logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಅಳ್ನಾವರದಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಿದ ದೃಶ್ಯ.* *ಅಳ್ನಾವರದಲ್ಲಿ ಸಂಭ್ರಮದ ಬಸವ ಜಯಂತಿ* *ಅಳ್ಳಾವರ(ಧಾರವಾಡ)* :ಏ.೨೦:ಇಲ್ಲಿನ ಪ್ಯಾಟಿ ಬಸವೇಶ್ವರ ದೇವಸ್ಥಾನ ಟ್ರಸ್ಟ್ ಸಮಿತಿ, ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳ ಹಾಗೂ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಬೆಳಿಗ್ಗೆ ಪ್ಯಾಟಿ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ರುದ್ರಾಭಿಷೇಕ, ಪೂಜೆ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಅರ್ಚಕ ಚೆನ್ನಯ್ಯ ಆರಾಧ್ಯಮಠ ನೆರವೇರಿಸಿದರು. ಈ ವೇಳೆ ಬಾಲ ಬಸವೇಶ್ವರರ ತೊಟ್ಟಿಲು ಸೇವೆ ನಡೆಯಿತು. ಮುತೈದೆಯರು ಜೋಗುಳ ಗೀತೆ ಹಾಡಿ ಭಕ್ತಿ ಭಾವನೆ ಮೆರೆದರು. ತೊಟ್ಟಲನ್ನು ಹೂವಿನ ಅಲಂಕಾರದಿAದ ಸಿಂಗರಿಸಲಾಗಿತ್ತು. ನAತರ ಬಸ್ ನಿಲ್ದಾಣದ ಬಳಿಯ ವೀಘ್ನೇಶ್ವರ ದೇವಸ್ಥಾನದ ಆವರಣದಲ್ಲಿರುವ ಬಸವೇಶ್ವರ ಪುತ್ಥಳಿಗೆ ವಿವಿಧ ಸಮಾಜದ ಬಾಂಧವರು ಸೇರಿ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಸಹ ಭಾಗವಹಿಸಿದ್ದರು. ತಾಲ್ಲೂಕು ಆಡಳಿತ ಮತ್ತು ಪಟ್ಟಣ ಪಂಚಾಯ್ತಿ ಸಹಯೋಗದಲ್ಲಿ ಪಟ್ಟಣ ಪಂಚಾಯ್ತಿ ಆವರಣದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಅಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಸಂಜೆ ಬಸವೇಶ್ವರರ ಭಾವಚಿತ್ರದ ಭವ್ಯ ಮೆರವಣಿಗೆಗೆ ವೀರಶೈವ ಸಮಾಜದ ಅಧ್ಯಕ್ಷ ಎಸ್.ಬಿ. ಪಾಟೀಲ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಸವೇಶ್ವರರ ತತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ತೆರೆದ ಟ್ರ‍್ಯಾಕ್ಟರ್‌ನಲ್ಲಿ ಬಸವೇಶ್ವರರ ಭಾವಚಿತ್ರವನ್ನು ಇರಿಸಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯೊಂದಿಗೆ ಪಲ್ಲಕ್ಕಿ ಸೇವೆಯೂ ನಡೆಯಿತು. ಮೆರವಣಿಗೆ ಮನೆ ಎದುರು ಬಂದಾಗ ಭಕ್ತರು ನೀರು ಹಾಕಿ ಆರತಿ ಮಾಡಿ ಭಕ್ತಿ ಪ್ರದರ್ಶಿಸಿದರು. ವಿಶೇಷವಾಗಿ ಅಲಂಕೃತ ಜೋಡಿ ಎತ್ತುಗಳು ಮೆರವಣಿಗೆಯಲ್ಲಿ ಭಾಗವಹಿಸಿ ಉತ್ಸವಕ್ಕೆ ಮೆರಗು ತಂದವು. ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಜೋಡಿ ಎತ್ತುಗಳಿಗೆ ಬಹುಮಾನ ನೀಡಲಾಯಿತು.

4 hrs ago
user_Vineetmiskin Alnavar
Vineetmiskin Alnavar
Photographer Alnavar, Dharwad•
4 hrs ago
032e5bd4-771f-4591-9f73-b42efa269ad8

*ಅಳ್ನಾವರದಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಿದ ದೃಶ್ಯ.* *ಅಳ್ನಾವರದಲ್ಲಿ ಸಂಭ್ರಮದ ಬಸವ ಜಯಂತಿ* *ಅಳ್ಳಾವರ(ಧಾರವಾಡ)* :ಏ.೨೦:ಇಲ್ಲಿನ ಪ್ಯಾಟಿ ಬಸವೇಶ್ವರ ದೇವಸ್ಥಾನ ಟ್ರಸ್ಟ್ ಸಮಿತಿ, ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳ ಹಾಗೂ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಬೆಳಿಗ್ಗೆ ಪ್ಯಾಟಿ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ರುದ್ರಾಭಿಷೇಕ, ಪೂಜೆ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಅರ್ಚಕ ಚೆನ್ನಯ್ಯ ಆರಾಧ್ಯಮಠ ನೆರವೇರಿಸಿದರು. ಈ ವೇಳೆ ಬಾಲ ಬಸವೇಶ್ವರರ ತೊಟ್ಟಿಲು ಸೇವೆ ನಡೆಯಿತು. ಮುತೈದೆಯರು ಜೋಗುಳ ಗೀತೆ ಹಾಡಿ ಭಕ್ತಿ ಭಾವನೆ ಮೆರೆದರು. ತೊಟ್ಟಲನ್ನು ಹೂವಿನ ಅಲಂಕಾರದಿAದ ಸಿಂಗರಿಸಲಾಗಿತ್ತು. ನAತರ ಬಸ್ ನಿಲ್ದಾಣದ ಬಳಿಯ ವೀಘ್ನೇಶ್ವರ ದೇವಸ್ಥಾನದ ಆವರಣದಲ್ಲಿರುವ ಬಸವೇಶ್ವರ ಪುತ್ಥಳಿಗೆ ವಿವಿಧ ಸಮಾಜದ ಬಾಂಧವರು ಸೇರಿ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ಮಾಜಿ

fdc27131-b11e-4ae7-a5d2-4e62d8ac2369

ಸೈನಿಕರ ಸಂಘದ ಪದಾಧಿಕಾರಿಗಳು ಸಹ ಭಾಗವಹಿಸಿದ್ದರು. ತಾಲ್ಲೂಕು ಆಡಳಿತ ಮತ್ತು ಪಟ್ಟಣ ಪಂಚಾಯ್ತಿ ಸಹಯೋಗದಲ್ಲಿ ಪಟ್ಟಣ ಪಂಚಾಯ್ತಿ ಆವರಣದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಅಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಸಂಜೆ ಬಸವೇಶ್ವರರ ಭಾವಚಿತ್ರದ ಭವ್ಯ ಮೆರವಣಿಗೆಗೆ ವೀರಶೈವ ಸಮಾಜದ ಅಧ್ಯಕ್ಷ ಎಸ್.ಬಿ. ಪಾಟೀಲ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಸವೇಶ್ವರರ ತತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ತೆರೆದ ಟ್ರ‍್ಯಾಕ್ಟರ್‌ನಲ್ಲಿ ಬಸವೇಶ್ವರರ ಭಾವಚಿತ್ರವನ್ನು ಇರಿಸಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯೊಂದಿಗೆ ಪಲ್ಲಕ್ಕಿ ಸೇವೆಯೂ ನಡೆಯಿತು. ಮೆರವಣಿಗೆ ಮನೆ ಎದುರು ಬಂದಾಗ ಭಕ್ತರು ನೀರು ಹಾಕಿ ಆರತಿ ಮಾಡಿ ಭಕ್ತಿ ಪ್ರದರ್ಶಿಸಿದರು. ವಿಶೇಷವಾಗಿ ಅಲಂಕೃತ ಜೋಡಿ ಎತ್ತುಗಳು ಮೆರವಣಿಗೆಯಲ್ಲಿ ಭಾಗವಹಿಸಿ ಉತ್ಸವಕ್ಕೆ ಮೆರಗು ತಂದವು. ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಜೋಡಿ ಎತ್ತುಗಳಿಗೆ ಬಹುಮಾನ ನೀಡಲಾಯಿತು.

More news from ಕರ್ನಾಟಕ and nearby areas
  • ಕುಂದಗೋಳ: ತಾಲ್ಲೂಕಿನ ಹಿರೇನರ್ತಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ತಲೆದೋರಿದ ಹಳೆಯ ದ್ವೇಷವೊಂದು ವಿಕೋಪಕ್ಕೆ ತಿರುಗಿದ್ದು, ಒಂದೇ ಮನೆತನದವರ ನಡುವಿನ ಜಗಳದಲ್ಲಿ ಮುಂದುವರೆದು ಹಲ್ಲೆಯಲ್ಲಿ ಅಂತ್ಯಗೊಂಡಿದೆ. ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಈ ಭೀಕರ ಗಲಾಟೆಯಲ್ಲಿ ಕರಿಯಪ್ಪಗೌಡ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನದ ವೇಳೆಗೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಜಾಗದ ವಿಷಯವಾಗಿ ಮಾತಿಗೆ ಮಾತು ಬೆಳೆದು, ಒಂದೇ ಮನೆತನದ ಅಣ್ಣತಮ್ಮಂದಿರಾದ ಪ್ರಜ್ವಲ್ ಗೌಡ , ಸಿದ್ದನಗೌಡ ಹಾಗೂ ಶಿವನಗೌಡ (ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳು) ನಡುವೆ ಸಂಘರ್ಷ ಏರ್ಪಟ್ಟಿದೆ. ಕರಿಯಪ್ಪಗೌಡ ಅವರು ಬಣವೆ ಒಟ್ಟುತ್ತಿದ್ದ ಸಮಯದಲ್ಲಿ ಸ್ಥಳಕ್ಕೆ ಬಂದ ಪ್ರಜ್ವಲ್ ಗೌಡ ಹಾಗೂ ಆತನ ಸಹಚರರು, ಕಲ್ಲು ಮತ್ತು ಬಡಿಗೆಗಳಿಂದ ಏಕಾಏಕಿ ಅಟ್ಟಹಾಸ ಮೆರೆದಿದ್ದಾರೆ ಎಂದು ಸ್ವತಃ ಹಲ್ಲೆಗೊಳಗಾದ ಕರಿಯಪ್ಪಗೌಡರು ತಮ್ಮ ನೋವಿನ ಸಂಗತಿಯನ್ನು ಹೇಳಿಕೊಂಡಿದ್ದಾರೆ. ಆರೋಪಿಗಳು ಕರಿಯಪ್ಪಗೌಡರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ, ಅವರ ತಲೆ ಹಾಗೂ ಮೈಮೇಲೆ ರಕ್ತಸಿಕ್ತ ಗಾಯಗಳಾಗಿವೆ. ರಕ್ತದ ಘಾಯದಿಂದ ಬಿದ್ದಿದ್ದ ಅವರನ್ನು ಗ್ರಾಮಸ್ಥರು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಗಾಯಾಳು ಕರಿಯಪ್ಪಗೌಡರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಸದ್ಯ ಕುಂದಗೋಲ ಪೋಲಿಸ್ ಠಾಣೆಯಲ್ಲಿ ವಿಚಾರಣೆ ನಡೆಯತ್ತಿದ್ದು ಇದು ಎಪ್ ಆಯ್ ಆರ್ ಆಗುತ್ತಾ ರಾಜಿ ಸಂಧಾನದ ಮೂಲಕ ಇಥ್ಯರ್ಥ ಆಗುತ್ತದೆಯಾ ಎಂದುದನ್ನು ಕಾದು ನೋಡಬೇಕು. ಘಟನೆಯಿಂದಾಗಿ ಗ್ರಾಮದಲ್ಲಿ ಸದ್ಯ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
    1
    ಕುಂದಗೋಳ: ತಾಲ್ಲೂಕಿನ ಹಿರೇನರ್ತಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ತಲೆದೋರಿದ ಹಳೆಯ ದ್ವೇಷವೊಂದು ವಿಕೋಪಕ್ಕೆ ತಿರುಗಿದ್ದು, ಒಂದೇ ಮನೆತನದವರ ನಡುವಿನ ಜಗಳದಲ್ಲಿ ಮುಂದುವರೆದು ಹಲ್ಲೆಯಲ್ಲಿ ಅಂತ್ಯಗೊಂಡಿದೆ. ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಈ ಭೀಕರ ಗಲಾಟೆಯಲ್ಲಿ ಕರಿಯಪ್ಪಗೌಡ  ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೋಮವಾರ ಮಧ್ಯಾಹ್ನದ ವೇಳೆಗೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಜಾಗದ ವಿಷಯವಾಗಿ ಮಾತಿಗೆ ಮಾತು ಬೆಳೆದು, ಒಂದೇ ಮನೆತನದ ಅಣ್ಣತಮ್ಮಂದಿರಾದ ಪ್ರಜ್ವಲ್ ಗೌಡ , ಸಿದ್ದನಗೌಡ  ಹಾಗೂ ಶಿವನಗೌಡ  (ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳು) ನಡುವೆ ಸಂಘರ್ಷ ಏರ್ಪಟ್ಟಿದೆ. ಕರಿಯಪ್ಪಗೌಡ ಅವರು ಬಣವೆ ಒಟ್ಟುತ್ತಿದ್ದ ಸಮಯದಲ್ಲಿ ಸ್ಥಳಕ್ಕೆ ಬಂದ ಪ್ರಜ್ವಲ್ ಗೌಡ ಹಾಗೂ ಆತನ ಸಹಚರರು, ಕಲ್ಲು ಮತ್ತು ಬಡಿಗೆಗಳಿಂದ ಏಕಾಏಕಿ ಅಟ್ಟಹಾಸ ಮೆರೆದಿದ್ದಾರೆ ಎಂದು ಸ್ವತಃ ಹಲ್ಲೆಗೊಳಗಾದ ಕರಿಯಪ್ಪಗೌಡರು ತಮ್ಮ ನೋವಿನ ಸಂಗತಿಯನ್ನು ಹೇಳಿಕೊಂಡಿದ್ದಾರೆ.
ಆರೋಪಿಗಳು ಕರಿಯಪ್ಪಗೌಡರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ, ಅವರ ತಲೆ ಹಾಗೂ ಮೈಮೇಲೆ ರಕ್ತಸಿಕ್ತ ಗಾಯಗಳಾಗಿವೆ. ರಕ್ತದ ಘಾಯದಿಂದ ಬಿದ್ದಿದ್ದ ಅವರನ್ನು ಗ್ರಾಮಸ್ಥರು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಗಾಯಾಳು ಕರಿಯಪ್ಪಗೌಡರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಸದ್ಯ ಕುಂದಗೋಲ ಪೋಲಿಸ್ ಠಾಣೆಯಲ್ಲಿ ವಿಚಾರಣೆ ನಡೆಯತ್ತಿದ್ದು ಇದು ಎಪ್ ಆಯ್ ಆರ್ ಆಗುತ್ತಾ ರಾಜಿ ಸಂಧಾನದ ಮೂಲಕ ಇಥ್ಯರ್ಥ ಆಗುತ್ತದೆಯಾ ಎಂದುದನ್ನು ಕಾದು ನೋಡಬೇಕು.  ಘಟನೆಯಿಂದಾಗಿ ಗ್ರಾಮದಲ್ಲಿ ಸದ್ಯ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
    user_Girish Ghatage
    Girish Ghatage
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    7 hrs ago
  • ಧಾರವಾಡ: ಧಾರವಾಡ ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವನ್ನು ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ಸ್ಥಳಾಂತರಿಸುವುದಾಗಿ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೆರೆ ಆಗ್ರಹಿಸಿದರು. ಧಾರವಾಡ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಪ್ರಾದೇಶಿಕ ಸುದ್ದಿ ವಿಭಾಗಕ್ಕೆ 45 ವರ್ಷಗಳ ಇತಿಹಾಸವಿದೆ. ಈ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಿದರೆ ಉತ್ತರ ಕರ್ನಾಟಕ ಭಾಗದ ಜನರಿಗೆ ಅನ್ಯಾಯ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಕಾಶವಾಣಿ ಸುದ್ದಿ ವಿಭಾಗವನ್ನು ಧಾರವಾಡದಲ್ಲಿ ಉಳಿಸಿಕೊಳ್ಳಲು ಕೇಂದ್ರ ಸಚಿವರಿಗೆ ಹಾಗೂ ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ಒತ್ತಡ ತರಲಾಗುವುದು. ಈ ಕುರಿತು ಕರ್ನಾಟಕ ವಿದ್ಯಾವರ್ಧಕ ಸಂಘವು ಶೀಘ್ರ ಸಭೆ ಕರೆದು ನಿರ್ಧಾರ ಕೈಗೊಳ್ಳಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ.ಸಂಜೀವ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸತೀಶ ತುರಮರಿ, ಶಿವಾನಂದ ಭಾವಿಕಟ್ಟಿ, ವಿಶ್ವೇಶ್ವರಿ ಹಿರೇಮಠ, ವೀರಣ್ಣ ಒಡ್ಡೀನ ಸೇರಿದಂತೆ ಇತರರಿದ್ದರು.
    1
    ಧಾರವಾಡ: ಧಾರವಾಡ ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವನ್ನು ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ಸ್ಥಳಾಂತರಿಸುವುದಾಗಿ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೆರೆ ಆಗ್ರಹಿಸಿದರು.
ಧಾರವಾಡ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಪ್ರಾದೇಶಿಕ ಸುದ್ದಿ ವಿಭಾಗಕ್ಕೆ 45 ವರ್ಷಗಳ ಇತಿಹಾಸವಿದೆ. ಈ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಿದರೆ ಉತ್ತರ ಕರ್ನಾಟಕ ಭಾಗದ ಜನರಿಗೆ ಅನ್ಯಾಯ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
ಆಕಾಶವಾಣಿ ಸುದ್ದಿ ವಿಭಾಗವನ್ನು ಧಾರವಾಡದಲ್ಲಿ ಉಳಿಸಿಕೊಳ್ಳಲು ಕೇಂದ್ರ ಸಚಿವರಿಗೆ ಹಾಗೂ ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ಒತ್ತಡ ತರಲಾಗುವುದು. ಈ ಕುರಿತು ಕರ್ನಾಟಕ ವಿದ್ಯಾವರ್ಧಕ ಸಂಘವು ಶೀಘ್ರ ಸಭೆ ಕರೆದು ನಿರ್ಧಾರ ಕೈಗೊಳ್ಳಲಿದೆ ಎಂದರು. 
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ.ಸಂಜೀವ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸತೀಶ ತುರಮರಿ, ಶಿವಾನಂದ ಭಾವಿಕಟ್ಟಿ, ವಿಶ್ವೇಶ್ವರಿ ಹಿರೇಮಠ, ವೀರಣ್ಣ ಒಡ್ಡೀನ ಸೇರಿದಂತೆ ಇತರರಿದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    9 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    11 hrs ago
  • ಶಿಗ್ಗಾಂವ ತಾಲೂಕಿನ ಅಂಬೇಡ್ಕರ್ ಸಂಕೀರ್ಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡಂತ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಶಿಗ್ಗಾವ ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಸಂಗನಬಸವ ಪೂಜ್ಯಶ್ರೀಗಳು, ಹಾಗೂ ಮಾಜಿ ಸಂಸದರಾದ ಶ್ರೀ ಮಂಜುನಾಥ ಕುನ್ನೂರ್ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ತಾಲೂಕ ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ರಾಗಿ ವಕೀಲರು, ಶಿಗ್ಗಾಂವ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಡ್ಡಪ್ಪ ಜಲ್ದಿ, ಗ್ಯಾರೆಂಟಿ ಸಮಿತಿಯ ತಾಲೂಕ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
    1
    ಶಿಗ್ಗಾಂವ ತಾಲೂಕಿನ ಅಂಬೇಡ್ಕರ್ ಸಂಕೀರ್ಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡಂತ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಶಿಗ್ಗಾವ ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು,
ಈ ಸಂದರ್ಭದಲ್ಲಿ ಸಂಗನಬಸವ ಪೂಜ್ಯಶ್ರೀಗಳು,  ಹಾಗೂ ಮಾಜಿ ಸಂಸದರಾದ ಶ್ರೀ ಮಂಜುನಾಥ ಕುನ್ನೂರ್ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ತಾಲೂಕ ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ರಾಗಿ ವಕೀಲರು, ಶಿಗ್ಗಾಂವ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಡ್ಡಪ್ಪ ಜಲ್ದಿ, ಗ್ಯಾರೆಂಟಿ ಸಮಿತಿಯ ತಾಲೂಕ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    9 hrs ago
  • ..... ಪೊಲೀಸ್‌ ಅಧಿಕಾರಿ ಮೇಲೆ ..... ಅಧಿಕಾರಿಗಳಿಂದ ಕಿರುಕುಳ ವಿಡಿಯೋ ಮಾಡಿ ನ್ಯಾಯಕ್ಕಾಗಿ ಅಂಗಲಾಚಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್ . . . #suddipoint #enrisamasse #policeofficer
    1
    ..... ಪೊಲೀಸ್‌ ಅಧಿಕಾರಿ ಮೇಲೆ 
..... ಅಧಿಕಾರಿಗಳಿಂದ ಕಿರುಕುಳ
ವಿಡಿಯೋ ಮಾಡಿ ನ್ಯಾಯಕ್ಕಾಗಿ
ಅಂಗಲಾಚಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್
.
.
.
#suddipoint #enrisamasse #policeofficer
    user_Suddi Point
    Suddi Point
    Newsstand ಬೆಳಗಾವಿ, ಬೆಳಗಾವಿ, ಕರ್ನಾಟಕ•
    2 hrs ago
  • Post by Uday Chougale
    1
    Post by Uday Chougale
    user_Uday Chougale
    Uday Chougale
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    2 hrs ago
  • ದುರಂತ: ಕಾವೇರಿ ನದಿಯಲ್ಲಿ ಈಜಲು ಹೋದ ಆರು ಮಂದಿ ಜಲಸಮಾಧಿ ​ಮೈಸೂರು: ಜಿಲ್ಲೆಯ ಕೆ.ಆರ್. ನಗರದ ಪ್ರಸಿದ್ಧ ಅರ್ಕೇಶ್ವರ ದೇಗುಲದ ಬಳಿ ಹರಿಯುವ ಕಾವೇರಿ ನದಿಯಲ್ಲಿ ಈಜಲು ಹೋದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಅತ್ಯಂತ ಘೋರ ಘಟನೆ ನಡೆದಿದೆ. ​
    1
    ದುರಂತ: ಕಾವೇರಿ ನದಿಯಲ್ಲಿ ಈಜಲು ಹೋದ ಆರು ಮಂದಿ ಜಲಸಮಾಧಿ
​ಮೈಸೂರು: ಜಿಲ್ಲೆಯ ಕೆ.ಆರ್. ನಗರದ ಪ್ರಸಿದ್ಧ ಅರ್ಕೇಶ್ವರ ದೇಗುಲದ ಬಳಿ ಹರಿಯುವ ಕಾವೇರಿ ನದಿಯಲ್ಲಿ ಈಜಲು ಹೋದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಅತ್ಯಂತ ಘೋರ ಘಟನೆ ನಡೆದಿದೆ.
​
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Belagavi, Karnataka•
    6 hrs ago
  • ಕಲಘಟಗಿ: ಮಧ್ಯಪಾನ ಸೇವಿಸಿ ವಿದ್ಯುತ್ ಕಂಬ ಏರಿ ಕುಳಿತ ಯುವಕನನ್ನು ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಯುವಕನ ಮನವೊಲಿಸಿ ಸುರಕ್ಷಿತವಾಗಿ ಕೆಳಗೆ ಇಳಿಸಿದ ಘಟನೆ ಶನಿವಾರ ರಾತ್ರಿ ಜರುಗಿದೆ. ತಾಲ್ಲೂಕಿನ ಕಾಡನಕೊಪ್ಪ ಗ್ರಾಮದ ಮಂಜುನಾಥ ಸಿದ್ದಪ್ಪ ಜಮ್ಮಿಹಾಳ (20) ಎಂಬ ಯುವಕನೇ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಹೈ ವೋಲ್ಟೇಜ್ ವಿದ್ಯುತ್ ಕಂಬದ 150 ಅಡಿ ಎತ್ತರದಲ್ಲಿ ಏರಿ ಕುಳಿತ್ತಿದ್ದನು. 2 ಘಂಟೆಗಳ ಕಾಲ ಅಗ್ನಿ ಶಾಮಕ ಅಧಿಕಾರಿಗಳು ಮನವೊಲಿಸಿದ ನಂತರ ಯುವಕನಿಗೆ ತೊಂದರೆಯಾಗದಂತೆ ಸುರಕ್ಷಿತವಾಗಿ ಕೆಳಗೆ ಇಳಿಸಿ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಾಲ್ಲೂಕ ಅಗ್ನಿಶಾಮಕ ಠಾಣಾಧಿಕಾರಿ ಅರುಣ ಮಾಳುದೇ ತಿಳಿಸಿದರು. ಅಗ್ನಿಶಾಮಕ ಠಾಣೆ ಸಿಬ್ಬಂದಿಗಳಾದ ಥಾವರು ರಾಠೋಡ ಮಹೇಶ ವಡ್ಡರ,ಉಮೇಶ ತೆಂಬದ,ಸಂಜು ದೊಡಮನಿ, ಸಂತೋಷ ಉಗ್ನಿಕೇರಿ,ಈರಣ್ಣ ಮಠದ,ಅನಿಲ ಲೋಖಂಡೆ ಇದ್ದರು.
    1
    ಕಲಘಟಗಿ: ಮಧ್ಯಪಾನ ಸೇವಿಸಿ ವಿದ್ಯುತ್ ಕಂಬ ಏರಿ ಕುಳಿತ ಯುವಕನನ್ನು ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಯುವಕನ ಮನವೊಲಿಸಿ ಸುರಕ್ಷಿತವಾಗಿ ಕೆಳಗೆ ಇಳಿಸಿದ ಘಟನೆ ಶನಿವಾರ ರಾತ್ರಿ ಜರುಗಿದೆ.
ತಾಲ್ಲೂಕಿನ ಕಾಡನಕೊಪ್ಪ ಗ್ರಾಮದ  ಮಂಜುನಾಥ ಸಿದ್ದಪ್ಪ ಜಮ್ಮಿಹಾಳ (20) ಎಂಬ ಯುವಕನೇ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಹೈ ವೋಲ್ಟೇಜ್ ವಿದ್ಯುತ್ ಕಂಬದ 150 ಅಡಿ ಎತ್ತರದಲ್ಲಿ ಏರಿ ಕುಳಿತ್ತಿದ್ದನು.
2 ಘಂಟೆಗಳ ಕಾಲ ಅಗ್ನಿ ಶಾಮಕ ಅಧಿಕಾರಿಗಳು ಮನವೊಲಿಸಿದ ನಂತರ ಯುವಕನಿಗೆ ತೊಂದರೆಯಾಗದಂತೆ ಸುರಕ್ಷಿತವಾಗಿ ಕೆಳಗೆ ಇಳಿಸಿ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಾಲ್ಲೂಕ ಅಗ್ನಿಶಾಮಕ ಠಾಣಾಧಿಕಾರಿ ಅರುಣ ಮಾಳುದೇ ತಿಳಿಸಿದರು.
ಅಗ್ನಿಶಾಮಕ ಠಾಣೆ ಸಿಬ್ಬಂದಿಗಳಾದ ಥಾವರು ರಾಠೋಡ ಮಹೇಶ ವಡ್ಡರ,ಉಮೇಶ ತೆಂಬದ,ಸಂಜು ದೊಡಮನಿ, ಸಂತೋಷ ಉಗ್ನಿಕೇರಿ,ಈರಣ್ಣ ಮಠದ,ಅನಿಲ ಲೋಖಂಡೆ ಇದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.