Shuru
Apke Nagar Ki App…
ಕರ್ನಾಟಕ ರಾಜ್ಯದ ಮಂತ್ರಿಗಳ ಕೆ ಹೆಚ್ ಮುನಿಯಪ್ಪ ಅವರು ಬಾಗೇಪಲ್ಲಿ ಶಾಸಕರಾದ ಶ್ರೀ ಎನ್.ಎಸ್. ಸುಬ್ಬಾರೆಡ್ಡಿ ಅವರ ಚಾರಿಟಬಲ್ ಟ್ರಸ್ಟ್ ವತಿಯಿಂದ ಗಡಿದಂ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಸನ್ನಿಧಿಯಲ್ಲಿ ಆಯೋಜಿಸಿದ್ದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 23ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ನವದಂಪತಿಗಳಿಗೆ ಶುಭಹಾರೈಸಲಾಯಿತು.
Shashi Kumar
ಕರ್ನಾಟಕ ರಾಜ್ಯದ ಮಂತ್ರಿಗಳ ಕೆ ಹೆಚ್ ಮುನಿಯಪ್ಪ ಅವರು ಬಾಗೇಪಲ್ಲಿ ಶಾಸಕರಾದ ಶ್ರೀ ಎನ್.ಎಸ್. ಸುಬ್ಬಾರೆಡ್ಡಿ ಅವರ ಚಾರಿಟಬಲ್ ಟ್ರಸ್ಟ್ ವತಿಯಿಂದ ಗಡಿದಂ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಸನ್ನಿಧಿಯಲ್ಲಿ ಆಯೋಜಿಸಿದ್ದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 23ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ನವದಂಪತಿಗಳಿಗೆ ಶುಭಹಾರೈಸಲಾಯಿತು.
More news from ಕರ್ನಾಟಕ and nearby areas
- ಶಿಡ್ಲಘಟ್ಟ ದಲ್ಲಿ ಭೀಕರ ಅಪಘಾತ ಒಬ್ಬ ವ್ಯಕ್ತಿ ಸಾವು ಮತ್ತೊಬ್ಬ ಗಂಬೀರ ಟಾಕ್ಸಿಕ್ ಸಿನಿಮಾ ನೋಡಲು ಹೋದಾಗ ನಡೆದ ಘಟನೆ1
- ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು1
- ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಉರುಸ್ ಮಹೋತ್ಸವ ಶಾಂತಿ,ಸೌಹಾರ್ದತೆಗೆ ಪ್ರಾರ್ಥಿಸಿದ:ದರ್ಗಾದಲ್ಲಿ ಜೆ.ಕೆ. ಕೃಷ್ಣಾರೆಡ್ಡಿ ವಿಶೇಷ ಪೂಜೆ1
- ಈದ್ ಮಿಲಾದ್ ಅಂಗವಾಗಿ ಹೊಸಕೋಟೆಯಲ್ಲಿ ಬೃಹತ್ ಮೆರವಣಿಗೆ ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಹೊಸಕೋಟೆ: ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಅದ್ದೂರಿ ಬೃಹತ್ ಮೆರವಣಿಗೆ ನಡೆಯಿತು. ನಗರದ ಹಳೆ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ, ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು. ಜಾಮೀಯಾ ಮಸೀದಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಮುಸ್ಲಿಂ ಮುಖಂಡರು ನೇತೃತ್ವ ವಹಿಸಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಡಿವೈಎಸ್ಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.4
- ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ 9 ವರ್ಷಗಳ ಕಾಲ ಗ್ರಾಮಸ್ಥರು ಕಂಡಿದ್ದ ಕನಸು ಇದೀಗ ನನಸಾಗಿದೆ. ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ನೂತನ ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮಠಾಧೀಶರು, ಗಣ್ಯರು ಹಾಗೂ ಸಹಸ್ರಾರು ಭಕ್ತರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಾಯ್ಸ್ ಓವರ್: ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ಗ್ರಾಮಸ್ಥರ ಸುಮಾರು 9 ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿರುವ ನೂತನ ದೇವಸ್ಥಾನವು ಗ್ರಾಮಸ್ಥರ ಭಕ್ತಿ ಮತ್ತು ಒಗ್ಗಟ್ಟಿಗೆ ಸಾಕ್ಷಿಯಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ಎಲೆರಾಂಪುರ ಮಠದ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಹಾಗೂ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಿ ಕುಬೇರ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ದೇವಸ್ಥಾನವನ್ನು ಉದ್ಘಾಟಿಸಿದರು. ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ: ಪ್ರತಿಯೊಂದು ಹಳ್ಳಿಯಲ್ಲೂ ಸಿರಿವಂತರು ಹಾಗೂ ಅನುಕೂಲಸ್ಥರು ತಮ್ಮ ಒಳ್ಳೆಯ ಮನಸ್ಸಿನಿಂದ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ದೇವಸ್ಥಾನಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿದ್ದು, ಇದೇ ರೀತಿ ಪ್ರತಿಯೊಂದು ಗ್ರಾಮದಲ್ಲೂ ಉತ್ತಮ ಶಾಲೆಗಳಿರಬೇಕು. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಆಚಾರ-ವಿಚಾರಗಳ ಅರಿವು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಸಮಾಜದ ಮೇಲಿದೆ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸುಸ್ಥಿರ ಬದಲಾವಣೆ ಸಾಧ್ಯ ಎಂದರು. ಉದ್ಯಮಿ ನೀಲೇಶ್ ಮಾತನಾಡಿ: ನಾವು ಎಲ್ಲೇ ಇದ್ದರೂ, ಹೇಗೆ ಇದ್ದರೂ, ನಾವು ಹುಟ್ಟಿದ ಗ್ರಾಮವನ್ನು ಮರೆಯಬಾರದು. ನಮ್ಮ ಗ್ರಾಮಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮಗಳ ಅಭಿವೃದ್ಧಿಗೆ ಆರ್ಥಿಕ ಸಹಾಯದ ಜೊತೆಗೆ ಸಮಯ, ಶ್ರಮ ಹಾಗೂ ಮಾರ್ಗದರ್ಶನ ನೀಡುವ ಮೂಲಕವೂ ಸೇವೆ ಸಲ್ಲಿಸಬಹುದು. ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಡಾ. ಹನುಮಂತನಾಥ ಸ್ವಾಮೀಜಿ ಆಶೀರ್ವಚನ ನೀಡಿ: 48 ದಿನಗಳ ಕಾಲ ನಿಷ್ಠೆ, ಭಕ್ತಿ ಮತ್ತು ಶ್ರದ್ಧೆಯಿಂದ ಗಣೇಶನ ಪೂಜೆ ಮಾಡಿದರೆ ಭಗವಂತನ ಅನುಗ್ರಹ ದೊರೆಯುತ್ತದೆ. ಆದರೆ ದೇವರ ಅನುಗ್ರಹ ಪಡೆಯುವ ಜೊತೆಗೆ ತಂದೆ-ತಾಯಿಯ ಸೇವೆ ಮಾಡುವುದು ಅತ್ಯಂತ ಮುಖ್ಯ. ಹಿರಿಯರನ್ನು ಗೌರವಿಸಿ, ಸತ್ಯ, ಧರ್ಮ ಹಾಗೂ ನೀತಿಯ ಮಾರ್ಗದಲ್ಲಿ ಜೀವನ ನಡೆಸಬೇಕು. ಭಕ್ತಿ ನಮ್ಮ ಬದುಕಿಗೆ ದಾರಿ ತೋರಿಸುವ ಶಕ್ತಿಯಾಗಬೇಕು ಎಂದು ತಿಳಿಸಿದರು. ಶ್ರೀ ವೀರ ಬಸವಲಿಂಗ ಸ್ವಾಮೀಜಿ ಮಾತನಾಡಿ: ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲ, ಸಂಸ್ಕಾರವಂತರನ್ನಾಗಿಯೂ ಬೆಳೆಸಬೇಕು. ಮೊಬೈಲ್ ಮತ್ತು ಟಿವಿಯ ಬಳಕೆಯನ್ನು ಕಡಿಮೆ ಮಾಡಿ, ಮಕ್ಕಳಿಗೆ ಕುಟುಂಬದ ಮೌಲ್ಯಗಳನ್ನು ಕಲಿಸಬೇಕು. ‘ಎ’ ಎಂದರೆ ಅಪ್ಪ-ಅಮ್ಮ, ‘ಬಿ’ ಎಂದರೆ ಬಂಧು-ಬಳಗ ಎಂಬಂತೆ ಸಂಬಂಧಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ತಂದೆ-ತಾಯಿ, ಗುರುಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಬೆಳೆಸಬೇಕು ಎಂದು ಕರೆ ನೀಡಿದರು. ಉದ್ಯಮಿ ಶ್ರೀನಾಗ್ ಮಾತನಾಡಿ: ಸಂಕೇನಹಳ್ಳಿ ಗ್ರಾಮದಲ್ಲಿ ‘ಕುಬೇರ ಗಣಪತಿ’ ಎಂಬ ಹೆಸರು ಬರಲು ಪ್ರಮುಖ ಕಾರಣ ಗ್ರಾಮಸ್ಥರ ಭಕ್ತಿ, ಒಗ್ಗಟ್ಟು ಮತ್ತು ಸಂಕಲ್ಪ. ಗ್ರಾಮಸ್ಥರೆಲ್ಲರೂ ಒಂದಾಗಿ ನಿಂತು ದೇವಸ್ಥಾನದ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಇದು ಕೇವಲ ದೇವಸ್ಥಾನವಲ್ಲ, ಗ್ರಾಮದ ಜನರ ಒಗ್ಗಟ್ಟಿನ ಪ್ರತೀಕವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗೆ ಶ್ರಮಿಸೋಣ ಎಂದರು. ವಾಯ್ಸ್ ಓವರ್: ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಕೇನಹಳ್ಳಿ, ಗೋಕುಲ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕುಬೇರ ಗಣಪತಿಯ ದರ್ಶನ ಪಡೆದು ಪುನೀತರಾದರು. ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರಿಂದ ಇಡೀ ಸಂಕೇನಹಳ್ಳಿ ಗ್ರಾಮವು ಹಬ್ಬದ ವಾತಾವರಣದಲ್ಲಿ ಕಂಗೊಳಿಸಿತು. ಆಂಕರ್ ಔಟ್ರೋ: ಒಂಬತ್ತು ವರ್ಷಗಳ ಗ್ರಾಮಸ್ಥರ ಕನಸು ನನಸಾಗಿದ್ದು, ನೂತನ ಕುಬೇರ ಗಣಪತಿ ದೇವಸ್ಥಾನ ಇದೀಗ ಭಕ್ತರ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಿದೆ. ಗ್ರಾಮಸ್ಥರ ಒಗ್ಗಟ್ಟು ಮತ್ತು ಭಕ್ತಿಗೆ ಈ ದೇವಸ್ಥಾನ ಸಾಕ್ಷಿಯಾಗಿದೆ.3
- ಎಂ. ಶ್ರೀನಿವಾಸನ್ ಸ್ಮರಣಾರ್ಥ ಆ.27ರಂದು ಶ್ರೀನಿವಾಸಪುರದಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಸಹಾಯಧನ ಪ್ರತಿ ಹೋಬಳಿಯ ಇಬ್ಬರು ಬಡ ಎಸ್‌ಸಿ ವಿದ್ಯಾರ್ಥಿಗಳಿಗೆ ನೆರವು.1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ1