ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಸ್ತೆ ಬಂದ್ ಪ್ರತಿಭಟನೆ ಇಂದು ಬಾಗಲಕೋಟೆ ನಗರದಲ್ಲಿ ಮಹತ್ವದ ಘಟನೆ ನಡೆದಿದೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಸಾರ್ವಜನಿಕರ ದೂರಿನ ಮೇರೆಗೆ ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ ಸಂಘಟನೆ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ದಿನಾಂಕ ೧೮.೦೨.೨೦೨೬ ರಂದು ಬೆಳಿಗ್ಗೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಪ್ರಾಧಿಕಾರದ ಮುಖ್ಯ ದ್ವಾರದ ಎದುರು ಸೇರಿ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ಪರಿಣಾಮವಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸಾರ್ವಜನಿಕರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು. ಇದೀಗ ಪ್ರಾಧಿಕಾರದ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿದೆ.

- ಇಂದು ಬಾಗಲಕೋಟೆ ನಗರದಲ್ಲಿ ಮಹತ್ವದ ಘಟನೆ ನಡೆದಿದೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಸಾರ್ವಜನಿಕರ ದೂರಿನ ಮೇರೆಗೆ ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ ಸಂಘಟನೆ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ದಿನಾಂಕ ೧೮.೦೨.೨೦೨೬ ರಂದು ಬೆಳಿಗ್ಗೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಪ್ರಾಧಿಕಾರದ ಮುಖ್ಯ ದ್ವಾರದ ಎದುರು ಸೇರಿ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ಪರಿಣಾಮವಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸಾರ್ವಜನಿಕರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು. ಇದೀಗ ಪ್ರಾಧಿಕಾರದ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿದೆ.1
- ಇಂದು ಫೆಬ್ರವರಿ 19ರಂದು ಜರುಗಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬುಧವಾರ ಮುಂಜಾಗೃತ ಕ್ರಮ ಕೈಗೊಂಡಿದೆ. ಎಸ್‌ಪಿ ಸಿದ್ದಾರ್ಥ ಗೋಯಲ್ ಅವರ ಆದೇಶದ ಮೇರೆಗೆ ಡಿವೈಎಸ್‌ಪಿ ಗಜಾನನ ಸುತಾರ ಅವರ ನೇತೃತ್ವದಲ್ಲಿ, ಪಿಐ ಆನಂದ ವಾಘಮೋಡೆ ಹಾಗೂ ಪಿಎಸ್‌ಐ ಜಯಶ್ರೀ ನಧಾಪ್ ಮತ್ತು ಶಾಂತಾ ಹಳ್ಳಿ ಅವರ ಮುಂದಾಳತ್ವದಲ್ಲಿ ನಗರ ಪ್ರಮುಖ ರಸ್ತೆಗಳಲ್ಲಿಪೊಲೀಸ್ ಪಥಸಂಚಲನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.1
- ಮುಧೋಳ : ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕೊಡುಗೈ ದಾನಿಗಳ ನೆರವಿನಿಂದ ಸಿದ್ದಗೊಂಡಿರುವ ವೇಮನ ಅಕ್ಯಾಡೆಮಿಯ ಶಾಲಾ ಕಟ್ಟಡ ಪೂರ್ಣಗೊಂಡಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಆರಂಭಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಭಕ್ತಿ ಶಿರೋಮಣಿ ಹೇಮರಡ್ಡಿ ಮಲ್ಲಮ್ಮ ಶೈಕ್ಷಣಿಕ ಹಾಗೂ ಧಾರ್ಮಿಕ ಸಂಸ್ಥೆ ಅಧ್ಯಕ್ಷ ದಯಾನಂದ ಪಾಟೀಲ ಅವರು, ಒಟ್ಟು 31ಕೊಠಡಿ ಹೊಂದಿರುವ ಸುಸಜ್ಜಿತ ಕಟ್ಟಡದಲ್ಲಿ ಮುಂದಿನ ತಲೆಮಾರಿನ ವಿದ್ಯಾರ್ಥಿಗಳ ಏಳಿಗೆ ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಂಸ್ಥೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು. ಈ ವೇಳೆ ಸಮಾಜದ ಮುಖಂಡರಾದ ಕೆ.ಆರ್.ಮಾಚಪ್ಪನವರ, ಶ್ರೀಕಾಂತ ಗುಜ್ಜನ್ನವರ, ಉದಯ ಸಾರವಾಡ, ವಿ.ಡಿ. ನಾಗನೂರ, ಎ.ಜಿ.ಪಾಟೀಲ, ಡಾ.ಸತೀಶ ಮಲಘಾಣ, ಪ್ರಾಚಾರ್ಯೆ ನೀಲಕಂಠೇಶ್ವರಿ ಸೇರಿದಂತೆ ಇತರರು ಇದ್ದರು.1
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತೊಂಡಿಹಾಳ ಸಮೀಪದ ಮಾಗ೯ದಶ೯ನ ಶಿಕ್ಷಣ ಸಂಸ್ಥೆಯ ಹತ್ತಿರದ ಅಡವಿಯೊಳಗೆ ರುಂಡ ಇಲ್ಲದ ಪುರುಷನ ಶವವೊಂದು ಫೆ.೧೮ ಬುಧವಾರ ರಾತ್ರಿ ಸಮಯದಲ್ಲಿ ಕಂಡು ಬಂದಿದೆ. ಮೃತನ ಗುರುತು ಸಿಗದ ಹಾಗೆ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್,ಡಿವಾಯ್‌ಎಸ್‌ಪಿ, ಸಿಪಿಐ, ಪಿಎಸ್‌ಐ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೈಯಾದ ವ್ಯಕ್ತಿಯ ರುಂಡ್ ಇನ್ನೂ ಪತ್ತೆಯಾಗಿಲ್ಲ ಪೋಲಿಸರ ಕಾರ್ಯಾಚರಣೆಯನ್ನು ನಡೆಸಿದ್ದಾರೆ.3
- ಹೊಸ ಬಬಲಾದಿ ಮಠದಲ್ಲಿ 2026ರ ಕಾಲ ಜ್ಞಾನ ಸಾರಿದ ಸದಾಶಿವ ಅಜ್ಜನ್ನವರು ಹಾಗೂ ಶಿವರುದ್ರಯ್ಯ ಮುತ್ಯಾ1
- ವಿಜಯಪುರ: ಬಾಲಕಿ ಮೇಲೆ ನಾಯಿಗಳ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆ ವಿಜಯಪುರದಲ್ಲಿ ಬೀದಿ ನಾಯಿಗಳ ದಾಳಿಗೆ 6 ವರ್ಷದ ಅನ್ವಿತಾ ಮಲ್ಲಿಕಾರ್ಜುನ ಶೆಟ್ಟಿ ಎಂಬ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಕೆ ಎಸ್ ಆರ್ ಟಿ ಸಿ ಕಾಲೋನಿಯಲ್ಲಿ ಅಂಗಡಿಗೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿಗಳ ದಾಳಿಯಿಂದ ಬಾಲಕಿಯ ಕಣ್ಣು, ಕೈ-ಕಾಲು, ಬೆನ್ನಿಗೆ ಗಾಯಗಳಾಗಿದ್ದು, ಕಣ್ಣಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಮತ್ತು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.1
- ತುಮಕೂರು ನಗರ ಪಾಲಿಕೆ ಮತ್ತು ಶಾಸಕರ ವಿರುದ್ಧ ಜನಕ್ರೋಶ1
- ಬಾಗಲಕೋಟೆ: ಜಿಲ್ಲೆಯ ತೇರದಾಳ ಪಟ್ಟಣದ ಲಿವಿಂಗ್ ಜೋಡಿಯೊಂದು ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆತಂಕ ಮೂಡಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಜೋಡಿಯನ್ನು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಜೋಡಿ ಸಾವು-ಬದುಕಿನ ನಡುವೆ ನರಳಾಡುತ್ತಿದೆ. 25 ವರ್ಷದ ಅಕ್ಷತಾ ಶ್ರೀಶೈಲ ಸತ್ತಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 45 ವರ್ಷದ ಗುರುಪಾದಯ್ಯ ಮಠಪತಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲು ಗಾಯಾಳುಗಳನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಕ್ಷತಾ ಅವರ ದೇಹದ ಸುಮಾರು 90 ಶೇಕಡಾ ಭಾಗ ಸುಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.1