logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಯುವ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜರುಗಿತು. ವೇದಿಕೆಯ ರಾಜ್ಯಾಧ್ಯಕ್ಷರಾದ ಸುನಿಲ್.ಎಂ.ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಕೆ.ಆರ್.ಪೇಟೆ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಮೋಹನ.ಎನ್. ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಸುನಿಲ್.ಎಂ.ಎಸ್. ಅವರು, ಸಂಘಟನೆಯ ಕಾರ್ಯಕರ್ತರು ಸದಾ ಸಮಾಜಮುಖಿ ಹೋರಾಟಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕನ್ನಡ ನಾಡು, ನುಡಿ, ನೆಲ ಮತ್ತು ಜಲಕ್ಕೆ ಧಕ್ಕೆ ಬಂದಾಗ ಬೀದಿಗಿಳಿದು ಹೋರಾಡುವ ಗುಣವನ್ನು ಬೆಳೆಸಿಕೊಳ್ಳಬೇಕು. ಕೇವಲ ಹುದ್ದೆ ಅಥವಾ ಹಣದ ಆಸೆಗಾಗಿ ಸಂಘಟನೆಗೆ ಬರಬಾರದು. ಸೇವೆ ಮಾಡುವ ಗುಣವಿದ್ದರೆ ಮಾತ್ರ ಕನ್ನಡ ಪರ ಸಂಘಟನೆಗೆ ಬಂದು ಸಮಾಜದಲ್ಲಿ ಮಾದರಿ ವ್ಯಕ್ತಿಯಾಗಬೇಕು ಎಂದು ಅವರು ಕಿವಿಮಾತು ಹೇಳಿದರು. ರೈತರು, ಕಾರ್ಮಿಕರು ಮತ್ತು ಜನಸಾಮಾನ್ಯರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿ ಹೋರಾಡುವುದೇ ಸಂಘಟನೆಯ ಮುಖ್ಯ ಧ್ಯೇಯವಾಗಿದ್ದು, ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಾಲ್ಲೂಕಿನಲ್ಲಿ ಸಂಘಟನೆಯನ್ನು ಬಲಪಡಿಸಲು ಶ್ರಮಿಸಬೇಕು ಎಂದು ಸಲಹೆ ನೀಡಿದರು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿ ಆದೇಶ ಪತ್ರ ಹಾಗೂ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಮಹಿಳಾ ಘಟಕದ ಅಧ್ಯಕ್ಷರಾಗಿ ರೋಷನ್ ಭಾನು, ಕಾರ್ಮಿಕ ಘಟಕದ ಅಧ್ಯಕ್ಷರಾಗಿ ನಿಸಾರ್ ಅಹಮದ್, ತಾಲ್ಲೂಕು ಮಹಿಳಾ ಕಾರ್ಯಾಧ್ಯಕ್ಷರಾಗಿ ಬಿ.ಎಸ್.ವಿದ್ಯಾ, ಮಹಿಳಾ ಉಪಾಧ್ಯಕ್ಷರಾಗಿ ರಾಧಾ ಹಾಗೂ ಅಕ್ಕಿಹೆಬ್ಬಾಳು ಹೋಬಳಿ ಘಟಕದ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ. ತಾಲ್ಲೂಕು ಘಟಕದ ಉಪಾಧ್ಯಕ್ಷರುಗಳಾಗಿ ಕೆ.ಆರ್.ಬನ್ನಾರಿ, ಕಿಶೋರ್.ಟಿ.ಎನ್, ತಾಲ್ಲೂಕು ಕಾರ್ಯದರ್ಶಿಗಳಾಗಿ ರಮೇಶ್ ಸೂರಪ್ಪ, ಸಣ್ಣಬೋರಯ್ಯ, ಮಂಜು, ಅಶೋಕ್, ಆಟೋ ಘಟಕದ ಅಧ್ಯಕ್ಷರಾಗಿ ತೇಜು ಹಾಗೂ ಸದಸ್ಯರಾಗಿ ಶಿವಣ್ಣ, ಪರಮೇಶ್, ಭಾಸ್ಕರ್, ಮಹೇಶ್, ಶ್ರೀಕಾಂತ್, ಸಾಗರ್ ಮತ್ತು ಪುರುಷೋತ್ತಮ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಯುವ ರಕ್ಷಣಾ ವೇದಿಕೆಯ ರಾಜ್ಯ ಉಪಾಧ್ಯಕ್ಷ ಬಸವರಾಜು, ರಾಜ್ಯ ಮಹಿಳಾ ಉಪಾಧ್ಯಕ್ಷೆ ಯಶೋಧಮ್ಮ, ರಾಜ್ಯ ಪ್ರಚಾರ ಸಮಿತಿ ಕಾರ್ಯದರ್ಶಿ ದರ್ಶನ್, ಮಂಡ್ಯ ಜಿಲ್ಲಾಧ್ಯಕ್ಷ ಗೋಪಿನಾಥ್, ಮಂಡ್ಯ ಜಿಲ್ಲಾ ಮಹಿಳಾ ಅಧ್ಯಕ್ಷೆ ಯಶೋಧ, ರಾಜ್ಯ ಸಂಚಾಲಕ ರಾಘವೇಂದ್ರ ಹಾಗೂ ಮೈಸೂರು ಜಿಲ್ಲಾ ವಿಭಾಗೀಯ ಘಟಕದ ಜಿಲ್ಲಾಧ್ಯಕ್ಷ ರಾಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

2 hrs ago
user_Srinivas krpet
Srinivas krpet
Newspaper distribution ಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ•
2 hrs ago
e5e957d1-ed09-4434-9926-65b37c0d0c64

ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಯುವ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜರುಗಿತು. ವೇದಿಕೆಯ ರಾಜ್ಯಾಧ್ಯಕ್ಷರಾದ ಸುನಿಲ್.ಎಂ.ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಕೆ.ಆರ್.ಪೇಟೆ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಮೋಹನ.ಎನ್. ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಸುನಿಲ್.ಎಂ.ಎಸ್. ಅವರು, ಸಂಘಟನೆಯ ಕಾರ್ಯಕರ್ತರು ಸದಾ ಸಮಾಜಮುಖಿ ಹೋರಾಟಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕನ್ನಡ ನಾಡು, ನುಡಿ, ನೆಲ ಮತ್ತು ಜಲಕ್ಕೆ ಧಕ್ಕೆ ಬಂದಾಗ ಬೀದಿಗಿಳಿದು ಹೋರಾಡುವ ಗುಣವನ್ನು ಬೆಳೆಸಿಕೊಳ್ಳಬೇಕು. ಕೇವಲ ಹುದ್ದೆ ಅಥವಾ ಹಣದ ಆಸೆಗಾಗಿ ಸಂಘಟನೆಗೆ ಬರಬಾರದು. ಸೇವೆ ಮಾಡುವ ಗುಣವಿದ್ದರೆ ಮಾತ್ರ ಕನ್ನಡ ಪರ ಸಂಘಟನೆಗೆ ಬಂದು ಸಮಾಜದಲ್ಲಿ ಮಾದರಿ ವ್ಯಕ್ತಿಯಾಗಬೇಕು ಎಂದು ಅವರು ಕಿವಿಮಾತು ಹೇಳಿದರು. ರೈತರು, ಕಾರ್ಮಿಕರು ಮತ್ತು ಜನಸಾಮಾನ್ಯರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿ ಹೋರಾಡುವುದೇ ಸಂಘಟನೆಯ ಮುಖ್ಯ ಧ್ಯೇಯವಾಗಿದ್ದು, ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಾಲ್ಲೂಕಿನಲ್ಲಿ ಸಂಘಟನೆಯನ್ನು ಬಲಪಡಿಸಲು ಶ್ರಮಿಸಬೇಕು ಎಂದು ಸಲಹೆ ನೀಡಿದರು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿ ಆದೇಶ ಪತ್ರ ಹಾಗೂ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಮಹಿಳಾ ಘಟಕದ ಅಧ್ಯಕ್ಷರಾಗಿ ರೋಷನ್ ಭಾನು, ಕಾರ್ಮಿಕ ಘಟಕದ ಅಧ್ಯಕ್ಷರಾಗಿ ನಿಸಾರ್ ಅಹಮದ್, ತಾಲ್ಲೂಕು ಮಹಿಳಾ ಕಾರ್ಯಾಧ್ಯಕ್ಷರಾಗಿ ಬಿ.ಎಸ್.ವಿದ್ಯಾ, ಮಹಿಳಾ ಉಪಾಧ್ಯಕ್ಷರಾಗಿ ರಾಧಾ ಹಾಗೂ ಅಕ್ಕಿಹೆಬ್ಬಾಳು ಹೋಬಳಿ ಘಟಕದ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ. ತಾಲ್ಲೂಕು ಘಟಕದ ಉಪಾಧ್ಯಕ್ಷರುಗಳಾಗಿ ಕೆ.ಆರ್.ಬನ್ನಾರಿ, ಕಿಶೋರ್.ಟಿ.ಎನ್, ತಾಲ್ಲೂಕು ಕಾರ್ಯದರ್ಶಿಗಳಾಗಿ ರಮೇಶ್ ಸೂರಪ್ಪ, ಸಣ್ಣಬೋರಯ್ಯ, ಮಂಜು, ಅಶೋಕ್, ಆಟೋ ಘಟಕದ ಅಧ್ಯಕ್ಷರಾಗಿ ತೇಜು ಹಾಗೂ ಸದಸ್ಯರಾಗಿ ಶಿವಣ್ಣ, ಪರಮೇಶ್, ಭಾಸ್ಕರ್, ಮಹೇಶ್, ಶ್ರೀಕಾಂತ್, ಸಾಗರ್ ಮತ್ತು ಪುರುಷೋತ್ತಮ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಯುವ ರಕ್ಷಣಾ ವೇದಿಕೆಯ ರಾಜ್ಯ ಉಪಾಧ್ಯಕ್ಷ ಬಸವರಾಜು, ರಾಜ್ಯ ಮಹಿಳಾ ಉಪಾಧ್ಯಕ್ಷೆ ಯಶೋಧಮ್ಮ, ರಾಜ್ಯ ಪ್ರಚಾರ ಸಮಿತಿ ಕಾರ್ಯದರ್ಶಿ ದರ್ಶನ್, ಮಂಡ್ಯ ಜಿಲ್ಲಾಧ್ಯಕ್ಷ ಗೋಪಿನಾಥ್, ಮಂಡ್ಯ ಜಿಲ್ಲಾ ಮಹಿಳಾ ಅಧ್ಯಕ್ಷೆ ಯಶೋಧ, ರಾಜ್ಯ ಸಂಚಾಲಕ ರಾಘವೇಂದ್ರ ಹಾಗೂ ಮೈಸೂರು ಜಿಲ್ಲಾ ವಿಭಾಗೀಯ ಘಟಕದ ಜಿಲ್ಲಾಧ್ಯಕ್ಷ ರಾಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಖ್ಯಾತರಾಗಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ತಮ್ಮ 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸುಮಾರು ಆರು ದಶಕಗಳ ಸುದೀರ್ಘ ಸಂಗೀತ ಪಯಣ ಹೊಂದಿದ್ದ ಅವರು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ 17ಕ್ಕೂ ಹೆಚ್ಚು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡುವ ಮೂಲಕ ಕೋಟ್ಯಾಂತರ ಅಭಿಮಾನಿಗಳ ಹೃದಯ ಗೆದ್ದಿದ್ದರು. ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಅನೇಕ ಗೌರವಗಳನ್ನು ಪಡೆದಿದ್ದ ಅವರ ನಿಧನವು ಭಾರತೀಯ ಸಂಗೀತ ಲೋಕಕ್ಕೆ ತುಂಬಲಾರದ ಅಪಾರ ನಷ್ಟವನ್ನುಂಟು ಮಾಡಿದೆ. ಅಪ್ರತಿಮ ಗಾಯಕಿಯ ನಿಧನಕ್ಕೆ ಅಭಿಮಾನಿಗಳು, ಕಲಾವಿದರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸುತ್ತಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
    3
    ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಖ್ಯಾತರಾಗಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ತಮ್ಮ 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸುಮಾರು ಆರು ದಶಕಗಳ ಸುದೀರ್ಘ ಸಂಗೀತ ಪಯಣ ಹೊಂದಿದ್ದ ಅವರು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ 17ಕ್ಕೂ ಹೆಚ್ಚು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡುವ ಮೂಲಕ ಕೋಟ್ಯಾಂತರ ಅಭಿಮಾನಿಗಳ ಹೃದಯ ಗೆದ್ದಿದ್ದರು. ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಅನೇಕ ಗೌರವಗಳನ್ನು ಪಡೆದಿದ್ದ ಅವರ ನಿಧನವು ಭಾರತೀಯ ಸಂಗೀತ ಲೋಕಕ್ಕೆ ತುಂಬಲಾರದ ಅಪಾರ ನಷ್ಟವನ್ನುಂಟು ಮಾಡಿದೆ.

ಅಪ್ರತಿಮ ಗಾಯಕಿಯ ನಿಧನಕ್ಕೆ ಅಭಿಮಾನಿಗಳು, ಕಲಾವಿದರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸುತ್ತಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
    user_ಚಂದನ್ ಕುಮಾರ್ M S ಮಿರ್ಲೆ
    ಚಂದನ್ ಕುಮಾರ್ M S ಮಿರ್ಲೆ
    Grain Trader ಸಾಲಿಗ್ರಾಮ, ಮೈಸೂರು, ಕರ್ನಾಟಕ•
    1 hr ago
  • ಮೈಸೂರಿನ ಕೆ.ಆರ್. ಮೊಹಲ್ಲಾದ 100 ಅಡಿ ಚಾಮರಾಜ ಡಬಲ್ ರಸ್ತೆಯಲ್ಲಿರುವ ಜೀನತ್ ಉಲ್ ಮಸೀದಿಯ ಅಕ್ರಮಗಳಿಗೆ ಸಂಬಂಧಿಸಿದ ವಾಸ್ತವಾಂಶ ವರದಿಯನ್ನು ಮೈಸೂರು ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಜಿಲ್ಲಾ ವಕ್ಫ್ ಅಧಿಕಾರಿಗಳು ತಡೆಹಿಡಿದಿರುವುದರ ಹಿಂದೆ ಯಾವ ಕಾರಣವಿದೆ ಎಂಬ ಗಂಭೀರ ಪ್ರಶ್ನೆ ಮೂಡಿದೆ. ಈ ಮಸೀದಿಯಲ್ಲಿ ನಡೆದಿರುವ ಅಕ್ರಮಗಳ ವರದಿಯನ್ನು ತಡೆಹಿಡಿದಿರುವುದರ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು, ಇದು ಭಾರತದಲ್ಲಿ ವೈರಲ್ ಆಗುತ್ತಿದೆ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರು ಮತ್ತು ಜಿಲ್ಲಾ ವಕ್ಫ್ ಅಧಿಕಾರಿಗಳು ಈ ವಾಸ್ತವಾಂಶ ವರದಿಯನ್ನು ಯಾವ ಕಾರಣಕ್ಕಾಗಿ ತಡೆಹಿಡಿದಿದ್ದಾರೆ ಎಂದು ಪ್ರಶ್ನಿಸಲಾಗುತ್ತಿದೆ.
    1
    ಮೈಸೂರಿನ ಕೆ.ಆರ್. ಮೊಹಲ್ಲಾದ 100 ಅಡಿ ಚಾಮರಾಜ ಡಬಲ್ ರಸ್ತೆಯಲ್ಲಿರುವ ಜೀನತ್ ಉಲ್ ಮಸೀದಿಯ ಅಕ್ರಮಗಳಿಗೆ ಸಂಬಂಧಿಸಿದ ವಾಸ್ತವಾಂಶ ವರದಿಯನ್ನು ಮೈಸೂರು ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಜಿಲ್ಲಾ ವಕ್ಫ್ ಅಧಿಕಾರಿಗಳು ತಡೆಹಿಡಿದಿರುವುದರ ಹಿಂದೆ ಯಾವ ಕಾರಣವಿದೆ ಎಂಬ ಗಂಭೀರ ಪ್ರಶ್ನೆ ಮೂಡಿದೆ. ಈ ಮಸೀದಿಯಲ್ಲಿ ನಡೆದಿರುವ ಅಕ್ರಮಗಳ ವರದಿಯನ್ನು ತಡೆಹಿಡಿದಿರುವುದರ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು, ಇದು ಭಾರತದಲ್ಲಿ ವೈರಲ್ ಆಗುತ್ತಿದೆ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರು ಮತ್ತು ಜಿಲ್ಲಾ ವಕ್ಫ್ ಅಧಿಕಾರಿಗಳು ಈ ವಾಸ್ತವಾಂಶ ವರದಿಯನ್ನು ಯಾವ ಕಾರಣಕ್ಕಾಗಿ ತಡೆಹಿಡಿದಿದ್ದಾರೆ ಎಂದು ಪ್ರಶ್ನಿಸಲಾಗುತ್ತಿದೆ.
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    7 hrs ago
  • ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ದಸರಾ ಪಾಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಮೈಸೂರು ಸಂಸದ ಯದುವೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ದಸರಾ ಸಂದರ್ಭದಲ್ಲಿ ಪ್ರತಿವರ್ಷ ಪಾಸ್ ವಿತರಣೆಯ ವಿಚಾರವೇ ದೊಡ್ಡ ಗೊಂದಲಕ್ಕೆ ಕಾರಣವಾಗುತ್ತಿದೆ ಎಂದಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಮ್ಮ ಮುಖ್ಯ ಕೆಲಸ ಬಿಟ್ಟು ಪಾಸ್‌ಗಳ ಹಂಚಿಕೆ ವಿಚಾರದಲ್ಲೇ ಸಮಯ ಕಳೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಗೊಂದಲಕ್ಕೆ ಶಾಶ್ವತ ಪರಿಹಾರವಾಗಿ ಗ್ಲೋಬಲ್ ಟೆಂಡರ್ ಮಾದರಿಯಲ್ಲಿ ಪಾಸ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿರುವುದಾಗಿ ಯದುವೀರ್ ತಿಳಿಸಿದ್ದಾರೆ. ಇದೇ ವೇಳೆ, 'ಸರಳ ದಸರಾ' ಎಂಬ ಹೆಸರಿನಲ್ಲಿ ಆಚರಣೆ ನಡೆಸುವುದರಿಂದ ಮೈಸೂರಿನ ಪ್ರವಾಸೋದ್ಯಮಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಆ ರೀತಿಯ ಹೆಸರು ಅಥವಾ ಪರಿಕಲ್ಪನೆಯನ್ನು ಬಳಸಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಈ ಸರ್ಕಾರವು ಸಾರ್ವಜನಿಕರ ಮಾತನ್ನು ಕೇಳುವುದಿಲ್ಲ ಎಂದು ಯದುವೀರ್ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    1
    ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ದಸರಾ ಪಾಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಮೈಸೂರು ಸಂಸದ ಯದುವೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ದಸರಾ ಸಂದರ್ಭದಲ್ಲಿ ಪ್ರತಿವರ್ಷ ಪಾಸ್ ವಿತರಣೆಯ ವಿಚಾರವೇ ದೊಡ್ಡ ಗೊಂದಲಕ್ಕೆ ಕಾರಣವಾಗುತ್ತಿದೆ ಎಂದಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಮ್ಮ ಮುಖ್ಯ ಕೆಲಸ ಬಿಟ್ಟು ಪಾಸ್‌ಗಳ ಹಂಚಿಕೆ ವಿಚಾರದಲ್ಲೇ ಸಮಯ ಕಳೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಗೊಂದಲಕ್ಕೆ ಶಾಶ್ವತ ಪರಿಹಾರವಾಗಿ ಗ್ಲೋಬಲ್ ಟೆಂಡರ್ ಮಾದರಿಯಲ್ಲಿ ಪಾಸ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿರುವುದಾಗಿ ಯದುವೀರ್ ತಿಳಿಸಿದ್ದಾರೆ. ಇದೇ ವೇಳೆ, 'ಸರಳ ದಸರಾ' ಎಂಬ ಹೆಸರಿನಲ್ಲಿ ಆಚರಣೆ ನಡೆಸುವುದರಿಂದ ಮೈಸೂರಿನ ಪ್ರವಾಸೋದ್ಯಮಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಆ ರೀತಿಯ ಹೆಸರು ಅಥವಾ ಪರಿಕಲ್ಪನೆಯನ್ನು ಬಳಸಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಈ ಸರ್ಕಾರವು ಸಾರ್ವಜನಿಕರ ಮಾತನ್ನು ಕೇಳುವುದಿಲ್ಲ ಎಂದು ಯದುವೀರ್ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • ಮಂಡ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಬಂಧಿಸಿರುವ ವ್ಯಕ್ತಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಷಣ್ಮುಖೇ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಾಗಣ್ಣಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ.
    1
    ಮಂಡ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಬಂಧಿಸಿರುವ ವ್ಯಕ್ತಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಷಣ್ಮುಖೇ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಾಗಣ್ಣಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    9 hrs ago
  • ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಕಂಬಳ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದ್ದಾರೆ. ಮೈಸೂರು ದಸರಾವನ್ನು ಬೇರೆ ಕಡೆ ಆಯೋಜಿಸಿದರೆ ಹೇಗೋ, ಹಾಗೆಯೇ ದಸರಾ ಸಮಯದಲ್ಲಿ ಮೈಸೂರಿನಲ್ಲಿ ಕಂಬಳ ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟ ಅವರು, ಈ ವಿಚಾರದಲ್ಲಿ ಕಂಬಳ ಬೇಡ ಎಂಬ ಯದುವೀರ್ ಒಡೆಯರ್ ಅವರ ನಿಲುವಿಗೆ ತಾವು ಸಹಮತ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ. ಈ ವಿಷಯದಲ್ಲಿ ಹಠಮಾರಿತನ ಬಿಟ್ಟು ಜನರ ಮಾತಿಗೆ ಮನ್ನಣೆ ನೀಡುವಂತೆ ಡಿಕೆ ಶಿವಕುಮಾರ್ ಅವರಿಗೆ ವಿಜಯೇಂದ್ರ ಸಲಹೆ ನೀಡಿದ್ದಾರೆ. ತಮಗೆ ಕಂಬಳದ ಮೇಲೆ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಜ್ಯ ಸರ್ಕಾರವು ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ಕಂಬಳ ಆಯೋಜಿಸಲಿ, ಅದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಕಂಬಳಕ್ಕೆ ಅನುದಾನ ನೀಡಿದ್ದನ್ನು ಸ್ಮರಿಸಿದ ಅವರು, ಮೈಸೂರಿನಲ್ಲಿ ದಸರಾ ಸಂಭ್ರಮದ ವೇಳೆ ಕಂಬಳ ಬೇಡ ಎಂಬುದು ಸ್ಥಳೀಯರ ಆಗ್ರಹವಾಗಿದೆ ಎಂದು ಹೇಳಿದ್ದಾರೆ.
    1
    ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಕಂಬಳ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದ್ದಾರೆ. ಮೈಸೂರು ದಸರಾವನ್ನು ಬೇರೆ ಕಡೆ ಆಯೋಜಿಸಿದರೆ ಹೇಗೋ, ಹಾಗೆಯೇ ದಸರಾ ಸಮಯದಲ್ಲಿ ಮೈಸೂರಿನಲ್ಲಿ ಕಂಬಳ ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟ ಅವರು, ಈ ವಿಚಾರದಲ್ಲಿ ಕಂಬಳ ಬೇಡ ಎಂಬ ಯದುವೀರ್ ಒಡೆಯರ್ ಅವರ ನಿಲುವಿಗೆ ತಾವು ಸಹಮತ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ.

ಈ ವಿಷಯದಲ್ಲಿ ಹಠಮಾರಿತನ ಬಿಟ್ಟು ಜನರ ಮಾತಿಗೆ ಮನ್ನಣೆ ನೀಡುವಂತೆ ಡಿಕೆ ಶಿವಕುಮಾರ್ ಅವರಿಗೆ ವಿಜಯೇಂದ್ರ ಸಲಹೆ ನೀಡಿದ್ದಾರೆ. ತಮಗೆ ಕಂಬಳದ ಮೇಲೆ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಜ್ಯ ಸರ್ಕಾರವು ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ಕಂಬಳ ಆಯೋಜಿಸಲಿ, ಅದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಕಂಬಳಕ್ಕೆ ಅನುದಾನ ನೀಡಿದ್ದನ್ನು ಸ್ಮರಿಸಿದ ಅವರು, ಮೈಸೂರಿನಲ್ಲಿ ದಸರಾ ಸಂಭ್ರಮದ ವೇಳೆ ಕಂಬಳ ಬೇಡ ಎಂಬುದು ಸ್ಥಳೀಯರ ಆಗ್ರಹವಾಗಿದೆ ಎಂದು ಹೇಳಿದ್ದಾರೆ.
    user_Ravikumar
    Ravikumar
    Local News Reporter ಹುಣಸೂರು, ಮೈಸೂರು, ಕರ್ನಾಟಕ•
    10 hrs ago
  • ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ದುಮ್ಮನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಪ್ರೊ|| ಎಮ್.ಡಿ. ನಂಜುಂಡಸ್ವಾಮಿಯವರ ಮೂಲ ಸಂಘಟನೆ) ನೂತನ ಗ್ರಾಮ ಶಾಖೆಯನ್ನು ಅಧಿಕೃತವಾಗಿ ಉದ್ಘಾಟಿಸಲಾಗಿದೆ. ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಕಣಕೂರು ಚಂದ್ರಶೇಖರ್ ಅವರು ಈ ಶಾಖೆಯ ಉದ್ಘಾಟನೆಯನ್ನು ನೆರವೇರಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ ಕೆ.ಸಿ. ಚಂದ್ರಶೇಖರ್, ರಂಗಪ್ಪ, ಕೃಷ್ಣಪ್ಪ, ಶಿವಕುಮಾರ್, ಲಕ್ಕಣ್ಣಪ್ಪ, ಪುಟ್ಟಣ್ಣ ಹಾಗೂ ಮತ್ತೊಬ್ಬ ಶಿವಕುಮಾರ್ ಸೇರಿದಂತೆ ದುಮ್ಮನಹಳ್ಳಿ ಗ್ರಾಮದ ಹಲವಾರು ರೈತರುಗಳು ಉಪಸ್ಥಿತರಿದ್ದರು.
    2
    ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ದುಮ್ಮನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಪ್ರೊ|| ಎಮ್.ಡಿ. ನಂಜುಂಡಸ್ವಾಮಿಯವರ ಮೂಲ ಸಂಘಟನೆ) ನೂತನ ಗ್ರಾಮ ಶಾಖೆಯನ್ನು ಅಧಿಕೃತವಾಗಿ ಉದ್ಘಾಟಿಸಲಾಗಿದೆ. ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಕಣಕೂರು ಚಂದ್ರಶೇಖರ್ ಅವರು ಈ ಶಾಖೆಯ ಉದ್ಘಾಟನೆಯನ್ನು ನೆರವೇರಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ ಕೆ.ಸಿ. ಚಂದ್ರಶೇಖರ್, ರಂಗಪ್ಪ, ಕೃಷ್ಣಪ್ಪ, ಶಿವಕುಮಾರ್, ಲಕ್ಕಣ್ಣಪ್ಪ, ಪುಟ್ಟಣ್ಣ ಹಾಗೂ ಮತ್ತೊಬ್ಬ ಶಿವಕುಮಾರ್ ಸೇರಿದಂತೆ ದುಮ್ಮನಹಳ್ಳಿ ಗ್ರಾಮದ ಹಲವಾರು ರೈತರುಗಳು ಉಪಸ್ಥಿತರಿದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    1 hr ago
  • ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಿಲ್ಕ್ ಇಂಡಿಯಾ ವತಿಯಿಂದ ವಿಶೇಷ ಸೀರೆ ಮೇಳವನ್ನು ಆಯೋಜಿಸಲಾಗಿದೆ. ಸಾಂಪ್ರದಾಯಿಕ ಹಾಗೂ ಆಧುನಿಕ ವಿನ್ಯಾಸದ ಸೀರೆಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮೇಳವು ಜುಲೈ 10ರಿಂದ 15ರವರೆಗೆ ನಡೆಯಲಿದ್ದು, ಮಹಿಳೆಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಮೇಳದಲ್ಲಿ ಪಶ್ಚಿಮ ಬಂಗಾಳದ ಕಲ್ಕತ್ತಾ ಜಾಮ್ದಾನಿ, ಬಾಲುಚರಿ ಮತ್ತು ತಾಂತ್ ಸೀರೆಗಳು, ತೆಲಂಗಾಣದ ಪೋಚಂಪಳ್ಳಿ ಇಕ್ಕತ್ ಹಾಗೂ ಗಡ್ವಾಲ್, ತಮಿಳುನಾಡಿನ ಕಾಂಚಿಪುರಂ ಪಟ್ಟು, ಮತ್ತು ಕರ್ನಾಟಕದ ಮೈಸೂರು ಸಿಲ್ಕ್, ಇಳಕಲ್ ಹಾಗೂ ಬೆಂಗಳೂರು ಸಿಲ್ಕ್ ಸೇರಿದಂತೆ ದೇಶದ ವಿವಿಧ ಭಾಗಗಳ ಪ್ರಸಿದ್ಧ ಸೀರೆಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ಇವುಗಳ ಜೊತೆಗೆ ಬನಾರಸಿ, ಲಿನೆನ್, ಕಾಟನ್, ಸಾಫ್ಟ್ ಸಿಲ್ಕ್, ಟಸ್ಸರ್, ಆರ್ಗನ್ಜಾ, ಚಂದೇರಿ, ಮಹೇಶ್ವರಿ, ಜಾರ್ಜೆಟ್ ಮತ್ತು ಕ್ರೇಪ್ ಸೇರಿದಂತೆ ಹಬ್ಬ ಹಾಗೂ ಮದುವೆ ಸಮಾರಂಭಗಳಿಗೆ ಸೂಕ್ತವಾದ ವಿವಿಧ ವಿನ್ಯಾಸದ ಸೀರೆಗಳು ಲಭ್ಯವಿವೆ. ಮದುವೆ, ಗೃಹಪ್ರವೇಶ ಮತ್ತು ಹಬ್ಬಗಳಂತಹ ಶುಭ ಸಮಾರಂಭಗಳಿಗೆ ಅಗತ್ಯವಿರುವ ಸೀರೆಗಳನ್ನು ಒಂದೇ ಸ್ಥಳದಲ್ಲಿ ಖರೀದಿಸಲು ಮೇಳ ಅವಕಾಶ ಕಲ್ಪಿಸಿದೆ. ನೇರವಾಗಿ ನೇಕಾರರಿಂದ ಗ್ರಾಹಕರಿಗೆ ಸೀರೆಗಳು ತಲುಪುವ ವ್ಯವಸ್ಥೆ ಇರುವುದರಿಂದ ಗುಣಮಟ್ಟದ ಸೀರೆಗಳು ಕೈಗೆಟುಕುವ ದರದಲ್ಲಿ ದೊರೆಯುತ್ತಿವೆ. ಅಲ್ಲದೆ, ಕೆಲವು ಆಯ್ದ ಸೀರೆಗಳ ಮೇಲೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸಾರ್ವಜನಿಕರಿಗಾಗಿ ಮುಕ್ತವಾಗಿರುವ ಈ ಮೇಳಕ್ಕೆ ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಮಹಿಳೆಯರು ಕುಟುಂಬ ಸಮೇತರಾಗಿ ಆಗಮಿಸುತ್ತಿದ್ದಾರೆ. ಕೈಮಗ್ಗ ನೇಕಾರರಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಮೇಳ ಗಮನ ಸೆಳೆಯುತ್ತಿದೆ.
    2
    ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಿಲ್ಕ್ ಇಂಡಿಯಾ ವತಿಯಿಂದ ವಿಶೇಷ ಸೀರೆ ಮೇಳವನ್ನು ಆಯೋಜಿಸಲಾಗಿದೆ. ಸಾಂಪ್ರದಾಯಿಕ ಹಾಗೂ ಆಧುನಿಕ ವಿನ್ಯಾಸದ ಸೀರೆಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮೇಳವು ಜುಲೈ 10ರಿಂದ 15ರವರೆಗೆ ನಡೆಯಲಿದ್ದು, ಮಹಿಳೆಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ಈ ಮೇಳದಲ್ಲಿ ಪಶ್ಚಿಮ ಬಂಗಾಳದ ಕಲ್ಕತ್ತಾ ಜಾಮ್ದಾನಿ, ಬಾಲುಚರಿ ಮತ್ತು ತಾಂತ್ ಸೀರೆಗಳು, ತೆಲಂಗಾಣದ ಪೋಚಂಪಳ್ಳಿ ಇಕ್ಕತ್ ಹಾಗೂ ಗಡ್ವಾಲ್, ತಮಿಳುನಾಡಿನ ಕಾಂಚಿಪುರಂ ಪಟ್ಟು, ಮತ್ತು ಕರ್ನಾಟಕದ ಮೈಸೂರು ಸಿಲ್ಕ್, ಇಳಕಲ್ ಹಾಗೂ ಬೆಂಗಳೂರು ಸಿಲ್ಕ್ ಸೇರಿದಂತೆ ದೇಶದ ವಿವಿಧ ಭಾಗಗಳ ಪ್ರಸಿದ್ಧ ಸೀರೆಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ಇವುಗಳ ಜೊತೆಗೆ ಬನಾರಸಿ, ಲಿನೆನ್, ಕಾಟನ್, ಸಾಫ್ಟ್ ಸಿಲ್ಕ್, ಟಸ್ಸರ್, ಆರ್ಗನ್ಜಾ, ಚಂದೇರಿ, ಮಹೇಶ್ವರಿ, ಜಾರ್ಜೆಟ್ ಮತ್ತು ಕ್ರೇಪ್ ಸೇರಿದಂತೆ ಹಬ್ಬ ಹಾಗೂ ಮದುವೆ ಸಮಾರಂಭಗಳಿಗೆ ಸೂಕ್ತವಾದ ವಿವಿಧ ವಿನ್ಯಾಸದ ಸೀರೆಗಳು ಲಭ್ಯವಿವೆ.

ಮದುವೆ, ಗೃಹಪ್ರವೇಶ ಮತ್ತು ಹಬ್ಬಗಳಂತಹ ಶುಭ ಸಮಾರಂಭಗಳಿಗೆ ಅಗತ್ಯವಿರುವ ಸೀರೆಗಳನ್ನು ಒಂದೇ ಸ್ಥಳದಲ್ಲಿ ಖರೀದಿಸಲು ಮೇಳ ಅವಕಾಶ ಕಲ್ಪಿಸಿದೆ. ನೇರವಾಗಿ ನೇಕಾರರಿಂದ ಗ್ರಾಹಕರಿಗೆ ಸೀರೆಗಳು ತಲುಪುವ ವ್ಯವಸ್ಥೆ ಇರುವುದರಿಂದ ಗುಣಮಟ್ಟದ ಸೀರೆಗಳು ಕೈಗೆಟುಕುವ ದರದಲ್ಲಿ ದೊರೆಯುತ್ತಿವೆ. ಅಲ್ಲದೆ, ಕೆಲವು ಆಯ್ದ ಸೀರೆಗಳ ಮೇಲೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸಾರ್ವಜನಿಕರಿಗಾಗಿ ಮುಕ್ತವಾಗಿರುವ ಈ ಮೇಳಕ್ಕೆ ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಮಹಿಳೆಯರು ಕುಟುಂಬ ಸಮೇತರಾಗಿ ಆಗಮಿಸುತ್ತಿದ್ದಾರೆ. ಕೈಮಗ್ಗ ನೇಕಾರರಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಮೇಳ ಗಮನ ಸೆಳೆಯುತ್ತಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    14 hrs ago
  • ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸಬಾರದು ಎಂಬ ಸಂಸದ ಯದುವೀರ್ ಒಡೆಯರ್ ಅವರ ಅಭಿಪ್ರಾಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ತಮ್ಮ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾದ ಸಾಂಪ್ರದಾಯಿಕ ಸ್ವರೂಪವನ್ನು ಬದಲಾಯಿಸುವ ಯಾವುದೇ ಪ್ರಯತ್ನವನ್ನು ಮಾಡಬಾರದು ಎಂದು ಆಗ್ರಹಿಸಿದರು. ದಸರಾ ಸಾಂಪ್ರದಾಯಿಕ ಆಚರಣೆಯ ಕುರಿತು ಮಾತನಾಡಿದ ವಿಜಯೇಂದ್ರ, ಮೈಸೂರು ದಸರಾವನ್ನು ಗುಲ್ಬರ್ಗದಲ್ಲಿ ಆಚರಿಸುತ್ತೇವೆ ಎಂದರೆ ಹೇಗಿರುತ್ತದೆ ಎಂದು ಪ್ರಶ್ನಿಸಿದರು. ಈ ವಿಚಾರದಲ್ಲಿ ಪ್ರತಿಷ್ಠೆ ತೋರದೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಎಂದು ಅವರು ಒತ್ತಾಯಿಸಿದರು. ತಮಗೆ ಕಂಬಳದ ವಿರುದ್ಧ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಂಬಳಕ್ಕೆ ಸರ್ಕಾರದಿಂದ ಅನುದಾನ ನೀಡಲಾಗಿತ್ತು ಎಂಬುದನ್ನು ನೆನಪಿಸಿದರು. ರಾಜ್ಯ ಸರ್ಕಾರ ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ಕಂಬಳ ಆಯೋಜಿಸಿದರೆ ನಮ್ಮ ಸಂಪೂರ್ಣ ಸಹಕಾರ ಇರುತ್ತದೆ ಎಂದು ಅವರು ತಿಳಿಸಿದರು. ಆದರೆ, ಮೈಸೂರು ದಸರಾ ಆಚರಣೆ ವೇಳೆ ಕಂಬಳ ಬೇಡ ಎಂದು ಇಲ್ಲಿನ ಸ್ಥಳೀಯ ಜನರು ಹೇಳುತ್ತಿದ್ದಾರೆ. ಅದನ್ನು ಬಿಟ್ಟು ಬಂಡತನದಿಂದ 'ಮಾಡಿಯೇ ಮಾಡುತ್ತೇವೆ' ಎಂಬ ಧೋರಣೆ ತೋರುವುದು ಸರಿಯಲ್ಲ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದು, ಸರ್ಕಾರ ಜನರ ಅಭಿಪ್ರಾಯಕ್ಕೆ ಗೌರವ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
    1
    ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸಬಾರದು ಎಂಬ ಸಂಸದ ಯದುವೀರ್ ಒಡೆಯರ್ ಅವರ ಅಭಿಪ್ರಾಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ತಮ್ಮ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾದ ಸಾಂಪ್ರದಾಯಿಕ ಸ್ವರೂಪವನ್ನು ಬದಲಾಯಿಸುವ ಯಾವುದೇ ಪ್ರಯತ್ನವನ್ನು ಮಾಡಬಾರದು ಎಂದು ಆಗ್ರಹಿಸಿದರು.

ದಸರಾ ಸಾಂಪ್ರದಾಯಿಕ ಆಚರಣೆಯ ಕುರಿತು ಮಾತನಾಡಿದ ವಿಜಯೇಂದ್ರ, ಮೈಸೂರು ದಸರಾವನ್ನು ಗುಲ್ಬರ್ಗದಲ್ಲಿ ಆಚರಿಸುತ್ತೇವೆ ಎಂದರೆ ಹೇಗಿರುತ್ತದೆ ಎಂದು ಪ್ರಶ್ನಿಸಿದರು. ಈ ವಿಚಾರದಲ್ಲಿ ಪ್ರತಿಷ್ಠೆ ತೋರದೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಎಂದು ಅವರು ಒತ್ತಾಯಿಸಿದರು. ತಮಗೆ ಕಂಬಳದ ವಿರುದ್ಧ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಂಬಳಕ್ಕೆ ಸರ್ಕಾರದಿಂದ ಅನುದಾನ ನೀಡಲಾಗಿತ್ತು ಎಂಬುದನ್ನು ನೆನಪಿಸಿದರು. ರಾಜ್ಯ ಸರ್ಕಾರ ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ಕಂಬಳ ಆಯೋಜಿಸಿದರೆ ನಮ್ಮ ಸಂಪೂರ್ಣ ಸಹಕಾರ ಇರುತ್ತದೆ ಎಂದು ಅವರು ತಿಳಿಸಿದರು.

ಆದರೆ, ಮೈಸೂರು ದಸರಾ ಆಚರಣೆ ವೇಳೆ ಕಂಬಳ ಬೇಡ ಎಂದು ಇಲ್ಲಿನ ಸ್ಥಳೀಯ ಜನರು ಹೇಳುತ್ತಿದ್ದಾರೆ. ಅದನ್ನು ಬಿಟ್ಟು ಬಂಡತನದಿಂದ 'ಮಾಡಿಯೇ ಮಾಡುತ್ತೇವೆ' ಎಂಬ ಧೋರಣೆ ತೋರುವುದು ಸರಿಯಲ್ಲ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದು, ಸರ್ಕಾರ ಜನರ ಅಭಿಪ್ರಾಯಕ್ಕೆ ಗೌರವ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.