Shuru
Apke Nagar Ki App…
ಗೇರುಕಟ್ಟೆಯಲ್ಲಿ ಚಲಿಸುತ್ತಿದ್ದ ವೇಳೆ ಬಸ್ ನ ಬಾಗಿಲು ಓಪನ್: ರಸ್ತೆಗೆ ಬಿದ್ದ ಇಬ್ಬರು ವಿದ್ಯಾರ್ಥಿನಿಯರು ಗೇರುಕಟ್ಟೆ ಎಂಬಲ್ಲಿಂದ ಬೆಳ್ತಂಗಡಿ ಕಡೆ ಸಂಚರಿಸುತ್ತಿದ್ದ ಸರಕಾರಿ ಬಸ್ ನ ಬಾಗಿಲು ಇದ್ದಕ್ಕಿದ್ದಂತೆ ತೆರೆದು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ಇಂದು ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ನಡೆದಿದೆ. ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡುವರಾಗಿದ್ದಾರೆ. ಓರ್ವೆ ಬೆಳ್ತಂಗಡಿ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು ಮತ್ತೋರ್ವಳು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯಾಗಿದ್ದು , ಪಬ್ಲಿಕ್ ಪರೀಕ್ಷೆ ಬರೆಯುವುದಕ್ಕಾಗಿ ಈ ಬಸ್ ನಲ್ಲಿ ತೆರಳಿದ್ದಳು. ಬಸ್ ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರು ಇದ್ದ ಕಾರಣ, ಓವರ್ ಲೋಡ್ ಆಗಿ ಈ ಘಟನೆ ನಡೆದಿರಬಹುದು ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Shamsheer Budoli
ಗೇರುಕಟ್ಟೆಯಲ್ಲಿ ಚಲಿಸುತ್ತಿದ್ದ ವೇಳೆ ಬಸ್ ನ ಬಾಗಿಲು ಓಪನ್: ರಸ್ತೆಗೆ ಬಿದ್ದ ಇಬ್ಬರು ವಿದ್ಯಾರ್ಥಿನಿಯರು ಗೇರುಕಟ್ಟೆ ಎಂಬಲ್ಲಿಂದ ಬೆಳ್ತಂಗಡಿ ಕಡೆ ಸಂಚರಿಸುತ್ತಿದ್ದ ಸರಕಾರಿ ಬಸ್ ನ ಬಾಗಿಲು ಇದ್ದಕ್ಕಿದ್ದಂತೆ ತೆರೆದು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ಇಂದು ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ನಡೆದಿದೆ. ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡುವರಾಗಿದ್ದಾರೆ. ಓರ್ವೆ ಬೆಳ್ತಂಗಡಿ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು ಮತ್ತೋರ್ವಳು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯಾಗಿದ್ದು , ಪಬ್ಲಿಕ್ ಪರೀಕ್ಷೆ ಬರೆಯುವುದಕ್ಕಾಗಿ ಈ ಬಸ್ ನಲ್ಲಿ ತೆರಳಿದ್ದಳು. ಬಸ್ ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರು ಇದ್ದ ಕಾರಣ, ಓವರ್ ಲೋಡ್ ಆಗಿ ಈ ಘಟನೆ ನಡೆದಿರಬಹುದು ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
More news from ಕರ್ನಾಟಕ and nearby areas
- ಮಂಗಳೂರಿನ ಮೀನುಗಾರಿಕಾ ಧಕ್ಕೆಯಲ್ಲಿರುವ ಸಂದೇಶ್ ಎಂಬವರ ಮಾಲಿಕತ್ವದ 'ಗುರುರಾಜ್’ ಎಂಬ ಆಳಸಮುದ್ರ ಮೀನುಗಾರಿಕಾ ಬೋಟ್‍ನಲ್ಲಿ ಗೋಬಿಂದ ದಾಸ್(42) ಎಂಬವರು ಮಾರ್ಚ್ 6 ರಂದು ರಾತ್ರಿ ಒಟ್ಟು 9 ಜನ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿರುತ್ತಾರೆ. ಮೀನುಹಿಡಿಯುವ ಸಲುವಾಗಿ ಬಲೆ ಬೀಸಲು ತೊಡಗಿದಾಗ ಗೋಬಿಂದ ದಾಸ್ ಬೋಟ್‍ನಲ್ಲಿ ಇರದೇ ಕಾಣೆಯಾಗಿದ್ದಾರೆ. ಅಥವಾ ರಾತ್ರಿ ಸಮಯ ಗೋಬಿಂದ ದಾಸ್ ಆಕಸ್ಮಿಕವಾಗಿ ಬೋಟ್‍ನಿಂದ ಜಾರಿ ಆಳ ಸಮುದ್ರ ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ದಕ್ಷಿಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5 ಅಡಿ, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕಪ್ಪು ಬಿಳಿ ಮಿಶ್ರಿತ ಕೂದಲು, ಹಿಂದಿ, ಬೆಂಗಾಳಿ ಭಾಷೆ ಮಾತನಾಡುತ್ತಾರೆ. ನೀಲಿ ಬಣ್ಣದ ಟೀಶರ್ಟ್,ಮತ್ತು ಕಪ್ಪು ಬಣ್ಣದ ಬರ್ಮುಡಾ ಚಡ್ಡಿ ಧರಿಸಿದ್ದರು. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ದಕ್ಷಿಣ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- ಕಡೂರು : ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲು ಬಂದಿದ್ದ ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ. ಬಾಳೆಗಿಡಗಳ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಲಾಗಿದೆ. ಬಾಳೆಗಿಡದ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುತ್ತಾ ಬರಲಾಗಿದೆ. ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಡಿದು ಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ. ಮಂಗಳವಾರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೃತ್ಯ ವೆಸಗಿದ ಕಿಡಿಗೇಡಿಗಳ ಪತ್ತೆಗಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.3
- ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾನದಿಗೆ ಸೇತುವೆಗಳ ಮೇಲಿಂದ ಕಸ ಎಸೆಯುತ್ತಿದ್ದು ಅವರುಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾನದಿ ಸಂರಕ್ಷಣಾ ಪಡೆ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.ಪವಿತ್ರ ನದಿಗೆ ಕೆಲ ಅನಾಗರಿಕ ಸಾರ್ವಜನಿಕರು ಎರಡು ಸೇತುವೆಗಳ ಮೇಲಿಂದ ಕಸ,ಪ್ಲಾಸ್ಟಿಕ್ ಬ್ಯಾಗ್ ಎಸೆದು ಮಲೀನ ಮಾಡುತ್ತಿದ್ದು, ಇದರಿಂದ ನದಿ ಹಾಗೂ ಜಲಚರಗಳಿಗೆ ಕುತ್ತು ತರುತ್ತಿದೆ. 1974 ಜಾಲಮಾಲಿನ್ಯ ಕಾಯ್ದೆ ತಡೆಗಟ್ಟುವ ಸೆಕ್ಷನ್ 24 ರ ಅನ್ವಯ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ 41 ಮತ್ತು 45 ರ ಸೆಕ್ಷನ್ ಅನ್ವಯ ದಂಡನೆಯನ್ನು ವಿಧಿಸಬಹು ದಾಗಿದೆ. ಘನ ತ್ಯಾಜ್ಯ ನಿರ್ವಹಣೆ 2016 ರ ಕಾಯ್ದೆ ಅನ್ವಯ ಯಾವುದೇ ನದಿ ಪಾತ್ರ ಗಳಲ್ಲಿ ಕಸ ಎಸೆಯುವುದು, ಘನತ್ಯಾಜ್ಯ ನಿರ್ಬಂಧವಿದ್ದರೂ ಆದೇಶ ಗಾಳಿಗೆ ತೂರಿದಂತಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಲವು ನಗರಸಭೆಗಳ ಮೇಲೆ ಪರಿಸರ ಪರಿಹಾರ ವಿಧಿಸಿದ್ದು ಓಡಿಶಾ ರಾಜ್ಯದ ಕೇಂದ್ರಪುರ ಮುನಿಸಿಪಾಲಿಟಿ, ಚಂಬಲ್ ನದಿ ಪ್ರಕರಣ, ಗೊರಕ್ ಪುರ ಕೊಳಚೆ ನೀರು ಪ್ರಕರಣಗಳನ್ನು ಗಮನಿಸಿ ಕೂಡಲೇ ಭದ್ರಾ ನದಿಯ ಮಾಲಿನ್ಯ ತಡೆಗೆ ಮುಂದಾಗುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಭದ್ರಾ ನದಿ ಸಂರಕ್ಷಣಾ ಪಡೆಯ ಸಿ.ತೀರ್ಥೇಶ್,ಡಿಎಸ್ಎಸ್ ಮುಖಂಡ ದಾಸರಕಲ್ಲಳ್ಳಿ ನಾಗರಾಜ್, ಹರೀಶ್, ಹಿರಿಯ ಹೋರಾಟಗಾರ ಜಯಣ್ಣ, ಗಣೇಶ್, ರೈತ ಮುಖಂಡ ಇಮ್ರಾನ್ ಪಾಷಾ, ಭದ್ರಾನದಿ ಸಂರಕ್ಷಣಪಡೆಯ ಮುಖ್ಯಸ್ಥ ರಾದ ಕಾರ್ತಿಕ್ ಕಿದ್ಮಯ್ ಉಪಸ್ಥಿತರಿದ್ದರು.1
- ಅರಕಲಗೂಡು ತಾಲ್ಲೂಕಿನ ಜೋಡಿಗುಬ್ಬಿ ಕ್ರಾಸ್ ಬಳಿ ಘಟನೆ ಅರಕಲಗೂಡ ತಾಲ್ಲೂಕಿನ ಹೆತ್ತಗೌಡನಹಳ್ಳಿ ಗ್ರಾಮದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕೆರೆಗೋಡು ಗ್ರಾಮದ ಮೂವರಿಂದ ಹಲ್ಲೆ ಅರಕಲಗೂಡು ಪೋಲೀಸ್'ರು ಸ್ಥಳಕ್ಕೆ ಭೇಟಿ , ಪರಿಶೀಲನೆ1
- Post by Md Aleemulla Shariff1
- ತುಮಕೂರು: ಸಮಾಜಸೇವೆ ಮತ್ತು ದಾನಧರ್ಮದ ಪ್ರತೀಕವಾಗಿದ್ದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಭಕ್ತಿಭಾವದ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಮೈಸೂರು ಮೂಲದ ಪುನೀತ್ ಕಲಾವಿದ ತಂಡ ವಿಶೇಷವಾಗಿ 8000 ಚದರ ಅಡಿ ವಿಸ್ತೀರ್ಣದ ಬೃಹತ್ ರಂಗೋಲಿ ರಚಿಸಿ ಗಮನ ಸೆಳೆದಿತು. ಸಿದ್ದಗಂಗಾ ಮಠದ ಆವರಣದಲ್ಲಿ ಮೂಡಿಬಂದ ಈ ಅದ್ಭುತ ರಂಗೋಲಿಯಲ್ಲಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಅತ್ಯಂತ ಕಲಾತ್ಮಕವಾಗಿ ರೂಪಿಸಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬಣ್ಣಗಳ ಸಮನ್ವಯ, ವಿನ್ಯಾಸದ ನಿಖರತೆ ಹಾಗೂ ಆಧ್ಯಾತ್ಮಿಕ ಭಾವನೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರಂಗೋಲಿ ಸಿದ್ಧಗೊಂಡಿತ್ತು. ಈ ಮಹತ್ವದ ಕಲಾಕೃತಿಯನ್ನು ಮೈಸೂರು ನಗರದ ಪುನೀತ್ ಕಲಾವಿದ ತಂಡದ ಕಲಾವಿದರು ಶ್ರಮಪಟ್ಟು ರೂಪಿಸಿದ್ದಾರೆ. ತಂಡದ ಪ್ರಮುಖ ಕಲಾವಿದರಾದ ಪುನೀತ್ ಕಲಾವಿದ, ಲಕ್ಷ್ಮಿ ಸಿ, ಆದಿತ್ಯ ಪಿ, ಹರ್ಷಿತ್ ಆರ್, ಹಾಗೂ ಕುಮಾರಸ್ವಾಮಿ ಕೆ.ಬಿ ಅವರು ಹಲವು ದಿನಗಳ ಪರಿಶ್ರಮದಿಂದ ರಂಗೋಲಿಯನ್ನು ಸಿದ್ಧಗೊಳಿಸಿದರು. ಅವರ ಕಲಾತ್ಮಕ ಪ್ರತಿಭೆಗೆ ಮಠದ ಭಕ್ತರು ಹಾಗೂ ಭೇಟಿ ನೀಡಿದವರು ಶ್ಲಾಘನೆ ವ್ಯಕ್ತಪಡಿಸಿದರು. ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿಕ್ಷಣ, ಅನ್ನದಾನ ಮತ್ತು ಮಾನವೀಯ ಸೇವೆಗಳ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಸ್ಮರಣಾರ್ಥವಾಗಿ ಕಲೆಯ ಮೂಲಕ ಗೌರವ ಸಲ್ಲಿಸುವುದು ವಿಶೇಷವಾಗಿದೆ ಎಂದು ಭಕ್ತರು ಅಭಿಪ್ರಾಯಪಟ್ಟರು. ರಂಗೋಲಿ ವೀಕ್ಷಿಸಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ, ಕಲಾವಿದರ ಕಾರ್ಯವನ್ನು ಪ್ರಶಂಸಿಸಿದರು. ಸಿದ್ದಗಂಗಾ ಮಠದ ಆವರಣವು ಆಧ್ಯಾತ್ಮಿಕ ವಾತಾವರಣದೊಂದಿಗೆ ಕಲಾ ಸಂಭ್ರಮದ ಕೇಂದ್ರವಾಗಿತ್ತು. ಶಿವಕುಮಾರ ಸ್ವಾಮೀಜಿಯವರ ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಲಿ ಎಂಬ ಸಂದೇಶದೊಂದಿಗೆ ಪುನೀತ್ ಕಲಾವಿದ ತಂಡ ಈ ಬೃಹತ್ ರಂಗೋಲಿ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದೆ. ಈ ಕಲಾಕೃತಿ ಮಠದ ಕಾರ್ಯಕ್ರಮಗಳಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.1
- Post by Suresh Belagere1
- ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಏಪ್ರಿಲ್ 7 ಸಂಜೆ 5 ಗಂಟೆಯಿಂದ ಏಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4 ರ ಮಧ್ಯರಾತ್ರಿ 12 ಗಂಟೆಯ ತನಕ “ಒಣ ದಿನ'' ಎಂದು ಘೋಷಿಸಿ ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ದಿನಗಳಂದು ನಿಷೇಧಿಸಿರುವ ಪ್ರದೇಶಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.1