ಚಿಂಚೋಡಿ ಸಮೀಪದ ಬಸಾಪುರದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಕಳವು: ₹70 ಸಾವಿರ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳು ಕಳವು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್ ಚಿಂಚೋಡಿ ಸಮೀಪದ ಬಸಾಪುರದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಕಳವು: ₹70 ಸಾವಿರ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳು ಕಳವು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಿನಾಂಕ: 31-07-2026 ಸ್ಥಳ: ಬಸಾಪುರ ಗ್ರಾಮ, ಚಿಂಚೋಡಿ ಸಮೀಪ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ದೇವದುರ್ಗ: ತಾಲೂಕಿನ ಚಿಂಚೋಡಿ ಸಮೀಪದ ಬಸಾಪುರ ಗ್ರಾಮದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಪರಿಚಿತ ಕಳ್ಳರು ದೇವಿಯ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಪೂಜಾರಿ ಯಂಕೋಬ ತೋಟದ (51) ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನೆಯ ವಿವರ ಕಳೆದ 25 ವರ್ಷಗಳಿಂದ ದೇವಸ್ಥಾನದಲ್ಲಿ ಪೂಜಾರಿಯಾಗಿ ಸೇವೆ ಸಲ್ಲಿಸುತ್ತಿರುವ ಯಂಕೋಬ ತೋಟದ ಅವರು ಜುಲೈ 29ರಂದು ಬೆಳಿಗ್ಗೆ ಪೂಜೆ ಮುಗಿಸಿ ದೇವಸ್ಥಾನಕ್ಕೆ ಬೀಗ ಹಾಕಿ ಮನೆಗೆ ತೆರಳಿದ್ದರು. ಜುಲೈ 30ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದಾಗ ಗರ್ಭಗುಡಿಯಲ್ಲಿದ್ದ ದೇವಿಯ ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಕಳುವಾಗಿರುವುದು ಗಮನಕ್ಕೆ ಬಂದಿದೆ. ಜುಲೈ 29ರ ರಾತ್ರಿ 11:30ರಿಂದ ಜುಲೈ 30ರ ಬೆಳಿಗ್ಗೆ 6:00 ಗಂಟೆಯ ನಡುವಿನ ಅವಧಿಯಲ್ಲಿ ಅಪರಿಚಿತರು ದೇವಸ್ಥಾನಕ್ಕೆ ನುಗ್ಗಿ ಕಳವು ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕಳುವಾದ ಆಭರಣಗಳ ವಿವರ - ತಾಳಿ ಬೊಟ್ಟು (2 ಗ್ರಾಂ) – ₹8,000 - ಬೆಳ್ಳಿಯ ಕಡಗ (25 ತೊಲೆ) – ₹17,500 - ಬೆಳ್ಳಿಯ ರೂಳಿ (20 ತೊಲೆ) – ₹14,000 - ಬೆಳ್ಳಿಯ ಕಾಲಿನ ಗೆಜ್ಜೆ (8 ತೊಲೆ) – ₹5,600 - ಬೆಳ್ಳಿಯ ಪ್ಯಾಟಿ ಗೆಜ್ಜೆ (7 ತೊಲೆ) – ₹4,900 - ಬಂಗಾರದ ಮೂಗಿನ ನತ್ತು (5 ಗ್ರಾಂ) – ₹20,000 ಒಟ್ಟು ಅಂದಾಜು ಮೌಲ್ಯ: ₹70,000/- ಘಟನೆಯ ಕುರಿತು ಮಾಹಿತಿ ಪಡೆದ ಜಾಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಆಗಿರುವ ವೈಶಾಲಿ ಜಳಕಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ವರದಿಗಾರರೊಂದಿಗೆ ಮಾತನಾಡಿದ ದೇವಸ್ಥಾನದ ಪೂಜಾರಿ ಯಂಕೋಬ ತೋಟದ ಅವರು, ದೇವಸ್ಥಾನದ ಆಭರಣಗಳನ್ನು ಕಳವು ಮಾಡಿದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
ಚಿಂಚೋಡಿ ಸಮೀಪದ ಬಸಾಪುರದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಕಳವು: ₹70 ಸಾವಿರ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳು ಕಳವು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್ ಚಿಂಚೋಡಿ ಸಮೀಪದ ಬಸಾಪುರದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಕಳವು: ₹70 ಸಾವಿರ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳು ಕಳವು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಿನಾಂಕ: 31-07-2026 ಸ್ಥಳ: ಬಸಾಪುರ ಗ್ರಾಮ, ಚಿಂಚೋಡಿ ಸಮೀಪ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ದೇವದುರ್ಗ: ತಾಲೂಕಿನ ಚಿಂಚೋಡಿ ಸಮೀಪದ ಬಸಾಪುರ ಗ್ರಾಮದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಪರಿಚಿತ ಕಳ್ಳರು ದೇವಿಯ ಚಿನ್ನ
ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಪೂಜಾರಿ ಯಂಕೋಬ ತೋಟದ (51) ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನೆಯ ವಿವರ ಕಳೆದ 25 ವರ್ಷಗಳಿಂದ ದೇವಸ್ಥಾನದಲ್ಲಿ ಪೂಜಾರಿಯಾಗಿ ಸೇವೆ ಸಲ್ಲಿಸುತ್ತಿರುವ ಯಂಕೋಬ ತೋಟದ ಅವರು ಜುಲೈ 29ರಂದು ಬೆಳಿಗ್ಗೆ ಪೂಜೆ ಮುಗಿಸಿ ದೇವಸ್ಥಾನಕ್ಕೆ ಬೀಗ ಹಾಕಿ ಮನೆಗೆ ತೆರಳಿದ್ದರು. ಜುಲೈ 30ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದಾಗ ಗರ್ಭಗುಡಿಯಲ್ಲಿದ್ದ ದೇವಿಯ ಚಿನ್ನ
ಹಾಗೂ ಬೆಳ್ಳಿಯ ಆಭರಣಗಳು ಕಳುವಾಗಿರುವುದು ಗಮನಕ್ಕೆ ಬಂದಿದೆ. ಜುಲೈ 29ರ ರಾತ್ರಿ 11:30ರಿಂದ ಜುಲೈ 30ರ ಬೆಳಿಗ್ಗೆ 6:00 ಗಂಟೆಯ ನಡುವಿನ ಅವಧಿಯಲ್ಲಿ ಅಪರಿಚಿತರು ದೇವಸ್ಥಾನಕ್ಕೆ ನುಗ್ಗಿ ಕಳವು ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕಳುವಾದ ಆಭರಣಗಳ ವಿವರ - ತಾಳಿ ಬೊಟ್ಟು (2 ಗ್ರಾಂ) – ₹8,000 - ಬೆಳ್ಳಿಯ ಕಡಗ (25 ತೊಲೆ) – ₹17,500 - ಬೆಳ್ಳಿಯ ರೂಳಿ (20 ತೊಲೆ) – ₹14,000 - ಬೆಳ್ಳಿಯ ಕಾಲಿನ ಗೆಜ್ಜೆ (8 ತೊಲೆ) – ₹5,600 - ಬೆಳ್ಳಿಯ ಪ್ಯಾಟಿ ಗೆಜ್ಜೆ (7 ತೊಲೆ) – ₹4,900 -
ಬಂಗಾರದ ಮೂಗಿನ ನತ್ತು (5 ಗ್ರಾಂ) – ₹20,000 ಒಟ್ಟು ಅಂದಾಜು ಮೌಲ್ಯ: ₹70,000/- ಘಟನೆಯ ಕುರಿತು ಮಾಹಿತಿ ಪಡೆದ ಜಾಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಆಗಿರುವ ವೈಶಾಲಿ ಜಳಕಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ವರದಿಗಾರರೊಂದಿಗೆ ಮಾತನಾಡಿದ ದೇವಸ್ಥಾನದ ಪೂಜಾರಿ ಯಂಕೋಬ ತೋಟದ ಅವರು, ದೇವಸ್ಥಾನದ ಆಭರಣಗಳನ್ನು ಕಳವು ಮಾಡಿದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
- ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ! ನದಿ ಪಾತ್ರದ ಜನರಿಗೆ ತುರ್ತು ಎಚ್ಚರಿಕೆ 🌊 ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹದ ಆತಂಕ! ಸುರಪುರ ಪೊಲೀಸರು ನೀಡಿದ ಎಚ್ಚರಿಕೆ ⚠️ ನದಿಗೆ ಇಳಿಯಬೇಡಿ! ಕೃಷ್ಣಾ ನದಿಗೆ ಅಪಾರ ನೀರು ಬಿಡುಗಡೆ 🚨 ಲಿಂಗದಹಳ್ಳಿ-ತಿಂಥಣಿ ಸೇರಿ ಹಲವು ಗ್ರಾಮಗಳಿಗೆ ಅಲರ್ಟ್! ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,20,000 ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ. ಲಿಂಗದಹಳ್ಳಿ, ಬಂಡೊಳ್ಳಿ, ದಾದಲಾಪುರ, ತಿಂಥಣಿ, ದೇವಾಪುರ, ಮುಷ್ಟಹಳ್ಳಿ, ಶೆಳ್ಳಿ, ಅಡ್ಡೊಡಿ, ಹೆಮ್ಮಡಿ, ಕರ್ನಾಳ, ಬೇವಿನಹಾಳ ಹಾಗೂ ಯಮನೂರು ಸೇರಿದಂತೆ ಹಲವು ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ನದಿಯಲ್ಲಿ ಈಜುವುದು, ಸ್ನಾನ ಮಾಡುವುದು, ಮೀನುಗಾರಿಕೆ ನಡೆಸುವುದು ಹಾಗೂ ಸೆಲ್ಫಿ ತೆಗೆಯಲು ನದಿ ದಂಡೆಗೆ ತೆರಳುವುದನ್ನು ತಪ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಇಂತಹ ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. 🏷️ #KrishnaRiver #FloodAlert #KarnatakaNews #Surpur #Yadgir #NarayanpurDam #BasavaSagara #BreakingNews #KannadaNews #FloodWarning #KrishnaFlood #ASNNews24Kannada #Karnataka #ViralNews #LatestNews1
- ರಾಯಚೂರು ಜಿಲ್ಲಾ ಸಿರುವರ್ ತಾಲೂಕ್ ಲಕ್ಕಮದಿನ್ನಿ ಗ್ರಾಮದ ಸ್ಥಿತಿ ತಿಳಿಸುವುದೇನೆಂದರೆ ಇಲ್ಲಿ ಸಿಸಿ ರಸ್ತೆ ಇಲ್ಲದೆ ಸುಮಾರು 20 ವರ್ಷಗಳು ಕಳೆದರೂ ಇನ್ನೂ ಸಿಸಿ ರಸ್ತೆ ಆಗಿಲ್ಲ ಸುಮಾರು 40 ವರ್ಷಗಳಿಂದ ಇಲ್ಲಿ ವಾಸಿಸುತ್ತೇವೆ ನಾವು ಇಲ್ಲಿ ಹಾವು ಕಪ್ಪೆ ಮೀನು ಸೊಳ್ಳೆ ಎಲ್ಲಾನು ಇಲ್ಲೇ ಸಿಗುತ್ತೆ ನಮ್ಮ ಎಲ್ಲಾ ಅಧಿಕಾರಿಗಳಿಗೂ ತಿಳಿಸಿದ್ದೇವೆ ಲಿಖಿತ ಮುಖಾಂತರ ಕೂಡ ಕೊಟ್ಟಿದ್ದೇವೆ ಇಲ್ಲಿಯವರೆಗೂ ಯಾವುದೇ ರಾಜಕಾರಣಿ ಯಾವುದೇ ಅಧಿಕಾರಿ ಕ್ರಮ ತಗೊಂಡಿಲ್ಲ ಹಾಗಾಗಿ ನಾವು ನಮ್ಮ ತಾಲೂಕ ಪಂಚಾಯಿತಿ ಮುಂದೆ ಉಗ್ರವಾದ ಹೋರಾಟವನ್ನು ಮಾಡಿಕೊಳ್ಳಲಿ ಎಂದು ನಿರ್ಣಾಮ ಮಾಡಿದ್ದೇವೆ ಈ ಬಂಡ ರಾಜಕಾರಣಿಗಳಿಗೆ ಬಂಡ ಆಫೀಸರಿಸಿ ಗಳಿಗೆ ಇವರೆಲ್ಲ ವೋಟ್ ಬೇಕಿದ್ದಾಗ ಮಾತ್ರ ನಮ್ಮ ಗ್ರಾಮಗಳಿಗೆ ಬರ್ತಾರೆ ತಾವು ವಿಜೇತರಾದ ಮೇಲೆ ನಮ್ಮನ್ನ ಈ ಸ್ಥಿತಿಗೆ ತರುತ್ತಾರೆ1
- ಯಾದಗಿರಿ ಜಿಲ್ಲೆಯ ಸರ್ಕಾರಿ ಹಾಸ್ಪಿಟಲ್ ನಲ್ಲಿ ಹೇಳೋರು ಕೇಳೋರು ಯಾರು ಇಲ್ಲ ಯಾದಗಿರಿ ಜಿಲ್ಲಾ ಹಾಸ್ಪಿಟಲ್ ಅಲ್ಲಿ ಯಾರು ಸರಿಯಾಗಿ ಕೆಲಸ ಮಾಡದೇ ಇರುವಂತಹ ಡಾಕ್ಟರ್ಸ್ ಗಳು ಮತ್ತು ನರ್ಸ್ ಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ ಸಮಯಕ್ಕೆ ಸರಿಯಾಗಿ ಇರುವುದೇ ಇಲ್ಲ ಇಂತಹ ಅಧಿಕಾರಿಗಳಿಗೆ ಡಾ. ಮತ್ತು ನರ್ಸ್ಗಳಿಗೆ ಸಸ್ಪೆಂಡ್ ಮಾಡಬೇಕು ಶರಣಗೌಡ ಕಂದುಕುರ್ ಹೇಳಿದರು1
- ಕಲ್ಯಾಣ ವಾರ್ತೆ - "ನೀರಿನ ಹರಿವು ಹೆಚ್ಚುತ್ತಿರುವದರಿಂದ ನದಿ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಮುದ್ನಾಳ ಮನವಿ" 'ಭೀಮಾನದಿ ತೀರಕ್ಕೆ ಉಮೇಶ್ ಮುದ್ನಾಳ ಭೇಟಿ' ಕಲ್ಯಾಣ ವಾರ್ತೆ -ಯಾದಗಿರಿ ಮಹಾರಾಷ್ಟ್ರದಪಶ್ಚೀಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು ನದಿ ತೀರಕ್ಕೆ ಶುಕ್ರವಾರ ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ ಅವರು ಭೇಟಿ ನೀಡಿದರು. ಭೀಮಾನದಿ ಹಾಗೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.ಜಿಲ್ಲಾಡಳಿತ ನದಿ ತೀರದ ಗ್ರಾಮದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.ಮೀನುಗಾರರು,ಸೇರಿ ಯಾರು ನದಿ ತೀರಕ್ಕೆ ತೆರಳಬಾದರೆಂದು ಮುದ್ನಾಳ ಮನವಿ ಮಾಡಿದ್ದಾರೆ.1
- ಯಾದಗಿರಿ || ನಾರಾಯಣಪುರ ಜಲಾಶಯದಿಂದ 24 ಗೆಟ್ ಓಪನ್ ಕೃಷ್ಣಾ ನದಿಗೆ ನೀರು1
- ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಆರೋಪ ರಾಯಚೂರು, ಜು.31: ಹಜರತ್ ಸೈಯದ್ ಶಾ ಶಮ್ಸ್ ಆಲಂ ಹುಸೈನಿ ದರ್ಗಾ ಉರ್ಸ್–2026ಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡುವಲ್ಲಿ ಜೆಸ್ಕಾಂ ಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಲಿಖಿತ ಆದೇಶಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆದುಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಅಂಬಾಜಿ ರಾವು ಗಂಭೀರ ಆರೋಪ ಮಾಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಗಾದ ಅಧಿಕೃತ ಮುತ್ತವಲಿಯವರ ಅನುಮತಿ ಪತ್ರ (ಎನ್‌ಒಸಿ) ಪಡೆಯದೆ ಯಾವುದೇ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮುಖ್ಯ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸ್ಪಷ್ಟ ನಿರ್ದೇಶನ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಧಿಕ್ಕರಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ ಎಂದು ದೂರಿದರು. ಈ ಕುರಿತು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದೇ ಸಂಬಂಧಪಟ್ಟ ಅಧಿಕಾರಿಗಳ ಪರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಉರ್ಸ್ ಸಂದರ್ಭದಲ್ಲಿ ಯಾವುದೇ ಇಲಾಖೆಯ ಅನುಮತಿ ಪಡೆಯದೆ ಜೂಲಾಗಳು ಹಾಗೂ ವ್ಯಾಪಾರ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದವು. ಆರಂಭದಲ್ಲಿ ಎಲ್ಲಾ ಅಗತ್ಯ ಅನುಮತಿಗಳು ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಆದರೆ ನಂತರ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿದಾಗ ಯಾವುದೇ ಅನುಮತಿ ನೀಡಿಲ್ಲ ಹಾಗೂ ಸರ್ಕಾರದ ಖಜಾನೆಗೆ ನಿಗದಿತ ಶುಲ್ಕವೂ ಪಾವತಿಯಾಗಿಲ್ಲ ಎಂಬುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾತ್ರಿ ಅಕ್ರಮ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು. ಭ್ರಷ್ಟಾಚಾರದ ಆರೋಪ ಎದುರಿಸಿದ್ದ ಅಧಿಕಾರಿಗೆ ಮತ್ತೆ ರಾಯಚೂರಿನಲ್ಲೇ ಪದೋನ್ನತಿಯೊಂದಿಗೆ ನೇಮಕ ನೀಡಿರುವುದು ಸಾರ್ವಜನಿಕರ ದುರಾದೃಷ್ಟಕರ ಸಂಗತಿಯಾಗಿದೆ ಎಂದು ಆರೋಪಿಸಿದ ಅವರು, ಇಂತಹ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ಪ್ರಕರಣವನ್ನು ಸ್ವತಂತ್ರ ಹಾಗೂ ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ, ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಜರುಗಿಸಬೇಕು. ಅನುಮತಿ ಇಲ್ಲದೆ ವ್ಯಾಪಾರ ನಡೆಸಲು ಅವಕಾಶ ನೀಡಿದ ಅಧಿಕಾರಿಗಳ ಪಾತ್ರವನ್ನೂ ತನಿಖೆ ನಡೆಸಿ, ಕರ್ತವ್ಯಲೋಪ ಎಸಗಿದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಸೂದ್ ಅಲಿ, ಮೊಹಮ್ಮದ್ ಅಲೀಂ ಹಾಗೂ ರಘು ನನ್ನೋರೆ ಉಪಸ್ಥಿತರಿದ್ದರು.1
- ಗುರುಮಠಕಲ್ ಪಟ್ಟಣದ ಎಸ್ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ4
- ರಾಯಚೂರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ರೈತರು ಪತ್ರಿಕಾ ಭವನದಲ್ಲಿ ಆಗ್ರಹ ರಾಯಚೂರು, ಜು.31: ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರ ಹಿತದೃಷ್ಟಿಯಿಂದ ರಾಯಚೂರು ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತ ಹೋರಾಟಗಾರ ಹಾಗೂ ಸಂಯುಕ್ತ ಕಿಸಾನ್ ಪಾರ್ಟಿ ರಾಜ್ಯಾಧ್ಯಕ್ಷ ಚಾಮರಾಸ ಮಾಲಿಪಾಟೀಲ್ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಹಿನ್ನಡೆಯಾಗಿವೆ. ಜಿಲ್ಲೆಯಲ್ಲಿ ಶೇ.38ರಷ್ಟು ಮಾತ್ರ ಬಿತ್ತನೆ ನಡೆದಿದ್ದು, ಅದರಲ್ಲಿ ಶೇ.19ರಷ್ಟು ಬೆಳೆ ನಷ್ಟವಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರು ಬೆಳೆ ಒಣಗುತ್ತಿರುವುದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮೀಣ ಕೂಲಿ ಕಾರ್ಮಿಕರು ಸಹ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಹತ್ತಿ ಸೇರಿದಂತೆ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ಜಲಾಶಯಗಳಲ್ಲೂ ನೀರಿನ ಸಂಗ್ರಹಣೆ ಕುಸಿದಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಅವ್ಯವಹಾರ ನಡೆಯುತ್ತಿದೆಯಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಲವು ಬಾರಿ ಹೋರಾಟ ಹಾಗೂ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಜೆಸ್ಕಾಂ ಮುಖ್ಯ ಇಂಜಿನಿಯರ್ ರೈತರ ಸಮಸ್ಯೆಗಳ ಕುರಿತು ಬೇಜವಾಬ್ದಾರಿಯುತ ಹೇಳಿಕೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದ ಅವರು, ರೈತರ ಮನವಿಗಳಿಗೆ ಯಾವುದೇ ಬೆಲೆ ನೀಡದ ಅಧಿಕಾರಿಗಳ ವರ್ತನೆ ಖಂಡನೀಯವಾಗಿದೆ. ಜನರ ತೆರಿಗೆ ಹಣದಿಂದ ವೇತನ ಪಡೆಯುವ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಭೂಪಾಲ್‌ನಲ್ಲಿ ಅಲ್ಲಾಪ್ರಭು ಸೇರಿದಂತೆ ಆರು ರೈತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ ಅವರು, ನೀಟ್ ಅಕ್ರಮ ಸೇರಿದಂತೆ ದೇಶದ ಹಲವು ಗಂಭೀರ ಸಮಸ್ಯೆಗಳ ಬಗ್ಗೆ ಸರ್ಕಾರಗಳು ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗಾಂಧೀಜಿ ನೀಡಿದ್ದ "ಭಾರತ ಬಿಟ್ಟು ತೊಲಗಿ" ಘೋಷಣೆಯ ಮಾದರಿಯಲ್ಲಿ "ಭ್ರಷ್ಟ ಅಧಿಕಾರಿಗಳೇ, ಬಹುರಾಷ್ಟ್ರೀಯ ಕಂಪನಿಗಳೇ, ಭಾರತ ಬಿಟ್ಟು ತೊಲಗಿ" ಎಂಬ ಘೋಷಣೆಯೊಂದಿಗೆ ಆಗಸ್ಟ್ 10ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಯುಕ್ತ ಕಿಸಾನ್ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಲ್ಲಣ್ಣ ದಿನ್ನಿ, ಮಲ್ಲಯ್ಯ ಚಂದ್ರಬಂಡ, ಬೂದೆಯ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.1