ಬಂಗಾರಪೇಟೆಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಸಂವಿಧಾನದ ಮೌಲ್ಯ ಎತ್ತಿಹಿಡಿಯಲು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕರೆ ಬಂಗಾರಪೇಟೆ: ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಿ, ಸಂವಿಧಾನ ನೀಡಿರುವ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಹಕ್ಕುಗಳನ್ನು ಪ್ರತಿಯೊಬ್ಬ ನಾಗರಿಕರೂ ಗೌರವಿಸಬೇಕು ಎಂದು ಬಂಗಾರಪೇಟೆ ಕ್ಷೇತ್ರದ ಶಾಸಕ ಶ್ರೀ ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ ಹೇಳಿದರು. ಪಟ್ಟಣದ ಕೋಲಾರ ಮುಖ್ಯರಸ್ತೆಯಲ್ಲಿರುವ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಬಳಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ - 2026’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಶುಭ ಕೋರಿ ಮಾತನಾಡಿದ ಶಾಸಕರು, "ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿಕೊಟ್ಟ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಘನತೆಯಿಂದ ಬದುಕುವ ಅವಕಾಶ ಕಲ್ಪಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಬೇಕಾದರೆ ಪ್ರತಿಯೊಬ್ಬ ನಾಗರಿಕನೂ ತನ್ನ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ಪ್ರಾಮಾಣಿಕವಾಗಿ ನಿರ್ವಹಿಸಬೇಕು," ಎಂದು ತಿಳಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಇನ್ನಷ್ಟು ಎತ್ತಿಹಿಡಿಯಲು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ, ಶಿಕ್ಷಕರು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಬಂಗಾರಪೇಟೆಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಸಂವಿಧಾನದ ಮೌಲ್ಯ ಎತ್ತಿಹಿಡಿಯಲು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕರೆ ಬಂಗಾರಪೇಟೆ: ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಿ, ಸಂವಿಧಾನ ನೀಡಿರುವ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಹಕ್ಕುಗಳನ್ನು ಪ್ರತಿಯೊಬ್ಬ ನಾಗರಿಕರೂ ಗೌರವಿಸಬೇಕು ಎಂದು ಬಂಗಾರಪೇಟೆ ಕ್ಷೇತ್ರದ ಶಾಸಕ ಶ್ರೀ ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ ಹೇಳಿದರು. ಪಟ್ಟಣದ ಕೋಲಾರ
ಮುಖ್ಯರಸ್ತೆಯಲ್ಲಿರುವ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಬಳಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
- 2026’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಶುಭ ಕೋರಿ ಮಾತನಾಡಿದ ಶಾಸಕರು, "ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿಕೊಟ್ಟ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಘನತೆಯಿಂದ ಬದುಕುವ ಅವಕಾಶ ಕಲ್ಪಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಬೇಕಾದರೆ ಪ್ರತಿಯೊಬ್ಬ
ನಾಗರಿಕನೂ ತನ್ನ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ಪ್ರಾಮಾಣಿಕವಾಗಿ ನಿರ್ವಹಿಸಬೇಕು," ಎಂದು ತಿಳಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಇನ್ನಷ್ಟು ಎತ್ತಿಹಿಡಿಯಲು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ, ಶಿಕ್ಷಕರು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
- ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಂಗಾರಪೇಟೆ: ಪಟ್ಟಣದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಭಾರತೀಯ ಸಂವಿಧಾನದ ಪೀಠಿಕೆಯನ್ನು ಬೋಧಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರು, "ಪ್ರಜಾಪ್ರಭುತ್ವವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದೆ. ವಿದ್ಯಾರ್ಥಿ ದಿಸೆಯಿಂದಲೇ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು," ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಪ್ರಜಾಪ್ರಭುತ್ವದ ಮಹತ್ವ ಕುರಿತು ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.1
- ಸೆ.19 ರಂದು ಕೆ.ಜಿ.ಎಫ್‌ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಸಮಾಜಸೇವಕ ವಿ. ಮೋಹನ್‌ಕೃಷ್ಣ ಕೆ.ಜಿ.ಎಫ್: ನಗರದ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್‌ನಲ್ಲಿ ಸೆಪ್ಟೆಂಬರ್ 19 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಆರ್.ಕೆ. ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಮಾಜಸೇವಕ ವಿ. ಮೋಹನ್‌ಕೃಷ್ಣ ತಿಳಿಸಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. 10ನೇ ತರಗತಿ, ಪಿಯುಸಿ, ಪದವಿ (ಡಿಗ್ರಿ) ಹಾಗೂ ಡಿಪ್ಲೊಮಾ ಸೇರಿದಂತೆ ವಿವಿಧ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರುವ ಯುವಕ-ಯುವತಿಯರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನತೆ ನಿರುದ್ಯೋಗ ಮತ್ತು ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಿ, ಅವರ ಭವಿಷ್ಯವನ್ನು ಸನ್ಮಾರ್ಗದಲ್ಲಿ ನಡೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ತರಬೇತಿ ಸೇರಿದಂತೆ ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.1
- * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ ದೊಡ್ಡವಲ್ಲಬಿ ಲಕ್ಷ್ಮಣಗೌಡ* ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ, ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ ಗೌರಿ ಗಣೇಶನ ಹಬ್ಬವನ್ನು ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು. ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು. ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.4
- ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.2
- ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡರಿಂದ ಖಡಕ್ ಎಚ್ಚರಿಕೆ ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡರಿಂದ ಖಡಕ್ ಎಚ್ಚರಿಕೆ1
- ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ1
- ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ:ಒರ್ವ ಸಾವು ,ಮೂವರಿಗೆ ಗಾಯ ಬೆಂಗಳೂರು:ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ ಹೊಡೆದಿದೆ.ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ನಡೆದಿದೆ.ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ.ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯವಾಗಿದೆ.ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .1
- ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ1