logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

"ಬಿಜೆಪಿಯವರು ನನ್ನ ಪ್ಯಾಂಟ್-ಅಂಗಿ ಹರಿಯುತ್ತಿದ್ದಾರೆ" : ಡಿಕೆಶಿ ವ್ಯಂಗ್ಯ ರಾಜ್ಯದಲ್ಲಿ ನಿರಂತರ ಮಳೆಯ ಪರಿಣಾಮ ಜಲಾಶಯಗಳು ವೇಗವಾಗಿ ಭರ್ತಿಯಾಗುತ್ತಿದ್ದು, ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಹೋರಾಟಗಾರರು ಜಲಾಶಯಗಳ ಬಳಿ ತೆರಳಬಾರದು ಹಾಗೂ ನೀರು ಬಿಡುವುದಿಲ್ಲ ಎಂದು ನದಿಗಳಿಗೆ ಇಳಿದು ಪ್ರತಿಭಟನೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, “ಆ ರೀತಿ ನದಿಗೆ ಇಳಿದರೆ ಕೊಚ್ಚಿಕೊಂಡು ಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು. ಇದೇ ವೇಳೆ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ರದ್ದಾಗಿದೆ ಎಂದು ತಿಳಿಸಿದರು. “ಪ್ರಸ್ತುತ ಪರಿಸ್ಥಿತಿ ಸೂಕ್ತವಾಗಿಲ್ಲದ ಕಾರಣ ಅವರು ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆ ನಡೆದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ. ಪರಿಸ್ಥಿತಿ ಸಹಜವಾದ ಬಳಿಕ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ” ಎಂದರು. ಬಿಜೆಪಿ ಹೋರಾಟಗಳ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಹೋರಾಟದ ಹೆಸರಿನಲ್ಲಿ ನನ್ನ ಪ್ಯಾಂಟ್, ಅಂಗಿಯನ್ನೇ ಹರಿಯುತ್ತಿದ್ದಾರೆ. ಕರ್ನಾಟಕದ ಸಂಸದರು ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡ್ಯಾಂಗೆ ಬಾಗಿನ ಅರ್ಪಿಸುವ ಬಗ್ಗೆ ಹೇಗೆ ಮಾತನಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.

4 hrs ago
user_Ashwini
Ashwini
ಮೈಸೂರು, ಮೈಸೂರು, ಕರ್ನಾಟಕ•
4 hrs ago

"ಬಿಜೆಪಿಯವರು ನನ್ನ ಪ್ಯಾಂಟ್-ಅಂಗಿ ಹರಿಯುತ್ತಿದ್ದಾರೆ" : ಡಿಕೆಶಿ ವ್ಯಂಗ್ಯ ರಾಜ್ಯದಲ್ಲಿ ನಿರಂತರ ಮಳೆಯ ಪರಿಣಾಮ ಜಲಾಶಯಗಳು ವೇಗವಾಗಿ ಭರ್ತಿಯಾಗುತ್ತಿದ್ದು, ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಹೋರಾಟಗಾರರು ಜಲಾಶಯಗಳ ಬಳಿ ತೆರಳಬಾರದು ಹಾಗೂ ನೀರು ಬಿಡುವುದಿಲ್ಲ ಎಂದು ನದಿಗಳಿಗೆ ಇಳಿದು ಪ್ರತಿಭಟನೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, “ಆ ರೀತಿ ನದಿಗೆ ಇಳಿದರೆ ಕೊಚ್ಚಿಕೊಂಡು ಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು. ಇದೇ ವೇಳೆ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ರದ್ದಾಗಿದೆ ಎಂದು ತಿಳಿಸಿದರು. “ಪ್ರಸ್ತುತ ಪರಿಸ್ಥಿತಿ ಸೂಕ್ತವಾಗಿಲ್ಲದ ಕಾರಣ ಅವರು ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆ ನಡೆದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ. ಪರಿಸ್ಥಿತಿ ಸಹಜವಾದ ಬಳಿಕ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ” ಎಂದರು. ಬಿಜೆಪಿ ಹೋರಾಟಗಳ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಹೋರಾಟದ ಹೆಸರಿನಲ್ಲಿ ನನ್ನ ಪ್ಯಾಂಟ್, ಅಂಗಿಯನ್ನೇ ಹರಿಯುತ್ತಿದ್ದಾರೆ. ಕರ್ನಾಟಕದ ಸಂಸದರು ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡ್ಯಾಂಗೆ ಬಾಗಿನ ಅರ್ಪಿಸುವ ಬಗ್ಗೆ ಹೇಗೆ ಮಾತನಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.

More news from ಕರ್ನಾಟಕ and nearby areas
  • ಎಫ್ ಐ ಆರ್ ದಾಖಲಾದರೂ ಆರೋಪಿ ವಿರುದ್ಧ ಕ್ರಮವಿಲ್ಲ ಅಯ್ಯೋ ಬದಲಾವಣೆಗೆ ಅಗ್ರಹಿಸಿ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಂಡ್ಯ- ವಯಸ್ಸದ ಅನಾರೋಗ್ಯ ಪೀಡಿತ ಸಂಬಂಧಿಕರಿಗೆ ಮೋಸ ಮಾಡಿ ಮೋಸದಿಂದ ಅವರ ಆಸ್ತಿ ಲಪಟಾಯಿಸಲು ಯತ್ನಿಸಿದ್ದ ವಕೀಲ ಮತ್ತು ಆತನ ಪತ್ನಿ ವಿರುದ್ಧ ಈಗಾಗಲೇ ವೆಸ್ಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು ಎಫ್ ಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಈ ಕಾರಣಕ್ಕಾಗಿ ವೆಸ್ ಪೋಲಿಸ್ ಠಾಣೆಯ ಪಿಎಸ್ಐ ರವರನ್ನು ಕೂಡಲೇ ಈ ಪ್ರಕರಣದಲ್ಲಿ ಮುಂದುವರಿಯದಂತೆ ಬದಲಾಯಿಸಬೇಕೆಂದು ಆಗ್ರಹಿಸಿ ಡಾ. ಬಿಆರ್ ಅಂಬೇಡ್ಕರ್ ಸ್ವಾಭಿಮಾನ ಜಾಗೃತಿ ಅಭಿಯಾನ ಸಮಿತಿ ಮಂಡ್ಯದಲ್ಲಿಂದು ಎಸ್ ಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಅಪರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಡಾ. ಬಿಆರ್ ಅಂಬೇಡ್ಕರ್ ಸ್ವಾಭಿಮಾನ ಜಾಗೃತಿ ಅಭಿಯಾನ ಸಮಿತಿ ರಾಜ್ಯಾಧ್ಯಕ್ಷ ಸಿಎಂ ಕೃಷ್ಣ ಹಾಗೂ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಾರಿಯರ್ಸ್ ಸಮಿತಿಯ ಅಧ್ಯಕ್ಷ ಗಂಗರಾಜು ಕೃಷ್ಣ ಮತಿತರು ಉಪಸ್ಥಿತರಿದ್ದರು
    1
    ಎಫ್ ಐ ಆರ್ ದಾಖಲಾದರೂ ಆರೋಪಿ ವಿರುದ್ಧ ಕ್ರಮವಿಲ್ಲ ಅಯ್ಯೋ ಬದಲಾವಣೆಗೆ ಅಗ್ರಹಿಸಿ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ
ಮಂಡ್ಯ- ವಯಸ್ಸದ ಅನಾರೋಗ್ಯ ಪೀಡಿತ ಸಂಬಂಧಿಕರಿಗೆ ಮೋಸ ಮಾಡಿ ಮೋಸದಿಂದ ಅವರ ಆಸ್ತಿ ಲಪಟಾಯಿಸಲು ಯತ್ನಿಸಿದ್ದ ವಕೀಲ ಮತ್ತು ಆತನ ಪತ್ನಿ ವಿರುದ್ಧ ಈಗಾಗಲೇ ವೆಸ್ಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು ಎಫ್ ಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಈ ಕಾರಣಕ್ಕಾಗಿ ವೆಸ್ ಪೋಲಿಸ್ ಠಾಣೆಯ ಪಿಎಸ್ಐ ರವರನ್ನು ಕೂಡಲೇ ಈ ಪ್ರಕರಣದಲ್ಲಿ ಮುಂದುವರಿಯದಂತೆ ಬದಲಾಯಿಸಬೇಕೆಂದು ಆಗ್ರಹಿಸಿ ಡಾ. ಬಿಆರ್ ಅಂಬೇಡ್ಕರ್ ಸ್ವಾಭಿಮಾನ ಜಾಗೃತಿ ಅಭಿಯಾನ ಸಮಿತಿ ಮಂಡ್ಯದಲ್ಲಿಂದು ಎಸ್ ಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಅಪರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಡಾ. ಬಿಆರ್ ಅಂಬೇಡ್ಕರ್ ಸ್ವಾಭಿಮಾನ ಜಾಗೃತಿ ಅಭಿಯಾನ ಸಮಿತಿ ರಾಜ್ಯಾಧ್ಯಕ್ಷ ಸಿಎಂ ಕೃಷ್ಣ ಹಾಗೂ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಾರಿಯರ್ಸ್ ಸಮಿತಿಯ ಅಧ್ಯಕ್ಷ ಗಂಗರಾಜು ಕೃಷ್ಣ ಮತಿತರು ಉಪಸ್ಥಿತರಿದ್ದರು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
  • ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಳವಳ್ಳಿ : ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ 2026 - 27 ನೇ ಸಾಲಿ‌ನ ನೂತನ ಪದಾಧಿಕಾರಿ ಗಳ ಪದಗ್ರಹಣ ಸಮಾರಂಭ ಶುಕ್ರವಾರ ಜರುಗಿತು. ಮಧ್ಯಾಹ್ನ 1.30 ರ ಸಮಯದಲ್ಲಿ ಪಟ್ಟಣದ ಹೊರ ವಲಯದ ಮೂಗನ ಕೊಪ್ಪಲು ಗ್ರಾಮದ ಬಳಿ ನಡೆದ ಆಕರ್ಷಕ ಸಮಾ ರಂಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಲ. ಟಿ ಎಸ್ ಚಂದ್ರು, ಕಾರ್ಯದರ್ಶಿಯಾಗಿ ಈರೇಶ್, ಖಜಾಂಚಿಯಾಗಿ ಎನ್ ರವಿ, ಉಪಾಧ್ಯಕ್ಷರಾಗಿ ಗಿರೀಶ್, ರಾಜೇಶ್ ಗೌಡ, ಕ್ಲಬ್ ನ‌ ಕೋ ಆರ್ಡಿನೇಟರ್ ಆಗಿ ಅಣ್ಣೇಗೌಡರು, ಮೆಂಬರ್ ಶಿಫ್ ಛೇರ್ಮೆನ್ ಆಗಿ ಆರ್ ಎನ್ ಮಹೇಶ್, ಸರ್ವೀಸ್ ಛೇರ್ಮೆನ್ ಆಗಿ ಶಾಬುಲಿಂಗ ಸ್ವಾಮಿ, ಮಾರುಕಟ್ಟೆ ಹಾಗೂ ಕಮ್ಯೂನಿಕೇಷನ್ ಮುಖ್ಯಸ್ಥ ರಾಗಿ ರಘು, ನಿರ್ಧೇಶಕರಾಗಿ ಮಲ್ಲಿಕಾರ್ಜುಯ್ಯ, ಅಣ್ಣೇ ಗೌಡ್ರು, ಕೆ ಚಂದ್ರು ಎನ್ ನಂದೀಶ್ ಅಧಿಕಾರ ವಹಿಸಿ ಕೊಂಡರು. ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಜಿ ಎ ರಮೇಶ್ ಅವರು ನೂತನ‌ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು. ಈ ವೇಳೆ ಮಾತನಾಡಿದ ಅವರು ಲಯನ್ಸ್ ಕ್ಲಬ್ ನ್ನು ಪ್ರತ್ಯೇಕ ವಿಭಾಗಗ ಳಾಗಿ ಮಾಡಿಕೊಂಡು ಸದಸ್ಯರ ಸಂಖ್ಯೆಗಳನ್ನು ಕಡಿಮೆ ಮಾಡಿ ಕೊಳ್ಳುವ ಬದಲಾಗಿ ಎಲ್ಲಾ ಕ್ಲಬ್ ಗಳು ಒಟ್ಟಾಗಿ ಸೇರಿದರೆ ಸದಸ್ಯ ರ ಬಲ ಹೆಚ್ಚಳದ ಜೊತೆಗೆ ದೊಡ್ಡ ಮಟ್ಟದಲ್ಲಿ ಕ್ಲಬ್ ನ ಸೇವಾ ಕಾರ್ಯಗಳನ್ನು ಸಹಕಾರಿಯಾಗುವುದರಿಂದ ಈ ನಿಟ್ಟಿನ ಎಲ್ಲಾ ಕ್ಲಬ್ ನ ಮುಖಂ ಡರು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಲ್ಟಿಪಲ್ ಕೌನ್ಸಿಲ್ ಛೇರ್ಮೆನ್ ಡಾ. ಎನ್ ಕೃಷ್ಣೇ ಗೌಡ ಅವರು ಕ್ಲಬ್ ನ ಸೇವಾ ಕಾರ್ಯಗಳು ಸದಸ್ಯರು ಹಾಗೂ ದಾನಿಗಳ ಧನಸಹಾಯದಿಂದ ನಡೆಯಬೇಕೆ ಹೊರತು ಯಾವುದೇ ಸರ್ಕಾರಿ ಹಾಗೂ ಸಂಸ್ಥೆಗಳ ನೆರವು ದೊರಕುವು ದಿಲ್ಲ ಹೀಗಾಗಿ ಸದಸ್ಯರು ತಮ್ಮ ದುಡಿಮೆಯ ಅಲ್ಪ ಭಾಗವನ್ನು ಸಂಸ್ಥೆಯ ಸೇವಾ ಚಟುವಟಿಕೆ ಗಳಿಗೆ ಮೀಸಲಿಡಬೇಕು ಎಂದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ ಎಸ್ ಚಂದ್ರು ಅವರು ಮಾತನಾಡಿ ತಮ್ಮ ಅಧಿಕಾರವ ಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವಾ ಕಾರ್ಯಗ ಳನ್ನು ನಡೆಸುವ ಗುರಿ ಹೊಂದಿದ್ದು ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು. ನೂತನ ಸದಸ್ಯರಿಗೆ ಜಿಲ್ಲಾ ಉಪ ರಾಜ್ಯಪಾಲರಾದ ಎಂ ಸಿದ್ದೇಗೌಡ ಪ್ರತಿಜ್ಞಾವಿಧಿ ಬೋಧಿಸಿ ಸ್ವಾಗತಿಸಿದರು. ಇದೇ ವೇಳೆ ಸಮಾಜ ಸೇವಕ ಚಿಕ್ಕ ಮರಿಗೌಡ ಅವರನ್ನು ಸನ್ಮಾನಿಸ ಲಾಯಿತು. ಆರ್ಗೆನಿಕ್ ಫಾರಂ ನ ಜಿಲ್ಲಾ ಛೇರ್ಮೆನ್ ಲ. ಅಣ್ಣೇಗೌಡ, ನಿರ್ಗಮಿತ ಅಧ್ಯಕ್ಷರಾದ ಮಂಚಯ್ಯ, ಜಿಲ್ಲಾ ಕೋ ಆರ್ಡಿನೇಟರ್ ಎಂ ವಿ ನಂದೀಶ್, ಜಯಕುಮಾರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.
    1
    ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಮಳವಳ್ಳಿ : ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ  2026 - 27 ನೇ ಸಾಲಿ‌ನ ನೂತನ ಪದಾಧಿಕಾರಿ ಗಳ  ಪದಗ್ರಹಣ ಸಮಾರಂಭ ಶುಕ್ರವಾರ ಜರುಗಿತು. ಮಧ್ಯಾಹ್ನ 1.30 ರ ಸಮಯದಲ್ಲಿ ಪಟ್ಟಣದ ಹೊರ ವಲಯದ ಮೂಗನ ಕೊಪ್ಪಲು ಗ್ರಾಮದ ಬಳಿ ನಡೆದ ಆಕರ್ಷಕ ಸಮಾ ರಂಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಲ. ಟಿ ಎಸ್ ಚಂದ್ರು, ಕಾರ್ಯದರ್ಶಿಯಾಗಿ ಈರೇಶ್, ಖಜಾಂಚಿಯಾಗಿ ಎನ್ ರವಿ, ಉಪಾಧ್ಯಕ್ಷರಾಗಿ ಗಿರೀಶ್, ರಾಜೇಶ್ ಗೌಡ, ಕ್ಲಬ್ ನ‌ ಕೋ ಆರ್ಡಿನೇಟರ್ ಆಗಿ ಅಣ್ಣೇಗೌಡರು, ಮೆಂಬರ್ ಶಿಫ್ ಛೇರ್ಮೆನ್ ಆಗಿ ಆರ್ ಎನ್ ಮಹೇಶ್, ಸರ್ವೀಸ್ ಛೇರ್ಮೆನ್ ಆಗಿ ಶಾಬುಲಿಂಗ ಸ್ವಾಮಿ, ಮಾರುಕಟ್ಟೆ ಹಾಗೂ ಕಮ್ಯೂನಿಕೇಷನ್ ಮುಖ್ಯಸ್ಥ ರಾಗಿ ರಘು, ನಿರ್ಧೇಶಕರಾಗಿ ಮಲ್ಲಿಕಾರ್ಜುಯ್ಯ, ಅಣ್ಣೇ ಗೌಡ್ರು, ಕೆ ಚಂದ್ರು ಎನ್ ನಂದೀಶ್ ಅಧಿಕಾರ ವಹಿಸಿ ಕೊಂಡರು. ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಜಿ ಎ ರಮೇಶ್ ಅವರು ನೂತನ‌ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು. ಈ ವೇಳೆ ಮಾತನಾಡಿದ ಅವರು ಲಯನ್ಸ್ ಕ್ಲಬ್ ನ್ನು ಪ್ರತ್ಯೇಕ ವಿಭಾಗಗ ಳಾಗಿ  ಮಾಡಿಕೊಂಡು ಸದಸ್ಯರ ಸಂಖ್ಯೆಗಳನ್ನು ಕಡಿಮೆ ಮಾಡಿ ಕೊಳ್ಳುವ ಬದಲಾಗಿ ಎಲ್ಲಾ ಕ್ಲಬ್ ಗಳು ಒಟ್ಟಾಗಿ ಸೇರಿದರೆ ಸದಸ್ಯ ರ ಬಲ ಹೆಚ್ಚಳದ ಜೊತೆಗೆ ದೊಡ್ಡ ಮಟ್ಟದಲ್ಲಿ ಕ್ಲಬ್ ನ ಸೇವಾ ಕಾರ್ಯಗಳನ್ನು ಸಹಕಾರಿಯಾಗುವುದರಿಂದ ಈ ನಿಟ್ಟಿನ ಎಲ್ಲಾ ಕ್ಲಬ್ ನ ಮುಖಂ ಡರು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಲ್ಟಿಪಲ್ ಕೌನ್ಸಿಲ್ ಛೇರ್ಮೆನ್ ಡಾ. ಎನ್ ಕೃಷ್ಣೇ ಗೌಡ ಅವರು ಕ್ಲಬ್ ನ ಸೇವಾ  ಕಾರ್ಯಗಳು ಸದಸ್ಯರು ಹಾಗೂ ದಾನಿಗಳ ಧನಸಹಾಯದಿಂದ ನಡೆಯಬೇಕೆ ಹೊರತು ಯಾವುದೇ ಸರ್ಕಾರಿ ಹಾಗೂ ಸಂಸ್ಥೆಗಳ ನೆರವು ದೊರಕುವು ದಿಲ್ಲ ಹೀಗಾಗಿ ಸದಸ್ಯರು ತಮ್ಮ ದುಡಿಮೆಯ ಅಲ್ಪ ಭಾಗವನ್ನು ಸಂಸ್ಥೆಯ ಸೇವಾ ಚಟುವಟಿಕೆ ಗಳಿಗೆ ಮೀಸಲಿಡಬೇಕು ಎಂದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ ಎಸ್ ಚಂದ್ರು ಅವರು ಮಾತನಾಡಿ ತಮ್ಮ ಅಧಿಕಾರವ ಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವಾ ಕಾರ್ಯಗ ಳನ್ನು ನಡೆಸುವ ಗುರಿ ಹೊಂದಿದ್ದು ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು.  ನೂತನ ಸದಸ್ಯರಿಗೆ ಜಿಲ್ಲಾ ಉಪ ರಾಜ್ಯಪಾಲರಾದ ಎಂ ಸಿದ್ದೇಗೌಡ ಪ್ರತಿಜ್ಞಾವಿಧಿ ಬೋಧಿಸಿ ಸ್ವಾಗತಿಸಿದರು. ಇದೇ ವೇಳೆ ಸಮಾಜ ಸೇವಕ ಚಿಕ್ಕ ಮರಿಗೌಡ ಅವರನ್ನು ಸನ್ಮಾನಿಸ ಲಾಯಿತು.
ಆರ್ಗೆನಿಕ್ ಫಾರಂ ನ ಜಿಲ್ಲಾ ಛೇರ್ಮೆನ್ ಲ. ಅಣ್ಣೇಗೌಡ, ನಿರ್ಗಮಿತ ಅಧ್ಯಕ್ಷರಾದ ಮಂಚಯ್ಯ, ಜಿಲ್ಲಾ ಕೋ ಆರ್ಡಿನೇಟರ್ ಎಂ ವಿ ನಂದೀಶ್, ಜಯಕುಮಾರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    13 hrs ago
  • ಶಿವಪುರ ಪ್ರೌಢಶಾಲೆ ಕಟ್ಟಡಕ್ಕೆ ಉಚಿತವಾಗಿ ಬಣ್ಣಬಳಿದ ಸಮಾಜಸೇವಕರು ಮದ್ದೂರು 02:- ಹಲವು ವರ್ಷಗಳಿಂದ ಬಣ್ಣ ಕಾಣದೆ ಮಂಕಾಗಿದ್ದ ಶಿವಪುರ ಪ್ರೌಢಶಾಲೆ ವಿಭಾಗ (ಸರ್ಕಾರಿ ಪದವಿ ಪೂರ್ವ ಕಾಲೇಜು) ಕಟ್ಟಡಕ್ಕೆ ಸಮಾಜಸೇವಕರು ಉಚಿತವಾಗಿ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದು, ಗ್ರಾಮಸ್ಥರು ಹಾಗೂ ಶಿಕ್ಷಣಾಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಕಟ್ಟಡಕ್ಕೆ ಬಣ್ಣ ಬಳಿಯದ ಕಾರಣ ಶಾಲೆಯ ಸೌಂದರ್ಯ ಕುಂದಿತ್ತು. ಈ ಹಿನ್ನೆಲೆಯಲ್ಲಿ ಸಮಾಜಸೇವಕರಾದ ಸತೀಶ್ ಬಿಲ್ಡರ್, ಎಚ್.ಎಲ್. ಸತೀಶ್, ರೋಟರಿ ಅಧ್ಯಕ್ಷ ಎ. ಲೋಕೇಶ್, ಕಾರ್ಯದರ್ಶಿ ಪ್ರವೀಣ್ ಕೆ., ಮಾಜಿ ಅಧ್ಯಕ್ಷ ಚನ್ನಂಕೆಗೌಡ, ದೀಪಕ್ ಸೇರಿದಂತೆ ಅವರ ಸಹಕಾರದೊಂದಿಗೆ ಕೆಚ್ಚೆದೆಯ ವೀರ ಕನ್ನಡಿಗ ಯರಗನಹಳ್ಳಿ ಸ್ವಾಮಿ ಹಾಗೂ ಅವರ ತಂಡ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶಾಲೆಗೆ ಉಚಿತವಾಗಿ ಬಣ್ಣ ಬಳಿದು ಮಾದರಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಸರ್ಕಾರಿ ಶಾಲೆಗಳು ಸಮಾಜದ ಆಸ್ತಿಯಾಗಿದ್ದು, ಅವುಗಳ ಅಭಿವೃದ್ಧಿಗೆ ಸಾರ್ವಜನಿಕರು, ದಾನಿಗಳು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟ ಮತ್ತಷ್ಟು ವೃದ್ಧಿಯಾಗಲಿದೆ ಎಂದು ಅವರು ತಿಳಿಸಿದರು. ಶಾಲೆಯ ಅಭಿವೃದ್ಧಿಗೆ ಸ್ಥಳೀಯ ಸಮಾಜಸೇವಕರು ತೋರಿದ ಕಾಳಜಿ ಹಾಗೂ ಸೇವಾ ಮನೋಭಾವ ಇತರರಿಗೂ ಮಾದರಿಯಾಗಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಜನರಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯ ಮಹತ್ವದ್ದಾಗಿದೆ ಎಂದು ಗ್ರಾಮಸ್ಥರು ಪ್ರಶಂಸಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆನಂದ್, ಮುರಳಿ, ರಾಜೇಶ್, ಕನ್ನಡತಿ ಶೀಲಾ, ಕೆಚ್ಚೆದೆಯ ವೀರ ಕನ್ನಡಿಗ ತಂಡದ ವತಿಯಿಂದ ಆಶಾ, ತನುಜಾ, ಇಮ್ರಾನ್, ಮುಸ್ಕಾನ್ , ಸೇರಿದಂತೆ ಹಲವು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
    1
    ಶಿವಪುರ ಪ್ರೌಢಶಾಲೆ ಕಟ್ಟಡಕ್ಕೆ  ಉಚಿತವಾಗಿ ಬಣ್ಣಬಳಿದ ಸಮಾಜಸೇವಕರು
ಮದ್ದೂರು 02:- ಹಲವು ವರ್ಷಗಳಿಂದ ಬಣ್ಣ ಕಾಣದೆ ಮಂಕಾಗಿದ್ದ ಶಿವಪುರ ಪ್ರೌಢಶಾಲೆ ವಿಭಾಗ (ಸರ್ಕಾರಿ ಪದವಿ ಪೂರ್ವ ಕಾಲೇಜು)  ಕಟ್ಟಡಕ್ಕೆ ಸಮಾಜಸೇವಕರು ಉಚಿತವಾಗಿ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದು, ಗ್ರಾಮಸ್ಥರು ಹಾಗೂ ಶಿಕ್ಷಣಾಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಕಟ್ಟಡಕ್ಕೆ ಬಣ್ಣ ಬಳಿಯದ ಕಾರಣ ಶಾಲೆಯ ಸೌಂದರ್ಯ ಕುಂದಿತ್ತು. ಈ ಹಿನ್ನೆಲೆಯಲ್ಲಿ ಸಮಾಜಸೇವಕರಾದ ಸತೀಶ್ ಬಿಲ್ಡರ್, ಎಚ್.ಎಲ್. ಸತೀಶ್, ರೋಟರಿ ಅಧ್ಯಕ್ಷ ಎ. ಲೋಕೇಶ್, ಕಾರ್ಯದರ್ಶಿ ಪ್ರವೀಣ್ ಕೆ., ಮಾಜಿ ಅಧ್ಯಕ್ಷ ಚನ್ನಂಕೆಗೌಡ, ದೀಪಕ್ ಸೇರಿದಂತೆ ಅವರ ಸಹಕಾರದೊಂದಿಗೆ ಕೆಚ್ಚೆದೆಯ ವೀರ ಕನ್ನಡಿಗ ಯರಗನಹಳ್ಳಿ ಸ್ವಾಮಿ ಹಾಗೂ ಅವರ ತಂಡ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶಾಲೆಗೆ ಉಚಿತವಾಗಿ ಬಣ್ಣ ಬಳಿದು ಮಾದರಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.
ಸರ್ಕಾರಿ ಶಾಲೆಗಳು ಸಮಾಜದ ಆಸ್ತಿಯಾಗಿದ್ದು, ಅವುಗಳ ಅಭಿವೃದ್ಧಿಗೆ ಸಾರ್ವಜನಿಕರು, ದಾನಿಗಳು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟ ಮತ್ತಷ್ಟು ವೃದ್ಧಿಯಾಗಲಿದೆ ಎಂದು ಅವರು ತಿಳಿಸಿದರು.
ಶಾಲೆಯ ಅಭಿವೃದ್ಧಿಗೆ ಸ್ಥಳೀಯ ಸಮಾಜಸೇವಕರು ತೋರಿದ ಕಾಳಜಿ ಹಾಗೂ ಸೇವಾ ಮನೋಭಾವ ಇತರರಿಗೂ ಮಾದರಿಯಾಗಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಜನರಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯ ಮಹತ್ವದ್ದಾಗಿದೆ ಎಂದು ಗ್ರಾಮಸ್ಥರು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆನಂದ್, ಮುರಳಿ, ರಾಜೇಶ್, ಕನ್ನಡತಿ ಶೀಲಾ, ಕೆಚ್ಚೆದೆಯ ವೀರ ಕನ್ನಡಿಗ ತಂಡದ ವತಿಯಿಂದ ಆಶಾ, ತನುಜಾ, ಇಮ್ರಾನ್, ಮುಸ್ಕಾನ್ , ಸೇರಿದಂತೆ ಹಲವು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
    user_Vanitha
    Vanitha
    ಮದ್ದೂರು, ಮಂಡ್ಯ, ಕರ್ನಾಟಕ•
    2 hrs ago
  • ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
    4
    ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
  • ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ನಗರದಲ್ಲಿ ಬಿಗಿ ಭದ್ರತೆ, ಸಂಚಾರಕ್ಕೆ ನಿರ್ಬಂಧ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಹಾಗೂ ಮೋದಿ ಸಂಚರಿಸುವ ಮಾರ್ಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಶ್ವಾನದಳದ ಸಿಬ್ಬಂದಿಯಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಕಾರ್ಯಕ್ರಮ ನಡೆಯುವ ಪ್ರದೇಶದ ಅಕ್ಕಪಕ್ಕದ ಅಂಗಡಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಿಸಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕೆಲವೆಡೆ ಸಾರ್ವಜನಿಕರ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಂಚಾರ ದಟ್ಟಣೆ ತಪ್ಪಿಸಲು ವಾಹನ ಸವಾರರಿಗಾಗಿ ಬದಲಿ ಮಾರ್ಗಗಳನ್ನು ಪೊಲೀಸರು ಸಿದ್ಧಪಡಿಸಿದ್ದು, ಸಾರ್ವಜನಿಕರು ನಿಗದಿತ ಮಾರ್ಗಗಳಲ್ಲಿ ಸಂಚರಿಸಿ ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
    1
    ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ನಗರದಲ್ಲಿ ಬಿಗಿ ಭದ್ರತೆ, ಸಂಚಾರಕ್ಕೆ ನಿರ್ಬಂಧ
ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಹಾಗೂ ಮೋದಿ ಸಂಚರಿಸುವ ಮಾರ್ಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಶ್ವಾನದಳದ ಸಿಬ್ಬಂದಿಯಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಕಾರ್ಯಕ್ರಮ ನಡೆಯುವ ಪ್ರದೇಶದ ಅಕ್ಕಪಕ್ಕದ ಅಂಗಡಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಿಸಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕೆಲವೆಡೆ ಸಾರ್ವಜನಿಕರ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸಂಚಾರ ದಟ್ಟಣೆ ತಪ್ಪಿಸಲು ವಾಹನ ಸವಾರರಿಗಾಗಿ ಬದಲಿ ಮಾರ್ಗಗಳನ್ನು ಪೊಲೀಸರು ಸಿದ್ಧಪಡಿಸಿದ್ದು, ಸಾರ್ವಜನಿಕರು ನಿಗದಿತ ಮಾರ್ಗಗಳಲ್ಲಿ ಸಂಚರಿಸಿ ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು
    1
    ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ
ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    22 hrs ago
  • ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.
    4
    ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್
    ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ
ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್
ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ
ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ.  ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು.
ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು.             
ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    3 hrs ago
  • ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು.  ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ, ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ ಗೌರವಾಧ್ಯಕ್ಷ ಇದ್ರಿಸ್ಪಾಷ, ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು ಉಪಾಧ್ಯಕ್ಷ ಯೋಗೇಶ್ , ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್ ಉಮೇಶ್ ಎಚ್ .ಎಮ್. ಹೊಸಪುರ ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್, ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್, ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.
    4
    ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು.  ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. 
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ  ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ,   ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ  ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ  ಗೌರವಾಧ್ಯಕ್ಷ  ಇದ್ರಿಸ್ಪಾಷ,  ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ  ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು
ಉಪಾಧ್ಯಕ್ಷ ಯೋಗೇಶ್ ,  ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್  ಉಮೇಶ್ ಎಚ್ .ಎಮ್. ಹೊಸಪುರ  ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್,  ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್,  ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.