ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದಲ್ಲಿರುವ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ಭಾನುವಾರ 20ನೇ ವಾರ್ಷಿಕೋತ್ಸವ, ಸಾಮೂಹಿಕ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಅವರು, ಮನುಷ್ಯನ ಬದುಕಿಗೆ ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರವೇ ನಿಜವಾದ ಆಸ್ತಿ ಎಂದು ಬಣ್ಣಿಸಿದರು. ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯವಾಗಿದ್ದು, ಧರ್ಮ ಪರಿಪಾಲನೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸಲು ಸಾಧ್ಯ ಎಂದರು. ಆಧುನಿಕತೆಯ ಭರಾಟೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳು ಕಣ್ಮರೆಯಾಗುತ್ತಿವೆ ಎಂದು ಶ್ರೀಗಳು ಕಳವಳ ವ್ಯಕ್ತಪಡಿಸಿದರು. ಉತ್ತಮ ಉಡುಗೆ ವ್ಯಕ್ತಿತ್ವವನ್ನು ಬದಲಾಯಿಸಬಹುದೇ ಹೊರತು, ಸಂಸ್ಕಾರ ಮತ್ತು ಸರಳತೆಯೇ ಬದುಕನ್ನು ಶ್ರೀಮಂತಗೊಳಿಸುತ್ತವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಅಲ್ಪಾವಧಿಯಲ್ಲಿ ಭಕ್ತರ ಹೃದಯದಲ್ಲಿ ಸ್ಥಾನ ಗಳಿಸಿ, ಸಮಾಜಮುಖಿ ಕಾರ್ಯಗಳ ಮೂಲಕ ಮಾದರಿಯಾಗಿದ್ದಾರೆ ಎಂದು ಪ್ರಶಂಸಿಸಿದರು. ಸಿದ್ದರಬೆಟ್ಟ ಶ್ರೀಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸಮಾನತೆ ಮತ್ತು ಸರಳತೆಯ ಸಂದೇಶವನ್ನು ಸಾರುತ್ತವೆ ಎಂದು ತಿಳಿಸಿದರು. ಶ್ರೀಮಠದ ಬೆಳವಣಿಗೆಗೆ ಭಕ್ತರ ಸಹಕಾರವೇ ನಿಜವಾದ ಶಕ್ತಿ ಎಂದು ಹೇಳಿದ ಅವರು, ಪ್ರತಿವರ್ಷ ಸಮಾಜ ಸೇವೆ ಸಲ್ಲಿಸಿದ ಭಕ್ತರನ್ನು 'ಗುರುಸೇವಾ ರತ್ನ' ಪ್ರಶಸ್ತಿಯ ಮೂಲಕ ಗೌರವಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದಲ್ಲಿರುವ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ಭಾನುವಾರ 20ನೇ ವಾರ್ಷಿಕೋತ್ಸವ, ಸಾಮೂಹಿಕ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಅವರು,
ಮನುಷ್ಯನ ಬದುಕಿಗೆ ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರವೇ ನಿಜವಾದ ಆಸ್ತಿ ಎಂದು ಬಣ್ಣಿಸಿದರು. ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯವಾಗಿದ್ದು, ಧರ್ಮ ಪರಿಪಾಲನೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸಲು ಸಾಧ್ಯ ಎಂದರು. ಆಧುನಿಕತೆಯ ಭರಾಟೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳು ಕಣ್ಮರೆಯಾಗುತ್ತಿವೆ ಎಂದು ಶ್ರೀಗಳು ಕಳವಳ ವ್ಯಕ್ತಪಡಿಸಿದರು. ಉತ್ತಮ
ಉಡುಗೆ ವ್ಯಕ್ತಿತ್ವವನ್ನು ಬದಲಾಯಿಸಬಹುದೇ ಹೊರತು, ಸಂಸ್ಕಾರ ಮತ್ತು ಸರಳತೆಯೇ ಬದುಕನ್ನು ಶ್ರೀಮಂತಗೊಳಿಸುತ್ತವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಅಲ್ಪಾವಧಿಯಲ್ಲಿ ಭಕ್ತರ ಹೃದಯದಲ್ಲಿ ಸ್ಥಾನ ಗಳಿಸಿ, ಸಮಾಜಮುಖಿ ಕಾರ್ಯಗಳ ಮೂಲಕ ಮಾದರಿಯಾಗಿದ್ದಾರೆ ಎಂದು ಪ್ರಶಂಸಿಸಿದರು. ಸಿದ್ದರಬೆಟ್ಟ ಶ್ರೀಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ,
ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸಮಾನತೆ ಮತ್ತು ಸರಳತೆಯ ಸಂದೇಶವನ್ನು ಸಾರುತ್ತವೆ ಎಂದು ತಿಳಿಸಿದರು. ಶ್ರೀಮಠದ ಬೆಳವಣಿಗೆಗೆ ಭಕ್ತರ ಸಹಕಾರವೇ ನಿಜವಾದ ಶಕ್ತಿ ಎಂದು ಹೇಳಿದ ಅವರು, ಪ್ರತಿವರ್ಷ ಸಮಾಜ ಸೇವೆ ಸಲ್ಲಿಸಿದ ಭಕ್ತರನ್ನು 'ಗುರುಸೇವಾ ರತ್ನ' ಪ್ರಶಸ್ತಿಯ ಮೂಲಕ ಗೌರವಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
- ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದಲ್ಲಿರುವ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ಭಾನುವಾರ 20ನೇ ವಾರ್ಷಿಕೋತ್ಸವ, ಸಾಮೂಹಿಕ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಅವರು, ಮನುಷ್ಯನ ಬದುಕಿಗೆ ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರವೇ ನಿಜವಾದ ಆಸ್ತಿ ಎಂದು ಬಣ್ಣಿಸಿದರು. ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯವಾಗಿದ್ದು, ಧರ್ಮ ಪರಿಪಾಲನೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸಲು ಸಾಧ್ಯ ಎಂದರು. ಆಧುನಿಕತೆಯ ಭರಾಟೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳು ಕಣ್ಮರೆಯಾಗುತ್ತಿವೆ ಎಂದು ಶ್ರೀಗಳು ಕಳವಳ ವ್ಯಕ್ತಪಡಿಸಿದರು. ಉತ್ತಮ ಉಡುಗೆ ವ್ಯಕ್ತಿತ್ವವನ್ನು ಬದಲಾಯಿಸಬಹುದೇ ಹೊರತು, ಸಂಸ್ಕಾರ ಮತ್ತು ಸರಳತೆಯೇ ಬದುಕನ್ನು ಶ್ರೀಮಂತಗೊಳಿಸುತ್ತವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಅಲ್ಪಾವಧಿಯಲ್ಲಿ ಭಕ್ತರ ಹೃದಯದಲ್ಲಿ ಸ್ಥಾನ ಗಳಿಸಿ, ಸಮಾಜಮುಖಿ ಕಾರ್ಯಗಳ ಮೂಲಕ ಮಾದರಿಯಾಗಿದ್ದಾರೆ ಎಂದು ಪ್ರಶಂಸಿಸಿದರು. ಸಿದ್ದರಬೆಟ್ಟ ಶ್ರೀಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸಮಾನತೆ ಮತ್ತು ಸರಳತೆಯ ಸಂದೇಶವನ್ನು ಸಾರುತ್ತವೆ ಎಂದು ತಿಳಿಸಿದರು. ಶ್ರೀಮಠದ ಬೆಳವಣಿಗೆಗೆ ಭಕ್ತರ ಸಹಕಾರವೇ ನಿಜವಾದ ಶಕ್ತಿ ಎಂದು ಹೇಳಿದ ಅವರು, ಪ್ರತಿವರ್ಷ ಸಮಾಜ ಸೇವೆ ಸಲ್ಲಿಸಿದ ಭಕ್ತರನ್ನು 'ಗುರುಸೇವಾ ರತ್ನ' ಪ್ರಶಸ್ತಿಯ ಮೂಲಕ ಗೌರವಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.4
- ಶಿವಮೊಗ್ಗದ ಪ್ರತಿಷ್ಠಿತ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SIMS)ಯ 14ನೇ ಪದವಿ ಪ್ರದಾನ ಸಮಾರಂಭ 'ಅನ್ವಯ'ವು ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ವೈದ್ಯಕೀಯ ಪದವಿ ಪಡೆದ ನೂರಾರು ವಿದ್ಯಾರ್ಥಿಗಳಲ್ಲಿ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಜಲಾಶಯದ ವ್ಯಾಪ್ತಿಯ ಹೊಯ್ಸಳಕಟ್ಟೆ ಗ್ರಾಮದ ಬಡ ರೈತ ಕುಟುಂಬದ ಸಿಂಧು ಎಚ್.ಎಸ್. ಅವರ ಸಾಧನೆ ಎಲ್ಲರ ಗಮನ ಸೆಳೆಯಿತು. ಸರಳ ರೈತ ದಂಪತಿಗಳಾದ ಶ್ರೀ ಸಿದ್ದಯ್ಯ ಎಚ್.ವಿ. ಹಾಗೂ ಶ್ರೀಮತಿ ತಿಮ್ಮಕ್ಕ ಅವರ ಮೂರನೇ ಪುತ್ರಿಯಾದ ಸಿಂಧು, ಈಗ ವೈದ್ಯಕೀಯ ಪದವಿ ಮುಗಿಸಿ 'ಡಾಕ್ಟರ್ ಸಿಂಧು' ಆಗಿ ಹೊರಹೊಮ್ಮಿದ್ದಾರೆ. ಯಾವುದೇ ಭವ್ಯ ಹಿನ್ನೆಲೆ ಇಲ್ಲದಿದ್ದರೂ, ನಿರಂತರ ಪರಿಶ್ರಮ ಮತ್ತು ಕಠಿಣ ಛಲದ ಮೂಲಕ ಈ ಸಾಧನೆ ಮಾಡಿರುವ ಡಾ. ಸಿಂಧು, ತಮ್ಮ ಕೃಷಿ ಹಿನ್ನೆಲೆಯ ಕುಟುಂಬದಲ್ಲಿ ವೈದ್ಯೆಯಾದ ಮೊದಲ ವ್ಯಕ್ತಿ. ಪದವಿ ಸ್ವೀಕರಿಸಿದ ಈ ಹೆಮ್ಮೆಯ ಕ್ಷಣದಲ್ಲಿ ಅವರ ಪೋಷಕರ ಕಣ್ಣಾಲಿಗಳು ಆನಂದಬಾಷ್ಪದಿಂದ ತುಂಬಿದ್ದವು. ವೇದಿಕೆಯ ಮೇಲೆ ಗಣ್ಯರಿಂದ ಪದವಿ ಪಡೆಯುವಾಗ ಇಡೀ ಸಭಾಂಗಣ ಚಪ್ಪಾಳೆಯ ಸುರಿಮಳೆಗೈಯಿತು. ಡಾ. ಸಿಂಧು ಅವರನ್ನು "ಕಠಿಣ ಪರಿಶ್ರಮ ಮತ್ತು ಸರಳ ವ್ಯಕ್ತಿತ್ವದವರು, ಪ್ರಕೃತಿ ಪ್ರೇಮಿ" ಎಂದು ಬಣ್ಣಿಸಲಾಯಿತು; ಹಸಿರು ಕಣಿವೆಯ ಸಣ್ಣ ಹಳ್ಳಿಯಿಂದ ಬಂದು ಈಗ ವೈದ್ಯೆಯಾಗಿ ಲೋಕಕ್ಕೆ ಬೆಳಕಾಗಲು ಹೊರಟಿರುವುದು ಹೆಮ್ಮೆಯ ಸಂಗತಿ ಎಂದು ಉಲ್ಲೇಖಿಸಲಾಯಿತು. ನೇರ ನುಡಿ ಹಾಗೂ ಕಠಿಣ ಪರಿಶ್ರಮದ ಮೇಲೆ ಅಪಾರ ನಂಬಿಕೆ ಇಟ್ಟಿರುವ ಡಾ. ಸಿಂಧು, ಕಲೆ ಮತ್ತು ಕೈತೋಟದಂತಹ ಹವ್ಯಾಸಗಳನ್ನೂ ಹೊಂದಿದ್ದಾರೆ. ಕೇವಲ ಪದವಿ ಗಳಿಕೆಗೆ ಸೀಮಿತವಾಗದೆ, ಗ್ರಾಮೀಣ ಭಾಗದ ಬಡ ಜನರಿಗೆ ಚಿಕಿತ್ಸೆ ನೀಡುವ ಮೂಲಕ ಸಮಾಜ ಸೇವೆ ಮಾಡುವ ಉದಾತ್ತ ಮನೋಭಾವವನ್ನು ಅವರು ಮೈಗೂಡಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ, ಈ ಹಳ್ಳಿಯ ಪ್ರತಿಭೆಯು ವೈದ್ಯಕೀಯ ಕಾಲೇಜಿನ ಅತ್ಯುನ್ನತ ವೇದಿಕೆಯಲ್ಲಿ ಮಿಂಚಿ, ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದೆ. ಸಂಸ್ಥೆಯ ನಿರ್ದೇಶಕರು ಮತ್ತು ಗಣ್ಯರು ಡಾ. ಸಿಂಧು ಅವರ ವೈದ್ಯಕೀಯ ಜೀವನ ಯಶಸ್ಸು ಹಾಗೂ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.1
- ರಾಜ್ಯ ರಾಜಕಾರಣದಲ್ಲಿ ಅಡ್ಡ ಮತದಾನದ ವಿವಾದದಿಂದಾಗಿ ಭಾರೀ ಸಂಚಲನ ಮೂಡಿದ್ದು, ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ರಹಸ್ಯ ಮತದಾನದ ಕಾರಣದಿಂದ ಎಲ್ಲಾ ಶಾಸಕರ ಮೇಲೂ ಅನುಮಾನ ಮೂಡಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದ್ದು, ಧರ್ಮಕ್ಷೇತ್ರದಲ್ಲೇ ಮುಕ್ತ ಚರ್ಚೆ ನಡೆಸಿ ಸತ್ಯಾಸತ್ಯತೆ ಹೊರತರಲು ಬಿಜೆಪಿ ಮುಂದಾಗಿದೆ. ವಿಜಯೇಂದ್ರ ಅವರ ಈ ನಡೆಯು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ, ಅಡ್ಡ ಮತದಾನದ ರಹಸ್ಯವನ್ನು ಬಯಲಿಗೆಳೆಯಲು ಇದು 'ಮಾಸ್ಟರ್ ಪ್ಲಾನ್' ಎಂದು ವಿಶ್ಲೇಷಿಸಲಾಗುತ್ತಿದೆ.1
- ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಒಂದು ಚಿರತೆ ಬೋನಿಗೆ ಬಿದ್ದಿದೆ.1
- ಮಂಡ್ಯದಲ್ಲಿ ನೀಟ್ (NEET) ಮರು ಪರೀಕ್ಷೆಯು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ನೀಟ್ - 2026 ಪರೀಕ್ಷಾ ಕೇಂದ್ರಗಳಿಗೆ ಇಂದು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರೀಕ್ಷೆಯು ಯಾವುದೇ ಅಡೆತಡೆಯಿಲ್ಲದೆ ಸುಗಮವಾಗಿ ನಡೆಯಲು ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಭದ್ರತೆ ಹಾಗೂ ಮೂಲಸೌಕರ್ಯಗಳ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದರು. ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:15 ರವರೆಗೆ ಪರೀಕ್ಷೆ ನಡೆಯಿತು. ನೀಟ್ 2026 ಪರೀಕ್ಷೆಗೆ ಮಂಡ್ಯ ಜಿಲ್ಲೆಯ 04 ಪರೀಕ್ಷಾ ಕೇಂದ್ರಗಳಿಗೆ ಒಟ್ಟು 1,958 ವಿದ್ಯಾರ್ಥಿಗಳು ಹಂಚಿಕೆಯಾಗಿದ್ದರು. ಇವರಲ್ಲಿ 1,473 ವಿದ್ಯಾರ್ಥಿಗಳು ಹಾಜರಾಗಿದ್ದು, 485 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.1
- ಹುಳಿಯಾರಿನ ಕೆಪಿಎಸ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಿರಿಯೂರು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಹಿಂದಿ ಪ್ರಾಧ್ಯಾಪಕ ಓಂಕಾರಮೂರ್ತಿ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಲಭ್ಯವಿರುವ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಸಾಧನಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ವೇಳೆ, ಅವರು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಯ್ದುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಕೆಪಿಎಸ್ ಶಾಲೆಯ ಹಳೆಯ ವಿದ್ಯಾರ್ಥಿಯೂ ಆಗಿರುವ ಅವರು, ತಮ್ಮ ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು. ತಮ್ಮ ಕಾಲದಲ್ಲಿ ಸಿದ್ದಬಸವಣ್ಣ, ಬಸವಲಿಂಗಯ್ಯ, ನಿರಂಜನಮೂರ್ತಿ, ದಾಸಪ್ಪ ಹಾಗೂ ಮುಖ್ಯೋಪಾಧ್ಯಾಯರಾಗಿದ್ದ ಸೀತಾರಾಂ ಭಟ್ ಅವರಂತಹ ಹಿರಿಯ ಗುರುಗಳಿದ್ದರು, ಆದರೆ ಇಂದು ಪಾಠ ಪ್ರವಚನಗಳನ್ನು ಗ್ರಹಿಸಲು ಗೂಗಲ್, ಜೆಮಿನಿ, ಚಾಟ್ ಜಿಪಿಟಿಯಂತಹ ಆಧುನಿಕ ತಂತ್ರಜ್ಞಾನಗಳು ಲಭ್ಯವಿವೆ ಎಂದು ಓಂಕಾರಮೂರ್ತಿ ವಿವರಿಸಿದರು. ವಿದ್ಯಾರ್ಥಿಗಳು ಇವುಗಳನ್ನು ಬಳಸಿಕೊಂಡು ವಿಷಯಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಬುದ್ಧಿವಂತಿಕೆ ಮತ್ತು ಅಂಕಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಆರೋಗ್ಯದ ಮಹತ್ವವನ್ನು ವಿವರಿಸಿದ ಅವರು, ಯಾರು ಆರೋಗ್ಯವಾಗಿದ್ದಾರೋ ಅವರೇ ನಿಜವಾದ ಶ್ರೀಮಂತರು. ಇತ್ತೀಚಿನ ದಿನಗಳಲ್ಲಿ ಜಂಕ್ ಫುಡ್ ಹಾಗೂ ತಪ್ಪು ಆಹಾರ ಪದ್ಧತಿಯಿಂದ ಯುವ ಪೀಳಿಗೆ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದು, ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳದಿದ್ದರೆ ಆರೋಗ್ಯ ಕೆಡುವುದು ಖಂಡಿತ ಎಂದರು. ಶೈಕ್ಷಣಿಕ ಸಾಮರ್ಥ್ಯದ ಜೊತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವೂ ಸಮತೋಲನದಲ್ಲಿರಬೇಕು ಎಂದು ಅವರು ಸಲಹೆ ನೀಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಕೀಳಾಗಿ ಕಾಣಬಾರದು, ಏಕೆಂದರೆ ಗಿಡಕ್ಕೆ ನೀರು ಹಾಕುವುದು, ಸ್ವಚ್ಛತೆ ಕಾಪಾಡುವುದು ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದು ಓಂಕಾರಮೂರ್ತಿ ಹೇಳಿದರು. ಜೀವನದಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಧನಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಲು ಅವರು ಕಿವಿಮಾತು ಹೇಳಿದರು. ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ ಎಂದ ಓಂಕಾರಮೂರ್ತಿ, ವಿದ್ಯಾರ್ಥಿಗಳು ಕೇವಲ ಮರಗಳನ್ನು ಕಡಿಯುವುದನ್ನು ನೋಡದೆ, ಗಿಡಗಳನ್ನು ನೆಟ್ಟು ಪೋಷಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಉತ್ತೇಜಿಸಿದರು. ಶಾಲೆ ಮತ್ತು ಗುರುಗಳು ನೀಡುವ ಸಂಸ್ಕಾರ, ಶಿಸ್ತು ಹಾಗೂ ನಮ್ರತೆ ನಮ್ಮನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎನ್.ಜಿ. ಕೃಷ್ಣಮೂರ್ತಿ, ಡಾ. ನಾಗರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗವೀ ರಂಗಯ್ಯ, ಉಪಪ್ರಾಚಾರ್ಯ ಚಂದ್ರಚಾರ್, ಎಸ್‌ಡಿಎಂಸಿ ಸದಸ್ಯರುಗಳಾದ ಚನ್ನಕೇಶವ, ರಾಮಚಂದ್ರಯ್ಯ, ಶೇಖರ್, ರಮೇಶ ಹಾಗೂ ಬಾಲಾಜಿ ಸಿಂಗ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.1
- ಟ್ರಾಫಿಕ್ ಪೊಲೀಸರು ಮತ್ತು ಓರ್ವ ಬೈಕ್ ಸವಾರನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಬೈಕ್ ಸವಾರನು ತನ್ನ ವಾಹನದ ಕೀ ಹಿಂದಿರುಗಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದು, ಬೈಕ್ ತನ್ನದೇ ಎಂದು ಹೇಳಿದ್ದಾನೆ. ಅಲ್ಲದೆ, ತಾನು ದಂಡವನ್ನು ಪಾವತಿಸಲು ಸಿದ್ಧನಿರುವುದಾಗಿಯೂ ತಿಳಿಸಿದ್ದಾನೆ.1