logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತುರುವೇಕೆರೆ: ತಾಲೂಕು ಸಂಜೆವಾಣಿ ಪತ್ರಿಕೆ ವರದಿಗಾರ ಕಾಂತರಾಜ್ ಅರಸ್, ಅವರ ಸಹೋದರ ಹಾಗೂ ತಂದೆ ಮೂವರೂ ಅನಾರೋಗ್ಯದಿಂದ ಬಳಲುತ್ತಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ತುರುವೇಕೆರೆ ಲಯನ್ಸ್ ಕ್ಲಬ್ ಹಾಗೂ ಕಲ್ಪತರು ಚಾರಿಟಬಲ್ ಟ್ರಸ್ಟ್ ವತಿಯಿಂದ ₹35,000 ಆರ್ಥಿಕ ಸಹಾಯ ಧನ ನೀಡಲಾಗಿದೆ. ಈ ನೆರವನ್ನು ವೈದ್ಯಕೀಯ ಸೇವೆಗಾಗಿ ನೀಡಲಾಗಿದ್ದು, ಸಂಸ್ಥೆಯ ಸದಸ್ಯರುಗಳ ಸಹಕಾರದೊಂದಿಗೆ ನೀಡುವ ಮೂಲಕ ಕುಟುಂಬಕ್ಕೆ ನಾವು ನಿಮ್ಮೊಂದಿಗಿದ್ದೇವೆ ಎಂಬ ಧೈರ್ಯ ತುಂಬಲಾಗಿದೆ. ಲಯನ್ಸ್ ಕ್ಲಬ್ ಅಧ್ಯಕ್ಷ ಹೆಚ್.ಎನ್. ಪರಮೇಶ್ವರಯ್ಯ ಅವರು ಮಾತನಾಡಿ, ಅಶಕ್ತರಿಗೆ ಹಾಗೂ ತುಂಬಾ ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಹಾಗೂ ಇತರ ಸೇವೆಗಳ ಮೂಲಕ ಸದಾ ಸಹಾಯ ಹಸ್ತ ಚಾಚುತ್ತಾ ತಾಲ್ಲೂಕಿನಲ್ಲಿ ಲಯನ್ಸ್ ಕ್ಲಬ್ ಉತ್ತಮ ಸೇವಾಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿಸಿದರು. ಲಯನ್ಸ್ ಕ್ಲಬ್ ಪ್ರತಿ ವರ್ಷ ಪರಿಸರ ಸಂರಕ್ಷಣೆ, ಸ್ವಚ್ಛತೆ, ಆರೋಗ್ಯ ಶಿಬಿರಗಳು ಹಾಗೂ ಧೀನದಲಿತರಿಗೆ ಆರ್ಥಿಕ ಸಹಕಾರ ಸೇರಿದಂತೆ ವಿವಿಧ ಉತ್ತಮ ಸೇವಾಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಕಲ್ಪತರು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಚೌದ್ರಿನಾಗೇಶ್, ನಿಕಟಪೂರ್ವ ಅಧ್ಯಕ್ಷ ಪಿ.ಹೆಚ್. ಧನಪಾಲ್, ಲಯನ್ಸ್‌ನ ವಿವಿಧ ಪದಾಧಿಕಾರಿಗಳಾದ ಟಿಎವಿ ಗುಪ್ತಾ, ಎಂ.ಆರ್. ಪರಮೇಶ್ವರ್ ಸ್ವಾಮಿ, ಹೆಚ್.ಎನ್. ಸುನಿಲ್ ಕುಮಾರ್, ಹೆಚ್.ಆರ್. ರಂಗನಾಥ್, ಮಲ್ಲಿಕಾರ್ಜುನ ದುಂಡ, ಸುನಿಲ್ ಬಾಬು, ಮಿಹಿರಕುಮಾರ್, ನಾಗರಾಜಯ್ಯ, ಸುರೇಶ್, ಚಿಕ್ಕರಾಜ್ ಅರಸ್ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

1 hr ago
user_Manohara
Manohara
Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
1 hr ago
2acdfe61-1cd1-444e-b87e-050d03a567e8

ತುರುವೇಕೆರೆ: ತಾಲೂಕು ಸಂಜೆವಾಣಿ ಪತ್ರಿಕೆ ವರದಿಗಾರ ಕಾಂತರಾಜ್ ಅರಸ್, ಅವರ ಸಹೋದರ ಹಾಗೂ ತಂದೆ ಮೂವರೂ ಅನಾರೋಗ್ಯದಿಂದ ಬಳಲುತ್ತಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ತುರುವೇಕೆರೆ ಲಯನ್ಸ್ ಕ್ಲಬ್ ಹಾಗೂ ಕಲ್ಪತರು ಚಾರಿಟಬಲ್ ಟ್ರಸ್ಟ್ ವತಿಯಿಂದ ₹35,000 ಆರ್ಥಿಕ ಸಹಾಯ ಧನ ನೀಡಲಾಗಿದೆ. ಈ ನೆರವನ್ನು ವೈದ್ಯಕೀಯ ಸೇವೆಗಾಗಿ ನೀಡಲಾಗಿದ್ದು, ಸಂಸ್ಥೆಯ ಸದಸ್ಯರುಗಳ ಸಹಕಾರದೊಂದಿಗೆ ನೀಡುವ ಮೂಲಕ ಕುಟುಂಬಕ್ಕೆ ನಾವು ನಿಮ್ಮೊಂದಿಗಿದ್ದೇವೆ ಎಂಬ ಧೈರ್ಯ ತುಂಬಲಾಗಿದೆ. ಲಯನ್ಸ್ ಕ್ಲಬ್ ಅಧ್ಯಕ್ಷ ಹೆಚ್.ಎನ್. ಪರಮೇಶ್ವರಯ್ಯ ಅವರು ಮಾತನಾಡಿ, ಅಶಕ್ತರಿಗೆ ಹಾಗೂ ತುಂಬಾ ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಹಾಗೂ ಇತರ ಸೇವೆಗಳ ಮೂಲಕ ಸದಾ ಸಹಾಯ ಹಸ್ತ ಚಾಚುತ್ತಾ ತಾಲ್ಲೂಕಿನಲ್ಲಿ ಲಯನ್ಸ್ ಕ್ಲಬ್ ಉತ್ತಮ ಸೇವಾಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿಸಿದರು. ಲಯನ್ಸ್ ಕ್ಲಬ್ ಪ್ರತಿ ವರ್ಷ ಪರಿಸರ ಸಂರಕ್ಷಣೆ, ಸ್ವಚ್ಛತೆ, ಆರೋಗ್ಯ ಶಿಬಿರಗಳು ಹಾಗೂ ಧೀನದಲಿತರಿಗೆ ಆರ್ಥಿಕ ಸಹಕಾರ ಸೇರಿದಂತೆ ವಿವಿಧ ಉತ್ತಮ ಸೇವಾಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಕಲ್ಪತರು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಚೌದ್ರಿನಾಗೇಶ್, ನಿಕಟಪೂರ್ವ ಅಧ್ಯಕ್ಷ ಪಿ.ಹೆಚ್. ಧನಪಾಲ್, ಲಯನ್ಸ್‌ನ ವಿವಿಧ ಪದಾಧಿಕಾರಿಗಳಾದ ಟಿಎವಿ ಗುಪ್ತಾ, ಎಂ.ಆರ್. ಪರಮೇಶ್ವರ್ ಸ್ವಾಮಿ, ಹೆಚ್.ಎನ್. ಸುನಿಲ್ ಕುಮಾರ್, ಹೆಚ್.ಆರ್. ರಂಗನಾಥ್, ಮಲ್ಲಿಕಾರ್ಜುನ ದುಂಡ, ಸುನಿಲ್ ಬಾಬು, ಮಿಹಿರಕುಮಾರ್, ನಾಗರಾಜಯ್ಯ, ಸುರೇಶ್, ಚಿಕ್ಕರಾಜ್ ಅರಸ್ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಚಿಕ್ಕನಾಯಕನಹಳ್ಳಿ ತಾಲೂಕಿನ ರೈತರು ದಶಕಗಳಿಂದ ಕಾಯುತ್ತಿರುವ ಹೇಮಾವತಿ ನೀರಾವರಿ ಯೋಜನೆ ಇನ್ನೂ ಸಂಪೂರ್ಣವಾಗಿ ಸಾಕಾರಗೊಳ್ಳದ ಕಾರಣ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿದ್ದಾರೆ. ಭೌತಿಕ ಹೋರಾಟಗಳ ಜೊತೆಗೆ, ಈಗ ತಮ್ಮ ಅಳಲನ್ನು ದೈವಿಕ ಶಕ್ತಿಯ ಮೊರೆ ಹೋಗುವ ಮೂಲಕ ತೋಡಿಕೊಳ್ಳುತ್ತಿದ್ದಾರೆ. ಯೋಜನೆ ಮಂಜೂರಾಗಿ ದಶಕಗಳೇ ಕಳೆದಿದ್ದರೂ, ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿರುವುದು ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ನೀರಿನ ಮೂಲಗಳಿಲ್ಲದೆ ಅಂತರ್ಜಲ ಮಟ್ಟ ಭೀಕರವಾಗಿ ಕುಸಿದಿದ್ದು, ಸಾವಿರಾರು ಅಡಿ ಬೋರ್‌ವೆಲ್ ಕೊರೆದರೂ ನೀರು ಸಿಗುತ್ತಿಲ್ಲ. ಇದರಿಂದ ಬೆಳೆಗಳನ್ನು ಉಳಿಸಿಕೊಳ್ಳಲು ರೈತರಿಗೆ ದೊಡ್ಡ ಸವಾಲಾಗಿದೆ; ಹೊಲಗಳಲ್ಲಿ ಬೆಳೆ ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೇವಲ ಮಳೆಯನ್ನೇ ನಂಬಿ ಕುಳಿತುಕೊಳ್ಳದೆ, ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಒತ್ತಾಯಿಸಿ ರೈತರು ಅನೇಕ ಹೋರಾಟಗಳನ್ನು ನಡೆಸಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದರೂ ಸಮಸ್ಯೆ ಬಗೆಹರಿಯುತ್ತಿಲ್ಲ. ಈ ಹತಾಶ ಪರಿಸ್ಥಿತಿಯಲ್ಲಿ, ನಂಬಿಕೆಯ ದಾರಿಯನ್ನು ಹಿಡಿದ ರೈತರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮೊರೆ ಹೋಗಿದ್ದಾರೆ. ರಾಯರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಹೇಮಾವತಿ ನೀರು ತಮ್ಮ ಭಾಗದ ಕೆರೆಗಳಿಗೆ ಬೇಗ ಹರಿಯುವಂತೆ ಹಾಗೂ ರೈತರ ಬದುಕು ಹಸನಾಗುವಂತೆ ಪ್ರಾರ್ಥಿಸಿದ್ದಾರೆ. ಸ್ಥಳೀಯ ರೈತ ಮುಖಂಡರು ನೀಡಿರುವ ಮಾಹಿತಿ ಪ್ರಕಾರ, ಅಧಿಕಾರಿಗಳು ಹೇಮಾವತಿ ಯೋಜನೆಯ ಕೆಲಸವನ್ನು ಬಹುಬೇಗ ಮುಗಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ರೈತರ ಸಮಸ್ಯೆಗಳನ್ನು ಚರ್ಚಿಸಲು ಜೂನ್ 5 ರಂದು ಶಾವಿಗೆ ಹಳ್ಳಿಯಲ್ಲಿ ಸಭೆಯನ್ನು ಕರೆಯಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರೈತರಿಗೆ ಕರೆ ನೀಡಲಾಗಿದೆ. ಸರ್ಕಾರ ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಎಚ್ಚೆತ್ತುಕೊಂಡು, ಚಿಕ್ಕನಾಯಕನಹಳ್ಳಿ ತಾಲೂಕಿನ ಜನರ ನೀರಿನ ದಾಹವನ್ನು ತಣಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
    1
    ಚಿಕ್ಕನಾಯಕನಹಳ್ಳಿ ತಾಲೂಕಿನ ರೈತರು ದಶಕಗಳಿಂದ ಕಾಯುತ್ತಿರುವ ಹೇಮಾವತಿ ನೀರಾವರಿ ಯೋಜನೆ ಇನ್ನೂ ಸಂಪೂರ್ಣವಾಗಿ ಸಾಕಾರಗೊಳ್ಳದ ಕಾರಣ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿದ್ದಾರೆ. ಭೌತಿಕ ಹೋರಾಟಗಳ ಜೊತೆಗೆ, ಈಗ ತಮ್ಮ ಅಳಲನ್ನು ದೈವಿಕ ಶಕ್ತಿಯ ಮೊರೆ ಹೋಗುವ ಮೂಲಕ ತೋಡಿಕೊಳ್ಳುತ್ತಿದ್ದಾರೆ.

ಯೋಜನೆ ಮಂಜೂರಾಗಿ ದಶಕಗಳೇ ಕಳೆದಿದ್ದರೂ, ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿರುವುದು ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ನೀರಿನ ಮೂಲಗಳಿಲ್ಲದೆ ಅಂತರ್ಜಲ ಮಟ್ಟ ಭೀಕರವಾಗಿ ಕುಸಿದಿದ್ದು, ಸಾವಿರಾರು ಅಡಿ ಬೋರ್‌ವೆಲ್ ಕೊರೆದರೂ ನೀರು ಸಿಗುತ್ತಿಲ್ಲ. ಇದರಿಂದ ಬೆಳೆಗಳನ್ನು ಉಳಿಸಿಕೊಳ್ಳಲು ರೈತರಿಗೆ ದೊಡ್ಡ ಸವಾಲಾಗಿದೆ; ಹೊಲಗಳಲ್ಲಿ ಬೆಳೆ ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೇವಲ ಮಳೆಯನ್ನೇ ನಂಬಿ ಕುಳಿತುಕೊಳ್ಳದೆ, ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಒತ್ತಾಯಿಸಿ ರೈತರು ಅನೇಕ ಹೋರಾಟಗಳನ್ನು ನಡೆಸಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದರೂ ಸಮಸ್ಯೆ ಬಗೆಹರಿಯುತ್ತಿಲ್ಲ.

ಈ ಹತಾಶ ಪರಿಸ್ಥಿತಿಯಲ್ಲಿ, ನಂಬಿಕೆಯ ದಾರಿಯನ್ನು ಹಿಡಿದ ರೈತರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮೊರೆ ಹೋಗಿದ್ದಾರೆ. ರಾಯರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಹೇಮಾವತಿ ನೀರು ತಮ್ಮ ಭಾಗದ ಕೆರೆಗಳಿಗೆ ಬೇಗ ಹರಿಯುವಂತೆ ಹಾಗೂ ರೈತರ ಬದುಕು ಹಸನಾಗುವಂತೆ ಪ್ರಾರ್ಥಿಸಿದ್ದಾರೆ. ಸ್ಥಳೀಯ ರೈತ ಮುಖಂಡರು ನೀಡಿರುವ ಮಾಹಿತಿ ಪ್ರಕಾರ, ಅಧಿಕಾರಿಗಳು ಹೇಮಾವತಿ ಯೋಜನೆಯ ಕೆಲಸವನ್ನು ಬಹುಬೇಗ ಮುಗಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ರೈತರ ಸಮಸ್ಯೆಗಳನ್ನು ಚರ್ಚಿಸಲು ಜೂನ್ 5 ರಂದು ಶಾವಿಗೆ ಹಳ್ಳಿಯಲ್ಲಿ ಸಭೆಯನ್ನು ಕರೆಯಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರೈತರಿಗೆ ಕರೆ ನೀಡಲಾಗಿದೆ.

ಸರ್ಕಾರ ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಎಚ್ಚೆತ್ತುಕೊಂಡು, ಚಿಕ್ಕನಾಯಕನಹಳ್ಳಿ ತಾಲೂಕಿನ ಜನರ ನೀರಿನ ದಾಹವನ್ನು ತಣಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    2 hrs ago
  • ಚಿಕ್ಕ ಕೊಡಿಗೇಹಳ್ಳಿ ಗ್ರಾಮದ ಗೊಲ್ಲರಹಟ್ಟಿ ಬಳಿಯ ಮಾಗಡಿ ರಸ್ತೆಯಲ್ಲಿ ನಡೆಯುತ್ತಿದ್ದ ಹೆದ್ದಾರಿ ಕಾಮಗಾರಿಯು ಎರಡು ತಿಂಗಳ ಹಿಂದೆಯೇ ಅರ್ಧಕ್ಕೆ ನಿಂತಿದೆ. ಇದು ನಮ್ಮ ದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಎದುರಿಸುತ್ತಿರುವ ವಾಸ್ತವ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಮೂಲದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
    3
    ಚಿಕ್ಕ ಕೊಡಿಗೇಹಳ್ಳಿ ಗ್ರಾಮದ ಗೊಲ್ಲರಹಟ್ಟಿ ಬಳಿಯ ಮಾಗಡಿ ರಸ್ತೆಯಲ್ಲಿ ನಡೆಯುತ್ತಿದ್ದ ಹೆದ್ದಾರಿ ಕಾಮಗಾರಿಯು ಎರಡು ತಿಂಗಳ ಹಿಂದೆಯೇ ಅರ್ಧಕ್ಕೆ ನಿಂತಿದೆ. ಇದು ನಮ್ಮ ದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಎದುರಿಸುತ್ತಿರುವ ವಾಸ್ತವ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಮೂಲದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
    user_ಕುಮಾರಿ
    ಕುಮಾರಿ
    ನೆಲಮಂಗಲ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • ಹೊಸದಾಗಿ ಚುನಾಯಿತ #WaqfCommittee ರಚನೆಯಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ಉದ್ದೇಶಗಳು ಪ್ರಶ್ನಾರ್ಹವಾಗಿವೆ ಎಂದು ದೇಶಾದ್ಯಂತ ಹಂಚಿಕೊಳ್ಳಲಾಗುತ್ತಿರುವ ವರದಿಯೊಂದು ಹೇಳಿದೆ. ಈ ವ್ಯಕ್ತಿಗಳು ಗೊಂದಲ ಸೃಷ್ಟಿಸಲು ಸಂಪೂರ್ಣವಾಗಿ ನಿರ್ಧರಿಸಿದ್ದಾರೆ ಎಂಬ ಆರೋಪವನ್ನು ಈ ವರದಿ ಮುಂದಿಡುತ್ತದೆ.
    1
    ಹೊಸದಾಗಿ ಚುನಾಯಿತ #WaqfCommittee ರಚನೆಯಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ಉದ್ದೇಶಗಳು ಪ್ರಶ್ನಾರ್ಹವಾಗಿವೆ ಎಂದು ದೇಶಾದ್ಯಂತ ಹಂಚಿಕೊಳ್ಳಲಾಗುತ್ತಿರುವ ವರದಿಯೊಂದು ಹೇಳಿದೆ. ಈ ವ್ಯಕ್ತಿಗಳು ಗೊಂದಲ ಸೃಷ್ಟಿಸಲು ಸಂಪೂರ್ಣವಾಗಿ ನಿರ್ಧರಿಸಿದ್ದಾರೆ ಎಂಬ ಆರೋಪವನ್ನು ಈ ವರದಿ ಮುಂದಿಡುತ್ತದೆ.
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    6 min ago
  • ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಅವರು ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ರಾಜ್ಯ ಮಟ್ಟದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ಬಾಲ್ಯದಿಂದಲೇ ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮತ್ತು ಅಭಿರುಚಿ ಮೂಡಿಸಲು ಇದು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟ ಅವರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಹಲವು ವರ್ಷಗಳಿಂದ ಸರ್ಕಾರದ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನಗಳು ನಡೆಯುತ್ತಿವೆಯಾದರೂ, ಮಕ್ಕಳಿಗಾಗಿ ಪ್ರತ್ಯೇಕ ಸಮ್ಮೇಳನಗಳು ಹೆಚ್ಚು ನಡೆಯದಿರುವುದು ವಿಷಾದನೀಯ ಎಂದ ಸ್ವಾಮೀಜಿ, ಇಂತಹ ಸಮ್ಮೇಳನಗಳು ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಮತ್ತು ಅವರಲ್ಲಿ ಸಾಹಿತ್ಯದ ಆಸಕ್ತಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೇಲಿಮಠದ ಶಿವರುದ್ರ ಸ್ವಾಮೀಜಿ ಅವರು, ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಪ್ರೀತಿ ಮತ್ತು ಒಲವು ಬೆಳೆಸುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಕರೆ ನೀಡಿದರು. ಇಂದಿನ ಮಕ್ಕಳು ನಾಳಿನ ಉತ್ತಮ ನಾಗರಿಕರಾಗಿದ್ದು, ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ತಿಳಿಸಿದರು ಹಾಗೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯ ಎಂದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ವೈದ್ಯ ಡಾ. ಆಂಜಿನಪ್ಪ ಅವರು, ಮಕ್ಕಳು ಆರೋಗ್ಯ ಮತ್ತು ವೈದ್ಯಕೀಯ ಜ್ಞಾನವನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು. ಉತ್ತಮ ಆರೋಗ್ಯ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಎಂದು ಹೇಳಿದ ಅವರು, ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಡಾ. ನಾಗರಾಜ ಸ್ವಾಮಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವಿಜಯನಗರ ಘಟಕದ ಅಧ್ಯಕ್ಷ ಶ್ರೀಧರ್, ಸಾಲುಮರದ ಅಶೋಕ್, ಹಾಸನ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬೆಂಗಳೂರು ನಗರ ವಿಜಯನಗರ ಘಟಕದ ಪದಾಧಿಕಾರಿಗಳು ಸೇರಿದಂತೆ ಅನೇಕ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.
    3
    ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಅವರು ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ರಾಜ್ಯ ಮಟ್ಟದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ಬಾಲ್ಯದಿಂದಲೇ ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮತ್ತು ಅಭಿರುಚಿ ಮೂಡಿಸಲು ಇದು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟ ಅವರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಹಲವು ವರ್ಷಗಳಿಂದ ಸರ್ಕಾರದ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನಗಳು ನಡೆಯುತ್ತಿವೆಯಾದರೂ, ಮಕ್ಕಳಿಗಾಗಿ ಪ್ರತ್ಯೇಕ ಸಮ್ಮೇಳನಗಳು ಹೆಚ್ಚು ನಡೆಯದಿರುವುದು ವಿಷಾದನೀಯ ಎಂದ ಸ್ವಾಮೀಜಿ, ಇಂತಹ ಸಮ್ಮೇಳನಗಳು ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಮತ್ತು ಅವರಲ್ಲಿ ಸಾಹಿತ್ಯದ ಆಸಕ್ತಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೇಲಿಮಠದ ಶಿವರುದ್ರ ಸ್ವಾಮೀಜಿ ಅವರು, ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಪ್ರೀತಿ ಮತ್ತು ಒಲವು ಬೆಳೆಸುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಕರೆ ನೀಡಿದರು. ಇಂದಿನ ಮಕ್ಕಳು ನಾಳಿನ ಉತ್ತಮ ನಾಗರಿಕರಾಗಿದ್ದು, ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ತಿಳಿಸಿದರು ಹಾಗೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯ ಎಂದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ವೈದ್ಯ ಡಾ. ಆಂಜಿನಪ್ಪ ಅವರು, ಮಕ್ಕಳು ಆರೋಗ್ಯ ಮತ್ತು ವೈದ್ಯಕೀಯ ಜ್ಞಾನವನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು. ಉತ್ತಮ ಆರೋಗ್ಯ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಎಂದು ಹೇಳಿದ ಅವರು, ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಡಾ. ನಾಗರಾಜ ಸ್ವಾಮಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವಿಜಯನಗರ ಘಟಕದ ಅಧ್ಯಕ್ಷ ಶ್ರೀಧರ್, ಸಾಲುಮರದ ಅಶೋಕ್, ಹಾಸನ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬೆಂಗಳೂರು ನಗರ ವಿಜಯನಗರ ಘಟಕದ ಪದಾಧಿಕಾರಿಗಳು ಸೇರಿದಂತೆ ಅನೇಕ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.
    user_Nataraj B P
    Nataraj B P
    ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    46 min ago
  • ಬೆಂಗಳೂರಿನಲ್ಲಿ ಅಬೀಬಾ ಟೆಂಟ್ ಹೌಸ್‌ನಿಂದ ವಿವಿಧ ಬಾಡಿಗೆ ಸೇವೆಗಳು ಲಭ್ಯವಿವೆ. ಹೆಚ್ಚಿನ ಮಾಹಿತಿ ಹಾಗೂ ಸೇವೆಗಳಿಗಾಗಿ, ಆಸಕ್ತರು 9900619376 ಅಥವಾ 7760976887 ಸಂಖ್ಯೆಗಳನ್ನು ಸಂಪರ್ಕಿಸಬಹುದು.
    1
    ಬೆಂಗಳೂರಿನಲ್ಲಿ ಅಬೀಬಾ ಟೆಂಟ್ ಹೌಸ್‌ನಿಂದ ವಿವಿಧ ಬಾಡಿಗೆ ಸೇವೆಗಳು ಲಭ್ಯವಿವೆ. ಹೆಚ್ಚಿನ ಮಾಹಿತಿ ಹಾಗೂ ಸೇವೆಗಳಿಗಾಗಿ, ಆಸಕ್ತರು 9900619376 ಅಥವಾ 7760976887 ಸಂಖ್ಯೆಗಳನ್ನು ಸಂಪರ್ಕಿಸಬಹುದು.
    user_Sahir sarakar
    Sahir sarakar
    Bengaluru South, Bengaluru Urban•
    3 hrs ago
  • ಕಟ್ಟಾ ಆರ್‌ಸಿಬಿ ಅಭಿಮಾನಿಗಳು ತಮ್ಮ ತಂಡದ ಗೆಲುವಿಗಾಗಿ ಅನ್ನಮ್ಮ ದೇವಾಲಯ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಿರ್ಣಾಯಕ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿಗೆ ವಿಜಯವನ್ನು ಬಯಸಿ, ಈ ಅಭಿಮಾನಿಗಳು ಕ್ರಿಕೆಟ್ ಅನ್ನು ನಂಬಿಕೆ, ಭರವಸೆ ಮತ್ತು ಭಕ್ತಿಯ ಮಿಶ್ರಣವನ್ನಾಗಿ ಪರಿವರ್ತಿಸಿರುವುದು ಕಂಡುಬಂದಿದೆ. ಇದು ಆರ್‌ಸಿಬಿ ಫ್ರಾಂಚೈಸಿ ಜೊತೆ ಅಭಿಮಾನಿಗಳು ಎಷ್ಟು ಆಳವಾಗಿ ಸಂಪರ್ಕ ಹೊಂದಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ.
    1
    ಕಟ್ಟಾ ಆರ್‌ಸಿಬಿ ಅಭಿಮಾನಿಗಳು ತಮ್ಮ ತಂಡದ ಗೆಲುವಿಗಾಗಿ ಅನ್ನಮ್ಮ ದೇವಾಲಯ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಿರ್ಣಾಯಕ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿಗೆ ವಿಜಯವನ್ನು ಬಯಸಿ, ಈ ಅಭಿಮಾನಿಗಳು ಕ್ರಿಕೆಟ್ ಅನ್ನು ನಂಬಿಕೆ, ಭರವಸೆ ಮತ್ತು ಭಕ್ತಿಯ ಮಿಶ್ರಣವನ್ನಾಗಿ ಪರಿವರ್ತಿಸಿರುವುದು ಕಂಡುಬಂದಿದೆ. ಇದು ಆರ್‌ಸಿಬಿ ಫ್ರಾಂಚೈಸಿ ಜೊತೆ ಅಭಿಮಾನಿಗಳು ಎಷ್ಟು ಆಳವಾಗಿ ಸಂಪರ್ಕ ಹೊಂದಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ.
    user_Manish Bramhastra
    Manish Bramhastra
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಯಳನಾಡು ಸಮೀಪವಿರುವ ಶ್ರೀ ಗುರು ಗೋ ಸೇವಾ ಪರಿವಾರದಲ್ಲಿ ಭಾನುವಾರ, ಮೇ 31, 2026 ರಂದು ಉಚಿತ ಪಂಚಗವ್ಯ ಪ್ರಾಶನ ಮತ್ತು ಅಗ್ನಿಹೋತ್ರ ಪ್ರತ್ಯಕ್ಷತೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತ ಬಂಧುಗಳು ಬೆಳಿಗ್ಗೆ 6:00 ಗಂಟೆಗೆ ಸರಿಯಾಗಿ ಆಗಮಿಸಬೇಕೆಂದು ತಿಳಿಸಲಾಗಿದೆ. ಅಗ್ನಿಹೋತ್ರ ಪ್ರತ್ಯಕ್ಷತೆಯು ಬೆಳಿಗ್ಗೆ 6:00 ಗಂಟೆಗೆ ಪ್ರಾರಂಭವಾಗಲಿದ್ದು, ಪಂಚಗವ್ಯ ಪ್ರಾಶನವು ಬೆಳಗ್ಗೆ 6:30ಕ್ಕೆ ನೆರವೇರಲಿದೆ. ಶ್ರೀ ಗುರು ಗೋ ಸೇವಾ ಪರಿವಾರ ಗೋ ಮಂದಿರ, ಯಳನಾಡು ಇಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವಿಶೇಷ ಸೂಚನೆಯ ಪ್ರಕಾರ, ಅಂದು ಅಧಿಕಮಾಸದ ಹುಣ್ಣಿಮೆ ಇರುವುದರಿಂದ ಗೋಪೂಜೆ ಮತ್ತು ಗೋವುಗಳಿಗೆ ಗೋಗ್ರಾಸವನ್ನು ನೀಡಲು ಕೂಡ ಅವಕಾಶವಿರುತ್ತದೆ. ಈ ಮೂಲಕ ಆಸಕ್ತರು ಈ ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ.
    1
    ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಯಳನಾಡು ಸಮೀಪವಿರುವ ಶ್ರೀ ಗುರು ಗೋ ಸೇವಾ ಪರಿವಾರದಲ್ಲಿ ಭಾನುವಾರ, ಮೇ 31, 2026 ರಂದು ಉಚಿತ ಪಂಚಗವ್ಯ ಪ್ರಾಶನ ಮತ್ತು ಅಗ್ನಿಹೋತ್ರ ಪ್ರತ್ಯಕ್ಷತೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತ ಬಂಧುಗಳು ಬೆಳಿಗ್ಗೆ 6:00 ಗಂಟೆಗೆ ಸರಿಯಾಗಿ ಆಗಮಿಸಬೇಕೆಂದು ತಿಳಿಸಲಾಗಿದೆ. ಅಗ್ನಿಹೋತ್ರ ಪ್ರತ್ಯಕ್ಷತೆಯು ಬೆಳಿಗ್ಗೆ 6:00 ಗಂಟೆಗೆ ಪ್ರಾರಂಭವಾಗಲಿದ್ದು, ಪಂಚಗವ್ಯ ಪ್ರಾಶನವು ಬೆಳಗ್ಗೆ 6:30ಕ್ಕೆ ನೆರವೇರಲಿದೆ. ಶ್ರೀ ಗುರು ಗೋ ಸೇವಾ ಪರಿವಾರ ಗೋ ಮಂದಿರ, ಯಳನಾಡು ಇಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ವಿಶೇಷ ಸೂಚನೆಯ ಪ್ರಕಾರ, ಅಂದು ಅಧಿಕಮಾಸದ ಹುಣ್ಣಿಮೆ ಇರುವುದರಿಂದ ಗೋಪೂಜೆ ಮತ್ತು ಗೋವುಗಳಿಗೆ ಗೋಗ್ರಾಸವನ್ನು ನೀಡಲು ಕೂಡ ಅವಕಾಶವಿರುತ್ತದೆ. ಈ ಮೂಲಕ ಆಸಕ್ತರು ಈ ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    22 hrs ago
  • ಪತ್ನಿಯು ತನ್ನ ಕೆಲಸ ಕಳೆದುಕೊಂಡ ಕಾರಣದಿಂದ ಗಲಾಟೆಯೊಂದು ಸ್ಫೋಟಗೊಂಡಿದೆ. ಈ ಘಟನೆಯಲ್ಲಿ, ಕೋಪಗೊಂಡ ಯುವಕರು ಪರಸ್ಪರ ಕೈಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ.
    1
    ಪತ್ನಿಯು ತನ್ನ ಕೆಲಸ ಕಳೆದುಕೊಂಡ ಕಾರಣದಿಂದ ಗಲಾಟೆಯೊಂದು ಸ್ಫೋಟಗೊಂಡಿದೆ. ಈ ಘಟನೆಯಲ್ಲಿ, ಕೋಪಗೊಂಡ ಯುವಕರು ಪರಸ್ಪರ ಕೈಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.