logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾಲೂರು ಕೆಪಿಟಿಸಿಎಲ್‌ ವತಿಯಿಂದ ಟೇಕಲ್‌ ರಸ್ತೆಯಲ್ಲಿರುವ 220 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರ ಮತ್ತು ಅದರ ಅಧೀನದಲ್ಲಿ ಬರುವ ವಿವಿಧ ವಿದ್ಯುತ್‌ ಉಪ ಕೇಂದ್ರಗಳಲ್ಲಿ ಜುಲೈ 11ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ 66/11 ಕೆ.ವಿ ವಿದ್ಯುತ್‌ ಉಪಕೇಂದ್ರಗಳ 11 ಕೆ.ವಿ ಫೀಡರ್‌ಗಳ ಮೂಲಕ ವಿದ್ಯುತ್ ಸರಬರಾಜು ಪಡೆಯುವ ಸುತ್ತಮುತ್ತಲ ಪ್ರದೇಶಗಳು ಹಾಗೂ ಗ್ರಾಮಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂನ ಎಇಇ ಆನ್ಸರ್ ಭಾಷಾ ತಿಳಿಸಿದ್ದಾರೆ. ಈ ವಿದ್ಯುತ್‌ ಕಡಿತವು ಮಾಲೂರು ಪಟ್ಟಣ, ಮಾಲೂರು ಕೈಗಾರಿಕಾ ಪ್ರದೇಶ, ಮಾಸ್ತಿ, ಟೇಕಲ್, ಲಕ್ಕೂರು ಮತ್ತು ತೊರಲಕ್ಕಿ ಗ್ರಾಮಗಳ ವ್ಯಾಪ್ತಿಯಲ್ಲಿ ಅನ್ವಯವಾಗಲಿದೆ. ನಿರ್ವಹಣಾ ಕಾರ್ಯದ ದೃಷ್ಟಿಯಿಂದ ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮಾಲೂರು ಉಪ ವಿಭಾಗದ ಕಾರ್ಯಪಾಲಕ ಅಭಿಯಂತರ ಆನ್ಸರ್ ಭಾಷಾ ವಿನಂತಿಸಿಕೊಂಡಿದ್ದಾರೆ.

1 day ago
user_Vishnu Press
Vishnu Press
Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
1 day ago
104885cb-0e4c-4802-88ab-9677edb0ff6c

ಮಾಲೂರು ಕೆಪಿಟಿಸಿಎಲ್‌ ವತಿಯಿಂದ ಟೇಕಲ್‌ ರಸ್ತೆಯಲ್ಲಿರುವ 220 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರ ಮತ್ತು ಅದರ ಅಧೀನದಲ್ಲಿ ಬರುವ ವಿವಿಧ ವಿದ್ಯುತ್‌ ಉಪ ಕೇಂದ್ರಗಳಲ್ಲಿ ಜುಲೈ 11ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ 66/11 ಕೆ.ವಿ ವಿದ್ಯುತ್‌ ಉಪಕೇಂದ್ರಗಳ 11 ಕೆ.ವಿ ಫೀಡರ್‌ಗಳ ಮೂಲಕ ವಿದ್ಯುತ್ ಸರಬರಾಜು ಪಡೆಯುವ ಸುತ್ತಮುತ್ತಲ ಪ್ರದೇಶಗಳು ಹಾಗೂ ಗ್ರಾಮಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂನ ಎಇಇ ಆನ್ಸರ್ ಭಾಷಾ ತಿಳಿಸಿದ್ದಾರೆ. ಈ ವಿದ್ಯುತ್‌ ಕಡಿತವು ಮಾಲೂರು ಪಟ್ಟಣ, ಮಾಲೂರು ಕೈಗಾರಿಕಾ ಪ್ರದೇಶ, ಮಾಸ್ತಿ, ಟೇಕಲ್, ಲಕ್ಕೂರು ಮತ್ತು ತೊರಲಕ್ಕಿ ಗ್ರಾಮಗಳ ವ್ಯಾಪ್ತಿಯಲ್ಲಿ ಅನ್ವಯವಾಗಲಿದೆ. ನಿರ್ವಹಣಾ ಕಾರ್ಯದ ದೃಷ್ಟಿಯಿಂದ ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮಾಲೂರು ಉಪ ವಿಭಾಗದ ಕಾರ್ಯಪಾಲಕ ಅಭಿಯಂತರ ಆನ್ಸರ್ ಭಾಷಾ ವಿನಂತಿಸಿಕೊಂಡಿದ್ದಾರೆ.

More news from ಕರ್ನಾಟಕ and nearby areas
  • ಕೋಲಾರ ಜಿಲ್ಲೆಯ ವೇಮಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೆಟ್ಟಹೊಸಪುರ ವಾರ್ಡ್ 2 ರ ಬಳಿ ಇರುವ ಆರ್.ಎಸ್. ರಾಕ್ ಸ್ಯಾಂಡ್ ಕ್ರಷರ್ ಘಟಕದಲ್ಲಿ ಭೀಕರ ಅವಘಡ ಸಂಭವಿಸಿದೆ. ಪಶ್ಚಿಮ ಬಂಗಾಳದಿಂದ ಹೊಟ್ಟೆಪಾಡಿಗಾಗಿ ವಲಸೆ ಬಂದಿದ್ದ ಟಿಪ್ಪರ್ ಚಾಲಕ ಸುಬೇದ್, ನೂರು ಅಡಿ ಆಳದ ಕಲ್ಲು ಕ್ವಾರಿಗೆ ಟಿಪ್ಪರ್ ಸಮೇತ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜುಲೈ 5 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕ್ರಷರ್ ನಿರ್ವಹಣೆಯ ಬೇಜವಾಬ್ದಾರಿ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಭೀಕರ ದುರಂತವನ್ನು ಮುಚ್ಚಿಹಾಕಲು ಕ್ರಷರ್ ಮಾಲೀಕರು ತೀವ್ರ ಯತ್ನ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಧ್ಯಮಗಳು ಮತ್ತು ಸಂಘಟನೆಗಳಿಗೆ ವಿಷಯ ತಿಳಿಯದಂತೆ ಎರಡು ದಿನಗಳ ಕಾಲ ಕ್ರಷರ್ ಒಳಗೆ ಯಾರಿಗೂ ಪ್ರವೇಶ ನೀಡದೆ ಬಂದೋಬಸ್ತ್ ಮಾಡಲಾಗಿತ್ತು. ಅಲ್ಲದೆ, ಮೃತ ಚಾಲಕನ ಬಡ ಕುಟುಂಬಕ್ಕೆ ಹಣದ ಆಮಿಷ ಒಡ್ಡಿ ಅವರಿಂದಲೇ ದೂರು ಕೊಡಿಸಲು ಮಾಲೀಕರು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಬಹಿರಂಗವಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿದ್ದು, ಕಾನೂನು ರಕ್ಷಕರೆನ್ನಿಸಿಕೊಂಡವರೇ ಭಕ್ಷಕರ ರಕ್ಷಣೆಗೆ ನಿಂತಿದ್ದಾರಾ ಎಂಬ ಗಂಭೀರ ಪ್ರಶ್ನೆಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ನೊಂದ ಕುಟುಂಬಕ್ಕೆ ನ್ಯಾಯ ಹಾಗೂ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಮೇಡಿಹಾಳ ಮುನಿಆಂಜಿನಪ್ಪ ಹಾಗೂ ಕಲ್ವಮಂಜಲಿ ರಾಮುಶಿವಣ್ಣ ನೇತೃತ್ವದಲ್ಲಿ ಪ್ರಗತಿಪರ ಸಂಘಟನೆಗಳು ವೇಮಗಲ್ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸಿವೆ. ಕ್ರಷರ್ ಮಾಲೀಕನ ವಿರುದ್ಧ ದೂರು ದಾಖಲಿಸುವುದರ ಜೊತೆಗೆ, ಸರ್ಕಾರದ ನಿಯಮಗಳನ್ನು ಪಾಲಿಸದ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿ ಜಾಣ ಕುರುಡರಂತೆ ವರ್ತಿಸುತ್ತಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೋದಂಡರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ನಾಗನಾಳ ಶಂಕರ್, ರಾಂಪುರ ಮುನಿರಾಜು, ಚನ್ನಪ್ಪನಹಳ್ಳಿ ನಾಗರಾಜ್, ಸುಳದೇನಹಳ್ಳಿ ವೆಂಕಟರಾಜು ಮತ್ತು ವೇಮಗಲ್ ಬಹದ್ದೂರ್ ಖಾನ್ ಉಪಸ್ಥಿತರಿದ್ದರು.
    3
    ಕೋಲಾರ ಜಿಲ್ಲೆಯ ವೇಮಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೆಟ್ಟಹೊಸಪುರ ವಾರ್ಡ್ 2 ರ ಬಳಿ ಇರುವ ಆರ್.ಎಸ್. ರಾಕ್ ಸ್ಯಾಂಡ್ ಕ್ರಷರ್ ಘಟಕದಲ್ಲಿ ಭೀಕರ ಅವಘಡ ಸಂಭವಿಸಿದೆ. ಪಶ್ಚಿಮ ಬಂಗಾಳದಿಂದ ಹೊಟ್ಟೆಪಾಡಿಗಾಗಿ ವಲಸೆ ಬಂದಿದ್ದ ಟಿಪ್ಪರ್ ಚಾಲಕ ಸುಬೇದ್, ನೂರು ಅಡಿ ಆಳದ ಕಲ್ಲು ಕ್ವಾರಿಗೆ ಟಿಪ್ಪರ್ ಸಮೇತ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜುಲೈ 5 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕ್ರಷರ್ ನಿರ್ವಹಣೆಯ ಬೇಜವಾಬ್ದಾರಿ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ಈ ಭೀಕರ ದುರಂತವನ್ನು ಮುಚ್ಚಿಹಾಕಲು ಕ್ರಷರ್ ಮಾಲೀಕರು ತೀವ್ರ ಯತ್ನ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಧ್ಯಮಗಳು ಮತ್ತು ಸಂಘಟನೆಗಳಿಗೆ ವಿಷಯ ತಿಳಿಯದಂತೆ ಎರಡು ದಿನಗಳ ಕಾಲ ಕ್ರಷರ್ ಒಳಗೆ ಯಾರಿಗೂ ಪ್ರವೇಶ ನೀಡದೆ ಬಂದೋಬಸ್ತ್ ಮಾಡಲಾಗಿತ್ತು. ಅಲ್ಲದೆ, ಮೃತ ಚಾಲಕನ ಬಡ ಕುಟುಂಬಕ್ಕೆ ಹಣದ ಆಮಿಷ ಒಡ್ಡಿ ಅವರಿಂದಲೇ ದೂರು ಕೊಡಿಸಲು ಮಾಲೀಕರು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಬಹಿರಂಗವಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿದ್ದು, ಕಾನೂನು ರಕ್ಷಕರೆನ್ನಿಸಿಕೊಂಡವರೇ ಭಕ್ಷಕರ ರಕ್ಷಣೆಗೆ ನಿಂತಿದ್ದಾರಾ ಎಂಬ ಗಂಭೀರ ಪ್ರಶ್ನೆಗಳು ಕೇಳಿಬರುತ್ತಿವೆ.

ಇದರ ಬೆನ್ನಲ್ಲೇ, ನೊಂದ ಕುಟುಂಬಕ್ಕೆ ನ್ಯಾಯ ಹಾಗೂ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಮೇಡಿಹಾಳ ಮುನಿಆಂಜಿನಪ್ಪ ಹಾಗೂ ಕಲ್ವಮಂಜಲಿ ರಾಮುಶಿವಣ್ಣ ನೇತೃತ್ವದಲ್ಲಿ ಪ್ರಗತಿಪರ ಸಂಘಟನೆಗಳು ವೇಮಗಲ್ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸಿವೆ. ಕ್ರಷರ್ ಮಾಲೀಕನ ವಿರುದ್ಧ ದೂರು ದಾಖಲಿಸುವುದರ ಜೊತೆಗೆ, ಸರ್ಕಾರದ ನಿಯಮಗಳನ್ನು ಪಾಲಿಸದ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿ ಜಾಣ ಕುರುಡರಂತೆ ವರ್ತಿಸುತ್ತಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೋದಂಡರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ನಾಗನಾಳ ಶಂಕರ್, ರಾಂಪುರ ಮುನಿರಾಜು, ಚನ್ನಪ್ಪನಹಳ್ಳಿ ನಾಗರಾಜ್, ಸುಳದೇನಹಳ್ಳಿ ವೆಂಕಟರಾಜು ಮತ್ತು ವೇಮಗಲ್ ಬಹದ್ದೂರ್ ಖಾನ್ ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    6 hrs ago
  • ಮುಳಬಾಗಿಲು ತಾಲೂಕಿನ ಅಂಬ್ಳಿಕಲ್ ಗ್ರಾಮದಲ್ಲಿ ನೂತನ ಹೈ ಮಾಸ್ಕ್ ದೀಪದ ಉದ್ಘಾಟನಾ ಕಾರ್ಯಕ್ರಮ ಜರುಗಿದೆ. ಕ್ಷೇತ್ರದ ಶಾಸಕರಾದ ಸಮೃದ್ಧಿ ಮಂಜುನಾಥ್ ಅವರು ಈ ಹೈ ಮಾಸ್ಕ್ ದೀಪವನ್ನು ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
    1
    ಮುಳಬಾಗಿಲು ತಾಲೂಕಿನ ಅಂಬ್ಳಿಕಲ್ ಗ್ರಾಮದಲ್ಲಿ ನೂತನ ಹೈ ಮಾಸ್ಕ್ ದೀಪದ ಉದ್ಘಾಟನಾ ಕಾರ್ಯಕ್ರಮ ಜರುಗಿದೆ. ಕ್ಷೇತ್ರದ ಶಾಸಕರಾದ ಸಮೃದ್ಧಿ ಮಂಜುನಾಥ್ ಅವರು ಈ ಹೈ ಮಾಸ್ಕ್ ದೀಪವನ್ನು ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    18 hrs ago
  • ಬೆಂಗಳೂರಿನಲ್ಲಿ ಅಮುಕು ಡುಮುಕು ಮಂಜನ ತಾಯಿ ಪ್ರತಿಕ್ರಿಯೆ ನೀಡಿದ್ದು, ತಪ್ಪಾಗಿದ್ದರೆ ಕ್ಷಮೆ ಕೇಳೋಣ, ಅದರಲ್ಲಿ ಏನಿದೆ ಎಂದು ಹೇಳಿದ್ದಾರೆ. ಅಲ್ಲದೆ, ನನ್ನ ಮಗ ಏನು ಎಂಬುದು ನನಗೆ ಗೊತ್ತು ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
    1
    ಬೆಂಗಳೂರಿನಲ್ಲಿ ಅಮುಕು ಡುಮುಕು ಮಂಜನ ತಾಯಿ ಪ್ರತಿಕ್ರಿಯೆ ನೀಡಿದ್ದು, ತಪ್ಪಾಗಿದ್ದರೆ ಕ್ಷಮೆ ಕೇಳೋಣ, ಅದರಲ್ಲಿ ಏನಿದೆ ಎಂದು ಹೇಳಿದ್ದಾರೆ. ಅಲ್ಲದೆ, ನನ್ನ ಮಗ ಏನು ಎಂಬುದು ನನಗೆ ಗೊತ್ತು ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂಬರ್ 76 ಹಾಗೂ ಬೆಟ್ಟದ ಸುತ್ತಮುತ್ತಲಿನ ಸರ್ವೆ ನಂಬರ್‌ಗಳಲ್ಲಿ ಸ್ಪೋಟಕ ಸಾಮಗ್ರಿಗಳು ಹಾಗೂ ಜೆಸಿಪಿ, ಹಿಟಾಚಿ, ಕಂಪ್ರೆಸರ್, ಕ್ರೇನ್ ಬಳಸಿ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಗಣಿಗಾರಿಕೆ ನಡೆಸುವ ಸಮಯದಲ್ಲಿ ಬೃಹತಾಕಾರದ ಬಂಡೆಯೊಂದು ಜಾರಿ ಜೆಸಿಪಿ ಮೇಲೆ ಕುಸಿದಿದ್ದು, ಅದರಲ್ಲಿದ್ದ ಕಾರ್ಮಿಕರು ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲ್ಲಿನ ಸುತ್ತ ಮಣ್ಣು ತೆಗೆಯುವಾಗ ಈ ಬೃಹತ್ ಕಲ್ಲು ದಿಮ್ಮಿ ಕುಸಿದು ಬಿದ್ದಿದ್ದರಿಂದ ಜೆಸಿಪಿ ಯಂತ್ರ ತೀವ್ರವಾಗಿ ಜಖಂಗೊಂಡಿದೆ. ಕಂದಾಯ ಇಲಾಖೆಗೆ ಸೇರಿದ ಸರ್ಕಾರಿ ಜಮೀನಿನಲ್ಲಿ ತಮಿಳುನಾಡು ಮೂಲದ ವ್ಯಕ್ತಿಗಳು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಈ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದವರಾದ ಶ್ರೀಧರ್, ಕುಮಾರ್, ಈಶ್ವರ್ ಮತ್ತು ಮಂಜ ಎಂಬುವರು ಈ ಅಕ್ರಮ ದಂಧೆಯ ಕಿಂಗ್‌ಪಿನ್‌ಗಳು ಎಂದು ಗ್ರಾಮಸ್ಥರಿಂದ ತಿಳಿದುಬಂದಿದೆ. ಇವರು ಯಂತ್ರೋಪಕರಣ ಹಾಗೂ ಸಿಡಿಮದ್ದುಗಳನ್ನು ಬಳಸಿ ದಿಮ್ಮಿ ಕಲ್ಲುಗಳನ್ನು ತೆಗೆದು, ಕ್ರೇನ್ ಮೂಲಕ ಲಾರಿಗಳಿಗೆ ಲೋಡ್ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದಾರೆ. ಅಲ್ಲದೆ, ವೇಸ್ಟೇಜ್ ಕಲ್ಲುಗಳಲ್ಲಿ ಸೈಜ್ ಕಲ್ಲು ಹಾಗೂ ಕಂಬದ ಕಲ್ಲುಗಳನ್ನು ಮಾಡಿ ಸಾಗಾಣಿಕೆ ಮಾಡುತ್ತಿದ್ದಾರೆ. ಈ ಜಾಗದಲ್ಲಿ ನಿರಂತರವಾಗಿ ಅಕ್ರಮ ದಂಧೆ ನಡೆಯುತ್ತಿದ್ದರೂ ಕಂದಾಯ ಇಲಾಖೆಯ ಆರ್‌ಐ ಹಾಗೂ ವಿಎ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆಗಳಿಂದ ಅನುಮತಿ ಪಡೆಯದೆ, ಕಾರ್ಮಿಕರ ಸುರಕ್ಷತೆಯನ್ನೂ ನಿರ್ಲಕ್ಷಿಸಿ ಅಕ್ರಮವಾಗಿ ಬ್ಲಾಸ್ಟಿಂಗ್ ನಡೆಸುತ್ತಿರುವ ಈ ಕಲ್ಲು ಕಳ್ಳರ ವಿರುದ್ಧ ಜಿಲ್ಲಾಧಿಕಾರಿಗಳು ಅಥವಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.
    1
    ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂಬರ್ 76 ಹಾಗೂ ಬೆಟ್ಟದ ಸುತ್ತಮುತ್ತಲಿನ ಸರ್ವೆ ನಂಬರ್‌ಗಳಲ್ಲಿ ಸ್ಪೋಟಕ ಸಾಮಗ್ರಿಗಳು ಹಾಗೂ ಜೆಸಿಪಿ, ಹಿಟಾಚಿ, ಕಂಪ್ರೆಸರ್, ಕ್ರೇನ್ ಬಳಸಿ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಗಣಿಗಾರಿಕೆ ನಡೆಸುವ ಸಮಯದಲ್ಲಿ ಬೃಹತಾಕಾರದ ಬಂಡೆಯೊಂದು ಜಾರಿ ಜೆಸಿಪಿ ಮೇಲೆ ಕುಸಿದಿದ್ದು, ಅದರಲ್ಲಿದ್ದ ಕಾರ್ಮಿಕರು ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲ್ಲಿನ ಸುತ್ತ ಮಣ್ಣು ತೆಗೆಯುವಾಗ ಈ ಬೃಹತ್ ಕಲ್ಲು ದಿಮ್ಮಿ ಕುಸಿದು ಬಿದ್ದಿದ್ದರಿಂದ ಜೆಸಿಪಿ ಯಂತ್ರ ತೀವ್ರವಾಗಿ ಜಖಂಗೊಂಡಿದೆ.

ಕಂದಾಯ ಇಲಾಖೆಗೆ ಸೇರಿದ ಸರ್ಕಾರಿ ಜಮೀನಿನಲ್ಲಿ ತಮಿಳುನಾಡು ಮೂಲದ ವ್ಯಕ್ತಿಗಳು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಈ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದವರಾದ ಶ್ರೀಧರ್, ಕುಮಾರ್, ಈಶ್ವರ್ ಮತ್ತು ಮಂಜ ಎಂಬುವರು ಈ ಅಕ್ರಮ ದಂಧೆಯ ಕಿಂಗ್‌ಪಿನ್‌ಗಳು ಎಂದು ಗ್ರಾಮಸ್ಥರಿಂದ ತಿಳಿದುಬಂದಿದೆ. ಇವರು ಯಂತ್ರೋಪಕರಣ ಹಾಗೂ ಸಿಡಿಮದ್ದುಗಳನ್ನು ಬಳಸಿ ದಿಮ್ಮಿ ಕಲ್ಲುಗಳನ್ನು ತೆಗೆದು, ಕ್ರೇನ್ ಮೂಲಕ ಲಾರಿಗಳಿಗೆ ಲೋಡ್ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದಾರೆ. ಅಲ್ಲದೆ, ವೇಸ್ಟೇಜ್ ಕಲ್ಲುಗಳಲ್ಲಿ ಸೈಜ್ ಕಲ್ಲು ಹಾಗೂ ಕಂಬದ ಕಲ್ಲುಗಳನ್ನು ಮಾಡಿ ಸಾಗಾಣಿಕೆ ಮಾಡುತ್ತಿದ್ದಾರೆ.

ಈ ಜಾಗದಲ್ಲಿ ನಿರಂತರವಾಗಿ ಅಕ್ರಮ ದಂಧೆ ನಡೆಯುತ್ತಿದ್ದರೂ ಕಂದಾಯ ಇಲಾಖೆಯ ಆರ್‌ಐ ಹಾಗೂ ವಿಎ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆಗಳಿಂದ ಅನುಮತಿ ಪಡೆಯದೆ, ಕಾರ್ಮಿಕರ ಸುರಕ್ಷತೆಯನ್ನೂ ನಿರ್ಲಕ್ಷಿಸಿ ಅಕ್ರಮವಾಗಿ ಬ್ಲಾಸ್ಟಿಂಗ್ ನಡೆಸುತ್ತಿರುವ ಈ ಕಲ್ಲು ಕಳ್ಳರ ವಿರುದ್ಧ ಜಿಲ್ಲಾಧಿಕಾರಿಗಳು ಅಥವಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.
    user_Madhugiri news
    Madhugiri news
    Local News Reporter ಮಧುಗಿರಿ, ತುಮಕೂರು, ಕರ್ನಾಟಕ•
    14 hrs ago
  • ಮಂಡ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಬಂಧಿಸಿರುವ ವ್ಯಕ್ತಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಷಣ್ಮುಖೇ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಾಗಣ್ಣಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ.
    1
    ಮಂಡ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಬಂಧಿಸಿರುವ ವ್ಯಕ್ತಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಷಣ್ಮುಖೇ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಾಗಣ್ಣಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    23 hrs ago
  • ಕೋಲಾರ ತಾಲ್ಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿಯಲ್ಲಿ ನೆಲೆಸಿರುವ ಶ್ರೀ ರುಕ್ಕಿಣೀ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ಮರು ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಉದ್ಘಾಟನಾ ಮಹೋತ್ಸವವು ಇದೇ 12ರ ಭಾನುವಾರ ನಡೆಯಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ. ಭಗವಂತನ ಪ್ರೇರಣೆಯಿಂದ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ ಎಂದು ಮುಖಂಡರು ಮಾಹಿತಿ ನೀಡಿದ್ದಾರೆ. ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ಸ್ವಾಮಿಯ ದಿವ್ಯ ದರ್ಶನ ಪಡೆದು, ತಮ್ಮ ಮನೋವಾಂಚಲ್ಯಗಳನ್ನು ನೆರವೇರಿಸಿಕೊಳ್ಳುವಂತೆ ಹಾಗೂ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಕೋರಲಾಗಿದೆ. ಈ ವೇಳೆ ಗ್ರಾಮದ ಮುಖಂಡರಾದ ಡಿ. ರಾಮಚಂದ್ರಪ್ಪ, ಮಾಜಿ ಸದಸ್ಯ ಸಿ.ವಿ. ಮುನಿರಾಜು, ಎಸ್. ನಾರಾಯಣಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    2
    ಕೋಲಾರ ತಾಲ್ಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿಯಲ್ಲಿ ನೆಲೆಸಿರುವ ಶ್ರೀ ರುಕ್ಕಿಣೀ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ಮರು ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಉದ್ಘಾಟನಾ ಮಹೋತ್ಸವವು ಇದೇ 12ರ ಭಾನುವಾರ ನಡೆಯಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ. ಭಗವಂತನ ಪ್ರೇರಣೆಯಿಂದ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ ಎಂದು ಮುಖಂಡರು ಮಾಹಿತಿ ನೀಡಿದ್ದಾರೆ.

ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ಸ್ವಾಮಿಯ ದಿವ್ಯ ದರ್ಶನ ಪಡೆದು, ತಮ್ಮ ಮನೋವಾಂಚಲ್ಯಗಳನ್ನು ನೆರವೇರಿಸಿಕೊಳ್ಳುವಂತೆ ಹಾಗೂ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಕೋರಲಾಗಿದೆ. ಈ ವೇಳೆ ಗ್ರಾಮದ ಮುಖಂಡರಾದ ಡಿ. ರಾಮಚಂದ್ರಪ್ಪ, ಮಾಜಿ ಸದಸ್ಯ ಸಿ.ವಿ. ಮುನಿರಾಜು, ಎಸ್. ನಾರಾಯಣಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    21 hrs ago
  • ಕೋಲಾರ ಜಿಲ್ಲೆಯ ಮುಳುಬಾಗಿಲಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಖದೀಮರನ್ನು ಪೊಲೀಸರು ಭರ್ಜರಿ ಬೇಟೆಯಾಡಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಭರ್ಜರಿ ಕಾರ್ಯಾಚರಣೆಯ ಮೂಲಕ ದಂಧೆಯಲ್ಲಿ ತೊಡಗಿದ್ದ ಖದೀಮರನ್ನು ಕಂಬಿ ಹಿಂದೆ ತಳ್ಳಲಾಗಿದೆ.
    1
    ಕೋಲಾರ ಜಿಲ್ಲೆಯ ಮುಳುಬಾಗಿಲಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಖದೀಮರನ್ನು ಪೊಲೀಸರು ಭರ್ಜರಿ ಬೇಟೆಯಾಡಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಭರ್ಜರಿ ಕಾರ್ಯಾಚರಣೆಯ ಮೂಲಕ ದಂಧೆಯಲ್ಲಿ ತೊಡಗಿದ್ದ ಖದೀಮರನ್ನು ಕಂಬಿ ಹಿಂದೆ ತಳ್ಳಲಾಗಿದೆ.
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    21 hrs ago
  • ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಪೂರ್ವ ಭಾಗದಲ್ಲಿ ಮನೆಗೆ ನುಗ್ಗಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಡೆಲಿವರಿ ಸಿಬ್ಬಂದಿಯೊಬ್ಬರ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ಡೆಲಿವರಿ ಸಿಬ್ಬಂದಿಯು ಅಕ್ರಮವಾಗಿ ಮನೆಗೆ ನುಗ್ಗಿ ಅಸಭ್ಯ ವರ್ತನೆ ತೋರಿದ್ದಾನೆ ಎಂದು ಮಹಿಳೆ ಗಂಭೀರವಾಗಿ ಆರೋಪಿಸಿದ್ದಾರೆ.
    1
    ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಪೂರ್ವ ಭಾಗದಲ್ಲಿ ಮನೆಗೆ ನುಗ್ಗಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಡೆಲಿವರಿ ಸಿಬ್ಬಂದಿಯೊಬ್ಬರ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ಡೆಲಿವರಿ ಸಿಬ್ಬಂದಿಯು ಅಕ್ರಮವಾಗಿ ಮನೆಗೆ ನುಗ್ಗಿ ಅಸಭ್ಯ ವರ್ತನೆ ತೋರಿದ್ದಾನೆ ಎಂದು ಮಹಿಳೆ ಗಂಭೀರವಾಗಿ ಆರೋಪಿಸಿದ್ದಾರೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಮೀಪ ಕೆಎಸ್ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಹಾನಗಲ್‌ನಿಂದ ಶಿರಸಿ ಕಡೆಗೆ ಚಲಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ ಎದುರಿನಿಂದ ಬಂದ ಲಾರಿ ಜೋರಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಬಸ್ ಹಾಗೂ ಲಾರಿಯ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಈ ಭೀಕರ ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಚಿಕಿತ್ಸೆಗಾಗಿ ಮುಂಡಗೋಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮುಂಡಗೋಡ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಪಘಾತಕ್ಕೊಳಗಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ, ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲಾಗಿದ್ದು, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
    1
    ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಮೀಪ ಕೆಎಸ್ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಹಾನಗಲ್‌ನಿಂದ ಶಿರಸಿ ಕಡೆಗೆ ಚಲಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ ಎದುರಿನಿಂದ ಬಂದ ಲಾರಿ ಜೋರಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಬಸ್ ಹಾಗೂ ಲಾರಿಯ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಈ ಭೀಕರ ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಚಿಕಿತ್ಸೆಗಾಗಿ ಮುಂಡಗೋಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮುಂಡಗೋಡ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಪಘಾತಕ್ಕೊಳಗಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ, ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲಾಗಿದ್ದು, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    5 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.