logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಂಡೆಕುರಬರದೊಡ್ಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಪ್ರತಿಭಟನೆ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ಅನುದಾನ ನೀಡಿದ್ದು ಅದರಂತೆ ಡಾಂಬರು ರಸ್ತೆ ನಿರ್ಮಾಣ ಮಾಡಬೇಕು ಮೆಟ್ಲಿಂಗ್ ರಸ್ತೆ ನಿರ್ಮಾಣ ಬೇಡ ಎಂದು ಮುನಿಶೆಟ್ಟಿಗುಡಿ ದೊಡ್ಡಿ ಹಾಗೂ ಅಂಡೆ ಕುರುಬನ ದೊಡ್ಡಿ ಗ್ರಾಮಸ್ಥರು ಬಿಜೆಪಿ ಯುವ ಮುಖಂಡ ನಿಶಾಂತ್ ರವರ ನೇತೃತ್ವದಲ್ಲಿ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಬಿಜೆಪಿ ಯುವ ಮುಖಂಡ ನಿಶಾಂತ್ ಮಾತನಾಡಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸೋಮಣ್ಣನವರು ಚಾಮರಾಜನಗರ ಜಿಲ್ಲೆಯ ಜಿಲ್ಲೆಯ್ಯಾದ್ಯಂತ ರಸ್ತೆ ಅಭಿವೃದ್ಧಿಪಡಿಸಲು ನೂರಾರು ಕೋಟಿ ಅನುದಾನ ಕೊಡಿಸಿದ್ದರು. ಅದರಂತೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸ್ವತಂತ್ರ ಪೂರ್ವದಿಂದಲೂ ಹಲವು ರಸ್ತೆಗಳು ಅಭಿವೃದ್ಧಿಯಾಗಿರಲಿಲ್ಲ, ಈ ಹಿನ್ನೆಲೆ ಕ್ಷೇತ್ರದ ಮುಖಂಡರ ಜೊತೆಗೂಡಿ ವಿ ಸೋಮಣ್ಣರವರ ಸಹಕಾರದಿಂದ ಹತ್ತಕ್ಕೂ ಹೆಚ್ಚು ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದೆ. ಲೊಕ್ಕನಹಳ್ಳಿ ಮುಖ್ಯ ರಸ್ತೆಯಿಂದ ಮಹಾಲಿಂಗನ ಕಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಲವಾರು ವರ್ಷಗಳಿಂದ ಅಭಿವೃದ್ಧಿಯಾಗಿರಲಿಲ್ಲ ಈ ವೇಳೆ ಕೆ ಆರ್ ಐ ಡಿ ಎಲ್ ನಿಗಮದಿಂದ ರಸ್ತೆ ಅಭಿವೃದ್ಧಿಪಡಿಸಲಾಯಿತು. ಹಲವು ರಸ್ತೆಗಳ ಅಭಿವೃದ್ಧಿಗೆ ಹಿಂದಿನ ಶಾಸಕರು ಅವಕಾಶ ಮಾಡಿಕೊಡಲಿಲ್ಲ, ಆದರೂ ಕೆಲವು ಕಡೆ ಯಾವುದಕ್ಕೂ ಜಗ್ಗದೆ ಬಿಜೆಪಿ ಸರ್ಕಾರದ ಯೋಜನೆಗಳನ್ನು ಹನೂರು ಕ್ಷೇತ್ರದ ಜನರಿಗೆ ತಲುಪಿಸಲಾಗಿದೆ ಎಂದರು. ಅದೇ ರೀತಿ ಕಳೆದ 2022ರ ಜುಲೈನಲ್ಲಿಯೇ ಅಂಡೆ ಕುರುಬನ ದೊಡ್ಡಿ ಗ್ರಾಮದಿಂದ ಹುಣಸೆಪಾಳ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ 2.2 ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೆ ಶಾಸಕರು ನಾನು ಅನುದಾನ ತಂದು ಅಭಿವೃದ್ಧಿ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಬೈಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಸದಾನಂದ್ ಮೂರ್ತಿರವರು ಹಗಲಿರುಳು ಶ್ರಮಿಸಿದ್ದಾರೆ. ಈ ಅನುದಾನ ತರಲು ಯಾವುದೇ ಪಾತ್ರವಿಲ್ಲದೆ ಭೂಮಿ ಪೂಜೆ ನೆರವೇರಿಸಿದ್ದಾರೆ ಅನುದಾನ ತಂದ ಹಾಲಿ ಅಧ್ಯಕ್ಷ ಸದಾನಂದಮೂರ್ತಿ ರವರಿಗೆ ರಸ್ತೆ ಭೂಮಿ ಪೂಜೆಗೆ ಅಹ್ವಾನ ನೀಡದೇ ಆಗೌರವ ತೋರಿದ್ದಾರೆ ಎಂದು ಆರೋಪಿಸಿದರು.

on 24 January
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Farmer Hanur, Chamarajanagara•
on 24 January

ಅಂಡೆಕುರಬರದೊಡ್ಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಪ್ರತಿಭಟನೆ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ಅನುದಾನ ನೀಡಿದ್ದು ಅದರಂತೆ ಡಾಂಬರು ರಸ್ತೆ ನಿರ್ಮಾಣ ಮಾಡಬೇಕು ಮೆಟ್ಲಿಂಗ್ ರಸ್ತೆ ನಿರ್ಮಾಣ ಬೇಡ ಎಂದು ಮುನಿಶೆಟ್ಟಿಗುಡಿ ದೊಡ್ಡಿ ಹಾಗೂ ಅಂಡೆ ಕುರುಬನ ದೊಡ್ಡಿ ಗ್ರಾಮಸ್ಥರು ಬಿಜೆಪಿ ಯುವ ಮುಖಂಡ ನಿಶಾಂತ್ ರವರ ನೇತೃತ್ವದಲ್ಲಿ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಬಿಜೆಪಿ ಯುವ ಮುಖಂಡ ನಿಶಾಂತ್ ಮಾತನಾಡಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸೋಮಣ್ಣನವರು ಚಾಮರಾಜನಗರ ಜಿಲ್ಲೆಯ ಜಿಲ್ಲೆಯ್ಯಾದ್ಯಂತ ರಸ್ತೆ ಅಭಿವೃದ್ಧಿಪಡಿಸಲು

ನೂರಾರು ಕೋಟಿ ಅನುದಾನ ಕೊಡಿಸಿದ್ದರು. ಅದರಂತೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸ್ವತಂತ್ರ ಪೂರ್ವದಿಂದಲೂ ಹಲವು ರಸ್ತೆಗಳು ಅಭಿವೃದ್ಧಿಯಾಗಿರಲಿಲ್ಲ, ಈ ಹಿನ್ನೆಲೆ ಕ್ಷೇತ್ರದ ಮುಖಂಡರ ಜೊತೆಗೂಡಿ ವಿ ಸೋಮಣ್ಣರವರ ಸಹಕಾರದಿಂದ ಹತ್ತಕ್ಕೂ ಹೆಚ್ಚು ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದೆ. ಲೊಕ್ಕನಹಳ್ಳಿ ಮುಖ್ಯ ರಸ್ತೆಯಿಂದ ಮಹಾಲಿಂಗನ ಕಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಲವಾರು ವರ್ಷಗಳಿಂದ ಅಭಿವೃದ್ಧಿಯಾಗಿರಲಿಲ್ಲ ಈ ವೇಳೆ ಕೆ ಆರ್ ಐ ಡಿ ಎಲ್ ನಿಗಮದಿಂದ ರಸ್ತೆ ಅಭಿವೃದ್ಧಿಪಡಿಸಲಾಯಿತು. ಹಲವು ರಸ್ತೆಗಳ ಅಭಿವೃದ್ಧಿಗೆ ಹಿಂದಿನ ಶಾಸಕರು ಅವಕಾಶ ಮಾಡಿಕೊಡಲಿಲ್ಲ, ಆದರೂ ಕೆಲವು ಕಡೆ ಯಾವುದಕ್ಕೂ ಜಗ್ಗದೆ ಬಿಜೆಪಿ ಸರ್ಕಾರದ ಯೋಜನೆಗಳನ್ನು ಹನೂರು ಕ್ಷೇತ್ರದ

ಜನರಿಗೆ ತಲುಪಿಸಲಾಗಿದೆ ಎಂದರು. ಅದೇ ರೀತಿ ಕಳೆದ 2022ರ ಜುಲೈನಲ್ಲಿಯೇ ಅಂಡೆ ಕುರುಬನ ದೊಡ್ಡಿ ಗ್ರಾಮದಿಂದ ಹುಣಸೆಪಾಳ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ 2.2 ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೆ ಶಾಸಕರು ನಾನು ಅನುದಾನ ತಂದು ಅಭಿವೃದ್ಧಿ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಬೈಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಸದಾನಂದ್ ಮೂರ್ತಿರವರು ಹಗಲಿರುಳು ಶ್ರಮಿಸಿದ್ದಾರೆ. ಈ ಅನುದಾನ ತರಲು ಯಾವುದೇ ಪಾತ್ರವಿಲ್ಲದೆ ಭೂಮಿ ಪೂಜೆ ನೆರವೇರಿಸಿದ್ದಾರೆ ಅನುದಾನ ತಂದ ಹಾಲಿ ಅಧ್ಯಕ್ಷ ಸದಾನಂದಮೂರ್ತಿ ರವರಿಗೆ ರಸ್ತೆ ಭೂಮಿ ಪೂಜೆಗೆ ಅಹ್ವಾನ ನೀಡದೇ ಆಗೌರವ ತೋರಿದ್ದಾರೆ ಎಂದು ಆರೋಪಿಸಿದರು.

More news from ಕರ್ನಾಟಕ and nearby areas
  • ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...
    1
    ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • ಹನೂರು: ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಮಧ್ಯಾಹ್ನ ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು. ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.
    1
    ಹನೂರು: 
ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು.
ಮಂಗಳವಾರ ಮಧ್ಯಾಹ್ನ  ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು.  ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    20 hrs ago
  • ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಚಾರಿಸುವ ಮಾರ್ಗ ಆನೆ ತಲೆ ತಿಂಬ ಬಳಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಚರಿಸುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಯವಿತರಾಗಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನ ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
    1
    ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಚಾರಿಸುವ ಮಾರ್ಗ ಆನೆ ತಲೆ ತಿಂಬ ಬಳಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು  ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಚರಿಸುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಯವಿತರಾಗಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನ ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
  • ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು. ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
    1
    ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು.
ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ.
ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer ನಂಜನಗೂಡು, ಮೈಸೂರು, ಕರ್ನಾಟಕ•
    16 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.
    1
    ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    19 hrs ago
  • ಪೀಣ್ಯದ ಮೆಟ್ರೋ ನಿಲ್ದಾಣದ ಬಳಿ ಆಟೋ ಚಾಲಕರಿಬ್ಬರು ಪರಸ್ಪರ ಪಾರ್ಕಿಂಗ್ ಗೋಸ್ಕರ ಮಾತಿನ ಚಕಮಕಿ ನಡೆಸಿದ್ದಾರೆ, ಒಬ್ಬ ಅಟೋ ಚಾಲಕ ಅವಾಚ್ಯಪದಗಳನ್ನು ಉಪಯೋಗಿಸಿ ನಿಂದಿಸಿದ್ದಾನೆ, RMC ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
    1
    ಪೀಣ್ಯದ ಮೆಟ್ರೋ ನಿಲ್ದಾಣದ ಬಳಿ ಆಟೋ ಚಾಲಕರಿಬ್ಬರು ಪರಸ್ಪರ ಪಾರ್ಕಿಂಗ್ ಗೋಸ್ಕರ ಮಾತಿನ ಚಕಮಕಿ ನಡೆಸಿದ್ದಾರೆ, ಒಬ್ಬ ಅಟೋ
ಚಾಲಕ ಅವಾಚ್ಯಪದಗಳನ್ನು ಉಪಯೋಗಿಸಿ ನಿಂದಿಸಿದ್ದಾನೆ, RMC ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.