Shuru
Apke Nagar Ki App…
ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯ ಜೋಗಿಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಆಕ್ರೋಶ ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯ ಜೋಗಿಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಆಕ್ರೋಶ --------------------- ಜೋಗಿಹಳ್ಳಿಯಲ್ಲಿ ಒಂದು ತಿಂಗಳಿಂದ ಕುಡಿಯುವ ನೀರು ಸರಬರಾಜು ಆಗಿಲ್ಲ! ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ತಿಂಗಳಿಂದ ನೀರು ಸರಬರಾಜು ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, “ನಮಗೆ ನೀರು ಬಿಡದಿದ್ದರೆ ಪುರಸಭೆ ಕಚೇರಿಗೆ ಬಂದು ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರ ಸಮಸ್ಯೆಯನ್ನು ಕೂಡಲೇ ಪರಿಹರಿಸಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
Huliyarkiran
ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯ ಜೋಗಿಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಆಕ್ರೋಶ ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯ ಜೋಗಿಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಆಕ್ರೋಶ --------------------- ಜೋಗಿಹಳ್ಳಿಯಲ್ಲಿ ಒಂದು ತಿಂಗಳಿಂದ ಕುಡಿಯುವ ನೀರು ಸರಬರಾಜು ಆಗಿಲ್ಲ! ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ತಿಂಗಳಿಂದ ನೀರು ಸರಬರಾಜು ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, “ನಮಗೆ ನೀರು ಬಿಡದಿದ್ದರೆ ಪುರಸಭೆ ಕಚೇರಿಗೆ ಬಂದು ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರ ಸಮಸ್ಯೆಯನ್ನು ಕೂಡಲೇ ಪರಿಹರಿಸಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
More news from ಕರ್ನಾಟಕ and nearby areas
- ಹುಳಿಯಾರಿನಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ ಪೊಲೀಸರಿಂದ ಪಥಸಂಚಲನ -------------------- ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ಹುಳಿಯಾರ್ನ ಪ್ರಮುಖ ರಸ್ತೆಗಳಲ್ಲಿ ಗುರುವಾರ ಪಥಸಂಚಲನ ನಡೆಸಿದರು. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪ್ರಮುಖ ಪ್ರದೇಶಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಿದರು. ಎಲ್ಲಾ ಸಮುದಾಯದವರು ಪರಸ್ಪರ ಸೌಹಾರ್ದ ಮತ್ತು ಸಹಬಾಳ್ವೆಯಿಂದ ಹಬ್ಬ ಆಚರಿಸಬೇಕೆಂದು ಪೊಲೀಸರು ಮನವಿ ಮಾಡಿದರು.1
- ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಶಿರಾ : ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ದೇವತಾ ಕಾರ್ಯಗಳಿಗೆ ಅತ್ಯಂತ ಉನ್ನತವಾದ ಸ್ಥಾನವಿದೆ. ಅನಾದಿ ಕಾಲದಿಂದಲೂ ಮಾನವನು ತನ್ನ ದೈನಂದಿನ ಜೀವನದ ಭಾಗವಾಗಿ ದೇವರನ್ನು ಆರಾಧಿಸುತ್ತಾ ಬಂದಿದ್ದಾನೆ. ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ,ಧಾರ್ಮಿಕ ದೇವತಾ ಕಾರ್ಯಗಳು ಮನುಷ್ಯನಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತವೆ. ಇವುಗಳನ್ನು ಕೇವಲ ಮೂಢನಂಬಿಕೆಯಾಗಿ ನೋಡದೆ, ಅವುಗಳ ಹಿಂದಿರುವ ವೈಜ್ಞಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಅರಿತು ಆಚರಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸುಖ-ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು. ಶಿರಾ ತಾಲೂಕಿನ ಗೌಡಗೆರೆ ಹೋಬಳಿ ಕಳವರಹಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಐತಿಹಾಸಿಕ ಪ್ರಸಿದ್ಧ ಶ್ರೀ ಜುಂಜಪ್ಪ ಸ್ವಾಮಿಗೆ ಎಲ್ಲರೂ ಒಗ್ಗೂಡಿ ಭವ್ಯ ದೇಗುಲ ನಿರ್ಮಾಣ ಮಾಡುತ್ತಿರುವುದು, ಕಳವರಹಳ್ಳಿಗೆ ದೊಡ್ಡ ಕಳಸವಿದ್ದಂತೆ. ನಾವು ಎಲ್ಲರೂ ಒಗ್ಗಟ್ಟಾಗಿ ದೇಗುಲ ನಿರ್ಮಾಣ ಮಾಡುವಂತ ಸಂಕಲ್ಪ ಮಾಡಬೇಕು. ರಾಜ್ಯದಲ್ಲಿ ಹಾಗೂ ಸಿರಾ ತಾಲೂಕಿನಲ್ಲಿ ಇನ್ನು ಮುಂದೆ ಯಾದರು ಉತ್ತಮ ಮಳೆಯಾಗಿ ಎಲ್ಲ ರೈತರ ಬದುಕು ಸುಂದರವಾಗಿರಲಿ ಎಂದು ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು. ಶ್ರೀ ಮದ್ದಮ್ಮ ದೇವಿ ದೇವಸ್ಥಾನದ ಪಟ್ಟದ ಪೂಜಾರ್ ದೊಡ್ಡರಾಜಪ್ಪ, ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಣಸೆಹಳ್ಳಿ ಶಶಿಧರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಸಂಕಾಪುರ ಚಿದಾನಂದ, ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮುದ್ದು ಕೃಷ್ಣೆಗೌಡ, ಕಾರ್ಯದರ್ಶಿ ನರಸಿಂಹಮೂರ್ತಿ, ಭೂಕಾಂತೇ ಗೌಡ, ಕೃಷ್ಣಪ್ಪ, ಹೊಸೂರು ಮಂಜೇಗೌಡ, ಸಿದ್ದಣ್ಣ, ದೊಡ್ಡಯ್ಯ, ಸಿದ್ದಾಪುರ ಮಂಜುನಾಥ್, ನಾಗೇಂದ್ರ ಗೌಡ, ಭೂತಣ್ಣ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು, 12 ಜನ ಕೈವಾಡಸ್ತರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.1
- ವಿಜೃಂಭಣೆಯಿಂದ ಗಡಿಭಾಗದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ KODIGENAHALLI ಮಧುಗಿರಿ ತಾಲೂಕಿನ ಗಡಿಭಾಗವಾದ ಕೊಡಿಗೇನಹಳ್ಳಿ ಜಾಮೀಯ ಮಸ್ಜಿದ್ ಸುನ್ನತ್ ಹುಲ್ ಜಮಾತ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.1
- ಭದ್ರಾ ನೀರು ಹರಿಸದ ರಾಜ್ಯ ಸರ್ಕಾರದ ವಿರುದ್ಧ ಹೊಸದುರ್ಗದಲ್ಲಿ ಬೃಹತ್ ಪ್ರತಿಭಟನೆ ಶೀಘ್ರ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ಹರಿಸಲು ಆಗ್ರಹಿಸಿ ಹೊಸದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇನ್ನೂ ಬಿಜೆಪಿ ಪಕ್ಷ ಹಾಗೂ ಜೆ ಡಿ ಎಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಿದ್ದು ಹೊಸದುರ್ಗ ಬಿಜೆಪಿ ಮುಖಂಡರು ಹಾಗೂ ಖನಿಜ ನಿಗಮದ ಮಾಜಿ ಅಧ್ಯಕ್ಷರಾದ ಲಿಂಗಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಎಂ ಎಲ್ ಸಿ ಕೆ ಎಸ್ ನವೀನ್ ಅವರು ಸಹ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇನ್ನೂ ಎಸ್ ಲಿಂಗಮೂರ್ತಿ ಅವರು ಅಹ ಆಗಮಿಸಿ ಬಿಸಿಲನ್ನೂ ಸಹ ಲೆಕ್ಕಿಸದೆ ಪ್ರತಿಭಟನೆ ನೇತೃತ್ವ ವಹಿಸಿದ್ದು ಹುಳಿಯಾರು ರಸ್ತೆಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ತಾಲ್ಲೂಕು ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಷ ಹೊರ ಹಾಕಿದ್ದು ಶೀಘ್ರ ಭದ್ರಾ ಮೇಲ್ದಂಡೆ ಯೋಜನೆ ಜಾರಿ ಮಾಡಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಆಗ್ರಹ ಮಾಡಿದರು. ತಕ್ಷಣವೇ ಹೊಸದುರ್ಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡಿ ಕುಡಿಯುವ ನೀರಿನ ಯೋಜನೆಯನ್ನ ಶೀಘ್ರ ಜಾರಿಗೊಳಿಸಲು ಪ್ರತಿಭಟನೆ ಮೂಲಕ ಒತ್ತಾಯ ಮಾಡಿದರು. ಇದೇ ವೇಳೆ ಎಸ್ ಲಿಂಮೂರ್ತಿ ಅವರು ಮಾತನಾಡಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಸರ್ಕಾರ ಈ ಬರದ ನಾಡು ಹೊಸದುರ್ಗಕ್ಕೆ ನೀರು ಕೊಡುವ ಬರವಸೆ ಇಟ್ಟಿದ್ದು ಬರವಸೆ ಹುಸಿಯಾಗಿದೆ. ಮೂರು ವರ್ಷಗಳು ಕಳೆದರು ಸಹ ಸರ್ಕಾರ ನೀರು ಹರಿಸುವ ಬಗ್ಗೆ ಸುಳ್ಳು ಬರವಸೆಯನ್ನ ಕೊಡುತ್ತಾ ಬಂದಿದೆ. ಈ ತಾಲ್ಲೂಕಿನ ಶಾಸಕರು ಕೂಡ ಬೆಂಬಲ ಕೋರಿದ್ದು ಕೈ ಜೋಡಿಸಿದ್ದೆವು. ಆದರೆ ಆಡಳಿತ ಪಕ್ಷದ ಶಾಸಕರಿಗೆ ಮಾನವೀಯತೆಯಿಂದ ಬೆಂಬಲ ಕೊಟ್ಟಿದ್ದೇವೆ. ಕಳೆದ ಆರೆಂಟು ತಿಂಗಳಾದರು ಸಹ ಸ್ಥಳೀಯ ಶಾಸಕರು ನೀರು ಕೊಡುವಲ್ಲಿ ವಿಫಲವಾಗಿದ್ದಾರೆ. ಆದ್ದರಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನೀರಿಗಾಗಿ ಹೋರಾಟ ಮಾಡುವ ಸಮಯ ಬಂದಿದ್ದು ಈ ಮೂಲಕ ಸರ್ಕಾರದ ಕಣ್ಣನ್ನ ತೆರಯಬೇಕಿದೆ. ನಮ್ಮ ಸರ್ಕಾರದ ಅವದಿಯಲ್ಲಿ ಅರವತ್ತರಷ್ಟು ಹಣ ಮೀಸಲಿಟ್ಟು ಕೆಲಸ ಆಗಿದ್ದು ಈ ಸರ್ಕಾರ ಬಂದ ನಂತರ ಇಪ್ಪತ್ತರಷ್ಟು ಸಹ ಹಣ ಬಿಡುಗಡೆ ಮಾಡಿಲ್ಲ ಎಂದು ಲಿಂಗಮೂರ್ತಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರಗಾಲ ಬಂದಿದ್ದರು ಸಹ ಸರ್ಕಾರ ಜವಾಬ್ದಾರಿ ತೋರದೆ ಅನ್ಯಾಯ ಮಾಡಿದೆ. ಕೇವಲ ಮಂತ್ರಿ ಸ್ಥಾನಕ್ಕಾಗಿ ಹೊಡೆದಾಟ ನಡೆಸುತ್ತಿದ್ದು ಬರಗಾಲದಿಂದ ಕಂಗೆಟ್ಟ ಜನರಿಗೆ ನೀರು ಕೊಡುವ ಕೆಲಸ ಮಾಡದೆ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡದೆ ಇದ್ದು ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಎಸ್ ಲಿಂಗಮೂರ್ತಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.1
- ಕೋಟೆ ನಾಡು ಚಿತ್ರದುರ್ಗದಲ್ಲಿ ರಾಕಿಂಗ್ ಸ್ಟಾರ್ ಯಶು ಅಭಿಮಾನಿಗಳ ಸಂಭ್ರಮ1
- ಸಿಂಪಲ್ ಮ್ಯಾಚ್..1
- ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯ ಜೋಗಿಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಆಕ್ರೋಶ ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯ ಜೋಗಿಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಆಕ್ರೋಶ --------------------- ಜೋಗಿಹಳ್ಳಿಯಲ್ಲಿ ಒಂದು ತಿಂಗಳಿಂದ ಕುಡಿಯುವ ನೀರು ಸರಬರಾಜು ಆಗಿಲ್ಲ! ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ತಿಂಗಳಿಂದ ನೀರು ಸರಬರಾಜು ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, “ನಮಗೆ ನೀರು ಬಿಡದಿದ್ದರೆ ಪುರಸಭೆ ಕಚೇರಿಗೆ ಬಂದು ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರ ಸಮಸ್ಯೆಯನ್ನು ಕೂಡಲೇ ಪರಿಹರಿಸಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.1
- ನೇಪಾಳದಲ್ಲಿ ಭೀಕರ ಪ್ರವಾಹ: ಕ್ಷಣಾರ್ಧದಲ್ಲೇ ಕೊಚ್ಚಿಹೋದ ಮನೆ, ವಾಹನಗಳು1