ತರಳಬಾಳು ಮಠದ ಪರಂಪರೆ, ಜನಕಲ್ಯಾಣದ ಕಾಳಜಿ ಶ್ಲಾಘನೀಯ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ಆಗಸ್ಟ್ 27: ತರಳಬಾಳು ಮಠದ ಶ್ರೀಗಳ ಬಗ್ಗೆ ಅಪಾರ ಗೌರವವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯಗಳು ಶಕ್ತಿಶಾಲಿಯಾಗಿ ಬೆಳೆದಿರುವ ಇಂದಿನ ಕಾಲದಲ್ಲೂ ಮಠದಲ್ಲಿ ನ್ಯಾಯನಿರ್ಣಯದ ಪರಂಪರೆ ಮುಂದುವರಿದಿರುವುದು ಅದರ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವಕ್ಕೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅವರು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತರಳಬಾಳು ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ತರಳಬಾಳುವಿನ ಸಿರಿಗೆರೆ ಮಠದ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದು ಮಾತನಾಡಿದರು. ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆಯವರು ನ್ಯಾಯನಿರ್ಣಯದ ಪರಂಪರೆಯನ್ನು ಮುಂದುವರಿಸಿಕೊಂಡು ಬರುತ್ತಿರುವಂತೆ ತರಳಬಾಳು ಮಠವೂ ತನ್ನದೇ ಆದ ವಿಶಿಷ್ಟ ಪರಂಪರೆಯನ್ನು ಉಳಿಸಿಕೊಂಡಿದೆ ಎಂದು ಅವರು ತಿಳಿಸಿದರು. ಶ್ರೀಗಳು ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ನೀರಾವರಿ ಕ್ಷೇತ್ರದ ಬಗ್ಗೆ ಅವರಿಗೆ ಅಪಾರ ಕಾಳಜಿಯಿದ್ದು, ರೈತರ ಬದುಕು ಮತ್ತು ಜನರ ಕಲ್ಯಾಣದ ಬಗ್ಗೆಯೇ ಮಾತನಾಡುತ್ತಾರೆ ಎಂದು ಮುಖ್ಯಮಂತ್ರಿ ಅವರು ಹೇಳಿದರು. ಜನರ ಕಲ್ಯಾಣ ಹಾಗೂ ರೈತರ ಬದುಕಿಗಾಗಿ ಶ್ರೀಗಳು ತೋರುತ್ತಿರುವ ಕಾಳಜಿ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದರು. ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್, ಶಾಸಕರಾದ ಸರ್ಮರ್ಥ್ ಶಾಮನೂರು ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ತರಳಬಾಳು ಮಠದ ಪರಂಪರೆ, ಜನಕಲ್ಯಾಣದ ಕಾಳಜಿ ಶ್ಲಾಘನೀಯ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ಆಗಸ್ಟ್ 27: ತರಳಬಾಳು ಮಠದ ಶ್ರೀಗಳ ಬಗ್ಗೆ ಅಪಾರ ಗೌರವವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯಗಳು ಶಕ್ತಿಶಾಲಿಯಾಗಿ ಬೆಳೆದಿರುವ ಇಂದಿನ ಕಾಲದಲ್ಲೂ ಮಠದಲ್ಲಿ ನ್ಯಾಯನಿರ್ಣಯದ ಪರಂಪರೆ ಮುಂದುವರಿದಿರುವುದು ಅದರ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವಕ್ಕೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅವರು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತರಳಬಾಳು ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ತರಳಬಾಳುವಿನ ಸಿರಿಗೆರೆ ಮಠದ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದು ಮಾತನಾಡಿದರು. ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆಯವರು ನ್ಯಾಯನಿರ್ಣಯದ ಪರಂಪರೆಯನ್ನು ಮುಂದುವರಿಸಿಕೊಂಡು ಬರುತ್ತಿರುವಂತೆ ತರಳಬಾಳು ಮಠವೂ ತನ್ನದೇ ಆದ ವಿಶಿಷ್ಟ ಪರಂಪರೆಯನ್ನು ಉಳಿಸಿಕೊಂಡಿದೆ ಎಂದು ಅವರು ತಿಳಿಸಿದರು. ಶ್ರೀಗಳು ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ನೀರಾವರಿ ಕ್ಷೇತ್ರದ ಬಗ್ಗೆ ಅವರಿಗೆ ಅಪಾರ ಕಾಳಜಿಯಿದ್ದು, ರೈತರ ಬದುಕು ಮತ್ತು ಜನರ ಕಲ್ಯಾಣದ ಬಗ್ಗೆಯೇ ಮಾತನಾಡುತ್ತಾರೆ ಎಂದು ಮುಖ್ಯಮಂತ್ರಿ ಅವರು ಹೇಳಿದರು. ಜನರ ಕಲ್ಯಾಣ ಹಾಗೂ ರೈತರ ಬದುಕಿಗಾಗಿ ಶ್ರೀಗಳು ತೋರುತ್ತಿರುವ ಕಾಳಜಿ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದರು. ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್, ಶಾಸಕರಾದ ಸರ್ಮರ್ಥ್ ಶಾಮನೂರು ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.
- ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ 9 ವರ್ಷಗಳ ಕಾಲ ಗ್ರಾಮಸ್ಥರು ಕಂಡಿದ್ದ ಕನಸು ಇದೀಗ ನನಸಾಗಿದೆ. ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ನೂತನ ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮಠಾಧೀಶರು, ಗಣ್ಯರು ಹಾಗೂ ಸಹಸ್ರಾರು ಭಕ್ತರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಾಯ್ಸ್ ಓವರ್: ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ಗ್ರಾಮಸ್ಥರ ಸುಮಾರು 9 ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿರುವ ನೂತನ ದೇವಸ್ಥಾನವು ಗ್ರಾಮಸ್ಥರ ಭಕ್ತಿ ಮತ್ತು ಒಗ್ಗಟ್ಟಿಗೆ ಸಾಕ್ಷಿಯಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ಎಲೆರಾಂಪುರ ಮಠದ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಹಾಗೂ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಿ ಕುಬೇರ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ದೇವಸ್ಥಾನವನ್ನು ಉದ್ಘಾಟಿಸಿದರು. ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ: ಪ್ರತಿಯೊಂದು ಹಳ್ಳಿಯಲ್ಲೂ ಸಿರಿವಂತರು ಹಾಗೂ ಅನುಕೂಲಸ್ಥರು ತಮ್ಮ ಒಳ್ಳೆಯ ಮನಸ್ಸಿನಿಂದ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ದೇವಸ್ಥಾನಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿದ್ದು, ಇದೇ ರೀತಿ ಪ್ರತಿಯೊಂದು ಗ್ರಾಮದಲ್ಲೂ ಉತ್ತಮ ಶಾಲೆಗಳಿರಬೇಕು. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಆಚಾರ-ವಿಚಾರಗಳ ಅರಿವು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಸಮಾಜದ ಮೇಲಿದೆ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸುಸ್ಥಿರ ಬದಲಾವಣೆ ಸಾಧ್ಯ ಎಂದರು. ಉದ್ಯಮಿ ನೀಲೇಶ್ ಮಾತನಾಡಿ: ನಾವು ಎಲ್ಲೇ ಇದ್ದರೂ, ಹೇಗೆ ಇದ್ದರೂ, ನಾವು ಹುಟ್ಟಿದ ಗ್ರಾಮವನ್ನು ಮರೆಯಬಾರದು. ನಮ್ಮ ಗ್ರಾಮಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮಗಳ ಅಭಿವೃದ್ಧಿಗೆ ಆರ್ಥಿಕ ಸಹಾಯದ ಜೊತೆಗೆ ಸಮಯ, ಶ್ರಮ ಹಾಗೂ ಮಾರ್ಗದರ್ಶನ ನೀಡುವ ಮೂಲಕವೂ ಸೇವೆ ಸಲ್ಲಿಸಬಹುದು. ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಡಾ. ಹನುಮಂತನಾಥ ಸ್ವಾಮೀಜಿ ಆಶೀರ್ವಚನ ನೀಡಿ: 48 ದಿನಗಳ ಕಾಲ ನಿಷ್ಠೆ, ಭಕ್ತಿ ಮತ್ತು ಶ್ರದ್ಧೆಯಿಂದ ಗಣೇಶನ ಪೂಜೆ ಮಾಡಿದರೆ ಭಗವಂತನ ಅನುಗ್ರಹ ದೊರೆಯುತ್ತದೆ. ಆದರೆ ದೇವರ ಅನುಗ್ರಹ ಪಡೆಯುವ ಜೊತೆಗೆ ತಂದೆ-ತಾಯಿಯ ಸೇವೆ ಮಾಡುವುದು ಅತ್ಯಂತ ಮುಖ್ಯ. ಹಿರಿಯರನ್ನು ಗೌರವಿಸಿ, ಸತ್ಯ, ಧರ್ಮ ಹಾಗೂ ನೀತಿಯ ಮಾರ್ಗದಲ್ಲಿ ಜೀವನ ನಡೆಸಬೇಕು. ಭಕ್ತಿ ನಮ್ಮ ಬದುಕಿಗೆ ದಾರಿ ತೋರಿಸುವ ಶಕ್ತಿಯಾಗಬೇಕು ಎಂದು ತಿಳಿಸಿದರು. ಶ್ರೀ ವೀರ ಬಸವಲಿಂಗ ಸ್ವಾಮೀಜಿ ಮಾತನಾಡಿ: ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲ, ಸಂಸ್ಕಾರವಂತರನ್ನಾಗಿಯೂ ಬೆಳೆಸಬೇಕು. ಮೊಬೈಲ್ ಮತ್ತು ಟಿವಿಯ ಬಳಕೆಯನ್ನು ಕಡಿಮೆ ಮಾಡಿ, ಮಕ್ಕಳಿಗೆ ಕುಟುಂಬದ ಮೌಲ್ಯಗಳನ್ನು ಕಲಿಸಬೇಕು. ‘ಎ’ ಎಂದರೆ ಅಪ್ಪ-ಅಮ್ಮ, ‘ಬಿ’ ಎಂದರೆ ಬಂಧು-ಬಳಗ ಎಂಬಂತೆ ಸಂಬಂಧಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ತಂದೆ-ತಾಯಿ, ಗುರುಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಬೆಳೆಸಬೇಕು ಎಂದು ಕರೆ ನೀಡಿದರು. ಉದ್ಯಮಿ ಶ್ರೀನಾಗ್ ಮಾತನಾಡಿ: ಸಂಕೇನಹಳ್ಳಿ ಗ್ರಾಮದಲ್ಲಿ ‘ಕುಬೇರ ಗಣಪತಿ’ ಎಂಬ ಹೆಸರು ಬರಲು ಪ್ರಮುಖ ಕಾರಣ ಗ್ರಾಮಸ್ಥರ ಭಕ್ತಿ, ಒಗ್ಗಟ್ಟು ಮತ್ತು ಸಂಕಲ್ಪ. ಗ್ರಾಮಸ್ಥರೆಲ್ಲರೂ ಒಂದಾಗಿ ನಿಂತು ದೇವಸ್ಥಾನದ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಇದು ಕೇವಲ ದೇವಸ್ಥಾನವಲ್ಲ, ಗ್ರಾಮದ ಜನರ ಒಗ್ಗಟ್ಟಿನ ಪ್ರತೀಕವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗೆ ಶ್ರಮಿಸೋಣ ಎಂದರು. ವಾಯ್ಸ್ ಓವರ್: ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಕೇನಹಳ್ಳಿ, ಗೋಕುಲ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕುಬೇರ ಗಣಪತಿಯ ದರ್ಶನ ಪಡೆದು ಪುನೀತರಾದರು. ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರಿಂದ ಇಡೀ ಸಂಕೇನಹಳ್ಳಿ ಗ್ರಾಮವು ಹಬ್ಬದ ವಾತಾವರಣದಲ್ಲಿ ಕಂಗೊಳಿಸಿತು. ಆಂಕರ್ ಔಟ್ರೋ: ಒಂಬತ್ತು ವರ್ಷಗಳ ಗ್ರಾಮಸ್ಥರ ಕನಸು ನನಸಾಗಿದ್ದು, ನೂತನ ಕುಬೇರ ಗಣಪತಿ ದೇವಸ್ಥಾನ ಇದೀಗ ಭಕ್ತರ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಿದೆ. ಗ್ರಾಮಸ್ಥರ ಒಗ್ಗಟ್ಟು ಮತ್ತು ಭಕ್ತಿಗೆ ಈ ದೇವಸ್ಥಾನ ಸಾಕ್ಷಿಯಾಗಿದೆ.3
- ಶೀತ, ಕೆಮ್ಮು, ಜ್ವರ ಹೆಚ್ಚಳ: ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ ಚಿತ್ರದುರ್ಗ:ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ ವಸ್ತುಗಳು ಹಾಗೂ ಗಾಳಿಯಲ್ಲಿನ ಕಣಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಈದ್ ಮಿಲಾದ್, ಗೌರಿ ಗಣೇಶ ಚತುರ್ಥಿ, ಓಣಂ, ದಸರಾ ಹಾಗೂ ದೀಪಾವಳಿ ಮುಂತಾದ ಹಬ್ಬಗಳು ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮೂಹಿಕವಾಗಿ ಸೇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಪ್ರಕರಣಗಳು ಕಂಡುಬರುವ ಅಪಾಯವಿದೆ. ಈ ಸಾಂಕ್ರಾಮಿಕ ರೋಗ ಹತೋಟಿಗಾಗಿ ಸಾರ್ವಜನಿಕರು ರೋಗಲಕ್ಷಣಗಳು ಕಂಡುಬಂದಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಕಡ್ಡಾಯವಾಗಿ ಮಾಸ್ಕ್ ಅಥವಾ ಕರವಸ್ತ್ರ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಹಾಗೂ ರೋಗಲಕ್ಷಣಗಳಿಗೆ ಅನುಸಾರವಾಗಿ ಪರೀಕ್ಷೆಗೆ ಒಳಗಾಗಬೇಕು. ಸರ್ಕಾರಿ ಕಚೇರಿ, ವಸತಿ ಸಮುಚ್ಚಯ, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್, ಬಸ್ ಹಾಗೂ ರೈಲ್ವೆ ನಿಲ್ದಾಣ, ವಿದ್ಯಾ ಸಂಸ್ಥೆಗಳು ಮತ್ತು ಮಾರುಕಟ್ಟೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಅಂತರ ಕಾಯ್ದುಕೊಳ್ಳಬೇಕು ಹಾಗೂ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು. ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಕೋರಿದ್ದಾರೆ. (ಫೋಟೋ ಕಳುಹಿಸಿದೆ) ======== ಆ.28ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ಏರ್ಪಡಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಕೊರಮ ಸಮಾಜ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಹೆಚ್.ಜೀವನ್, ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್, ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಅನುರಾಧ ರವಿಕುಮಾರ್, ಚಿತ್ರದುರ್ಗ ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ, ಆರ್ಯ ಈಡಿಗರ ಸೇವಾ ಸಂಘ ಅಧ್ಯಕ್ಷ ಇ.ಎನ್.ಲಕ್ಷ್ಮೀಕಾಂತ ಭಾಗವಹಿಸುವರು. ಚಿತ್ರದುರ್ಗದ ಉಮೇಶ್ ಪತ್ತಾರ ಮತ್ತು ತಂಡ ಹಾಗೂ ಆಯಿತೋಳು ಯಶವಂತ್ ಕುಮಾರ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ. ===========1
- ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು1
- ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗ ಸಂಘ ಉದ್ಘಾಟನಾ ಕಾರ್ಯಕ್ರಮ ತುಮಕೂರು ಜಿಲ್ಲಾ ಒಕ್ಕಲಿಗರ ಸಂಘದಲ್ಲಿ ನಡೆಯುತ್ತಿರುವ ವಿವಿಧ ಪ್ರಗತಿಪರ ಕಾರ್ಯಕ್ರಮಗಳ ಕುರಿತಂತೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು ಇದೆ ಸಂದರ್ಭದಲ್ಲಿ ಶಾಸಕ ಸಿ ಬಿ ಸುರೇಶ್ ಬಾಬು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.1
- ರಸ್ತೆಗೆ ಚಾಚಿದ ಕಳ್ಳೆ ಬೈಕ್ ಸವಾರರು ಸ್ವಲ್ಪ ಯಾಮಾರಿದರೆ ಕಳ್ಳೆಯೋಳಗೆ ಬೈಕ್.1
- ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥 ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು! #SeeratUnNabi #ಸೀರತ್_ಅಭಿಯಾನ #ಕ್ರಾಂತಿಯಜ್ಯೋತಿ #ಪ್ರವಾದಿಮುಹಮ್ಮದ್ﷺ #Muhammadﷺ #ProphetMuhammad #SeeratCampaign #JamaatEIslamiHind #ಚಿತ್ರದುರ್ಗ #Chitradurga #ChitradurgaNews #KarnatakaNews #KannadaNews #BreakingNews #ViralNews #LocalNews #CTownNews #CtownNews #NewsUpdate #ಸುದ್ದಿ #ಸುದ್ದಿವಾಹಿನಿ1
- ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ನಗರದ ಗಾಂಧಿನಗರದ ಮಸೀದಿ ಬಳಿ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈದುಮಿಲಾದ್ ಹಬ್ಬವು ಪ್ರೀತಿ, ಸಹೋದರತೆ, ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಪವಿತ್ರ ದಿನವಾಗಿದೆ. ಸಮಾಜದಲ್ಲಿ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಬೇಕು ಎಂದು ಕರೆ ನೀಡಿದರು. ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು. ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಈ ವೇಳೆ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಂಡಿತ್ತು. ಈದುಮಿಲಾದ್ ಮೂಲಕ ಶಾಂತಿ, ಸಹೋದರತೆ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಮೂಲಕ ಚಳ್ಳಕೆರೆ ನಗರ ಗಮನ ಸೆಳೆಯಿತು.1
- ಗುಬ್ಬಿ ತಾಲೂಕಿನ ಪತ್ರಾವುತನಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಮಾರಮ್ಮ ದೇವಿಯವರ ಚರಮೂರ್ತ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಗುಬ್ಬಿ ಭಾರತ ಸುಸಂಸ್ಕೃತ ರಾಷ್ಟ್ರ ಇಡೀ ವಿಶ್ವವೇ ಭಾರತದ ಸಂಸ್ಕೃತಿಯನ್ನು ಅನುಸರಿಸುತ್ತಿದೆ ಪ್ರತಿಯೊಬ್ಬರೂ ಧರ್ಮ ದಾರಿತವಾಗಿ ಬದುಕನ್ನು ಸಾಗಿಸುವುದು ಸೂಕ್ತ ಎಂದು ಶಿಡ್ಲೇಕೋಣ ಶ್ರೀ ವಾಲ್ಮೀಕಿ ಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಸಂಜಯ್ ಕುಮಾರ ಮಹಾಸ್ವಾಮಿಗಳು ತಿಳಿಸಿದರು. ಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಪತ್ರಾವುತನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಆದಿಶಕ್ತಿ ಮಾರಮ್ಮ ದೇವಿಯವರ ಚರಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದ ಧಾರ್ಮಿಕ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು ಸುಂದರವಾದ ದೇವಾಲಯಗಳನ್ನು ಕಟ್ಟಿದರೆ ಸಾಲದು ಸುಂದರವಾದ ಬದುಕನ್ನು ಕಟ್ಟಿಕೊಂಡು ಸಂಸ್ಕಾರವಂತರಾಗಿ ಬದುಕಬೇಕೆಂದು ತಿಳಿಸಿದರು. ಮಕ್ಕಳಿಗೆ ಚಿಕ್ಕಂದಿನಿಂದಲೇ ಧಾರ್ಮಿಕ ಪ್ರಜ್ಞೆ ಮೂಡಿಸಿ ಸಾಮಾಜಿಕ ಅರಿವು ಮೂಡಿಸಿ ಉತ್ತಮ ಪ್ರಜೆಗಳನ್ನಾಗಿ ಮಾಡಿ ಎಂದರು. ಶಕ್ತಿ ದೇವತೆ ಮಾರಮ್ಮನವರ ಮೂಲವನ್ನ ತಿಳಿಸಿದ ಶ್ರೀಗಳು ಪೂಜೆ ಆಡಂಬರವಾಗಿರಬಾರದು ಮೌಲ್ಯದಿಂದ ಕೂಡಿರಬೇಕು ಅರಿವಿನಿಂದ ಬದುಕಿದರೆ ದೇವರು ತಾನಾಗಿಯೇ ಒಲಿದು ಬರುತ್ತಾನೆ ಎಂದರು. ಬದುಕಿನಲ್ಲಿ ದುಡಿಯುವುದು ಅರ್ಥಪೂರ್ಣವಾಗಿರಬೇಕು ದುಡಿಮೆಯ ಒಂದು ಅಂಶ ಧರ್ಮಕ್ಕೆ ಮೀಸಲಿಡಬೇಕು, ದುಶ್ಚಟಗಳಿಂದ ದೂರ ಇರಬೇಕು ಎಂದರು. ಗ್ರಾಮಗಳು ಅಭಿವೃದ್ಧಿ ಹೊಂದಬೇಕಾದರೆ ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು ಅಂತಹ ಒಗ್ಗಟ್ಟು ನಿಮ್ಮ ಗ್ರಾಮದಲ್ಲಿ ಎದ್ದು ಕಾಣುತ್ತದೆ ಎಂದರು. ಇದೆ ಸಂದರ್ಭದಲ್ಲಿ ದೇವರುಗಳ ಉತ್ಸವ ಅದ್ದೂರಿಯಾಗಿ ನೆರವೇರಿತು, ಬಂದಿದ್ದ ಭಕ್ತಾದಿಗಳಿಗೆ ಮಹಾದಾಸೋಹ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖಂಡರಾದ ಜಿಎನ್ ಬೆಟ್ಟಸ್ವಾಮಿ, ಪಟ್ಟಿ ಲಕ್ಕಮ್ಮದೇವಿ ಪ್ರಧಾನ ಅರ್ಚಕರಾದ ಗೋವಿಂದರಾಜು, ದಯಾನಂದ ಗೌಡ, ಪಣಗಾರ್ ಮೋಹನ್ ಕುಮಾರ್, ಚಿಕ್ಕ ರಂಗಯ್ಯ, ಗಂಗಾಧರಪ್ಪ ವತ್ಸಲ ಕುಮಾರ್, ಚಿಕ್ಕಮ್ಮ ಶ್ರೀ ರಂಗಯ್ಯ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀ ಪುಟ್ಟರಾಜು, ಸದಸ್ಯರಾದ ಶಿವಣ್ಣ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಾಜಣ್ಣ, ವಕೀಲರಾದ ಜಯ ರಂಗಯ್ಯ ಸಿ ರಮೇಶ್ ಪಿ ಎಸ ಐ ನಾಗರಾಜು, ರಮೇಶ್ ರಾವ್, ಏನ್ ಉಮೇಶ್, ಕಾಂತರಾಜು, ಖಜಾಂಚಿ ಸುರೇಶ್, ಕಮಿಟಿ ಅಧ್ಯಕ್ಷ ಕಿಟ್ಟಿ, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಶ್ರೀ ರಂಗಯ್ಯ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಪಾಲ್ಗೊಂಡಿದ್ದರು.1