logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಳೆದ 12 ವರ್ಷಗಳಲ್ಲಿ ಪ್ರಧಾನಿ ಮೋದಿ, 82 ದೇಶಗಳನ್ನು ಸುತ್ತಿ ಬಂದಿದ್ದಾರೆ. ಇದಕ್ಕಾಗಿ ಬರೋಬರಿ 5,987 ಕೋಟಿ ರೂ. ಸರ್ಕಾರಿ ಹಣವನ್ನು ಖರ್ಚು ಮಾಡಲಾಗಿದೆ. ಆದರೆ ಪ್ರಯೋಜನ ಮಾತ್ರ ಶೂನ್ಯ. 20 ದೇಶಗಳು ಭಾರತದ ಸರಕುಗಳು ಕಳಪೆ ಎಂಬ ಕಾರಣಕ್ಕೆ ತಿರಸ್ಕರಿಸಿವೆ. ನೆರೆ ದೇಶಗಳು ಭಾರತವನ್ನು ಇನ್ನಷ್ಟು ದ್ವೇಷಿಸತೊಡಗಿವೆ. ಡಾಲರ್‌ ಎದುರು ರುಪಾಯಿ ಮೌಲ್ಯ ಪಾತಾಳ ಸೇರಿದೆ. ಇದೇನಾ ಸ್ವಯಂ ಘೋಷಿತ ವಿಶ್ವಗುರುವಿನ ನಾಯಕತ್ವದ ಫಲ?

1 hr ago
user_Anand Kumar
Anand Kumar
Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
1 hr ago

ಕಳೆದ 12 ವರ್ಷಗಳಲ್ಲಿ ಪ್ರಧಾನಿ ಮೋದಿ, 82 ದೇಶಗಳನ್ನು ಸುತ್ತಿ ಬಂದಿದ್ದಾರೆ. ಇದಕ್ಕಾಗಿ ಬರೋಬರಿ 5,987 ಕೋಟಿ ರೂ. ಸರ್ಕಾರಿ ಹಣವನ್ನು ಖರ್ಚು ಮಾಡಲಾಗಿದೆ. ಆದರೆ ಪ್ರಯೋಜನ ಮಾತ್ರ ಶೂನ್ಯ. 20 ದೇಶಗಳು ಭಾರತದ ಸರಕುಗಳು ಕಳಪೆ ಎಂಬ ಕಾರಣಕ್ಕೆ ತಿರಸ್ಕರಿಸಿವೆ. ನೆರೆ ದೇಶಗಳು ಭಾರತವನ್ನು ಇನ್ನಷ್ಟು ದ್ವೇಷಿಸತೊಡಗಿವೆ. ಡಾಲರ್‌ ಎದುರು ರುಪಾಯಿ ಮೌಲ್ಯ ಪಾತಾಳ ಸೇರಿದೆ. ಇದೇನಾ ಸ್ವಯಂ ಘೋಷಿತ ವಿಶ್ವಗುರುವಿನ ನಾಯಕತ್ವದ ಫಲ?

More news from ಕರ್ನಾಟಕ and nearby areas
  • "'ಕಾಣಿಕೆ ಕಳ್ಳರು ಎಲ್ಲಿ ಸಿಗುತ್ತಾರೆ? ಬಿಜೆಪಿ ಕಚೇರಿಯಲ್ಲಿ!' ಎಂಬ ಘೋಷಣೆ... ನವದೆಹಲಿ ಸಂಸತ್ ಭವನದ ಹೊರಗೆ ವಿಪಕ್ಷಗಳ ಪ್ರತಿಭಟನಾ ಮೆರವಣಿಗೆ
    1
    "'ಕಾಣಿಕೆ ಕಳ್ಳರು ಎಲ್ಲಿ ಸಿಗುತ್ತಾರೆ? ಬಿಜೆಪಿ ಕಚೇರಿಯಲ್ಲಿ!' ಎಂಬ ಘೋಷಣೆ...
ನವದೆಹಲಿ ಸಂಸತ್ ಭವನದ ಹೊರಗೆ ವಿಪಕ್ಷಗಳ ಪ್ರತಿಭಟನಾ ಮೆರವಣಿಗೆ
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    37 min ago
  • ನೂತನ ಸಚಿವ ಸಿ ಪುಟ್ಟರಂಗ ಶೆಟ್ಟಿ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಸನ್ಮಾನ ಯಾದಗಿರಿ: ಡಿ.ಕೆ.ಶಿವಕುಮಾರ್‌ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಸಂಘದಹಾಲಿ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ 4 ಬಾರಿ ಆಯ್ಕೆಯಾದ ಭಗೀರಥ ಉಪ್ಪಾರ ಸಮಾಜದ ಏಕೈಕ ಶಾಸಕರಾದ ಪುಟ್ಟರಂಗಶೆಟ್ಟಿ ರವರು ಆಗಸ್ಟ್ 3 ರಂದು ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಇದೇ ಸಂಧರ್ಭದಲ್ಲಿ ಸಮಾಜದ ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು. ಸಚಿವರನ್ನು ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲೆಗೆ ಭೇಟಿ ನೀಡುವಂತೆ ಆಹ್ವಾನಿಸಲಾಯಿತು. ಇದಕ್ಕೆ ಸಚಿವರು ಅತ್ಯಂತ ಹರ್ಷದಿಂದ ಖಂಡಿತವಾಗಿ ಭೇಟಿ ನೀಡುವುದಾಗಿ ಭರವಸೆ ನೀಡಿದರು. ಈ ಸಂಧರ್ಭದಲ್ಲಿ ಭಗೀರಥ ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಬನ್ನಪ್ಪ ಹುಲಿಬೆಟ್ಟ, ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ದಳಪತಿ ಶೆಟ್ಟಿಕೇರಾ, ಸಮಾಜದ ಮುಖಂಡರಾದ ರಾಮಲಿಂಗ ಯರಗೋಳ, ಡಾ.ಆಂಜನೇಯ ಮಾವಿನಹಳ್ಳಿ ಕಡೇಚೂರು, ಸತೀಶ ಕಟ್ಟಿಮನಿ, ನವೀನ ಮಾವಿನಹಳ್ಳಿ ಇದ್ದರು.
    1
    ನೂತನ ಸಚಿವ ಸಿ ಪುಟ್ಟರಂಗ ಶೆಟ್ಟಿ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಸನ್ಮಾನ
ಯಾದಗಿರಿ: ಡಿ.ಕೆ.ಶಿವಕುಮಾರ್‌ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಸಂಘದಹಾಲಿ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ 4 ಬಾರಿ ಆಯ್ಕೆಯಾದ ಭಗೀರಥ ಉಪ್ಪಾರ ಸಮಾಜದ ಏಕೈಕ ಶಾಸಕರಾದ ಪುಟ್ಟರಂಗಶೆಟ್ಟಿ ರವರು ಆಗಸ್ಟ್ 3 ರಂದು ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು.
ಇದೇ ಸಂಧರ್ಭದಲ್ಲಿ ಸಮಾಜದ ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು. ಸಚಿವರನ್ನು ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲೆಗೆ ಭೇಟಿ ನೀಡುವಂತೆ ಆಹ್ವಾನಿಸಲಾಯಿತು. ಇದಕ್ಕೆ ಸಚಿವರು ಅತ್ಯಂತ ಹರ್ಷದಿಂದ ಖಂಡಿತವಾಗಿ ಭೇಟಿ ನೀಡುವುದಾಗಿ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಭಗೀರಥ ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಬನ್ನಪ್ಪ ಹುಲಿಬೆಟ್ಟ, ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ದಳಪತಿ ಶೆಟ್ಟಿಕೇರಾ, ಸಮಾಜದ ಮುಖಂಡರಾದ ರಾಮಲಿಂಗ ಯರಗೋಳ, ಡಾ.ಆಂಜನೇಯ ಮಾವಿನಹಳ್ಳಿ ಕಡೇಚೂರು, ಸತೀಶ ಕಟ್ಟಿಮನಿ, ನವೀನ ಮಾವಿನಹಳ್ಳಿ ಇದ್ದರು.
    user_Nizamuddin
    Nizamuddin
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    11 hrs ago
  • ಗುರುಮಠಕಲ್ ಪಟ್ಟಣದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿದರು. ಆ.10ರೊಳಗೆ ಬೆಳೆ ವಿಮೆ ಕಡ್ಡಾಯ: ರೈತರಿಗೆ ಸಚಿವ ಶರಣಪ್ರಕಾಶ ಪಾಟೀಲ್ ಕರೆ ಮಳೆ ಕೊರತೆಯಿಂದ ಸಂಕಷ್ಟ; ಬರ ವರದಿ ಶೀಘ್ರ ಸರ್ಕಾರಕ್ಕೆ ಸಲ್ಲಿಕೆ ಗುರುಮಠಕಲ್: ಜಿಲ್ಲೆಯ ರೈತರು ಯಾವುದೇ ಕಾರಣಕ್ಕೂ ಬೆಳೆ ವಿಮೆಯಿಂದ ವಂಚಿತರಾಗಬಾರದು. ಆಗಸ್ಟ್‌ 10ರೊಳಗೆ ಪ್ರತಿಯೊಬ್ಬ ಅರ್ಹ ರೈತರೂ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು. ತಾಲೂಕಿನ ಕಂದಕೂರು, ಗುಂಜನೂರ, ಬೋರಬಂಡಾ ಹಾಗೂ ಗುರುಮಠಕಲ್ ಭಾಗಗಳ ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದ ಬಳಿಕ ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಳೆ ಅಭಾವದಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಬಿತ್ತನೆ ಕುಂಠಿತಗೊಂಡಿದ್ದು, ಹೆಸರು ಹಾಗೂ ಉದ್ದು ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಬೆಳೆ ವಿಮೆಯೇ ರೈತರಿಗೆ ಪ್ರಮುಖ ಆರ್ಥಿಕ ಆಸರೆಯಾಗಲಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ವಿಮೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಕಳೆದ ವರ್ಷ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಎದುರಾದ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ದೂರುಗಳು ಬಂದಿದ್ದವು. ಈ ಬಾರಿ ಪರಿಹಾರ ವಿತರಣೆಯನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಸರು ಹಾಗೂ ಉದ್ದು ಬೆಳೆ ಬೆಳೆದ ರೈತರಿಗೆ ವಿಮೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲೇ ಬ್ಯಾಂಕ್ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆಯಂತೆ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ಮಳೆ ಪ್ರಮಾಣ, ಬೆಳೆ ನಷ್ಟ ಹಾಗೂ ಇತರೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ರಸಗೊಬ್ಬರ ಕೊರತೆ ಹಾಗೂ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆ ವಸೂಲಿ ಮಾಡುತ್ತಿರುವ ಅಂಗಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರಿಗೆ ನೋಟಿಸ್ ನೀಡಿ ಅಗತ್ಯವಿದ್ದರೆ ಪರವಾನಗಿ ರದ್ದುಪಡಿಸಲಾಗುವುದು. ಎಲ್ಲ ರಸಗೊಬ್ಬರ ಮಾರಾಟಗಾರರು ಅಂಗಡಿ ಮುಂಭಾಗದಲ್ಲಿ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸಚಿವರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಶರಣುಗೌಡ ಕಂದಕೂರು, ಜಿಲ್ಲಾಧಿಕಾರಿ ರಾಹುಲ್ ತುಕರಾಂ ಪಾಂಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಓರಾಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಶಂಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸಿರೆಡ್ಡಿ ಅನಪೂರ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಷಚಂದ್ರ ಕಟಕಟಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
    3
    ಗುರುಮಠಕಲ್ ಪಟ್ಟಣದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿದರು.
ಆ.10ರೊಳಗೆ ಬೆಳೆ ವಿಮೆ ಕಡ್ಡಾಯ: ರೈತರಿಗೆ ಸಚಿವ ಶರಣಪ್ರಕಾಶ ಪಾಟೀಲ್ ಕರೆ
ಮಳೆ ಕೊರತೆಯಿಂದ ಸಂಕಷ್ಟ; ಬರ ವರದಿ ಶೀಘ್ರ ಸರ್ಕಾರಕ್ಕೆ ಸಲ್ಲಿಕೆ
ಗುರುಮಠಕಲ್: ಜಿಲ್ಲೆಯ ರೈತರು ಯಾವುದೇ ಕಾರಣಕ್ಕೂ ಬೆಳೆ ವಿಮೆಯಿಂದ ವಂಚಿತರಾಗಬಾರದು. ಆಗಸ್ಟ್‌ 10ರೊಳಗೆ ಪ್ರತಿಯೊಬ್ಬ ಅರ್ಹ ರೈತರೂ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು.
ತಾಲೂಕಿನ ಕಂದಕೂರು, ಗುಂಜನೂರ, ಬೋರಬಂಡಾ ಹಾಗೂ ಗುರುಮಠಕಲ್ ಭಾಗಗಳ ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದ ಬಳಿಕ ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮಳೆ ಅಭಾವದಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಬಿತ್ತನೆ ಕುಂಠಿತಗೊಂಡಿದ್ದು, ಹೆಸರು ಹಾಗೂ ಉದ್ದು ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಬೆಳೆ ವಿಮೆಯೇ ರೈತರಿಗೆ ಪ್ರಮುಖ ಆರ್ಥಿಕ ಆಸರೆಯಾಗಲಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ವಿಮೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.
ಕಳೆದ ವರ್ಷ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಎದುರಾದ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ದೂರುಗಳು ಬಂದಿದ್ದವು. ಈ ಬಾರಿ ಪರಿಹಾರ ವಿತರಣೆಯನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಸರು ಹಾಗೂ ಉದ್ದು ಬೆಳೆ ಬೆಳೆದ ರೈತರಿಗೆ ವಿಮೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲೇ ಬ್ಯಾಂಕ್ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆಯಂತೆ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ಮಳೆ ಪ್ರಮಾಣ, ಬೆಳೆ ನಷ್ಟ ಹಾಗೂ ಇತರೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಸಗೊಬ್ಬರ ಕೊರತೆ ಹಾಗೂ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆ ವಸೂಲಿ ಮಾಡುತ್ತಿರುವ ಅಂಗಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರಿಗೆ ನೋಟಿಸ್ ನೀಡಿ ಅಗತ್ಯವಿದ್ದರೆ ಪರವಾನಗಿ ರದ್ದುಪಡಿಸಲಾಗುವುದು. ಎಲ್ಲ ರಸಗೊಬ್ಬರ ಮಾರಾಟಗಾರರು ಅಂಗಡಿ ಮುಂಭಾಗದಲ್ಲಿ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸಚಿವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಶರಣುಗೌಡ ಕಂದಕೂರು, ಜಿಲ್ಲಾಧಿಕಾರಿ ರಾಹುಲ್ ತುಕರಾಂ ಪಾಂಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಓರಾಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಶಂಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸಿರೆಡ್ಡಿ ಅನಪೂರ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಷಚಂದ್ರ ಕಟಕಟಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    9 hrs ago
  • ಭೂಮಾನಂದ ಹತ್ಯೆ ಖಂಡಿಸಿ ಉಗ್ರ ಪ್ರತಿಭಟನೆ ಪ್ರಕರಣ ದಿಕ್ಕುತಪ್ಪಿಸಿದರೆ ರಾಜ್ಯಾದ್ಯಂತ ಹೋರಾಟ: ಮುಖಂಡರ ಎಚ್ಚರಿಕೆ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹ; ರಸ್ತೆ ತಡೆ ಬಳಿಕ ಧರಣಿ ಮುಂದುವರಿಕೆ ದೇವದುರ್ಗ, ಆ.5: ತಾಲೂಕಿನ ಸಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಭೂಮಾನಂದ ಎಂಬ ಯುವಕನ ಭೀಕರ ಹತ್ಯೆಯನ್ನು ಖಂಡಿಸಿ ಗ್ರಾಮದಲ್ಲಿ ಬುಧವಾರ ರಸ್ತೆ ತಡೆ ಹಾಗೂ ಧರಣಿ ನಡೆಸಿದ ಪ್ರತಿಭಟನಾಕಾರರು, ಪ್ರಕರಣವನ್ನು ಯಾವುದೇ ಜಾತಿಯ ಚೌಕಟ್ಟಿನಲ್ಲಿ ಸೀಮಿತಗೊಳಿಸದೆ ಮಾನವೀಯ ದೃಷ್ಟಿಕೋನದಿಂದ ತನಿಖೆ ನಡೆಸುವಂತೆ ಆಗ್ರಹಿಸಿದರು. ಧರಣಿಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, "ಈ ಹತ್ಯೆಯ ಹಿಂದೆ ಗಂಭೀರ ಷಡ್ಯಂತ್ರ ಇರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆ ಯಾವುದೇ ಪ್ರಭಾವ, ಒತ್ತಡ ಅಥವಾ ರಾಜಕೀಯ ಹಸ್ತಕ್ಷೇಪಕ್ಕೆ ಮಣಿದು ತನಿಖೆಯ ದಿಕ್ಕು ತಪ್ಪಿಸಿದರೆ ಅದನ್ನು ಸಹಿಸುವುದಿಲ್ಲ. ನ್ಯಾಯಕ್ಕಾಗಿ ರಾಜ್ಯಾದ್ಯಂತ ಹೋರಾಟಕ್ಕೆ ಇಳಿಯಬೇಕಾದ ಪರಿಸ್ಥಿತಿ ಬಂದರೂ ಹಿಂದೆ ಸರಿಯುವುದಿಲ್ಲ. ನಾವು ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವದಲ್ಲಿ ನಂಬಿಕೆ ಇಟ್ಟವರು," ಎಂದು ಎಚ್ಚರಿಕೆ ನೀಡಿದರು. "ಯಾವುದೇ ವೈಷಮ್ಯಕ್ಕೆ ಕೊಲೆಯೇ ಪರಿಹಾರವಾಗಲಾರದು. ಭಿನ್ನಾಭಿಪ್ರಾಯಗಳಿದ್ದರೆ ಕಾನೂನು ಚೌಕಟ್ಟಿನಲ್ಲೇ ಬಗೆಹರಿಸಿಕೊಳ್ಳಬೇಕು. ಹಾಡಹಗಲೇ ಯುವಕನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ," ಎಂದು ಖಂಡಿಸಿದರು. ಮೃತ ಭೂಮಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ನಿಯಮಾನುಸಾರ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕೊಲೆ ಪ್ರಕರಣದ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ (ಅಟ್ರಾಸಿಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಹನುಮಂತಪ್ಪ ಕಾಕರಗಲ್, "ಇದು ಯಾವುದೇ ಜಾತಿಯ ವಿರುದ್ಧದ ಹೋರಾಟವಲ್ಲ. ಅಮಾಯಕ ಯುವಕನ ಕೊಲೆಗೆ ನ್ಯಾಯ ಒದಗಿಸುವ ಹೋರಾಟ. ಮಂಗಳವಾರ ತಡರಾತ್ರಿ ಪೊಲೀಸ್ ಅಧಿಕಾರಿಯೊಬ್ಬರು ಕರೆ ಮಾಡಿ ಆರೋಪಿಗಳನ್ನು ಬಂಧಿಸಿರುವುದಾಗಿ ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ," ಎಂದು ಹೇಳಿದರು. ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ರಸ್ತೆ ತಡೆಯನ್ನು ಹಿಂಪಡೆದು, ಮರಣೋತ್ತರ ಪರೀಕ್ಷೆ ಬಳಿಕ ಭೂಮಾನಂದ ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಬಂದ ನಂತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಧರಣಿಯನ್ನು ಅಂತ್ಯಗೊಳಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು, ಗ್ರಾಮಸ್ಥರು ಹಾಗೂ ಯುವಕರು ಪಾಲ್ಗೊಂಡು, ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
    1
    ಭೂಮಾನಂದ ಹತ್ಯೆ ಖಂಡಿಸಿ ಉಗ್ರ ಪ್ರತಿಭಟನೆ

ಪ್ರಕರಣ ದಿಕ್ಕುತಪ್ಪಿಸಿದರೆ ರಾಜ್ಯಾದ್ಯಂತ ಹೋರಾಟ: ಮುಖಂಡರ ಎಚ್ಚರಿಕೆ
ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹ; ರಸ್ತೆ ತಡೆ ಬಳಿಕ ಧರಣಿ ಮುಂದುವರಿಕೆ
ದೇವದುರ್ಗ, ಆ.5: ತಾಲೂಕಿನ ಸಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಭೂಮಾನಂದ ಎಂಬ ಯುವಕನ ಭೀಕರ ಹತ್ಯೆಯನ್ನು ಖಂಡಿಸಿ ಗ್ರಾಮದಲ್ಲಿ ಬುಧವಾರ ರಸ್ತೆ ತಡೆ ಹಾಗೂ ಧರಣಿ ನಡೆಸಿದ ಪ್ರತಿಭಟನಾಕಾರರು, ಪ್ರಕರಣವನ್ನು ಯಾವುದೇ ಜಾತಿಯ ಚೌಕಟ್ಟಿನಲ್ಲಿ ಸೀಮಿತಗೊಳಿಸದೆ ಮಾನವೀಯ ದೃಷ್ಟಿಕೋನದಿಂದ ತನಿಖೆ ನಡೆಸುವಂತೆ ಆಗ್ರಹಿಸಿದರು.
ಧರಣಿಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, "ಈ ಹತ್ಯೆಯ ಹಿಂದೆ ಗಂಭೀರ ಷಡ್ಯಂತ್ರ ಇರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆ ಯಾವುದೇ ಪ್ರಭಾವ, ಒತ್ತಡ ಅಥವಾ ರಾಜಕೀಯ ಹಸ್ತಕ್ಷೇಪಕ್ಕೆ ಮಣಿದು ತನಿಖೆಯ ದಿಕ್ಕು ತಪ್ಪಿಸಿದರೆ ಅದನ್ನು ಸಹಿಸುವುದಿಲ್ಲ. ನ್ಯಾಯಕ್ಕಾಗಿ ರಾಜ್ಯಾದ್ಯಂತ ಹೋರಾಟಕ್ಕೆ ಇಳಿಯಬೇಕಾದ ಪರಿಸ್ಥಿತಿ ಬಂದರೂ ಹಿಂದೆ ಸರಿಯುವುದಿಲ್ಲ. ನಾವು ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವದಲ್ಲಿ ನಂಬಿಕೆ ಇಟ್ಟವರು," ಎಂದು ಎಚ್ಚರಿಕೆ ನೀಡಿದರು.
"ಯಾವುದೇ ವೈಷಮ್ಯಕ್ಕೆ ಕೊಲೆಯೇ ಪರಿಹಾರವಾಗಲಾರದು. ಭಿನ್ನಾಭಿಪ್ರಾಯಗಳಿದ್ದರೆ ಕಾನೂನು ಚೌಕಟ್ಟಿನಲ್ಲೇ ಬಗೆಹರಿಸಿಕೊಳ್ಳಬೇಕು. ಹಾಡಹಗಲೇ ಯುವಕನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ," ಎಂದು ಖಂಡಿಸಿದರು.
ಮೃತ ಭೂಮಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ನಿಯಮಾನುಸಾರ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕೊಲೆ ಪ್ರಕರಣದ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ (ಅಟ್ರಾಸಿಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಹನುಮಂತಪ್ಪ ಕಾಕರಗಲ್, "ಇದು ಯಾವುದೇ ಜಾತಿಯ ವಿರುದ್ಧದ ಹೋರಾಟವಲ್ಲ. ಅಮಾಯಕ ಯುವಕನ ಕೊಲೆಗೆ ನ್ಯಾಯ ಒದಗಿಸುವ ಹೋರಾಟ. ಮಂಗಳವಾರ ತಡರಾತ್ರಿ ಪೊಲೀಸ್ ಅಧಿಕಾರಿಯೊಬ್ಬರು ಕರೆ ಮಾಡಿ ಆರೋಪಿಗಳನ್ನು ಬಂಧಿಸಿರುವುದಾಗಿ ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ," ಎಂದು ಹೇಳಿದರು.
ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ರಸ್ತೆ ತಡೆಯನ್ನು ಹಿಂಪಡೆದು, ಮರಣೋತ್ತರ ಪರೀಕ್ಷೆ ಬಳಿಕ ಭೂಮಾನಂದ ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಬಂದ ನಂತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಧರಣಿಯನ್ನು ಅಂತ್ಯಗೊಳಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು.
ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು, ಗ್ರಾಮಸ್ಥರು ಹಾಗೂ ಯುವಕರು ಪಾಲ್ಗೊಂಡು, ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    11 hrs ago
  • ಸೇಡಂ ಜಿಲ್ಲೆಗಾಗಿ ಮೊಳಗಿದ ಕಹಳೆ. ಹೋರಾಟ ಸಂಘ ಅಸ್ತಿತ್ವಕ್ಕೆ .. ಅನೇಕ‌ ವರ್ಷಗಳಿಂದ ಸೇಡಂ ಜಿಲ್ಲೆಯಾಗಿಸುವ ಕನಸಿಗೆ ಈಗ ಅಧಿಕೃತ ಯೋಜನೆ ರೂಪಿಸಿದಂತಾಗಿದೆ. ಈ ಹಿನ್ನೆಲೆಯಲ್ಲಿ ಸೇಡಂ ಜಿಲ್ಲಾ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಪಟ್ಟಣದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಸೇಡಂ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ಕೈಗೊಳ್ಳಲಾಯಿತು ಅಲ್ಲದೆ ಇದೇ ವೇಳೆ ನೂತನ ಪದಾಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದ್ದು, ಭೀಮರೆಡ್ಡಿ ಪಾಟೀಲ ಜಿಲ್ಲೇಡಪಲ್ಲಿ (ಗೌರವ ಅಧ್ಯಕ್ಷರು). ವಿಜಯಕುಮಾರ ಆಡಕಿ (ಅಧ್ಯಕ್ಷರು).ಮಹೇಶ ಪಾಟೀಲ‌ ತರ್ನಳ್ಳಿ (ಉಪಾಧ್ಯಕ್ಷರು).ಅನೀಲರೆಡ್ಡಿ ಸಂಗೆಂಪಲ್ಲಿ (ಉಪಾಧ್ಯಕ್ಷರು. ಪ್ರೇಮ ಗಡಾಳೆ (ಉಪಾಧ್ಯಕ್ಷರು). ಕಾಶಪ್ಪ ರೆಬ್ಬನಪಲ್ಲಿ (ಉಪಾಧ್ಯಕ್ಷರು. ಮುಕುಂದ ದೇಶಪಾಂಡೆ (ಉಪಾಧ್ಯಕ್ಷ). ಶ್ರಿನಿವಾಸ ಕಾಸೋಜು (ಖಜಾಂಚಿ). ರಮೇಶ ಮಾಲಪಾಣಿ (ಸಹ ಖಜಾಂಚಿ). ವಿಜಯಕುಮಾರ ಸೂರವಾರ (ಪ್ರಧಾನ ಕಾರ್ಯದರ್ಶಿ). ಶಿವಾರೆಡ್ಡಿ ಗೌಡನಹಳ್ಳಿ (ಕಾರ್ಯದರ್ಶಿ). ಅಬ್ದುಲ ಸತ್ತಾರ (ಸಹ ಕಾರ್ಯದರ್ಶಿ). ಸಂತೋಷ ಪೂಜಾರಿ ನೀಲಹಳ್ಳಿ (ಸಂಘಟನಾ ಕಾರ್ಯದರ್ಶಿ). ಜಗನ್ನಾಥ ಕೋಡ್ಲಾ (ಸಹ ಸಂಘಟನಾ ಕಾರ್ಯದರ್ಶಿ). ರಮೇಶ ಶಿಲಾರಕೋಟ (ಕಾನೂನು ಸಲಹೆಗಾರ) ಅವರನ್ನು ಅಯ್ಕೆ ಮಾಡಲಾಗಿದೆ. ಈ ವೇಳೆ ನೂತನ ಅಧ್ಯಕ್ಷ‌ ವಿಜಯಕುಮಾರ ಆಡಕಿ ಮಾತನಾಡಿ, ಸೇಡಂ ತಾಲೂಕು" ಜಿಲ್ಲೆಯಾಗುವ ಬಹುತೇಕ ಲಕ್ಷಣಗಳು ಹೊಂದಿದೆ. ರಾಷ್ಟ್ರಕೂಟರ ರಾಜಧಾನಿಯಾಗಿ ಮೆರೆದ ಈ ನೆಲ ಪ್ರತಿನಿತ್ಯ ಒಂದಿಲ್ಲೊಂದು ಕಾರಣಕ್ಕೆ ರಾಜ್ಯಮಟ್ಟದಲ್ಲಿ‌ ಸುದ್ದಿಯಾಗುತ್ತದೆ. ಜಿಲ್ಲಾ ಮಟ್ಟದಲ್ಲಿರಬೇಕಾದ ಅನೇಕ ಕಚೇರಿಗಳು ಈಗಾಗಲೇ ನಮ್ಮಲ್ಲಿವೆ. ಜಿಲ್ಲೆಯಾಗಿಸುವ ಕನಸಿಗೆ ಶಕ್ತಿ ತುಂಬುವಂತೆ ಈಗಾಗಲೇ ಪುರಸಭೆ ನಗರಸಭೆಯಾಗಿ ಮಾರ್ಪಾಡಾಗಿದೆ. ಸಾಮಾಜಿಕ, ಧಾರ್ಮಿಕ, ಸಂಘಟನಾತ್ಮಕ, ಸಾಹಿತ್ಯ, ರಂಗಭೂಮಿ‌, ಕಲೆ ಹೀಗೆ ಹತ್ತು ಹಲವಾರು ರೀತಿಯಿಂದ ಸೇಡಂ ನೆಲ ಗುರುತಿಸಿಕೊಳ್ಳುತ್ತದೆ. ಹಾಗಾಗಿ ಅನೇಕ ಯೋಜನೆ, ಯೋಚನೆಗಳನ್ನು ಮುಂದಿಟ್ಟುಕೊಂಡು "*ಸೇಡಮ್‌ ಜಿಲ್ಲಾ‌‌ ಹೋರಾಟ ಸಮಿತಿ*" ಯನ್ನು ಹುಟ್ಟುಹಾಕಿದ್ದೇವೆ. ಮುಂದಿನ ಯೋಜನೆಗಳನ್ನು ಬರುವ ದಿನಗಳಲ್ಲಿ ಪರಿಚಯಿಸುತ್ತೇವೆ ಎಂದು ಹೇಳಿದ್ದಾರೆ.
    1
    ಸೇಡಂ ಜಿಲ್ಲೆಗಾಗಿ ಮೊಳಗಿದ ಕಹಳೆ.
ಹೋರಾಟ ಸಂಘ ಅಸ್ತಿತ್ವಕ್ಕೆ ..
ಅನೇಕ‌ ವರ್ಷಗಳಿಂದ ಸೇಡಂ ಜಿಲ್ಲೆಯಾಗಿಸುವ ಕನಸಿಗೆ ಈಗ ಅಧಿಕೃತ ಯೋಜನೆ ರೂಪಿಸಿದಂತಾಗಿದೆ. ಈ ಹಿನ್ನೆಲೆಯಲ್ಲಿ ಸೇಡಂ ಜಿಲ್ಲಾ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ.
ಪಟ್ಟಣದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಸೇಡಂ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ಕೈಗೊಳ್ಳಲಾಯಿತು ಅಲ್ಲದೆ ಇದೇ ವೇಳೆ  ನೂತನ ಪದಾಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದ್ದು,
ಭೀಮರೆಡ್ಡಿ ಪಾಟೀಲ ಜಿಲ್ಲೇಡಪಲ್ಲಿ (ಗೌರವ ಅಧ್ಯಕ್ಷರು). ವಿಜಯಕುಮಾರ ಆಡಕಿ (ಅಧ್ಯಕ್ಷರು).ಮಹೇಶ ಪಾಟೀಲ‌ ತರ್ನಳ್ಳಿ (ಉಪಾಧ್ಯಕ್ಷರು).ಅನೀಲರೆಡ್ಡಿ ಸಂಗೆಂಪಲ್ಲಿ (ಉಪಾಧ್ಯಕ್ಷರು. ಪ್ರೇಮ ಗಡಾಳೆ (ಉಪಾಧ್ಯಕ್ಷರು). ಕಾಶಪ್ಪ ರೆಬ್ಬನಪಲ್ಲಿ (ಉಪಾಧ್ಯಕ್ಷರು. ಮುಕುಂದ ದೇಶಪಾಂಡೆ (ಉಪಾಧ್ಯಕ್ಷ). ಶ್ರಿನಿವಾಸ ಕಾಸೋಜು (ಖಜಾಂಚಿ). ರಮೇಶ ಮಾಲಪಾಣಿ (ಸಹ ಖಜಾಂಚಿ). ವಿಜಯಕುಮಾರ ಸೂರವಾರ (ಪ್ರಧಾನ ಕಾರ್ಯದರ್ಶಿ).  ಶಿವಾರೆಡ್ಡಿ ಗೌಡನಹಳ್ಳಿ (ಕಾರ್ಯದರ್ಶಿ). ಅಬ್ದುಲ ಸತ್ತಾರ (ಸಹ ಕಾರ್ಯದರ್ಶಿ).  ಸಂತೋಷ ಪೂಜಾರಿ ನೀಲಹಳ್ಳಿ (ಸಂಘಟನಾ ಕಾರ್ಯದರ್ಶಿ). ಜಗನ್ನಾಥ ಕೋಡ್ಲಾ (ಸಹ ಸಂಘಟನಾ ಕಾರ್ಯದರ್ಶಿ). ರಮೇಶ ಶಿಲಾರಕೋಟ (ಕಾನೂನು ಸಲಹೆಗಾರ) ಅವರನ್ನು ಅಯ್ಕೆ ಮಾಡಲಾಗಿದೆ. 
ಈ ವೇಳೆ ನೂತನ ಅಧ್ಯಕ್ಷ‌ ವಿಜಯಕುಮಾರ ಆಡಕಿ ಮಾತನಾಡಿ, ಸೇಡಂ ತಾಲೂಕು" ಜಿಲ್ಲೆಯಾಗುವ ಬಹುತೇಕ ಲಕ್ಷಣಗಳು ಹೊಂದಿದೆ.
ರಾಷ್ಟ್ರಕೂಟರ ರಾಜಧಾನಿಯಾಗಿ ಮೆರೆದ ಈ ನೆಲ ಪ್ರತಿನಿತ್ಯ  ಒಂದಿಲ್ಲೊಂದು ಕಾರಣಕ್ಕೆ ರಾಜ್ಯಮಟ್ಟದಲ್ಲಿ‌ ಸುದ್ದಿಯಾಗುತ್ತದೆ. ಜಿಲ್ಲಾ ಮಟ್ಟದಲ್ಲಿರಬೇಕಾದ ಅನೇಕ ಕಚೇರಿಗಳು ಈಗಾಗಲೇ ನಮ್ಮಲ್ಲಿವೆ. ಜಿಲ್ಲೆಯಾಗಿಸುವ ಕನಸಿಗೆ ಶಕ್ತಿ ತುಂಬುವಂತೆ ಈಗಾಗಲೇ ಪುರಸಭೆ ನಗರಸಭೆಯಾಗಿ ಮಾರ್ಪಾಡಾಗಿದೆ. ಸಾಮಾಜಿಕ, ಧಾರ್ಮಿಕ, ಸಂಘಟನಾತ್ಮಕ, ಸಾಹಿತ್ಯ, ರಂಗಭೂಮಿ‌, ಕಲೆ ಹೀಗೆ ಹತ್ತು ಹಲವಾರು ರೀತಿಯಿಂದ ಸೇಡಂ ನೆಲ ಗುರುತಿಸಿಕೊಳ್ಳುತ್ತದೆ.
ಹಾಗಾಗಿ ಅನೇಕ ಯೋಜನೆ, ಯೋಚನೆಗಳನ್ನು ಮುಂದಿಟ್ಟುಕೊಂಡು "*ಸೇಡಮ್‌ ಜಿಲ್ಲಾ‌‌ ಹೋರಾಟ ಸಮಿತಿ*" ಯನ್ನು ಹುಟ್ಟುಹಾಕಿದ್ದೇವೆ. ಮುಂದಿನ ಯೋಜನೆಗಳನ್ನು ಬರುವ ದಿನಗಳಲ್ಲಿ ಪರಿಚಯಿಸುತ್ತೇವೆ ಎಂದು ಹೇಳಿದ್ದಾರೆ.
    user_Suddi - Junction
    Suddi - Junction
    Voice of people ಸೇಡಂ, ಕಲಬುರಗಿ, ಕರ್ನಾಟಕ•
    14 hrs ago
  • ನಿಮ್ಮ ಸಿದ್ಧಾಂತದ ಜನರನ್ನು ಜಡ್ಜ್ ಗಳಾಗಿ ಆಯ್ಕೆ ಮಾಡುತ್ತೀರಿ" ಸುಪ್ರೀಂ ಕೋರ್ಟ್ (ನ್ಯಾಯಾಧೀಶರ " ಸಂಖ್ಯೆ) ತಿದ್ದುಪಡಿ ಮಸೂದೆ ಕುರಿತು ಚರ್ಚೆ ರಾಜ್ಯಸಭಾ ಸಂಸದೆ ಮೇನಕಾ ಗುರುಸ್ವಾಮಿ ಮಾತು
    1
    ನಿಮ್ಮ ಸಿದ್ಧಾಂತದ ಜನರನ್ನು ಜಡ್ಜ್ ಗಳಾಗಿ ಆಯ್ಕೆ ಮಾಡುತ್ತೀರಿ"
ಸುಪ್ರೀಂ ಕೋರ್ಟ್ (ನ್ಯಾಯಾಧೀಶರ
" ಸಂಖ್ಯೆ) ತಿದ್ದುಪಡಿ ಮಸೂದೆ ಕುರಿತು ಚರ್ಚೆ 
ರಾಜ್ಯಸಭಾ ಸಂಸದೆ ಮೇನಕಾ ಗುರುಸ್ವಾಮಿ ಮಾತು
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    40 min ago
  • ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು. ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು. ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು. ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು. ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
    1
    ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ

ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು.

ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು.

ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು.

ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.

ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ
ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು.
ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು.
ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು.
ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.
ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.