Shuru
Apke Nagar Ki App…
ಚಿತ್ರದುರ್ಗದ ಹಿರಿಯ ರಾಜಕಾರಣಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಚ್. ಹನುಮಂತಪ್ಪ ಅವರು ನಿಧನರಾಗಿದ್ದಾರೆ. ಜನನಾಯಕ ಹನುಮಂತಪ್ಪ ಅವರ ಅಗಲಿಕೆ ರಾಜಕೀಯ ವಲಯಕ್ಕೆ ತೀವ್ರ ದುಃಖ ತಂದಿದ್ದು, ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಅಂತಿಮ ನಮನಗಳನ್ನು ಸಲ್ಲಿಸಲಾಗುತ್ತಿದೆ.
Ctownnews16
ಚಿತ್ರದುರ್ಗದ ಹಿರಿಯ ರಾಜಕಾರಣಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಚ್. ಹನುಮಂತಪ್ಪ ಅವರು ನಿಧನರಾಗಿದ್ದಾರೆ. ಜನನಾಯಕ ಹನುಮಂತಪ್ಪ ಅವರ ಅಗಲಿಕೆ ರಾಜಕೀಯ ವಲಯಕ್ಕೆ ತೀವ್ರ ದುಃಖ ತಂದಿದ್ದು, ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಅಂತಿಮ ನಮನಗಳನ್ನು ಸಲ್ಲಿಸಲಾಗುತ್ತಿದೆ.
More news from ಕರ್ನಾಟಕ and nearby areas
- ಚಿತ್ರದುರ್ಗದ ಹಿರಿಯ ರಾಜಕಾರಣಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಹೆಚ್. ಹನುಮಂತಪ್ಪ ಅವರು ನಿನ್ನೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ರಾಜ್ಯಸಭಾ ಸಂಸದರಾಗಿದ್ದ ಅವರು, ಶ್ರೀ ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ (ರಿ) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರ ಅಂತ್ಯಕ್ರಿಯೆಯನ್ನು ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಸದ್ಯ ಹೊಳಲ್ಕೆರೆ ರಸ್ತೆಯ ನೆಹರು ನಗರದಲ್ಲಿರುವ ಮೃತರ ನಿವಾಸದ ಬಳಿ ಕುಟುಂಬಸ್ಥರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಜಮಾಯಿಸಿದ್ದು, ಅಂತಿಮ ದರ್ಶನ ಪಡೆಯುತ್ತಿದ್ದಾರೆ.1
- ಚಿತ್ರದುರ್ಗದ ಹಿರಿಯ ರಾಜಕಾರಣಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಚ್. ಹನುಮಂತಪ್ಪ ಅವರು ನಿಧನರಾಗಿದ್ದಾರೆ. ಜನನಾಯಕ ಹನುಮಂತಪ್ಪ ಅವರ ಅಗಲಿಕೆ ರಾಜಕೀಯ ವಲಯಕ್ಕೆ ತೀವ್ರ ದುಃಖ ತಂದಿದ್ದು, ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಅಂತಿಮ ನಮನಗಳನ್ನು ಸಲ್ಲಿಸಲಾಗುತ್ತಿದೆ.1
- ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಭದ್ರಾ ಮೇಲ್ದಂಡೆ ಯೋಜನೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂವಾದ ಕಾರ್ಯಕ್ರಮಕ್ಕೂ ಮುನ್ನ, ಕಲಾ ಸರಸ್ವತಿ ಗಾನಕೋಗಿಲೆ ಎಸ್ ಜಾನಕಿ ಅವರ ನಿಧನಕ್ಕೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ, ಅಧಿಕಾರಿಗಳು, ರೈತ, ಕನ್ನಡ ಹಾಗೂ ಕಾರ್ಮಿಕ ಸಂಘಟನೆಗಳು ಮೌನಾಚರಣೆ ನಡೆಸುವ ಮೂಲಕ ತಮ್ಮ ಗೌರವವನ್ನು ಸೂಚಿಸಿದರು.1
- ಕೂಡ್ಲಿಗಿ ತಾಲೂಕಿನಲ್ಲಿ ಸೋಲಾರ್ ವಿಂಡೋ ಪವರ್ ಕಂಪನಿಗಳ ಹಾವಳಿ ಮಿತಿ ಮೀರಿದ್ದು, ಬಹುತೇಕ ಕಂಪನಿಗಳಿಂದ ಸರ್ಕಾರಕ್ಕೆ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ಹಣ ವಂಚನೆಯಾಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಜಿಲ್ಲಾಡಳಿತ, ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಇಲಾಖೆಗಳಿಂದ ಸೂಕ್ತ ತನಿಖೆಯಾಗಬೇಕೆಂದು ಪ್ರವಾಸಿಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹೋರಾಟಗಾರರು ಆಗ್ರಹಿಸಿದ್ದಾರೆ. ಈ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ನೂರಾರು ರೈತರಿಗೆ ಅನ್ಯಾಯ ಎಸಗಿವೆ. ಈ ಹಗರಣದಲ್ಲಿ ಅನೇಕ ಸ್ಥಳೀಯ ಆಡಳಿತದ ಅಧಿಕಾರಿಗಳು, ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಿನ್ನಬಾರದ ಹೇಸಿಗೆ ತಿಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕಾಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಆದ್ದರಿಂದ ಇಡಿ, ಲೋಕಾಯುಕ್ತ, ಸಿಬಿಐ, ಸಿಒಡಿ, ಎಸಿಬಿ ಮತ್ತು ಆದಾಯ ತೆರಿಗೆ ಇಲಾಖೆಗಳ ಉನ್ನತಾಧಿಕಾರಿಗಳು ಸ್ವಯಂ ದೂರು ದಾಖಲಿಸಿಕೊಂಡು, ಮೊದಲು ತಹಶೀಲ್ದಾರರು ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳ ಆದಾಯದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ. ಒಂದು ವೇಳೆ ತನಿಖೆ ನಡೆಸದಿದ್ದರೆ ಅಗತ್ಯ ಸಾಕ್ಷ್ಯಾಧಾರಗಳ ಸಮೇತ ಕಾನೂನಾತ್ಮಕ ಹೋರಾಟ ನಡೆಸುವುದರ ಜೊತೆಗೆ ಎಲ್ಲಾ ಮಾಧ್ಯಮಗಳ ಹಾಗೂ ಪತ್ರಿಕೆಗಳ ಕೇಂದ್ರ ಕಚೇರಿಗಳಿಗೆ ದೂರು ನೀಡಲಾಗುವುದು ಎಂದು ಎಚ್ಚರಿಸಲಾಗಿದೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ದಲಿತ ಮುಖಂಡ ಸಂತೋಷಕುಮಾರ, ವಕೀಲ ಹಾಗೂ ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ಹೋರಾಟಗಾರರು, ರೈತರು ಉಪಸ್ಥಿತರಿದ್ದರು.1
- ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಮುಖಂಡರುಗಳ ಮಹಾಸಭೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಭದ್ರಾವತಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೆಆರ್‌ಐಡಿಎಲ್ ಅಧ್ಯಕ್ಷರಾದ ಬಿ.ಕೆ. ಸಂಗಮೇಶ್ ಮತ್ತು ಪಂಚ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಿ.ಎಸ್. ಗಣೇಶ್ ಅವರ ಜಂಟಿ ಅಧ್ಯಕ್ಷತೆಯಲ್ಲಿ ಈ ಮಹತ್ವದ ಸಭೆ ಜರುಗಿತು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಎಸ್. ಕುಮಾರ್, ನಗರಸಭೆಯ ಎಲ್ಲಾ ವಿಭಾಗದ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ತಾಲೂಕು ಮತ್ತು ಗ್ರಾಮೀಣ ಪ್ರದೇಶದ ಒಕ್ಕಲಿಗ ಸಮಾಜದ ಪ್ರಮುಖ ಮುಖಂಡರುಗಳು ಭಾಗವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಮುಖರು ಕಾಂಗ್ರೆಸ್ ಪಕ್ಷದ ಕಾರ್ಯಚಟುವಟಿಕೆಗಳು ಹಾಗೂ ಶಾಸಕ ಬಿ.ಕೆ. ಸಂಗಮೇಶ್ ಅವರು ಭದ್ರಾವತಿ ತಾಲೂಕಿನಲ್ಲಿ ಕೈಗೊಂಡಿರುವ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಒಕ್ಕಲಿಗ ಸಮಾಜದ ಮುಖಂಡರುಗಳು ಒಕ್ಕಲಿಗ ಸಮುದಾಯದ ವತಿಯಿಂದ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ಭವ್ಯವಾಗಿ ಸನ್ಮಾನಿಸಿ ಗೌರವ ಸಲ್ಲಿಸಿದರು.4
- ಚಿತ್ರದುರ್ಗದ ರಾಂಪುರದಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಚಾಲಕ ಮೊಹಮ್ಮದ್ ಮತ್ತು ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಸ್ಥಳೀಯರು, ಗಾಯಾಳುಗಳನ್ನು ತಕ್ಷಣವೇ ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1