ತಳಕು ವೃತ್ತ ನಿರೀಕ್ಷಕ ಹನುಮಂತಪ್ಪ ಶಿರೀಹಳ್ಳಿಗೆ 2025 ರ ಮುಖ್ಯಮಂತ್ರಿ ಪದಕ ಪ್ರಶಸ್ತಿ. ಚಳ್ಳಕೆರೆ ತಾಲೂಕಿನ ತಳಕು ವಿಭಾಗೀಯ ವೃತ್ತ ನಿರೀಕ್ಷಕರಾಗಿ ಕರ್ತವ್ಯದಲ್ಲಿರುವ ಹನುಮಂತಪ್ಪ ಶಿರೀಹಳ್ಳಿ ಅವರು, 2025 ರ ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏಪ್ರೀಲ್ 2 ರಂದು ಬೆಂಗಳೂರಿನ ಕೊರಮಂಗಲದಲ್ಲಿ ಜರುಗುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡೈರೆಕ್ಟರ್ ಜನರಲ್ ಆ್ಯಂಡ್ ಇನ್ಸ್ ಪೆಕ್ಟರ್ ಡಾ.ಎಂ.ಎಂ. ಸಲೀಂ ತಿಳಿಸಿದ್ದಾರೆ. ವಿಜೇತರು ಹಾವೇರಿ ಜಿಲ್ಲೆಯ ಮಹಂತೇಶಪ್ಪ, ಲಕ್ಷ್ಮಮ್ಮ ಎಂಬ ದಂಪತಿಗಳ ಮಗನಾಗಿ ಜನಿಸಿದವರು. 2010 ರಲ್ಲಿ ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ನೇಮಕಗೊಂಡವರು. ಆರಂಭದಲ್ಲಿ ದಾವಣಗೆರೆ ಬಳಿಕೆ ಹುಬ್ಬಳ್ಳಿ, ಹರಿಹರದಲ್ಲಿ ಸೇವೆ ಮಾಡಿ, ಪ್ರಸ್ತುತ ಚಳ್ಳಕೆರೆ ತಾಲೂಕಿನ ತಳಕು ವಿಭಾಗದಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆಯಲ್ಲಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನೊಂದ ಸಾರ್ವಜನಿಕರಿಗೆ ನ್ಯಾಯ ಮಾರ್ಗದಲ್ಲಿ ಕಾನೂನು ರಕ್ಷಣೆ ನೀಡುವಲ್ಲಿ ಬದ್ದತೆ ಇರಬೇಕು. ಇಲಾಖೆ ಗೌರವ ಕಾಪಾಡಿಕೊಂಡು ಸಮಾಜದ ಸುವ್ಯವಸ್ಥೆ ಜವಾಬ್ದಾರಿಯಲ್ಲಿ ಸದಾ ಜಾಗೃತಿ ಇರಬೇಕು. ಸಾರ್ವಜನಿಕರ ನಂಬಿಕೆ ಉಳಿಸಿಕೊಳ್ಳುವ ರೀತಿಯಲ್ಲಿ ಕರ್ತವ್ಯ ಇರಬೇಕು ಎಂದಿದ್ದಾರೆ. .

- ಏಪ್ರಿಲ್1 ರಿಂದ 15 ನೇ ತಾರೀಖಿನವರೆಗೆ ಸ್ವಯಂ ಜನಗಣತೆ..1
- ಚಪ್ಪಲಿ ಪೊರಕೆ ತೋರಿಸುವುದು ಬಿಜೆಪಿ ಸಂಸ್ಕೃತಿ ಎಂದು ಚಿತ್ರದುರ್ಗದಲ್ಲಿ ಯೋಗೀಶ್ ಬಾಬು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ದ್ರಾಕ್ಷ ರಸ ಮಂಡಳಿ ಅಧ್ಯಕ್ಷರಾದ ಯೋಗೀಶ್ ಬಾಬು ಅವರು ಮಾತನಾಡಿದ್ದು ಯಾರಿಗೂ ಕೂಡ ಅಲ್ಲಿಗೆ ಬರ್ರಿ ಇಲ್ಲಿಗೆ ಬರ್ರಿ ಎಂದು ಸವಾಲ್ ಹಾಕುವುದು ಸರಿಯಲ್ಲ, ಎಲ್ಲರಿಗೂ ಕೂಡ ವಾಕ್ ಸ್ವಾತಂತ್ರ್ಯ ಇರುತ್ತದೆ. ದಾವಣಗೆರೆಗೆ ಬನ್ನಿ ಎಂದು ಹೇಳುವುದು ತಪ್ಪು ಎಂದು ಟಾಂಗ್ ಕೊಟ್ಟಿದ್ದಾರೆ1
- ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾನದಿಗೆ ಸೇತುವೆಗಳ ಮೇಲಿಂದ ಕಸ ಎಸೆಯುತ್ತಿದ್ದು ಅವರುಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾನದಿ ಸಂರಕ್ಷಣಾ ಪಡೆ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.ಪವಿತ್ರ ನದಿಗೆ ಕೆಲ ಅನಾಗರಿಕ ಸಾರ್ವಜನಿಕರು ಎರಡು ಸೇತುವೆಗಳ ಮೇಲಿಂದ ಕಸ,ಪ್ಲಾಸ್ಟಿಕ್ ಬ್ಯಾಗ್ ಎಸೆದು ಮಲೀನ ಮಾಡುತ್ತಿದ್ದು, ಇದರಿಂದ ನದಿ ಹಾಗೂ ಜಲಚರಗಳಿಗೆ ಕುತ್ತು ತರುತ್ತಿದೆ. 1974 ಜಾಲಮಾಲಿನ್ಯ ಕಾಯ್ದೆ ತಡೆಗಟ್ಟುವ ಸೆಕ್ಷನ್ 24 ರ ಅನ್ವಯ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ 41 ಮತ್ತು 45 ರ ಸೆಕ್ಷನ್ ಅನ್ವಯ ದಂಡನೆಯನ್ನು ವಿಧಿಸಬಹು ದಾಗಿದೆ. ಘನ ತ್ಯಾಜ್ಯ ನಿರ್ವಹಣೆ 2016 ರ ಕಾಯ್ದೆ ಅನ್ವಯ ಯಾವುದೇ ನದಿ ಪಾತ್ರ ಗಳಲ್ಲಿ ಕಸ ಎಸೆಯುವುದು, ಘನತ್ಯಾಜ್ಯ ನಿರ್ಬಂಧವಿದ್ದರೂ ಆದೇಶ ಗಾಳಿಗೆ ತೂರಿದಂತಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಲವು ನಗರಸಭೆಗಳ ಮೇಲೆ ಪರಿಸರ ಪರಿಹಾರ ವಿಧಿಸಿದ್ದು ಓಡಿಶಾ ರಾಜ್ಯದ ಕೇಂದ್ರಪುರ ಮುನಿಸಿಪಾಲಿಟಿ, ಚಂಬಲ್ ನದಿ ಪ್ರಕರಣ, ಗೊರಕ್ ಪುರ ಕೊಳಚೆ ನೀರು ಪ್ರಕರಣಗಳನ್ನು ಗಮನಿಸಿ ಕೂಡಲೇ ಭದ್ರಾ ನದಿಯ ಮಾಲಿನ್ಯ ತಡೆಗೆ ಮುಂದಾಗುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಭದ್ರಾ ನದಿ ಸಂರಕ್ಷಣಾ ಪಡೆಯ ಸಿ.ತೀರ್ಥೇಶ್,ಡಿಎಸ್ಎಸ್ ಮುಖಂಡ ದಾಸರಕಲ್ಲಳ್ಳಿ ನಾಗರಾಜ್, ಹರೀಶ್, ಹಿರಿಯ ಹೋರಾಟಗಾರ ಜಯಣ್ಣ, ಗಣೇಶ್, ರೈತ ಮುಖಂಡ ಇಮ್ರಾನ್ ಪಾಷಾ, ಭದ್ರಾನದಿ ಸಂರಕ್ಷಣಪಡೆಯ ಮುಖ್ಯಸ್ಥ ರಾದ ಕಾರ್ತಿಕ್ ಕಿದ್ಮಯ್ ಉಪಸ್ಥಿತರಿದ್ದರು.1
- ಚಲಿಸುತ್ತಿದ್ದ ಬಸ್ಸಿನಿಂದ ಆಯತಪ್ಪಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ #JB_News_Kannada #ಬೆಳ್ತಂಗಡಿ1
- ಕುಣಿಗಲ್ ತಾಲ್ಲೂಕಿನ ಉಜ್ಜನಿ ಗ್ರಾಮದಲ್ಲಿ ಚೌಡೇಶ್ವರಿ ದೇವಿ ಜಾತ್ರೆ ಪ್ರಯುಕ್ತ ಇಂದು ಅಗ್ನಿಕೊಂಡ ಉತ್ಸವಕ್ಕೆ ಚಾಲನೆ ನೀಡಲಾಯಿತು. ಏಷ್ಯಾದಲ್ಲಿ ಅತಿ ಎತ್ತರದ ಅಗ್ನಿಕೊಂಡ ಉತ್ಸವ ಎಂದು ಪ್ರಸಿದ್ಧಿ ಪಡೆದಿದೆ. ಈ ಅಗ್ನಿಕೊಂಡಕ್ಕೆ ಹುಲಿಯೂರುದುರ್ಗ, ಚೌಡನಕುಪ್ಪೆ, ಉಜ್ಜನಿಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕೊಂಡಕ್ಕೆ ಸೌದೆ ಸಮರ್ಪಿಸಿ ತಾಯಿ ಚೌಡೇಶ್ವರಿ ದೇವಿ ಯ ಕೃಪೆ ಗೆ ಪಾತ್ರರಾದರು....1
- ಕಡೂರು : ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲು ಬಂದಿದ್ದ ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ. ಬಾಳೆಗಿಡಗಳ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಲಾಗಿದೆ. ಬಾಳೆಗಿಡದ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುತ್ತಾ ಬರಲಾಗಿದೆ. ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಡಿದು ಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ. ಮಂಗಳವಾರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೃತ್ಯ ವೆಸಗಿದ ಕಿಡಿಗೇಡಿಗಳ ಪತ್ತೆಗಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.3
- ಶುದ್ದ ಕುಡಿಯುವ ನೀರಿನ ಘಟಕಗಳ ಹಾಗೂ ಆಶ್ರಯ ಯೋಜನೆ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಬಾಗೇಪಲ್ಲಿ:- ಇಂದು ಬಾಗೆಪಲ್ಲಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಎಸ್. ಎನ್. ಸುಬ್ಬಾರೆಡ್ಡಿ ಶಾಸಕರು ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರ ರವರ ಅಧ್ಯಕ್ಷತೆಯಲ್ಲಿ ಡಾ|| ನವೀನ್ ಭಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿ. ಪಂ ರವರ ಉಪಸ್ಥಿತಿಯಲ್ಲಿ ಶುದ್ದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ, ಶುದ್ದ ಕುಡಿಯುವ ನೀರಿನ ಘಟಕಗಳ ಬಗ್ಗೆ ಮತ್ತು ಆಶ್ರಯ ಯೋಜನೆ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯದರ್ಶಿ ಜಿ. ಪಂ,ಜಿಲ್ಲಾ ಕುಡಿಯುವ ನೀರು & ನೖರ್ಮಲ್ಯ ಇಲಾಖೆಯ ಇಂಜಿನಿಯರ್ ಬಾಗೆಪಲ್ಲಿ ಗುಡಿಬಂಡೆ,ಹಾಗೂ ಚೇಳೂರು ತಾಲ್ಲೂಕಿನ ತಹಶಿಲ್ದಾರು,ಕಾರ್ಯನಿರ್ವಾಹಕ ಅಧಿಕಾರಿಗಳು,ಸಹಾಯಕ ನಿರ್ದೇಶಕರು ,ಮೂರು ತಾಲ್ಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು,ಸಿಬ್ಬಂದಿಗಳು ಹಾಜರಿದ್ದರು1
- Post by Suresh Belagere1