ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗ: ತಾಲೂಕಿನ ನಗರಗುಂಡ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಇದೀಗ ದೇವದುರ್ಗ ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಗುಡ್ಡ ಪ್ರದೇಶದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ತಾಲೂಕಿನ ವಿವಿಧೆಡೆ ಚಿರತೆಗಳ ಓಡಾಟದ ಕುರಿತು ವರದಿಯಾಗುತ್ತಿದ್ದು, ಇದೀಗ ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಚಿರತೆ ಕಾಣಿಸಿಕೊಂಡಿರುವ ಕುರಿತು ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ವಲಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಚಲನವಲನ ಹಾಗೂ ಜಾಡು ಪತ್ತೆಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ನಿಗಾ ವಹಿಸುತ್ತಿದ್ದು, ಗುಡ್ಡ ಪ್ರದೇಶದಲ್ಲಿ ಚಿರತೆಯ ಇರುವಿಕೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ತಾಲೂಕಿನ ವಿವಿಧೆಡೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು ವಲಸೆ ಬಂದಿರುವ ಚಿರತೆಗಳಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಗುಡ್ಡ ಹಾಗೂ ಅರಣ್ಯ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಚಿರತೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗ: ತಾಲೂಕಿನ ನಗರಗುಂಡ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಇದೀಗ ದೇವದುರ್ಗ ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಗುಡ್ಡ ಪ್ರದೇಶದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ತಾಲೂಕಿನ ವಿವಿಧೆಡೆ ಚಿರತೆಗಳ ಓಡಾಟದ ಕುರಿತು ವರದಿಯಾಗುತ್ತಿದ್ದು, ಇದೀಗ ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಚಿರತೆ ಕಾಣಿಸಿಕೊಂಡಿರುವ ಕುರಿತು ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ವಲಯ ಅಧಿಕಾರಿಗಳು ಹಾಗೂ
ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಚಲನವಲನ ಹಾಗೂ ಜಾಡು ಪತ್ತೆಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ನಿಗಾ ವಹಿಸುತ್ತಿದ್ದು, ಗುಡ್ಡ ಪ್ರದೇಶದಲ್ಲಿ ಚಿರತೆಯ ಇರುವಿಕೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ತಾಲೂಕಿನ ವಿವಿಧೆಡೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು ವಲಸೆ ಬಂದಿರುವ ಚಿರತೆಗಳಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಗುಡ್ಡ ಹಾಗೂ ಅರಣ್ಯ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಚಿರತೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
- ರಾಯಚೂರಿನಲ್ಲಿ ಆ.4 ರಂದು ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ: ಭಾವಚಿತ್ರ ಮೆರವಣಿಗೆ ರಾಯಚೂರು: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಾಯಚೂರು ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಆಗಸ್ಟ್ 4 ರಂದು ಆಚರಿಸಲಾಗುತ್ತದೆ ಎಂದು ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಹರವಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಬಸವ ವೃತ್ತದಿಂದ ಜಂಬಲದಿನ್ನಿ ರಂಗಮಂದಿರದವರೆಗೆ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಜಂಬಲದಿನ್ನಿ ರಂಗಮಂದಿರದಲ್ಲಿ ಜಯಂತಿ ಅಂಗವಾಗಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಮಠಾಧೀಶರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಮಾಜದ ಬಂಧುಗಳು, ಹಿತೈಷಿಗಳು, ಸಾರ್ವಜನಿಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು. ಸುದ್ದಿಗೊಷ್ಟಿಯಲ್ಲಿ ಗದೆಪ್ಪ ಎಂ, ಬಸವರಾಜ್, ಬಸವಂತ ರಾಯ, ಅಮರಪ್ಪ, ದೇವೇಂದ್ರಪ್ಪ ಸೇರಿದಂತೆ ಇತರರು ಇದ್ದರು.1
- ಗುರುಮಠಕಲ್ ಪಟ್ಟಣದ ಎಸ್ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ4
- ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು2
- ಆಲಮಟ್ಟಿ ಜಲಶಯಕ್ಕೆ ಮುಂದಿನ (48) ಗಂಟೆಗಳಲ್ಲಿ ಸುಮಾರು (2) ಲಕ್ಷ ಕ್ಯೂಸಕವರೆಗೆ ನೀರು ಹರಿದು ಒಳ ಹರಿವು ಸಾದ್ಯತೆ1
- ಮುದ್ದೇಬಿಹಾಳ ಪಟ್ಟಣದಲ್ಲಿ ಎಬಿಪಿ ಕಾಲೇಜ್ ವಿದ್ಯಾರ್ಥಿಗಳಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು ಮುದ್ದೇಬಿಹಾಳ ತಾಲೂಕಿನಲ್ಲಿ , ಸರ್ಕಾರಿ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳು ಕಮ್ಮಿ ಇದ್ದು ವಿದ್ಯಾರ್ಥಿಗಳಿಗೆ ಸರಿಯಾದ ವಿದ್ಯಾಭ್ಯಾಸ ಇಲ್ಲದ ಕಾರಣ ಶೀಘ್ರದಲ್ಲಿ ಸರ್ಕಾರದಿಂದ ಉಪನ್ಯಾಸಕರನ್ನು ಆಯ್ಕೆ ಮಾಡಬೇಕೆಂದು ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿದ್ದ ಕಾರಣ ವಿದ್ಯಾರ್ಥಿಗಳಿಗೆ ತೊಂದರೆ ಇದ್ದು ಸಮೀಪದಲ್ಲಿರುವ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ವರ್ಗಾವಣೆ ಮಾಡಬೇಕೆಂದು ವಿದ್ಯಾರ್ಥಿಗಳಿಂದ ತಾಲೂಕ ದಂಡಾಧಿಕಾರಿ ಕೀರ್ತಿ ಚಾಲಕ ಅವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು ವರದಿ ಈರಣ್ಣ ತಾರನಾಳ1
- ಮಹಾನ್ ಗುರು ಎಚ್ ಟಿ ಕುಲಕರ್ಣಿ ಅವರಿಗೆ ಅನಂತ ಕೋಟಿ ನಮನಗಳು ಎಚ್ ಟಿ ಕುಲಕರ್ಣಿ ಗುರುಗಳ ಅಂತಿಮ ಸಂಸ್ಕಾರ1
- ವ್ಯಸನ ಮುಕ್ತ ಸಮಾಜ ಕಟ್ಟಲು ಪಣ ತೊಡಬೇಕು : ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಮದ್ಯ ಹಾಗೂ ಮಾದಕ ವಸ್ತುಗಳ ಸೇವೆಯಿಂದ ಅನೇಕ ಕುಟುಂಬಗಳು ವಿವಿಧ ರೀತಿಯ ಸಮಸ್ಯೆಗಳು ಎದುರಿಸುತ್ತಿದ್ದು, ಎಲ್ಲರೂ ವ್ಯಸನ ಮುಕ್ತ ಸಮಾಜ ಕಟ್ಟಲು ಪಣ ತೊಡಬೇಕು ಎಂದು ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಅವರು ಹೇಳಿದರು. ಆಗಸ್ಟ್ 01ರ ಶನಿವಾರ ದಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರು ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತಾಶ್ರದಲ್ಲಿ ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಲಕ್ಷಾಂತರ ಜನರು ವಿವಿಧ ರೀತಿಯ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಕಾಲೇಜಿನ ಹಂತದಲ್ಲಿಯೇ ಮಾದಕ ವ್ಯಸನಕ್ಕೆ ಬಲಿಯಾದ ಯುವಕರು ಅದರಿಂದ ಹೊರಬರಲಾಗದೆ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ದೇಶದ ಭವಿಷ್ಯ ರೂಪಿಸಬೇಕಾದ ಯುವ ಸಮೂಹ ಮೋಜಿಗಾಗಿ ಮಾದಕ ವ್ಯಸನಿಗಳಾಗುತ್ತಿರುವುದು ವಿಷಾದನೀಯ ಎಂದರು. ಪದವಿ ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅರ್ಥಪೂರ್ಣವಾಗಿದೆ. ಇಗಿನ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಉತ್ತಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ತಂದೆ, ತಾಯಿಯರ ಆಸೆಗಳನ್ನು ಈಡೇರಿಸಲು ವಿಫಲವಾಗುತ್ತಾರೆ. ಮಹಾಂತ್ ಶಿವಯೋಗಿಗಳು ಮಹಾಂತ್ ಜೋಳಿಗೆಯನ್ನು ಸ್ಥಾಪಿಸಿ. ಸಮಾಜದಲ್ಲಿ ಆನೇಕ ಕುಟುಂಬಗಳನ್ನು ದುಶ್ಚಟಗಳಿಂದ ಹೊರತಂದರು. ಅವರು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ ಎಂದರು. ಡ್ರಗ್ಸ್ ಮುಕ್ತ ರಾಜ್ಯಕ್ಕಾಗಿ ಆಪರೇಷನ್ ರೈಸಿ ಈಗಾಗಲೇ ಸರ್ಕಾರದಿಂದ ಪ್ರಾರಂಭವಾಗಿದೆ. ಸಾರ್ವಜನಿಕರಿಗೆ ಡ್ರಗ್ಸ್ ಕುರಿತು ಮಾಹಿತಿ ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವ ಮೂಲಕ ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಎಲ್ಲರೂ ಸಹಕರಿಸಬೇಕು. ಅಲ್ಲದೆ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಅತ್ಯಂತ ಶ್ರದ್ಧೆಯಿಂದ ಚೆನ್ನಾಗಿ ಓದಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಂತರ ಉಪನ್ಯಾಸಕರಾಗಿ ಮನೋ ವೈದ್ಯರಾದ ಡಾ.ವಿ.ಎ.ಮಾಲಿ ಪಾಟೀಲ್ ಅವರು ಮಾತನಾಡಿ, ಡಾ.ಮಹಾಂತ ಶಿವಯೋಗಿಗಳ ಜನ್ಮದಿನವು ಬಹಳಷ್ಟು ಮಹತ್ವ ಪೂರ್ಣವಾಗಿದ್ದು, ಜೀವನದಲ್ಲಿ ಅವರು ಮಹಾಂತ ಜೋಳಿಗೆ ದುಶ್ಚಟಗಳ ಭಿಕ್ಷೆ ಎನ್ನುವಂತೆ ಪ್ರತಿಯೊಬ್ಬರೂ ಇವರ ರೀತಿಯ ಜೀವನವನ್ನು ನಡೆಸಿದರೆ ಯುವಜನತೆಯು ವ್ಯಸನಗಳಿಂದ ಮುಕ್ತರಾಗಿ ಒಳ್ಳೆಯ ಜೀವನವನ್ನು ನಡೆಸಲು ಅನುಕೂಲವಾಗುತ್ತದೆ ಎಂದರು.1
- ಸೂಮವಾರ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಶಿವಲಿಂಗೇಗೌಡ ಹೇಳಿಕೆ1
- ಕುಷ್ಟಗಿ ತಾಯಿ-ಮಕ್ಕಳ ಆಸ್ಪತ್ರೆ: ಆರಂಭವಾಗಿ ಕೇವಲ 15 ದಿನಗಳಲ್ಲೇ ಮೂಲಸೌಕರ್ಯಗಳ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ ಕುಷ್ಟಗಿ: ಸುಮಾರು ರೂ.27 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯೋಜನೆಯಡಿ ನಿರ್ಮಿಸಲಾದ 100 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ಕಾರ್ಯಾರಂಭವಾಗಿ ಕೇವಲ 15 ದಿನಗಳಲ್ಲೇ ಹಲವು ಮೂಲಸೌಕರ್ಯಗಳು ಹಾಳಾಗಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಅನುಮಾನಗಳಿಗೆ ಕಾರಣವಾಗಿದೆ. ಹೆರಿಗೆ ಹಾಗೂ ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭವಾಗಿದ್ದರೂ, ಸುರಕ್ಷಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆಗೆ ಅಗತ್ಯವಾದ ಮೂಲಸೌಲಭ್ಯಗಳು ಇನ್ನೂ ಪೂರ್ಣಗೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಬಿಸಿನೀರು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಗರ್ಭಿಣಿಯರು, ಬಾಣಂತಿಯರು ಹಾಗೂ ನವಜಾತ ಶಿಶುಗಳಿಗೆ ಅಗತ್ಯವಾದ ಶುದ್ಧ ಕುಡಿಯುವ ನೀರು ಮತ್ತು ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಆಸ್ಪತ್ರೆಯ ಮೇಲ್ಭಾಗದಲ್ಲಿ ಅಳವಡಿಸಿರುವ ಸೋಲಾರ್ ವಾಟರ್ ಹೀಟರ್‌ನ ಗಾಜಿನ ಟ್ಯೂಬ್‌ಗಳು ಒಡೆದು ನುಚ್ಚುನೂರಾಗಿವೆ. ಕುಡಿಯುವ ನೀರಿನ ಶುದ್ಧೀಕರಣ ಘಟಕದ ಎರಡು ಬಾಗಿಲುಗಳು ಕಿತ್ತುಹೋಗಿದ್ದು, ಒಳಗಿರುವ ಯಂತ್ರೋಪಕರಣಗಳು ಯಾವುದೇ ಭದ್ರತೆಯಿಲ್ಲದೆ ಬಿದ್ದಿರುವುದರಿಂದ ಅವು ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಲೈಟ್, ಫ್ಯಾನ್‌ಗಳ ದೋಷ; ಸುರಕ್ಷತೆಗೂ ಪ್ರಶ್ನೆ ಆಸ್ಪತ್ರೆಯ ಹಲವೆಡೆ ಅಳವಡಿಸಿರುವ ಎಲ್‌ಇಡಿ ಟ್ಯೂಬ್‌ಲೈಟ್‌ಗಳು ಜೊತ ಬಿದ್ದುದ್ದು ಕಂಡು ಬಂದಿದೆ,ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಫ್ಯಾನ್‌ಗಳು ಕೂಡ ಚಾಲನೆಯಲ್ಲಿಲ್ಲ. ಮೇಲ್ಚಾವಣಿಯ ಮೇಲಿನ ನೀರಿನ ಪೈಪ್‌ಲೈನ್ ಹಾಗೂ ವಿದ್ಯುತ್ ಸರಬರಾಜು ಪೈಪ್‌ಲೈನ್‌ಗಳು ಸುರಕ್ಷತಾ ಕ್ರಮಗಳಿಲ್ಲದೆ ಹೊರಗಡೆ ತೆರೆದ ಸ್ಥಿತಿಯಲ್ಲಿರುವುದರಿಂದ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ. ವೈದ್ಯರು, ಸಿಬ್ಬಂದಿ ಕೊರತೆ 100 ಹಾಸಿಗೆಗಳ ಆಸ್ಪತ್ರೆಯಾಗಿದ್ದರೂ ಅಗತ್ಯ ಸಂಖ್ಯೆಯ ತಜ್ಞ ವೈದ್ಯರು, ನರ್ಸ್‌ಗಳು ಹಾಗೂ ಇತರ ವೈದ್ಯಕೀಯ ಸಿಬ್ಬಂದಿ ಲಭ್ಯವಿಲ್ಲ. ಸಿಬ್ಬಂದಿ ಕೊರತೆಯಿಂದ ಆರೋಗ್ಯ ಸೇವೆ ಹಾಗೂ ಆಸ್ಪತ್ರೆಯ ಸ್ವಚ್ಛತೆ ನಿರ್ವಹಣೆಯ ಮೇಲೂ ಪರಿಣಾಮ ಬೀರಿದೆ. ಆಸ್ಪತ್ರೆಯ ಕೆಲ ಭಾಗಗಳಲ್ಲಿ ಈಗಾಗಲೇ ಜೇಡರ ಬಲೆಗಳು ಕಾಣಿಸಿಕೊಂಡಿವೆ. ಕಟ್ಟಡದ ಗಾತ್ರಕ್ಕೆ ಅನುಗುಣವಾಗಿ ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಬಸ್ ಸೌಲಭ್ಯ ಇಲ್ಲ; ಆಟೋಗಳ ದರ ದಬ್ಬಾಳಿಕೆ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಿಂದ ಸುಮಾರು 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ನೇರ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲ. ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ರೋಗಿಗಳು ಆಟೋಗಳನ್ನು ಅವಲಂಬಿಸಬೇಕಾಗಿದ್ದು, ಕೆಲ ಆಟೋ ಚಾಲಕರು ಅಧಿಕ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಕೇಂದ್ರ ಬಸ್ ನಿಲ್ದಾಣದಿಂದ ಆಸ್ಪತ್ರೆಗೆ ನೇರ ಬಸ್ ಸೇವೆ ಆರಂಭಿಸುವಂತೆ ಸಾರ್ವಜನಿಕರು ಸರ್ಕಾರವನ್ನು ಆಗ್ರಹಿಸಿದ್ದಾರೆ. ದಿಕ್ಕು ಸೂಚನಾ ಫಲಕಗಳ ಕೊರತೆ ಆಸ್ಪತ್ರೆಯೊಳಗೆ ಹೆರಿಗೆ ವಾರ್ಡ್, ತುರ್ತು ಚಿಕಿತ್ಸಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ದಾರಿ ತೋರಿಸುವ ಸೂಚನಾ ಫಲಕಗಳ ಕೊರತೆಯಿಂದ ಗ್ರಾಮೀಣ ಭಾಗಗಳಿಂದ ಬರುವ ರೋಗಿಗಳು ಹಾಗೂ ಸಾರ್ವಜನಿಕರು ಆಸ್ಪತ್ರೆಯೊಳಗೆ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ. ಸಂಪರ್ಕ ರಸ್ತೆ ದುಸ್ಥಿತಿ ತಹಶೀಲ್ದಾರ್ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಮೂಲಕ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಗುಂಡಿಗಳು ನಿರ್ಮಾಣಗೊಂಡಿವೆ. ಕೆಲವೆಡೆ ವಿದ್ಯುತ್ ಕಂಬಗಳು ರಸ್ತೆಯ ಅಂಚಿನಲ್ಲೇ ಇರುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಎರಡು ವಾಹನಗಳು ಎದುರುಬಂದರೆ ಸುಗಮವಾಗಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಿರಿಯ ಅಧಿಕಾರಿಗಳ ಭೇಟಿ ಆಗ್ರಹ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯ ನಡುವೆಯೇ ಹೆರಿಗೆ ಹಾಗೂ ಸ್ತ್ರೀರೋಗ ಚಿಕಿತ್ಸಾ ಸೇವೆ ಆರಂಭಿಸಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಜೊತೆಗೆ ಕುಡಿಯುವ ನೀರು, ಬಿಸಿನೀರು, ವಿದ್ಯುತ್, ವೈದ್ಯರು, ಸಿಬ್ಬಂದಿ ಹಾಗೂ ಸಾರಿಗೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ.ಶಾಸಕ ದೊಡ್ಡನಗೌಡ ಎಚ್. ಪಾಟೀಲ್,"ಆಸ್ಪತ್ರೆಯ ಕಾಮಗಾರಿ ಸಂಪೂರ್ಣವಾಗಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಂಡ ಬಳಿಕವೇ ಹಸ್ತಾಂತರ ಮಾಡಬೇಕು ಎಂದು ನಾನು ಸೂಚಿಸಿದ್ದೆ. ಆದರೆ ಅದಕ್ಕೂ ಮುನ್ನವೇ ಅವಸರದಲ್ಲಿ ಆಸ್ಪತ್ರೆಯನ್ನು ಉದ್ಘಾಟಿಸಿ ಕಾರ್ಯಾರಂಭ ಮಾಡಲಾಗಿದೆ. ಈ ಹಿಂದಿನ ಮುಖ್ಯಮಂತ್ರಿಗಳ ಕೊಪ್ಪಳ ಆಗಮನದ ಹಿನ್ನೆಲೆಯಲ್ಲಿ ಅವರಿಂದ ಉದ್ಘಾಟಿಸುವ ಸಲುವಾಗಿ ಅಧಿಕಾರಿಗಳ ಒತ್ತಡ ಹಾಗೂ ಅವಸರದ ನಿರ್ಧಾರದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ," ಎಂದು ಹೇಳಿದರು. "ಆಸ್ಪತ್ರೆಯ ದುರಸ್ತಿ ಕಾಮಗಾರಿ ಹಾಗೂ ಮೂಲಸೌಕರ್ಯಗಳ ಸ್ಥಿತಿಯನ್ನು ಪರಿಶೀಲಿಸಲು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಲಾಗುವುದು. ಕಾಮಗಾರಿಯನ್ನು ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಪೂರ್ಣಗೊಳಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು," ಎಂದು ಹೇಳಿದರು. ವೈದ್ಯಾಧಿಕಾರಿ ಡಾ. ಚಂದ್ರಕಲಾ ಸ್ಪಷ್ಟನೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಚಂದ್ರಕಲಾ ಮಾತನಾಡಿ, "ತಾಯಿ-ಮಕ್ಕಳ ಆಸ್ಪತ್ರೆಯ ಕಟ್ಟಡವನ್ನು ಗುತ್ತಿಗೆದಾರರು ಅಥವಾ ಇಂಜಿನಿಯರ್‌ಗಳು ಇನ್ನೂ ಅಧಿಕೃತವಾಗಿ ನಮಗೆ ಹಸ್ತಾಂತರ ಮಾಡಿಲ್ಲ. ಕಟ್ಟಡದ ನಕ್ಷೆಯನ್ನು ಮಾತ್ರ ನೀಡಿದ್ದಾರೆ. ಸಾರ್ವಜನಿಕರು ಹಾಗೂ ಮೇಲಾಧಿಕಾರಿಗಳ ಒತ್ತಡದಿಂದ ಆಸ್ಪತ್ರೆಯ ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ," ಎಂದು ಹೇಳಿದರು. "ಆಸ್ಪತ್ರೆಯ ಮೇಲ್ಭಾಗದಲ್ಲಿರುವ ನೀರು ಶುದ್ಧೀಕರಣ ಘಟಕದ ಬಾಗಿಲುಗಳು ಕಿತ್ತುಹೋಗಿವೆ. ಸೋಲಾರ್ ವಾಟರ್ ಹೀಟರ್‌ನ ಗಾಜುಗಳು ಒಡೆದಿವೆ. ಕೊಠಡಿಗಳ ಬಾಗಿಲುಗಳು, ಲೈಟಿಂಗ್ ವ್ಯವಸ್ಥೆ ಹಾಗೂ ಫ್ಯಾನ್‌ಗಳಲ್ಲಿ ಲೋಪದೋಷಗಳಿದ್ದು, ಕೆಲವು ಫ್ಯಾನ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಪ್ರಸ್ತುತ ನಾವು ಸ್ವಂತವಾಗಿ ಒಂದು ಫ್ಯಾನ್ ಅಳವಡಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ," ಎಂದು ವಿವರಿಸಿದರು. "ಈ ಎಲ್ಲಾ ಸಮಸ್ಯೆಗಳು ಹಾಗೂ ಅಪೂರ್ಣ ಕಾಮಗಾರಿಯ ಕುರಿತು ಸಂಬಂಧಪಟ್ಟ ಇಂಜಿನಿಯರ್‌ಗೆ ಅಧಿಕೃತವಾಗಿ ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು," ಎಂದು ಅವರು ತಿಳಿಸಿದರು.4