Shuru
Apke Nagar Ki App…
ಮನೆ ಮೇಲೆ ಮನೆ ಅಕ್ಕ ಪಕ್ಕ ಪಕ್ಷಿಗಳಿಗೆ ನೀರು ಕಾಳು ಇಡುವ ಮೂಲಕ ಪಕ್ಷಿ ಸಂಕುಲ ಉಳಿಸಿ.
Suresh Belagere
ಮನೆ ಮೇಲೆ ಮನೆ ಅಕ್ಕ ಪಕ್ಕ ಪಕ್ಷಿಗಳಿಗೆ ನೀರು ಕಾಳು ಇಡುವ ಮೂಲಕ ಪಕ್ಷಿ ಸಂಕುಲ ಉಳಿಸಿ.
More news from ಕರ್ನಾಟಕ and nearby areas
- ಸಮಗ್ರ ನೀರಾವರಿಗೆ ಆಗ್ರಹಿಸಿ ವಿವಿ ಪುರದಲ್ಲಿಂದು ಬೃಹತ್ ಪ್ರತಿಭಟನೆಗೆ ಚಾಲನೆ ಸಮಗ್ರ ನೀರಾವರಿಗೆ ಆಗ್ರಹಿಸಿ ವಿವಿ ಪುರದಲ್ಲಿಂದು ಬೃಹತ್ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಇನ್ನೂ ಬಯಲು ಸೀಮೆ ನೀರಾವರಿ ಹೋರಾಟ ಸಮಿತಿ ವತಿಯಿಂದ ವಿ ವಿ ಸಾಗರ ಜಲಾಶಯ ಉಳಿಸಿ ಎಂಬ ಘೋಷ ವಾಕ್ಯದ ಅಡಿಯಲ್ಲಿ ಕಪ್ಪು ಪಟ್ಟಿ ದರಿಸಿ ವಿ ವಿ ಪುರ ಗ್ರಾಮದಿಂದ ವಾಣಿ ವಿಲಾಸ ಸಾಗರ ಜಲಾಶಯದ ವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಮಧ್ಯ ಕರ್ನಾಟಕ ಬಯಲುಸೀಮೆ ಪ್ರದೇಶವಾದ ಚಿತ್ರದುರ್ಗ ಜಿಲ್ಲೆಗೆ ಸಮಗ್ರ ನೀರಾವರಿಗೆ ಆಗ್ರಹಿಸಿದ್ದಾರೆ. ಇನ್ನೂ ಸಮಿತಿಯ ಪ್ರಧಾನ ಸಂಚಾಲಕ ಲಕ್ಷ್ಮಣ್ ಹೂಗಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಹಿರಿಯ ರೈತ ಮುಖಂಡ ಈಚಘಟ್ಟದ ಸಿದ್ದವೀರಪ್ಪ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು ಈ ಒಂದು ಪಾದಯಾತ್ರೆಯು ವಾಣಿ ವಿಲಾಸ ಸಾಗರ ಜಲಾಶಯದ ಬಳಿ ತಲುಪಿ ನಂತರ ಜಲಾಶಯದ ಮುಂಬಾಗ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ಸಹ ನಡೆಸಲಿದ್ದು ನೂರಾರು ರೈತ ಮುಖಂಡರು, ವಿವಿಧ ಪ್ರಗತಿಪರ ಸಂಘಟನೆಯ ಸದಸ್ಯರು, ಸಾರ್ವಜನಿಕರು ಹಾಗೂ ವಿಧ್ಯಾರ್ಥಿಗಳು ಮತ್ತು ನೀರಾವರಿ ಹೋರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ.1
- ಜನರ ಮನೆ ಬಾಗಿಲಿಗೆ ಆಡಳಿತ ತಲುಪಿಸುವುದೇ ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ಕೆ.ಎಸ್. ಬಸವಂತಪ್ಪ ಕೂಡ್ಲಿಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾಸೇವಾ ಆಂದೋಲನದ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಕೆ.ಎಸ್. ಬಸವಂತಪ್ಪ ಸೂಚಿಸಿದರು. ಪಟ್ಟಣದ ಎಸ್.ಎ.ವಿ.ಟಿ. ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನ ಸಭೆಯ ನಿಮಿತ್ತ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಕಚೇರಿಗಳ ಸುತ್ತ ಅಲೆದಾಡಿಸುವ ಬದಲು, ಆಡಳಿತವೇ ಜನರ ಬಳಿಗೆ ತೆರಳಿ ಸ್ಪಂದಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಆಶಯವಾಗಿದೆ ಎಂದರು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಪ್ರಜಾಸೇವಾ ಆಂದೋಲನದ ಮೂಲಕ ತಾಲೂಕಿನ ಜನರ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತಂದು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ತ್ವರಿತ ಪರಿಹಾರ ದೊರಕಿಸಲು ಅವಕಾಶ ಕಲ್ಪಿಸಲಾಗುತ್ತಿದೆ ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದ್ದು, ಅವರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಸಭಾ ಸ್ಥಳದಲ್ಲಿ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ, ಆಸನ ವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಇಲಾಖಾವಾರು ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾತನಾಡಿ,ಡ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ವರ್ಗದ ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿದೆ. ಇದೀಗ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಆಡಳಿತವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವಾ’ ಎಂಬ ವಿನೂತನ ಆಂದೋಲನಕ್ಕೆ ಪ್ರತ್ಯೇಕ ಇಲಾಖೆಯನ್ನು ಆರಂಭಿಸಿರುವುದು ಮಹತ್ವದ ಹೆಜ್ಜೆಯಾಗಿದೆ. ರಾಜ್ಯಮಟ್ಟದಲ್ಲಿ ನಡೆಯಲಿರುವ ಪ್ರಜಾಸೇವಾ ಆಂದೋಲನಕ್ಕೆ ತಮ್ಮ ಕೂಡ್ಲಿಗಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡುತ್ತಿರುವುದು ಕ್ಷೇತ್ರದ ಜನತೆ ಹಾಗೂ ತಮ್ಮ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ. ಈ ಆಂದೋಲನದ ಮೂಲಕ ತಾಲೂಕಿನ ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಈ ವೇಳೆ ಜಿಲ್ಲಾ ಅಧಿಕಾರಿ ಕವಿತಾ ಮನ್ನಿಕೇರಿ ಮಾತನಾಡಿ, ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಒಟ್ಟು 48 ಕೌಂಟರ್‌ಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸುಮಾರು 10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಒಟ್ಟು 60 ಮಳಿಗೆಗಳನ್ನು ತೆರೆಯಲಾಗುತ್ತಿದೆ. ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಅರ್ಜಿಗಳನ್ನು ಸ್ವೀಕರಿಸಲು 30 ಕೌಂಟರ್‌ಗಳನ್ನು ಕಾಯ್ದಿರಿಸಲಾಗಿದೆ. ತಾಲ್ಲೂಕಿನ ಎಲ್ಲಾ ಮನೆಗಳಿಗೆ ಮುಖ್ಯಮಂತ್ರಿಗಳ ಸಂದೇಶ ಪತ್ರ ಹಾಗೂ ಆಹ್ವಾನ ಪತ್ರಿಕೆ ಮತ್ತು ಸ್ವೀಕೃತಿ ಪತ್ರವನ್ನು ತಲುಪಿಸಲಾಗಿದೆ. ಸಿ.ಎಂ ಸಂದೇಶ ಹಾಗೂ ಕುಂದುಕೊರತೆಗಳ ಆಹ್ವಾನ ಪತ್ರಿಕೆಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಕಂದಾಯ ಇಲಾಖೆ ಹೀಗೆ ವಿವಿಧ ಇಲಾಖೆಗಳ ಕುಂದು ಕೊರತೆ ಸೇರಿದಂತೆ ವಿವಿಧ ಪಿಂಚಣಿ ಯೋಜನೆಗಳ ಕುರಿತು ಪಟ್ಟಿ ನೀಡಲಾಗಿದೆ. ಸಾರ್ವಜನಿಕರು ತಮ್ಮ ಅಗತ್ಯತೆಗಳಿಗೆ ತಕ್ಕಂತೆ ಭರ್ತಿ ಮಾಡಿ ಸೆ.5ರಂದು ಬೆಳಿಗ್ಗೆ 9 ಗಂಟೆಯೊಳಗೆ ನೋಂದಣಿ ಮಾಡಿಕೊಳ್ಳಬಹುದು. ಸಾರ್ವಜನಿಕರು ನೀಡುವ ಅರ್ಜಿಗಳನ್ನು ಸ್ಥಳದಲ್ಲೇ ಡಿಜಿಟಲ್ ಹಾಗೂ ತಾಂತ್ರಿಕ ವ್ಯವಸ್ಥೆಯ ಮೂಲಕ ವಿಂಗಡಿಸಿ ತಕ್ಷಣವೇ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಮತ್ತು ತಾಲ್ಲೂಕು ಮಟ್ಟದ ಸಿಬ್ಬಂದಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಬಳ್ಳಾರಿ ವಿಜಯನಗರ ಸಂಸದ ಈ ತುಕಾರಾಂ, ಹೊಸಪೇಟೆ ಶಾಸಕ ಎಚ್.ಆರ್ ಗವಿಯಪ್ಪ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್, ಜಿಲ್ಲಾ ಅಧಿಕಾರಿ ಕವಿತಾ ಮನ್ನಿಕೇರಿ, ಎಸ್.ಪಿ ಜಾಹ್ನವಿ, ಜಿಪಂ ಸಿಇಒ ನೊಂಗ್ಡಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ಎಡಿಸಿ ಪಿ.ಎನ್.ಲೋಕೇಶ್, ಗ್ಯಾರಂಟಿ ಅಧ್ಯಕ್ಷ ಕುರಿಮೂರ್ತಿ, ತಹಶೀಲ್ದಾರ್ ವಿ.ಕೆ ನೇತ್ರಾವತಿ, ಇಒ ನರಸಪ್ಪ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.1
- ಚಿಕ್ಕನಾಯಕನಹಳ್ಳಿ 18 ವರ್ಷಗಳ ಕನಸು ನನಸಾದ ಸುಂದರ ಕ್ಷಣ… ರೈತರ ಬದುಕಿಗೆ ಹೊಸ ಭರವಸೆ ರೈತರಲ್ಲಿ. ಹರ್ಷೋದ್ಗಾರ ಮೂಡಿಸಿದ ಶಾಸಕ ಸಿ ಬಿ ಸುರೇಶ್ ಬಾಬು 18 ವರ್ಷಗಳ ಕನಸು ನನಸಾದ ಸುಂದರ ಕ್ಷಣ… ರೈತರ ಬದುಕಿಗೆ ಹೊಸ ಭರವಸೆ! ದಬ್ಬೇಘಟ್ಟ ಹಾಗೂ ಸುತ್ತಮುತ್ತಲಿನ ರೈತರಿಗೆ ಹೇಮಾವತಿ ನೀರು ಹರಿದು ಬಂದಿರುವ ಈ ಐತಿಹಾಸಿಕ ಕ್ಷಣಕ್ಕೆ ಮುಖ್ಯ ಕಾರಣಕರ್ತರು ಹಾಗೂ ಹೇಮಾವತಿ ಹರಿಕಾರರು ನಮ್ಮ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಯುತ ಸಿ.ಬಿ. ಸುರೇಶ್ ಬಾಬು ಅವರು. 2011ರಿಂದ ನಿರಂತರವಾಗಿ ನಡೆಸಿದ ಹೋರಾಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ರೈತರ ದಶಕಗಳ ಕನಸು ನನಸಾಗಿದೆ. ಇದು ಕೇವಲ ನೀರು ಹರಿದ ಕ್ಷಣವಲ್ಲ… ಇದು ಅನ್ನದಾತನ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭವಾದ ಕ್ಷಣ. ಹಿಂದಿನ ಕಷ್ಟದ ದಿನಗಳು ಹನಿ ನೀರಿಗಾಗಿ ಆಕಾಶವನ್ನೇ ನೋಡುತ್ತಿದ್ದ ಕಣ್ಣುಗಳು… ಒಂದಿಷ್ಟು ನೀರು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಸಾವಿರಾರು ಅಡಿ ಆಳಕ್ಕೆ ಕೊರೆದು, ಕೊನೆಗೆ ಬತ್ತಿ ಹೋದ ಬೋರ್‌ವೆಲ್‌ಗಳು… ಸಾಲದ ಸುಳಿಯಲ್ಲಿ ಸಿಲುಕಿ ಕಣ್ಣೀರಿಟ್ಟ ಅನ್ನದಾತನ ಬದುಕು… ಇಂತಹ ನೋವು-ಯಾತನೆಗಳನ್ನು ಹಲವು ದಶಕಗಳಿಂದ ದಬ್ಬೇಘಟ್ಟ ನವಿಲೆ ಹಾಗೂ ಸುತ್ತಮುತ್ತಲಿನ ರೈತರು ಅನುಭವಿಸಿದ್ದರು. ಇಂದು ಬದಲಾದ ಚಿತ್ರಣ ಆದರೆ ಇಂದು ಈ ಕ್ಷೇತ್ರದ ಶಾಸಕರು ಶ್ರೀ ಸುರೇಶ್ ಬಾಬು ಅವರು ಹೊರಾಟ ಮಾಡಿ ಆ ಎಲ್ಲಾ ನೋವುಗಳಿಗೆ ಮುಕ್ತಿ ಸಿಕ್ಕಿದೆ. ದಶಕಗಳ ಕನಸನ್ನು ನನಸಾಗಿಸಿದ ಹೇಮಾವತಿ ಹರಿಕಾರರು ಹಾಗೂ JDLP ನಾಯಕರಾದ ಸನ್ಮಾನ್ಯ ಶ್ರೀ ಸಿ.ಬಿ. ಸುರೇಶ್ ಬಾಬು ಅವರ ನಿರಂತರ ಹೋರಾಟದ ಫಲವಾಗಿ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಹೇಮಾವತಿಯ ಜೀವಜಲ ದಬ್ಬೇಘಟ್ಟ ಕೆರೆಯನ್ನು ಮುದ್ದಾಡಿದೆ. ಕೆರೆ ತುಂಬಿ ತುಳುಕುತ್ತಿದೆ… ಇಂದು ದಬ್ಬೇಘಟ್ಟ ಕೆರೆ ಕೊಡಿ ಹೋಗಿದೆ ಇನ್ನ ಕೆಲವು ದಿನಗಳಲ್ಲಿ ಮೇಲನಹಳ್ಳಿ ಕೆರೆ ತುಂಬಿ ನವಿಲೆ ಕೆರೆ ತಲುಪುತ್ತದೆ. ರೈತರ ಬದುಕಿಗೆ ಹೊಸ ಭರವಸೆ ನೀರಿಲ್ಲದೆ ಬತ್ತಿ ಹೋಗಿದ್ದ ನೂರಾರು ಬೋರ್‌ವೆಲ್‌ಗಳಿಗೆ ಈಗ ಮರುಜೀವ ಬಂದಿದೆ. ಸಾಲದ ಸುಳಿಯಲ್ಲಿ ನಲುಗಿದ್ದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡಿದೆ. ಈ ಒಂದು ಕೆರೆಯ ನೀರಿನಿಂದ ನೂರಾರು ಎಕರೆ ಫಲವತ್ತಾದ ಕೃಷಿ ಭೂಮಿಗೆ ಹಸಿರಿನ ಆಸರೆ ದೊರೆತಂತಾಗಿದೆ. ಹೇಮಾವತಿಯ ತಂಪಾದ ಅಲೆಗಳು ದಬ್ಬೇಘಟ್ಟ ಮಣ್ಣನ್ನು ಮಾತ್ರವಲ್ಲ, ಇಲ್ಲಿನ ರೈತರ ಬದುಕನ್ನೇ ಹಸನು ಮಾಡಿವೆ. ನಮ್ಮ ರೈತರು ಇಂದು ನೆಮ್ಮದಿಯಿಂದ ಕಣ್ಣು ತುಂಬ ನಿದ್ದೆ ಮಾಡುವಷ್ಟು ಸಂತೋಷವನ್ನು ಈ ಹೇಮಾವತಿ ನೀರು ತಂದಿದೆ. ನನ್ನ ಕ್ಷೇತ್ರದ ರೈತರೇ ನನ್ನ ಉಸಿರು. ರೈತ ಬಾಂಧವರೇ, ನಿಮ್ಮ ಸಂತೋಷವೇ ನನ್ನ ಸಂತೋಷ. ನಿಮ್ಮ ಕಷ್ಟ-ಸುಖಗಳಲ್ಲಿ ಸದಾ ನಿಮ್ಮೊಂದಿಗೆ, ನಿಮ್ಮ ಬೆನ್ನೆಲುಬಾಗಿ ನಿಲ್ಲುತ್ತೇನೆ. 2011ರಿಂದ ನಡೆದ ಹೋರಾಟಕ್ಕೆ ಇಂದು ಸಾರ್ಥಕ ಪ್ರತಿಫಲ. ಹೇಮಾವತಿ ನೀರು – ರೈತರ ಬದುಕಿಗೆ ಹೊಸ ಜೀವ. ಅನ್ನದಾತನ ನಗುವೇ ನಮ್ಮ ಹೋರಾಟದ ನಿಜವಾದ ಗೆಲುವು3
- ಶಿವಮೊಗ್ಗ ಫುಡ್ ಕೋರ್ಟ್‌ಗೆ ಎಸಿ ದಿಢೀರ್ ಎಂಟ್ರಿ; ವ್ಯಾಪಾರಸ್ಥರಲ್ಲಿ ಸಂಚಲನ! ಫುಡ್ ಕೋರ್ಟ್‌ನಲ್ಲಿ ಹೈಜೀನ್ ಚೆಕ್; ಅಂಗಡಿ ಮಾಲೀಕರಿಗೆ 15 ದಿನಗಳ ಗಡುವು1
- ಪಿಂಕ್ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಪರಿಶೀಲಿಸಿದ ಸಚಿವ ಬೆಂಗಳೂರಿನ ಪಿಂಕ್ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಉದ್ಘಾಟನೆಗೆ ಸಂಪೂರ್ಣ ಸಿದ್ಧವಾಗಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರದಿಂದ ಉದ್ಘಾಟನೆಯ ದಿನಾಂಕ ನಿಗದಿಯಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ಎಂ. ಕೃಷ್ಣಪ್ಪ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಸಿ. ಜಾಫರ್ ಹಾಗೂ ಅಧಿಕಾರಿಗಳೊಂದಿಗೆ ಇಂದು ಪ್ರಾಯೋಗಿಕ ಸಂಚಾರ ನಡೆಸಿ, ಮೆಟ್ರೋ ಮಾರ್ಗದ ಸಿದ್ಧತೆ ಹಾಗೂ ಉದ್ಘಾಟನೆಗೆ ಮುನ್ನ ಕೈಗೊಳ್ಳಬೇಕಿರುವ ಅಂತಿಮ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.1
- ಶಿವಮೊಗ್ಗ-ತಹಶೀಲ್ದಾರ್ ರವರ ಕಾರ್ಯ ವೈಖರಿ: ಸಾಗರ ಶಾಸಕ ಬೇಳೂರು ಅಸಮಾಧಾನ ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ನಿರಂತರ ದಾಳಿ ಹಾಗೂ ಕಾರ್ಯಾಚರಣೆ ನಡೆಸುತ್ತಿರುವ ತಹಶೀಲ್ದಾರ್ ಪ್ರತೀಭಾ ಅವರ ಕಾರ್ಯ ವೈಖರಿ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ನಿನ್ನೆ ಸಾಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆ ನಡೆಸುವ ವೇಳೆ ವಿಡಿಯೋ ಮಾಡಿ ಅದನ್ನು ಮಾಧ್ಯಮಗಳಿಗೆ ನೀಡುವ ಮೂಲಕ ಪ್ರಚಾರ ಪಡೆಯುವ ಕ್ರಮವನ್ನು ತಕ್ಷಣವೇ ನಿಲ್ಲಿಸುವಂತೆ ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚಿಸಿದ್ದಾರೆ. ಪ್ರಚಾರ ಮೊದಲು ಅಲ್ಲ, ಕೆಲಸ ಮೊದಲು. ಕಾರ್ಯಾಚರಣೆಗಳ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡುವುದನ್ನು ನಿಲ್ಲಿಸಿ. ಪ್ರಚಾರದ ಧಾಟಿ ಬಿಟ್ಟು ನಿಯಮಾನುಸಾರ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡಿ” ಎಂದು ಅಧಿಕಾರಿಗಳಿಗೆ ಸೂಚಿಸಿರುವುದು ಸಭೆಯಲ್ಲಿ ಗಮನ ಸೆಳೆಯಿತು.1
- ಮಲ್ಲೂರಹಳ್ಳಿಯಲ್ಲಿ ಎಸ್ಐಆರ್ ಸರ್ವೆ ಕಾರ್ಯದಲ್ಲಿ ಲೋಪ ಆಗಿದ್ದಾಗಿ ಗ್ರಾಮಸ್ಥರು ಆರೋಪ ಮಾಡಿದ್ದಾರೆ ಮಲ್ಲೂರಹಳ್ಳಿಯಲ್ಲಿ ಎಸ್ಐಆರ್ ಸರ್ವೆ ಕಾರ್ಯದಲ್ಲಿ ಲೋಪ ಆಗಿದ್ದಾಗಿ ಗ್ರಾಮಸ್ಥರು ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ಇತ್ತೀಚಿಗೆ ಎಸ್ಐಆರ್ ಸರ್ವೆ ಕಾರ್ಯ ಮಾಡಲಾಯಿತು. ರಾಜ್ಯದ ಪ್ರತಿ ಮನೆಮನೆಗೆ ಭೇಟಿ ನೀಡಿ ಮತ ಪರಿಷ್ಕರಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲೂರಹಳ್ಳಿ ಗ್ರಾಮದಲ್ಲಿ ಎಸ್ಐಆರ್ ಸರ್ವೆ ಕಾರ್ಯದಲ್ಲಿ ಲೋಪವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿ ಕಾಟಯ್ಯ ಆರೂಪಿಸಿದರು. ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು. 2026 ನೇ ಸಾಲಿನ ಎಸ್ಐಆರ್ ಪ್ರಕ್ರಿಯೆಯಲ್ಲಿ ಮಲ್ಲೂರಹಳ್ಳಿ ಬೂತ್ ಸಂಖ್ಯೆ 141ರ ಒಂದನೇ ವಾರ್ಡಿನಲ್ಲಿ 1375 ಮತದಾರರು ಪಟ್ಟಿಯಲ್ಲಿ ಇದ್ದರು ಆದರೆ ಎಸ್ಐಆರ್ ಪ್ರಕ್ರಿಯೆ ಮುಗಿದ ನಂತರ 941 ಮತದಾರರ ಪಟ್ಟಿಯಲ್ಲಿ ಇದ್ದಾರೆ ಇನ್ನು 434 ಮತದಾರರ ಪಟ್ಟಿ ಬೇರೆ ಕಡೆ ವರ್ಗಾವಣೆ ಮಾಡಿರುವುದು ತುಂಬಾ ನೋವಿನ ಸಂಗತಿ ಪಟ್ಟ ಅಧಿಕಾರಿಗಳು ಮತದಾರರ ಪಟ್ಟಿ ಸರಿಪಡಿಸುವಂತೆ ಆಗ್ರಹಿಸಿದರು. ಇನ್ನೂ ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಎಂ ಬಿ ಮಂಜಣ್ಣ, ರಾಜಣ್ಣ, ರುದ್ರಪ್ಪ,ಡಿ. ರಾಜಣ್ಣ, ಹಂಪಣ್ಣ,ಪಿ. ರುದ್ರೇಶ್ ಜಗದೀಶ್, ಮಲ್ಲಮ್ಮ ಅವರು ಹಾಜರಿದ್ದರು.1
- ಗೌರಸಮುದ್ರ ಮಾರಮ್ಮ ದೇವಿ ಪೂರ್ವಭಾವಿ ಸಭೆ ಇದು ರಾಜಕಾರಣ ಮಾಡಕ್ಕೆ ಬಂದಿಲ್ಲ ಇಷ್ಟ ಇದ್ದರೆ ಇರಬಹುದು, ಇಲ್ಲಾಂದ್ರೆ ಎದ್ದು ಹೋಗಬಹುದು. ಸಭೆಯಲ್ಲಿ ಗದ್ದಲಮಾಡುತ್ತಿದ್ದವರಿಗೆ ಶಾಸಕ ಎನ್ ವೈ ಗೋಪಾಲಕೃಷ್ಣ ಖಡಕ್ ಎಚ್ಚರಿಕೆ1
- ಅಧಿಕಾರಿಗಳಿಗೆ ಅವಹೇಳನ: ಕಾನೂನು ಕ್ರಮಕ್ಕೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ ಮೊಳಕಾಲ್ಮೂರು: ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆಗಸ್ಟ್ 29ರಂದು ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದು, ಅವರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಘಟನೆಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗುತ್ತದೆ. ಕೂಡಲೇ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿ, ಅಧಿಕಾರಿಗಳ ಗೌರವ ಹಾಗೂ ಕರ್ತವ್ಯ ನಿರ್ವಹಣೆಗೆ ಅಗತ್ಯ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಬಿ. ರಾಮಚಂದ್ರಪ್ಪ, ಉಪಾಧ್ಯಕ್ಷ ಮಹೇಶ್, ವಿಜಯಾಂಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.1