logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾನ್ವಿ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ, ಸನ್ಮಾನ ಸಮಾರಂಭ ಶೈಕ್ಷಣಿಕ ಪ್ರಗತಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆ ಶ್ಲಾಘನೀಯ : ಎನ್.ಎಸ್.ಬೋಸರಾಜು. ಮಾನ್ವಿ, :  ಶಿಕ್ಷಣ ಕ್ಷೇತ್ರದಲ್ಲಿ ತೀರಾ ಹಿಂದುಳಿದಿರುವ ಭಾಗವಾಗಿರುವ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಉತ್ತಮ ಗುಣಮಟ್ಟದ ಶಿಕ್ಷಣದ ಸೇವೆ ತುಂಬಾ ಶ್ಲಾಘನೀಯ ಎಂದು ಮಾಜಿ ಸಚಿವ ಎನ್.ಎಸ್.ಬೋಸರಾಜು ಪ್ರಶಂಸೆಯನ್ನು ವ್ಯಕ್ತಪಡಿಸಿದರು.ಪಟ್ಟಣದ ಈದ್ಗಾ ಶಾದಿಮಹಲ್ ನಲ್ಲಿಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸರ್ವಪಲ್ಲಿ ರಾಧಾಕೃಷ್ಣನ್ ರ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆ ಎಂದು ಆಚರಿಸುವ ಮೂಲಕ ಶಿಕ್ಷಕರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವಾಗಿದೆ. ಶಿಕ್ಷಕರು ಈ ಭಾಗದ ಶೈಕ್ಷಣಿಕ ಪ್ರಗತಿಗೆ ಖಾಸಗಿ ಸಂಸ್ಥೆಗಳ ಪರಿಶ್ರಮ ಕಾರಣ. ಶಿಕ್ಷಣವನ್ನು ವ್ಯಾಪಾರ ದೃಷ್ಟಿಕೋನದಿಂದ ನೋಡದೆ ಗುಣಮಟ್ಟದ ಶಿಕ್ಷಣ ನೀಡಬೇಕು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸಾವಿರ ಕೋಟಿ ಅನುದಾನ ನೀಡಿದ್ದು, ಅದರಲ್ಲಿ 1125 ಕೋಟಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾಗಿದೆ. 371(ಜೆ) ಕಲಂ, ಮಧ್ಯಾಹ್ನ ಬಿಸಿಯೂಟ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಯುಪಿಎ ಸರ್ಕಾರ ಕಲ್ಪಿಸಿದೆ ಎಂದರು. ಶಾಸಕ ಹಂಪಯ್ಯನಾಯಕ ಸಾಹುಕಾರ ಅವರು ಡಾ.ರಾಧಾಕೃಷ್ಣನ್ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿ ಉತ್ತಮ ಶಿಕ್ಷಕರನ್ನು ಪ್ರೋತ್ಸಾಹಿಸಲು 4 ಜನ ಶಿಕ್ಷಕರಿಗೆ ಬಂಗಾರದ ಪದಕ ಹಾಗೂ 30 ಜನರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದೆ. ಮುಂದಿನ ವರ್ಷ ಹತ್ತು ಜನ ಶಿಕ್ಷಕರಿಗೆ ಬಂಗಾರದ ಪದಕ ನೀಡುವ ಗುರಿಯಿದೆ ಎಂದರು. ಶಿಕ್ಷಣದಿಂದ ಮಾತ್ರ ಸಾಮಾಜಿಕ, ಕೌಟುಂಬಿಕ ಮತ್ತು ದೇಶದ ಪ್ರಗತಿ ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವತ್ತ ಗಮನಹರಿಸಿ ಎಂದರು. ಈ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಮಾಜಿ ಶಾಸಕರಾದ ರಾಜಾವೆಂಕಟಪ್ಪನಾಯಕ ಮಾತನಾಡಿದರು. ಝಾ.ಶಿ.ಸಂ.ಒಕ್ಕೂಟದ ಅಧ್ಯಕ್ಷ ರಾಜಾಸುಭಾಶ್ಚಂದ್ರನಾಯಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಂಟು ಚಿನ್ನದ ಪದಕ ಪುರಸ್ಕೃತರು :  ಮೌಂಟೆಸ್ಸರಿ ಶಾಲೆಯ ಕಡುಲಂಗ್ ಗಂಗ್ಮಿ, ಸರ್ವೋದಯ ಶಾಲೆಯ ಎಸ್.ಜೋಸೆಫ್, ಚೌಡೇಶ್ವರಿ ಶಾಲೆಯ ಸುಮಯ್ಯ ಖಾನಮ್, ಡ್ಯಾಫಡಿಲ್ಸ್ ಶಾಲೆಯ ತಪೂರಾ ರಾನಾ ಇವರು ಮಾಜಿಸಚಿವ, ಶಾಸಕರು ನೀಡುವ ಚಿನ್ನದ ಪದಕವನ್ನು ಪಡೆದುಕೊಂಡರು. ಮೂವತ್ತು ಶಿಕ್ಷಕ ಶಿಕ್ಷಕಿಯರು ಉತ್ತಮ ಶಿಕ್ಷಕರು ಪ್ರಶಸ್ತಿಗೆ ಭಾಜನರಾದರು. ಈ ಕಾರ್ಯಕ್ರಮದಲ್ಲಿ ಮುಖಂಡರಾದ ಅಬ್ದುಲ್ ಗಪೂರಸಾಬ್, ಬಿ.ಕೆ. ಅಮರೇಶಪ್ಪ, ಜಯಣ್ಷ, ಅಕ್ಬರ್ ಸಾಬ್, ಲಕ್ಷ್ಮೀದೇವಿನಾಯಕ, ಹೆಚ್.ಶರ್ಫುದ್ದೀನ್ ಪೋತ್ನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ದೊಡ್ಡಮನಿ, ಸೈಯದ್ ಖಾಲಿದ್ ಖಾದ್ರಿ, ರಾಜಾರಾಮಚಂದ್ರನಾಯಕ, ಪ್ರಧಾನಕಾರ್ಯದರ್ಶಿ ರಾಜು ತಾಳಿಕೋಟೆ,  ಜಿ.ನಾಗರಾಜ್,  ಶೇಖ್ ಫರೀದ್ ಉಮ್ರಿ, ಮನೋಜ್ ಮಿಶ್ರಾ, ಹೆಚ್.ಅನಿಲಕುಮಾರ, ಹೆಚ್.ಮೌನೇಶಗೌಡ, ಬಿ.ವಿ.ರೆಡ್ಡಿ, ಕೆ.ಈ.ನರಸಿಂಹ, ರವಿಕುಮಾರ ಗೋನಾಳ, ರಾಜಶೇಖರ ಬಿ. ಸೇರಿದಂತೆ ವಿವಿಧ ತಾಲೂಕುಗಳ ಅಧ್ಯಕ್ಷರು, ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು ಇದ್ದರು. ರಾಜು ತಾಳಿಕೋಟೆ ನಿರೂಪಿಸಿದರು, ಶೇಖ್ ಫರೀದ್ ಉಮ್ರಿ ಸ್ವಾಗತಿಸಿದರು, ಎಂ.ಎ.ಎಚ್.ಮುಖೀಂ ವಂದಿಸಿದರು.

6 hrs ago
user_ದೇವು ಬ್ಯಾಗವಾಟ್
ದೇವು ಬ್ಯಾಗವಾಟ್
Local News Reporter ಮಾನ್ವಿ, ರಾಯಚೂರು, ಕರ್ನಾಟಕ•
6 hrs ago
5e1bf5cd-d1ff-4501-9cf3-46443de4def3

ಮಾನ್ವಿ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ, ಸನ್ಮಾನ ಸಮಾರಂಭ ಶೈಕ್ಷಣಿಕ ಪ್ರಗತಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆ ಶ್ಲಾಘನೀಯ : ಎನ್.ಎಸ್.ಬೋಸರಾಜು. ಮಾನ್ವಿ, :  ಶಿಕ್ಷಣ ಕ್ಷೇತ್ರದಲ್ಲಿ ತೀರಾ ಹಿಂದುಳಿದಿರುವ ಭಾಗವಾಗಿರುವ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಉತ್ತಮ ಗುಣಮಟ್ಟದ ಶಿಕ್ಷಣದ ಸೇವೆ ತುಂಬಾ ಶ್ಲಾಘನೀಯ ಎಂದು ಮಾಜಿ ಸಚಿವ ಎನ್.ಎಸ್.ಬೋಸರಾಜು ಪ್ರಶಂಸೆಯನ್ನು ವ್ಯಕ್ತಪಡಿಸಿದರು.ಪಟ್ಟಣದ ಈದ್ಗಾ ಶಾದಿಮಹಲ್ ನಲ್ಲಿಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸರ್ವಪಲ್ಲಿ ರಾಧಾಕೃಷ್ಣನ್ ರ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆ ಎಂದು ಆಚರಿಸುವ ಮೂಲಕ ಶಿಕ್ಷಕರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವಾಗಿದೆ. ಶಿಕ್ಷಕರು ಈ ಭಾಗದ ಶೈಕ್ಷಣಿಕ ಪ್ರಗತಿಗೆ ಖಾಸಗಿ ಸಂಸ್ಥೆಗಳ ಪರಿಶ್ರಮ ಕಾರಣ. ಶಿಕ್ಷಣವನ್ನು ವ್ಯಾಪಾರ ದೃಷ್ಟಿಕೋನದಿಂದ ನೋಡದೆ ಗುಣಮಟ್ಟದ ಶಿಕ್ಷಣ ನೀಡಬೇಕು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸಾವಿರ ಕೋಟಿ ಅನುದಾನ ನೀಡಿದ್ದು, ಅದರಲ್ಲಿ 1125 ಕೋಟಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾಗಿದೆ. 371(ಜೆ) ಕಲಂ, ಮಧ್ಯಾಹ್ನ ಬಿಸಿಯೂಟ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಯುಪಿಎ ಸರ್ಕಾರ ಕಲ್ಪಿಸಿದೆ ಎಂದರು. ಶಾಸಕ ಹಂಪಯ್ಯನಾಯಕ ಸಾಹುಕಾರ ಅವರು ಡಾ.ರಾಧಾಕೃಷ್ಣನ್ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿ ಉತ್ತಮ ಶಿಕ್ಷಕರನ್ನು ಪ್ರೋತ್ಸಾಹಿಸಲು 4 ಜನ ಶಿಕ್ಷಕರಿಗೆ ಬಂಗಾರದ ಪದಕ ಹಾಗೂ 30

d0a37dd6-ef72-41d5-858f-9db81e496877

ಜನರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದೆ. ಮುಂದಿನ ವರ್ಷ ಹತ್ತು ಜನ ಶಿಕ್ಷಕರಿಗೆ ಬಂಗಾರದ ಪದಕ ನೀಡುವ ಗುರಿಯಿದೆ ಎಂದರು. ಶಿಕ್ಷಣದಿಂದ ಮಾತ್ರ ಸಾಮಾಜಿಕ, ಕೌಟುಂಬಿಕ ಮತ್ತು ದೇಶದ ಪ್ರಗತಿ ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವತ್ತ ಗಮನಹರಿಸಿ ಎಂದರು. ಈ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಮಾಜಿ ಶಾಸಕರಾದ ರಾಜಾವೆಂಕಟಪ್ಪನಾಯಕ ಮಾತನಾಡಿದರು. ಝಾ.ಶಿ.ಸಂ.ಒಕ್ಕೂಟದ ಅಧ್ಯಕ್ಷ ರಾಜಾಸುಭಾಶ್ಚಂದ್ರನಾಯಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಂಟು ಚಿನ್ನದ ಪದಕ ಪುರಸ್ಕೃತರು :  ಮೌಂಟೆಸ್ಸರಿ ಶಾಲೆಯ ಕಡುಲಂಗ್ ಗಂಗ್ಮಿ, ಸರ್ವೋದಯ ಶಾಲೆಯ ಎಸ್.ಜೋಸೆಫ್, ಚೌಡೇಶ್ವರಿ ಶಾಲೆಯ ಸುಮಯ್ಯ ಖಾನಮ್, ಡ್ಯಾಫಡಿಲ್ಸ್ ಶಾಲೆಯ ತಪೂರಾ ರಾನಾ ಇವರು ಮಾಜಿಸಚಿವ, ಶಾಸಕರು ನೀಡುವ ಚಿನ್ನದ ಪದಕವನ್ನು ಪಡೆದುಕೊಂಡರು. ಮೂವತ್ತು ಶಿಕ್ಷಕ ಶಿಕ್ಷಕಿಯರು ಉತ್ತಮ ಶಿಕ್ಷಕರು ಪ್ರಶಸ್ತಿಗೆ ಭಾಜನರಾದರು. ಈ ಕಾರ್ಯಕ್ರಮದಲ್ಲಿ ಮುಖಂಡರಾದ ಅಬ್ದುಲ್ ಗಪೂರಸಾಬ್, ಬಿ.ಕೆ. ಅಮರೇಶಪ್ಪ, ಜಯಣ್ಷ, ಅಕ್ಬರ್ ಸಾಬ್, ಲಕ್ಷ್ಮೀದೇವಿನಾಯಕ, ಹೆಚ್.ಶರ್ಫುದ್ದೀನ್ ಪೋತ್ನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ದೊಡ್ಡಮನಿ, ಸೈಯದ್ ಖಾಲಿದ್ ಖಾದ್ರಿ, ರಾಜಾರಾಮಚಂದ್ರನಾಯಕ, ಪ್ರಧಾನಕಾರ್ಯದರ್ಶಿ ರಾಜು ತಾಳಿಕೋಟೆ,  ಜಿ.ನಾಗರಾಜ್,  ಶೇಖ್ ಫರೀದ್ ಉಮ್ರಿ, ಮನೋಜ್ ಮಿಶ್ರಾ, ಹೆಚ್.ಅನಿಲಕುಮಾರ, ಹೆಚ್.ಮೌನೇಶಗೌಡ, ಬಿ.ವಿ.ರೆಡ್ಡಿ, ಕೆ.ಈ.ನರಸಿಂಹ, ರವಿಕುಮಾರ ಗೋನಾಳ, ರಾಜಶೇಖರ ಬಿ. ಸೇರಿದಂತೆ ವಿವಿಧ ತಾಲೂಕುಗಳ ಅಧ್ಯಕ್ಷರು, ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು ಇದ್ದರು. ರಾಜು ತಾಳಿಕೋಟೆ ನಿರೂಪಿಸಿದರು, ಶೇಖ್ ಫರೀದ್ ಉಮ್ರಿ ಸ್ವಾಗತಿಸಿದರು, ಎಂ.ಎ.ಎಚ್.ಮುಖೀಂ ವಂದಿಸಿದರು.

More news from ಕರ್ನಾಟಕ and nearby areas
  • ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ
    4
    ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    18 hrs ago
  • ಯಾದಗಿರಿ ನಾಳೆ ಸೆಪ್ಟೆಂಬರ್ 17 ರಂದು ಸೃಷ್ಟಿಕರ್ತ ಭಗವಾನ್ ವಿಶ್ವಕರ್ಮ ಜಯಂತಿಯ ಶುಭಾಶಯಗಳು ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಇವರ ಶ್ರಮ ದಿಂದ ವಿಶ್ವಕರ್ಮ ಜಯಂತಿಯ ಆಚರಿಸುವಂತೆ ಅದು ಸೆಪ್ಟೆಂಬರ್ 17 ರಂದು ವಿಶ್ವಕರ್ಮರ ಹಬ್ಬ ಅಂತೆ ಮನೆ ಮನೆಯಲ್ಲಿ ವಿಶ್ವಕರ್ಮರು ಭಾವಚಿತ್ರಕ್ಕೆ ಪೂಜ್ಯ ಮಾಡಲು ಸೃಷ್ಟಿಕರ್ತನಾದ ಪ್ರೀತಿ ನಂಜುಂಡಿ ಇವರ ಶ್ರಮ
    1
    ಯಾದಗಿರಿ ನಾಳೆ ಸೆಪ್ಟೆಂಬರ್ 17 ರಂದು ಸೃಷ್ಟಿಕರ್ತ ಭಗವಾನ್ ವಿಶ್ವಕರ್ಮ ಜಯಂತಿಯ ಶುಭಾಶಯಗಳು ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಇವರ ಶ್ರಮ ದಿಂದ ವಿಶ್ವಕರ್ಮ ಜಯಂತಿಯ ಆಚರಿಸುವಂತೆ ಅದು ಸೆಪ್ಟೆಂಬರ್ 17 ರಂದು ವಿಶ್ವಕರ್ಮರ ಹಬ್ಬ ಅಂತೆ ಮನೆ ಮನೆಯಲ್ಲಿ ವಿಶ್ವಕರ್ಮರು ಭಾವಚಿತ್ರಕ್ಕೆ ಪೂಜ್ಯ ಮಾಡಲು ಸೃಷ್ಟಿಕರ್ತನಾದ ಪ್ರೀತಿ ನಂಜುಂಡಿ ಇವರ ಶ್ರಮ
    user_Ramesh Vishwakarma
    Ramesh Vishwakarma
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    1 hr ago
  • ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
    1
    ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ!

ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ.

ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು.

“ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ.

ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ.

ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ!
ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ.
ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು.
“ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ.
ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ.
ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • ಅವೈಜ್ಞಾನಿಕವಾಗಿ ಟೋಲ್ ಗೇಟ್ ನಿರ್ಮಾಣ ಮಾಡಿದ್ದು ತೆರವುಗೊಳಿಸಲು ಆಗ್ರಹ ಅವೈಜ್ಞಾನಿಕವಾಗಿ ಟೋಲ್ ತುರ್ತಾಗಿ ತೆರವುಗೊಳಿಸಿ ಮುಂದಾಗುವ ಅವಘಡಗಳನ್ನು ತಪ್ಪಿಸಲು ಸರ್ಕಾರಗಳು ಮುಂದಾಗಬೇಕು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಒತ್ತಾಯ. ಅವೈಜ್ಞಾನಿಕವಾಗಿ ಟೋಲ್‌ನಿಂದ ಸಾಕಷ್ಟು ಬಡ ಚಾಲಕರು ಜೀವ ಬಲಿಯಾಗಿದ್ದು ಇನ್ನಷ್ಟು ಜೀವ ಬಲಿಯಾಗಬೇಕು ? ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪಿಸಿದ್ದಾರೆ. ಯಾದಗಿರಿ : ಬಡ ವಾಹನ ಚಾಲಕರ ನಿರಂತರ ಜೀವ ತೆಗೆಯುತ್ತಿರುವ ಯಾದಗಿರಿ ರಾಯಚೂರು ಹೆದ್ದಾರಿಗೆ ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲ್‌ನ್ನು ತುರ್ತಾಗಿ ತೆರವುಗೊಳ್ಳಿಸಿ ಇಂದೇ ಆದ ಅನಾವುತಗಳನ್ನು ಇನ್ನು ಮುಂದೇ ಅನಾವುತಗಳನ್ನು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ ಯಾದಗಿರಿ ತಾಲ್ಲೂಕಿನ ಆರ್.ಹೊಸಳ್ಳಿ ಮತ್ತು ನಾಗಲಾಪುರ ಮಧ್ಯದಲ್ಲಿ ಬರುವ ಯಾದಗಿರಿ ರಾಯಚೂರು ಹೋಗುವ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲ್ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಬೇಟಿ ನೀಡಿ ಪರಿಶೀಲಿಸಿದ ನಂತರ ರೈತರ ಮತ್ತು ವಾಹನ ಸವಾರರ ಜೊತೆ ಚರ್ಚಿಸಿ ನಂತರ ದೀಡಿರ್‌ನ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಈ ಟೋಲ್‌ನಲ್ಲಿ ವಿದ್ಯುತ್ ಲೈಟ್, ಸ್ಟೀಕರ್ ಸರಿಯಾಗಿ ಅಳವಡಸದೆ ಅವೈಜ್ಞಾನಿಕವಾಗಿ ನಿರ್ಮಿಸಿ ಈ ಟೋಲ್‌ನಲ್ಲಿ ಈಗಾಗಲೇ ಸಾಕಷ್ಟು ಜೀವಗಳು ಬಲಿಯಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರ ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಳ್ಳದೇ ದಿವ್ಯ ನಿರ್ಲಕ್ಷವಹಿಸಿರುವುದು ಇದು ನಾಚೀಗೇಡಿನ ಸಂಗತಿ ಎಂದು ದಿನ ನಿತ್ಯ ಈ ರಸ್ತೆಯಲ್ಲಿ ಸಾವಿರಾರೂ ವಾಹನಗಳು ಸಂಚಾರ ಮಾಡುತ್ತಿದ್ದು ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲನ ಕಾರಣ ಬಡವ ಜೀವಗಳು ಬಲಿಯಾಗುತ್ತಿದ್ದು ಸಂಬAಧಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತು ಇನ್ನೆಷ್ಟು ಬಡಜೀವಿಗಳನ್ನು ಬಲಿಪಶು ಮಾಡುತ್ತಿದ್ದಿರಿ ಎಂದು ಕಾರವಾಗಿ ಪ್ರಶ್ನಿಸಿದರು. ತಕ್ಷಣ ಟೋಲ್‌ನ್ನು ತೆರವುಗೊಳ್ಳಿಸಿ ಮುಂದಾಗುವ ಅವಗಡಗಳನ್ನು ತಪ್ಪಿಸಲು ಸರ್ಕಾರಗಳು ಮುಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಟೋಲ್ ಸ್ಥಳದಲ್ಲೇ ಮುಖ್ಯ ರಸ್ತೆ ತಡೆದ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರ್ಕಾರಗಳಿಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದೇ ಸಂದರ್ಬದಲ್ಲಿ ಮಲ್ಲೇಶಿ, ಪವನ. ತಿಪ್‌ಣ್ಣ, ಬಸಲಿಂಗಪ್ಪ, ಹಣಮಂತ, ಮರಲಿಂಗಪ್ಪ, ಮಹಾದೇವಪ್ಪ ಮೋನಪ್ಪ ಮಲ್ಲಪ್ಪ ಚಂದ್ರು ಸಿದ್ದು ತಿಮ್ಮಪ್ಪ ಮಲ್ಲಪ್ಪ ಆನಂದ ಭೀಮಪ್ಪ ಮಲ್ಲಪ್ಪ ಸಾಬು ಮಲ್ಲಪ್ಪ ಸೇರಿದಂತೆ ಅನೇಕು ಇದ್ದರು
    2
    ಅವೈಜ್ಞಾನಿಕವಾಗಿ ಟೋಲ್ ಗೇಟ್ ನಿರ್ಮಾಣ ಮಾಡಿದ್ದು ತೆರವುಗೊಳಿಸಲು ಆಗ್ರಹ
ಅವೈಜ್ಞಾನಿಕವಾಗಿ ಟೋಲ್ ತುರ್ತಾಗಿ ತೆರವುಗೊಳಿಸಿ ಮುಂದಾಗುವ ಅವಘಡಗಳನ್ನು ತಪ್ಪಿಸಲು ಸರ್ಕಾರಗಳು ಮುಂದಾಗಬೇಕು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಒತ್ತಾಯ.
ಅವೈಜ್ಞಾನಿಕವಾಗಿ ಟೋಲ್‌ನಿಂದ ಸಾಕಷ್ಟು ಬಡ ಚಾಲಕರು ಜೀವ ಬಲಿಯಾಗಿದ್ದು ಇನ್ನಷ್ಟು ಜೀವ ಬಲಿಯಾಗಬೇಕು ? ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್  ಆರೋಪಿಸಿದ್ದಾರೆ. 
ಯಾದಗಿರಿ : ಬಡ ವಾಹನ ಚಾಲಕರ ನಿರಂತರ ಜೀವ ತೆಗೆಯುತ್ತಿರುವ ಯಾದಗಿರಿ ರಾಯಚೂರು ಹೆದ್ದಾರಿಗೆ ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲ್‌ನ್ನು ತುರ್ತಾಗಿ ತೆರವುಗೊಳ್ಳಿಸಿ ಇಂದೇ ಆದ ಅನಾವುತಗಳನ್ನು ಇನ್ನು ಮುಂದೇ ಅನಾವುತಗಳನ್ನು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ
ಯಾದಗಿರಿ ತಾಲ್ಲೂಕಿನ ಆರ್.ಹೊಸಳ್ಳಿ ಮತ್ತು ನಾಗಲಾಪುರ ಮಧ್ಯದಲ್ಲಿ ಬರುವ ಯಾದಗಿರಿ ರಾಯಚೂರು ಹೋಗುವ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲ್ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಬೇಟಿ ನೀಡಿ ಪರಿಶೀಲಿಸಿದ ನಂತರ ರೈತರ ಮತ್ತು ವಾಹನ ಸವಾರರ ಜೊತೆ ಚರ್ಚಿಸಿ ನಂತರ ದೀಡಿರ್‌ನ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಈ ಟೋಲ್‌ನಲ್ಲಿ ವಿದ್ಯುತ್ ಲೈಟ್, ಸ್ಟೀಕರ್ ಸರಿಯಾಗಿ ಅಳವಡಸದೆ ಅವೈಜ್ಞಾನಿಕವಾಗಿ ನಿರ್ಮಿಸಿ ಈ ಟೋಲ್‌ನಲ್ಲಿ ಈಗಾಗಲೇ ಸಾಕಷ್ಟು ಜೀವಗಳು ಬಲಿಯಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರ ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಳ್ಳದೇ ದಿವ್ಯ ನಿರ್ಲಕ್ಷವಹಿಸಿರುವುದು ಇದು ನಾಚೀಗೇಡಿನ ಸಂಗತಿ ಎಂದು ದಿನ ನಿತ್ಯ ಈ ರಸ್ತೆಯಲ್ಲಿ ಸಾವಿರಾರೂ ವಾಹನಗಳು ಸಂಚಾರ ಮಾಡುತ್ತಿದ್ದು ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲನ ಕಾರಣ ಬಡವ ಜೀವಗಳು ಬಲಿಯಾಗುತ್ತಿದ್ದು ಸಂಬAಧಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತು ಇನ್ನೆಷ್ಟು ಬಡಜೀವಿಗಳನ್ನು ಬಲಿಪಶು ಮಾಡುತ್ತಿದ್ದಿರಿ ಎಂದು ಕಾರವಾಗಿ ಪ್ರಶ್ನಿಸಿದರು.
ತಕ್ಷಣ ಟೋಲ್‌ನ್ನು ತೆರವುಗೊಳ್ಳಿಸಿ ಮುಂದಾಗುವ ಅವಗಡಗಳನ್ನು ತಪ್ಪಿಸಲು ಸರ್ಕಾರಗಳು ಮುಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಟೋಲ್ ಸ್ಥಳದಲ್ಲೇ ಮುಖ್ಯ ರಸ್ತೆ ತಡೆದ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರ್ಕಾರಗಳಿಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದೇ ಸಂದರ್ಬದಲ್ಲಿ ಮಲ್ಲೇಶಿ, ಪವನ. ತಿಪ್‌ಣ್ಣ, ಬಸಲಿಂಗಪ್ಪ, ಹಣಮಂತ, ಮರಲಿಂಗಪ್ಪ, ಮಹಾದೇವಪ್ಪ ಮೋನಪ್ಪ ಮಲ್ಲಪ್ಪ ಚಂದ್ರು ಸಿದ್ದು ತಿಮ್ಮಪ್ಪ ಮಲ್ಲಪ್ಪ ಆನಂದ ಭೀಮಪ್ಪ ಮಲ್ಲಪ್ಪ ಸಾಬು ಮಲ್ಲಪ್ಪ ಸೇರಿದಂತೆ ಅನೇಕು ಇದ್ದರು
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    4 hrs ago
  • ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ. ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ. ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.
    2
    ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ.
ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ.
ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    25 min ago
  • ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ ವಿಘ್ನನಿವಾರಕನ ವಿಸಜ೯ನೆ ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ ಗಣೇಶನನ್ನ ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.
    3
    ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ  ವಿಘ್ನನಿವಾರಕನ ವಿಸಜ೯ನೆ

ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ  ಗಣೇಶನನ್ನ
ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಪ್ರತಿಭಟನೆ ಮಸ್ಕಿ: ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರು ಮಾತನಾಡಿದರು , ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ED ದಾಳಿಯನ್ನು ಖಂಡಿಸಿ, ವಾಲ್ಮೀಕಿ ಸಮಾಜದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಶುಕ್ರವಾರ 18ರಂದು ಮಸ್ಕಿ ಪಟ್ಟಣದ ವಾಲ್ಮೀಕಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಮಸ್ಕಿ ಹಳೆ ಬಸ್ ನಿಲ್ದಾಣದ ಅಂಬೇಡ್ಕರ್ ಸರ್ಕಲ್‌ವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ED ದಾಳಿ ರಾಜಕೀಯ ಉದ್ದೇಶದಿಂದ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಬೇಕು ಭೀಮಣ್ಣ ನಾಯಕ ಕರೆ ನೀಡಿದರು. ಸಭೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
    1
    ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ 
ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಪ್ರತಿಭಟನೆ
ಮಸ್ಕಿ: ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರು ಮಾತನಾಡಿದರು , ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ED ದಾಳಿಯನ್ನು ಖಂಡಿಸಿ, ವಾಲ್ಮೀಕಿ ಸಮಾಜದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಶುಕ್ರವಾರ 18ರಂದು ಮಸ್ಕಿ ಪಟ್ಟಣದ ವಾಲ್ಮೀಕಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಮಸ್ಕಿ ಹಳೆ ಬಸ್ ನಿಲ್ದಾಣದ ಅಂಬೇಡ್ಕರ್ ಸರ್ಕಲ್‌ವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ED ದಾಳಿ ರಾಜಕೀಯ ಉದ್ದೇಶದಿಂದ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಬೇಕು ಭೀಮಣ್ಣ  ನಾಯಕ  ಕರೆ ನೀಡಿದರು.
ಸಭೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
    user_ಹನುಮೇಶ ನಾಯಕ್
    ಹನುಮೇಶ ನಾಯಕ್
    ಮಾಸ್ಕಿ, ರಾಯಚೂರು, ಕರ್ನಾಟಕ•
    12 hrs ago
  • ಶಾರ್ಟ್ ಸರ್ಕ್ಯೂಟ್‌ಗೆ 7.5 ಎಕರೆ ಕಬ್ಬು ಬೆಂಕಿಗಾಹುತಿ; ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ಬೆಣ್ಣೂರ (ಬಿ) ಗ್ರಾಮದಲ್ಲಿ ಟ್ರಾನ್ಸ್‌ಫಾರ್ಮರ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನ ಪರಿಣಾಮ ಸುಮಾರು 7.5 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಗ್ರಾಮದ ಜಗದೇವಿ ಈಶ್ವರಪ್ಪ ಬೆನಕನಹಳ್ಳಿ ಹಾಗೂ ಸಿದ್ಧಲಿಂಗ ಬೆನಕನಹಳ್ಳಿ ಅವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿ ಬೆಳೆ ಸಂಪೂರ್ಣ ಸುಟ್ಟುಹೋಗಿದೆ. ಟ್ರಾನ್ಸ್‌ಫಾರ್ಮರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮವೇ ಅವಘಡ ಸಂಭವಿಸಿದೆ ಎಂದು ರೈತರು ಆರೋಪಿಸಿದ್ದು, ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿದ್ದಾರೆ. ಘಟನೆಯ ಮಾಹಿತಿ ತಿಳಿದು ಕಾಳಗಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಜಮೀನು ಹಾಗೂ ನಾಶವಾದ ಬೆಳೆಯ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿದರು. ಈ ಕುರಿತು ಆಲ್ ಇಂಡಿಯಾ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ ಮಾತನಾಡಿ, ಬೆಂಕಿ ಅವಘಡದಿಂದ ನಷ್ಟ ಅನುಭವಿಸಿದ ರೈತರಿಗೆ ತಲಾ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಜೆಸ್ಕಾಂ ಇಲಾಖೆ ಸಮಗ್ರ ತನಿಖೆ ನಡೆಸಿ ವಿಶೇಷ ಪರಿಹಾರ ಘೋಷಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ವಿದ್ಯುತ್ ಮಾರ್ಗಗಳ ಸುರಕ್ಷತಾ ಪರಿಶೀಲನೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. #Kalaburagi #ಕಲಬುರಗಿ #ಕಾಳಗಿ #Bennur #ಕಬ್ಬುಬೆಳೆ #ರೈತರು #ಶಾರ್ಟ್ಸರ್ಕ್ಯೂಟ್ #ಜೆಸ್ಕಾಂ #ಬೆಂಕಿಅವಘಡ #ರೈತನಷ್ಟ #ಪರಿಹಾರ #YadgirNews ಶಾರ್ಟ್ ಸರ್ಕ್ಯೂಟ್‌ಗೆ 7.5 ಎಕರೆ ಕಬ್ಬು ಬೆಂಕಿಗಾಹುತಿ; ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ಬೆಣ್ಣೂರ (ಬಿ) ಗ್ರಾಮದಲ್ಲಿ ಟ್ರಾನ್ಸ್‌ಫಾರ್ಮರ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನ ಪರಿಣಾಮ ಸುಮಾರು 7.5 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಗ್ರಾಮದ ಜಗದೇವಿ ಈಶ್ವರಪ್ಪ ಬೆನಕನಹಳ್ಳಿ ಹಾಗೂ ಸಿದ್ಧಲಿಂಗ ಬೆನಕನಹಳ್ಳಿ ಅವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿ ಬೆಳೆ ಸಂಪೂರ್ಣ ಸುಟ್ಟುಹೋಗಿದೆ. ಟ್ರಾನ್ಸ್‌ಫಾರ್ಮರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮವೇ ಅವಘಡ ಸಂಭವಿಸಿದೆ ಎಂದು ರೈತರು ಆರೋಪಿಸಿದ್ದು, ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿದ್ದಾರೆ. ಘಟನೆಯ ಮಾಹಿತಿ ತಿಳಿದು ಕಾಳಗಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಜಮೀನು ಹಾಗೂ ನಾಶವಾದ ಬೆಳೆಯ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿದರು. ಈ ಕುರಿತು ಆಲ್ ಇಂಡಿಯಾ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ ಮಾತನಾಡಿ, ಬೆಂಕಿ ಅವಘಡದಿಂದ ನಷ್ಟ ಅನುಭವಿಸಿದ ರೈತರಿಗೆ ತಲಾ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಜೆಸ್ಕಾಂ ಇಲಾಖೆ ಸಮಗ್ರ ತನಿಖೆ ನಡೆಸಿ ವಿಶೇಷ ಪರಿಹಾರ ಘೋಷಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ವಿದ್ಯುತ್ ಮಾರ್ಗಗಳ ಸುರಕ್ಷತಾ ಪರಿಶೀಲನೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. #Kalaburagi #ಕಲಬುರಗಿ #ಕಾಳಗಿ #Bennur #ಕಬ್ಬುಬೆಳೆ #ರೈತರು #ಶಾರ್ಟ್ಸರ್ಕ್ಯೂಟ್ #ಜೆಸ್ಕಾಂ #ಬೆಂಕಿಅವಘಡ #ರೈತನಷ್ಟ #ಪರಿಹಾರ #YadgirNews
    1
    ಶಾರ್ಟ್ ಸರ್ಕ್ಯೂಟ್‌ಗೆ 7.5 ಎಕರೆ ಕಬ್ಬು ಬೆಂಕಿಗಾಹುತಿ; ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ

ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ಬೆಣ್ಣೂರ (ಬಿ) ಗ್ರಾಮದಲ್ಲಿ ಟ್ರಾನ್ಸ್‌ಫಾರ್ಮರ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನ ಪರಿಣಾಮ ಸುಮಾರು 7.5 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಗ್ರಾಮದ ಜಗದೇವಿ ಈಶ್ವರಪ್ಪ ಬೆನಕನಹಳ್ಳಿ ಹಾಗೂ ಸಿದ್ಧಲಿಂಗ ಬೆನಕನಹಳ್ಳಿ ಅವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿ ಬೆಳೆ ಸಂಪೂರ್ಣ ಸುಟ್ಟುಹೋಗಿದೆ.
ಟ್ರಾನ್ಸ್‌ಫಾರ್ಮರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮವೇ ಅವಘಡ ಸಂಭವಿಸಿದೆ ಎಂದು ರೈತರು ಆರೋಪಿಸಿದ್ದು, ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿದ್ದಾರೆ.
ಘಟನೆಯ ಮಾಹಿತಿ ತಿಳಿದು ಕಾಳಗಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಜಮೀನು ಹಾಗೂ ನಾಶವಾದ ಬೆಳೆಯ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿದರು.
ಈ ಕುರಿತು ಆಲ್ ಇಂಡಿಯಾ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ ಮಾತನಾಡಿ, ಬೆಂಕಿ ಅವಘಡದಿಂದ ನಷ್ಟ ಅನುಭವಿಸಿದ ರೈತರಿಗೆ ತಲಾ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಜೆಸ್ಕಾಂ ಇಲಾಖೆ ಸಮಗ್ರ ತನಿಖೆ ನಡೆಸಿ ವಿಶೇಷ ಪರಿಹಾರ ಘೋಷಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ವಿದ್ಯುತ್ ಮಾರ್ಗಗಳ ಸುರಕ್ಷತಾ ಪರಿಶೀಲನೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
#Kalaburagi #ಕಲಬುರಗಿ #ಕಾಳಗಿ #Bennur #ಕಬ್ಬುಬೆಳೆ #ರೈತರು #ಶಾರ್ಟ್ಸರ್ಕ್ಯೂಟ್ #ಜೆಸ್ಕಾಂ #ಬೆಂಕಿಅವಘಡ #ರೈತನಷ್ಟ #ಪರಿಹಾರ #YadgirNews
ಶಾರ್ಟ್ ಸರ್ಕ್ಯೂಟ್‌ಗೆ 7.5 ಎಕರೆ ಕಬ್ಬು ಬೆಂಕಿಗಾಹುತಿ; ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ
ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ಬೆಣ್ಣೂರ (ಬಿ) ಗ್ರಾಮದಲ್ಲಿ ಟ್ರಾನ್ಸ್‌ಫಾರ್ಮರ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನ ಪರಿಣಾಮ ಸುಮಾರು 7.5 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಗ್ರಾಮದ ಜಗದೇವಿ ಈಶ್ವರಪ್ಪ ಬೆನಕನಹಳ್ಳಿ ಹಾಗೂ ಸಿದ್ಧಲಿಂಗ ಬೆನಕನಹಳ್ಳಿ ಅವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿ ಬೆಳೆ ಸಂಪೂರ್ಣ ಸುಟ್ಟುಹೋಗಿದೆ.
ಟ್ರಾನ್ಸ್‌ಫಾರ್ಮರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮವೇ ಅವಘಡ ಸಂಭವಿಸಿದೆ ಎಂದು ರೈತರು ಆರೋಪಿಸಿದ್ದು, ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿದ್ದಾರೆ.
ಘಟನೆಯ ಮಾಹಿತಿ ತಿಳಿದು ಕಾಳಗಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಜಮೀನು ಹಾಗೂ ನಾಶವಾದ ಬೆಳೆಯ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿದರು.
ಈ ಕುರಿತು ಆಲ್ ಇಂಡಿಯಾ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ ಮಾತನಾಡಿ, ಬೆಂಕಿ ಅವಘಡದಿಂದ ನಷ್ಟ ಅನುಭವಿಸಿದ ರೈತರಿಗೆ ತಲಾ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಜೆಸ್ಕಾಂ ಇಲಾಖೆ ಸಮಗ್ರ ತನಿಖೆ ನಡೆಸಿ ವಿಶೇಷ ಪರಿಹಾರ ಘೋಷಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ವಿದ್ಯುತ್ ಮಾರ್ಗಗಳ ಸುರಕ್ಷತಾ ಪರಿಶೀಲನೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
#Kalaburagi #ಕಲಬುರಗಿ #ಕಾಳಗಿ #Bennur #ಕಬ್ಬುಬೆಳೆ #ರೈತರು #ಶಾರ್ಟ್ಸರ್ಕ್ಯೂಟ್ #ಜೆಸ್ಕಾಂ #ಬೆಂಕಿಅವಘಡ #ರೈತನಷ್ಟ #ಪರಿಹಾರ #YadgirNews
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    5 hrs ago
  • ನಾಳೆ ಅದ್ದೂರಿಯಾಗಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಕರೆ. ಕುಷ್ಟಗಿ : ನಾಳೆ ಸೆಪ್ಟೆಂಬರ್ 17 ನಮ್ಮ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನ! ನಾಳೆ ನಾವು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣವೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ಹೇಳಿದರು. 1947ರಲ್ಲಿ ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ, ನಮ್ಮ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರದ ಜನತೆ ನಿಜಾಮರ ಹಾಗೂ ರಜಾಕಾರರ ಕೌರ್ಯವನ್ನು ಎದುರಿಸಬೇಕಾಯಿತು. ಭಾರತ ಸರ್ಕಾರದ ‘ಆಪರೇಷನ್ ಪೋಲೋ’ ಕಾರ್ಯಾಚರಣೆಯ ಫಲವಾಗಿ, 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. ಈ ಮಹಾನ್ ವಿಮೋಚನೆಗಾಗಿ ಹೋರಾಡಿ, ತ್ಯಾಗ ಮತ್ತು ಬಲಿದಾನ ನೀಡಿದ ಪ್ರತಿಯೊಬ್ಬ ಅಮರ ವೀರರಿಗೂ, ಸ್ವಾತಂತ್ರ್ಯ ಹೋರಾಟಗಾರರಿಗೂ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳು. ನಾಳೆ ಪ್ರತಿಯೊಬ್ಬರೂ ನಮ್ಮ ನಾಡಿನ ಈ ಐತಿಹಾಸಿಕ ದಿನವನ್ನು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ, ಪ್ರತಿಯೊಂದು ಮನೆಯಲ್ಲೂ, ಪ್ರತಿಯೊಂದು ಊರಲ್ಲೂ ಅತ್ಯಂತ ಅದ್ಧೂರಿಯಾಗಿ ಆಚರಿಸೋಣ. ಈ ಭಾಗದ ಶಿಕ್ಷಣ, ಉದ್ಯೋಗ, ನೀರಾವರಿ ಹಾಗೂ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುವ ಸಂಕಲ್ಪ ಮಾಡೋಣ ಎಂದು ಶಾಸಕರು ಕರೆ ನೀಡಿದರು.
    2
    ನಾಳೆ ಅದ್ದೂರಿಯಾಗಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಕರೆ.
ಕುಷ್ಟಗಿ : ನಾಳೆ ಸೆಪ್ಟೆಂಬರ್ 17 ನಮ್ಮ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನ! ನಾಳೆ ನಾವು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣವೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ಹೇಳಿದರು. 
1947ರಲ್ಲಿ ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ, ನಮ್ಮ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರದ ಜನತೆ ನಿಜಾಮರ ಹಾಗೂ ರಜಾಕಾರರ ಕೌರ್ಯವನ್ನು ಎದುರಿಸಬೇಕಾಯಿತು. ಭಾರತ ಸರ್ಕಾರದ ‘ಆಪರೇಷನ್ ಪೋಲೋ’ ಕಾರ್ಯಾಚರಣೆಯ ಫಲವಾಗಿ, 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. 
ಈ ಮಹಾನ್ ವಿಮೋಚನೆಗಾಗಿ ಹೋರಾಡಿ, ತ್ಯಾಗ ಮತ್ತು ಬಲಿದಾನ ನೀಡಿದ ಪ್ರತಿಯೊಬ್ಬ ಅಮರ ವೀರರಿಗೂ, ಸ್ವಾತಂತ್ರ್ಯ ಹೋರಾಟಗಾರರಿಗೂ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳು. 
ನಾಳೆ ಪ್ರತಿಯೊಬ್ಬರೂ ನಮ್ಮ ನಾಡಿನ ಈ ಐತಿಹಾಸಿಕ ದಿನವನ್ನು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ, ಪ್ರತಿಯೊಂದು ಮನೆಯಲ್ಲೂ, ಪ್ರತಿಯೊಂದು ಊರಲ್ಲೂ ಅತ್ಯಂತ ಅದ್ಧೂರಿಯಾಗಿ ಆಚರಿಸೋಣ. ಈ ಭಾಗದ ಶಿಕ್ಷಣ, ಉದ್ಯೋಗ, ನೀರಾವರಿ ಹಾಗೂ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುವ ಸಂಕಲ್ಪ ಮಾಡೋಣ ಎಂದು ಶಾಸಕರು ಕರೆ ನೀಡಿದರು.
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.