Shuru
Apke Nagar Ki App…
SUDHUR CHAULANI NEWS
More news from ಕರ್ನಾಟಕ and nearby areas
- ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.1
- ಹೊಸಕೋಟೆ ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ. ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ3
- KOLAR KI.AWAAZ KOUSAR NEWS1
- #carstand kolar ಕೋಲಾರಜಿಲ್ಲಾ ಕಾರುಚಾಲಕರ ಸಂಘದವತಿಯಿಂದ 135ನೇಬಿಆರ್ ಅಂಬೇಡ್ಕರ್ ಜಯಂತಿ1
- ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು. ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು. ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು. ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು. ಕಾರ್ಯಕ್ರಮದ ಮುಖ್ಯಾಂಶಗಳು: ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ. ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ. ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.1
- Post by Venu Gopal1
- ನಸೀರ್ ಅಹ್ಮದ್ ರವರನ್ನು ವಜಾ ಮಾಡಿರೋದು ಹೈಕಮಾಂಡ್ ತೀರ್ಮಾನ - ಎಂ.ಸಿ ಸುಧಾಕರ್..!1
- ಬೆಂಗಳೂರಿನ ಡಿ.ಜೆ. ಹಳ್ಳಿಯ ಕನಕನಗರದಲ್ಲಿ ಯುವತಿ ಹಾಗೂ ಇಬ್ಬರು ಯುವಕರ ಮೇಲೆ ಸ್ಥಳೀಯರ ಗುಂಪು ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂಗಡಿ ಮುಂಭಾಗದಲ್ಲಿ ನಿಂತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿ, ಅದು ಕೆಲವೇ ಕ್ಷಣಗಳಲ್ಲಿ ಹೊಡೆದಾಟಕ್ಕೆ ತಿರುಗಿದೆ ಎಂದು ತಿಳಿದುಬಂದಿದೆ. ಏಳೆಂಟು ಮಂದಿಯ ತಂಡ ಮೂವರ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆಗೆ ಸಂಬಂಧಿಸಿದ ವಿಡಿಯೋ ಹರಿದಾಡುತ್ತಿದ್ದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.1