ಲೇಖಕ ಶ್ರೀನಿವಾಸ ಪ್ರಸಾದ್ ಅವರ "ಬಿದ್ದು ಮೇಲೆದ್ದವರು" ಕೃತಿ ಬಿಡುಗಡೆ: ಸ್ವಾರ್ಥಕ್ಕಾಗಿ ಬರವಣಿಗೆಯ ಬಳಕೆ ಅಪಾಯಕಾರಿ-ಅನಂತರಾಂ ಕೋಲಾರ:ಇತ್ತೀಚೆಗೆ ಸ್ವಾರ್ಥ ಮತ್ತು ಅಧಿಕಾರದ ಹುದ್ದೆ ಗಿಟ್ಟಿಸುವ ಸಲುವಾಗಿ ಬರವಣಿಗೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವ ಸಾಹಿತಿಗಳೇ ಹೆಚ್ಚಾಗಿದ್ದಾರೆ ಎಂದು ಮನ್ವಂತರ ಸಂಸ್ಥೆಯ ಅಧ್ಯಕ್ಷ ಪಾ.ಶ್ರೀ.ಅನಂತರಾಂ ನುಡಿದರು. ನಗರದ ಪತ್ರಕರ್ತರ ಭವನದಲ್ಲಿ ಉಪನ್ಯಾಸಕ ಡಾ.ಬಿ.ಎಸ್.ಶ್ರೀನಿವಾಸ ಪ್ರಸಾದ್ ಅವರ 53ನೇ ಕೃತಿ "ಬಿದ್ದು ಮೇಲೆದ್ದವರು" ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬರವಣಿಗೆಯಲ್ಲಿ ಬದ್ಧತೆ, ಹುರುಳು ತಿರುಳುಗಳು ಇಲ್ಲದಿದ್ದರೂ ಪ್ರಚಾರ ಗಿಟ್ಟಿಸಲು ಪುಸ್ತಕ ಬರೆಯಬೇಕೆಂಬ ಹುಚ್ಚಿನಲ್ಲಿ ಬರೆದು ರಾಜಕಾರಣಿಗಳ ಬಳಿ ಲಾಬಿ ಮಾಡಿ ಸಾಹಿತಿಗಳ ಕೋಟಾದಲ್ಲಿ ಲಾಭ ಪಡೆದುಕೊಳ್ಳುವವರ ಸಂಖ್ಯೆ ಮಿತಿಮೀರಿದೆ ಇಂದು ವಿಷಾದಿಸಿದ ಅವರು ಇಂತಹವರ ಸಾಲಿಗೆ ಸೇರದೆ ಶ್ರೀನಿವಾಸ್‌ಪ್ರಸಾದ್ ಬರವಣಿಗೆಯನ್ನು ಸಮಾಜಮುಖಿಯಾಗಿ ಬಳಸಿ ಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಕೃತಿಯ ಕುರಿತು ಮಾತನಾಡಿದ ಹಿರಿಯ ಪತ್ರಕರ್ತ ಬಿ.ವಿ.ಗೋಪಿನಾಥ್ ಪ್ರತಿ ಮನೆಯಲ್ಲಿ ಇರಿಸಿಕೊಂಡು ಮಕ್ಕಳಿಗೆ ಓದಿಸಿ ಅವರಲ್ಲಿ ಬದುಕಿನ ಧೈರ್ಯ ಮತ್ತು ಧೈರ್ಯ ಬಳಸುವ ನಿಟ್ಟಿನಲ್ಲಿ ಬಿದ್ದು ಮೇಲೆದ್ದವರು ಪುಸ್ತಕ ಸಂಗ್ರಹ ಯೋಗ್ಯವಾಗಿದೆ ಎಂದು ನುಡಿದರು. ಮಕ್ಕಳನ್ನು ಅಂಕ ಗಳಿಕೆಯ ಯಂತ್ರಗಳಾಗಿ ಮಾರ್ಪಡಿಸ ಲಾಗುತ್ತಿದೆಯೇ ಹೊರತು ಅವರಲ್ಲಿ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸುತ್ತಿಲ್ಲ. ಇದರಿಂದಾಗಿಯೇ ಐಎಎಸ್ ಐಪಿಎಸ್ ಓದಿದವರು ಸಹ ಸಣ್ಣ ಸಮಸ್ಯೆಯನ್ನೂ ಎದುರಿಸಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಹೇಳಿದರು. ಜೀವನದಲ್ಲಿ ಎಂತಹ ಕಷ್ಟ ನಷ್ಟ ಮತ್ತು ಸವಾಲುಗಳನ್ನು ಎದುರಿಸಿದರೂ ಎದೆಗುಂದದೆ ತಮ್ಮ ಸಾಧನೆಯ ಮೂಲಕ ಜಗತ್ತಿನ ಗಮನ ಸೆಳೆದಿರುವ 50 ಮಂದಿ ಸಾಧಕರ ಪರಿಚಯಾತ್ಮಕ ಪುಸ್ತಕ ಬಿದ್ದು ಮೇಲೆದ್ದವರು ಶಾಲೆಗಳಲ್ಲಿ ಪಠ್ಯವಾಗಲೂ ಅರ್ಹವಾಗಿದೆ. ಮನೆ ಮನೆಗಳಲ್ಲಿ ಇರಿಸಿ ಮಕ್ಕಳಿಗೆ ಬದುಕಿನ ಮಾರ್ಗದರ್ಶಿಯಾಗಿ ಬಳಕೆ ಮಾಡಿಕೊಳ್ಳುವಂತಿದೆ ಎಂದು ಬಣ್ಣಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ಜಿ.ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟಿಸಿ ಸಾಧಕರ ಬದುಕು ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಬೇಕು ಎಂದರು. ಪತ್ರಕರ್ತ ಕೆ.ಎಸ್.ಗಣೇಶ್ ಮಾತನಾಡಿ ಸದಾ ಒಂದಿಲ್ಲೊಂದು ಪುಸ್ತಕ ಬಿಡುಗಡೆಯ ಮೂಲಕ ಸಾಹಿತ್ಯ ವಲಯದಲ್ಲಿ ಕ್ರಿಯಾಶೀಲರಾಗಿರುವ ಶ್ರೀನಿವಾಸಪ್ರಸಾದ್ ಬರವಣಿಗೆ ನಿರಂತರ ಮುಂದುವರೆಯಲಿ ಎಂದರು. ಲೇಖಕ ಶ್ರೀನಿವಾಸಪ್ರಸಾದ್ ಮಾತನಾಡಿ ಹಣ ಸಂಪಾದನೆ ಅಥವಾ ಯಾವುದೇ ರೀತಿಯ ಸ್ವಾರ್ಥಕ್ಕಾಗಿ ಪುಸ್ತಕಗಳನ್ನು ಬರೆಯುತ್ತಿಲ್ಲ. ಬರವಣಿಗೆ ಮೂಲಕ ಸಮಾಜಕ್ಕೆ ಅನುಕೂಲ ಆಗಬೇಕು ಎಂಬುದೇ ನನ್ನ ಧ್ಯೇಯ. ಕೊನೆಗಾಲದವರೆಗೂ ಇದನ್ನು ಉಳಿಸಿಕೊಂಡು ಹೋಗುವೆ ಎಂದು ನುಡಿದರು. ಬೆಮೆಲ್ ಜಯಸಿಂಹ, ಪ್ರಾಧ್ಯಾಪಕ ಡಾ.ಮುರಳಿಧರ್, ಉಪನ್ಯಾಸಕಿ ವಾಣಿಶ್ರೀ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ನಾಗನಂದ ಕೆಂಪರಾಜ್, ಜ್ಞಾನ ವಿಜ್ಞಾನ ಸಮಿತಿಯ ಪದ್ಮಾವತಿ, ನಿರೂಪಕಿ ಸ್ಪೂರ್ತಿ, ಗಾಯಕರಾದ ಮಂಜುಳ ಕೊಂಡರಾಜನಹಳ್ಳಿ ಮತ್ತು ಶರಣಪ್ಪ ಗಬ್ಬೂರು ಉಪಸ್ಥಿತರಿದ್ದರು.

- *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ* ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್ ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು. ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ ಮುಖಂಡರುಗಳಾದ ಕಾಟ್ಮನೂರು ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್, ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.3
- ಮುಳಬಾಗಿಲು : ಸೆ 13ರಿಂದ 18ರವರೆಗೆ ಕುರುಡುಮಲೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ ಹಿನ್ನಲೆ ಪೂರ್ವಭಾವಿ ಸಭೆ.!2
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ.1
- ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!1
- ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು2
- ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ1
- ವಿಡಿಯೋ ಕಾಲ್ ಮೂಲಕ ಪುನೀತ್ ಕೆರೆಹಳ್ಳಿಗೆ ವಿನೋದ್ ರಾಜ್ ಬೆಂಬಲ! ಹೋರಾಟಕ್ಕೆ ಸಾಥ್ ನೀಡಿದ ನಟ ವಿನೋದ್ ರಾಜ್! ವಿಡಿಯೋ ಕಾಲ್ ಮೂಲಕ ಪುನೀತ್ ಕೆರೆಹಳ್ಳಿಗೆ ವಿನೋದ್ ರಾಜ್ ಬೆಂಬಲ! ಹೋರಾಟಕ್ಕೆ ಸಾಥ್ ನೀಡಿದ ನಟ ವಿನೋದ್ ರಾಜ್!1
- ನಂಜನಗೂಡು : ಮಾದಕ ಜಾಲಕ್ಕೆ ಕಡಿವಾಣ ಹಾಕಿ.! ಪೊಲೀಸ್ ಇಲಾಖೆ ವಿರುದ್ಧ ಮಾಜಿ ಶಾಸಕ ಹರ್ಷವರ್ಧನ್ ವಾಗ್ದಾಳಿ.!?2