logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದೇಶಾದ್ಯಂತ ಉಚಿತ ಊಟ ಮತ್ತು ವಸತಿಯೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಜವಾಹರ ನವೋದಯ ವಿದ್ಯಾಲಯಗಳಲ್ಲಿ (ಜೆಎನ್‌ವಿ) 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನವೋದಯ ವಿದ್ಯಾಲಯ ಸಮಿತಿಯು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ ಹಾಗೂ ನವೆಂಬರ್ 28ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಇಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು 12ನೇ ತರಗತಿಯವರೆಗೂ ತಮ್ಮ ವ್ಯಾಸಂಗವನ್ನು ಮುಂದುವರಿಸಬಹುದು. ಇದರೊಂದಿಗೆ 9ನೇ ಹಾಗೂ 11ನೇ ತರಗತಿಗಳಿಗೂ ಇಲ್ಲಿ ಪ್ರವೇಶ ನೀಡಲಾಗುತ್ತದೆ. ದೇಶಾದ್ಯಂತ ಒಟ್ಟು 665 ನವೋದಯ ವಿದ್ಯಾಲಯಗಳಿದ್ದು, ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಾಗೂ ವಿಶೇಷ ವಿದ್ಯಾಲಯ ಸೇರಿ ಒಟ್ಟು 31 ಶಾಲೆಗಳಿವೆ. ಈ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಬೋಧಿಸಲಾಗುತ್ತದೆ. ಆನ್‌ಲೈನ್ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಲು ವಿದ್ಯಾರ್ಥಿಯ ಭಾವಚಿತ್ರ, ವಿದ್ಯಾರ್ಥಿ ಮತ್ತು ಪಾಲಕರ ಸಹಿ, ಆಧಾರ್ ಗುರುತಿನ ಸಂಖ್ಯೆ, ವಿದ್ಯಾರ್ಥಿಯ ಅಪಾರ್ ಐಡಿ ಸಂಖ್ಯೆ ಹಾಗೂ ವಾಸಸ್ಥಳದ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ.

3 hrs ago
user_GV NEWS
GV NEWS
ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
3 hrs ago

ದೇಶಾದ್ಯಂತ ಉಚಿತ ಊಟ ಮತ್ತು ವಸತಿಯೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಜವಾಹರ ನವೋದಯ ವಿದ್ಯಾಲಯಗಳಲ್ಲಿ (ಜೆಎನ್‌ವಿ) 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನವೋದಯ ವಿದ್ಯಾಲಯ ಸಮಿತಿಯು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ ಹಾಗೂ ನವೆಂಬರ್ 28ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಇಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು 12ನೇ ತರಗತಿಯವರೆಗೂ ತಮ್ಮ ವ್ಯಾಸಂಗವನ್ನು ಮುಂದುವರಿಸಬಹುದು. ಇದರೊಂದಿಗೆ 9ನೇ ಹಾಗೂ 11ನೇ ತರಗತಿಗಳಿಗೂ ಇಲ್ಲಿ ಪ್ರವೇಶ ನೀಡಲಾಗುತ್ತದೆ. ದೇಶಾದ್ಯಂತ ಒಟ್ಟು 665 ನವೋದಯ ವಿದ್ಯಾಲಯಗಳಿದ್ದು, ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಾಗೂ ವಿಶೇಷ ವಿದ್ಯಾಲಯ ಸೇರಿ ಒಟ್ಟು 31 ಶಾಲೆಗಳಿವೆ. ಈ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಬೋಧಿಸಲಾಗುತ್ತದೆ. ಆನ್‌ಲೈನ್ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಲು ವಿದ್ಯಾರ್ಥಿಯ ಭಾವಚಿತ್ರ, ವಿದ್ಯಾರ್ಥಿ ಮತ್ತು ಪಾಲಕರ ಸಹಿ, ಆಧಾರ್ ಗುರುತಿನ ಸಂಖ್ಯೆ, ವಿದ್ಯಾರ್ಥಿಯ ಅಪಾರ್ ಐಡಿ ಸಂಖ್ಯೆ ಹಾಗೂ ವಾಸಸ್ಥಳದ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ.

More news from ಕರ್ನಾಟಕ and nearby areas
  • ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸುಣಧೋಳ ಗ್ರಾಮದಲ್ಲಿರುವ ಸರ್ಕಾರಿ ಪಶು ಆಸ್ಪತ್ರೆ ಮುಂಭಾಗದಲ್ಲಿ ಸಾರ್ವಜನಿಕರು ಬಹಿರಂಗ ಶೌಚ ಮಾಡುತ್ತಿದ್ದು, ಇದರಿಂದ ಆಸ್ಪತ್ರೆಯ ಸಿಬ್ಬಂದಿ, ಪಶು ವೈದ್ಯಾಧಿಕಾರಿಗಳು ಹಾಗೂ ಜಾನುವಾರುಗಳನ್ನು ಕರೆತರುವ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯ ಮುಂಭಾಗವು ತೀವ್ರ ದುರ್ವಾಸನೆಯಿಂದ ಕೂಡಿದ್ದು, ಚಿಕಿತ್ಸೆಗಾಗಿ ಬರುವ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಒಳಗೆ ಪ್ರವೇಶಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರಿಗೆ ಹಲವು ಬಾರಿ ಮನವಿ ಮಾಡಿದರೂ ಇದುವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪಶು ವೈದ್ಯಾಧಿಕಾರಿಗಳ ಪ್ರಕಾರ, ಆಸ್ಪತ್ರೆಯ ಸುತ್ತ ಕಾಂಪೌಂಡ್ ಗೋಡೆ ನಿರ್ಮಿಸಿ, ಮುಂಭಾಗದಲ್ಲಿ ಗೇಟ್ ಅಳವಡಿಸಿದರೆ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದಾಗಿದೆ. ಪ್ರಸ್ತುತ ನೈರ್ಮಲ್ಯದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಆರೋಗ್ಯಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಆದ್ದರಿಂದ, ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ, ಆಸ್ಪತ್ರೆಯ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲು ಮತ್ತು ಸ್ವಚ್ಛತೆಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿ ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.
    1
    ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸುಣಧೋಳ ಗ್ರಾಮದಲ್ಲಿರುವ ಸರ್ಕಾರಿ ಪಶು ಆಸ್ಪತ್ರೆ ಮುಂಭಾಗದಲ್ಲಿ ಸಾರ್ವಜನಿಕರು ಬಹಿರಂಗ ಶೌಚ ಮಾಡುತ್ತಿದ್ದು, ಇದರಿಂದ ಆಸ್ಪತ್ರೆಯ ಸಿಬ್ಬಂದಿ, ಪಶು ವೈದ್ಯಾಧಿಕಾರಿಗಳು ಹಾಗೂ ಜಾನುವಾರುಗಳನ್ನು ಕರೆತರುವ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯ ಮುಂಭಾಗವು ತೀವ್ರ ದುರ್ವಾಸನೆಯಿಂದ ಕೂಡಿದ್ದು, ಚಿಕಿತ್ಸೆಗಾಗಿ ಬರುವ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಒಳಗೆ ಪ್ರವೇಶಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರಿಗೆ ಹಲವು ಬಾರಿ ಮನವಿ ಮಾಡಿದರೂ ಇದುವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಪಶು ವೈದ್ಯಾಧಿಕಾರಿಗಳ ಪ್ರಕಾರ, ಆಸ್ಪತ್ರೆಯ ಸುತ್ತ ಕಾಂಪೌಂಡ್ ಗೋಡೆ ನಿರ್ಮಿಸಿ, ಮುಂಭಾಗದಲ್ಲಿ ಗೇಟ್ ಅಳವಡಿಸಿದರೆ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದಾಗಿದೆ. ಪ್ರಸ್ತುತ ನೈರ್ಮಲ್ಯದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಆರೋಗ್ಯಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಆದ್ದರಿಂದ, ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ, ಆಸ್ಪತ್ರೆಯ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲು ಮತ್ತು ಸ್ವಚ್ಛತೆಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿ ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.
    user_Shiva Belagavi
    Shiva Belagavi
    Photographer ಅಥಣಿ, ಬೆಳಗಾವಿ, ಕರ್ನಾಟಕ•
    13 hrs ago
  • ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದಲ್ಲಿನ ಎಲ್ಲಾ ಕಾಲುವೆಗಳನ್ನು ಸ್ವಚ್ಛಗೊಳಿಸಿ ನೀರು ಬಿಡಬೇಕೆಂದು ಶಾಸಕ ಲಕ್ಷ್ಮಣ ಸವದಿ ಅವರಿಗೆ ಸೋಮಯ್ಯಾ ಮಠಪತಿ ಆಗ್ರಹಿಸಿದ್ದಾರೆ. ಕ್ಷೇತ್ರದಲ್ಲಿರುವ ಕಾಲುವೆಗಳನ್ನು ಸ್ವಚ್ಛಗೊಳಿಸಿ ನೀರು ಹರಿಸುವ ಕೆಲಸವನ್ನು ಶಾಸಕರೇ ಮಾಡಬೇಕಿತ್ತು ಎಂದು ಸೋಮಯ್ಯಾ ಮಠಪತಿ ಅವರು ಒತ್ತಾಯಿಸಿದ್ದಾರೆ.
    1
    ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದಲ್ಲಿನ ಎಲ್ಲಾ ಕಾಲುವೆಗಳನ್ನು ಸ್ವಚ್ಛಗೊಳಿಸಿ ನೀರು ಬಿಡಬೇಕೆಂದು ಶಾಸಕ ಲಕ್ಷ್ಮಣ ಸವದಿ ಅವರಿಗೆ ಸೋಮಯ್ಯಾ ಮಠಪತಿ ಆಗ್ರಹಿಸಿದ್ದಾರೆ. ಕ್ಷೇತ್ರದಲ್ಲಿರುವ ಕಾಲುವೆಗಳನ್ನು ಸ್ವಚ್ಛಗೊಳಿಸಿ ನೀರು ಹರಿಸುವ ಕೆಲಸವನ್ನು ಶಾಸಕರೇ ಮಾಡಬೇಕಿತ್ತು ಎಂದು ಸೋಮಯ್ಯಾ ಮಠಪತಿ ಅವರು ಒತ್ತಾಯಿಸಿದ್ದಾರೆ.
    user_Santosh Badakambi
    Santosh Badakambi
    Teacher ಅಥಣಿ, ಬೆಳಗಾವಿ, ಕರ್ನಾಟಕ•
    17 hrs ago
  • ಬಾಗಲಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ರಾಜಕೀಯ ನಿಲುವುಗಳನ್ನು ಟೀಕಿಸಿದರು. ರಾಹುಲ್ ಗಾಂಧಿಯವರು ಹಲವು ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯದ ಮುಂದೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ರಾಜಕೀಯ ನಡೆಸಬೇಕು ಎಂದು ಆಗ್ರಹಿಸಿದರು. ಚಂದ್ರಯಾನ ಯೋಜನೆ ಎರಡನೇ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿತು ಎಂದು ನೆನಪಿಸಿದ ಸಚಿವರು, ಆದರೆ ಕಾಂಗ್ರೆಸ್ ಮಾತ್ರ ಚುನಾವಣೆಗಳಲ್ಲಿ ಪದೇಪದೇ ಸೋಲುತ್ತಿದ್ದು, ಜನರು ಅವರ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ಗೆ ಜನರ ಬೆಂಬಲ ಕಡಿಮೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಸರಿಯಾದ ಮಾರ್ಗದಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗದೆ ಆ ಪಕ್ಷವು ಶಾಶ್ವತವಾಗಿ ವಿರೋಧ ಪಕ್ಷದಲ್ಲೇ ಉಳಿಯುವ ಪರಿಸ್ಥಿತಿ ಎದುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
    1
    ಬಾಗಲಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ರಾಜಕೀಯ ನಿಲುವುಗಳನ್ನು ಟೀಕಿಸಿದರು. ರಾಹುಲ್ ಗಾಂಧಿಯವರು ಹಲವು ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯದ ಮುಂದೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ರಾಜಕೀಯ ನಡೆಸಬೇಕು ಎಂದು ಆಗ್ರಹಿಸಿದರು.

ಚಂದ್ರಯಾನ ಯೋಜನೆ ಎರಡನೇ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿತು ಎಂದು ನೆನಪಿಸಿದ ಸಚಿವರು, ಆದರೆ ಕಾಂಗ್ರೆಸ್ ಮಾತ್ರ ಚುನಾವಣೆಗಳಲ್ಲಿ ಪದೇಪದೇ ಸೋಲುತ್ತಿದ್ದು, ಜನರು ಅವರ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ಗೆ ಜನರ ಬೆಂಬಲ ಕಡಿಮೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಸರಿಯಾದ ಮಾರ್ಗದಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗದೆ ಆ ಪಕ್ಷವು ಶಾಶ್ವತವಾಗಿ ವಿರೋಧ ಪಕ್ಷದಲ್ಲೇ ಉಳಿಯುವ ಪರಿಸ್ಥಿತಿ ಎದುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    19 hrs ago
  • ಬೆಳಗಾವಿ ಸಚಿವ ಸತೀಶ್ ಜಾರಹೋಳಿ ಅವರು ಸುದ್ದಿ ಗೋಷ್ಠಿ ನಡೆಸಿದ್ದಾರೆ.
    1
    ಬೆಳಗಾವಿ ಸಚಿವ ಸತೀಶ್ ಜಾರಹೋಳಿ ಅವರು ಸುದ್ದಿ ಗೋಷ್ಠಿ ನಡೆಸಿದ್ದಾರೆ.
    user_ಅಮರ ವಾಹಿನಿ ಕನ್ನಡ news
    ಅಮರ ವಾಹಿನಿ ಕನ್ನಡ news
    ರಾಯಬಾಗ, ಬೆಳಗಾವಿ, ಕರ್ನಾಟಕ•
    16 hrs ago
  • ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮತ್ತೊಮ್ಮೆ ಖಾರವಾಗಿ ಹಾಗೂ ಏಕವಚನದಲ್ಲಿ ಗುಡುಗಿದ್ದಾರೆ. ವಿನಾಕಾರಣ ತಮ್ಮ ವೈಯಕ್ತಿಕ ವಿಷಯಗಳಿಗೆ ಸುಳ್ಳು ಸೇರಿಸಿ ವ್ಯಕ್ತಿತ್ವಕ್ಕೆ ಧಕ್ಕೆ ತಂದರೆ ತಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿರುವ ಅವರು, ನಿನ್ನ ಇತಿಹಾಸ ಮಾತ್ರವಲ್ಲದೆ ನಿನ್ನ ಅಪ್ಪ-ಅಮ್ಮನ ಇತಿಹಾಸವನ್ನು ಜಾಲಾಡಬೇಕಾಗುತ್ತದೆ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ, ತಾವು ಅಡ್ಡ ಮತದಾನ ಮಾಡಿರುವುದಾಗಿ ಹರಡಿರುವ ಆಧಾರ ರಹಿತ ವಿಷಯಗಳನ್ನು ಹಾಗೂ ತಮ್ಮ ಕುಟುಂಬದ ವಿಚಾರಗಳನ್ನು ವಿಜಯೇಂದ್ರ ತನ್ನ ಛೇಲಾಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಈ ಚಾಳಿಯನ್ನು ನಿಲ್ಲಿಸದಿದ್ದರೆ ಆತನ ಜನ್ಮ ಜಾಲಾಡಬೇಕಾಗುತ್ತದೆ ಎಂದು ಎಚ್ಚರಿಸಿದ ಯತ್ನಾಳ, ಈ ಆಟವನ್ನು ಇಲ್ಲಿಗೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಇದೇ ವೇಳೆ ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಯತ್ನಾಳ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನೇ ಡಿ.ಕೆ. ಶಿವಕುಮಾರ ಅವರಿಗೆ ಅನುಕೂಲ ಮಾಡಿಕೊಡಲು ಅಡ್ಡ ಮತದಾನ ಮಾಡಿಸಿ ನೆರವಾಗಿದ್ದಾನೆ ಎಂದಿದ್ದಾರೆ. ಡಿ.ಕೆ. ಶಿವಕುಮಾರ ತನ್ನ ಹಗರಣಗಳನ್ನು ಹೊರಗೆ ಎಳೆಯುತ್ತಾರೆ ಎಂಬ ಭಯದಿಂದ ವಿಜಯೇಂದ್ರನೇ ಕೆಲವು ಶಾಸಕರಿಗೆ ಕಾಂಗ್ರೆಸ್‌ಗೆ ಮತದಾನ ಮಾಡುವಂತೆ ನೋಡಿಕೊಂಡಿದ್ದಾನೆ ಎಂದು ಆರೋಪಿಸಿದ ಅವರು, ವಿಜಯೇಂದ್ರ ಅವರನ್ನು ನಾಲಾಯಕ್ ವ್ಯಕ್ತಿ ಎಂದು ಜರೆದಿದ್ದಾರೆ.
    1
    ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮತ್ತೊಮ್ಮೆ ಖಾರವಾಗಿ ಹಾಗೂ ಏಕವಚನದಲ್ಲಿ ಗುಡುಗಿದ್ದಾರೆ. ವಿನಾಕಾರಣ ತಮ್ಮ ವೈಯಕ್ತಿಕ ವಿಷಯಗಳಿಗೆ ಸುಳ್ಳು ಸೇರಿಸಿ ವ್ಯಕ್ತಿತ್ವಕ್ಕೆ ಧಕ್ಕೆ ತಂದರೆ ತಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿರುವ ಅವರು, ನಿನ್ನ ಇತಿಹಾಸ ಮಾತ್ರವಲ್ಲದೆ ನಿನ್ನ ಅಪ್ಪ-ಅಮ್ಮನ ಇತಿಹಾಸವನ್ನು ಜಾಲಾಡಬೇಕಾಗುತ್ತದೆ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ, ತಾವು ಅಡ್ಡ ಮತದಾನ ಮಾಡಿರುವುದಾಗಿ ಹರಡಿರುವ ಆಧಾರ ರಹಿತ ವಿಷಯಗಳನ್ನು ಹಾಗೂ ತಮ್ಮ ಕುಟುಂಬದ ವಿಚಾರಗಳನ್ನು ವಿಜಯೇಂದ್ರ ತನ್ನ ಛೇಲಾಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಈ ಚಾಳಿಯನ್ನು ನಿಲ್ಲಿಸದಿದ್ದರೆ ಆತನ ಜನ್ಮ ಜಾಲಾಡಬೇಕಾಗುತ್ತದೆ ಎಂದು ಎಚ್ಚರಿಸಿದ ಯತ್ನಾಳ, ಈ ಆಟವನ್ನು ಇಲ್ಲಿಗೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇದೇ ವೇಳೆ ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಯತ್ನಾಳ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನೇ ಡಿ.ಕೆ. ಶಿವಕುಮಾರ ಅವರಿಗೆ ಅನುಕೂಲ ಮಾಡಿಕೊಡಲು ಅಡ್ಡ ಮತದಾನ ಮಾಡಿಸಿ ನೆರವಾಗಿದ್ದಾನೆ ಎಂದಿದ್ದಾರೆ. ಡಿ.ಕೆ. ಶಿವಕುಮಾರ ತನ್ನ ಹಗರಣಗಳನ್ನು ಹೊರಗೆ ಎಳೆಯುತ್ತಾರೆ ಎಂಬ ಭಯದಿಂದ ವಿಜಯೇಂದ್ರನೇ ಕೆಲವು ಶಾಸಕರಿಗೆ ಕಾಂಗ್ರೆಸ್‌ಗೆ ಮತದಾನ ಮಾಡುವಂತೆ ನೋಡಿಕೊಂಡಿದ್ದಾನೆ ಎಂದು ಆರೋಪಿಸಿದ ಅವರು, ವಿಜಯೇಂದ್ರ ಅವರನ್ನು ನಾಲಾಯಕ್ ವ್ಯಕ್ತಿ ಎಂದು ಜರೆದಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    26 min ago
  • ಎಸ್ ಐಆರ್ (SIR) ವಿರುದ್ಧ ಕಾಂಗ್ರೆಸ್ ಅಪಸ್ವರ ಎತ್ತುತ್ತಿರುವುದನ್ನು ವಿಜಯಪುರದಲ್ಲಿ ಸಂಸದ ಗೋವಿಂದ ಕಾರಜೋಳ ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ನಾಯಕರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವುದು ಅಲ್ಪಸಂಖ್ಯಾತರು ಅಥವಾ ಬಡವರ ಹಿತಾಸಕ್ತಿಗಾಗಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಾಯಕ ರಾಹುಲ್ ಗಾಂಧಿ ಅವರ ದ್ವಿಪೌರತ್ವದ ರಹಸ್ಯ ಬಯಲಾಗಬಹುದು ಎಂಬ ಭಯದಿಂದಲೇ ಕಾಂಗ್ರೆಸ್ ಎಸ್ ಐಆರ್ ಅನ್ನು ವಿರೋಧಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರು 1994 ರಿಂದಲೇ ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂದು ದೂರಿದ ಸಂಸದರು, ಭಾರತೀಯ ಕಾನೂನಿನ ಪ್ರಕಾರ ಚುನಾವಣಾ ನಾಮಪತ್ರ ಸಲ್ಲಿಸುವಾಗ ಯಾವುದೇ ವಿದೇಶಿ ಪೌರತ್ವ ಹೊಂದಿಲ್ಲ ಎಂದು ಪ್ರಮಾಣಪತ್ರ ನೀಡಬೇಕಾಗುತ್ತದೆ, ಆದರೆ ರಾಹುಲ್ ಗಾಂಧಿ ಈ ವಿಷಯವನ್ನು ಮುಚ್ಚಿಟ್ಟಿದ್ದಾರೆ ಎಂದು ಹೇಳಿದರು. ಈ ಗುಟ್ಟು ರಟ್ಟಾದರೆ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಹಾಗೂ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕುತ್ತು ಬರಲಿದೆ ಎಂಬ ಭೀತಿಯಿಂದ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟಿಸುತ್ತಿದೆ ಎಂದು ಗೋವಿಂದ ಕಾರಜೋಳ ಟೀಕಿಸಿದ್ದಾರೆ. ಅಂತಿಮವಾಗಿ, ಈ ಎಸ್ ಐಆರ್ ನಿಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಸದಸ್ಯತ್ವ ರದ್ದಾಗುತ್ತದೆ ಎಂದು ಸಂಸದ ಕಾರಜೋಳ ಖಡಾಖಂಡಿತವಾಗಿ ಹೇಳಿದ್ದಾರೆ.
    1
    ಎಸ್ ಐಆರ್ (SIR) ವಿರುದ್ಧ ಕಾಂಗ್ರೆಸ್ ಅಪಸ್ವರ ಎತ್ತುತ್ತಿರುವುದನ್ನು ವಿಜಯಪುರದಲ್ಲಿ ಸಂಸದ ಗೋವಿಂದ ಕಾರಜೋಳ ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ನಾಯಕರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವುದು ಅಲ್ಪಸಂಖ್ಯಾತರು ಅಥವಾ ಬಡವರ ಹಿತಾಸಕ್ತಿಗಾಗಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಾಯಕ ರಾಹುಲ್ ಗಾಂಧಿ ಅವರ ದ್ವಿಪೌರತ್ವದ ರಹಸ್ಯ ಬಯಲಾಗಬಹುದು ಎಂಬ ಭಯದಿಂದಲೇ ಕಾಂಗ್ರೆಸ್ ಎಸ್ ಐಆರ್ ಅನ್ನು ವಿರೋಧಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರು 1994 ರಿಂದಲೇ ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂದು ದೂರಿದ ಸಂಸದರು, ಭಾರತೀಯ ಕಾನೂನಿನ ಪ್ರಕಾರ ಚುನಾವಣಾ ನಾಮಪತ್ರ ಸಲ್ಲಿಸುವಾಗ ಯಾವುದೇ ವಿದೇಶಿ ಪೌರತ್ವ ಹೊಂದಿಲ್ಲ ಎಂದು ಪ್ರಮಾಣಪತ್ರ ನೀಡಬೇಕಾಗುತ್ತದೆ, ಆದರೆ ರಾಹುಲ್ ಗಾಂಧಿ ಈ ವಿಷಯವನ್ನು ಮುಚ್ಚಿಟ್ಟಿದ್ದಾರೆ ಎಂದು ಹೇಳಿದರು.

ಈ ಗುಟ್ಟು ರಟ್ಟಾದರೆ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಹಾಗೂ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕುತ್ತು ಬರಲಿದೆ ಎಂಬ ಭೀತಿಯಿಂದ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟಿಸುತ್ತಿದೆ ಎಂದು ಗೋವಿಂದ ಕಾರಜೋಳ ಟೀಕಿಸಿದ್ದಾರೆ. ಅಂತಿಮವಾಗಿ, ಈ ಎಸ್ ಐಆರ್ ನಿಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಸದಸ್ಯತ್ವ ರದ್ದಾಗುತ್ತದೆ ಎಂದು ಸಂಸದ ಕಾರಜೋಳ ಖಡಾಖಂಡಿತವಾಗಿ ಹೇಳಿದ್ದಾರೆ.
    user_Suresh Chinagundi
    Suresh Chinagundi
    Graphic designer ವಿಜಯಪುರ, ವಿಜಯಪುರ, ಕರ್ನಾಟಕ•
    3 hrs ago
  • ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮೀಣ ಭಾಗದಲ್ಲಿ ನೀರಾವರಿ ಅಧಿಕಾರಿ ಸ್ಥಳದಲ್ಲಿ ಇಲ್ಲದಿರುವುದಕ್ಕೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 'ಅಧಿಕಾರಿ ಇಲ್ಲಿ ಇದ್ದಾರಾ ಇಲ್ಲವಾ, ಅವರನ್ನು ಮೊದಲು ಇಲ್ಲಿಗೆ ಕರೆಯಿಸಿ' ಎಂದು ರೈತರು ಆಕ್ರೋಶದಿಂದ ಒತ್ತಾಯಿಸುತ್ತಿದ್ದು, ಅವರು ಈ ರೀತಿ ಕೇಳುತ್ತಿರುವುದರ ಹಿಂದಿನ ಅಸಲಿ ಕಾರಣ ಏನೆಂಬ ಪ್ರಶ್ನೆ ಎದ್ದಿದೆ.
    1
    ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮೀಣ ಭಾಗದಲ್ಲಿ ನೀರಾವರಿ ಅಧಿಕಾರಿ ಸ್ಥಳದಲ್ಲಿ ಇಲ್ಲದಿರುವುದಕ್ಕೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 'ಅಧಿಕಾರಿ ಇಲ್ಲಿ ಇದ್ದಾರಾ ಇಲ್ಲವಾ, ಅವರನ್ನು ಮೊದಲು ಇಲ್ಲಿಗೆ ಕರೆಯಿಸಿ' ಎಂದು ರೈತರು ಆಕ್ರೋಶದಿಂದ ಒತ್ತಾಯಿಸುತ್ತಿದ್ದು, ಅವರು ಈ ರೀತಿ ಕೇಳುತ್ತಿರುವುದರ ಹಿಂದಿನ ಅಸಲಿ ಕಾರಣ ಏನೆಂಬ ಪ್ರಶ್ನೆ ಎದ್ದಿದೆ.
    user_Santosh Badakambi
    Santosh Badakambi
    Teacher ಅಥಣಿ, ಬೆಳಗಾವಿ, ಕರ್ನಾಟಕ•
    18 hrs ago
  • ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೆಂಕಿಯ ಅವಘಡ ಸಂಭವಿಸಿದ್ದು, ಒಂದು ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಅನಾಹುತದ ವೇಳೆ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕಾರ್ಮಿಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.
    1
    ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೆಂಕಿಯ ಅವಘಡ ಸಂಭವಿಸಿದ್ದು, ಒಂದು ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಅನಾಹುತದ ವೇಳೆ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕಾರ್ಮಿಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.