ಭೂಮಾನಂದ ಹತ್ಯೆ ಖಂಡಿಸಿ ಉಗ್ರ ಪ್ರತಿಭಟನೆ ಪ್ರಕರಣ ದಿಕ್ಕುತಪ್ಪಿಸಿದರೆ ರಾಜ್ಯಾದ್ಯಂತ ಹೋರಾಟ: ಮುಖಂಡರ ಎಚ್ಚರಿಕೆ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹ; ರಸ್ತೆ ತಡೆ ಬಳಿಕ ಧರಣಿ ಮುಂದುವರಿಕೆ ದೇವದುರ್ಗ, ಆ.5: ತಾಲೂಕಿನ ಸಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಭೂಮಾನಂದ ಎಂಬ ಯುವಕನ ಭೀಕರ ಹತ್ಯೆಯನ್ನು ಖಂಡಿಸಿ ಗ್ರಾಮದಲ್ಲಿ ಬುಧವಾರ ರಸ್ತೆ ತಡೆ ಹಾಗೂ ಧರಣಿ ನಡೆಸಿದ ಪ್ರತಿಭಟನಾಕಾರರು, ಪ್ರಕರಣವನ್ನು ಯಾವುದೇ ಜಾತಿಯ ಚೌಕಟ್ಟಿನಲ್ಲಿ ಸೀಮಿತಗೊಳಿಸದೆ ಮಾನವೀಯ ದೃಷ್ಟಿಕೋನದಿಂದ ತನಿಖೆ ನಡೆಸುವಂತೆ ಆಗ್ರಹಿಸಿದರು. ಧರಣಿಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, "ಈ ಹತ್ಯೆಯ ಹಿಂದೆ ಗಂಭೀರ ಷಡ್ಯಂತ್ರ ಇರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆ ಯಾವುದೇ ಪ್ರಭಾವ, ಒತ್ತಡ ಅಥವಾ ರಾಜಕೀಯ ಹಸ್ತಕ್ಷೇಪಕ್ಕೆ ಮಣಿದು ತನಿಖೆಯ ದಿಕ್ಕು ತಪ್ಪಿಸಿದರೆ ಅದನ್ನು ಸಹಿಸುವುದಿಲ್ಲ. ನ್ಯಾಯಕ್ಕಾಗಿ ರಾಜ್ಯಾದ್ಯಂತ ಹೋರಾಟಕ್ಕೆ ಇಳಿಯಬೇಕಾದ ಪರಿಸ್ಥಿತಿ ಬಂದರೂ ಹಿಂದೆ ಸರಿಯುವುದಿಲ್ಲ. ನಾವು ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವದಲ್ಲಿ ನಂಬಿಕೆ ಇಟ್ಟವರು," ಎಂದು ಎಚ್ಚರಿಕೆ ನೀಡಿದರು. "ಯಾವುದೇ ವೈಷಮ್ಯಕ್ಕೆ ಕೊಲೆಯೇ ಪರಿಹಾರವಾಗಲಾರದು. ಭಿನ್ನಾಭಿಪ್ರಾಯಗಳಿದ್ದರೆ ಕಾನೂನು ಚೌಕಟ್ಟಿನಲ್ಲೇ ಬಗೆಹರಿಸಿಕೊಳ್ಳಬೇಕು. ಹಾಡಹಗಲೇ ಯುವಕನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ," ಎಂದು ಖಂಡಿಸಿದರು. ಮೃತ ಭೂಮಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ನಿಯಮಾನುಸಾರ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕೊಲೆ ಪ್ರಕರಣದ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ (ಅಟ್ರಾಸಿಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಹನುಮಂತಪ್ಪ ಕಾಕರಗಲ್, "ಇದು ಯಾವುದೇ ಜಾತಿಯ ವಿರುದ್ಧದ ಹೋರಾಟವಲ್ಲ. ಅಮಾಯಕ ಯುವಕನ ಕೊಲೆಗೆ ನ್ಯಾಯ ಒದಗಿಸುವ ಹೋರಾಟ. ಮಂಗಳವಾರ ತಡರಾತ್ರಿ ಪೊಲೀಸ್ ಅಧಿಕಾರಿಯೊಬ್ಬರು ಕರೆ ಮಾಡಿ ಆರೋಪಿಗಳನ್ನು ಬಂಧಿಸಿರುವುದಾಗಿ ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ," ಎಂದು ಹೇಳಿದರು. ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ರಸ್ತೆ ತಡೆಯನ್ನು ಹಿಂಪಡೆದು, ಮರಣೋತ್ತರ ಪರೀಕ್ಷೆ ಬಳಿಕ ಭೂಮಾನಂದ ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಬಂದ ನಂತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಧರಣಿಯನ್ನು ಅಂತ್ಯಗೊಳಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು, ಗ್ರಾಮಸ್ಥರು ಹಾಗೂ ಯುವಕರು ಪಾಲ್ಗೊಂಡು, ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಭೂಮಾನಂದ ಹತ್ಯೆ ಖಂಡಿಸಿ ಉಗ್ರ ಪ್ರತಿಭಟನೆ ಪ್ರಕರಣ ದಿಕ್ಕುತಪ್ಪಿಸಿದರೆ ರಾಜ್ಯಾದ್ಯಂತ ಹೋರಾಟ: ಮುಖಂಡರ ಎಚ್ಚರಿಕೆ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹ; ರಸ್ತೆ ತಡೆ ಬಳಿಕ ಧರಣಿ ಮುಂದುವರಿಕೆ ದೇವದುರ್ಗ, ಆ.5: ತಾಲೂಕಿನ ಸಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಭೂಮಾನಂದ ಎಂಬ ಯುವಕನ ಭೀಕರ ಹತ್ಯೆಯನ್ನು ಖಂಡಿಸಿ ಗ್ರಾಮದಲ್ಲಿ ಬುಧವಾರ ರಸ್ತೆ ತಡೆ ಹಾಗೂ ಧರಣಿ ನಡೆಸಿದ ಪ್ರತಿಭಟನಾಕಾರರು, ಪ್ರಕರಣವನ್ನು ಯಾವುದೇ ಜಾತಿಯ ಚೌಕಟ್ಟಿನಲ್ಲಿ ಸೀಮಿತಗೊಳಿಸದೆ ಮಾನವೀಯ ದೃಷ್ಟಿಕೋನದಿಂದ ತನಿಖೆ ನಡೆಸುವಂತೆ ಆಗ್ರಹಿಸಿದರು. ಧರಣಿಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, "ಈ ಹತ್ಯೆಯ ಹಿಂದೆ ಗಂಭೀರ ಷಡ್ಯಂತ್ರ ಇರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆ ಯಾವುದೇ ಪ್ರಭಾವ, ಒತ್ತಡ ಅಥವಾ ರಾಜಕೀಯ ಹಸ್ತಕ್ಷೇಪಕ್ಕೆ ಮಣಿದು ತನಿಖೆಯ ದಿಕ್ಕು ತಪ್ಪಿಸಿದರೆ ಅದನ್ನು ಸಹಿಸುವುದಿಲ್ಲ. ನ್ಯಾಯಕ್ಕಾಗಿ ರಾಜ್ಯಾದ್ಯಂತ ಹೋರಾಟಕ್ಕೆ ಇಳಿಯಬೇಕಾದ ಪರಿಸ್ಥಿತಿ ಬಂದರೂ ಹಿಂದೆ ಸರಿಯುವುದಿಲ್ಲ. ನಾವು ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವದಲ್ಲಿ ನಂಬಿಕೆ ಇಟ್ಟವರು," ಎಂದು ಎಚ್ಚರಿಕೆ ನೀಡಿದರು. "ಯಾವುದೇ ವೈಷಮ್ಯಕ್ಕೆ ಕೊಲೆಯೇ ಪರಿಹಾರವಾಗಲಾರದು. ಭಿನ್ನಾಭಿಪ್ರಾಯಗಳಿದ್ದರೆ ಕಾನೂನು ಚೌಕಟ್ಟಿನಲ್ಲೇ ಬಗೆಹರಿಸಿಕೊಳ್ಳಬೇಕು. ಹಾಡಹಗಲೇ ಯುವಕನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ," ಎಂದು ಖಂಡಿಸಿದರು. ಮೃತ ಭೂಮಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ನಿಯಮಾನುಸಾರ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕೊಲೆ ಪ್ರಕರಣದ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ (ಅಟ್ರಾಸಿಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಹನುಮಂತಪ್ಪ ಕಾಕರಗಲ್, "ಇದು ಯಾವುದೇ ಜಾತಿಯ ವಿರುದ್ಧದ ಹೋರಾಟವಲ್ಲ. ಅಮಾಯಕ ಯುವಕನ ಕೊಲೆಗೆ ನ್ಯಾಯ ಒದಗಿಸುವ ಹೋರಾಟ. ಮಂಗಳವಾರ ತಡರಾತ್ರಿ ಪೊಲೀಸ್ ಅಧಿಕಾರಿಯೊಬ್ಬರು ಕರೆ ಮಾಡಿ ಆರೋಪಿಗಳನ್ನು ಬಂಧಿಸಿರುವುದಾಗಿ ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ," ಎಂದು ಹೇಳಿದರು. ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ರಸ್ತೆ ತಡೆಯನ್ನು ಹಿಂಪಡೆದು, ಮರಣೋತ್ತರ ಪರೀಕ್ಷೆ ಬಳಿಕ ಭೂಮಾನಂದ ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಬಂದ ನಂತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಧರಣಿಯನ್ನು ಅಂತ್ಯಗೊಳಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು, ಗ್ರಾಮಸ್ಥರು ಹಾಗೂ ಯುವಕರು ಪಾಲ್ಗೊಂಡು, ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
- ಭೂಮಾನಂದ ಹತ್ಯೆ ಖಂಡಿಸಿ ಉಗ್ರ ಪ್ರತಿಭಟನೆ ಪ್ರಕರಣ ದಿಕ್ಕುತಪ್ಪಿಸಿದರೆ ರಾಜ್ಯಾದ್ಯಂತ ಹೋರಾಟ: ಮುಖಂಡರ ಎಚ್ಚರಿಕೆ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹ; ರಸ್ತೆ ತಡೆ ಬಳಿಕ ಧರಣಿ ಮುಂದುವರಿಕೆ ದೇವದುರ್ಗ, ಆ.5: ತಾಲೂಕಿನ ಸಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಭೂಮಾನಂದ ಎಂಬ ಯುವಕನ ಭೀಕರ ಹತ್ಯೆಯನ್ನು ಖಂಡಿಸಿ ಗ್ರಾಮದಲ್ಲಿ ಬುಧವಾರ ರಸ್ತೆ ತಡೆ ಹಾಗೂ ಧರಣಿ ನಡೆಸಿದ ಪ್ರತಿಭಟನಾಕಾರರು, ಪ್ರಕರಣವನ್ನು ಯಾವುದೇ ಜಾತಿಯ ಚೌಕಟ್ಟಿನಲ್ಲಿ ಸೀಮಿತಗೊಳಿಸದೆ ಮಾನವೀಯ ದೃಷ್ಟಿಕೋನದಿಂದ ತನಿಖೆ ನಡೆಸುವಂತೆ ಆಗ್ರಹಿಸಿದರು. ಧರಣಿಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, "ಈ ಹತ್ಯೆಯ ಹಿಂದೆ ಗಂಭೀರ ಷಡ್ಯಂತ್ರ ಇರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆ ಯಾವುದೇ ಪ್ರಭಾವ, ಒತ್ತಡ ಅಥವಾ ರಾಜಕೀಯ ಹಸ್ತಕ್ಷೇಪಕ್ಕೆ ಮಣಿದು ತನಿಖೆಯ ದಿಕ್ಕು ತಪ್ಪಿಸಿದರೆ ಅದನ್ನು ಸಹಿಸುವುದಿಲ್ಲ. ನ್ಯಾಯಕ್ಕಾಗಿ ರಾಜ್ಯಾದ್ಯಂತ ಹೋರಾಟಕ್ಕೆ ಇಳಿಯಬೇಕಾದ ಪರಿಸ್ಥಿತಿ ಬಂದರೂ ಹಿಂದೆ ಸರಿಯುವುದಿಲ್ಲ. ನಾವು ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವದಲ್ಲಿ ನಂಬಿಕೆ ಇಟ್ಟವರು," ಎಂದು ಎಚ್ಚರಿಕೆ ನೀಡಿದರು. "ಯಾವುದೇ ವೈಷಮ್ಯಕ್ಕೆ ಕೊಲೆಯೇ ಪರಿಹಾರವಾಗಲಾರದು. ಭಿನ್ನಾಭಿಪ್ರಾಯಗಳಿದ್ದರೆ ಕಾನೂನು ಚೌಕಟ್ಟಿನಲ್ಲೇ ಬಗೆಹರಿಸಿಕೊಳ್ಳಬೇಕು. ಹಾಡಹಗಲೇ ಯುವಕನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ," ಎಂದು ಖಂಡಿಸಿದರು. ಮೃತ ಭೂಮಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ನಿಯಮಾನುಸಾರ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕೊಲೆ ಪ್ರಕರಣದ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ (ಅಟ್ರಾಸಿಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಹನುಮಂತಪ್ಪ ಕಾಕರಗಲ್, "ಇದು ಯಾವುದೇ ಜಾತಿಯ ವಿರುದ್ಧದ ಹೋರಾಟವಲ್ಲ. ಅಮಾಯಕ ಯುವಕನ ಕೊಲೆಗೆ ನ್ಯಾಯ ಒದಗಿಸುವ ಹೋರಾಟ. ಮಂಗಳವಾರ ತಡರಾತ್ರಿ ಪೊಲೀಸ್ ಅಧಿಕಾರಿಯೊಬ್ಬರು ಕರೆ ಮಾಡಿ ಆರೋಪಿಗಳನ್ನು ಬಂಧಿಸಿರುವುದಾಗಿ ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ," ಎಂದು ಹೇಳಿದರು. ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ರಸ್ತೆ ತಡೆಯನ್ನು ಹಿಂಪಡೆದು, ಮರಣೋತ್ತರ ಪರೀಕ್ಷೆ ಬಳಿಕ ಭೂಮಾನಂದ ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಬಂದ ನಂತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಧರಣಿಯನ್ನು ಅಂತ್ಯಗೊಳಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು, ಗ್ರಾಮಸ್ಥರು ಹಾಗೂ ಯುವಕರು ಪಾಲ್ಗೊಂಡು, ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.1
- ಕಳೆದ 12 ವರ್ಷಗಳಲ್ಲಿ ಪ್ರಧಾನಿ ಮೋದಿ, 82 ದೇಶಗಳನ್ನು ಸುತ್ತಿ ಬಂದಿದ್ದಾರೆ. ಇದಕ್ಕಾಗಿ ಬರೋಬರಿ 5,987 ಕೋಟಿ ರೂ. ಸರ್ಕಾರಿ ಹಣವನ್ನು ಖರ್ಚು ಮಾಡಲಾಗಿದೆ. ಆದರೆ ಪ್ರಯೋಜನ ಮಾತ್ರ ಶೂನ್ಯ. 20 ದೇಶಗಳು ಭಾರತದ ಸರಕುಗಳು ಕಳಪೆ ಎಂಬ ಕಾರಣಕ್ಕೆ ತಿರಸ್ಕರಿಸಿವೆ. ನೆರೆ ದೇಶಗಳು ಭಾರತವನ್ನು ಇನ್ನಷ್ಟು ದ್ವೇಷಿಸತೊಡಗಿವೆ. ಡಾಲರ್ ಎದುರು ರುಪಾಯಿ ಮೌಲ್ಯ ಪಾತಾಳ ಸೇರಿದೆ. ಇದೇನಾ ಸ್ವಯಂ ಘೋಷಿತ ವಿಶ್ವಗುರುವಿನ ನಾಯಕತ್ವದ ಫಲ?1
- ನೂತನ ಸಚಿವ ಸಿ ಪುಟ್ಟರಂಗ ಶೆಟ್ಟಿ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಸನ್ಮಾನ ಯಾದಗಿರಿ: ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಸಂಘದಹಾಲಿ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ 4 ಬಾರಿ ಆಯ್ಕೆಯಾದ ಭಗೀರಥ ಉಪ್ಪಾರ ಸಮಾಜದ ಏಕೈಕ ಶಾಸಕರಾದ ಪುಟ್ಟರಂಗಶೆಟ್ಟಿ ರವರು ಆಗಸ್ಟ್ 3 ರಂದು ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಇದೇ ಸಂಧರ್ಭದಲ್ಲಿ ಸಮಾಜದ ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು. ಸಚಿವರನ್ನು ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲೆಗೆ ಭೇಟಿ ನೀಡುವಂತೆ ಆಹ್ವಾನಿಸಲಾಯಿತು. ಇದಕ್ಕೆ ಸಚಿವರು ಅತ್ಯಂತ ಹರ್ಷದಿಂದ ಖಂಡಿತವಾಗಿ ಭೇಟಿ ನೀಡುವುದಾಗಿ ಭರವಸೆ ನೀಡಿದರು. ಈ ಸಂಧರ್ಭದಲ್ಲಿ ಭಗೀರಥ ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಬನ್ನಪ್ಪ ಹುಲಿಬೆಟ್ಟ, ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ದಳಪತಿ ಶೆಟ್ಟಿಕೇರಾ, ಸಮಾಜದ ಮುಖಂಡರಾದ ರಾಮಲಿಂಗ ಯರಗೋಳ, ಡಾ.ಆಂಜನೇಯ ಮಾವಿನಹಳ್ಳಿ ಕಡೇಚೂರು, ಸತೀಶ ಕಟ್ಟಿಮನಿ, ನವೀನ ಮಾವಿನಹಳ್ಳಿ ಇದ್ದರು.1
- ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ ಇಂದು ಮಾನ್ವಿ ಪಟ್ಣಣದ ಬಸವ ವೃತ್ತದಲ್ಲಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ ಮೂಲಕ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹೊಳೆಯಪ್ಪ ಉಟಕನೂರು ಮಾತನಾಡಿ, 'ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬರಗಾಲದ ಪರಿಸ್ಥಿತಿ ಇದ್ದರೂ ಕೂಡ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಿಲ್ಲ' ಎಂದು ದೂರಿದರು. 'ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹40 ಸಾವಿರ ಬರ ಪರಿಹಾರವನ್ನು ನೀಡಬೇಕು. ತುಂಗಭದ್ರಾ ಜಲಾಶಯದಲ್ಲಿ 28 ಟಿಎಂಸಿ ಅಡಿ ನೀರು ಸಂಗ್ರ-ಹವಾಗಿದ್ದು, ಈ ಬಾರಿ ಕಾರ್ಖಾನೆಗಳಿಗೆ ನೀರು ಕೊಡದೇ ರೈತರಿಗೆ ಕಾಲುವೆ ಮೂಲಕ ನೀರನ್ನು ನಿರಂತರವಾಗಿ ಹರಿಸಬೇಕು' ಎಂದು ಒತ್ತಾಯಿಸಿದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವೈ.ಬಸವರಾಜ ನಾಯಕ ಮಾತನಾಡಿ, 'ತಾಲ್ಲೂಕಿನಲ್ಲಿ ಸರ್ಕಾರಕ್ಕೆ ಜೋಳವನ್ನು ಮಾರಾಟ ಮಾಡಿದ ರೈತರಿಗೆ ಐದು ತಿಂಗಳು ಕಳೆದರೂ ಹಣ ಜಮಾ ಆಗಿಲ್ಲ. ಮಳೆ ಇಲ್ಲದೆ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ತಾ.ಪಂ. ವತಿಯಿಂದ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳಲ್ಲಿ ಕೂಡಲೇ ವಿಬಿ- ಜಿ ರಾಮ್ ಜಿ ಯೋಜನೆಯಡಿ ಕಾರ್ಮಿಕರಿಗೆ ಕೂಲಿ ಕೆಲಸ ನೀಡಬೇಕು' ಎಂದು ಒತ್ತಾಯಿಸಿದರು.ರೈತ ಸಂಘದ ಪದಾಧಿಕಾರಿಗಳಾದ ಶ್ಯಾಮ ಸಿಂಗ್ ರಜಪೂತ್, ವೀರೇಶ ನಾಯಕ, ಶ್ರೀಧರ ಕೋಟೆಕಲ್, ಉರುಕುಂದ ನಾಯಕ ಬಜಾರ, ಬುಜ್ಜಿಗೌಡ, ವೆಂಕಟೇಶ ಕರಡಿಗುಡ್ಡ ಉಪಸ್ಥಿತರಿದ್ದರು. .3
- ಗುರುಮಠಕಲ್ ಪಟ್ಟಣದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿದರು. ಆ.10ರೊಳಗೆ ಬೆಳೆ ವಿಮೆ ಕಡ್ಡಾಯ: ರೈತರಿಗೆ ಸಚಿವ ಶರಣಪ್ರಕಾಶ ಪಾಟೀಲ್ ಕರೆ ಮಳೆ ಕೊರತೆಯಿಂದ ಸಂಕಷ್ಟ; ಬರ ವರದಿ ಶೀಘ್ರ ಸರ್ಕಾರಕ್ಕೆ ಸಲ್ಲಿಕೆ ಗುರುಮಠಕಲ್: ಜಿಲ್ಲೆಯ ರೈತರು ಯಾವುದೇ ಕಾರಣಕ್ಕೂ ಬೆಳೆ ವಿಮೆಯಿಂದ ವಂಚಿತರಾಗಬಾರದು. ಆಗಸ್ಟ್ 10ರೊಳಗೆ ಪ್ರತಿಯೊಬ್ಬ ಅರ್ಹ ರೈತರೂ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು. ತಾಲೂಕಿನ ಕಂದಕೂರು, ಗುಂಜನೂರ, ಬೋರಬಂಡಾ ಹಾಗೂ ಗುರುಮಠಕಲ್ ಭಾಗಗಳ ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದ ಬಳಿಕ ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಳೆ ಅಭಾವದಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಬಿತ್ತನೆ ಕುಂಠಿತಗೊಂಡಿದ್ದು, ಹೆಸರು ಹಾಗೂ ಉದ್ದು ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಬೆಳೆ ವಿಮೆಯೇ ರೈತರಿಗೆ ಪ್ರಮುಖ ಆರ್ಥಿಕ ಆಸರೆಯಾಗಲಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ವಿಮೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಕಳೆದ ವರ್ಷ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಎದುರಾದ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ದೂರುಗಳು ಬಂದಿದ್ದವು. ಈ ಬಾರಿ ಪರಿಹಾರ ವಿತರಣೆಯನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಸರು ಹಾಗೂ ಉದ್ದು ಬೆಳೆ ಬೆಳೆದ ರೈತರಿಗೆ ವಿಮೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲೇ ಬ್ಯಾಂಕ್ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆಯಂತೆ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ಮಳೆ ಪ್ರಮಾಣ, ಬೆಳೆ ನಷ್ಟ ಹಾಗೂ ಇತರೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ರಸಗೊಬ್ಬರ ಕೊರತೆ ಹಾಗೂ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆ ವಸೂಲಿ ಮಾಡುತ್ತಿರುವ ಅಂಗಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರಿಗೆ ನೋಟಿಸ್ ನೀಡಿ ಅಗತ್ಯವಿದ್ದರೆ ಪರವಾನಗಿ ರದ್ದುಪಡಿಸಲಾಗುವುದು. ಎಲ್ಲ ರಸಗೊಬ್ಬರ ಮಾರಾಟಗಾರರು ಅಂಗಡಿ ಮುಂಭಾಗದಲ್ಲಿ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸಚಿವರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಶರಣುಗೌಡ ಕಂದಕೂರು, ಜಿಲ್ಲಾಧಿಕಾರಿ ರಾಹುಲ್ ತುಕರಾಂ ಪಾಂಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಓರಾಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಶಂಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸಿರೆಡ್ಡಿ ಅನಪೂರ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಷಚಂದ್ರ ಕಟಕಟಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.3
- ಸಹಜ ಹೆರಿಗೆ ಮಾಡಿಸುವ ಮೂಲಕ ಉತ್ತರ ಕರ್ನಾಟಕದ ಭಾಗದ ಬಡ ರೋಗಿಗಳ ಆಶಾಕಿರಣ ವಾಗಿರುವ ವಿಜಯಪುರದ ಜಿಲ್ಲಾ ಆಸ್ಪತ್ರೆಯ ರಾಜ್ಯದಲ್ಲಿ ಎರಡನೇ ಸರ್ಕಾರಿ ಆಸ್ಪತ್ರೆಯ ರಾಜ್ಯದಲ್ಲಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ1
- ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು. ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು. ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು. ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು. ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.1