ವಿಕಲಚೇತನರ ಬದುಕಿಗೆ ಎಪಿಡಿಯ ಸಾಥ್: 9 ಮಂದಿಗೆ ವೀಲ್‌ಚೇರ್ ವಿತರಣೆ ಗುರುಮಠಕಲ್: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ಎಪಿಡಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ತೀವ್ರ ಚಲನತೆ ಹೊಂದಿರುವ 9 ಮಂದಿ ಅಗತ್ಯವಂತ ವಿಕಲಚೇತನರಿಗೆ ಉತ್ತಮ ಗುಣಮಟ್ಟದ ವೀಲ್‌ಚೇರ್‌ಗಳನ್ನು ವಿತರಿಸಲಾಯಿತು. ವೀಲ್‌ಚೇರ್‌ಗಳನ್ನು ವಿತರಿಸಿ ಮಾತಾನಾಡಿದ ಎಪಿಡಿ ಸಂಸ್ಥೆಯ ಗುರುಮಠಕಲ್ ತಾಲೂಕು ಸಂಯೋಜಕ ವಿರುಪಾಕ್ಷಿ ಮಾಲಿ ಪಾಟೀಲ್ ವಿಕಲಚೇತನರ ದೈನಂದಿನ ಜೀವನವನ್ನು ಸುಗಮಗೊಳಿಸುವುದರ ಜೊತೆಗೆ ಸ್ವಾವಲಂಬನೆ ಮತ್ತು ಆತ್ಮವಿಶ್ವಾಸ ಬೆಳೆಸುವಲ್ಲಿ ಸಹಾಯಕ ಸಾಧನ–ಸಲಕರಣೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ವಿಕಲಚೇತನರಿಗೆ ನೀಡುವ ಸಾಧನ–ಸಲಕರಣೆಗಳು ಕೇವಲ ನೆರವಿನ ವಸ್ತುಗಳಲ್ಲ. ಅವು ಸ್ವಾತಂತ್ರ್ಯ, ಚಲನವಲನ, ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಬದುಕಿಗೆ ದಾರಿ ಮಾಡಿಕೊಡುವ ಸಾಧನಗಳಾಗಿವೆ. ಈ ನಿಟ್ಟಿನಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಗತ್ಯವಿರುವ ವಿಕಲಚೇತನರನ್ನು ಗುರುತಿಸಿ, ಅವರ ವೈಯಕ್ತಿಕ ಅಗತ್ಯಕ್ಕೆ ಅನುಗುಣವಾಗಿ ಮಾಪನ ಮತ್ತು ಮೌಲ್ಯಮಾಪನ ನಡೆಸಿ ಸೂಕ್ತ ಸಾಧನಗಳನ್ನು ಒದಗಿಸುವ ಕಾರ್ಯವನ್ನು ಎಪಿಡಿ ನಿರಂತರವಾಗಿ ನಡೆಸುತ್ತಿದೆ ಎಂದು ತಿಳಿಸಿದರು. ಎಪಿಡಿ ಸಂಸ್ಥೆಯ ಮೂಲಕ ಈಗಾಗಲೇ ತಾಲೂಕಿನ ಅನೇಕ ವಿಕಲಚೇತನರಿಗೆ ಸಹಾಯಕ ಸಾಧನ–ಸಲಕರಣೆಗಳು, ಫಿಸಿಯೋಥೆರಪಿ, ಆರೋಗ್ಯ ಸೇವೆ, ಶಿಕ್ಷಣ, ಜೀವನೋಪಾಯ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಅಗತ್ಯ ಬೆಂಬಲ ನೀಡಲಾಗುತ್ತಿದೆ. ಅರ್ಹರು ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಪಡೆಯಲು ಅಗತ್ಯ ಮಾರ್ಗದರ್ಶನ ಹಾಗೂ ಸಂಪರ್ಕ ಕಲ್ಪಿಸುವ ಕಾರ್ಯವೂ ನಡೆಯುತ್ತಿದೆ ಎಂದರು. ವಿತರಿಸಿದ ವೀಲ್‌ಚೇರ್‌ಗಳನ್ನು ಫಲಾನುಭವಿಗಳು ಸುರಕ್ಷಿತವಾಗಿ ಬಳಸಿಕೊಂಡು ದೈನಂದಿನ ಚಟುವಟಿಕೆಗಳಲ್ಲಿ ಹೆಚ್ಚಿನ ಸ್ವಾವಲಂಬನೆ ಸಾಧಿಸಬೇಕು. ಪ್ರತಿಯೊಬ್ಬ ವಿಕಲಚೇತನರೂ ಗೌರವಯುತವಾಗಿ ಹಾಗೂ ಸಮಾನ ಅವಕಾಶಗಳೊಂದಿಗೆ ಬದುಕುವಂತಾಗಬೇಕು ಎಂಬುದೇ ಸಂಸ್ಥೆಯ ಉದ್ದೇಶ ಎಂದು ವಿರುಪಾಕ್ಷಿ ಮಾಲಿ ಪಾಟೀಲ್ ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀನಿವಾಸ್, ಫಿಸಿಯೋಥೆರಪಿಸ್ಟ್‌ಗಳಾದ ಅತೀಶ್ ಕುಮಾರ್ ಹಾಗೂ ಜಿ. ವೆಂಕಟೇಶ್, ಸಿಬಿಆರ್ ಗಳಾದ ಶಿಲ್ಪಾ ಎಸ್., ರೇಷ್ಮಾ ಬೇಗಂ ಹಾಗೂ ಸುರೇಶ್, ಫೆಸಿಲಿಟೇಟರ್‌ಗಳಾದ ಪಾರ್ವತಿ, ಕಾಶಪ್ಪ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

- "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*1
- ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.2
- ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ1
- ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು1
- ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ. ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ. ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.1
- ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿತ ಆರೋಪ. ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುವಂತೆ ಆಗ್ರಹಿಸಿ ರೈತರು ಬುಧವಾರ ಸಿರವಾರ ಪಟ್ಟಣದಲ್ಲಿ ರಸ್ತೆ ತಡೆದು ಎರಡನೇ ದಿನದ ಬೃಹತ್ ಪ್ರತಿಭಟನೆ ನಡೆಸಿದರು. ಸಮರ್ಪಕವಾಗಿ ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಕಿಡಿಕಾರಿದರು. ಬೆಳಿಗ್ಗೆಯಿಂದ ನೀರಾವರಿ ಇಲಾಖೆಯ ಮುಂಭಾಗದಲ್ಲಿ ರೈತರು ಪ್ರತಿಭಟಿಸಿದರು. ನೀರಾವರಿ ಇಲಾಖೆಯ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಬಂದು ರೈತರ ಸಮಸ್ಯೆ ಆಲಿಸುವಂತೆ ಪಟ್ಟು ಹಿಡಿದರು. ಆದರೆ ರೈತರ ಹೋರಾಟ ಕಡೆಗಣಿಸಿದ್ದರಿಂದ ರೈತರು ರೊಚ್ಚಿಗೆದ್ದು ಮುಖ್ಯ ರಸ್ತೆ ತಡೆದು ಹೋರಾಟಕ್ಕೆ ಮುಂದಾದರು. ಈ ಹೋರಾಟದಲ್ಲಿ ರಾಜಕೀಯ ಮುಖಂಡರು, ರೈತರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.4
- ಹುಮನಾಬಾದ ಪಟ್ಟಣದಲ್ಲಿ ಈದ್ ಮಿಲಾದ್ ಸಡಗರ ಸಂಭ್ರಮದಿಂದ ಆಚರಣೆ ನಸೀಮುದ್ದಿನ್ ಪಟೇಲ್ ಸೇರಿ ಮುಸ್ಲಿಂ ಮುಖಂಡರು ಭಾಗಿ1
- ಕರೆಮ್ಮ ಜಿ ನಾಯಕ್ ಶಾಸಕರು ವಿಧಾನ ಸಭಾ ಕ್ಷೇತ್ರ ಇವರಿಂದ ನಮ್ಮ ಚಾನೆಲ್2