logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸೊರಬದ ಭದ್ರಾಪುರದಲ್ಲಿರುವ ಶ್ರೀಧರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಭಾನುವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಯೋಗ ರತ್ನ ಪ್ರಶಸ್ತಿ ವಿಜೇತ ಬೆನಕಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಯೋಗ ಮನುಷ್ಯನ ಆರೋಗ್ಯವನ್ನು ಕಾಪಾಡುವಲ್ಲಿ ಒಂದು ವರದಾನವಿದ್ದಂತೆ ಎಂದು ಅವರು ಪ್ರತಿಪಾದಿಸಿದರು. ಪ್ರತಿದಿನ ಯೋಗ ಮಾಡುವುದರಿಂದ ಮನುಷ್ಯ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢನಾಗುತ್ತಾನೆ, ಅಲ್ಲದೆ ಯೋಗಾಭ್ಯಾಸದಿಂದ ವಿದ್ಯಾರ್ಥಿಗಳು ಏಕಾಗ್ರತೆಯನ್ನು ಪಡೆಯಲು ಸಾಧ್ಯ ಎಂದು ಬೆನಕಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ, ಧ್ಯಾನ ಹಾಗೂ ಅನೇಕ ಯೋಗಾಸನಗಳನ್ನು ಮಾಡಿಸಿ ಅವುಗಳ ಪ್ರಯೋಜನಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಮತ್ತು ಶಿಕ್ಷಕರು ಸುಮಾರು ಎರಡು ಗಂಟೆಗಳ ಕಾಲ ಯೋಗಾಭ್ಯಾಸದಲ್ಲಿ ತೊಡಗಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಯೋಗ ಗೀತೆಗಳು ಮತ್ತು ಯೋಗ ನೃತ್ಯಗಳು ಪ್ರದರ್ಶನಗೊಂಡವು. ಮಾಲಿನಿ ಶ್ರೀಧರ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷೆ ರೂಪ ಶ್ರೀನಾಥ್, ಪ್ರಾಂಶುಪಾಲರ ಗುತ್ತೇದಾರ್ ಶೇಕ್ ನವಾಬ್, ಉಪ ಪ್ರಾಂಶುಪಾಲರ ಮಂಜುನಾಥ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಯೇಷಾ ಅವರು ಕಾರ್ಯಕ್ರಮ ನಿರೂಪಿಸಿದ್ದು, ಸನ್ನಿಧಿ ಸ್ವಾಗತ ಭಾಷಣ ಮಾಡಿದರು ಮತ್ತು ಕುಮಾರ ಚಿನ್ಮಯ್ ವಂದನಾರ್ಪಣೆ ಮಾಡಿದರು.

10 hrs ago
user_SANDEEP U. L
SANDEEP U. L
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
10 hrs ago

ಸೊರಬದ ಭದ್ರಾಪುರದಲ್ಲಿರುವ ಶ್ರೀಧರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಭಾನುವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಯೋಗ ರತ್ನ ಪ್ರಶಸ್ತಿ ವಿಜೇತ ಬೆನಕಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಯೋಗ ಮನುಷ್ಯನ ಆರೋಗ್ಯವನ್ನು ಕಾಪಾಡುವಲ್ಲಿ ಒಂದು ವರದಾನವಿದ್ದಂತೆ ಎಂದು ಅವರು ಪ್ರತಿಪಾದಿಸಿದರು. ಪ್ರತಿದಿನ ಯೋಗ ಮಾಡುವುದರಿಂದ ಮನುಷ್ಯ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢನಾಗುತ್ತಾನೆ, ಅಲ್ಲದೆ ಯೋಗಾಭ್ಯಾಸದಿಂದ ವಿದ್ಯಾರ್ಥಿಗಳು ಏಕಾಗ್ರತೆಯನ್ನು ಪಡೆಯಲು ಸಾಧ್ಯ ಎಂದು ಬೆನಕಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ, ಧ್ಯಾನ ಹಾಗೂ ಅನೇಕ ಯೋಗಾಸನಗಳನ್ನು ಮಾಡಿಸಿ ಅವುಗಳ

ಪ್ರಯೋಜನಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಮತ್ತು ಶಿಕ್ಷಕರು ಸುಮಾರು ಎರಡು ಗಂಟೆಗಳ ಕಾಲ ಯೋಗಾಭ್ಯಾಸದಲ್ಲಿ ತೊಡಗಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಯೋಗ ಗೀತೆಗಳು ಮತ್ತು ಯೋಗ ನೃತ್ಯಗಳು ಪ್ರದರ್ಶನಗೊಂಡವು. ಮಾಲಿನಿ ಶ್ರೀಧರ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷೆ ರೂಪ ಶ್ರೀನಾಥ್, ಪ್ರಾಂಶುಪಾಲರ ಗುತ್ತೇದಾರ್ ಶೇಕ್ ನವಾಬ್, ಉಪ ಪ್ರಾಂಶುಪಾಲರ ಮಂಜುನಾಥ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಯೇಷಾ ಅವರು ಕಾರ್ಯಕ್ರಮ ನಿರೂಪಿಸಿದ್ದು, ಸನ್ನಿಧಿ ಸ್ವಾಗತ ಭಾಷಣ ಮಾಡಿದರು ಮತ್ತು ಕುಮಾರ ಚಿನ್ಮಯ್ ವಂದನಾರ್ಪಣೆ ಮಾಡಿದರು.

More news from ಕರ್ನಾಟಕ and nearby areas
  • ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ ಚಳ್ಳಕೆರೆ ನಗರದ ಬಿ.ಎಂ.ಜಿ.ಎಚ್.ಎಸ್. ಪ್ರೌಢಶಾಲೆಯ ಆವರಣದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ಬಿ.ವಿ. ಮನೋಹರನ್ ಮಾತನಾಡಿದರು. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಇದು ಭಾರತದ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು. ಯೋಗವು ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನ ಸಾಧಿಸಲು ನೆರವಾಗುತ್ತದೆ ಎಂದು ಮನೋಹರನ್ ವಿವರಿಸಿದರು. ಆಧುನಿಕ ಜೀವನಶೈಲಿಯ ಒತ್ತಡದಿಂದ ಮುಕ್ತಿ ಪಡೆಯಲು ಯೋಗ ಅತ್ಯುತ್ತಮ ಮಾರ್ಗವಾಗಿದ್ದು, ಪ್ರಾಣಾಯಾಮ ಮತ್ತು ಧ್ಯಾನವು ಒತ್ತಡ, ಆತಂಕ ಹಾಗೂ ಖಿನ್ನತೆಯನ್ನು ಕಡಿಮೆ ಮಾಡಿ ಮನಸ್ಸಿಗೆ ಶಾಂತಿ ನೀಡುತ್ತದೆ. ನಿಯಮಿತ ಯೋಗಾಭ್ಯಾಸವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಮಧುಮೇಹ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುತ್ತದೆ ಎಂದು ಅವರು ತಿಳಿಸಿದರು. ಆಧುನಿಕ ಜಗತ್ತಿನಲ್ಲಿ ಜನರು ತಮ್ಮ ಆರೋಗ್ಯದ ಕಡೆ ಗಮನಹರಿಸುವುದು ಕಷ್ಟಕರವಾಗಿದ್ದರೂ, ಯೋಗವು ಯಾವುದೇ ಉಪಕರಣಗಳಿಲ್ಲದೆ, ಕಡಿಮೆ ಜಾಗದಲ್ಲಿ ಅಭ್ಯಾಸ ಮಾಡಬಹುದಾದ ಅತ್ಯುತ್ತಮ ಚಿಕಿತ್ಸೆಯಾಗಿದ್ದು, ಇದರ ಮೂಲಕ ಪ್ರಕೃತಿಯೊಂದಿಗೆ ಏಕತೆಯ ಭಾವನೆಯನ್ನು ಅನುಭವಿಸಬಹುದು ಎಂದು ಮನೋಹರನ್ ಹೇಳಿದರು.
    1
    ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ ಚಳ್ಳಕೆರೆ ನಗರದ ಬಿ.ಎಂ.ಜಿ.ಎಚ್.ಎಸ್. ಪ್ರೌಢಶಾಲೆಯ ಆವರಣದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ಬಿ.ವಿ. ಮನೋಹರನ್ ಮಾತನಾಡಿದರು. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಇದು ಭಾರತದ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.

ಯೋಗವು ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನ ಸಾಧಿಸಲು ನೆರವಾಗುತ್ತದೆ ಎಂದು ಮನೋಹರನ್ ವಿವರಿಸಿದರು. ಆಧುನಿಕ ಜೀವನಶೈಲಿಯ ಒತ್ತಡದಿಂದ ಮುಕ್ತಿ ಪಡೆಯಲು ಯೋಗ ಅತ್ಯುತ್ತಮ ಮಾರ್ಗವಾಗಿದ್ದು, ಪ್ರಾಣಾಯಾಮ ಮತ್ತು ಧ್ಯಾನವು ಒತ್ತಡ, ಆತಂಕ ಹಾಗೂ ಖಿನ್ನತೆಯನ್ನು ಕಡಿಮೆ ಮಾಡಿ ಮನಸ್ಸಿಗೆ ಶಾಂತಿ ನೀಡುತ್ತದೆ. ನಿಯಮಿತ ಯೋಗಾಭ್ಯಾಸವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಮಧುಮೇಹ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುತ್ತದೆ ಎಂದು ಅವರು ತಿಳಿಸಿದರು. ಆಧುನಿಕ ಜಗತ್ತಿನಲ್ಲಿ ಜನರು ತಮ್ಮ ಆರೋಗ್ಯದ ಕಡೆ ಗಮನಹರಿಸುವುದು ಕಷ್ಟಕರವಾಗಿದ್ದರೂ, ಯೋಗವು ಯಾವುದೇ ಉಪಕರಣಗಳಿಲ್ಲದೆ, ಕಡಿಮೆ ಜಾಗದಲ್ಲಿ ಅಭ್ಯಾಸ ಮಾಡಬಹುದಾದ ಅತ್ಯುತ್ತಮ ಚಿಕಿತ್ಸೆಯಾಗಿದ್ದು, ಇದರ ಮೂಲಕ ಪ್ರಕೃತಿಯೊಂದಿಗೆ ಏಕತೆಯ ಭಾವನೆಯನ್ನು ಅನುಭವಿಸಬಹುದು ಎಂದು ಮನೋಹರನ್ ಹೇಳಿದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಹುಳಿಯಾರಿನ ಕೆಪಿಎಸ್‌ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಿರಿಯೂರು ಉಡುವಳ್ಳಿ ಜವಾಹರ್‌ ನವೋದಯ ವಿದ್ಯಾಲಯದ ಹಿಂದಿ ಪ್ರಾಧ್ಯಾಪಕ ಓಂಕಾರಮೂರ್ತಿ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಲಭ್ಯವಿರುವ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಸಾಧನಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ವೇಳೆ, ಅವರು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಯ್ದುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಕೆಪಿಎಸ್‌ ಶಾಲೆಯ ಹಳೆಯ ವಿದ್ಯಾರ್ಥಿಯೂ ಆಗಿರುವ ಅವರು, ತಮ್ಮ ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು. ತಮ್ಮ ಕಾಲದಲ್ಲಿ ಸಿದ್ದಬಸವಣ್ಣ, ಬಸವಲಿಂಗಯ್ಯ, ನಿರಂಜನಮೂರ್ತಿ, ದಾಸಪ್ಪ ಹಾಗೂ ಮುಖ್ಯೋಪಾಧ್ಯಾಯರಾಗಿದ್ದ ಸೀತಾರಾಂ ಭಟ್ ಅವರಂತಹ ಹಿರಿಯ ಗುರುಗಳಿದ್ದರು, ಆದರೆ ಇಂದು ಪಾಠ ಪ್ರವಚನಗಳನ್ನು ಗ್ರಹಿಸಲು ಗೂಗಲ್, ಜೆಮಿನಿ, ಚಾಟ್ ಜಿಪಿಟಿಯಂತಹ ಆಧುನಿಕ ತಂತ್ರಜ್ಞಾನಗಳು ಲಭ್ಯವಿವೆ ಎಂದು ಓಂಕಾರಮೂರ್ತಿ ವಿವರಿಸಿದರು. ವಿದ್ಯಾರ್ಥಿಗಳು ಇವುಗಳನ್ನು ಬಳಸಿಕೊಂಡು ವಿಷಯಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಬುದ್ಧಿವಂತಿಕೆ ಮತ್ತು ಅಂಕಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಆರೋಗ್ಯದ ಮಹತ್ವವನ್ನು ವಿವರಿಸಿದ ಅವರು, ಯಾರು ಆರೋಗ್ಯವಾಗಿದ್ದಾರೋ ಅವರೇ ನಿಜವಾದ ಶ್ರೀಮಂತರು. ಇತ್ತೀಚಿನ ದಿನಗಳಲ್ಲಿ ಜಂಕ್ ಫುಡ್ ಹಾಗೂ ತಪ್ಪು ಆಹಾರ ಪದ್ಧತಿಯಿಂದ ಯುವ ಪೀಳಿಗೆ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದು, ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳದಿದ್ದರೆ ಆರೋಗ್ಯ ಕೆಡುವುದು ಖಂಡಿತ ಎಂದರು. ಶೈಕ್ಷಣಿಕ ಸಾಮರ್ಥ್ಯದ ಜೊತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವೂ ಸಮತೋಲನದಲ್ಲಿರಬೇಕು ಎಂದು ಅವರು ಸಲಹೆ ನೀಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಕೀಳಾಗಿ ಕಾಣಬಾರದು, ಏಕೆಂದರೆ ಗಿಡಕ್ಕೆ ನೀರು ಹಾಕುವುದು, ಸ್ವಚ್ಛತೆ ಕಾಪಾಡುವುದು ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದು ಓಂಕಾರಮೂರ್ತಿ ಹೇಳಿದರು. ಜೀವನದಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಧನಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಲು ಅವರು ಕಿವಿಮಾತು ಹೇಳಿದರು. ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ ಎಂದ ಓಂಕಾರಮೂರ್ತಿ, ವಿದ್ಯಾರ್ಥಿಗಳು ಕೇವಲ ಮರಗಳನ್ನು ಕಡಿಯುವುದನ್ನು ನೋಡದೆ, ಗಿಡಗಳನ್ನು ನೆಟ್ಟು ಪೋಷಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಉತ್ತೇಜಿಸಿದರು. ಶಾಲೆ ಮತ್ತು ಗುರುಗಳು ನೀಡುವ ಸಂಸ್ಕಾರ, ಶಿಸ್ತು ಹಾಗೂ ನಮ್ರತೆ ನಮ್ಮನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎನ್.ಜಿ. ಕೃಷ್ಣಮೂರ್ತಿ, ಡಾ. ನಾಗರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗವೀ ರಂಗಯ್ಯ, ಉಪಪ್ರಾಚಾರ್ಯ ಚಂದ್ರಚಾರ್, ಎಸ್‌ಡಿಎಂಸಿ ಸದಸ್ಯರುಗಳಾದ ಚನ್ನಕೇಶವ, ರಾಮಚಂದ್ರಯ್ಯ, ಶೇಖರ್, ರಮೇಶ ಹಾಗೂ ಬಾಲಾಜಿ ಸಿಂಗ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    1
    ಹುಳಿಯಾರಿನ ಕೆಪಿಎಸ್‌ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಿರಿಯೂರು ಉಡುವಳ್ಳಿ ಜವಾಹರ್‌ ನವೋದಯ ವಿದ್ಯಾಲಯದ ಹಿಂದಿ ಪ್ರಾಧ್ಯಾಪಕ ಓಂಕಾರಮೂರ್ತಿ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಲಭ್ಯವಿರುವ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಸಾಧನಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ವೇಳೆ, ಅವರು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಯ್ದುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಕೆಪಿಎಸ್‌ ಶಾಲೆಯ ಹಳೆಯ ವಿದ್ಯಾರ್ಥಿಯೂ ಆಗಿರುವ ಅವರು, ತಮ್ಮ ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು.

ತಮ್ಮ ಕಾಲದಲ್ಲಿ ಸಿದ್ದಬಸವಣ್ಣ, ಬಸವಲಿಂಗಯ್ಯ, ನಿರಂಜನಮೂರ್ತಿ, ದಾಸಪ್ಪ ಹಾಗೂ ಮುಖ್ಯೋಪಾಧ್ಯಾಯರಾಗಿದ್ದ ಸೀತಾರಾಂ ಭಟ್ ಅವರಂತಹ ಹಿರಿಯ ಗುರುಗಳಿದ್ದರು, ಆದರೆ ಇಂದು ಪಾಠ ಪ್ರವಚನಗಳನ್ನು ಗ್ರಹಿಸಲು ಗೂಗಲ್, ಜೆಮಿನಿ, ಚಾಟ್ ಜಿಪಿಟಿಯಂತಹ ಆಧುನಿಕ ತಂತ್ರಜ್ಞಾನಗಳು ಲಭ್ಯವಿವೆ ಎಂದು ಓಂಕಾರಮೂರ್ತಿ ವಿವರಿಸಿದರು. ವಿದ್ಯಾರ್ಥಿಗಳು ಇವುಗಳನ್ನು ಬಳಸಿಕೊಂಡು ವಿಷಯಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಬುದ್ಧಿವಂತಿಕೆ ಮತ್ತು ಅಂಕಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಆರೋಗ್ಯದ ಮಹತ್ವವನ್ನು ವಿವರಿಸಿದ ಅವರು, ಯಾರು ಆರೋಗ್ಯವಾಗಿದ್ದಾರೋ ಅವರೇ ನಿಜವಾದ ಶ್ರೀಮಂತರು. ಇತ್ತೀಚಿನ ದಿನಗಳಲ್ಲಿ ಜಂಕ್ ಫುಡ್ ಹಾಗೂ ತಪ್ಪು ಆಹಾರ ಪದ್ಧತಿಯಿಂದ ಯುವ ಪೀಳಿಗೆ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದು, ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳದಿದ್ದರೆ ಆರೋಗ್ಯ ಕೆಡುವುದು ಖಂಡಿತ ಎಂದರು. ಶೈಕ್ಷಣಿಕ ಸಾಮರ್ಥ್ಯದ ಜೊತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವೂ ಸಮತೋಲನದಲ್ಲಿರಬೇಕು ಎಂದು ಅವರು ಸಲಹೆ ನೀಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಕೀಳಾಗಿ ಕಾಣಬಾರದು, ಏಕೆಂದರೆ ಗಿಡಕ್ಕೆ ನೀರು ಹಾಕುವುದು, ಸ್ವಚ್ಛತೆ ಕಾಪಾಡುವುದು ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದು ಓಂಕಾರಮೂರ್ತಿ ಹೇಳಿದರು. ಜೀವನದಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಧನಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಲು ಅವರು ಕಿವಿಮಾತು ಹೇಳಿದರು. ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ ಎಂದ ಓಂಕಾರಮೂರ್ತಿ, ವಿದ್ಯಾರ್ಥಿಗಳು ಕೇವಲ ಮರಗಳನ್ನು ಕಡಿಯುವುದನ್ನು ನೋಡದೆ, ಗಿಡಗಳನ್ನು ನೆಟ್ಟು ಪೋಷಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಉತ್ತೇಜಿಸಿದರು. ಶಾಲೆ ಮತ್ತು ಗುರುಗಳು ನೀಡುವ ಸಂಸ್ಕಾರ, ಶಿಸ್ತು ಹಾಗೂ ನಮ್ರತೆ ನಮ್ಮನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎನ್.ಜಿ. ಕೃಷ್ಣಮೂರ್ತಿ, ಡಾ. ನಾಗರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗವೀ ರಂಗಯ್ಯ, ಉಪಪ್ರಾಚಾರ್ಯ ಚಂದ್ರಚಾರ್, ಎಸ್‌ಡಿಎಂಸಿ ಸದಸ್ಯರುಗಳಾದ ಚನ್ನಕೇಶವ, ರಾಮಚಂದ್ರಯ್ಯ, ಶೇಖರ್, ರಮೇಶ ಹಾಗೂ ಬಾಲಾಜಿ ಸಿಂಗ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    4 hrs ago
  • ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಒಂದು ಚಿರತೆ ಬೋನಿಗೆ ಬಿದ್ದಿದೆ.
    1
    ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಒಂದು ಚಿರತೆ ಬೋನಿಗೆ ಬಿದ್ದಿದೆ.
    user_Saloon@3
    Saloon@3
    Make-up artist ತಿಪಟೂರು, ತುಮಕೂರು, ಕರ್ನಾಟಕ•
    11 hrs ago
  • ಶಿಗ್ಗಾವಿ ತಾಲೂಕಿನ ಕುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುನ್ನೂರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಮಿಕನಿಗೆ ನೀಡಲಾಗುತ್ತಿರುವ ಕಡಿಮೆ ಕೂಲಿ ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಪ್ರತಿ ಶುಕ್ರವಾರ ನಡೆಯುವ ಸಂತೆಯ ನಂತರ ಶನಿವಾರ ಬೆಳಿಗ್ಗೆ ರಸ್ತೆ ಹಾಗೂ ಸಂತೆ ಪ್ರದೇಶದ ಕಸವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿರುವ ಸ್ವಚ್ಛತಾ ಕಾರ್ಮಿಕ ಪಕ್ಕೀರಪ್ಪ ಮಮದಾಪುರ ಅವರಿಗೆ ಕೇವಲ ₹400 ಕೂಲಿ ನೀಡಲಾಗುತ್ತಿದೆ. ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ನಿಯಮಗಳ ಪ್ರಕಾರ ಸ್ಥಳೀಯ ಸಂಸ್ಥೆಗಳ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನಿಗದಿತ ಕನಿಷ್ಠ ವೇತನ ಹಾಗೂ ಸುರಕ್ಷತಾ ಸೌಲಭ್ಯಗಳನ್ನು ಒದಗಿಸಬೇಕು ಎಂಬ ನಿಯಮ ಇದ್ದರೂ, ಕುನ್ನೂರು ಗ್ರಾಮ ಪಂಚಾಯಿತಿ ಯಾವ ಆಧಾರದ ಮೇಲೆ ವಾರಕ್ಕೆ ₹400 ಕೂಲಿ ನಿಗದಿಪಡಿಸಿದೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಕಸ ನಿರ್ವಹಣೆ ಮಾಡುವ ಸಂದರ್ಭದಲ್ಲಿ ಕಾರ್ಮಿಕನ ಆರೋಗ್ಯ ಸುರಕ್ಷತೆಗೆ ಅಗತ್ಯವಾದ ಕೈಗವಸು, ಮಾಸ್ಕ್, ಕಾಲು ರಕ್ಷಣೆಗಾಗಿ ಬೂಟು ಸೇರಿದಂತೆ ಯಾವುದೇ ವೈಯಕ್ತಿಕ ಸುರಕ್ಷತಾ ಪರಿಕರಗಳನ್ನು ಪಂಚಾಯಿತಿ ನೀಡಿಲ್ಲ. ಕಸದಲ್ಲಿರುವ ಗಾಜಿನ ತುಂಡುಗಳು, ಕೊಳೆತ ತ್ಯಾಜ್ಯ, ಪ್ಲಾಸ್ಟಿಕ್ ಹಾಗೂ ಇತರೆ ಅಪಾಯಕಾರಿ ವಸ್ತುಗಳಿಂದ ಕಾರ್ಮಿಕರ ಆರೋಗ್ಯಕ್ಕೆ ಹಾನಿಯಾಗುವ ಸಾಧ್ಯತೆ ಇದ್ದರೂ, ಯಾವುದೇ ರಕ್ಷಣಾ ಕ್ರಮಗಳಿಲ್ಲದೆ ಪಕ್ಕೀರಪ್ಪ ಮಮದಾಪುರ ಅವರು ಕೆಲಸ ಮಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲದೆ, ಸ್ವಚ್ಛತಾ ಕಾರ್ಯಕ್ಕೆ ಅಗತ್ಯವಿರುವ ಕಸಬರಗಿಯನ್ನು ಸಹ ಪಂಚಾಯಿತಿಯಿಂದ ನೀಡಲಾಗಿಲ್ಲ. ಕಾರ್ಮಿಕರು ತಮ್ಮ ಮನೆಯಿಂದಲೇ ಹಳೆಯ ಕಸಬರಗಿಯನ್ನು ತಂದು ಸರಿಪಡಿಸಿಕೊಂಡು ಬಳಸುತ್ತಿದ್ದಾರೆ ಎಂದು ಹೇಳಲಾಗಿದೆ. ಗ್ರಾಮದ ಸ್ವಚ್ಛತೆಗಾಗಿ ದುಡಿಯುವ ಸಿಬ್ಬಂದಿಗೆ ಮೂಲಭೂತ ಕೆಲಸದ ಸಲಕರಣೆಗಳನ್ನೂ ಒದಗಿಸದಿರುವುದು ಆಡಳಿತದ ನಿರ್ಲಕ್ಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿರುವ ಸ್ವಚ್ಛತಾ ಕಾರ್ಮಿಕ ಪಕ್ಕೀರಪ್ಪ ಮಮದಾಪುರ ಅವರು, ಕಸ ತೆಗೆಯುವುದು ಕೇವಲ ಕೆಲಸವಲ್ಲ, ಅದು ಸಾರ್ವಜನಿಕ ಆರೋಗ್ಯ ಕಾಪಾಡುವ ಸೇವೆ ಎಂದು ಒತ್ತಿಹೇಳಿದ್ದಾರೆ. ಸರ್ಕಾರಿ ನಿಯಮದಂತೆ ಕನಿಷ್ಠ ವೇತನ ನೀಡಬೇಕು ಮತ್ತು ವಾರಕ್ಕೆ ಒಂದು ದಿನದ ₹400 ಕೂಲಿಯ ಬದಲಾಗಿ ಮಾಸಿಕ ವೇತನದ ಆಧಾರದಲ್ಲಿ ಡಿ ದರ್ಜೆ ನೌಕರನನ್ನಾಗಿ ನೇಮಿಸಿಕೊಳ್ಳಬೇಕು ಎಂಬುದು ಅವರ ಹಕ್ಕುಬದ್ಧ ಬೇಡಿಕೆಯಾಗಿದೆ.
    2
    ಶಿಗ್ಗಾವಿ ತಾಲೂಕಿನ ಕುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುನ್ನೂರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಮಿಕನಿಗೆ ನೀಡಲಾಗುತ್ತಿರುವ ಕಡಿಮೆ ಕೂಲಿ ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಪ್ರತಿ ಶುಕ್ರವಾರ ನಡೆಯುವ ಸಂತೆಯ ನಂತರ ಶನಿವಾರ ಬೆಳಿಗ್ಗೆ ರಸ್ತೆ ಹಾಗೂ ಸಂತೆ ಪ್ರದೇಶದ ಕಸವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿರುವ ಸ್ವಚ್ಛತಾ ಕಾರ್ಮಿಕ ಪಕ್ಕೀರಪ್ಪ ಮಮದಾಪುರ ಅವರಿಗೆ ಕೇವಲ ₹400 ಕೂಲಿ ನೀಡಲಾಗುತ್ತಿದೆ. ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ನಿಯಮಗಳ ಪ್ರಕಾರ ಸ್ಥಳೀಯ ಸಂಸ್ಥೆಗಳ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನಿಗದಿತ ಕನಿಷ್ಠ ವೇತನ ಹಾಗೂ ಸುರಕ್ಷತಾ ಸೌಲಭ್ಯಗಳನ್ನು ಒದಗಿಸಬೇಕು ಎಂಬ ನಿಯಮ ಇದ್ದರೂ, ಕುನ್ನೂರು ಗ್ರಾಮ ಪಂಚಾಯಿತಿ ಯಾವ ಆಧಾರದ ಮೇಲೆ ವಾರಕ್ಕೆ ₹400 ಕೂಲಿ ನಿಗದಿಪಡಿಸಿದೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಕಸ ನಿರ್ವಹಣೆ ಮಾಡುವ ಸಂದರ್ಭದಲ್ಲಿ ಕಾರ್ಮಿಕನ ಆರೋಗ್ಯ ಸುರಕ್ಷತೆಗೆ ಅಗತ್ಯವಾದ ಕೈಗವಸು, ಮಾಸ್ಕ್, ಕಾಲು ರಕ್ಷಣೆಗಾಗಿ ಬೂಟು ಸೇರಿದಂತೆ ಯಾವುದೇ ವೈಯಕ್ತಿಕ ಸುರಕ್ಷತಾ ಪರಿಕರಗಳನ್ನು ಪಂಚಾಯಿತಿ ನೀಡಿಲ್ಲ. ಕಸದಲ್ಲಿರುವ ಗಾಜಿನ ತುಂಡುಗಳು, ಕೊಳೆತ ತ್ಯಾಜ್ಯ, ಪ್ಲಾಸ್ಟಿಕ್ ಹಾಗೂ ಇತರೆ ಅಪಾಯಕಾರಿ ವಸ್ತುಗಳಿಂದ ಕಾರ್ಮಿಕರ ಆರೋಗ್ಯಕ್ಕೆ ಹಾನಿಯಾಗುವ ಸಾಧ್ಯತೆ ಇದ್ದರೂ, ಯಾವುದೇ ರಕ್ಷಣಾ ಕ್ರಮಗಳಿಲ್ಲದೆ ಪಕ್ಕೀರಪ್ಪ ಮಮದಾಪುರ ಅವರು ಕೆಲಸ ಮಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲದೆ, ಸ್ವಚ್ಛತಾ ಕಾರ್ಯಕ್ಕೆ ಅಗತ್ಯವಿರುವ ಕಸಬರಗಿಯನ್ನು ಸಹ ಪಂಚಾಯಿತಿಯಿಂದ ನೀಡಲಾಗಿಲ್ಲ. ಕಾರ್ಮಿಕರು ತಮ್ಮ ಮನೆಯಿಂದಲೇ ಹಳೆಯ ಕಸಬರಗಿಯನ್ನು ತಂದು ಸರಿಪಡಿಸಿಕೊಂಡು ಬಳಸುತ್ತಿದ್ದಾರೆ ಎಂದು ಹೇಳಲಾಗಿದೆ. ಗ್ರಾಮದ ಸ್ವಚ್ಛತೆಗಾಗಿ ದುಡಿಯುವ ಸಿಬ್ಬಂದಿಗೆ ಮೂಲಭೂತ ಕೆಲಸದ ಸಲಕರಣೆಗಳನ್ನೂ ಒದಗಿಸದಿರುವುದು ಆಡಳಿತದ ನಿರ್ಲಕ್ಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿರುವ ಸ್ವಚ್ಛತಾ ಕಾರ್ಮಿಕ ಪಕ್ಕೀರಪ್ಪ ಮಮದಾಪುರ ಅವರು, ಕಸ ತೆಗೆಯುವುದು ಕೇವಲ ಕೆಲಸವಲ್ಲ, ಅದು ಸಾರ್ವಜನಿಕ ಆರೋಗ್ಯ ಕಾಪಾಡುವ ಸೇವೆ ಎಂದು ಒತ್ತಿಹೇಳಿದ್ದಾರೆ. ಸರ್ಕಾರಿ ನಿಯಮದಂತೆ ಕನಿಷ್ಠ ವೇತನ ನೀಡಬೇಕು ಮತ್ತು ವಾರಕ್ಕೆ ಒಂದು ದಿನದ ₹400 ಕೂಲಿಯ ಬದಲಾಗಿ ಮಾಸಿಕ ವೇತನದ ಆಧಾರದಲ್ಲಿ ಡಿ ದರ್ಜೆ ನೌಕರನನ್ನಾಗಿ ನೇಮಿಸಿಕೊಳ್ಳಬೇಕು ಎಂಬುದು ಅವರ ಹಕ್ಕುಬದ್ಧ ಬೇಡಿಕೆಯಾಗಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    13 hrs ago
  • ಯೋಗ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗ ಗುರುವಿನ ಸ್ಥಾನಕ್ಕೆ ಏರಿದ್ದಾರೆ. ಈ ಸಂದರ್ಭದಲ್ಲಿ, 'ಯೋಗವಿದ್ದಲ್ಲಿ ರೋಗವಿಲ್ಲ' ಎಂಬ ಪ್ರಮುಖ ಸಂದೇಶವನ್ನು ನೀಡಲಾಯಿತು.
    1
    ಯೋಗ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗ ಗುರುವಿನ ಸ್ಥಾನಕ್ಕೆ ಏರಿದ್ದಾರೆ. ಈ ಸಂದರ್ಭದಲ್ಲಿ, 'ಯೋಗವಿದ್ದಲ್ಲಿ ರೋಗವಿಲ್ಲ' ಎಂಬ ಪ್ರಮುಖ ಸಂದೇಶವನ್ನು ನೀಡಲಾಯಿತು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    14 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಜೂನ್ 20ರಂದು ಎಐಟಿಯುಸಿ ನೇತೃತ್ವದಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ತಮ್ಮ ಹತ್ತಾರು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ತಹಶಿಲ್ದಾರರ ಮುಖಾಂತರ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನಾಕಾರರು ಮಹಾತ್ಮಗಾಂಧಿ ರಾಷ್ಟ್ರೀಯ ಸ್ಮಾರಕದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಪಟ್ಟಣದ ಪ್ರಮುಖ ಬೀದಿಗಳು ಮತ್ತು ವೃತ್ತಗಳ ಮೂಲಕ ಸಾಗಿ ತಾಲೂಕು ಆಡಳಿತ ಸೌಧವನ್ನು ತಲುಪಿದರು. ಈ ವೇಳೆ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ನಂತರ ಹೆಚ್.ವೀರಣ್ಣ ಅವರ ನೇತೃತ್ವದಲ್ಲಿ ತಹಶಿಲ್ದಾರರಾದ ವಿ.ಕೆ.ನೇತ್ರಾವತಿ ಯವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್‌ನ ತಾಲೂಕು ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಸದಸ್ಯರು ಭಾಗವಹಿಸಿದ್ದರು. ಅಕ್ಷರ ದಾಸೋಹ ಇಲಾಖಾಧಿಕಾರಿಗಳು ಸಹ ಹಾಜರಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಜೂನ್ 20ರಂದು ಎಐಟಿಯುಸಿ ನೇತೃತ್ವದಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ತಮ್ಮ ಹತ್ತಾರು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ತಹಶಿಲ್ದಾರರ ಮುಖಾಂತರ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನಾಕಾರರು ಮಹಾತ್ಮಗಾಂಧಿ ರಾಷ್ಟ್ರೀಯ ಸ್ಮಾರಕದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಪಟ್ಟಣದ ಪ್ರಮುಖ ಬೀದಿಗಳು ಮತ್ತು ವೃತ್ತಗಳ ಮೂಲಕ ಸಾಗಿ ತಾಲೂಕು ಆಡಳಿತ ಸೌಧವನ್ನು ತಲುಪಿದರು.

ಈ ವೇಳೆ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ನಂತರ ಹೆಚ್.ವೀರಣ್ಣ ಅವರ ನೇತೃತ್ವದಲ್ಲಿ ತಹಶಿಲ್ದಾರರಾದ ವಿ.ಕೆ.ನೇತ್ರಾವತಿ ಯವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್‌ನ ತಾಲೂಕು ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಸದಸ್ಯರು ಭಾಗವಹಿಸಿದ್ದರು. ಅಕ್ಷರ ದಾಸೋಹ ಇಲಾಖಾಧಿಕಾರಿಗಳು ಸಹ ಹಾಜರಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    10 hrs ago
  • ಚಳ್ಳಕೆರೆ ನಗರದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಚಳ್ಳಕೆರೆ ಉಪಾಧ್ಯಕ್ಷರ ಕಚೇರಿಯ ವತಿಯಿಂದ ನಗರದ ಎಚ್‌ಪಿಸಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದಲ್ಲದೆ, ಚಳ್ಳಕೆರೆ ನಗರದಲ್ಲಿ ಪೋಲೀಸ್ ಇಲಾಖೆಯು ಸಹ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು.
    1
    ಚಳ್ಳಕೆರೆ ನಗರದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಚಳ್ಳಕೆರೆ ಉಪಾಧ್ಯಕ್ಷರ ಕಚೇರಿಯ ವತಿಯಿಂದ ನಗರದ ಎಚ್‌ಪಿಸಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದಲ್ಲದೆ, ಚಳ್ಳಕೆರೆ ನಗರದಲ್ಲಿ ಪೋಲೀಸ್ ಇಲಾಖೆಯು ಸಹ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಹುಳಿಯಾರು-ಕೆಂಕೆರೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
    1
    ಹುಳಿಯಾರು-ಕೆಂಕೆರೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    6 hrs ago
  • ಹಳ್ಳಿಯಲ್ಲಿ ಅರಳಿದ ಪ್ರತಿಭೆಯಾದ ಕುಮಾರಿ ಸುಪ್ರಭಾ ಬಡೋರೆ ಹಾಡಿರುವ 'ಗಂಧದ ಗುಡಿ' ಗೀತೆಯ ವಿಡಿಯೋ ಒಂದು ವೈರಲ್ ಆಗಿದೆ. ಅವರ ಗಾಯನ ಕೌಶಲ್ಯವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
    1
    ಹಳ್ಳಿಯಲ್ಲಿ ಅರಳಿದ ಪ್ರತಿಭೆಯಾದ ಕುಮಾರಿ ಸುಪ್ರಭಾ ಬಡೋರೆ ಹಾಡಿರುವ 'ಗಂಧದ ಗುಡಿ' ಗೀತೆಯ ವಿಡಿಯೋ ಒಂದು ವೈರಲ್ ಆಗಿದೆ. ಅವರ ಗಾಯನ ಕೌಶಲ್ಯವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.