ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಚಾಮರಾಜನಗರ:ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಬಿಸಿಲಿನ ಬೇಗೆ ಹಾಗೂ ಮಳೆಯೇ ಕಾಣದ ಕಾರಣ ತತ್ತರಿಸಿ ಹೋಗಿದ್ದ ಹನೂರು ತಾಲೂಕಿನ ರೈತ ಕುಲಕ್ಕೆ ಮಳೆರಾಯ ಕರುಣೆ ತೋರಿದ್ದಾನೆ. ತಾಲೂಕಿನ ವಿವಿಧ ಗ್ರಾಮೀಣ ಭಾಗಗಳಲ್ಲಿ ವರುಣನ ಅಬ್ಬರದಿಂದಾಗಿ ದೀರ್ಘಕಾಲದಿಂದ ಮಳೆಯಿಲ್ಲದೆ ಕಂಗೆಟ್ಟು ಹೋಗಿದ್ದ ಜನ-ಜಾನುವಾರುಗಳು ಹಾಗೂ ರೈತರು ನಿಟ್ಟುಸಿರು ಬಿಡುವಂತಾಗಿದೆ. ಕುಡಿಯುವ ನೀರಿಗೂ ಬರೆ, ಬೋರ್‌ವೆಲ್‌ಗಳು ಡ್ರೈ: ತಾಲೂಕಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ಅಂತರ್ಜಲ ಕುಸಿದು ಹೋಗಿತ್ತು. ಕೊಳವೆಬಾವಿಗಳಲ್ಲಿ (ಬೋರ್‌ವೆಲ್) ನೀರು ಸಿಗದೆ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಕಣ್ಣೆದುರೇ ಒಣಗಿ ಹೋಗುತ್ತಿವು. ಕುಡಿಯಲು ಕೂಡ ನೀರಿಲ್ಲದೆ ಗ್ರಾಮಸ್ಥರು ಮತ್ತು ಜಾನುವಾರುಗಳು ಪರದಾಡುವಂತಹ ಭೀಕರ ಪರಿಸ್ಥಿತಿ ನಿರ್ಮಾಣವಾಗಿತ್ತು. ರೈತರ ಕಣ್ಣೀರು ನೋಡಲಾರದಂತ ಸ್ಥಿತಿ ತಾಲೂಕಿನ ಹಲವು ಗ್ರಾಮಗಳಲ್ಲಿ ನೆಲೆಸಿತ್ತು. ಮಳೆರಾಯನ ಆಗಮನ - ರೈತರ ಮೊಗದಲ್ಲಿ ನಗು: ಸಕಾಲಕ್ಕೆ ಮಳೆಯಾಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದ ಹತಾಶ ಸ್ಥಿತಿಯಲ್ಲಿದ್ದ ರೈತರಿಗೆ ಈಗ ಸುರಿದಿರುವ ಉತ್ತಮ ಮಳೆ ಸಂಜೀವಿನಿಯಾಗಿ ಪರಿಣಮಿಸಿದೆ. ಒಣಗಿ ಹೋಗುತ್ತಿದ್ದ ಬೆಳೆಗಳಿಗೆ ಜೀವಕಳೆ ಬಂದಿದ್ದು, ಗಿಡ-ಮರಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುವ ವಿಶ್ವಾಸ ಮೂಡಿದ್ದು, ಬತ್ತಿಹೋಗಿದ್ದ ಬೋರ್‌ವೆಲ್‌ಗಳೂ ಮರುಜೀವ ಪಡೆಯುವ ನಿರೀಕ್ಷೆಯಿದೆ. ಚುರುಕುಗೊಂಡ ಕೃಷಿ ಚಟುವಟಿಕೆಗಳು: ಮಳೆಯ ಅಬ್ಬರದಿಂದ ವಾತಾವರಣ ಸಂಪೂರ್ಣ ತಂಪಾಗಿದ್ದು, ಎಲ್ಲೆಡೆ ನಳನಳಿಸುತ್ತಿರುವ ಹಸಿರು ಕಣ್ಣಿಗೆ ತಂಪು ನೀಡಿದೆ. ಮಳೆಯಿಂದಾಗಿ ರೈತರಲ್ಲಿ ಹೊಸ ಉತ್ಸಾಹ ಮೂಡಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಭರ್ಜರಿಯಾಗಿ ಚುರುಕುಗೊಂಡಿವೆ. ವರುಣನ ಕೃಪೆಯಿಂದ ಒಟ್ಟಾರೆಯಾಗಿ ಹನೂರು ತಾಲೂಕಿನಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಅನ್ನದಾತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಚಾಮರಾಜನಗರ:ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಬಿಸಿಲಿನ ಬೇಗೆ ಹಾಗೂ ಮಳೆಯೇ ಕಾಣದ ಕಾರಣ ತತ್ತರಿಸಿ ಹೋಗಿದ್ದ ಹನೂರು ತಾಲೂಕಿನ ರೈತ ಕುಲಕ್ಕೆ ಮಳೆರಾಯ ಕರುಣೆ ತೋರಿದ್ದಾನೆ.
ತಾಲೂಕಿನ ವಿವಿಧ ಗ್ರಾಮೀಣ ಭಾಗಗಳಲ್ಲಿ ವರುಣನ ಅಬ್ಬರದಿಂದಾಗಿ ದೀರ್ಘಕಾಲದಿಂದ ಮಳೆಯಿಲ್ಲದೆ ಕಂಗೆಟ್ಟು ಹೋಗಿದ್ದ ಜನ-ಜಾನುವಾರುಗಳು ಹಾಗೂ ರೈತರು ನಿಟ್ಟುಸಿರು ಬಿಡುವಂತಾಗಿದೆ. ಕುಡಿಯುವ ನೀರಿಗೂ ಬರೆ, ಬೋರ್‌ವೆಲ್‌ಗಳು ಡ್ರೈ: ತಾಲೂಕಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ಅಂತರ್ಜಲ ಕುಸಿದು ಹೋಗಿತ್ತು. ಕೊಳವೆಬಾವಿಗಳಲ್ಲಿ (ಬೋರ್‌ವೆಲ್) ನೀರು ಸಿಗದೆ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಕಣ್ಣೆದುರೇ ಒಣಗಿ ಹೋಗುತ್ತಿವು. ಕುಡಿಯಲು ಕೂಡ ನೀರಿಲ್ಲದೆ ಗ್ರಾಮಸ್ಥರು ಮತ್ತು ಜಾನುವಾರುಗಳು ಪರದಾಡುವಂತಹ ಭೀಕರ ಪರಿಸ್ಥಿತಿ
ನಿರ್ಮಾಣವಾಗಿತ್ತು. ರೈತರ ಕಣ್ಣೀರು ನೋಡಲಾರದಂತ ಸ್ಥಿತಿ ತಾಲೂಕಿನ ಹಲವು ಗ್ರಾಮಗಳಲ್ಲಿ ನೆಲೆಸಿತ್ತು. ಮಳೆರಾಯನ ಆಗಮನ - ರೈತರ ಮೊಗದಲ್ಲಿ ನಗು: ಸಕಾಲಕ್ಕೆ ಮಳೆಯಾಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದ ಹತಾಶ ಸ್ಥಿತಿಯಲ್ಲಿದ್ದ ರೈತರಿಗೆ ಈಗ ಸುರಿದಿರುವ ಉತ್ತಮ ಮಳೆ ಸಂಜೀವಿನಿಯಾಗಿ ಪರಿಣಮಿಸಿದೆ. ಒಣಗಿ ಹೋಗುತ್ತಿದ್ದ ಬೆಳೆಗಳಿಗೆ ಜೀವಕಳೆ ಬಂದಿದ್ದು, ಗಿಡ-ಮರಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುವ
ವಿಶ್ವಾಸ ಮೂಡಿದ್ದು, ಬತ್ತಿಹೋಗಿದ್ದ ಬೋರ್‌ವೆಲ್‌ಗಳೂ ಮರುಜೀವ ಪಡೆಯುವ ನಿರೀಕ್ಷೆಯಿದೆ. ಚುರುಕುಗೊಂಡ ಕೃಷಿ ಚಟುವಟಿಕೆಗಳು: ಮಳೆಯ ಅಬ್ಬರದಿಂದ ವಾತಾವರಣ ಸಂಪೂರ್ಣ ತಂಪಾಗಿದ್ದು, ಎಲ್ಲೆಡೆ ನಳನಳಿಸುತ್ತಿರುವ ಹಸಿರು ಕಣ್ಣಿಗೆ ತಂಪು ನೀಡಿದೆ. ಮಳೆಯಿಂದಾಗಿ ರೈತರಲ್ಲಿ ಹೊಸ ಉತ್ಸಾಹ ಮೂಡಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಭರ್ಜರಿಯಾಗಿ ಚುರುಕುಗೊಂಡಿವೆ. ವರುಣನ ಕೃಪೆಯಿಂದ ಒಟ್ಟಾರೆಯಾಗಿ ಹನೂರು ತಾಲೂಕಿನಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಅನ್ನದಾತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
- ಕೌದಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಾಗರಹಾವು ಪ್ರತ್ಯಕ್ಷ, ಆತಂಕದಲ್ಲಿ ಸಿಬ್ಬಂದಿಗಳು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆಸ್ಪತ್ರೆ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ. ಆಸ್ಪತ್ರೆ ಆವರಣದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದರಿಂದ ಸಿಬ್ಬಂದಿ ಗಾಬರಿಗೊಂಡಿದ್ದರು. ಕೂಡಲೇ ಉರಗ ರಕ್ಷಕ ಸ್ನೇಕ್ ಮಧು ಅವರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಸುರಕ್ಷಿತವಾಗಿ ನಾಗರಹಾವನ್ನು ಸೆರೆಹಿಡಿದರು. ನಂತರ ಸೆರೆಹಿಡಿದ ನಾಗರಹಾವನ್ನು ಮಲೆ ಮಹದೇಶ್ವರ ವನ್ಯಧಾಮದ ಕಾಡಿಗೆ ಬಿಡಲಾಯಿತು. ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ ಮಧು ಅವರ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದರು1
- ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇಇ ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ವಿರುವುದರಿಂದ ಸೆಪ್ಟಂಬರ್ 18 ರಂದು ಈ ಕೇಂದ್ರ ವ್ಯಾಪ್ತಿ ಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. 18 ರಂದು ಬೆಳಿಗ್ಗೆ 9. ರಿಂದ ಸಾಯಂಕಾಲ 5 ರ ವರೆಗೆ 66/11 ಕೆ ವಿ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಿರುಗಾಬಲು, ದೊಡ್ಡೇಗೌಡನಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ನೇಣನೂರು, ಸಂಶೆಟ್ಟಿಪುರ, ಚಿಕ್ಕಮುಲಗೂಡು, ಮಿಕ್ಕರೆ, ಕಲ್ಕುಣಿ, ಡೋರನಹಳ್ಳಿ, ಹೆಚ್ ಹೆಚ್ ಕೊಪ್ಪಲು, ಭೀಮನಹಳ್ಳಿ, ಬಂಡೂರು, ಆಲದಹಳ್ಳಿ, ಮೂಗನಕೊಪ್ಪಲು, ಹೂವಿನ ಕೊಪ್ಪಲು, ಹಾಗೂ ಸುತ್ತಮು ತ್ತಲ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಪಟ್ಟಣ ದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಚೆಸ್ಕಾಂನ ಕಾರ್ಯಪಾಲಕ ಇಂಜೀನಿಯರ್ ಟಿ ಪುಟ್ಟಸ್ವಾಮಿ ಅವರು ನೀಡಿ ರುವ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.1
- ಇತ್ತೀಚಿನ ಮಳೆಗೆ ಶಾಲೆಯ ಮೇಲ್ಚಾವಣಿ ಕುಸಿತ ಆತಂಕದಲ್ಲಿ ಶಾಲಾ ಮಕ್ಕಳು ಚಾಮರಾಜನಗರ:ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಸಣಾಪುರ ಇಲ್ಲಿನ ಶಾಲಾ ಕೊಠಡಿ ಹಳೆಯದಾಗಿದ್ದು ಇತ್ತೀಚಿಗೆ ಸುರಿಯುತ್ತಿರುವ ಬಾರಿಮಳೆಗೆ ಕೊಠಡಿಯ ಮೇಲ್ಚಾವಣಿ ಕುಸಿಯುತ್ತಿದ್ದು ಶಾಲಾ ಮಕ್ಕಳು ಮತ್ತು ಶಿಕ್ಷಕರು ಆತಂಕದಲ್ಲಿ ಶಾಲೆಯನ್ನು ಮುಂದುವರಿಸಬೇಕಾಗಿದೆ ಕಳೆದ ಬಾರಿಯು ಕೂಡ ಸಂಬಂಧಪಟ್ಟ ಇಲಾಖೆಗೆ ತಮ್ಮ ಸಮಸ್ಯೆಯನ್ನು ಹೇಳಿದರು ಕೂಡ ಇಲಾಖೆ ನಿರ್ಲಕ್ಷಯನ್ನು ತೂರುತ್ತಿದೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು ಶಿಕ್ಷಕರ ಕೊರತೆಯನ್ನು ನಿವಾರಿಸಲು ಇಲಾಖೆಯು ಮೀನಾಮೇಶ ಎನಿಸುತ್ತಿದೆ. ಕಳೆದ ಬಾರಿಯಿಂದಲೂ ಕೂಡ ಶಿಕ್ಷಕರ ಕೊರತೆ ಇದ್ದ ಮಕ್ಕಳ ಸಂಖ್ಯಾ ಶೇಕಡಾ ವಾರು ಶಿಕ್ಷಕರನ್ನು ಆಯೋಜನೆ ಮಾಡುವುದರಲ್ಲಿ ಸಂಬಂಧ ಪಟ್ಟ ಅಧಿಕಾರಿಯು ನಿರ್ಲಕ್ಷವನ್ನು ತೂರುತಿದ್ದಾರೆ ಎಂದು sdmc ಕಮಿಟಿಯ ಸದಸ್ಯರಾದ ಶಿವಕುಮಾರ. ಎನ್ ರವರು ದೂರಿನಲ್ಲಿ ತಿಳಿಸಿರುತ್ತಾರೆ.3
- ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್‌ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್‌ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು1
- ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಿ: ಹೊಸಹಳ್ಳಿಮಧುಸೂದನ್ ವರದಿ: ಹೊಮ್ಮನಂಜುಂಡನಾಯಕ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಿ: ಹೊಸಹಳ್ಳಿಮಧುಸೂದನ್ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆ ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳು ಗ್ರಾಮಗಳಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆಮನೆಗೆ ಮನವರಿಕೆ ಮಾಡಿಕೊಟ್ಟರೆ ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಹೊಸಹಳ್ಳಿ ಮಧುಸೂದನ್ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಿತಿ ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಕೆಲಸ ಮಾಡಿದರೆ ನಿಮ್ಮ ನಾಯಕತ್ವ. ಬೆಳೆಯುತ್ತದೆ. ಪ್ರಚಾರ ಸಮಿತಿ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ, ಪಕ್ಷದ ಸಂಘಟನೆಯು ಆಗುತ್ತದೆ ಎಂದರು. ಶಾಸಕರ ಅಧ್ಯಕ್ಷತೆಯಲ್ಲಿ ಆಯಾಯ ತಾಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಂಡು ಪ್ರಚಾರ ಸಮಿತಿಯ ಪದಾಧಿಕಾರಿಗಳಿಗೆ ಕಾಂಗ್ರೆಸ್‌ನ ಇತಿಹಾಸ, ಸರ್ಕಾರದ ಯೋಜನೆಗಳನ್ನು ಮನವರಿಕೆ ಮಾಡಿಕೊಡಲಾಗುತ್ತದೆ. ನಮ್ಮ ನಾಯಕತ್ವದ ಗುಣಗಳನ್ನು ಹೇಗೆ ರೂಪಿಸಬೇಕು. ಅದನ್ನು ಮನವರಿಕೆ ಮಾಡಿ ಕೊಡಲಾಗುತ್ತದೆ. ಅವರು ಆಗ ತಳಮಟ್ಟದಲ್ಲಿ ಕಾಂಗ್ರೆಸ್ ಕಟ್ಟಲು ಒಂದು ಅವಕಾಶ ಆಗುತ್ತದೆ ಎಂದರು. ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ ಮಾತನಾಡಿ ಚಾಮರಾನಗರ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರಕ್ಕೆ ಪಂಚಗ್ಯಾರಂಟಿ ಯೋಜನೆಯಿಂದ 200 ಕೋಟಿ ರೂ. ಸಂದಾಯ ಆಗುತ್ತದೆ. ಇದುವರೆಗೂ 600 ಕೋಟಿ ರೂ. ಸಂದಾಯ ಆಗಿದೆ. 5 ವರ್ಷಗಳಿಗೆ ಒಂದು ಸಾವಿರ ಕೋಟಿಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಆಗಿದೆ. ಇದನ್ನು ಪ್ರಚಾರ ಮಾಡಬೇಕು ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಮಹದೇವು ಮಾತನಾಡಿ, ಜಿಲ್ಲಾ ಪ್ರಚಾರ ಸಮಿತಿ ಆದ ಮೇಲೆ ಒಳ್ಳೆಯ ಕೆಲಸಗಳು ನಡೆಯುತ್ತಿವೆ. ಕಾಂಗ್ರೆಸ್ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳನ್ನು ತಳಮಟ್ಟದಲ್ಲಿ ಪ್ರಚಾರ ಪಡಿಸಬೇಕು ಎಂದರು. ಮತ್ತೊಬ್ಬ ಜಿಲ್ಲಾ ಕಾರ್ಯದರ್ಶಿ ಚಿಕ್ಕಮಹದೇವು, ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್, ತಾ.ಪಂ.ಮಾಜಿ ಸದಸ್ಯ ಕುಮಾರನಾಯಕ್, ಕೆಬ್ಬೇಪುರ ಮಧು ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ಸೈಯದ್ ನಜುರುಲ್ಲಾ, ಅಶೋಕ್ ಕುಮಾರ್, ಮಹಾಲಿಂಗಸ್ವಾಮಿ, ಜಿಲ್ಲಾ ಮುಖ್ಯ ಸಂಯೋಜಕರಾದ ಹೆಗ್ಗವಾಡಿ ಕೆಂಪರಾಜು, ಕೆರೆಹಳ್ಳಿ ರಾಜಕುಮಾರ್, ಪುಟ್ಟಸ್ವಾಮಿ, ಮೊಹಮ್ಮದ್ ಇಮ್ಮಾದ್ ವುಲ್ಲಾ, ಸಿದ್ದರಾಜು ನಾಯಕ, ಶಂಕರ್, ರುದ್ರೇಶ್, ಅರ್.ಡಿ .ಉಲ್ಲಾಸ್,ನಿಜಾಂ ಮುದ್ದೀನ್, ಬ್ಲಾಕ್ ಅಧ್ಯಕ್ಷರಾದ ಬಿಸಲವಾಡಿ ರವಿ, ಅಪ್ಸರ್ ಅಹಮದ್, ಮನೋಹರ, ವಿ.ಪ್ರಸಾದ್, ಜಿ.ಕೆ.ಲೋಕೇಶ್, ಬಾಲಕೃಷ್ಣ, ಪದಾಧಿಕಾರಿಗಳು, ಜ್ಯೋತಿ ಪ್ರಕಾಶ್, ಮಹದೇವಮ್ಮ, ಭಾಗವಹಿಸಿದ್ದರು.3
- ಸಿಡಿಲು ಬಡಿದು ಮನೆಯ ಮೇಲ್ಚಾವಣಿ, ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಹಾನಿ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕನಕಪುರ: ತಾಲೂಕಿನ ತಾವರಗಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುರಿದ ಭಾರಿ ಮಳೆ, ಗುಡುಗು–ಸಿಡಿಲಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಮೇಲ್ಚಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾದ ಘಟನೆ ನಡೆದಿದೆ. ಗ್ರಾಮದ ರಮೇಶ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮೊದಲನೇ ಮಹಡಿಯ ಮೇಲ್ಚಾವಣಿ ಹಾನಿಗೊಳಗಾಗಿದ್ದು, ಸೋಲಾರ್ ವ್ಯವಸ್ಥೆ, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿವೆ. ಸಿಡಿಲಿನ ತೀವ್ರತೆಗೆ ಸೋಲಾರ್ ಉಪಕರಣಗಳು ಪುಡಿಪುಡಿಯಾಗಿದ್ದು, ಮನೆಯ ಮೇಲ್ಚಾವಣಿ ಮೇಲೆ ಕಂದಕ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಹಲವು ಉಪಕರಣಗಳು ಹಾನಿಗೊಳಗಾಗಿದ್ದು, ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಡಿಲು ಮನೆಯ ಮೊದಲನೇ ಮಹಡಿಗೆ ಸಿಡಿಲು ಬಡಿದ ವೇಳೆ ಕುಟುಂಬದ ಸದಸ್ಯರೆಲ್ಲರೂ ಕೆಳ ಮಹಡಿಯಲ್ಲಿ ಮಲಗಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಮರಳೇ ಬೇಕುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಡಿಲು ಬಡಿದು ಮನೆಗೆ ಉಂಟಾಗಿರುವ ಹಾನಿಯ ಸಂಪೂರ್ಣ ಅಂದಾಜು ಮಾಡಿಸಿ, ತಾಲೂಕು ಆಡಳಿತದ ಮೂಲಕ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.1
- ಸರ್ಕಾರಿ ಗೋಮಾಳ ರಕ್ಷಣೆಗೆ ಒತ್ತಾಯಿಸಿ ಹೆಗ್ಗೋಠಾರ ಗ್ರಾಮದಿಂದ ರೈತರಿಂದ ಬೃಹತ್ ಪಾದಯಾತ್ರೆ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಹಾಗೂ ಮುತ್ತಿಗೆ ಗ್ರಾಮದಲ್ಲಿ ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದ್ದು ಗಣಿ ಧೂಳು ಹಾಗೂ ಅಧಿಕ ಬರ ಇರುವ ಟಿಪ್ಪರ್ ಗಳು ಓಡಾಟದಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಧೂಳಿನಿಂದ ಹಾಳಾಗುತ್ತಿದೆ ಆದ್ದರಿಂದ ಗೋಮಾಳವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ಗುರುವಾರ ಪಾದಯಾತ್ರೆ ನಡೆಸಿದರು. ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ರೈತ ಮುಖಂಡ ಹೊನ್ನೂರು ಬಸವಣ್ಣ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಹೆಗ್ಗೋಠಾರ ಗ್ರಾಮದಿಂದ ಚಾಮರಾಜನಗರದ ಜಿಲ್ಲಾಡಳಿತ ಭವನದ ವರೆಗೆ ಸುಮಾರು ಹತ್ತು ಕಿಲೋಮೀಟರ್ ಪಾದಯಾತ್ರೆ ನಡೆಸಿ ಜಿಲ್ಲಾಡಳಿತ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.1
- ಮಳೆ ಇಲ್ಲದೆ ಬರದ ಭವಣೆಯಲ್ಲಿ ಬೆಂದು ಬೆಂಗಾಡಾಗಿದ್ದ ತಾಲ್ಲೂಕಿಗೆ ಮಂಗಳವಾರ ತಂಪೆರೆದ ವರುಣದೇವ ಮಳವಳ್ಳಿ : ಕಳೆದ ಕೆಲವಾರು ತಿಂಗಳಿಂದ ಮಳೆಯ ಸುಳಿವೇ ಕಾಣದೆ ಸುಡು ಬಿಸಿಲ ಝಳ ದಿಂದ ಕಾದ ಬೆಂಗಾಡಾಗಿ ಹೋಗಿದ್ದ ಮಳವಳ್ಳಿ ತಾಲ್ಲೂಕಿಗೆ ಮಂಗಳವಾರ ರಾತ್ರಿ ವರುಣ ದೇವ ಕೃಪೆ ತೋರಿದ್ದು ಒಂದು ಗಂಟೆಗೂ ಹೆಚ್ಚುಕಾಲ ಸುರಿದ ಅಬ್ಬರದ ಮಳೆ ಒಣಗಿದ ಭೂಮಿಗೆ ತಂಪೆರದಿದೆ. ಮಂಗಳವಾರ ತಡರಾತ್ರಿ 9.30 ರ ಸುಮಾರಿಗೆ ಆರಂಭವಾದ ಸಿಡಿಲಬ್ಬರದ ಮಳೆ ಕಾದ ಕಬ್ಬಿಣದಂತಾಗಿದ್ದ ಭೂಮಿಗೆ ತಂಪೆರದಿದ್ದು ಬಿಸಿಲ ಝಳ ದಿಂದ ಬೆಂದು ಹೈರಾಣಾಗಿದ್ದ ಜನ ನಿಟ್ಟುಸಿರು ಬಿಡುವಂತಾ ಗಿದ್ದರೆ ತಡವಾಗಿಯಾದರೂ ಜೋರಾಗಿಯೇ ಸುರಿದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸುಮಾರು ಒಂದುವರೆ ಗಂಟೆ ಸುರಿದ ಅಬ್ಬರದ ಮಳೆ ಹಾಗೂ ಸಿಡಿಲು ಗುಡುಗು ಸಹಿತದ ಮಳೆ ಇಡೀ ತಾಲ್ಲೂಕಿಗೆ ತಂಪೆರೆದಿದೆ. ನಂತರದಲ್ಲಿ ಇಡೀ ರಾತ್ರಿ ಸಣ್ಣದಾಗಿ ಸುರಿದ ಜಿಟಿಜಿಟಿ ಮಳೆ ಭೂಮಿಯ ಕಾವು ತಗ್ಗಿಸಿದೆ. ಒಟ್ಟಾರೆ ಈ ವರ್ಷವಿಡೀ ಭೂತಾಯಿ ಒಡಲು ತುಂಬುವ ಮಟ್ಟದ ಮಳೆಯನ್ನೇ ಕಾಣದ ಬರದ ಭವಣೆಯಿಂದ ಆತಂಕಕ್ಕೆ ಒಳಗಾಗಿದ್ದ ಜನ ಮಂಗಳವಾರ ಸುರಿದ ಭಾರಿ ಮಳೆಯಿಂದ ಸಮಾಧಾನ ಪಡುವಂತಾಗಿದೆ.1
- ಜೆಡಿಎಸ್ ತೆಕ್ಕಗೆ ಬಿಳುಗುಂಬ ಹಾಲು ಉತ್ಪಾದಕರ ಸಂಘ, ಅಧ್ಯಕ್ಷರಾಗಿ ಕಿರಣ್ ಅವಿರೋಧ ಆಯ್ಕೆ : ರಾಮನಗರ -- ಕಳೆದ 18 ತಿಂಗಳುಗಳಿಂದ ಸುಪರ್ ಸೀಡ್ ಗೆ ಒಳಗಾದಿದ್ದ ಬಿಳಿಗುಂಬ ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಜೆಡಿಎಸ್ ತೆಕ್ಕೆಗೆ ಜಾರಿದೆ. ಸಂಘದ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲವು ಮೂಲಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಜುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾದರು. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಜುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಚ ಸ್ಥಾನಕ್ಕೆ ಕಿರಣ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಇಬ್ಬರನ್ನು ವರತು ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಇಲಾಖೆಯ ಅಧಿಕಾರಿ ಕೆ.ಟಿ.ಉಮೇಶ್ ಅದ್ಯಕ್ಷರಾಗಿ ಕಿರಣ್ ಹಾಗೂ ಉಪಧ್ಯಾಕ್ಷರಾಗಿ ರಾಘವೇಂದ್ರ ಅವರ ಅವಿರೋದ ಆಯ್ಕೆಯನ್ನು ಘೋಷಣೆ ಮಾಡಿದರು. ನೂತನ ಅಧ್ಯಕ್ಷ ಕಿರಣ್ ಮಾಧ್ಯಮಗಳೊಂದಿಗೆ ಮಾತನಾಡಿ ಕಳೆದ 18 ತಿಂಗಳಿಂದ ಸುಪರ್ ಸೀಡ್ ಒಳಗಾಗಿದ್ದ ಬಿಳುಗುಂಬ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಲ್ಲ 9 ನಿರ್ದೇಶಕರ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹಾಲು ಉತ್ಪಾದಕರಿಗೆ ಧನ್ಯವಾದ ತಿಳಿಸಿದರು, ಹಾಲು ಉತ್ಪಾದಕರಿಗೆ ಯಾವುದೇ ಸಮಸ್ಯೆಯಾಗದಂತೆ ಅವರ ಹಿತಕಾಯುವುದೇ ನಮ್ಮ ತಂಡದ ಮೊದಲ ಅದ್ಯತೆ. ಈಗಾಗಲೇ ದಿನಕ್ಕೆ 800 ರಿಂದ 900 ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಮುಂದಿನ ದಿನಗಳಲ್ಲಿ 1500 ರಿಂದ 2000 ಲೀಟರ್ ಹಾಲು ಸಂಗ್ರಹ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಹಾಲು ಉತ್ಪಾದಕರ ಉನ್ನತಿಗಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ನೂತನ ನಿರ್ದೇಶಕರಾದ ಸುರೇಶ್, ಆನಂದ್, ಶೈಲಜಾ, ವೆಂಕಟೇಶ್, ಮಂಗಳಮ್ಮ, ಸರೋಜಮ್ಮ, ತಮ್ಮಯ್ಯ ಭಾಗಿಯಾಗಿದ್ದರು. ಕಿರಣ್ ಎನ್. ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಹಾಗೂ ಹಾಲು ಉತ್ಪಾದಕರು ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಸದಸ್ಯರಾದ ಶಾಂತಪ್ಪ, ಕೃಷ್ಣಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಲಕ್ಷ್ಮಿನರಸಿಂಹಯ್ಯ, ಶಿವರಾಜು, ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಹೇಮಂತ್, ಹಾಲು ಪರಿವಿಕ್ಷಕ ವಾಸು, ಸಹಾಯಕ ರಾಜಣ್ಣ, ಮುಖಂಡರಾದ ಜಿ.ಟಿ.ಕೃಷ್ಣೇಗೌಡ, ನರೇಂದ್ರ, ಜಯಕುಮಾರ್, ಕೆಂಪರಾಜು, ಕೃಷ್ಣಪ್ಪ, ಧನಂಜಯ್ಯ, ರಮೇಶ್, ಶಿವಮಾದಯ್ಯ, ಅರೇಹಳ್ಳಿ ಶಿವರಾಮಯ್ಯ, ಮೂರ್ತಿ ಸೇರಿದಂತೆ ಬಿಳಗುಂಬ ಗ್ರಾಮಸ್ಥರ ಇದ್ದರು.1