ಹನೂರು:ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.48 ಕೋಟಿ ರೂಗಳ ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ರವರ ಸಮ್ಮುಖದಲ್ಲಿ ಗುರುವಾರ ಬೆಳ್ಳಿಗ್ಗೆ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಗೊಂಡು ಸಂಜೆ 6 ಗಂಟೆಗೆ ಮುಕ್ತಾಯವಾಯಿತು. ಹೊಸ ವರ್ಷಾಚರಣೆ, ಸರ್ಕಾರಿ ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ 29 ದಿನಗಳ ಅವಧಿಯಲ್ಲಿ 2,48,02,179ರೂ ನಗದು ಹಣ, 35 ಗ್ರಾಂ ಚಿನ್ನ ಹಾಗೂ 1 ಕೆಜಿ 62 ಗ್ರಾಂ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ. ಅಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 2 ನೋಟುಗಳು ಹಾಗೂ ವಿದೇಶಿಯ 6 ನೋಟುಗಳು ಕಂಡುಬಂದಿವೆ. ಈ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಮರಿಸ್ವಾಮಿ, ಕಾಗಲವಾಡಿ, ಭಾಗ್ಯಮ್ಮ, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು.ಸಿ, ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಲೆಕ್ಕಧೀಕ್ಷಕರಾದ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಸಿಬ್ಬಂದಿ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

- ಚಾಮರಾಜನಗರ ನ್ಯೂಸ್ ಪ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಕುಂದುಕೊರತೆ ಸಭೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಸಿ.ಪಿ ಐ. ಜಿ.ಕೆ.ಸುಬ್ರಹ್ಮಣ್ಯ ರವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ದೇಶದ ಕಾನೂನು ಬಲಿಷ್ಠವಾಗಿದ್ದು ಕಾನೂನು ಮೀರಿ ಅಪರಾಧ ಕೃತ್ಯ ಮಾಡುವ ಯಾವುದೆ ವ್ಯಕ್ತಿ ಸಮಾಜದಲ್ಲಿ ಎಷ್ಟೆ ದೊಡ್ಡವರಾಗಿದ್ದರೂ ಅವರ ವಿರುದ್ಧ ದೂರು ಬಂದರೆ ಅವರನ್ನು ಬಂಧಿಸುವ ಅಧಿಕಾರ ಪೊಲೀಸ್ ಇಲಾಖೆಗೆ ಇದೆ , ಗ್ರಾಮೀಣ ಪ್ರದೇಶಗಳಲ್ಲಿ ಜಾತಿಗಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಮುಖ್ಯವಾಗಿ ಪ್ರಕರಣ ದಾಖಲಾಗಬೇಕು. ಒಬ್ಬ ವ್ಯಕ್ತಿಗೆ ಒಂದು ಸಮುದಾಯದ ಅಥವಾ ಒಂದು ಜಾತಿಯ ವ್ಯಕ್ತಿಗಳಿಂದ ಅಥವಾ ಹಲವರಿಂದ ತೊಂದರೆಯಾಗುತ್ತಿದ್ದರೆ ಅಂತವರು ಧೈರ್ಯದಿಂದ ಮುಂದೆ ಬಂದು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರೆ ಮುಲಾಜಿಲ್ಲದೆ ಅಂಥಾ ಪ್ರಕರಣಕ್ಕೆ ನಮ್ಮ ಇಲಾಖೆ ಕಾನೂನು ರೀತಿ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ವಿವಿಧ ದಲಿತ ಮುಖಂಡರುಗಳು ಮತ್ತು ವಾಲ್ಮೀಕಿ ಸಮುದಾಯದ ಮುಖಂಡರುಗಳು ಮಾತನಾಡಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ವಾಹನದ ನಿಲುಗಡೆ, ಪೋಲಿಸ್ ಚೋಕಿಯಲ್ಲಿ ಪೋಲಿಸ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು, ಅಗರ ಗ್ರಾಮದಲ್ಲಿ ಆಟೋಗಳು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ, ಗ್ರಾಮೀಣ ಭಾಗದಲ್ಲಿ ಬಿಟ್ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು, ಗ್ರಾಮೀಣ ಭಾಗದಲ್ಲಿ ಅಕ್ರಮ ಮಧ್ಯ ಮಾರಾಟ ಕಡಿವಾಣ ಹಾಕಬೇಕು, ಪಟ್ಟಣದ ಬಳೆಪೇಟೆಯಲ್ಲಿ ಅಕ್ರಮ ಲಾಟರಿ ದಂಧೆ ನಿಯಂತ್ರಿಸಬೇಕು, ಅಲ್ಲದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು, ಸೇರಿದಂತೆ ದಲಿತ ಮುಖಂಡರು ಪರಿಶಿಷ್ಟ ಜನಾಂಗದ ಮುಖಂಡರು ತಮ್ಮ ತಮ್ಮ ಗ್ರಾಮಗಳಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಗೋಪು ಆಗಿ ಮಾಹಿತಿ ನೀಡಿ ಗ್ರಾಮೀಣ ಪ್ರದೇಶದಲ್ಲಿಯೂ ಇಂಥಾ ಸಭೆಗಳು ಪೊಲೀಸ್ ಇಲಾಖೆಯಿಂದ ಆಯೋಜನೆ ಮಾಡಬೇಕು ಎಂದು ಮನವಿ ಮಾಡಿದರು. ಈ ಸಭೆಯಲ್ಲಿ ಪಿಎಸ್ಐ. ಎಸ್. ಕೆ. ಆಕಾಶ್, ಅಗರ ಪೊಲೀಸ್ ಠಾಣೆಯ ಪಿಎಸ್ಐ. ಎನ್.ಕರಿಬಸಪ್ಪ, ago ಪೊಲೀಸ್ ಸಿಬ್ಬಂದಿಗಳು, ವಿವಿಧ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪರಿಶಿಷ್ಟ ಪಂಗಡಗಳ ಮುಖಂಡರುಗಳು ಹಾಜರಿದ್ದರು ಮುಖಂಡರುಗಳು ಹಾಜರಿದ್ದರು. ವರದಿ. ಎಸ್ ಪುಟ್ಟಸ್ವಾಮಿ ಹೊನ್ನೂರು4
- ಹನೂರು ತಾಲೂಕಿಗೆ ಜಿಲ್ಲಾಧಿಕಾರಿ ಭೇಟಿ. ಹನೂರು :ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶ್ರೀರೂಪ ರವರು ಅಧಿಕಾರ ವಹಿಸಿಕೊಂಡು ನಂತರ ಮೊದಲ ಬಾರಿಗೆ ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣಕ್ಕೆ ಆಗಮಿಸಿದ, ತಾಲೂಕಿನಲ್ಲಿರುವ ಕುಡಿಯುವ ನೀರು, ಕಾಡು ಪ್ರಾಣಿಗಳ ಹಾವಳಿ ಸೇರಿದಂತೆ ಹಲವು ಸಮಸ್ಯೆಯನ್ನ ಆಲಿಸಿದರು. ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಕ್ರಮವಹಿಸಲು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಜಿ.ಪಂ.ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾ ರೋತ್, ತಾಲೂಕು ದಂಡಾಧಿಕಾರಿ ಚೈತ್ರ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರ ಅಮ್ಜಾದ್ ಖಾನ್, ರಾಜಣ್ಣ, ಕೂಡಲೂರು ವೆಂಕಟೇಶ್, ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳಾದ ಮಣಿಗರ್ ಪ್ರಸಾದ್, ಬಸವಣ್ಣ, ಸದಾಶಿವ ಸೇರಿದಂತೆ ಹಲವು ರೈತರು ಇದ್ದರು.4
- ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.1
- *ಭಾರತ ನಲ್ಲಿ ವೈರಲ್*1
- Post by AAJ KI DASTAK NEWS KARNATAKA1
- ಶಿಡ್ಲಘಟ್ಟ: ಕೊಟ್ಟ ಮಾತಿನಂತೆ ರೈತರ ಭೂಮಿಯನ್ನು ಉಳಿಸಿಕೊಟ್ಟಿದ್ದೇನೆ: ಶಾಸಕ ಬಿ ಎನ್ ರವಿಕುಮಾರ್1
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- *ಭಾರತ ನಲ್ಲಿ ವೈರಲ್*1