ಹರಿಯಾಣದ ಪಾನಿಪತ್‌ನಲ್ಲಿ ವೈದ್ಯರ ಅತಿರೇಕದ ಮತ್ತು ಘೋರ ನಿರ್ಲಕ್ಷ್ಯವೊಂದು ಮುಗ್ಧ ಮಹಿಳೆಯೊಬ್ಬರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ. ಹರಿಯಾಣದ ಪಾನಿಪತ್‌ನಲ್ಲಿ ವೈದ್ಯರ ಅತಿರೇಕದ ಮತ್ತು ಘೋರ ನಿರ್ಲಕ್ಷ್ಯವೊಂದು ಮುಗ್ಧ ಮಹಿಳೆಯೊಬ್ಬರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ. ರಸ್ತೆ ಅಪಘಾತದಲ್ಲಿ ಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗುಡ್ಡಿ ದೇವಿ ಎಂಬ ಮಹಿಳೆಗೆ, ವೈದ್ಯರು ಕಾಳಿನ ಬದಲು ಹೃದಯ ಶಸ್ತ್ರಚಿಕಿತ್ಸೆ (Heart Surgery) ಮಾಡಿರುವ ಆಘಾತಕಾರಿ ಆರೋಪವನ್ನು ಮೃತರ ಕುಟುಂಬಸ್ಥರು ಮಾಡಿದ್ದಾರೆ. ಕನಿಷ್ಠ ಅನುಮತಿಯೂ ಪಡೆಯದ ವೈದ್ಯರು! ಸಾಮಾನ್ಯ ಜನರಿಗೆ ಜೀವದಾನ ಮಾಡಬೇಕಾದ ಆಸ್ಪತ್ರೆಗಳಲ್ಲಿ ನಡೆಯುವ ಇಂತಹ ಅಮಾನವೀಯ ಘಟನೆಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿವೆ. ರಸ್ತೆ ಅಪಘಾತದಿಂದ ಕಾಲು ಮುರಿದುಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ಗುಡ್ಡಿ ದೇವಿ ಎಂಬ ಮಹಿಳೆಗೆ, ವೈದ್ಯರು ಯಾವುದೇ ಸೂಕ್ತ ಮಾಹಿತಿ ನೀಡದೆ ಹಾಗೂ ಕನಿಷ್ಠ ಕುಟುಂಬಸ್ಥರ ಅನುಮತಿ ಪಡೆಯದೆಯೂ ಹೃದಯದ ಆಪರೇಷನ್ ಮಾಡಿದ್ದಾರೆ ಎಂದು ಕುಟುಂಬದವರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿಗೆ ಕಾಲು ಮುರಿತಕ್ಕೆ ಚಿಕಿತ್ಸೆ ನೀಡಬೇಕಾಗಿದ್ದು, ಹಾರ್ಟ್ ಸರ್ಜರಿ ಮಾಡಿರುವ ಹಿಂದೆ ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಬంధುಗಳು ಆಪಾದಿಸಿದ್ದಾರೆ. ಶಸ್ತ್ರಚಿಕಿತ್ಸೆ ನಡೆದ ಕೆಲವೇ ಗಂಟೆಗಳಲ್ಲಿ ಮಹಿಳೆಯ ಆರೋಗ್ಯ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟು ಮೃತಪಟ್ಟಿರುವುದು ಆಸ್ಪತ್ರೆ ಆವರಣದಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಯಿತು. ನಮಗೆ ನ್ಯಾಯ ಬೇಕು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂತ್ರಸ್ತ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯನ್ನು ಆಶ್ರಯಿಸಿದ್ದಾರೆ. ಪೊಲೀಸರ ತನಿಖೆ ಹಾಗೂ ಆಸ್ಪತ್ರೆಯ ಮೌನ! ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆ ಆರಂಭಿಸಿದ್ದಾರೆ. ಮಹಿಳೆಯ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ (Post-mortem) ಕಳುಹಿಸಿಕೊಡಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ಅಸಲಿ ಕಾರಣಗಳು ಹೊರಬರಲಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ, ಈ ವಿವಾದಾತ್ಮಕ ಘಟನೆಯ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯು ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ಅಥವಾ ಪ್ರಕಟಣೆ ಹೊರಡಿಸದಿರುವುದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಹರಿಯಾಣದ ಪಾನಿಪತ್‌ನಲ್ಲಿ ವೈದ್ಯರ ಅತಿರೇಕದ ಮತ್ತು ಘೋರ ನಿರ್ಲಕ್ಷ್ಯವೊಂದು ಮುಗ್ಧ ಮಹಿಳೆಯೊಬ್ಬರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ. ಹರಿಯಾಣದ ಪಾನಿಪತ್‌ನಲ್ಲಿ ವೈದ್ಯರ ಅತಿರೇಕದ ಮತ್ತು ಘೋರ ನಿರ್ಲಕ್ಷ್ಯವೊಂದು ಮುಗ್ಧ ಮಹಿಳೆಯೊಬ್ಬರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ. ರಸ್ತೆ ಅಪಘಾತದಲ್ಲಿ ಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗುಡ್ಡಿ ದೇವಿ ಎಂಬ ಮಹಿಳೆಗೆ, ವೈದ್ಯರು ಕಾಳಿನ ಬದಲು ಹೃದಯ ಶಸ್ತ್ರಚಿಕಿತ್ಸೆ (Heart Surgery) ಮಾಡಿರುವ ಆಘಾತಕಾರಿ ಆರೋಪವನ್ನು ಮೃತರ ಕುಟುಂಬಸ್ಥರು ಮಾಡಿದ್ದಾರೆ. ಕನಿಷ್ಠ ಅನುಮತಿಯೂ ಪಡೆಯದ ವೈದ್ಯರು! ಸಾಮಾನ್ಯ ಜನರಿಗೆ ಜೀವದಾನ ಮಾಡಬೇಕಾದ ಆಸ್ಪತ್ರೆಗಳಲ್ಲಿ ನಡೆಯುವ ಇಂತಹ ಅಮಾನವೀಯ ಘಟನೆಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿವೆ. ರಸ್ತೆ ಅಪಘಾತದಿಂದ ಕಾಲು ಮುರಿದುಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ಗುಡ್ಡಿ ದೇವಿ ಎಂಬ ಮಹಿಳೆಗೆ, ವೈದ್ಯರು ಯಾವುದೇ ಸೂಕ್ತ ಮಾಹಿತಿ ನೀಡದೆ ಹಾಗೂ ಕನಿಷ್ಠ ಕುಟುಂಬಸ್ಥರ ಅನುಮತಿ ಪಡೆಯದೆಯೂ ಹೃದಯದ ಆಪರೇಷನ್ ಮಾಡಿದ್ದಾರೆ ಎಂದು ಕುಟುಂಬದವರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿಗೆ ಕಾಲು ಮುರಿತಕ್ಕೆ ಚಿಕಿತ್ಸೆ ನೀಡಬೇಕಾಗಿದ್ದು, ಹಾರ್ಟ್ ಸರ್ಜರಿ ಮಾಡಿರುವ ಹಿಂದೆ ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಬంధುಗಳು ಆಪಾದಿಸಿದ್ದಾರೆ. ಶಸ್ತ್ರಚಿಕಿತ್ಸೆ ನಡೆದ ಕೆಲವೇ ಗಂಟೆಗಳಲ್ಲಿ ಮಹಿಳೆಯ ಆರೋಗ್ಯ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟು ಮೃತಪಟ್ಟಿರುವುದು ಆಸ್ಪತ್ರೆ ಆವರಣದಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಯಿತು. ನಮಗೆ ನ್ಯಾಯ ಬೇಕು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂತ್ರಸ್ತ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯನ್ನು ಆಶ್ರಯಿಸಿದ್ದಾರೆ. ಪೊಲೀಸರ ತನಿಖೆ ಹಾಗೂ ಆಸ್ಪತ್ರೆಯ ಮೌನ! ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆ ಆರಂಭಿಸಿದ್ದಾರೆ. ಮಹಿಳೆಯ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ (Post-mortem) ಕಳುಹಿಸಿಕೊಡಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ಅಸಲಿ ಕಾರಣಗಳು ಹೊರಬರಲಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ, ಈ ವಿವಾದಾತ್ಮಕ ಘಟನೆಯ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯು ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ಅಥವಾ ಪ್ರಕಟಣೆ ಹೊರಡಿಸದಿರುವುದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
- ಕುರುಕುಂದದ ಆಗ್ರೋ ಕೇಂದ್ರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ ಯಾದಗಿರಿ, ಆ. 1: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕುರುಕುಂದ ಗ್ರಾಮದ ದಂಡಗುಂಡ ಬಸವೇಶ್ವರ ಆಗ್ರೋ ಕೇಂದ್ರದ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಶಿಸ್ತು ಕ್ರಮ ಕೈಗೊಂಡು ಅಂಗಡಿ ಪರವಾನಗಿಯನ್ನು (ಲೈಸೆನ್ಸ್) ರದ್ದುಪಡಿಸುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ. ಆಗ್ರೋ ಕೇಂದ್ರದಲ್ಲಿ ಕೃಷಿ ಉತ್ಪನ್ನಗಳನ್ನು ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಅಲ್ಲದೆ, "ಬೇಕಿದ್ದರೆ ಖರೀದಿಸಿ, ಇಲ್ಲದಿದ್ದರೆ ಹೋಗಿ" ಎಂದು ಹೇಳುತ್ತಾ ಕೃತಕ ಅಭಾವ ಸೃಷ್ಟಿಸಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದೆ. ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ ಅವರು ತಕ್ಷಣ ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘದ ಜಿಲ್ಲಾ ಸಮಿತಿ ಆಗ್ರಹಿಸಿದೆ. ಒಂದು ವೇಳೆ ಅಧಿಕಾರಿಗಳು ಈ ವಿಷಯವನ್ನು ನಿರ್ಲಕ್ಷಿಸಿದರೆ ದಿಢೀರ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಕುರುಕುಂದದ ಆಗ್ರೋ ಕೇಂದ್ರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ ಯಾದಗಿರಿ, ಆ. 1: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕುರುಕುಂದ ಗ್ರಾಮದ ದಂಡಗುಂಡ ಬಸವೇಶ್ವರ ಆಗ್ರೋ ಕೇಂದ್ರದ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಶಿಸ್ತು ಕ್ರಮ ಕೈಗೊಂಡು ಅಂಗಡಿ ಪರವಾನಗಿಯನ್ನು (ಲೈಸೆನ್ಸ್) ರದ್ದುಪಡಿಸುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ. ಆಗ್ರೋ ಕೇಂದ್ರದಲ್ಲಿ ಕೃಷಿ ಉತ್ಪನ್ನಗಳನ್ನು ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಅಲ್ಲದೆ, "ಬೇಕಿದ್ದರೆ ಖರೀದಿಸಿ, ಇಲ್ಲದಿದ್ದರೆ ಹೋಗಿ" ಎಂದು ಹೇಳುತ್ತಾ ಕೃತಕ ಅಭಾವ ಸೃಷ್ಟಿಸಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದೆ. ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ ಅವರು ತಕ್ಷಣ ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘದ ಜಿಲ್ಲಾ ಸಮಿತಿ ಆಗ್ರಹಿಸಿದೆ. ಒಂದು ವೇಳೆ ಅಧಿಕಾರಿಗಳು ಈ ವಿಷಯವನ್ನು ನಿರ್ಲಕ್ಷಿಸಿದರೆ ದಿಢೀರ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.1
- ಕಲ್ಯಾಣ ವಾರ್ತೆ - "ನೀರಿನ ಹರಿವು ಹೆಚ್ಚುತ್ತಿರುವದರಿಂದ ನದಿ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಮುದ್ನಾಳ ಮನವಿ" 'ಭೀಮಾನದಿ ತೀರಕ್ಕೆ ಉಮೇಶ್ ಮುದ್ನಾಳ ಭೇಟಿ' ಕಲ್ಯಾಣ ವಾರ್ತೆ -ಯಾದಗಿರಿ ಮಹಾರಾಷ್ಟ್ರದಪಶ್ಚೀಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು ನದಿ ತೀರಕ್ಕೆ ಶುಕ್ರವಾರ ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ ಅವರು ಭೇಟಿ ನೀಡಿದರು. ಭೀಮಾನದಿ ಹಾಗೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.ಜಿಲ್ಲಾಡಳಿತ ನದಿ ತೀರದ ಗ್ರಾಮದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.ಮೀನುಗಾರರು,ಸೇರಿ ಯಾರು ನದಿ ತೀರಕ್ಕೆ ತೆರಳಬಾದರೆಂದು ಮುದ್ನಾಳ ಮನವಿ ಮಾಡಿದ್ದಾರೆ.1
- ಗುರುಮಠಕಲ್ ಪಟ್ಟಣದ ಎಸ್ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ4
- ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ1
- ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ! ನದಿ ಪಾತ್ರದ ಜನರಿಗೆ ತುರ್ತು ಎಚ್ಚರಿಕೆ 🌊 ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹದ ಆತಂಕ! ಸುರಪುರ ಪೊಲೀಸರು ನೀಡಿದ ಎಚ್ಚರಿಕೆ ⚠️ ನದಿಗೆ ಇಳಿಯಬೇಡಿ! ಕೃಷ್ಣಾ ನದಿಗೆ ಅಪಾರ ನೀರು ಬಿಡುಗಡೆ 🚨 ಲಿಂಗದಹಳ್ಳಿ-ತಿಂಥಣಿ ಸೇರಿ ಹಲವು ಗ್ರಾಮಗಳಿಗೆ ಅಲರ್ಟ್! ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,20,000 ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ. ಲಿಂಗದಹಳ್ಳಿ, ಬಂಡೊಳ್ಳಿ, ದಾದಲಾಪುರ, ತಿಂಥಣಿ, ದೇವಾಪುರ, ಮುಷ್ಟಹಳ್ಳಿ, ಶೆಳ್ಳಿ, ಅಡ್ಡೊಡಿ, ಹೆಮ್ಮಡಿ, ಕರ್ನಾಳ, ಬೇವಿನಹಾಳ ಹಾಗೂ ಯಮನೂರು ಸೇರಿದಂತೆ ಹಲವು ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ನದಿಯಲ್ಲಿ ಈಜುವುದು, ಸ್ನಾನ ಮಾಡುವುದು, ಮೀನುಗಾರಿಕೆ ನಡೆಸುವುದು ಹಾಗೂ ಸೆಲ್ಫಿ ತೆಗೆಯಲು ನದಿ ದಂಡೆಗೆ ತೆರಳುವುದನ್ನು ತಪ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಇಂತಹ ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. 🏷️ #KrishnaRiver #FloodAlert #KarnatakaNews #Surpur #Yadgir #NarayanpurDam #BasavaSagara #BreakingNews #KannadaNews #FloodWarning #KrishnaFlood #ASNNews24Kannada #Karnataka #ViralNews #LatestNews1
- ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಆರೋಪ ರಾಯಚೂರು, ಜು.31: ಹಜರತ್ ಸೈಯದ್ ಶಾ ಶಮ್ಸ್ ಆಲಂ ಹುಸೈನಿ ದರ್ಗಾ ಉರ್ಸ್–2026ಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡುವಲ್ಲಿ ಜೆಸ್ಕಾಂ ಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಲಿಖಿತ ಆದೇಶಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆದುಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಅಂಬಾಜಿ ರಾವು ಗಂಭೀರ ಆರೋಪ ಮಾಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಗಾದ ಅಧಿಕೃತ ಮುತ್ತವಲಿಯವರ ಅನುಮತಿ ಪತ್ರ (ಎನ್‌ಒಸಿ) ಪಡೆಯದೆ ಯಾವುದೇ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮುಖ್ಯ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸ್ಪಷ್ಟ ನಿರ್ದೇಶನ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಧಿಕ್ಕರಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ ಎಂದು ದೂರಿದರು. ಈ ಕುರಿತು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದೇ ಸಂಬಂಧಪಟ್ಟ ಅಧಿಕಾರಿಗಳ ಪರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಉರ್ಸ್ ಸಂದರ್ಭದಲ್ಲಿ ಯಾವುದೇ ಇಲಾಖೆಯ ಅನುಮತಿ ಪಡೆಯದೆ ಜೂಲಾಗಳು ಹಾಗೂ ವ್ಯಾಪಾರ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದವು. ಆರಂಭದಲ್ಲಿ ಎಲ್ಲಾ ಅಗತ್ಯ ಅನುಮತಿಗಳು ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಆದರೆ ನಂತರ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿದಾಗ ಯಾವುದೇ ಅನುಮತಿ ನೀಡಿಲ್ಲ ಹಾಗೂ ಸರ್ಕಾರದ ಖಜಾನೆಗೆ ನಿಗದಿತ ಶುಲ್ಕವೂ ಪಾವತಿಯಾಗಿಲ್ಲ ಎಂಬುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾತ್ರಿ ಅಕ್ರಮ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು. ಭ್ರಷ್ಟಾಚಾರದ ಆರೋಪ ಎದುರಿಸಿದ್ದ ಅಧಿಕಾರಿಗೆ ಮತ್ತೆ ರಾಯಚೂರಿನಲ್ಲೇ ಪದೋನ್ನತಿಯೊಂದಿಗೆ ನೇಮಕ ನೀಡಿರುವುದು ಸಾರ್ವಜನಿಕರ ದುರಾದೃಷ್ಟಕರ ಸಂಗತಿಯಾಗಿದೆ ಎಂದು ಆರೋಪಿಸಿದ ಅವರು, ಇಂತಹ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ಪ್ರಕರಣವನ್ನು ಸ್ವತಂತ್ರ ಹಾಗೂ ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ, ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಜರುಗಿಸಬೇಕು. ಅನುಮತಿ ಇಲ್ಲದೆ ವ್ಯಾಪಾರ ನಡೆಸಲು ಅವಕಾಶ ನೀಡಿದ ಅಧಿಕಾರಿಗಳ ಪಾತ್ರವನ್ನೂ ತನಿಖೆ ನಡೆಸಿ, ಕರ್ತವ್ಯಲೋಪ ಎಸಗಿದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಸೂದ್ ಅಲಿ, ಮೊಹಮ್ಮದ್ ಅಲೀಂ ಹಾಗೂ ರಘು ನನ್ನೋರೆ ಉಪಸ್ಥಿತರಿದ್ದರು.1
- ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ- ಡಿಜಿಪಿ ಅಲೋಕ್ ಕಲಬುರಗಿ ಸೆಂಟ್ರಲ್ ಜೈಲಿಗೆ ಡಿಜಿಪಿ ಅಲೋಕಕುಮಾರ ಭೇಟಿನೀಡಿ ಬಳಿಕ ಡಿಜಿಪಿ ಅಲೋಕಕುಮಾರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು.ಜೈಲಿನಿಂದ ಮೂವರು ಕೈದಿಗಳ ಪರಾರಿ ಘಟನೆ ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೇ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ, ಮಸ್ತಾನ್ ಬಂಧನಕ್ಕೆ ಹುಡುಕಾಟ ನಡೆಸ್ತಿದಾರೆ,ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ,ಜೈಲಿನ ಭದ್ರತೆ ಹೆಚ್ಚಿಸಲು ಅಧಿಕಾರಿಗಳ ಜೊತೆ ಚರ್ಚಿಸಿಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ,ಜೈಲಿನ ತಂತಿ ಬೇಲಿ ಸುಸ್ಥಿತಿಯಲ್ಲಿಡಲು ಸೂಚಿಸಲಾಗಿದೆ,ಜೈಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಶೀಘ್ರದಲ್ಲೇ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗುವುದು, ಇನ್ನು ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಹೇಳಿದರು1
- ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳ ತುಲಾಭಾರ ನಡೆಯಿತು. ಗುರುಪೂರ್ಣಿಮೆ ಸಂಭ್ರಮ: ಅಬ್ಬೆತುಮಕೂರು ವಿಶ್ವಾರಾಧ್ಯರ ಮಠದಲ್ಲಿ ಶ್ರೀಗಳಿಗೆ ತುಲಾಭಾರ ಗುರುವಿನ ಕರುಣೆಯಿಂದಲೇ ಜೀವನ ಸಾರ್ಥಕ: ಡಾ. ಗಂಗಾಧರ ಮಹಾಸ್ವಾಮೀಜಿ ಗುರುಮಠಕಲ್: ಗುರುಪೂರ್ಣಿಮೆ ಅಂಗವಾಗಿ ಜಿಲ್ಲೆಯಾದ್ಯಂತ ಮಠ–ಮಂದಿರಗಳಲ್ಲಿ ಗುರುವಂದನೆ, ಪಾದಪೂಜೆ, ರುದ್ರಾಭಿಷೇಕ ಹಾಗೂ ತುಲಾಭಾರ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಪೀಠಾಧಿಪತಿ ಡಾ. ಗಂಗಾಧರ ವಿಶ್ವಾರಾಧ್ಯ ಮಹಾಸ್ವಾಮೀಜಿ ಅವರಿಗೆ ಭಕ್ತರು ಭವ್ಯ ತುಲಾಭಾರ ನೆರವೇರಿಸಿ ಗುರುವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮೀಜಿ, "ಹರ ಮುನಿದರೂ ಗುರು ಕಾಯುವನು ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಕೃಪೆ ಅತ್ಯಂತ ಮಹತ್ವದ್ದಾಗಿದೆ. ತಾಯಿ–ತಂದೆ ಜನ್ಮ ನೀಡಿದರೆ, ಸಂಸ್ಕಾರ, ಜ್ಞಾನ ಹಾಗೂ ಬದುಕಿನ ದಾರಿ ತೋರಿಸುವವರು ಗುರುಗಳು. ಆದ್ದರಿಂದ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುಸ್ಮರಣೆ ಮತ್ತು ಗುರುಕೃಪೆ ಪಡೆಯುವುದನ್ನು ಮರೆಯಬಾರದು ಎಂದು ಹೇಳಿದರು. ಗುರು ಎಂದರೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಶಕ್ತಿ. ಗುರುಪೂರ್ಣಿಮೆ ದಿನ ಗುರುಗಳ ದರ್ಶನ, ಸೇವೆ ಮತ್ತು ಪೂಜೆ ಸಲ್ಲಿಸುವುದರಿಂದ ಸುಖ, ಶಾಂತಿ ಹಾಗೂ ನೆಮ್ಮದಿ ಲಭಿಸುತ್ತದೆ ಎಂದು ಅವರು ತಿಳಿಸಿದರು. ಬೆಳಗ್ಗೆಯಿಂದಲೇ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಪೂಜೆ ಸಲ್ಲಿಸಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದರು. ಪ್ರಕಾಶ ಸೇಡಂ ಅವರು ಶ್ರೀಗಳಿಗೆ ಹೂವಿನ ಅಭಿಷೇಕ ನೆರವೇರಿಸಿದರು. ಮಠದ ಕಿರಿಯ ಪೀಠಾಧಿಪತಿ ಶಿವಶೇಖರ ವಿಶ್ವಾರಾಧ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ಗುರುಮಠಕಲ್‌ನ ಯುವ ಮುಖಂಡ ರಾಜ ರಮೇಶಗೌಡ, ಅನಂತಪ್ಪ ಬೋಯಿನ್ ಯದ್ಲಾಪುರ್, ಡಾ. ಸುಭಾಷಚಂದ್ರ ಕೌಲಗಿ, ವಿಶ್ವನಾಥ ಸಿರವಾರ, ಯುವ ಉದ್ಯಮಿ ಶಿವರೆಡ್ಡಿ ಪಾಲಪ್, ಮಲ್ಲಿಕಾರ್ಜುನ ರೆಡ್ಡಿ ಇಜಾರ, ಗುರುಸ್ವಾಮಿ, ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಸವರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.3