ಉಪನ್ಯಾಸಕರಿಂದ ತರಾಟೆ ಆರೋಪ: ವಿದ್ಯಾರ್ಥಿ ಆತ್ಮಹತ್ಯೆ ಬಳ್ಳಾರಿ: ನಗರದ ಸಂಜಯ್ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಡಿಪ್ಲೊಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗುಗ್ಗರಹಟ್ಟಿ ನಿವಾಸಿ ಅರವಿಂದ್ ಮೃತ ವಿದ್ಯಾರ್ಥಿ. ಇವರು ಮಂಗಳವಾರ ರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಕಾಲೇಜಿನಲ್ಲಿ ಉಪನ್ಯಾಸಕರು ಅರವಿಂದ್ ರನ್ನು ತರಾಟೆಗೈದಿದ್ದು, ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ವಿದ್ಯಾರ್ಥಿಗಳು ಇಂದು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಕಾಲೇಜಿನಲ್ಲಿ ಪ್ರೊಫೆಸರ್ ಹಾಗೂ ಹೆಡ್ ಆಫ್ ಡಿಪಾರ್ಟ್ಮೆಂಟ್ (HOD) ಬೈದ ಘಟನೆ ಆತ್ಮಹತ್ಯೆಗೆ ಕಾರಣ ಕಎಂಬ ಆರೋಪ ಕೇಳಿಬಂದಿದೆ. ಮಾಹಿತಿಯ ಪ್ರಕಾರ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಸಣ್ಣ ಮಟ್ಟಿನ ಜಗಳ ನಡೆದ ಹಿನ್ನೆಲೆ ಅರವಿಂದ್ ರ ಪೋಷಕರನ್ನು ಕಾಲೇಜಿಗೆ ಕರೆಸಲಾಗಿತ್ತು. ಈ ವೇಳೆ ಎಚ್‌ಓಡಿಯೊಬ್ಬರನ್ನು ಅರವಿಂದ್ ನನ್ನು ಪೋಷಕರ ಸಮ್ಮುಖದಲ್ಲೇ ತೀವ್ರ ತರಾಟೆಗೈದಿದ್ದು, "ಹೀಗೆ ಗಲಾಟೆ ಮಾಡುವ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಇರಿಸಲು ಸಾಧ್ಯವಿಲ್ಲ, ಇದು ಕೊನೆಯ ಎಚ್ಚರಿಕೆ" ಎಂದು ಹೇಳಿ ಕಳುಹಿಸಿದ್ದರೆನ್ನಲಾಗಿದೆ. ಇದರಿಂದ ತೀವ್ರವಾಗಿ ನೊಂದಿದ್ದ ಅರವಿಂದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇಂದು ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಭೆ ನಡೆದ ಬಳಿಕ ಆಕ್ರೋಶಗೊಂಡ ವಿದ್ಯಾರ್ಥಿಗಳು ಕುರ್ಚಿ-ಟೇಬಲ್ ಒಡೆದು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬ್ರೂಸ್ ಪೇಟ್ ಪೊಲೀಸ್ ಠಾಣೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ, ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

- ಪವಿತ್ರ ರಂಜಾನ್ ಮಾಸದ ಅಂಗವಾಗಿ Rise of Humanity Trust ವತಿಯಿಂದ ಬಳ್ಳಾರಿ ನಗರದ Kaul Bazaar ಪ್ರದೇಶದ Babu Chowk ನಲ್ಲಿ ಇರುವ ಟ್ರಸ್ಟ್ ಕಚೇರಿಯಲ್ಲಿ ಭರ್ಜರಿ ಇಫ್ತಾರ್ ಕೂಟವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಉಪವಾಸ ಮುಗಿಸಿದ ನಂತರ ಪ್ರಾರ್ಥನೆ ಸಲ್ಲಿಸಿದರು. ಟ್ರಸ್ಟ್ ಅಧ್ಯಕ್ಷ N. M. D. Asif ಮಾತನಾಡಿ, ರಂಜಾನ್ ಮಾಸವು ಸಹನೆ, ತ್ಯಾಗ, ದಾನ ಧರ್ಮ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುವ ಪವಿತ್ರ ಸಮಯವಾಗಿದೆ ಎಂದು ಹೇಳಿದರು. ಇಫ್ತಾರ್ ಕೂಟದ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವವನ್ನು ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.1
- ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ1
- Post by Welding Nizam Welding Nizam5
- ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಸೋಮವಾರ ಬೆಂಕಿ ಬಿದ್ದು ಮೇವು ಸಂಪೂರ್ಣವಾಗಿ ಸುಟ್ಟು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ ಜನಧ್ವನಿ ನ್ಯೂಸ್ ಪ್ರಕಟಿಸಿದ ವರದಿಗೆ ಉತ್ತಮ ಸ್ಪಂದನೆ ದೊರೆತಿದೆ. ವರದಿ ಬೆಳಕಿಗೆ ಬಂದ ಬೆನ್ನಲ್ಲೇ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಬುಧವಾರ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರಿಗೆ ಒಂದು ಲೋಡ್ ಭತ್ತದ ಮೇವನ್ನು ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ರೈತರು ಹಾಗೂ ಜಾನುವಾರುಗಳ ಪಾಲನೆ-ಪೋಷಣೆ ಮಾಡುವಲ್ಲಿ ಎದುರಿಸುವ ಕಷ್ಟಗಳನ್ನು ನಾನು ಚೆನ್ನಾಗಿ ಅರಿತಿದ್ದೇನೆ. ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಬೆಂಕಿ ಬಿದ್ದು ಉಂಟಾದ ನಷ್ಟದ ಕುರಿತು ಜನಧ್ವನಿ ನ್ಯೂಸ್ ವರದಿ ನೋಡಿ ಮನಸ್ಸಿಗೆ ಬೇಸರವಾಯಿತು. ಆದ್ದರಿಂದ ರೈತನ ಜಾನುವಾರುಗಳಿಗೆ ನೆರವಾಗುವ ಉದ್ದೇಶದಿಂದ ಮೇವು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮೇವು ನೆರವು ನೀಡಿದ ಶ್ರೀ ಜಪಾನಂದ ಸ್ವಾಮೀಜಿಗಳಿಗೆ ರೈತ ನಾಗರಾಜ್ ಕೃತಜ್ಞತೆ ಸಲ್ಲಿಸಿದರು.1
- Post by Rahuldev singh1
- ಗದಗ ಮುಂಡರಗಿಯಲ್ಲಿ ಹಗಲು ಹೊತ್ತಿನಲ್ಲೇ ಮನೆ ಕಳ್ಳತನ ಬ್ಯಾಂಕ್ ಮ್ಯಾನೇಜರ್ ರಾಘವೇಂದ್ರಕುಮಾರ ಮನೆ ಟಾರ್ಗೆಟ್ ಮಾಡಿದ ಕಳ್ಳರು ಜನನೀಬೀಡ ಪ್ರದೇಶದ ಮನೆಯಲ್ಲಿ ಘಟನೆ ಮಧ್ಯಾಹ್ನ 3.20 ರಿಂದ 4.40ರೊಳಗೆ ಕಳ್ಳತನ ಮನೆಯ ಬಾಗಿಲಿನ ಕೀಲಿಮುರಿದು ಒಳನುಗ್ಗಿದ ದುಷ್ಕರ್ಮಿಗಳು ಹಣ, ಬಂಗಾರ ಹಾಗೂ ಬೆಳ್ಳಿ ವಸ್ತುಗಳ ಕಳ್ಳತನ ಮನೆ ಖಾಲಿ ಇದ್ದ ವೇಳೆ ಪಕ್ಕಾ ಪ್ಲ್ಯಾನ್‌ನೊಂದಿಗೆ ಕಳ್ಳರ ಕೃತ್ಯ ವಿದ್ಯಾನಗರ ಕಳ್ಳತನ ಪ್ರಕರಣದ ನಂತರ ಮತ್ತೊಂದು ಘಟನೆ ಸ್ಥಳಕ್ಕೆ ಮುಂಡರಗಿ ಪೊಲೀಸರ ಭೇಟಿ, ಪರಿಶೀಲನೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರಿಂದ ತನಿಖೆ ಆರಂಭ ಕಳ್ಳರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಕೆ1
- ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಇಂದು ರಾಯಚೂರಿನಲ್ಲಿ ಬಂದ್‌ಗೆ ಕರೆ ನೀಡಲಾಗಿತ್ತು. ಈ ವೇಳೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ 1 ಗಂಟೆಗೆ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಜಹರಾಬಾದ್ ನಿವಾಸಿ ಭರತ್ ಎಂಬ ಯುವಕ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನಕ್ಕೆ ಮುಂದಾದನು. ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಅಲ್ಲಿದ್ದ ಹೋರಾಟಗಾರರು ತಕ್ಷಣವೇ ಅವನನ್ನು ಹಿಡಿದು ತಡೆದರು. ನಂತರ ಗಾಯಗೊಂಡ ಯುವಕನನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.1
- ಸಿರಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳಿಗೆ ಕಾನೂನುಬಾಹಿರವಾಗಿ ನಮೂನೆ-3ಬಿ ಖಾತಾ ನೀಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸರ್ವೇ ನಂ.437/ಬಿ2ರಲ್ಲಿ ಉದ್ಯಾನವನಕ್ಕಾಗಿ ಕಾಯ್ದಿರಿಸಿದ್ದ 3.05 ಎಕರೆ ಜಾಗದಲ್ಲಿ ಒತ್ತುವರಿ ಮಾಡಿಕೊಂಡಿರುವವರಿಗೆ ಖಾತಾ ನೀಡಲಾಗಿದೆ ಎನ್ನಲಾಗಿದೆ. ಇದೇ ರೀತಿ ಸರ್ವೇ ನಂ.337ಎ ಹಾಗೂ 345ಬಿ/1 ಸರ್ಕಾರಿ ಹಳ್ಳ ಪರಂಬೋಕು ಜಮೀನುಗಳಿಗೂ ಖಾತಾ ನೀಡಿರುವ ಬಗ್ಗೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಲಾಗಿದೆ.1