ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆಯಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ; ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಕನಕಪುರ:ನಗರದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆ (ಟಿ.ಎ.ಪಿ.ಸಿ.ಎಂ.ಎಸ್) ನಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಂಘದ ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಹೇಳಿದರು. ಬುಧವಾರ ನಗರದ ರೈಸ್‍ಮಿಲ್ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ಬಡವರಿಗೆ ನೀಡುವ ಪಡಿತರ ಅಕ್ಕಿ ಮತ್ತು ರಾಗಿಯನ್ನು ಅನಧಿಕೃತವಾಗಿ ಸಂಗ್ರಹಿಸುವುದು ಮತ್ತು ಮಾರಾಟ ಮಾಡುವುದು ಸರ್ಕಾರ ನಿಯಮಗಳ ಪ್ರಕಾರವೇ ಪಡಿತರ ಅಕ್ಕಿಯನ್ನು ಮಾರಾಟ ಮಾಡಲಾಗುತ್ತಿದೆ. ಕೆಲವು ಸಂಘಟನೆಯ ವ್ಯಕ್ತಿಗಳು ದುರುದ್ದೇಶ ಪೂರ್ವಕವಾಗಿ ಪಡಿತರ ಪದಾರ್ಥಗಳ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ನಗರದ ಸಹಕಾರಿ ಸಂಘದ ಗೋಡೌನ್‍ನಿಂದ ಪಡಿತರ ಅಕ್ಕಿ ಹಾಗೂ ರಾಗಿ ಕಳ್ಳ ಸಾಗಣೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಿಕರಣ ನೀಡಿದ ಅವರು, ಪಡಿತರ ಆಹಾರ ಸಾಗಿಸಲು ಸಂಘದ ಸಾಗಾಣಿಕಾ ಲಾರಿಗಳ ಕೊರತೆಯಿಂದ ಪಡಿತರ ಸಾಗಿಸಲು ಸಂಘದ ಆಡಳಿತಾಧಿಕಾರಿಯ ಅನುಮತಿ ಪಡೆದು ಖಾಸಗಿ ಮಿನಿ ಲಾರಿಯಲ್ಲಿ ಪಡಿತರ ಆಹಾರ ಸಾಗಿಸಲಾಗುತ್ತಿತ್ತು, ಈ ಸಂದರ್ಭದಲ್ಲಿ ಆರ್.ಟಿ.ಐ. ಕಾರ್ಯಕರ್ತನೆಂದು ಹೇಳಿಕೊಂಡು ಬಂದ ಕೆ.ಆರ್.ಸುರೇಶ್ ಎಂಬಾತ ಅಕ್ರಮವಾಗಿ ಗೋದಾಮು ಬಳಿ ಬಂದು ಸರಕು ತುಂಬಿದ್ದ ವಾಹನಗಳನ್ನು ತಡೆದು, ಕೆಲ ಸಂಘಟೆನಯ ಮುಖಂಡರುಗಳಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಸುಳ್ಳು ಮಾಹಿತಿ ನೀಡಿ, ಸಂಘಕ್ಕೆ ಹಾಗೂ ಆಡಳಿತ ಮಂಡಳಿಗೆ ಕೆಟ್ಟ ಹೆಸರು ಬರಲಿ ಎಂದು ಸಂಚು ನಡೆಸಿರುವುದಾಗಿ ಆರೋಪಿಸಿದರು. ಉಪಾಧ್ಯಕ್ಷ ಚಿಕ್ಕಣ್ಣ ಮಾತನಾಡಿ, ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವುದಕ್ಕೆ ಸರ್ಕಾರ ಹಲವಾರು ಕಠಿಣ ಕಾನೂನು ತಂದಿದ್ದಾರೆ. ನಮ್ಮ ಸಂಸ್ಥೆಯಿಂದ ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿರುವುದಿಲ್ಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ತರುಲು ನಡೆಸಿರುವ ಹುನ್ನಾರ ಇದಾಗಿದೆ. ಸ್ಥಳೀಯವಾಗಿ ಹಿಂದೂ ಸಂಘಟನೆಯ ಹೆಸರಿನ ಕೆ.ಆರ್.ಸುರೇಶ್ ಹಾಗೂ ಸ್ಥಳೀಯ ಪತ್ರಕರ್ತರಿಬ್ಬರು ಸೇರಿದ ನಮ್ಮ ಸಂಸ್ಥೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಿರಾಕರಿಸಿದ ಹಿನ್ನಲೆಯಲ್ಲಿ ನಮ್ಮ ಸಹಕಾರಿ ಸಂಘದ ತೇಜೋವಧೆ ಮಾಡಲು ಮುಂದಾಗಿದ್ದಾರೆ. ಮುಂದೆ ಇವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು. ನಿರ್ದೇಶಕರಾದ ದೇವರಾಜು, ಶಿವಣ್ಣ ನವರು ಮಾತನಾಡಿ, ನಮ್ಮ ಆಡಳಿತ ಮಂಡಳಿಯ ಅಧಿಕಾರಾವಧಿಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದರು. ನಿರ್ದೇಶಕರಾದ ಶ್ರೀನಿವಾಸ್, ನಾಗರಾಜು, ನಾಗೇಶ್, ಸಿದ್ದರಾಜು, ಪುಟ್ಟಸ್ವಾಮಯ್ಯ ಗೋಷ್ಠಿಯಲ್ಲಿ ಹಾಜರಿದ್ದರು.

- ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆಯಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ; ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಕನಕಪುರ:ನಗರದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆ (ಟಿ.ಎ.ಪಿ.ಸಿ.ಎಂ.ಎಸ್) ನಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಂಘದ ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಹೇಳಿದರು. ಬುಧವಾರ ನಗರದ ರೈಸ್‍ಮಿಲ್ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ಬಡವರಿಗೆ ನೀಡುವ ಪಡಿತರ ಅಕ್ಕಿ ಮತ್ತು ರಾಗಿಯನ್ನು ಅನಧಿಕೃತವಾಗಿ ಸಂಗ್ರಹಿಸುವುದು ಮತ್ತು ಮಾರಾಟ ಮಾಡುವುದು ಸರ್ಕಾರ ನಿಯಮಗಳ ಪ್ರಕಾರವೇ ಪಡಿತರ ಅಕ್ಕಿಯನ್ನು ಮಾರಾಟ ಮಾಡಲಾಗುತ್ತಿದೆ. ಕೆಲವು ಸಂಘಟನೆಯ ವ್ಯಕ್ತಿಗಳು ದುರುದ್ದೇಶ ಪೂರ್ವಕವಾಗಿ ಪಡಿತರ ಪದಾರ್ಥಗಳ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ನಗರದ ಸಹಕಾರಿ ಸಂಘದ ಗೋಡೌನ್‍ನಿಂದ ಪಡಿತರ ಅಕ್ಕಿ ಹಾಗೂ ರಾಗಿ ಕಳ್ಳ ಸಾಗಣೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಿಕರಣ ನೀಡಿದ ಅವರು, ಪಡಿತರ ಆಹಾರ ಸಾಗಿಸಲು ಸಂಘದ ಸಾಗಾಣಿಕಾ ಲಾರಿಗಳ ಕೊರತೆಯಿಂದ ಪಡಿತರ ಸಾಗಿಸಲು ಸಂಘದ ಆಡಳಿತಾಧಿಕಾರಿಯ ಅನುಮತಿ ಪಡೆದು ಖಾಸಗಿ ಮಿನಿ ಲಾರಿಯಲ್ಲಿ ಪಡಿತರ ಆಹಾರ ಸಾಗಿಸಲಾಗುತ್ತಿತ್ತು, ಈ ಸಂದರ್ಭದಲ್ಲಿ ಆರ್.ಟಿ.ಐ. ಕಾರ್ಯಕರ್ತನೆಂದು ಹೇಳಿಕೊಂಡು ಬಂದ ಕೆ.ಆರ್.ಸುರೇಶ್ ಎಂಬಾತ ಅಕ್ರಮವಾಗಿ ಗೋದಾಮು ಬಳಿ ಬಂದು ಸರಕು ತುಂಬಿದ್ದ ವಾಹನಗಳನ್ನು ತಡೆದು, ಕೆಲ ಸಂಘಟೆನಯ ಮುಖಂಡರುಗಳಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಸುಳ್ಳು ಮಾಹಿತಿ ನೀಡಿ, ಸಂಘಕ್ಕೆ ಹಾಗೂ ಆಡಳಿತ ಮಂಡಳಿಗೆ ಕೆಟ್ಟ ಹೆಸರು ಬರಲಿ ಎಂದು ಸಂಚು ನಡೆಸಿರುವುದಾಗಿ ಆರೋಪಿಸಿದರು. ಉಪಾಧ್ಯಕ್ಷ ಚಿಕ್ಕಣ್ಣ ಮಾತನಾಡಿ, ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವುದಕ್ಕೆ ಸರ್ಕಾರ ಹಲವಾರು ಕಠಿಣ ಕಾನೂನು ತಂದಿದ್ದಾರೆ. ನಮ್ಮ ಸಂಸ್ಥೆಯಿಂದ ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿರುವುದಿಲ್ಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ತರುಲು ನಡೆಸಿರುವ ಹುನ್ನಾರ ಇದಾಗಿದೆ. ಸ್ಥಳೀಯವಾಗಿ ಹಿಂದೂ ಸಂಘಟನೆಯ ಹೆಸರಿನ ಕೆ.ಆರ್.ಸುರೇಶ್ ಹಾಗೂ ಸ್ಥಳೀಯ ಪತ್ರಕರ್ತರಿಬ್ಬರು ಸೇರಿದ ನಮ್ಮ ಸಂಸ್ಥೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಿರಾಕರಿಸಿದ ಹಿನ್ನಲೆಯಲ್ಲಿ ನಮ್ಮ ಸಹಕಾರಿ ಸಂಘದ ತೇಜೋವಧೆ ಮಾಡಲು ಮುಂದಾಗಿದ್ದಾರೆ. ಮುಂದೆ ಇವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು. ನಿರ್ದೇಶಕರಾದ ದೇವರಾಜು, ಶಿವಣ್ಣ ನವರು ಮಾತನಾಡಿ, ನಮ್ಮ ಆಡಳಿತ ಮಂಡಳಿಯ ಅಧಿಕಾರಾವಧಿಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದರು. ನಿರ್ದೇಶಕರಾದ ಶ್ರೀನಿವಾಸ್, ನಾಗರಾಜು, ನಾಗೇಶ್, ಸಿದ್ದರಾಜು, ಪುಟ್ಟಸ್ವಾಮಯ್ಯ ಗೋಷ್ಠಿಯಲ್ಲಿ ಹಾಜರಿದ್ದರು.1
- ಸರ್ಕಾರಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸೇವೆಗೆ 1,000 ಹಣ ಕೇಳಿರುವ ಬಗ್ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದ ಗ್ರಾಮದ ಬಡ ಕುಟುಂಬದ ರೈತಾಪಿ ಜನರ ಮೇಲೆ ಚಿಕಿತ್ಸೆ ನೀಡಿ ಸರಿಪಡಿಸಬೇಕಾದ ವೈದ್ಯರು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ಬರೆದು ಉಚಿತ ಆಂಬುಲೆನ್ಸ್ ಸೇವೆ ಇದ್ದರೂ ಕೂಡ ವಯಸ್ಸಾದ ರೋಗಿಗಳ ಬಳಿ ಸಾವಿರ ರೂಪಾಯಿಗಳ ಸುಲಿಗೆ ಮಾಡಲು ಮುಂದಾಗಿದ್ದಾರೆ.1
- ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ1
- ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ. citynextnews2471
- ಪುನೀತ್ ಕೆರೆಹಳ್ಳಿ ಹಾಗೂ ಅವರ ಬೆಂಬಲಿಗರ ವಿರುದ್ಧ ದೂರು ದಾಖಲು ಪುನೀತ್ ಕೆರೆಹಳ್ಳಿ ಹಾಗೂ ಅವರ ಬೆಂಬಲಿಗರ ವಿರುದ್ಧ ದೂರು ದಾಖಲು1
- ಪಕ್ಷದಲ್ಲಿ ಎಲ್ಲರೂ ಶಿಸ್ತಿನ ಸಿಪಾಯಿಗಳು: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದಂತಿಗಳಿವೆಯಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ಬುಧವಾರ ಈ ರೀತಿ ಪ್ರತಿಕ್ರಿಯಿಸಿದರು.1
- ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.1
- ಬೈಕ್ ವೀಲಿಂಗ್ ಪುಂಡರ ಹಾವಳಿ ಕಗ್ಗಲಹಳ್ಳಿ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ವೀಲಿಂಗ್; ಪ್ರಯಾಣಿಕರ ಮೊಬೈಲ್‌ನಲ್ಲಿ ದೃಶ್ಯ ಸೆರೆ ಕನಕಪುರ: ಕನಕಪುರ ರಸ್ತೆಯ ಕಗ್ಗಲಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೀಲಿಂಗ್ ಮಾಡುವ ಪುಂಡರ ಹಾವಳಿ ಮತ್ತೆ ಹೆಚ್ಚಾಗಿದೆ. ಸೋಮನಹಳ್ಳಿ ಟೋಲ್‌ನಿಂದ ಹಾರೋಹಳ್ಳಿ ಕಡೆಗೆ ತೆರಳುವ ಮಾರ್ಗದಲ್ಲಿ ಕೆಲ ಯುವಕರು ಬೈಕ್‌ಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ಸಂಚರಿಸಿರುವ ದೃಶ್ಯಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಹನ ಸಂಚಾರ ಹೆಚ್ಚಿರುವ ಮುಖ್ಯ ರಸ್ತೆಯಲ್ಲೇ ವೀಲಿಂಗ್ ನಡೆಸುತ್ತಿರುವುದರಿಂದ ಇತರ ವಾಹನ ಸವಾರರು ಹಾಗೂ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತವಾಗಿದೆ. ವೀಲಿಂಗ್ ವೇಳೆ ನಿಯಂತ್ರಣ ತಪ್ಪಿದರೆ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಕಳವಳಗೊಂಡಿದ್ದಾರೆ. ಪೊಲೀಸರು ಹಲವು ಬಾರಿ ಜಾಗೃತಿ ಮೂಡಿಸಿ, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಂಡರೂ ವೀಲಿಂಗ್ ಹಾವಳಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಮುಖ್ಯ ರಸ್ತೆಗಳಲ್ಲಿ ಅಪಾಯಕಾರಿ ವೀಲಿಂಗ್ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂಬುದು ವಾಹನ ಸವಾರರ ಆಗ್ರಹವಾಗಿದೆ1