಣಿಸಿ ಕೊಪ್ಪಳವನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗಿಟ್ಟಿರುವುದು ಎಷ್ಟು ಸರಿ? ಕಾಂಗ್ರೆಸ್ ಸರಕಾರ ಹೆಲಿಕಾಪ್ಟರ್ ನಲ್ಲಿ ಬರ ಪರಿಶೀಲನೆ ನಡೆಸುವುದನ್ನು ನಿಲ್ಲಿಸಬೇಕು. ರೈತರ ಜಮೀನುಗಳಿಗೆ ತೆರಳಬೇಕು. ವೆಂಕಟರಾವ್ ನಾಡಗೌಡ, ನಾನು ಮತ್ತು ಸಿ ವಿ ಚಂದ್ರಶೇಖರ್ ಅವರು ಮಳೆಗಾಗಿ ಹಾಗೂ ರೈತರಿಗಾಗಿ ಪಾದಯಾತ್ರೆ
ಮಾಡಿದರೆ ಅಧಿಕಾರಕ್ಕಾಗಿ ಇಲ್ಲಿನ ಶಾಸಕರು ಬೆಂಗಳೂರು ಮತ್ತು ದೆಹಲಿಗೆ ಪದೇ ಪದೇ ಪಾದಯಾತ್ರೆ ಮಾಡಿದ್ದಾರೆ," ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಆರೋಪಿಸಿದರು. ನಿಯಮಾವಳಿಗಳನ್ನು ಮೀರಿ ವಿಶೇಷ ಅನುದಾನ ತಂದು ಪರಿಹಾರ ಕಾಮಗಾರಿ ಕೈಗೊಳ್ಳಬಹುದಲ್ಲವೇ? ಆ ಸಾಮರ್ಥ್ಯ ನಿಮ್ಮಲ್ಲಿ ಇಲ್ಲವೇ? ನಿಮ್ಮ ಮಾತಿಗೆ ಸರಕಾರದಲ್ಲಿ ಬೆಲೆ ಇಲ್ಲವೇ? ಕೊಪ್ಪಳವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲು ನೀವು ಕೈಗೊಂಡ ಕ್ರಮಗಳೇನು? ನೀವು ಯಾವುದೇ ಕ್ರಮ ಕೈಗೊಳ್ಳಲಿಲ್ಲವೋ ಅಥವಾ ಸರಕಾರ ನಿಮ್ಮ ಸಲಹೆಯನ್ನು ತಿರಸ್ಕರಿಸಿತೊ? ಬರದ ಪಟ್ಟಿಗೆ ಕೊಪ್ಪಳವನ್ನು ಹೊರಗಿಟ್ಟ ನಂತರವೂ ನೀವು ಮೌನಕ್ಕೆ ಏಕೆ ಶರಣಾದಿರಿ? ಮಂತ್ರಿಯಾಗಲು ಪದೇ ಪದೇ ದೆಹಲಿ ಬೆಂಗಳೂರನ್ನು ಸುತ್ತಿದ ನೀವು ಬರದ ಸಮಸ್ಯೆಗಳನ್ನು ನಿವಾರಿಸಲು ಎಷ್ಟು ಸಲ ಬೆಂಗಳೂರು ಮತ್ತು ದೆಹಲಿಗೆ ಪ್ರಯಾಣಿಸಿದಿರಿ? ಎಂದ ಸಿ ವಿ ಚಂದ್ರಶೇಖರ್ ಶಾಸಕರಿಗೆ ಪ್ರಶ್ನಿಸಿದರು. ಪಾದಯಾತ್ರೆ ಬೆಳಗಟ್ಟಿಯ ಕನಕರಾಯ ದೇವಸ್ಥಾನ - ಮುಸ್ತಫೋ ಖಾದ್ರಿ ದರ್ಗಾ ಆವರಣದಲ್ಲಿ ವಿದ್ಯುಕ್ತವಾಗಿ ಆರಂಭಗೊಂಡಿತು. ರಘುನಾಥನಹಳ್ಳಿ, ಅಳವಂಡಿ, ಕಂಪ್ಲಿ ಹಾಗೂ ಮೊರನಾಳ ಮೂಲಕ ಸಾಗಿತು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ಈಶಪ್ಪ ಮಾದಿನೂರ, ಶರಣಪ್ಪ ಜಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
- ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು. ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು. ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು. ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು. 3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು. ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್ (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು. *ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.1
- ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ನಮಸ್ಕಾರ ಬಂಧುಗಳೇ... ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ! ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ. ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ! ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ. ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು1
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ *ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಐತಿಹಾಸಿಕ ಸರ್ಕಾರಿ ಮೇನ್ ಬಾಯ್ಸ್ ಸ್ಕೂಲ್ ಕ್ಷೇಮಾಭಿವೃದ್ಧಿಗಾಗಿ ತಾವು ಯಾವುದೇ ಹಂತದ ಕಾನೂನಾತ್ಮಕ ಹೋರಾಟಕ್ಕೆ , ಹಾಗೂ ಎಲ್ಲಾ ರೀತಿಯ ತ್ಯಾಗ ಬಲಿದಾನಕ್ಕೆ ಸಿದ್ಧರಿರುವುದಾಗಿ ಹೋರಾಟಗಾರರು ಘೋಷಿಸಿದ್ದಾರೆ. ಅದೇ ರೀತಿಯಾಗಿ ಸರ್ಕಾರಿ ಶಾಲಾಭಿವೃದ್ಧಿಗಾಗಿ , ತಾವು ಸದಾ ಭದ್ಧರಾಗಿರುವುದಾಗಿ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ನುಡಿದಿದ್ದಾರೆ. ಪತ್ರಕರ್ತರೊಂದಿಗೆ ಹೋರಾಟಗಾರರಾದ ರಾಘವೇಂದ್ರರವರು ಮಾತನಾಡಿದ್ದು , ಮೇನ್ ಬಾಯ್ಸ್ ಸ್ಕೂಲ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ನಿರ್ಮಾಣಮಾಗಿದ್ದು. ಕೆಲ ಪಟ್ಟ ಭದ್ರ ಹಿತಾಸಕ್ತಿಗಳ ಕುತಂತ್ರದಿಂದಾಗಿ , ನಿರಂತರವಾಗಿ ಶೋಷಣೆಗೆ ನಿರ್ಲಕ್ಷ್ಯಕ್ಕೆ ಗುರಿಯಾಗುತ್ತಿದೆ. ಆ ಅವ್ಯವಸ್ಥೆಯ ವಿರುದ್ಧ ತಾವು ಮೌನ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ , ಶಾಲಾಕ್ಷೇಮಾಭಿವೃದ್ಧಿ ಹೋರಾಟಗಾರರು. ಎಸ್ಡಿ ಎಮ್ಸಿ ಮೇಲುಸ್ತುವಾರಿ ಸಮಿತಿ ರಾಜ್ಯ ಉಪಾಧ್ಯಕ್ಷರಾದ , ಗುನ್ನಳ್ಳಿ ರಾಘವೇಂದ್ರ ನುಡಿದಿದ್ದಾರೆ. ಅವರು ಶಾಲಾ ಆವರಣದಲ್ಲಿ , ಯಾವುದೇ ಖಾಸಗೀ ಕಾರ್ಯಕ್ರಮ ಜರುಗುವುದನ್ನು ವಿರೋಧಿಸುತ್ತಿದ್ದು. ಮತ್ತು ಶಾಲಾವರಣ ಕೆಲ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ನಲುಗುತ್ತಿದೆ , ಇದರಿಂದಾಗಿ ಶಾಲಾವಾತಾರಣದಲ್ಲಿ ಶಾಂತಿಗೆ ಭಂಗವಾಗಲಿದೆ. ಇದರ ವಿರುದ್ಧ ತಾವು ಮೌನ ಪ್ರತಿಭಟನೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಶಾಸಕರ ಮನವಿಯ ಮೇರೆಗೆ ಹೋರಾಟವನ್ನು ತಾವು , ತಾತ‍್ಕಾಲಿಕ ಸಮಯ ಮಾತ್ರ ಹಿಂಪಡೆಯುತ್ತಿದ್ದು. ಗಣೇಶೋತ್ಸವ ನಂತರದಲ್ಲಿ ಹೋರಾಟ ಮುಂದುವರೆಯಲಿದ್ದು , ಬೀದಿಗಿಳಿದು ಹೋರಾಟಗಳನ್ನು ನಡೆಸಲಾಗುವುದು. ಶಾಲೆ ಸ್ಥಳಾಂತರಕ್ಕೆ ಯಾವುದೇ ಕಾರಣಕ್ಕೆ ಅವಕಾಶ ಕೊಡೋದಿಲ್ಲ , ಶಾಲಾ ಆವರಣ ಉಳಿವಿಗಾಗಿ ಕ್ಷೇಮಾಭಿವೃದ್ಧಿಗೆ ತಾವು ಎಂತಹ ತ್ಯಾಗ ಬಲಿದಾನಕ್ಕೂ ಸಿದ್ಧರಿರುವುದಾಗಿ ಅವರು ಘೋಷಿಸಿದರು. ಶಾಲೆಯ ಉಳಿವಿಗಾಗಿ ಶಾಲಾ ಆವರಣ ಉಳಿವಿಗಾಗಿ , ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘಟನೆ ಮಾಡಿ ಜಾಗೃತಿ ಆಂದೊಲನ ಹೋರಾಟಗಳನ್ನಿ ಹಮ್ಮಿಕೊಳ್ಳಲಾಗುವುದು. ಮತ್ತು ಶಾಲಾ ಕ್ಷೇಮಾಭಿವೃದ್ಧಿಗಾಗಿ , ನ್ಯಾಯಲಯದ ಮೊರೆ ಹೋಗಲಾಗುವುದು. ತಾವು ಕಾನೂನಾತ್ಮಕವಾಗಿ ಹೋರಾಡಲು ಸರ್ವಸಿದ್ಧವಿದ್ದು , ಎಲ್ಲಾ ಹಂತದ ಹೋರಾಟಕ್ಕೆ ಪೂರ್ವ ತಯಾರಿ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಅಭಿವೃದ್ಧಿ ನೆಪದಲ್ಲಿ ಶಾಲಾ ಮೂಲ ಆಕರಕ್ಕೆ ಯಾವುದೇ ದಕ್ಕೆಯಾಗಬಾರದು , ಅದು ಕಾನೂನು ಬಾಹೀರವಾಗಲಿದ್ದು. ಆಭಿವೃದ್ಧಿಯ ಹರಿಕಾರರಾದ ಶಾಸಕರ ಮನವಿಗೆ ಮಾನ್ಯತೆ ನೀಡಿ , ಅವರ ಅಭಿವೃದ್ಧಿ ಪರನಿಲುವಿನ ಮೇಲೆ ವಿಶ್ವಾಸವಿಟ್ಟು ತಾವು ಮೌನ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದೆಂದು ಅವರು ತಿಳಿಸಿದರು. ಹಿಂದೆ ಶಾಸಕರು ಸಮ್ಮುಖದಲ್ಲಿ ಪ್ರತಿಭಟನೆ ಮಾಡುತ್ತಿರುವವರನ್ನುದ್ಧೇಶಿಸಿ ಮಾತನಾಡಿದ ಶಾಸಕರು , ಹೋರಾಟಗಾರರಲ್ಲಿರುವ ಶಾಲಾಕಾಳಜಿಯನ್ನು ಪ್ರಶಂಸಿದರು. ಮತ್ತು ಶೀಘ್ರವೇ ಶಾಲೆಯ ಕ್ಷೇಮಾಭಿವೃದ್ಧಿಗೆ ಚಾಲನೆ ನೀಡಲಾಗುವುದು. ಸರ್ಕಾರಿ ಶಾಲೆಗಳ ಕ್ಷೇಮಾಭಿವೃದ್ಧಿಗೆ ತಾವು ಸದಾ ಬದ್ಧರಿರುವುದಾಗಿ , ಶಾಸಕರು ಹೋರಾಟಗಾರರಿಗೆ ಮನವರಿಕೆ ಮಾಡಿಕೊಟ್ಟರು. ಶಾಲೆಯನ್ನು ಐತಿಹಾಸಿಕ ಶಾಲೆಯನ್ನಾಗಿ ಮಾಡುತ್ತೇನೆಂದು ಭರವಸೆ ನೀಡಿದರು , ಸುಸಜ್ಜಿತವಾದಂತಹ ಗುಣ ಮಟ್ಟದ ಶಿಕ್ಷಣ ಒದಗಿಸುವುದಕ್ಕೆ. ಅಗತ್ಯ ಸೌಕರ್ಯಗಳನ್ನು ಒಸಗಿಸುವುದಾಗಿ ನುಡಿದರು. ಶಾಲೆಯ ಮೂಲ ಆಕಾರಕ್ಕೆ ಧಕ್ಕೆ ತರದೇ ಉನ್ನತೀಕರಿಸಲಾಗುವುದೆಂದು , ಶಾಲಾ ಆವರಣವನ್ನು ಮತ್ತಷ್ಟು ಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದೆಂದು ಶಾಸಕರು ಭರವಸೆ ನೀಡಿದ್ದಾರೆನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಹತ್ತಾರು ಪ್ರಮುಖ ಸಂಘಟನೆಗಳ , ಮುಖಂಡರು ಗಣ್ಯರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4