Shuru
Apke Nagar Ki App…
ಧಾರವಾಡ: ಶಾಸಕ ವಿನಯ ಕುಲಕರ್ಣಿ ವಿರುದ್ಧ ಪಿತೂರಿ ಧಾರವಾಡದಲ್ಲಿ ಬೆಂಬಲಿಗರ ಪ್ರತಿಭಟನೆ ಧಾರವಾಡ : ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ವಿರುದ್ಧ ಪಿತೂರಿ ನಡೆಸಲಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ಬೆಂಬಲಿಗರು ಧಾರವಾಡ ಜುಬಿಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಧಾರವಾಡ ಜುಬಿಲಿ ವೃತ್ತದಲ್ಲಿ ಬುಧವಾರ ರಾತ್ರಿ 8 ಗಂಟೆಗೆ ಶಾಸಕ ವಿನಯ ಕುಲಕರ್ಣಿ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಷಡ್ಯಂತ್ರ ನಡೆದಿದೆ. ದುಷ್ಟಶಕ್ತಿಗಳು ಶಾಸಕ ವಿನಯ ಕುಲಕರ್ಣಿ ಅವರ ವಿರುದ್ಧ ಕೆಲಸ ಮಾಡಿದೆ ಎಂದು ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
Manjunath kavali
ಧಾರವಾಡ: ಶಾಸಕ ವಿನಯ ಕುಲಕರ್ಣಿ ವಿರುದ್ಧ ಪಿತೂರಿ ಧಾರವಾಡದಲ್ಲಿ ಬೆಂಬಲಿಗರ ಪ್ರತಿಭಟನೆ ಧಾರವಾಡ : ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ವಿರುದ್ಧ ಪಿತೂರಿ ನಡೆಸಲಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ಬೆಂಬಲಿಗರು ಧಾರವಾಡ ಜುಬಿಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಧಾರವಾಡ ಜುಬಿಲಿ ವೃತ್ತದಲ್ಲಿ ಬುಧವಾರ ರಾತ್ರಿ 8 ಗಂಟೆಗೆ ಶಾಸಕ ವಿನಯ ಕುಲಕರ್ಣಿ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಷಡ್ಯಂತ್ರ ನಡೆದಿದೆ. ದುಷ್ಟಶಕ್ತಿಗಳು ಶಾಸಕ ವಿನಯ ಕುಲಕರ್ಣಿ ಅವರ ವಿರುದ್ಧ ಕೆಲಸ ಮಾಡಿದೆ ಎಂದು ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
More news from ಕರ್ನಾಟಕ and nearby areas
- ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ ಎಂದು ತಿಳಿಸಿದರು.1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು1
- 10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ" ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ: ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು. ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ, ಆನಂದ ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.1
- ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.1
- ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಎರಡೂ ಬೈಕ್‌ಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡದ ಮೆಹಬೂಬ್‌ನಗರದಲ್ಲಿ ನಡೆದಿದೆ. ಸಾದಿಕ್ ಶೆರೆವಾಡ ಎಂಬುವವರ ಮನೆ ಎದುರು ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಮೊದಲು ಮನೆ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು ಆನಂತರ ಎರಡೂ ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ತಡರಾತ್ರಿ ಏಳೆಂಟು ಜನರ ತಂಡದಿಂದ ಈ ಕೃತ್ಯ ನಡೆದಿದೆ. ಸದ್ಯ ಸ್ಥಳಕ್ಕೆ ಎಸಿಪಿ ಪ್ರಶಾಂತ ಸಿದ್ಧನಗೌಡರ, ಸಿಪಿಐ ಪ್ರಭು ಗಂಗೇನಳ್ಳಿ ಅವರು ಭೇಟಿ ನೀಡಿ ಸಿಸಿಟಿವಿ ದೃಶ್ಯ ಸೇರಿದಂತೆ ಇತರ ಸಾಕ್ಷ್ಯಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.1