ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮಕ್ಕೆ ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮದ ಹಿರಿಯರು ಮತ್ತು ಗ್ರಾಮಸ್ಥರ ವತಿಯಿಂದ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಅಭಿನಂದನಾಪೂರ್ವಕ ಸನ್ಮಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಗ್ರಾಮೀಣ ಭಾಗದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಈ ಶಾಲೆಯನ್ನು ಮಂಜೂರು ಮಾಡಿಸಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ತಿಳಿಸಿದರು. ಗ್ರಾಮಸ್ಥರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜನರ ಬೇಡಿಕೆಗೆ ಸ್ಪಂದಿಸಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಈ ಶಾಲೆಗೆ ಅನುಮೋದನೆ ಪಡೆಯಲಾಗಿದೆ ಎಂದರು. ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನಿಷ್ಠ ವೆಚ್ಚದಲ್ಲಿ ಅತ್ಯುನ್ನತ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡುವುದು ತಮ್ಮ ಗುರಿಯಾಗಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಒಂದೇ ಸೂರಿನಡಿ ಎಲ್‌ಕೆಜಿಯಿಂದ ಯುಕೆಜಿ ಹಾಗೂ 8ನೇ ತರಗತಿಯಿಂದ 12ನೇ ತರಗತಿಯವರೆಗೆ ಶಿಕ್ಷಣ ಲಭ್ಯವಾಗುತ್ತಿರುವುದು ಗ್ರಾಮದ ಶೈಕ್ಷಣಿಕ ಪ್ರಗತಿಗೆ ದೊಡ್ಡ ಮೈಲಿಗಲ್ಲು ಎಂದು ಸ್ಥಳೀಯ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಿದರಾಯ ಯಲ್ಲಡಗಿ, ಅಪ್ಪಾಸಾಬ ಬಿರಾದಾರ, ಸಿದ್ದಣ್ಣ ದೊಡ್ಡನಿಂಗಪ್ಪಗೋಳ, ಶಿವಾನಂದ ತೇಲಿ, ರಘುನಾಥ ದೊಡ್ಡನಿಂಗಪ್ಪಗೋಳ, ನಿಂಗಪ್ಪ ಸತ್ತಿ, ರವಿ ಹಂಜಿ, ಸತೀಶ ಉಪಾಸೆ, ಸುರೇಶ ಖಡಕಿ, ಸಿದ್ದು ಬಡವಗೋಳ, ಶ್ರೀಶೈಲ ಪೋಪಡಿ, ಶಿವಪ್ರಭು ಅಥಣಿ, ಭಾವುರಾಜ ಜಳಕಿ, ರವಿ ಮಾಳಿ, ಗಿರೀಶ ಸಿಂಧೂರ, ರಮೇಶ ಪಾಟೀಲ್ ಹಾಗೂ ಸಣ್ಣಪ್ಪ ದಾನಪ್ಪಗೋಳ ಸೇರಿದಂತೆ ಕೊಟ್ಟಲಗಿ ಗ್ರಾಮದ ಹಿರಿಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

- ರಾಯಭಾಗ ತಾಲೂಕಿನ ಭಿರಡಿ ಗ್ರಾಮದ ಬಸವ ನಗರದಲ್ಲಿ ಶ್ರೀ ಬಸವರಾಜ್ ಶೇಖರ ಬೊರಗಾಂವೆ ಅವರ ಮಾಲೀಕತ್ವದ “ಮಾಯಕ್ಕಾ ಆಗ್ರೋ ಮಿಲ್” ನೂತನ ಉದ್ಘಾಟನೆ ಹಾಗೂ ಪ್ರಾರಂಭೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಶ್ರೀಸದ್ಗುರು ರಾಯಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು ಉಪಸ್ಥಿತರಿದ್ದು, ಸದಾಶಿವ ದೇಶಿಂಗೆ ಹಾಗೂ ಭಿರಡಿ ಗ್ರಾಮದ ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾದ ಚೈತನ ಸೇರಿದಂತೆ ಇತರ ಗಣ್ಯರನ್ನು ಸನ್ಮಾನಿಸಿದರು. ಈ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಮಹಾದೇವ ಮಾರುತಿ ಬೋರಗಾಂವೆ, ವೀರಪಾಕ್ಷಿ ಬೋರಗಾಂವೆ, ರಾಜು ಹಿಪ್ಪರಿಗಿ, ಶೇಖರ ಬೋರಗಾಂವೆ, ಕಲ್ಲು ಅಂಬರಗೆ, ಚಿದಾನಂದ ಸ್ವಾಮಿ ಅಲಕನೂರ ಸೇರಿದಂತೆ ಹಲವರು ಭಾಗವಹಿಸಿದ್ದರು.1
- Post by ANUSHKA FOOTWEAR Nagarmunnoli1
- ಬಾಗಲಕೋಟೆ ಜಿಲ್ಲೆಯ ಬಿಳಗಿ ಪರಿಸರದಲ್ಲಿ ಅರಣ್ಯ ಇಲಾಖೆಯ ಕ್ರಮದ ವಿರುದ್ಧ ರೈತರು ಮತ್ತು ಕುರಿಗಾಹಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮ ಕುರಿ ನಿಮ್ಮ ಅರಣ್ಯಕ್ಕೆ ಬರಬಾರದೆಂದರೆ, ನಿಮ್ಮ ಕಾಡು ಪ್ರಾಣಿಗಳು ನಮ್ಮ ಹೊಲ-ಗದ್ದೆಗೂ ಬರಬಾರದು" ಎಂದು ರೈತ ಸಿದ್ದಪ್ಪ ಬಳಗಾನೂರ ಅವರು ಅರಣ್ಯ ಅಧಿಕಾರಿಗಳಿಗೆ ನೇರ ಸವಾಲು ಹಾಕಿದ್ದಾರೆ. ಅರಣ್ಯ ಇಲಾಖೆಯು ರೈತರ ಆಡು ಮತ್ತು ಕುರಿಗಳನ್ನು ವಶಪಡಿಸಿಕೊಳ್ಳುತ್ತಿರುವುದು ಹಾಗೂ ದಂಡ ವಿಧಿಸುತ್ತಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಇದು ಅಧಿಕಾರಿಗಳು ಮತ್ತು ರೈತರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಕಾಡುಹಂದಿ ಹಾಗೂ ಜಿಂಕೆಗಳ ಹಾವಳಿಯಿಂದ ಹೊಲಗಳಲ್ಲಿ ಬೆಳೆ ನಾಶವಾಗುತ್ತಿದೆ ಎಂದು ರೈತರು ಆರೋಪಿಸಿದ್ದು, ಬೆಳೆ ಹಾನಿಗೆ ಶಾಶ್ವತ ಪರಿಹಾರ ಹಾಗೂ ಸೂಕ್ತ ಪರಿಹಾರ ಧನ ನೀಡುವಂತೆ ಒತ್ತಾಯಿಸಿದ್ದಾರೆ. ಇಲಾಖೆಯು ತನ್ನ ಏಕಪಕ್ಷೀಯ ಕ್ರಮಗಳನ್ನು ನಿಲ್ಲಿಸಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಲಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸ್ಥಳೀಯ ರೈತರ ಪರ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ದಟ್ಟವಾಗಿದೆ.1
- ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದರಿಂದ ಅಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಕೃಷ್ಣ ನದಿಯ ನೀರಿನ ಒಳಹರಿವು ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಉಂಟಾಗಿರುವ ಈ ಮಳೆಯ ತೀವ್ರತೆಯ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.1
- ವಿಜಯಪುರದಲ್ಲಿ ಎಸ್‌ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಯತ್ನಾಳ್ ಬೆಂಬಲಿಗರು ಹಾಗೂ ಹಮೀದ್ ಮುಶ್ರಿಫ್ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ.1
- ಬೆಳಗಾವಿ ಜಿಲ್ಲೆಯ ರಾಯಭಾಗ ಕೆರೆಗಳಿಗೆ ಅಧಿಕಾರಿಗಳು ಯಶಸ್ವಿಯಾಗಿ ಜೀವ ತುಂಬಿದ್ದಾರೆ. ತಹಸೀಲ್ದಾರ್ ಹಾಗೂ ಮಹಾವೀರ ಮೋಹತೆ ಅವರ ಮುಂದಾಳತ್ವದಲ್ಲಿ ಈ ಕಾರ್ಯ ಯಶಸ್ವಿಯಾಗಿ ನಡೆದಿದೆ.1
- ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೆಂಕಿಯ ಅವಘಡ ಸಂಭವಿಸಿದ್ದು, ಒಂದು ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಅನಾಹುತದ ವೇಳೆ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕಾರ್ಮಿಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.1