logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಂಗೋಲಿ ಸ್ಪರ್ಧೆಯಿಂದ ಸಂಸ್ಕೃತಿ, ಕಲೆಯ ಉಳಿವಿಗೆ ಪ್ರೋತ್ಸಾಹ. ಕೊರಟಗೆರೆ: ನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಕಲೆಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ರಂಗೋಲಿ ಸೇರಿದಂತೆ ಇಂತಹ ಸಾಂಸ್ಕೃತಿಕ ಸ್ಪರ್ಧೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕೋಳಾಲ ಶ್ರೀ ಬಸವೇಶ್ವರ ಕೇಂದ್ರೀಯ ಸಂಯುಕ್ತ  ಪದವಿಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಚಿಂಪುಗಾನಹಳ್ಳಿ ನಟರಾಜ್ ಸಿ ವಿ ಅಭಿಪ್ರಾಯಪಟ್ಟರು ರಂಗೋಲಿ ಸ್ಪರ್ಧೆಯಿಂದ ಸಂಸ್ಕೃತಿ, ಕಲೆಯ ಉಳಿವಿಗೆ ಪ್ರೋತ್ಸಾಹ. ಕೊರಟಗೆರೆ: ನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಕಲೆಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ರಂಗೋಲಿ ಸೇರಿದಂತೆ ಇಂತಹ ಸಾಂಸ್ಕೃತಿಕ ಸ್ಪರ್ಧೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕೋಳಾಲ ಶ್ರೀ ಬಸವೇಶ್ವರ ಕೇಂದ್ರೀಯ ಸಂಯುಕ್ತ  ಪದವಿಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಚಿಂಪುಗಾನಹಳ್ಳಿ ನಟರಾಜ್ ಸಿ ವಿ ಅಭಿಪ್ರಾಯಪಟ್ಟರು ಅವರು ತಾಲ್ಲೂಕಿನ ಶಕುನಿ ತಿಮ್ಮನಹಳ್ಳಿ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪನೆ ಅಂಗವಾಗಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದ ಅವರು, ರಂಗೋಲಿ ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರದ ಪ್ರತೀಕವಾಗಿದೆ. ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಇಂತಹ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವುದರಿಂದ ಗ್ರಾಮೀಣ ಭಾಗದ ಪ್ರತಿಭೆಗಳಿಗೆ ವೇದಿಕೆ ದೊರೆಯುವುದರ ಜತೆಗೆ, ಯುವಜನತೆ ಹಾಗೂ ಮಕ್ಕಳಲ್ಲಿ ನಮ್ಮ ಸಾಂಪ್ರದಾಯಿಕ ಕಲೆಯ ಬಗ್ಗೆ ಆಸಕ್ತಿ ಮೂಡುತ್ತದೆ ಎಂದರು. ರಂಗೋಲಿ ಸ್ಪರ್ಧೆ ಆಯೋಜಿಸುವ ಮೂಲಕ ಸಾಂಪ್ರದಾಯಿಕ ಕಲೆಗೆ ಪ್ರೋತ್ಸಾಹ ನೀಡಲಾಗಿದೆ. ಇಂತಹ ಕಾರ್ಯಕ್ರಮಗಳು ಕೇವಲ ಮನರಂಜನೆಗೆ ಸೀಮಿತವಾಗದೆ ಗ್ರಾಮದ ಜನರನ್ನು ಒಂದೆಡೆ ಸೇರಿಸಿ ಪರಸ್ಪರ ಬಾಂಧವ್ಯ ಬೆಸೆಯಲು ಸಹಕಾರಿಯಾಗುತ್ತವೆ. ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವುದರಿಂದ ಗ್ರಾಮಸ್ಥರ ಒಗ್ಗಟ್ಟು ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದರು. ಮೂಢನಂಬಿಕೆ ಹಾಗೂ ಕಂದಾಚಾರಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನವೂ ಸ್ಪರ್ಧೆಯಲ್ಲಿ ಕಂಡುಬಂದಿತು. ಯುವ ಸಮೂಹವು ವಾಮಾಚಾರ ಹಾಗೂ ಕಂದಾಚಾರಗಳ ದುಷ್ಪರಿಣಾಮಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರಂಗೋಲಿ ಬಿಡಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆಯಿತು. ಇಂತಹ ಸೃಜನಶೀಲ ಪ್ರಯತ್ನಗಳು ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಗಲಿವೆ. ಇದು ಉತ್ತಮ ಬೆಳವಣಿಗೆ ಎಂದು ನಟರಾಜ್ ಹೇಳಿದರು. ಎಲ್ಲ ವಯೋಮಾನದವರ ಉತ್ಸಾಹ ಗಣಪತಿ ಪ್ರತಿಷ್ಠಾಪನೆ ಅಂಗವಾಗಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಗೆ ಗ್ರಾಮಸ್ಥರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಯಿತು. ವಿವಿಧ ತಂಡಗಳಲ್ಲಿ ಮಹಿಳೆಯರು, ಪುರುಷರು ಹಾಗೂ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿದರು. 10 ವರ್ಷದ ಮಕ್ಕಳಿಂದ ಹಿಡಿದು 70 ವರ್ಷದ ಹಿರಿಯರವರೆಗೂ ಯಾವುದೇ ವಯೋಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಮಹಿಳೆಯರು ಮತ್ತು ಪುರುಷರು ಎಂಬ ಭೇದವಿಲ್ಲದೆ ಎಲ್ಲರೂ ರಂಗೋಲಿ ಬಿಡಿಸುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಸ್ಪರ್ಧಿಗಳು ರಂಗೋಲಿ ಬಿಡಿಸಲು ಅಗತ್ಯವಾದ ಬಣ್ಣಗಳು, ಪರಿಕರಗಳು ಸೇರಿದಂತೆ ವಿವಿಧ ಸಾಮಗ್ರಿಗಳೊಂದಿಗೆ ರಾತ್ರಿ 8 ಗಂಟೆಗೇ ಸ್ಥಳಕ್ಕೆ ಆಗಮಿಸಿ ಹೆಸರು ನೋಂದಾಯಿಸಿಕೊಂಡರು. ಬಳಿಕ ರಾತ್ರಿ 9 ಗಂಟೆಗೆ ಸ್ಪರ್ಧೆಗೆ ಚಾಲನೆ ನೀಡಲಾಯಿತು.  ಸ್ಪರ್ಧಿಗಳಿಗೆ ರಂಗೋಲಿ ಪೂರ್ಣಗೊಳಿಸಲು ಒಂದು ಗಂಟೆ ಕಾಲಾವಕಾಶ ನೀಡಲಾಗಿತ್ತು. ಕಲೆಗಳ ಮೂಲಕ ಅರಿವು ಸ್ಪರ್ಧೆಯಲ್ಲಿ ಭಾಗವಹಿಸಿದ್ದವರು ತಮ್ಮ ಕಲ್ಪನೆ ಹಾಗೂ ಸೃಜನಶೀಲತೆಗೆ ತಕ್ಕಂತೆ ವಿವಿಧ ವಿಷಯಗಳನ್ನು ರಂಗೋಲಿಯಲ್ಲಿ ಮೂಡಿಸಿದರು. ಕೆಲವರು ಪ್ರಕೃತಿ ಸೌಂದರ್ಯವನ್ನು ಬಣ್ಣಗಳ ಮೂಲಕ ಕಟ್ಟಿಕೊಟ್ಟರೆ, ಇನ್ನು ಕೆಲವರು ಗ್ರಾಮೀಣ ಬದುಕಿನ ಚಿತ್ರಣ, ಕೃಷಿ ಚಟುವಟಿಕೆಗಳು, ಧವಸ–ಧಾನ್ಯಗಳ ಸುಗ್ಗಿ ಹಾಗೂ ವಿವಿಧ ಸಾಂಪ್ರದಾಯಿಕ ವಿನ್ಯಾಸಗಳನ್ನು ರಂಗೋಲಿಯಲ್ಲಿ ಅರಳಿಸಿದರು. ಕೆಲವು ರಂಗೋಲಿಗಳು ಸಾಮಾಜಿಕ ಸಂದೇಶಗಳನ್ನು ಸಾರುವಂತಿದ್ದರೆ, ಇನ್ನು ಕೆಲವು ಸಾಂಪ್ರದಾಯಿಕ ವಿನ್ಯಾಸ ಹಾಗೂ ಬಣ್ಣಗಳ ಸಂಯೋಜನೆಯಿಂದ ಗಮನ ಸೆಳೆದವು. ಸ್ಪರ್ಧಿಗಳು ತಾವು ಬಿಡಿಸಿದ ರಂಗೋಲಿಗಳನ್ನು ಪೂರ್ಣಗೊಳಿಸಿದ ಬಳಿಕ ಅದರ ಸೌಂದರ್ಯವನ್ನು ಕಣ್ತುಂಬಿಕೊಂಡು ಸಂತಸಪಟ್ಟರು. ಹಲವರು ರಂಗೋಲಿಯೊಂದಿಗೆ ಛಾಯಾಚಿತ್ರ ಹಾಗೂ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು. ಒಟ್ಟಾರೆ ಗಣಪತಿ ಪ್ರತಿಷ್ಠಾಪನೆಯ ಧಾರ್ಮಿಕ ವಾತಾವರಣದ ನಡುವೆ ಆಯೋಜಿಸಿದ್ದ ರಂಗೋಲಿ ಸ್ಪರ್ಧೆ ಗ್ರಾಮಸ್ಥರಲ್ಲಿ ಉತ್ಸಾಹ ಮೂಡಿಸುವ ಜತೆಗೆ, ಸಾಂಸ್ಕೃತಿಕ ಕಲೆಗೆ ಪ್ರೋತ್ಸಾಹ ನೀಡಿತು. ವಿವಿಧ ವಯೋಮಾನದವರು ಒಗ್ಗಟ್ಟಿನಿಂದ ಪಾಲ್ಗೊಂಡಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು. ಸ್ಪರ್ಧೆಯ ತೀರ್ಪುಗಾರರಾಗಿ ನಟರಾಜ್ ಅವರು ಪಾರದರ್ಶಕವಾಗಿ ತೀರ್ಪು ನೀಡಿದ್ದಕ್ಕೆ ಸ್ಪರ್ಧಿಗಳು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.

7 hrs ago
user_ಸತೀಶ್ ಎಸ್
ಸತೀಶ್ ಎಸ್
ವರದಿಗಾರ ಮೊ ನಂ:-9606137664 ಕೊರಟಗೆರೆ, ತುಮಕೂರು, ಕರ್ನಾಟಕ•
7 hrs ago
c5648472-126a-4046-b95d-1e6d5e39aec0

More news from ಕರ್ನಾಟಕ and nearby areas
  • ತಮಾಷೆ ಹಾಗೂ ಆರೋಗ್ಯಕರವಾದಂತ ವಿಡಿಯೋ ಇದು ನೋಡಿ #onlinetv24x7
    1
    ತಮಾಷೆ ಹಾಗೂ ಆರೋಗ್ಯಕರವಾದಂತ ವಿಡಿಯೋ ಇದು ನೋಡಿ  #onlinetv24x7
    user_Onlinetv24x7
    Onlinetv24x7
    ತುಮಕೂರು, ತುಮಕೂರು, ಕರ್ನಾಟಕ•
    6 hrs ago
  • ಸರಕಾರ ಕೂಡಲೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ತುಮಕೂರು:ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಣಿಸಿಕೊಂಡಿದ್ದು,ಜಿಲ್ಲೆಯ ತಿಪಟೂರು ಹೊರತು ಪಡಿಸಿ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರಕಾರ ಘೋಷಣೆ ಮಾಡಿದ್ದರೂ ಇದುವರೆಗೂ ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿ ಕೊಂಡಿಲ್ಲ.ಇದರಿAದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಜಿಲ್ಲಾಡಳಿತ ಬರಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಮಳೆಯಿಲ್ಲದ ಕಾರಣ ಜಿಲ್ಲೆಯ ಶೇ70 ರಷ್ಟು ಭೂಮಿಯಲ್ಲಿ ಭಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬಿತ್ತನೆ ಮಾಡಿದ ಶೇ30ರಷ್ಟು ಭೂಮಿಯಲ್ಲಿನ ಫಸಲು ಸಹ ಸಕಾಲಕ್ಕೆ ಮಳೆಯಿಲ್ಲದೆ ಒಣಗಿದ್ದು,ದಿನದಿಂದ ದಿನಕ್ಕೆ ಅಂತರಜಲ ಕುಸಿಯುತ್ತಿದ್ದು,ಮುಂದಿನ 15-20 ದಿನಗಳಲ್ಲಿ ತೀವ್ರ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ತಕ್ಷಣವೇ ಕುಡಿಯುವ ನೀರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ಜಾನುವಾರುಗಳ ಮೇವಿಗೆ ಗೋಶಾಲೆ ತೆರೆಯುವುದು.ಎಕರೆಗೆ ತಲಾ 50 ಸಾವಿರ ಬೆಳೆ ಪರಿಹಾರ,ಕೃಷಿಕರು ಮತ್ತು ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗದಂತೆ ವಿಬಿಜಿ ರಾಮಜಿ ಅಡಿಯಲ್ಲಿ ಕೆಲಸ ನೀಡಿ ಜನರ ನೆರವಿಗೆ ಬರಬೇಕೆಂದು ಆಗ್ರಹಿಸಿದರು. ಈ ಬಾರಿ ಹೇಮಾವತಿ ಜಲಾಶಯದಲ್ಲಿ ಶೇ75ರಷ್ಟು ನೀರಿನ ಸಂಗ್ರಹವಿತ್ತು. ಆಗ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರುಗಳು ಎಚ್ಚೆತ್ತುಕೊಂಡು ನಮ್ಮ ಕೆರೆ, ಕೆಟ್ಟೆಗಳಿಗೆ ನೀರು ಹರಿಸಿಕೊಂಡಿದ್ದರೆ ಅಂತರ ಜಲ ಕುಸಿತ ತಡೆಯಬಹುದಿತ್ತು. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ನಿರ್ಲಕ್ಷದ ಫಲವಾಗಿ ನಮ್ಮ ಜಿಲ್ಲೆಗೆ ಬರಬೇಕಾದ ನೀರು ತೆಮಿಳು ನಾಡಿಗೆ ಹರಿಸಿ,ಸರಕಾರ ತನ್ನ ಖರ್ಚಿ ಉಳಿಸಿಕೊಂಡಿದೆ.ನಮ್ಮ ತೋಟ, ತುಡಿಕೆಗಳು ಒಣಗಿ, ರೈತರು ಕಂಗಾಲಾಗಿದ್ದಾರೆ.ಈಗಲಾದರೂ ಜಿಲ್ಲಾಡಳಿತ ಎಲ್ಲಾ ಕೆರೆ, ಕಟ್ಟೆಗಳಿಗೆ ನೀರು ಹರಿಸುವ ಕೆಲಸ ಮಾಡಬೇಕು ಎಂದು ಎ.ಗೋವಿಂದರಾಜು ನುಡಿದರು. ಈಲ್ಲೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗಿದ್ದು, ದಿನದಲ್ಲಿ ಒಂದು ಗಂಟೆ ರೈತರ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್ ದೊರೆಯುತ್ತಿಲ್ಲ.ನಿರ್ಮಾಣವಾಗಿರುವ 220 ಕೆ.ವಿ.ಉಪಸ್ಥಾವರಗಳು ಕಾರ್ಯಾರಂಭಗೊAಡಿಲ್ಲ.ಬೇಸ್ಕಾA ಅಧಿಕಾರಿಗಳು ಅಸಹಾಯಕರಾಗಿದ್ದಾರೆ.ಹಾಗಾಗಿ ಬೆಸ್ಕಾಂ ಸೂಪರಿಂಡೆAಟ್ ಇಂಜಿನಿಯರ್, ಮುಖ್ಯ ಇಂಜಿನಿಯರ್ ಹಾಗೂ ಕಾರ್ಯಪಾಲಕ ಇಂಜಿನಿಯರ್‌ಗಳು ಸೆಪ್ಟಂಬರ್ 21ರೊಳಗೆ ರೈತರು,ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗೆ ಪರಿಹಾರ ಒದಗಿಸದಿದ್ದರೆ ಸೆಪ್ಟಂಬರ್ 23 ರಿಂದ ಹಂತ ಹಂತವಾಗಿ ಎಲ್ಲಾ ತಾಲೂಕು ಬೆಸ್ಕಾಂ ಕಚೇರಿ ಮತ್ತು ತಹಶೀಲ್ದಾರರ ಕಚೇರಿಯ ಮುಂದೆ ಪಿಕೇಟಿಗ್ ನಡೆಸಲಾಗುವುದು. ಮಧುಗಿರಿ ಉಪವಿಭಾಗಕ್ಕೆ ಸಂಬAಧಿಸಿ ದಂತೆ ಸೆಪ್ಟಂಬರ್ 23 ರಂದು ಮಧುಗಿರಿ ಎ.ಸಿ.ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದರು. ಈಲ್ಲೆಯಲ್ಲಿ ಸರಕಾರದ ಯೋಜನೆಗಳಾದ ಹೇಮಾವತಿ ನಾಲೆ, ಎತ್ತಿನಹೊಳೆ ಯೋಜನೆ, ರೈಲ್ವೆಗೆ ಸೇರಿ ರೈತರ ಸಾಕಷ್ಟು ಫಲವತ್ತಾ ಭೂಮಿಯನ್ನು ವಶಪಡಿಸಿಕೊಂಡು 20-30 ವರ್ಷಗಳು ಕಳೆದರು ವೈಜ್ಞಾನಿಕ ಪರಿಹಾರ ನೀಡಿಲ್ಲ. ನ್ಯಾಯಾಲಯಕ್ಕೆ ಹೋದ ರೈತರಿಗೆ ಕೋರ್ಟ್ ಆದೇಶದಂತೆ ಸುಮಾರು 500 ಕೋಟಿ ರೂಗಳಿಗೆ ಹೆಚ್ಚಿನ ಬಾಕಿ ನೀಡಬೇಕಿದೆ.ಆದರೆ ಇದುವರೆಗೂ ಒಂದು ನೈಯಾಫೈಸೆ ನೀಡಿಲ್ಲ. ಹಲವು ಮೂಲ ಜಮೀನುದಾರರು ಸಾವನ್ನಪ್ಪಿದ್ದಾರೆ.ಸರಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು. ಹಾಗೆಯೇ ಕಳೆದ ಸಾಲಿನಲ್ಲಿ ನ್ಯಾಫೇಡ್ ಮೂಲಕ ಖರೀದಿಸಿದ್ದ ರಾಗಿಯ ಬಾಬ್ತು ಸುಮಾರು 400 ಕೋಟಿ ರೂ ಬಾಕಿ ಬರಬೇಕಾಗಿದೆ. ಸರಕಾರ ಕೂಡಲೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಎ.ಗೋವಿಂದರಾಜು ಆಗ್ರಹಿಸಿದರು. ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದೆ.ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರದ ಕಾರಣ, ಉತ್ಪಾಧನಾ ವೆಚ್ಚ ಹೆಚ್ಚಾಗಿ,ನಷ್ಟಕ್ಕೆ ಒಳಗಾಗಿ ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾನೆ.ಇದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಂಸದರು ಒಂದು ಬಾರಿಗೆ ರೈತರ ಸಾಲಮನ್ನಾಕ್ಕೆ ಕೇಂದ್ರ ಸರಕಾರವನ್ನು ಒತ್ತಾಯಿಸಬೇಕು.ಹಾಗೆಯೇ ಬ್ಯಾಂಕುಗಳು, ಕಿರು ಹಣಕಾಸು ಸಂಸ್ಥೆಗಳು ಬಲವಂತದ ವಸೂಲಿ ಮಾಡದಂತೆ ಸುತ್ತೋಲೆ ಹೊರಡಿಸಬೇಕೆಂದು ಆಗ್ರಹಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ಮಾತನಾಡಿ,ಬರದಿಂದ ಬೆಳೆ ನಷ್ಟದಿಂದ ಜನರು ಸಂಕಷ್ಟದಲ್ಲಿದ್ದು,ಸರಕಾರ ಕೇರಳ ಮಾದರಿಯಲ್ಲಿ ಪಡಿತರ ಅಕ್ಕಿಯ ಜೊತೆಗೆ, ಬೇಳೆ, ಬೆಲ್ಲ ಸೇರಿದಂತೆ ದಿನ ಬಳಕೆಯ ವಸ್ತುಗಳನ್ನು ರಿಯಾಯತಿ ದರದಲ್ಲಿ ನೀಡಬೇಕು.ಹಾಗೆಯೇ ಪಶುಸಂಗೋಪನೆಗೆ ಪೂರಕವಾಗಿ ಬೂಸ್ ಮತ್ತು ಹಿಂಡಿಯನ್ನು ಶೇ50ರ ರಿಯಾಯಿತಿ ದರದಲ್ಲಿ ನೀಡಬೇಕು. ಲೀಟರ್ ಹಾಲಿಗೆ 40 ರೂ ನೀಡಬೇಕೆಂದು ಒತ್ತಾಯಿಸಿದರು. ನಂದಿಹಳ್ಳಿ-ಮಲ್ಲಸAದ್ರ-ವಸAತನರಸಾಪುರ ಔಟರ್ ರಿಂಗ್ ರಸ್ತೆಗೆ ರೈತರ ವಿರೋಧದ ನಡುವೆಯೂ ಭೂಸ್ವಾಧೀನಕ್ಕೆ ಅಧಿಕಾರಿಗಳು ಮುಂದಾಗುತ್ತಲೇ ಇದ್ದಾರೆ.ಜನರಿಗೆ ಹೆಚ್ಚು ಉಪಯೋಗವಿಲ್ಲದ ಔಟರ್‌ರಿಂಗ್ ರಸ್ತೆ ಯೋಜನೆಯನ್ನು ಕೈಬಿಡಬೇಕು.ಹಾಗೆಯೇ ಜಿಲ್ಲೆಯ 7-8 ತಾಲೂಕುಗಳಿಗೆ ಮರಣ ಶಾಸನವಾಗಿರುವ ಏಕ್ಸ್ಪ್ರೆಸ್ ಕೇನಾಲ್ ಯೋಜನೆಯನ್ನು ಸರಕಾರ ರದ್ದು ಮಾಡಬೇಕು. ಕುಣಿಗಲ್ ನೆಪದಲ್ಲಿ ಬಿಡದಿಯೇ ಎಐ ಡೇಟಾ ಸೆಂಟರ್‌ಗೆ ನೀರು ತೆಗೆದುಕೊಂಡು ಹೋಗಲು ಅವಕಾಶ ನೀಡುವುದಿಲ್ಲ ಎಂದು ಜಿ.ಸಿ.ಶಂಕರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಬೋರೇಗೌಡ, ಲೋಕೇಶ್, ರಂಗಹನುಮಯ್ಯ, ಷಬ್ಬೀರ್ ಪಾಷ, ಯುವಘಟಕದ ಮಂಜುನಾಥ್, ಜಟ್ಟಿ, ತಿಮ್ಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ಸರಕಾರ ಕೂಡಲೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು 
ತುಮಕೂರು:ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಣಿಸಿಕೊಂಡಿದ್ದು,ಜಿಲ್ಲೆಯ ತಿಪಟೂರು ಹೊರತು ಪಡಿಸಿ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರಕಾರ ಘೋಷಣೆ ಮಾಡಿದ್ದರೂ ಇದುವರೆಗೂ ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿ ಕೊಂಡಿಲ್ಲ.ಇದರಿAದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಜಿಲ್ಲಾಡಳಿತ ಬರಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಮಳೆಯಿಲ್ಲದ ಕಾರಣ ಜಿಲ್ಲೆಯ ಶೇ70 ರಷ್ಟು ಭೂಮಿಯಲ್ಲಿ ಭಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬಿತ್ತನೆ ಮಾಡಿದ ಶೇ30ರಷ್ಟು ಭೂಮಿಯಲ್ಲಿನ ಫಸಲು ಸಹ ಸಕಾಲಕ್ಕೆ ಮಳೆಯಿಲ್ಲದೆ ಒಣಗಿದ್ದು,ದಿನದಿಂದ ದಿನಕ್ಕೆ ಅಂತರಜಲ ಕುಸಿಯುತ್ತಿದ್ದು,ಮುಂದಿನ 15-20 ದಿನಗಳಲ್ಲಿ ತೀವ್ರ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ತಕ್ಷಣವೇ ಕುಡಿಯುವ ನೀರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ಜಾನುವಾರುಗಳ ಮೇವಿಗೆ ಗೋಶಾಲೆ ತೆರೆಯುವುದು.ಎಕರೆಗೆ ತಲಾ 50 ಸಾವಿರ ಬೆಳೆ ಪರಿಹಾರ,ಕೃಷಿಕರು ಮತ್ತು ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗದಂತೆ ವಿಬಿಜಿ ರಾಮಜಿ ಅಡಿಯಲ್ಲಿ ಕೆಲಸ ನೀಡಿ ಜನರ ನೆರವಿಗೆ ಬರಬೇಕೆಂದು ಆಗ್ರಹಿಸಿದರು.
ಈ ಬಾರಿ ಹೇಮಾವತಿ ಜಲಾಶಯದಲ್ಲಿ ಶೇ75ರಷ್ಟು ನೀರಿನ ಸಂಗ್ರಹವಿತ್ತು. ಆಗ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರುಗಳು ಎಚ್ಚೆತ್ತುಕೊಂಡು ನಮ್ಮ ಕೆರೆ, ಕೆಟ್ಟೆಗಳಿಗೆ ನೀರು ಹರಿಸಿಕೊಂಡಿದ್ದರೆ ಅಂತರ ಜಲ ಕುಸಿತ ತಡೆಯಬಹುದಿತ್ತು. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ನಿರ್ಲಕ್ಷದ ಫಲವಾಗಿ ನಮ್ಮ ಜಿಲ್ಲೆಗೆ ಬರಬೇಕಾದ ನೀರು ತೆಮಿಳು ನಾಡಿಗೆ ಹರಿಸಿ,ಸರಕಾರ ತನ್ನ ಖರ್ಚಿ ಉಳಿಸಿಕೊಂಡಿದೆ.ನಮ್ಮ ತೋಟ, ತುಡಿಕೆಗಳು ಒಣಗಿ, ರೈತರು ಕಂಗಾಲಾಗಿದ್ದಾರೆ.ಈಗಲಾದರೂ ಜಿಲ್ಲಾಡಳಿತ ಎಲ್ಲಾ ಕೆರೆ, ಕಟ್ಟೆಗಳಿಗೆ ನೀರು ಹರಿಸುವ ಕೆಲಸ ಮಾಡಬೇಕು ಎಂದು ಎ.ಗೋವಿಂದರಾಜು ನುಡಿದರು.
ಈಲ್ಲೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗಿದ್ದು, ದಿನದಲ್ಲಿ ಒಂದು ಗಂಟೆ ರೈತರ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್ ದೊರೆಯುತ್ತಿಲ್ಲ.ನಿರ್ಮಾಣವಾಗಿರುವ 220 ಕೆ.ವಿ.ಉಪಸ್ಥಾವರಗಳು ಕಾರ್ಯಾರಂಭಗೊAಡಿಲ್ಲ.ಬೇಸ್ಕಾA ಅಧಿಕಾರಿಗಳು ಅಸಹಾಯಕರಾಗಿದ್ದಾರೆ.ಹಾಗಾಗಿ ಬೆಸ್ಕಾಂ ಸೂಪರಿಂಡೆAಟ್ ಇಂಜಿನಿಯರ್, ಮುಖ್ಯ ಇಂಜಿನಿಯರ್ ಹಾಗೂ ಕಾರ್ಯಪಾಲಕ ಇಂಜಿನಿಯರ್‌ಗಳು ಸೆಪ್ಟಂಬರ್ 21ರೊಳಗೆ ರೈತರು,ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗೆ ಪರಿಹಾರ ಒದಗಿಸದಿದ್ದರೆ ಸೆಪ್ಟಂಬರ್ 23 ರಿಂದ ಹಂತ ಹಂತವಾಗಿ ಎಲ್ಲಾ ತಾಲೂಕು ಬೆಸ್ಕಾಂ ಕಚೇರಿ ಮತ್ತು ತಹಶೀಲ್ದಾರರ ಕಚೇರಿಯ ಮುಂದೆ ಪಿಕೇಟಿಗ್ ನಡೆಸಲಾಗುವುದು. ಮಧುಗಿರಿ ಉಪವಿಭಾಗಕ್ಕೆ ಸಂಬAಧಿಸಿ ದಂತೆ ಸೆಪ್ಟಂಬರ್ 23 ರಂದು ಮಧುಗಿರಿ ಎ.ಸಿ.ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ಈಲ್ಲೆಯಲ್ಲಿ ಸರಕಾರದ ಯೋಜನೆಗಳಾದ ಹೇಮಾವತಿ ನಾಲೆ, ಎತ್ತಿನಹೊಳೆ ಯೋಜನೆ, ರೈಲ್ವೆಗೆ ಸೇರಿ ರೈತರ ಸಾಕಷ್ಟು ಫಲವತ್ತಾ ಭೂಮಿಯನ್ನು ವಶಪಡಿಸಿಕೊಂಡು 20-30 ವರ್ಷಗಳು ಕಳೆದರು ವೈಜ್ಞಾನಿಕ ಪರಿಹಾರ ನೀಡಿಲ್ಲ. ನ್ಯಾಯಾಲಯಕ್ಕೆ ಹೋದ ರೈತರಿಗೆ ಕೋರ್ಟ್ ಆದೇಶದಂತೆ ಸುಮಾರು 500 ಕೋಟಿ ರೂಗಳಿಗೆ ಹೆಚ್ಚಿನ ಬಾಕಿ ನೀಡಬೇಕಿದೆ.ಆದರೆ ಇದುವರೆಗೂ ಒಂದು ನೈಯಾಫೈಸೆ ನೀಡಿಲ್ಲ. ಹಲವು ಮೂಲ ಜಮೀನುದಾರರು ಸಾವನ್ನಪ್ಪಿದ್ದಾರೆ.ಸರಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು. ಹಾಗೆಯೇ ಕಳೆದ ಸಾಲಿನಲ್ಲಿ ನ್ಯಾಫೇಡ್ ಮೂಲಕ ಖರೀದಿಸಿದ್ದ ರಾಗಿಯ ಬಾಬ್ತು ಸುಮಾರು 400 ಕೋಟಿ ರೂ ಬಾಕಿ ಬರಬೇಕಾಗಿದೆ. ಸರಕಾರ ಕೂಡಲೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಎ.ಗೋವಿಂದರಾಜು ಆಗ್ರಹಿಸಿದರು.
ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದೆ.ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರದ ಕಾರಣ, ಉತ್ಪಾಧನಾ ವೆಚ್ಚ ಹೆಚ್ಚಾಗಿ,ನಷ್ಟಕ್ಕೆ ಒಳಗಾಗಿ ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾನೆ.ಇದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಂಸದರು ಒಂದು ಬಾರಿಗೆ ರೈತರ ಸಾಲಮನ್ನಾಕ್ಕೆ ಕೇಂದ್ರ ಸರಕಾರವನ್ನು ಒತ್ತಾಯಿಸಬೇಕು.ಹಾಗೆಯೇ ಬ್ಯಾಂಕುಗಳು, ಕಿರು ಹಣಕಾಸು ಸಂಸ್ಥೆಗಳು ಬಲವಂತದ ವಸೂಲಿ ಮಾಡದಂತೆ ಸುತ್ತೋಲೆ ಹೊರಡಿಸಬೇಕೆಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ಮಾತನಾಡಿ,ಬರದಿಂದ ಬೆಳೆ ನಷ್ಟದಿಂದ ಜನರು ಸಂಕಷ್ಟದಲ್ಲಿದ್ದು,ಸರಕಾರ ಕೇರಳ ಮಾದರಿಯಲ್ಲಿ ಪಡಿತರ ಅಕ್ಕಿಯ ಜೊತೆಗೆ, ಬೇಳೆ, ಬೆಲ್ಲ ಸೇರಿದಂತೆ ದಿನ ಬಳಕೆಯ ವಸ್ತುಗಳನ್ನು ರಿಯಾಯತಿ ದರದಲ್ಲಿ ನೀಡಬೇಕು.ಹಾಗೆಯೇ ಪಶುಸಂಗೋಪನೆಗೆ ಪೂರಕವಾಗಿ ಬೂಸ್ ಮತ್ತು ಹಿಂಡಿಯನ್ನು ಶೇ50ರ ರಿಯಾಯಿತಿ ದರದಲ್ಲಿ ನೀಡಬೇಕು. ಲೀಟರ್ ಹಾಲಿಗೆ 40 ರೂ ನೀಡಬೇಕೆಂದು ಒತ್ತಾಯಿಸಿದರು.
ನಂದಿಹಳ್ಳಿ-ಮಲ್ಲಸAದ್ರ-ವಸAತನರಸಾಪುರ ಔಟರ್ ರಿಂಗ್ ರಸ್ತೆಗೆ ರೈತರ ವಿರೋಧದ ನಡುವೆಯೂ ಭೂಸ್ವಾಧೀನಕ್ಕೆ ಅಧಿಕಾರಿಗಳು ಮುಂದಾಗುತ್ತಲೇ ಇದ್ದಾರೆ.ಜನರಿಗೆ ಹೆಚ್ಚು ಉಪಯೋಗವಿಲ್ಲದ ಔಟರ್‌ರಿಂಗ್ ರಸ್ತೆ ಯೋಜನೆಯನ್ನು ಕೈಬಿಡಬೇಕು.ಹಾಗೆಯೇ ಜಿಲ್ಲೆಯ 7-8 ತಾಲೂಕುಗಳಿಗೆ ಮರಣ ಶಾಸನವಾಗಿರುವ ಏಕ್ಸ್ಪ್ರೆಸ್ ಕೇನಾಲ್ ಯೋಜನೆಯನ್ನು ಸರಕಾರ ರದ್ದು ಮಾಡಬೇಕು. ಕುಣಿಗಲ್ ನೆಪದಲ್ಲಿ ಬಿಡದಿಯೇ ಎಐ ಡೇಟಾ ಸೆಂಟರ್‌ಗೆ ನೀರು ತೆಗೆದುಕೊಂಡು ಹೋಗಲು ಅವಕಾಶ ನೀಡುವುದಿಲ್ಲ ಎಂದು ಜಿ.ಸಿ.ಶಂಕರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಬೋರೇಗೌಡ, ಲೋಕೇಶ್, ರಂಗಹನುಮಯ್ಯ, ಷಬ್ಬೀರ್ ಪಾಷ, ಯುವಘಟಕದ ಮಂಜುನಾಥ್, ಜಟ್ಟಿ, ತಿಮ್ಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_E ಮಾಹಿತಿ ನಿಮಗಾಗಿ
    E ಮಾಹಿತಿ ನಿಮಗಾಗಿ
    ತುಮಕೂರು, ತುಮಕೂರು, ಕರ್ನಾಟಕ•
    9 hrs ago
  • ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್
    1
    ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್
    user_MSMEDIACHANNEL
    MSMEDIACHANNEL
    Social Media Manager ಪಾವಗಡ, ತುಮಕೂರು, ಕರ್ನಾಟಕ•
    3 hrs ago
  • ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.
    2
    ಹೆದ್ದಾರಿಯಲ್ಲಿ ಭೀಕರ ಅಪಘಾತ. 
ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. 
ದೇವನಹಳ್ಳಿ 
ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. 
ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. 
ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ  ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. 
ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. 
ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. 
ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. 
ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. 
ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. 
ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. 
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. 
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    11 hrs ago
  • ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ
    1
    ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ 
ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ 
ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ 
ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ
    1
    ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ
ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ .
ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ .
44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ 
ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ
44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ:ಒರ್ವ ಸಾವು ,ಮೂವರಿಗೆ ಗಾಯ ಬೆಂಗಳೂರು:ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ ಹೊಡೆದಿದೆ.ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ನಡೆದಿದೆ.ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ.ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯವಾಗಿದೆ.ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .
    1
    ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ:ಒರ್ವ ಸಾವು ,ಮೂವರಿಗೆ ಗಾಯ

ಬೆಂಗಳೂರು:ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ ಹೊಡೆದಿದೆ.ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ  ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ ಹೊಡೆದ  ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ನಡೆದಿದೆ.ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ.ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯವಾಗಿದೆ.ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    19 hrs ago
  • ಬೇಸಿಗೆ ಬಂದರೆ ನಮ್ಮಲ್ಲಿ ಜಾನುವಾರುಗಳಿಗೆ ಹುಲ್ಲು ಸಿಗುವುದೇಲ ಕಷ್ಟ ಹೊರ ರಾಷ್ಟ್ರದಲ್ಲಿ ಇಂತಹ ಆಹಾರ ನೀಡುತ್ತಿದ್ದಾರೆ.
    1
    ಬೇಸಿಗೆ ಬಂದರೆ ನಮ್ಮಲ್ಲಿ ಜಾನುವಾರುಗಳಿಗೆ ಹುಲ್ಲು ಸಿಗುವುದೇಲ ಕಷ್ಟ ಹೊರ ರಾಷ್ಟ್ರದಲ್ಲಿ ಇಂತಹ ಆಹಾರ ನೀಡುತ್ತಿದ್ದಾರೆ.
    user_Onlinetv24x7
    Onlinetv24x7
    ತುಮಕೂರು, ತುಮಕೂರು, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.