*ಪ್ರಜಾಪ್ರಭುತ್ವದ ಮೌಲ್ಯಗಳಿಂದ ಸಮಾಜದ ಸಮಸ್ಯೆ ಪರಿಹಾರ ಸಾಧ್ಯ* * ಚಿಕ್ಕಬಳ್ಳಾಪುರದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅಭಿಮತ * ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವರು * ಸಮಾಜದಲ್ಲಿ ಅಸಮಾನತೆ ಇರುವವರೆಗೆ ಮೀಸಲಾತಿ ಅತ್ಯಗತ್ಯ * ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಯುವ ಸಮುದಾಯದ ಪಾತ್ರ ಹಿರಿದು ಚಿಕ್ಕಬಳ್ಳಾಪುರ: ಪ್ರಜಾಪ್ರಭುತ್ವದ ತತ್ವಗಳು, ಆಶಯಗಳು ಮತ್ತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ಸಾರಿಗೆ ಸಚಿವ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಅವರು ಅಭಿಪ್ರಾಯಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಕನ್ನಡಭವನದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕೆಲವರು ಮೀಸಲಾತಿ ತೆಗೆಯಬೇಕೆಂದು ಹೇಳುತ್ತಿದ್ದಾರೆ. ಆದರೆ, ಸಮಾಜದಲ್ಲಿ ಅಸಮಾನತೆ ಇರುವವರೆಗೆ ಮೀಸಲಾತಿ ಇರಲೇಬೇಕು ಎಂದು ಅವರು ಪ್ರತಿಪಾದಿಸಿದರು. ಹಿಂದುಳಿದ, ದೀನ ದಲಿತರ ಸಬಲೀಕರಣಕ್ಕೆ ಮೀಸಲಾತಿ ಅತ್ಯಗತ್ಯವಾಗಿದೆ. ಒಂದು ವೇಳೆ ಮೀಸಲಾತಿ ತೆಗೆದರೆ ಶ್ರೀಮಂತರು ಶ್ರೀಮಂತರಾಗಿ, ಬಡವರು ಬಡವರಾಗಿಯೇ ಮುಂದುವರಿಯುತ್ತಾರೆ. ಹೀಗಾಗಿ ಅಸಮಾನತೆಯ ಕಂದಕ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ನಾವೆಲ್ಲಾ ಭಾರತೀಯರು ಮೊದಲು ನಾವೆಲ್ಲಾ ಭಾರತೀಯರು. ಭಾರತೀಯರಾಗಿಯೇ ಸಹಬಾಳ್ವೆಯಿಂದ ಜೀವನ ಸಾಗಿಸೋಣ. ನಂತರ ನಮ್ಮ ಜಾತಿ, ಧರ್ಮದ ಬಗ್ಗೆ ಚಿಂತಿಸೋಣ ಎಂದು ಬೈರತಿ ಸುರೇಶ್ ಕರೆ ನೀಡಿದರು. *ಭಗವದ್ಗೀತೆ, ಕುರಾನ್, ಬೈಬಲ್* ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ನಮಗೆ ಪರಮೋಚ್ಛವಾದ ಸಂವಿಧಾನ ನೀಡಿದ್ದಾರೆ. ಅದುವೇ ನಮಗೆ ಭಗವದ್ಗೀತೆ, ಅದುವೇ ಕುರಾನ್ ಮತ್ತು ಬೈಬಲ್ ಆಗಿದೆ ಎಂದರು. ಅಂಬೇಡ್ಕರ್ ಅವರು ಒಂದೇ ವರ್ಗಕ್ಕೆ ಸೀಮಿತವಾಗಿದ್ದ ಅಧಿಕಾರವನ್ನು ಎಲ್ಲಾ ವರ್ಗಗಳಿಗೂ ಸಿಗುವಂತೆ ಮಾಡಿದ ಧೀಮಂತ ನಾಯಕರಾಗಿದ್ದಾರೆ. ಅವರು ಕೊಟ್ಟಿರುವ ಸಂವಿಧಾನ ನಮ್ಮ ದೇಶದ ಬೆನ್ನೆಲುಬಾಗಿದ್ದರೆ, ಅದರ ಪೀಠಿಕೆ ಆತ್ಮವಾಗಿದೆ ಎಂದು ಬಣ್ಣಿಸಿದರು. ಜೀತ ಪದ್ಧತಿ, ಬಡತನ, ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಆರೋಗ್ಯ, ಉದ್ಯೋಗದಂತಹ ಶಾಸನಬದ್ಧ ಅವಕಾಶಗಳನ್ನು ಸಂವಿಧಾನದ ಮೂಲಕ ನೀಡುವುದರೊಂದಿಗೆ ಅಂಬೇಡ್ಕರ್ ಅದರ ಆತ್ಮ ಸಾಕ್ಷಿಯಾಗಿದ್ದಾರೆ ಎಂದು ತಿಳಿಸಿದರು. ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಹಬಾಳ್ವೆ, ಪ್ರಜಾಪ್ರಭುತ್ವ ವ್ಯವಸ್ಥೆ, ಸಾಮಾಜಿಕ ನ್ಯಾಯ, ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಅನೇಕ ಅಂಶಗಳು ಸಂವಿಧಾನದ ಮೌಲ್ಯಗಳಲ್ಲಿ ಅಡಗಿವೆ ಎಂದು ತಿಳಿಸಿದರು. ಡಾ. ಬಿ. ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದಂತೆ we cannot treat equals unequally and unequals equally ಇದು ಅಸಮಾನತೆಯ ವ್ಯವಸ್ಥೆಯಲ್ಲಿ ಸಮಾನತೆಯನ್ನು ಹೇಗೆ ಸೃಷ್ಟಿಸಬಹುದೆಂಬ ತತ್ವವನ್ನು ಸಾರುತ್ತದೆ ಎಂದು ಹೇಳಿದರು. ಈ ಆಶಯದ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಮೂಲಕ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು. ಈ ವರ್ಷದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ವಿಷಯ *ಯುವ ಸಂಸತ್ತು*. ಈ ದಿನವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ನಾಡಿನೆಲ್ಲೆಡೆ ಯುವ ಸಂಸತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಮತ್ತು ನಿರ್ಧಾರಗಳನ್ನು ಕೈಗೊಳ್ಳುವ ವಿಚಾರದಲ್ಲಿ ಯುವ ಜನರ ಪಾತ್ರ ಪ್ರಮುಖವಾಗಿರುತ್ತದೆ. ಈ ದಿಸೆಯಲ್ಲಿ ಯುವ ಸಮೂಹ ಅತ್ಯಂತ ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಅವರು ಕರೆ ನೀಡಿದರು. ಪ್ರಜಾಪ್ರಭುತ್ವದ ಆಶಯಗಳು ಮತ್ತು ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಹೀಗಾದಲ್ಲಿ ಮಾತ್ರ ವ್ಯಕ್ತಿಯ ಮತ್ತು ದೇಶ, ಸಮಾಜದ ಬಹುತೇಕ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಪ್ರತಿಯೊಬ್ಬರಿಗೂ ತಮ್ಮದೇ ಆದ ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಇವೆ. ಆದರೆ, ಅವೆಲ್ಲವನ್ನೂ ಮೀರಿ ನಾವೆಲ್ಲರೂ ಭಾರತೀಯರಾಗಿ ಮತ್ತು ವಿಶ್ವಮಾನವರಾಗಿ ಬಾಳಬೇಕಾಗುತ್ತದೆ ಎಂದು ಅವರು ಹೇಳಿದರು. ಇಷ್ಟೇ ಅಲ್ಲದೆ, ನಮ್ಮ ದೇಶವು ಸರ್ವ ಜನಾಂಗದ ಶಾಂತಿ ತೋಟವಾಗುತ್ತದೆ. ಇಂತಹ ಸಮಾಜ ನಿರ್ಮಾಣಕ್ಕೆ ಇಂದಿನ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಯುವ ಸಂಸತ್ತು ಕಾರ್ಯಕ್ರಮ ಭದ್ರ ಬುನಾದಿಯಾಗಲಿದೆ ಎಂದು ಬೈರತಿ ಸುರೇಶ್ ತಿಳಿಸಿದರು. ಸರ್ ಎಂವಿ ಸ್ಮರಣೆ* ಇದೇ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್ ಅವರು ದೇಶ ಕಂಡ ಮಹಾನ್ ವ್ಯಕ್ತಿತ್ವದ ಭಾರತರತ್ನ ಸರ್ ಎಂ ವಿಶ್ವೇರಯ್ಯ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಾಧನೆಯನ್ನು ಕೊಂಡಾಡಿದರು. ದೇಶ ನಿರ್ಮಾಣ ಮಾಡುವಲ್ಲಿ ಅವರ ಸೇವೆ ಅನನ್ಯ. ನಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ವಿಶ್ವೇಶ್ವರಯ್ಯ ಅಂದು ಹೇಳಿದ್ದ ಮಾತನ್ನು ಎಲ್ಲರೂ ಅಳವಡಿಕೊಳ್ಳಬೇಕೆಂದು ಕರೆ ನೀಡಿದರು. ನಾನು ಮಾತನಾಡುವ ಮಂತ್ರಿಯಲ್ಲ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ತಮ್ಮ ಭಾಷಣದಲ್ಲಿ, ನಾನು ಮಾತನಾಡುವ ಮಂತ್ರಿಯಲ್ಲ. ಕೆಲಸ ಮಾಡುವ ಮಂತ್ರಿ ಎಂದು ಹೇಳಿದರು. ಕೇವಲ ಭಾಷಣ ಮಾಡುತ್ತಾ ಹೋದರೆ ಕೆಲಸಗಳು ಆಗುವುದಿಲ್ಲ. ಹೀಗಾಗಿ ಮಾತಿಗಿಂತ ಕೃತಿ ಲೇಸು ಎಂಬುದನ್ನು ನಂಬಿದವನು ನಾನು. ಹೆಚ್ಚು ಭಾಷಣ ಮಾಡದೇ ಜಿಲ್ಲೆ ಮತ್ತು ನನಗೆ ನೀಡಿರುವ ಸಾರಿಗೆ ಇಲಾಖೆ ಉನ್ನತಿಗೆ ಅಗತ್ಯವಾದ ಕೆಲಸ ಮಾಡುವೆ ಎಂದರು.

- ಗೌರಿ-ಗಣೇಶ ಹಬ್ಬ: ಸಮಾಜ ಸೇವಕ ಕೊತ್ತನೂರು ಪಂಚಾಕ್ಷರಿ ರೆಡ್ಡಿ ತೋಟದ ಮನೆಯಲ್ಲಿ ವಿಶೇಷ ಪೂಜೆ ಹಾಗೂ ಶುಭಾಶಯ ಸಲ್ಲಿಕೆ1
- ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.2
- ಶ್ರದ್ಧಾ ಭಕ್ತಿಯಿಂದ ಶ್ರೀ ವಿಘ್ನೇ ವಿನಾಯಕನಿಗೆ ವಿಶೇಷವಾಗಿ ಪೂಜೆ ಸಲ್ಲಿಸಿದ ಚಿಂತಾಮಣಿ ಬೆಸ್ಕಾಂ ಉಪವಿಭಾಗದ ಸಿಬ್ಬಂದಿ *ಚಿಂತಾಮಣಿ ಬೆಸ್ಕಾಂ ಉಪ ವಿಭಾಗದಲ್ಲಿ ಶ್ರದ್ಧಾ-ಭಕ್ತಿಯಿಂದ ಗಣೇಶ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜೆ* *KRUTHI NEWS KANNADA 24×7* *ಸುದ್ದಿ ಮತ್ತು ಜಾಹೀರಾತುಗಾಗಿ ಸಂಪರ್ಕಿಸಿ:-8892502546*1
- ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ1
- ಚಪ್ಪಲಿ ಧರಿಸಿಯೇ ಗಣೇಶ ಮೂರ್ತಿ ಹಿಡಿದು ಬಿಜೆಪಿ ಪ್ರತಿಭಟನೆ| Veega News Kannada ಚಪ್ಪಲಿ ಧರಿಸಿಯೇ ಗಣೇಶ ಮೂರ್ತಿ ಹಿಡಿದು ಬಿಜೆಪಿ ಪ್ರತಿಭಟನೆ1
- ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ:ಒರ್ವ ಸಾವು ,ಮೂವರಿಗೆ ಗಾಯ ಬೆಂಗಳೂರು:ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ ಹೊಡೆದಿದೆ.ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ನಡೆದಿದೆ.ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ.ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯವಾಗಿದೆ.ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .1
- * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ ದೊಡ್ಡವಲ್ಲಬಿ ಲಕ್ಷ್ಮಣಗೌಡ* ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ, ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ ಗೌರಿ ಗಣೇಶನ ಹಬ್ಬವನ್ನು ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು. ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು. ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.4
- ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿಯ ಪ್ರಸನ್ನಹಳ್ಳಿಯ ಜಟಾಯು ಯುವಸೇನೆವತಿಯಿಂದ ಗಣೇಶೋತ್ಸವ ಆಯೋಜನೆ ಯಾವುದೆ ಡಿಜೆ ಬಳಕೆ ಮಾಡದೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಮೆರವಣಿಗೆ ಎತ್ತಿನಗಾಡಿ ಮತ್ತು ಮಹಿಳೆಯರಿಂದ ತಟ್ಟೆಗಳಲ್ಲಿ ಗಣಪತಿ ಮೂರ್ತಿಗಳ ಹೊತ್ತು ಮೆರವಣಿಗೆ ಪ್ರಸನ್ನಹಳ್ಳಿ ಇಂದ ಚಿಕ್ಕಕೆರೆವರೆಗೆ ಮೆರವಣಿಗೆ ಮಾಡಿ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪ್ರಸನ್ನ ಹಳ್ಳಿ3