logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗಾನಕೋಗಿಲೆ ಎಸ್. ಜಾನಕಿ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಹಾಗೂ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಇಂದು ಜರುಗಿತು. ಶ್ರದ್ಧಾಂಜಲಿ ಸಭೆಯ ಆರಂಭದಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ, ಒಂದು ನಿಮಿಷದ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರಗೌಡ ಮಾಲಿ ಪಾಟೀಲ ಗುಮಗೇರಾ ಅವರು, ಸುಮಾರು 17 ಭಾಷೆಗಳಲ್ಲಿ ತಮ್ಮ ಮಧುರ ಕಂಠದಿಂದ ಹಾಡಿರುವ ಎಸ್. ಜಾನಕಿ ಅವರು ಪದ್ಮಶ್ರೀ ಪ್ರಶಸ್ತಿ, ರಾಷ್ಟ್ರೀಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದರು. ಅಂತಹ ಗಾನಕೋಗಿಲೆ ನಮ್ಮನ್ನು ಬಿಟ್ಟು ಅಗಲಿದ್ದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕುಷ್ಟಗಿ ತಾಲೂಕಾ ಕಸಾಪ ಅಧ್ಯಕ್ಷರಾದ ಲೆಂಕಪ್ಪ ವಾಲಿಕಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಸ್. ಜಾನಕಿ ಅವರು ತಮ್ಮ ಬದುಕನ್ನೇ ಸಂಗೀತಕ್ಕೆ ಸಮರ್ಪಿಸಿದ ಅಪರೂಪದ ಸಾಧಕಿ. ಅವರ ಗಾಯನ ಸದಾ ಸಂಗೀತಾಭಿಮಾನಿಗಳ ಹೃದಯದಲ್ಲಿ ಕೊನೆಯವರೆಗೂ ಜೀವಂತವಾಗಿರಲಿದೆ ಎಂದರು. ಇದೇ ವೇಳೆ ರಾಜ್ಯ ಜಾನಪದ ಪ್ರಶಸ್ತಿ ಪುರಸ್ಕೃತ ಶರಣಪ್ಪ ವಡಗೇರಿ, ಹಿರಿಯ ಸಾಹಿತಿ ಹಾಗೂ ಮಾಜಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹನಮಂತಪ್ಪ ಈಟಿಯವರ್, ಶಿಕ್ಷಕ ಹಾಗೂ ಸಾಹಿತಿ ಡಾ. ಕುಮಾರಸ್ವಾಮಿ ಹಿರೇಮಠ ಮತ್ತು ಮಾಜಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಟರಾಜ ಸೋನಾರ ಅವರು ಎಸ್. ಜಾನಕಿ ಅವರ ಸಂಗೀತ ಸಾಧನೆ ಹಾಗೂ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ನುಡಿನಮನಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವರಾಜ ವಿಶ್ವಕರ್ಮ, ಇಮಾಮಸಾಬ್ ಗರಡಿಮನಿ, ಶರಣಪ್ಪ ಲೈನದ, ಪವಾಡೆಪ್ಪ ಚೌಡ್ಕಿ, ಮೋಹನ್ ಲಾಲ್ ಜೈನ್, ಬುಡ್ನೇಸಾಬ ಕಲಾದಗಿ, ಮಾರುತಿ ಗುಮಗೇರಿ, ಪರಶಿವಮೂರ್ತಿ ಮಾಟಲದಿನ್ನಿ, ಬಸವರಾಜ್ ಗಾಣಿಗೇರ ಸೇರಿದಂತೆ ಕಸಾಪ ಪದಾಧಿಕಾರಿಗಳು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

1 hr ago
user_Bhimasenrao Kulkarni Kushtagi
Bhimasenrao Kulkarni Kushtagi
ಕುಷ್ಟಗಿ, ಕೊಪ್ಪಳ, ಕರ್ನಾಟಕ•
1 hr ago
79ea2fa3-efc1-4df2-bbbe-46d144934484

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗಾನಕೋಗಿಲೆ ಎಸ್. ಜಾನಕಿ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಹಾಗೂ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಇಂದು ಜರುಗಿತು. ಶ್ರದ್ಧಾಂಜಲಿ ಸಭೆಯ ಆರಂಭದಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ, ಒಂದು ನಿಮಿಷದ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರಗೌಡ ಮಾಲಿ ಪಾಟೀಲ ಗುಮಗೇರಾ ಅವರು, ಸುಮಾರು 17 ಭಾಷೆಗಳಲ್ಲಿ ತಮ್ಮ ಮಧುರ ಕಂಠದಿಂದ ಹಾಡಿರುವ ಎಸ್. ಜಾನಕಿ ಅವರು ಪದ್ಮಶ್ರೀ ಪ್ರಶಸ್ತಿ, ರಾಷ್ಟ್ರೀಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದರು. ಅಂತಹ ಗಾನಕೋಗಿಲೆ ನಮ್ಮನ್ನು ಬಿಟ್ಟು ಅಗಲಿದ್ದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕುಷ್ಟಗಿ ತಾಲೂಕಾ ಕಸಾಪ ಅಧ್ಯಕ್ಷರಾದ ಲೆಂಕಪ್ಪ ವಾಲಿಕಾರ ಅಧ್ಯಕ್ಷತೆ ವಹಿಸಿ

8e123e88-7dea-45a8-ac47-39285401a5ae

ಮಾತನಾಡಿ, ಎಸ್. ಜಾನಕಿ ಅವರು ತಮ್ಮ ಬದುಕನ್ನೇ ಸಂಗೀತಕ್ಕೆ ಸಮರ್ಪಿಸಿದ ಅಪರೂಪದ ಸಾಧಕಿ. ಅವರ ಗಾಯನ ಸದಾ ಸಂಗೀತಾಭಿಮಾನಿಗಳ ಹೃದಯದಲ್ಲಿ ಕೊನೆಯವರೆಗೂ ಜೀವಂತವಾಗಿರಲಿದೆ ಎಂದರು. ಇದೇ ವೇಳೆ ರಾಜ್ಯ ಜಾನಪದ ಪ್ರಶಸ್ತಿ ಪುರಸ್ಕೃತ ಶರಣಪ್ಪ ವಡಗೇರಿ, ಹಿರಿಯ ಸಾಹಿತಿ ಹಾಗೂ ಮಾಜಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹನಮಂತಪ್ಪ ಈಟಿಯವರ್, ಶಿಕ್ಷಕ ಹಾಗೂ ಸಾಹಿತಿ ಡಾ. ಕುಮಾರಸ್ವಾಮಿ ಹಿರೇಮಠ ಮತ್ತು ಮಾಜಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಟರಾಜ ಸೋನಾರ ಅವರು ಎಸ್. ಜಾನಕಿ ಅವರ ಸಂಗೀತ ಸಾಧನೆ ಹಾಗೂ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ನುಡಿನಮನಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವರಾಜ ವಿಶ್ವಕರ್ಮ, ಇಮಾಮಸಾಬ್ ಗರಡಿಮನಿ, ಶರಣಪ್ಪ ಲೈನದ, ಪವಾಡೆಪ್ಪ ಚೌಡ್ಕಿ, ಮೋಹನ್ ಲಾಲ್ ಜೈನ್, ಬುಡ್ನೇಸಾಬ ಕಲಾದಗಿ, ಮಾರುತಿ ಗುಮಗೇರಿ, ಪರಶಿವಮೂರ್ತಿ ಮಾಟಲದಿನ್ನಿ, ಬಸವರಾಜ್ ಗಾಣಿಗೇರ ಸೇರಿದಂತೆ ಕಸಾಪ ಪದಾಧಿಕಾರಿಗಳು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕುಷ್ಟಗಿಯ ಹಳೆ ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಖ್ಯಾತ ಗಾಯಕಿ ಎಸ್. ಜಾನಕಿ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಹಾಗೂ ಭಾವಪೂರ್ಣ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರಗೌಡ ಮಾಲಿ ಪಾಟೀಲ ಅವರು, ಸುಮಾರು 17 ಭಾಷೆಗಳಲ್ಲಿ ತಮ್ಮ ಮಧುರ ಕಂಠದಿಂದ ಹಾಡಿ ಪದ್ಮಶ್ರೀ ಪ್ರಶಸ್ತಿ, ರಾಷ್ಟ್ರೀಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದ ಗಾನ ಕೋಗಿಲೆ ಎಸ್. ಜಾನಕಿ ಅಮ್ಮನವರು ನಮ್ಮನ್ನು ಬಿಟ್ಟು ಅಗಲಿದ್ದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಕಂಬನಿ ಮಿಡಿದರು. ಶ್ರದ್ಧಾಂಜಲಿ ಸಭೆಯಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ, ಒಂದು ನಿಮಿಷದ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ರಾಜ್ಯ ಹಾಗೂ ದೇಶದ ಜನರ ಮನಗಳಲ್ಲಿ ನೆಲೆಸಿದ್ದ ಜಾನಕಮ್ಮನ ನೆನಪುಗಳು ಮಾತ್ರ ಈಗ ನಮಗೆ ಉಳಿದಿದ್ದು, ಅವರ ತತ್ವಗಳನ್ನು ಸಮಾಜದ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಗಣ್ಯರು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹನಮಂತಪ್ಪ ಈಟಿಯವರ್, ಮಾಜಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಟರಾಜ ಸೋನಾರ್, ಸಾಹಿತಿ ಕುಮಾರಸ್ವಾಮಿ ಹಿರೇಮಠ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರಣಪ್ಪ ವಣಗೇರಿ ಉಪಸ್ಥಿತರಿದ್ದು ಮಾತನಾಡಿದರು. ಇದೇ ಸಂದರ್ಭದಲ್ಲಿ ಶರಣಪ್ಪ ಲೈನದ್, ಇಮಾಮಸಾಬ ಗರಡಿಮನಿ, ಬುಡ್ನೆಸಾಬ ಕಲಾದಗಿ, ಪರಶಿವಮೂರ್ತಿ ದೋಟಿಹಾಳ, ಪವಾಡೆಪ್ಪ ಚೌಡ್ಕಿ ಹಾಗೂ ದೇವರಾಜ ವಿಶ್ವಕರ್ಮ ಸೇರಿದಂತೆ ಹಲವರು ಪಾಲ್ಗೊಂಡು ಶ್ರದ್ಧಾಂಜಲಿ ಅರ್ಪಿಸಿದರು.
    3
    ಕುಷ್ಟಗಿಯ ಹಳೆ ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಖ್ಯಾತ ಗಾಯಕಿ ಎಸ್. ಜಾನಕಿ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಹಾಗೂ ಭಾವಪೂರ್ಣ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರಗೌಡ ಮಾಲಿ ಪಾಟೀಲ ಅವರು, ಸುಮಾರು 17 ಭಾಷೆಗಳಲ್ಲಿ ತಮ್ಮ ಮಧುರ ಕಂಠದಿಂದ ಹಾಡಿ ಪದ್ಮಶ್ರೀ ಪ್ರಶಸ್ತಿ, ರಾಷ್ಟ್ರೀಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದ ಗಾನ ಕೋಗಿಲೆ ಎಸ್. ಜಾನಕಿ ಅಮ್ಮನವರು ನಮ್ಮನ್ನು ಬಿಟ್ಟು ಅಗಲಿದ್ದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಕಂಬನಿ ಮಿಡಿದರು.

ಶ್ರದ್ಧಾಂಜಲಿ ಸಭೆಯಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ, ಒಂದು ನಿಮಿಷದ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ರಾಜ್ಯ ಹಾಗೂ ದೇಶದ ಜನರ ಮನಗಳಲ್ಲಿ ನೆಲೆಸಿದ್ದ ಜಾನಕಮ್ಮನ ನೆನಪುಗಳು ಮಾತ್ರ ಈಗ ನಮಗೆ ಉಳಿದಿದ್ದು, ಅವರ ತತ್ವಗಳನ್ನು ಸಮಾಜದ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಗಣ್ಯರು ಕರೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹನಮಂತಪ್ಪ ಈಟಿಯವರ್, ಮಾಜಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಟರಾಜ ಸೋನಾರ್, ಸಾಹಿತಿ ಕುಮಾರಸ್ವಾಮಿ ಹಿರೇಮಠ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರಣಪ್ಪ ವಣಗೇರಿ ಉಪಸ್ಥಿತರಿದ್ದು ಮಾತನಾಡಿದರು. ಇದೇ ಸಂದರ್ಭದಲ್ಲಿ ಶರಣಪ್ಪ ಲೈನದ್, ಇಮಾಮಸಾಬ ಗರಡಿಮನಿ, ಬುಡ್ನೆಸಾಬ ಕಲಾದಗಿ, ಪರಶಿವಮೂರ್ತಿ ದೋಟಿಹಾಳ, ಪವಾಡೆಪ್ಪ ಚೌಡ್ಕಿ ಹಾಗೂ ದೇವರಾಜ ವಿಶ್ವಕರ್ಮ ಸೇರಿದಂತೆ ಹಲವರು ಪಾಲ್ಗೊಂಡು ಶ್ರದ್ಧಾಂಜಲಿ ಅರ್ಪಿಸಿದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    3 hrs ago
  • ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಹೆಸರು ಅಜರಾಮರವಾಗಿದೆ. ಆದರೆ ಕುಕನೂರು ಪಟ್ಟಣದಲ್ಲಿರುವ ಅವರದೇ ಹೆಸರಿನ ಗಾಂಧಿನಗರಕ್ಕೆ ಇಂದಿಗೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಅಲ್ಲಿನ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ 12ನೇ ವಾರ್ಡ್‌ನ ಗಾಂಧಿನಗರದಲ್ಲಿ ಚರಂಡಿಗಳು ತುಂಬಿ ಹರಿಯುತ್ತಿದ್ದು, ಕಸಕಡ್ಡಿಗಳೆಲ್ಲ ಮನೆಗಳ ಬಾಗಿಲಿಗೆ ಬಂದು ನಿಲ್ಲುತ್ತಿವೆ. ಇದರಿಂದಾಗಿ ನಿವಾಸಿಗಳು ಮೂಗು ಮುಚ್ಚಿಕೊಂಡು ವಾಸಿಸುವಂತಾಗಿದ್ದು, ವಿವಿಧ ರೋಗರುಜಿನಗಳಿಗೆ ತುತ್ತಾಗುವ ಭೀತಿ ಎದುರಾಗಿದೆ. ಚರಂಡಿ ಮಾರ್ಗಗಳಲ್ಲಿ ಅನಧಿಕೃತವಾಗಿ ಅಕ್ರಮ ಕಟ್ಟಡಗಳು ನಿರ್ಮಾಣಗೊಂಡಿರುವುದೇ ಈ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಈ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಚರಂಡಿ ನೀರು ಸುಗಮವಾಗಿ ಹರಿದು ಹೋಗಲು ದಾರಿ ಕಲ್ಪಿಸಿಕೊಡುವಂತೆ 12ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಅಧಿಕಾರಿಗಳು ಗಾಂಧಿನಗರಕ್ಕೆ ಸ್ವಾತಂತ್ರ್ಯ ಸಿಗದ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ವತಿಯಿಂದ ಸ್ವಚ್ಛತೆ ಮತ್ತು ಸಾರ್ವಜನಿಕರ ಆರೋಗ್ಯಕ್ಕಾಗಿ ಸಾಕಷ್ಟು ಹಣ ಬಿಡುಗಡೆಯಾಗುತ್ತಿದ್ದರೂ, ತಾಲೂಕು ಕೇಂದ್ರವಾದ ಪಟ್ಟಣದಲ್ಲಿಯೇ ಇಂತಹ ದುಸ್ಥಿತಿ ಇದೆ ಎಂದರೆ ಇನ್ನು ಹಳ್ಳಿಗಳ ಪಾಡೇನು ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಸ್ವಚ್ಛತೆಯ ಕೊರತೆಯ ಜೊತೆಗೆ ಗಾಂಧಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದ್ದು, ಸರಿಯಾದ ಸಮಯಕ್ಕೆ ನೀರು ಬಾರದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೇವಲ ಮತ ಬ್ಯಾಂಕ್‌ಗಾಗಿ ಚುನಾವಣೆ ಸಮಯದಲ್ಲಿ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು, ತಮ್ಮ ಮತಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸ್ವಲ್ಪಮಟ್ಟಿಗಾದರೂ ತಿಳಿದುಕೊಂಡಿರಬೇಕು ಎಂದು ವಾರ್ಡಿನ ನಿವಾಸಿಯೊಬ್ಬರು ಆಕ್ರೋಶ ಹೊರಹಾಕಿದ್ದಾರೆ. ಈ ವರದಿಯನ್ನಾದರೂ ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಗಾಂಧಿನಗರಕ್ಕೆ ಸ್ವಚ್ಛತೆಯ ಸ್ವಾತಂತ್ರ್ಯವನ್ನು ಕಲ್ಪಿಸಿಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. (ವರದಿ: ಚನ್ನಯ್ಯ ಹಿರೇಮಠ, ಕುಕನೂರು)
    4
    ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಹೆಸರು ಅಜರಾಮರವಾಗಿದೆ. ಆದರೆ ಕುಕನೂರು ಪಟ್ಟಣದಲ್ಲಿರುವ ಅವರದೇ ಹೆಸರಿನ ಗಾಂಧಿನಗರಕ್ಕೆ ಇಂದಿಗೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಅಲ್ಲಿನ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ 12ನೇ ವಾರ್ಡ್‌ನ ಗಾಂಧಿನಗರದಲ್ಲಿ ಚರಂಡಿಗಳು ತುಂಬಿ ಹರಿಯುತ್ತಿದ್ದು, ಕಸಕಡ್ಡಿಗಳೆಲ್ಲ ಮನೆಗಳ ಬಾಗಿಲಿಗೆ ಬಂದು ನಿಲ್ಲುತ್ತಿವೆ. ಇದರಿಂದಾಗಿ ನಿವಾಸಿಗಳು ಮೂಗು ಮುಚ್ಚಿಕೊಂಡು ವಾಸಿಸುವಂತಾಗಿದ್ದು, ವಿವಿಧ ರೋಗರುಜಿನಗಳಿಗೆ ತುತ್ತಾಗುವ ಭೀತಿ ಎದುರಾಗಿದೆ.

ಚರಂಡಿ ಮಾರ್ಗಗಳಲ್ಲಿ ಅನಧಿಕೃತವಾಗಿ ಅಕ್ರಮ ಕಟ್ಟಡಗಳು ನಿರ್ಮಾಣಗೊಂಡಿರುವುದೇ ಈ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಈ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಚರಂಡಿ ನೀರು ಸುಗಮವಾಗಿ ಹರಿದು ಹೋಗಲು ದಾರಿ ಕಲ್ಪಿಸಿಕೊಡುವಂತೆ 12ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಅಧಿಕಾರಿಗಳು ಗಾಂಧಿನಗರಕ್ಕೆ ಸ್ವಾತಂತ್ರ್ಯ ಸಿಗದ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ವತಿಯಿಂದ ಸ್ವಚ್ಛತೆ ಮತ್ತು ಸಾರ್ವಜನಿಕರ ಆರೋಗ್ಯಕ್ಕಾಗಿ ಸಾಕಷ್ಟು ಹಣ ಬಿಡುಗಡೆಯಾಗುತ್ತಿದ್ದರೂ, ತಾಲೂಕು ಕೇಂದ್ರವಾದ ಪಟ್ಟಣದಲ್ಲಿಯೇ ಇಂತಹ ದುಸ್ಥಿತಿ ಇದೆ ಎಂದರೆ ಇನ್ನು ಹಳ್ಳಿಗಳ ಪಾಡೇನು ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಸ್ವಚ್ಛತೆಯ ಕೊರತೆಯ ಜೊತೆಗೆ ಗಾಂಧಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದ್ದು, ಸರಿಯಾದ ಸಮಯಕ್ಕೆ ನೀರು ಬಾರದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೇವಲ ಮತ ಬ್ಯಾಂಕ್‌ಗಾಗಿ ಚುನಾವಣೆ ಸಮಯದಲ್ಲಿ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು, ತಮ್ಮ ಮತಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸ್ವಲ್ಪಮಟ್ಟಿಗಾದರೂ ತಿಳಿದುಕೊಂಡಿರಬೇಕು ಎಂದು ವಾರ್ಡಿನ ನಿವಾಸಿಯೊಬ್ಬರು ಆಕ್ರೋಶ ಹೊರಹಾಕಿದ್ದಾರೆ. ಈ ವರದಿಯನ್ನಾದರೂ ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಗಾಂಧಿನಗರಕ್ಕೆ ಸ್ವಚ್ಛತೆಯ ಸ್ವಾತಂತ್ರ್ಯವನ್ನು ಕಲ್ಪಿಸಿಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. (ವರದಿ: ಚನ್ನಯ್ಯ ಹಿರೇಮಠ, ಕುಕನೂರು)
    user_ಚನ್ನಯ್ಯ ಹಿರೇಮಠ ಕುಕನೂರು
    ಚನ್ನಯ್ಯ ಹಿರೇಮಠ ಕುಕನೂರು
    ಕೊಪ್ಪಳ, ಕೊಪ್ಪಳ, ಕರ್ನಾಟಕ•
    3 hrs ago
  • ಬಾಗಲಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ರಾಜಕೀಯ ನಿಲುವುಗಳನ್ನು ಟೀಕಿಸಿದರು. ರಾಹುಲ್ ಗಾಂಧಿಯವರು ಹಲವು ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯದ ಮುಂದೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ರಾಜಕೀಯ ನಡೆಸಬೇಕು ಎಂದು ಆಗ್ರಹಿಸಿದರು. ಚಂದ್ರಯಾನ ಯೋಜನೆ ಎರಡನೇ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿತು ಎಂದು ನೆನಪಿಸಿದ ಸಚಿವರು, ಆದರೆ ಕಾಂಗ್ರೆಸ್ ಮಾತ್ರ ಚುನಾವಣೆಗಳಲ್ಲಿ ಪದೇಪದೇ ಸೋಲುತ್ತಿದ್ದು, ಜನರು ಅವರ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ಗೆ ಜನರ ಬೆಂಬಲ ಕಡಿಮೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಸರಿಯಾದ ಮಾರ್ಗದಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗದೆ ಆ ಪಕ್ಷವು ಶಾಶ್ವತವಾಗಿ ವಿರೋಧ ಪಕ್ಷದಲ್ಲೇ ಉಳಿಯುವ ಪರಿಸ್ಥಿತಿ ಎದುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
    1
    ಬಾಗಲಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ರಾಜಕೀಯ ನಿಲುವುಗಳನ್ನು ಟೀಕಿಸಿದರು. ರಾಹುಲ್ ಗಾಂಧಿಯವರು ಹಲವು ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯದ ಮುಂದೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ರಾಜಕೀಯ ನಡೆಸಬೇಕು ಎಂದು ಆಗ್ರಹಿಸಿದರು.

ಚಂದ್ರಯಾನ ಯೋಜನೆ ಎರಡನೇ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿತು ಎಂದು ನೆನಪಿಸಿದ ಸಚಿವರು, ಆದರೆ ಕಾಂಗ್ರೆಸ್ ಮಾತ್ರ ಚುನಾವಣೆಗಳಲ್ಲಿ ಪದೇಪದೇ ಸೋಲುತ್ತಿದ್ದು, ಜನರು ಅವರ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ಗೆ ಜನರ ಬೆಂಬಲ ಕಡಿಮೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಸರಿಯಾದ ಮಾರ್ಗದಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗದೆ ಆ ಪಕ್ಷವು ಶಾಶ್ವತವಾಗಿ ವಿರೋಧ ಪಕ್ಷದಲ್ಲೇ ಉಳಿಯುವ ಪರಿಸ್ಥಿತಿ ಎದುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಕೆಲವು ಬೇಕರಿಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆಹಾರ ಸುರಕ್ಷತೆಗೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಆರೋಪಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾಗಿದ್ದು, ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳು ಸಾರ್ವಜನಿಕರಿಂದ ಲಭ್ಯವಾಗಿರುವ ಮಾಹಿತಿ ಮತ್ತು ಸದ್ಯದ ವರದಿಗಳನ್ನು ಆಧರಿಸಿವೆ. ಹೀಗಾಗಿ, ಸಂಬಂಧಪಟ್ಟ ಇಲಾಖೆಯ ಅಂತಿಮ ತನಿಖೆ ಅಥವಾ ಅಧಿಕೃತ ವರದಿ ಹೊರಬರುವವರೆಗೆ ಈ ಆರೋಪಗಳನ್ನು ದೃಢಪಟ್ಟ ಸತ್ಯ ಎಂದು ಪರಿಗಣಿಸಬಾರದು ಎಂದು ಸ್ಪಷ್ಟಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಂಗಡಿ ಮಾಲೀಕರು ಮತ್ತು ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಲಭ್ಯವಾದರೆ ಅದನ್ನು ಕೂಡ ಪ್ರಕಟಿಸಲಾಗುವುದು.
    1
    ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಕೆಲವು ಬೇಕರಿಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆಹಾರ ಸುರಕ್ಷತೆಗೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಆರೋಪಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾಗಿದ್ದು, ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳು ಸಾರ್ವಜನಿಕರಿಂದ ಲಭ್ಯವಾಗಿರುವ ಮಾಹಿತಿ ಮತ್ತು ಸದ್ಯದ ವರದಿಗಳನ್ನು ಆಧರಿಸಿವೆ. ಹೀಗಾಗಿ, ಸಂಬಂಧಪಟ್ಟ ಇಲಾಖೆಯ ಅಂತಿಮ ತನಿಖೆ ಅಥವಾ ಅಧಿಕೃತ ವರದಿ ಹೊರಬರುವವರೆಗೆ ಈ ಆರೋಪಗಳನ್ನು ದೃಢಪಟ್ಟ ಸತ್ಯ ಎಂದು ಪರಿಗಣಿಸಬಾರದು ಎಂದು ಸ್ಪಷ್ಟಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಂಗಡಿ ಮಾಲೀಕರು ಮತ್ತು ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಲಭ್ಯವಾದರೆ ಅದನ್ನು ಕೂಡ ಪ್ರಕಟಿಸಲಾಗುವುದು.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಬಾಗಲಕೋಟೆ ಜಿಲ್ಲೆಯ ಬಿಳಗಿ ಪರಿಸರದಲ್ಲಿ ಅರಣ್ಯ ಇಲಾಖೆಯ ಕ್ರಮದ ವಿರುದ್ಧ ರೈತರು ಮತ್ತು ಕುರಿಗಾಹಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮ ಕುರಿ ನಿಮ್ಮ ಅರಣ್ಯಕ್ಕೆ ಬರಬಾರದೆಂದರೆ, ನಿಮ್ಮ ಕಾಡು ಪ್ರಾಣಿಗಳು ನಮ್ಮ ಹೊಲ-ಗದ್ದೆಗೂ ಬರಬಾರದು" ಎಂದು ರೈತ ಸಿದ್ದಪ್ಪ ಬಳಗಾನೂರ ಅವರು ಅರಣ್ಯ ಅಧಿಕಾರಿಗಳಿಗೆ ನೇರ ಸವಾಲು ಹಾಕಿದ್ದಾರೆ. ಅರಣ್ಯ ಇಲಾಖೆಯು ರೈತರ ಆಡು ಮತ್ತು ಕುರಿಗಳನ್ನು ವಶಪಡಿಸಿಕೊಳ್ಳುತ್ತಿರುವುದು ಹಾಗೂ ದಂಡ ವಿಧಿಸುತ್ತಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಇದು ಅಧಿಕಾರಿಗಳು ಮತ್ತು ರೈತರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಕಾಡುಹಂದಿ ಹಾಗೂ ಜಿಂಕೆಗಳ ಹಾವಳಿಯಿಂದ ಹೊಲಗಳಲ್ಲಿ ಬೆಳೆ ನಾಶವಾಗುತ್ತಿದೆ ಎಂದು ರೈತರು ಆರೋಪಿಸಿದ್ದು, ಬೆಳೆ ಹಾನಿಗೆ ಶಾಶ್ವತ ಪರಿಹಾರ ಹಾಗೂ ಸೂಕ್ತ ಪರಿಹಾರ ಧನ ನೀಡುವಂತೆ ಒತ್ತಾಯಿಸಿದ್ದಾರೆ. ಇಲಾಖೆಯು ತನ್ನ ಏಕಪಕ್ಷೀಯ ಕ್ರಮಗಳನ್ನು ನಿಲ್ಲಿಸಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಲಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸ್ಥಳೀಯ ರೈತರ ಪರ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
    1
    ಬಾಗಲಕೋಟೆ ಜಿಲ್ಲೆಯ ಬಿಳಗಿ ಪರಿಸರದಲ್ಲಿ ಅರಣ್ಯ ಇಲಾಖೆಯ ಕ್ರಮದ ವಿರುದ್ಧ ರೈತರು ಮತ್ತು ಕುರಿಗಾಹಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮ ಕುರಿ ನಿಮ್ಮ ಅರಣ್ಯಕ್ಕೆ ಬರಬಾರದೆಂದರೆ, ನಿಮ್ಮ ಕಾಡು ಪ್ರಾಣಿಗಳು ನಮ್ಮ ಹೊಲ-ಗದ್ದೆಗೂ ಬರಬಾರದು" ಎಂದು ರೈತ ಸಿದ್ದಪ್ಪ ಬಳಗಾನೂರ ಅವರು ಅರಣ್ಯ ಅಧಿಕಾರಿಗಳಿಗೆ ನೇರ ಸವಾಲು ಹಾಕಿದ್ದಾರೆ. ಅರಣ್ಯ ಇಲಾಖೆಯು ರೈತರ ಆಡು ಮತ್ತು ಕುರಿಗಳನ್ನು ವಶಪಡಿಸಿಕೊಳ್ಳುತ್ತಿರುವುದು ಹಾಗೂ ದಂಡ ವಿಧಿಸುತ್ತಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಇದು ಅಧಿಕಾರಿಗಳು ಮತ್ತು ರೈತರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.

ಕಾಡುಹಂದಿ ಹಾಗೂ ಜಿಂಕೆಗಳ ಹಾವಳಿಯಿಂದ ಹೊಲಗಳಲ್ಲಿ ಬೆಳೆ ನಾಶವಾಗುತ್ತಿದೆ ಎಂದು ರೈತರು ಆರೋಪಿಸಿದ್ದು, ಬೆಳೆ ಹಾನಿಗೆ ಶಾಶ್ವತ ಪರಿಹಾರ ಹಾಗೂ ಸೂಕ್ತ ಪರಿಹಾರ ಧನ ನೀಡುವಂತೆ ಒತ್ತಾಯಿಸಿದ್ದಾರೆ. ಇಲಾಖೆಯು ತನ್ನ ಏಕಪಕ್ಷೀಯ ಕ್ರಮಗಳನ್ನು ನಿಲ್ಲಿಸಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಲಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸ್ಥಳೀಯ ರೈತರ ಪರ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    13 hrs ago
  • ತೀರ್ಥಹಳ್ಳಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಪರಿಚಿತ ವ್ಯಕ್ತಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕದಲ್ಲಿದ್ದ ವಿದ್ಯಾರ್ಥಿನಿ ಈ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ವರದಿ ತಿಳಿಸಿದೆ. ಇಂತಹ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಜನರು ಅತ್ಯಂತ ಜಾಗರೂಕರಾಗಿರಬೇಕಾದ ಮತ್ತು ಎಚ್ಚರಿಕೆ ವಹಿಸಬೇಕಾದ ಅಗತ್ಯವನ್ನು ಎತ್ತಿ ತೋರಿಸುತ್ತವೆ.
    1
    ತೀರ್ಥಹಳ್ಳಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಪರಿಚಿತ ವ್ಯಕ್ತಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕದಲ್ಲಿದ್ದ ವಿದ್ಯಾರ್ಥಿನಿ ಈ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ವರದಿ ತಿಳಿಸಿದೆ. ಇಂತಹ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಜನರು ಅತ್ಯಂತ ಜಾಗರೂಕರಾಗಿರಬೇಕಾದ ಮತ್ತು ಎಚ್ಚರಿಕೆ ವಹಿಸಬೇಕಾದ ಅಗತ್ಯವನ್ನು ಎತ್ತಿ ತೋರಿಸುತ್ತವೆ.
    user_ತೀರ್ಥಹಳ್ಳಿ ಲೈವ್ Vijay kumar
    ತೀರ್ಥಹಳ್ಳಿ ಲೈವ್ Vijay kumar
    Teacher ಕೊಪ್ಪಳ, ಕೊಪ್ಪಳ, ಕರ್ನಾಟಕ•
    8 hrs ago
  • ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ 21 ವರ್ಷದ ಸಚಿನ್ ಎಂಬ ಯುವಕ, ಮಾಂಸಾಹಾರ ಸೇವಿಸುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ. ಏಪ್ರಿಲ್ 17, 2026ರಂದು ರಾತ್ರಿ ಈ ಪಾರ್ಟಿ ನಡೆದಿದ್ದು, ಊಟದ ನಂತರ ಸಚಿನ್ ನಿರ್ಮಾಣ ಹಂತದ ಮನೆಯೊಂದರ ಬಳಿ ತೆರಳಿದ್ದನು. ಮರುದಿನ ಮುಂಜಾನೆ ಆತ ಅಲ್ಲಿ ಶವವಾಗಿ ಪತ್ತೆಯಾಗಿದ್ದನು. ಮರಣೋತ್ತರ ಪರೀಕ್ಷೆಯ ನಂತರ, ಆತನ ಗಂಟಲಿನಲ್ಲಿ ಆಹಾರದ ಮೂಳೆ ಸಿಲುಕಿಕೊಂಡಿದ್ದೇ ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ. ಈ ಘಟನೆ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಹಾರ ಸೇವಿಸುವಾಗ ನಿಧಾನವಾಗಿ, ಚೆನ್ನಾಗಿ ಅಗಿದು ತಿನ್ನಬೇಕು ಮತ್ತು ಮೂಳೆ ಇರುವ ಆಹಾರವನ್ನು ತಿನ್ನುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಎಚ್ಚರಿಸಲಾಗಿದೆ.
    1
    ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ 21 ವರ್ಷದ ಸಚಿನ್ ಎಂಬ ಯುವಕ, ಮಾಂಸಾಹಾರ ಸೇವಿಸುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ. ಏಪ್ರಿಲ್ 17, 2026ರಂದು ರಾತ್ರಿ ಈ ಪಾರ್ಟಿ ನಡೆದಿದ್ದು, ಊಟದ ನಂತರ ಸಚಿನ್ ನಿರ್ಮಾಣ ಹಂತದ ಮನೆಯೊಂದರ ಬಳಿ ತೆರಳಿದ್ದನು. ಮರುದಿನ ಮುಂಜಾನೆ ಆತ ಅಲ್ಲಿ ಶವವಾಗಿ ಪತ್ತೆಯಾಗಿದ್ದನು.

ಮರಣೋತ್ತರ ಪರೀಕ್ಷೆಯ ನಂತರ, ಆತನ ಗಂಟಲಿನಲ್ಲಿ ಆಹಾರದ ಮೂಳೆ ಸಿಲುಕಿಕೊಂಡಿದ್ದೇ ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ. ಈ ಘಟನೆ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಹಾರ ಸೇವಿಸುವಾಗ ನಿಧಾನವಾಗಿ, ಚೆನ್ನಾಗಿ ಅಗಿದು ತಿನ್ನಬೇಕು ಮತ್ತು ಮೂಳೆ ಇರುವ ಆಹಾರವನ್ನು ತಿನ್ನುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಎಚ್ಚರಿಸಲಾಗಿದೆ.
    user_ತೀರ್ಥಹಳ್ಳಿ ಲೈವ್ Vijay kumar
    ತೀರ್ಥಹಳ್ಳಿ ಲೈವ್ Vijay kumar
    Teacher ಕೊಪ್ಪಳ, ಕೊಪ್ಪಳ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.