logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆ.29 ರಂದು ನಗರದ ಬಾಲ ಭವನದಲ್ಲಿ ಚಿಗುರು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಮಂಡ್ಯ-ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಬಾಲ ಭವನ ಇವರ ಸಂಯೋಗದಲ್ಲಿ 2026-27 ನೇ ಸಾಲಿನ ಚಿಗುರು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವನ್ನು ಆಗಸ್ಟ್ 29 ರಂದು ಸಂಜೆ 5.00 ಗಂಟೆಗೆ ನಗರದ ಬಾಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ .ಕುಮಾರಸ್ವಾಮಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೃಷಿ ಸಚಿವರಾದ ಪಿ. ಎಂ. ನರೇಂದ್ರಸ್ವಾಮಿ ರವರು,ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ ರವರು ಕಾರ್ಯ ಕ್ರಮದಲ್ಲಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಮಂಡ್ಯ ವಿಧಾನಸಭಾ ಶಾಸಕರಾದ ಪಿ.ರವಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ,ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್ ಆತ್ಮಾನಂದ,ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ,ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ. ನಾಗೇಂದ್ರ ಕುಮಾರ್,ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಬಿ.ಎಸ್. ಶಿವಣ್ಣ, ವಿಧಾನ ಸಭಾ ಶಾಸಕರುಗಳಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ,ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ರಘುನಂದನ್, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳಾದ ಮನೋಜ್ ಕುಮಾರ್ ಮೀನಾ ಆಗಮಿ ಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿಗಳಾದ ಡಾ. ಕುಮಾರ, ಜಿಲ್ಲಾ ಪಂಚಾಯತ್ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ನಿರ್ಮಲಾ ಮಠಪತಿ ಆಗಮಿಸಲಿದ್ದಾರೆ.

54 min ago
user_Arunprasad G B
Arunprasad G B
Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
54 min ago
30155146-db69-46f4-92db-4acad057cd4b

ಆ.29 ರಂದು ನಗರದ ಬಾಲ ಭವನದಲ್ಲಿ ಚಿಗುರು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಮಂಡ್ಯ-ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಬಾಲ ಭವನ ಇವರ ಸಂಯೋಗದಲ್ಲಿ 2026-27 ನೇ ಸಾಲಿನ ಚಿಗುರು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವನ್ನು ಆಗಸ್ಟ್ 29 ರಂದು ಸಂಜೆ 5.00 ಗಂಟೆಗೆ ನಗರದ ಬಾಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ .ಕುಮಾರಸ್ವಾಮಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೃಷಿ ಸಚಿವರಾದ ಪಿ. ಎಂ. ನರೇಂದ್ರಸ್ವಾಮಿ ರವರು,ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ ರವರು ಕಾರ್ಯ ಕ್ರಮದಲ್ಲಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಮಂಡ್ಯ ವಿಧಾನಸಭಾ ಶಾಸಕರಾದ ಪಿ.ರವಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ,ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್ ಆತ್ಮಾನಂದ,ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ,ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ. ನಾಗೇಂದ್ರ ಕುಮಾರ್,ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಬಿ.ಎಸ್. ಶಿವಣ್ಣ, ವಿಧಾನ ಸಭಾ ಶಾಸಕರುಗಳಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ,ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ರಘುನಂದನ್, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳಾದ ಮನೋಜ್ ಕುಮಾರ್ ಮೀನಾ ಆಗಮಿ ಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿಗಳಾದ ಡಾ. ಕುಮಾರ, ಜಿಲ್ಲಾ ಪಂಚಾಯತ್ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ನಿರ್ಮಲಾ ಮಠಪತಿ ಆಗಮಿಸಲಿದ್ದಾರೆ.

More news from ಕರ್ನಾಟಕ and nearby areas
  • *ವಿಬಿ-ಜಿ ರಾಮ್ ಜಿ ಯೋಜನೆಯಡಿ ದುಡಿಯುವ ಕಾರ್ಮಿಕರಿಗೆಸಮಯಕ್ಕೆ ಸರಿಯಾಗಿ ಕೂಲಿ ಪಾವತಿಸಿ- ಜಿಲ್ಲಾಪಂಚಾಯಿತಿ ನಿಗದಿತ ಅವಧಿಯೊಳಗೆ ಕೂಲಿ ಪಾವತಿಯಾಗುವುದು ಅತ್ಯಂತ ಮುಖ್ಯ. ಹಾಜರಾತಿ, ದಾಖಲೆ ನಿರ್ವಹಣೆ ಹಾಗೂ ವೇತನ ಪಾವತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಈಓ ಸೂಚಿಸಿದರು. ಕಾರ್ಮಿಕರು ನಿರಂತರವಾಗಿ ಉದ್ಯೋಗ ಕಲ್ಪಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿರುವ ಮಸ್ಟರ್ ರೋಲ್ ಹಾಗೂ ಎನ್‌ಎಂಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಂದಿನ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಉದ್ಯೋಗದ ನಿರಂತರತೆಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. *ಉತ್ತಮ ಗುಣಮಟ್ಟದ ಕಾಮಗಾರಿಗೆ ಆದ್ಯತೆ* : ಯೋಜನೆಯಡಿ ನಿರ್ಮಾಣವಾಗುವ ಪ್ರತಿಯೊಂದು ಆಸ್ತಿಯೂ ಗ್ರಾಮದ ಜನರಿಗೆ ದೀರ್ಘಕಾಲದವರೆಗೆ ಪ್ರಯೋಜನ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಯೋಜನೆಯ ಕಾಮಗಾರಿ ಅನುಷ್ಠಾನದಲ್ಲಿ ಉತ್ತಮ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ​“ಗುಣಮಟ್ಟದ ಕಾಮಗಾರಿ – ಶಾಶ್ವತ ಆಸ್ತಿ – ಸಮಗ್ರ ಗ್ರಾಮೀಣ ಅಭಿವೃದ್ಧಿ” ಎಂಬ ಪ್ರಮುಖ ಆಶಯದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. *NMMS ಹಾಜರಾತಿ ದಾಖಲಾತಿ ಕಡ್ಡಾಯ* : ​ವಿ-ಬಿ-ಜಿ ರಾಮ್‌ ಜಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಕಾರ್ಮಿಕರ ಹಾಜರಾತಿಯನ್ನು NMMS ಆ್ಯಪ್ ಮೂಲಕ ನಿಯಮಾನುಸಾರ ದಾಖಲಿಸುವುದು ಅತ್ಯಂತ ಮಹತ್ವದ್ದಾಗಿದ್ದು, ಕಾರ್ಮಿಕರು ಕೆಲಸಕ್ಕೆ ಹಾಜರಾದ ಸಮಯದಲ್ಲಿಯೇ ನೈಜ ಸಮಯದ ಹಾಜರಾತಿಯನ್ನು ಅಪ್‌ಲೋಡ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಹಾಜರಾತಿಯಲ್ಲಿ ಸಮಯದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳು ತಾಲ್ಲೂಕು ಪಂಚಾಯತ ಮುಖೇನಾ ಜಿಲ್ಲಾ ಪಂಚಾಯತ್ ತಂಡಕ್ಕೆ ಮಾಹಿತಿ‌ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಆ ದಿನವೇ ಕಡ್ಡಾಯವಾಗಿ ಕ್ರಮವಹಿಸಬೇಕು. ಯಾವುದೇ ಸಂದರ್ಭದಲ್ಲಿಯೂ‌ ಸಹ ತಾಂತ್ರಿಕ ಸಮಸ್ಯೆಯಿಂದಾಗಿ ಹಾಜರಾತಿ ತೆಗೆದುಕೊಳ್ಳದೇ ಹೋದಲ್ಲಿ‌ ಸಂಬಂಧಪಟ್ಟ ಅಧಿಕಾರಿ /ಸಿಬ್ಬಂದಿಗಳ ಮೇಲೆ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದರು. *ಕಾಮಗಾರಿಗಳ ನಿರಂತರ ಮೇಲ್ವಿಚಾರಣೆಗೆ ಸೂಚನೆ* ಯೋಜನೆಯಡಿ ಕೈಗೆತ್ತಿಕೊಳ್ಳುವ ಅಭಿವೃದ್ಧಿ ಕಾಮಗಾರಿಗಳು ನಿರ್ವಹಣೆಯ ಕೊರತೆ ಅಥವಾ ಆಡಳಿತಾತ್ಮಕ ವಿಳಂಬದಿಂದ ಕುಂಠಿತಗೊಳ್ಳಬಾರದು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಅನುಷ್ಠಾನಾಧಿಕಾರಿಗಳು ತಳಮಟ್ಟದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಕೇವಲ ಕಾಮಗಾರಿಗಳಿಗೆ ಅನುಮೋದನೆ ನೀಡುವುದಕ್ಕೆ ಸೀಮಿತವಾಗದೆ, ಕಾಮಗಾರಿ ಆರಂಭವಾದ ದಿನದಿಂದ ಪೂರ್ಣಗೊಳ್ಳುವವರೆಗೂ ನಿರಂತರ ಮೇಲ್ವಿಚಾರಣೆ ನಡೆಸಬೇಕು. ಗುಣಮಟ್ಟ, ಸಮಯಪಾಲನೆ ಹಾಗೂ ಸಾರ್ವಜನಿಕರಿಗೆ ಆಗುವ ಪ್ರಯೋಜನ—ಈ ಮೂರು ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಜಲಸಂರಕ್ಷಣೆ, ಕೃಷಿ ಭೂಮಿಗೆ ನೀರು ಹರಿಸುವ ವ್ಯವಸ್ಥೆ, ಕೆರೆ-ಕಾಲುವೆಗಳ ಪುನಶ್ಚೇತನ ಸೇರಿದಂತೆ ಸಾರ್ವಜನಿಕರಿಗೆ ದೀರ್ಘಕಾಲಿಕ ಪ್ರಯೋಜನ ನೀಡುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಇಂತಹ ಕಾಮಗಾರಿಗಳ ಮೂಲಕ ಕೂಲಿಕಾರರಿಗೆ ಉದ್ಯೋಗ ದೊರೆಯುವುದರ ಜೊತೆಗೆ ಗ್ರಾಮದಲ್ಲಿ ಶಾಶ್ವತ ಸಾರ್ವಜನಿಕ ಆಸ್ತಿಗಳ ನಿರ್ಮಾಣವಾಗಬೇಕು ಎಂದು ಸಿಇಒ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಮಂಜುನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಐಇಸಿ ಸಂಯೋಜಕರು, ಜಿಎಫ್‌ಟಿ, ಕಾಯಕ ಬಂಧುಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಹಾಜರಿದ್ದರು.
    1
    *ವಿಬಿ-ಜಿ ರಾಮ್ ಜಿ ಯೋಜನೆಯಡಿ ದುಡಿಯುವ ಕಾರ್ಮಿಕರಿಗೆಸಮಯಕ್ಕೆ ಸರಿಯಾಗಿ ಕೂಲಿ ಪಾವತಿಸಿ- ಜಿಲ್ಲಾಪಂಚಾಯಿತಿ
ನಿಗದಿತ ಅವಧಿಯೊಳಗೆ ಕೂಲಿ ಪಾವತಿಯಾಗುವುದು ಅತ್ಯಂತ ಮುಖ್ಯ. ಹಾಜರಾತಿ, ದಾಖಲೆ ನಿರ್ವಹಣೆ ಹಾಗೂ ವೇತನ ಪಾವತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಈಓ ಸೂಚಿಸಿದರು.
ಕಾರ್ಮಿಕರು ನಿರಂತರವಾಗಿ ಉದ್ಯೋಗ ಕಲ್ಪಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿರುವ ಮಸ್ಟರ್ ರೋಲ್ ಹಾಗೂ ಎನ್‌ಎಂಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಂದಿನ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಉದ್ಯೋಗದ ನಿರಂತರತೆಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
*ಉತ್ತಮ ಗುಣಮಟ್ಟದ ಕಾಮಗಾರಿಗೆ ಆದ್ಯತೆ* :     ಯೋಜನೆಯಡಿ ನಿರ್ಮಾಣವಾಗುವ ಪ್ರತಿಯೊಂದು ಆಸ್ತಿಯೂ ಗ್ರಾಮದ ಜನರಿಗೆ ದೀರ್ಘಕಾಲದವರೆಗೆ ಪ್ರಯೋಜನ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಯೋಜನೆಯ ಕಾಮಗಾರಿ ಅನುಷ್ಠಾನದಲ್ಲಿ ಉತ್ತಮ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.
​“ಗುಣಮಟ್ಟದ ಕಾಮಗಾರಿ – ಶಾಶ್ವತ ಆಸ್ತಿ – ಸಮಗ್ರ ಗ್ರಾಮೀಣ ಅಭಿವೃದ್ಧಿ” ಎಂಬ ಪ್ರಮುಖ ಆಶಯದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ  ತಿಳಿಸಿದರು.
*NMMS ಹಾಜರಾತಿ ದಾಖಲಾತಿ ಕಡ್ಡಾಯ* :
​ವಿ-ಬಿ-ಜಿ ರಾಮ್‌ ಜಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಕಾರ್ಮಿಕರ ಹಾಜರಾತಿಯನ್ನು NMMS ಆ್ಯಪ್ ಮೂಲಕ ನಿಯಮಾನುಸಾರ ದಾಖಲಿಸುವುದು ಅತ್ಯಂತ ಮಹತ್ವದ್ದಾಗಿದ್ದು, ಕಾರ್ಮಿಕರು ಕೆಲಸಕ್ಕೆ ಹಾಜರಾದ ಸಮಯದಲ್ಲಿಯೇ ನೈಜ ಸಮಯದ  ಹಾಜರಾತಿಯನ್ನು ಅಪ್‌ಲೋಡ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
ಹಾಜರಾತಿಯಲ್ಲಿ ಸಮಯದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದಲ್ಲಿ ಸಂಬಂಧಪಟ್ಟ  ಸಿಬ್ಬಂದಿಗಳು  ತಾಲ್ಲೂಕು ಪಂಚಾಯತ ಮುಖೇನಾ ಜಿಲ್ಲಾ ಪಂಚಾಯತ್ ತಂಡಕ್ಕೆ ಮಾಹಿತಿ‌ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಆ ದಿನವೇ ಕಡ್ಡಾಯವಾಗಿ ಕ್ರಮವಹಿಸಬೇಕು. ಯಾವುದೇ ಸಂದರ್ಭದಲ್ಲಿಯೂ‌ ಸಹ ತಾಂತ್ರಿಕ ಸಮಸ್ಯೆಯಿಂದಾಗಿ ಹಾಜರಾತಿ ತೆಗೆದುಕೊಳ್ಳದೇ ಹೋದಲ್ಲಿ‌  ಸಂಬಂಧಪಟ್ಟ ಅಧಿಕಾರಿ /ಸಿಬ್ಬಂದಿಗಳ ಮೇಲೆ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದರು.
*ಕಾಮಗಾರಿಗಳ ನಿರಂತರ ಮೇಲ್ವಿಚಾರಣೆಗೆ ಸೂಚನೆ*
ಯೋಜನೆಯಡಿ ಕೈಗೆತ್ತಿಕೊಳ್ಳುವ ಅಭಿವೃದ್ಧಿ ಕಾಮಗಾರಿಗಳು ನಿರ್ವಹಣೆಯ ಕೊರತೆ ಅಥವಾ ಆಡಳಿತಾತ್ಮಕ ವಿಳಂಬದಿಂದ ಕುಂಠಿತಗೊಳ್ಳಬಾರದು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಅನುಷ್ಠಾನಾಧಿಕಾರಿಗಳು ತಳಮಟ್ಟದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕೇವಲ ಕಾಮಗಾರಿಗಳಿಗೆ ಅನುಮೋದನೆ ನೀಡುವುದಕ್ಕೆ ಸೀಮಿತವಾಗದೆ, ಕಾಮಗಾರಿ ಆರಂಭವಾದ ದಿನದಿಂದ ಪೂರ್ಣಗೊಳ್ಳುವವರೆಗೂ ನಿರಂತರ ಮೇಲ್ವಿಚಾರಣೆ ನಡೆಸಬೇಕು. ಗುಣಮಟ್ಟ, ಸಮಯಪಾಲನೆ ಹಾಗೂ ಸಾರ್ವಜನಿಕರಿಗೆ ಆಗುವ ಪ್ರಯೋಜನ—ಈ ಮೂರು ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಜಲಸಂರಕ್ಷಣೆ, ಕೃಷಿ ಭೂಮಿಗೆ ನೀರು ಹರಿಸುವ ವ್ಯವಸ್ಥೆ, ಕೆರೆ-ಕಾಲುವೆಗಳ ಪುನಶ್ಚೇತನ ಸೇರಿದಂತೆ ಸಾರ್ವಜನಿಕರಿಗೆ ದೀರ್ಘಕಾಲಿಕ ಪ್ರಯೋಜನ ನೀಡುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಇಂತಹ ಕಾಮಗಾರಿಗಳ ಮೂಲಕ ಕೂಲಿಕಾರರಿಗೆ ಉದ್ಯೋಗ ದೊರೆಯುವುದರ ಜೊತೆಗೆ ಗ್ರಾಮದಲ್ಲಿ ಶಾಶ್ವತ ಸಾರ್ವಜನಿಕ ಆಸ್ತಿಗಳ ನಿರ್ಮಾಣವಾಗಬೇಕು ಎಂದು ಸಿಇಒ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಮಂಜುನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಐಇಸಿ ಸಂಯೋಜಕರು, ಜಿಎಫ್‌ಟಿ, ಕಾಯಕ ಬಂಧುಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಹಾಜರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    7 min ago
  • ಹಲಗೂರಿನಲ್ಲಿ ಶ್ರೀ ಪಟ್ಟದರಾಣಿ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಮಳವಳ್ಳಿ :ತಾಲ್ಲೂಕಿನ ಹಲಗೂರು ಗ್ರಾಮದ ಗಾಣಿಗರ ಬೀದಿಯಲ್ಲಿರುವ ಶ್ರೀ ಪಟ್ಟದರಾಣಿ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಭಕ್ತಿ ಭಾವ ಪೂರಕವಾಗಿ ಆಚರಿಸಲಾಯಿತು. ಗುರುವಾರ ಬೆಳಿಗ್ಗೆ ಪಟ್ಟದ ರಾಣಿ ಅಮ್ಮನವರ ಮೂರ್ತಿಯನ್ನು ಶುಚಿಗೊಳಿಸಿ ,ನಂತರ ದುರ್ಗಾ ಹೋಮ ಮಹಾಗಣಪತಿ ಹೋಮ ನವಗ್ರಹ ಶಾಂತಿ ಹೋಮ ಪಂಚಾಮೃತ ಅಭಿಷೇಕ ನಡೆಸಿ, ನಂತರ ವಿವಿಧ ಪುಷ್ಪಗಳಿಂದ ದೇವರ ಮೂರ್ತಿಯನ್ನು ಅಲಂಕರಿಸಿ ವಿಶೇಷವಾಗಿ ಪೂಜಾ ಪುನಸ್ಕಾರಗಳನ್ನು ನಡೆಸಲಾಯಿತು. ಗ್ರಾಮ ದೇವತೆಯಾದ ಪಟ್ಟಲದಮ್ಮ, ಶ್ರೀ ಸಿದ್ದೇಶ್ವರ ಸ್ವಾಮಿ ಸತ್ತಿಗೆ ಹಾಗೂ ಪಟ್ಟದ ರಾಣಿ ದೇವರಿಗೆ ನಡುಕೇರಿ ವೀರಭದ್ರ ದೇವಸ್ಥಾನದ ಆವರಣದಲ್ಲಿ ಹೂ -ಹೊಂಬಾಳೆ ಮಾಡಿಕೊಂಡು ವಿಶೇಷವಾಗಿ ಅಲಂಕರಿಸಿ ಪೂಜಾ ಕುಣಿತದೊಡನೆ ಮೆರವಣಿಗೆ ಮುಖಾಂತರ ದೇವಸ್ಥಾನಕ್ಕೆ ದೇವರ ಮೂರ್ತಿಗಳನ್ನು ತರಲಾಯಿತು.ನಂತರ ಮಹಾಮಂಗಳಾರತಿ ನಡೆಸಿ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು. ದೇವಸ್ಥಾನದ ಆವರಣದಲ್ಲಿ ರವಿ ಮಾತನಾಡಿ, ನಾವು ಪ್ರತಿವರ್ಷ ಅಮ್ಮನವರಿಗೆ ಪೂಜೆ ಪುನಸ್ಕಾರವನ್ನು ನಡೆಸಿಕೊಂಡು ಬರುತ್ತಿದ್ದು ,ಇಂದು ನಾಲ್ಕನೇ ವರ್ಷದ ಪ್ರಯುಕ್ತ ವಿಶೇಷವಾಗಿ ಪೂಜಾ ಕಾರ್ಯಕ್ರಮವನ್ನು ನಡೆಸಿ ಬಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡಿದ್ದೇವೆ. ಅಪಾರ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಟ್ಟದ ರಾಣಿ ಅಮ್ಮನವರ ಸೇವಾ ಟ್ರಸ್ಟಿನ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
    1
    ಹಲಗೂರಿನಲ್ಲಿ ಶ್ರೀ ಪಟ್ಟದರಾಣಿ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ
ಮಳವಳ್ಳಿ :ತಾಲ್ಲೂಕಿನ ಹಲಗೂರು ಗ್ರಾಮದ  ಗಾಣಿಗರ ಬೀದಿಯಲ್ಲಿರುವ ಶ್ರೀ ಪಟ್ಟದರಾಣಿ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಭಕ್ತಿ ಭಾವ ಪೂರಕವಾಗಿ ಆಚರಿಸಲಾಯಿತು.
ಗುರುವಾರ ಬೆಳಿಗ್ಗೆ ಪಟ್ಟದ ರಾಣಿ ಅಮ್ಮನವರ ಮೂರ್ತಿಯನ್ನು ಶುಚಿಗೊಳಿಸಿ ,ನಂತರ ದುರ್ಗಾ ಹೋಮ ಮಹಾಗಣಪತಿ ಹೋಮ ನವಗ್ರಹ ಶಾಂತಿ ಹೋಮ ಪಂಚಾಮೃತ ಅಭಿಷೇಕ ನಡೆಸಿ, ನಂತರ ವಿವಿಧ ಪುಷ್ಪಗಳಿಂದ ದೇವರ ಮೂರ್ತಿಯನ್ನು ಅಲಂಕರಿಸಿ ವಿಶೇಷವಾಗಿ ಪೂಜಾ ಪುನಸ್ಕಾರಗಳನ್ನು ನಡೆಸಲಾಯಿತು.
ಗ್ರಾಮ ದೇವತೆಯಾದ ಪಟ್ಟಲದಮ್ಮ, ಶ್ರೀ ಸಿದ್ದೇಶ್ವರ ಸ್ವಾಮಿ ಸತ್ತಿಗೆ ಹಾಗೂ ಪಟ್ಟದ ರಾಣಿ ದೇವರಿಗೆ ನಡುಕೇರಿ ವೀರಭದ್ರ ದೇವಸ್ಥಾನದ ಆವರಣದಲ್ಲಿ 
ಹೂ -ಹೊಂಬಾಳೆ ಮಾಡಿಕೊಂಡು ವಿಶೇಷವಾಗಿ ಅಲಂಕರಿಸಿ ಪೂಜಾ ಕುಣಿತದೊಡನೆ ಮೆರವಣಿಗೆ ಮುಖಾಂತರ ದೇವಸ್ಥಾನಕ್ಕೆ ದೇವರ ಮೂರ್ತಿಗಳನ್ನು ತರಲಾಯಿತು.ನಂತರ ಮಹಾಮಂಗಳಾರತಿ ನಡೆಸಿ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು.
ದೇವಸ್ಥಾನದ ಆವರಣದಲ್ಲಿ ರವಿ ಮಾತನಾಡಿ, ನಾವು ಪ್ರತಿವರ್ಷ ಅಮ್ಮನವರಿಗೆ ಪೂಜೆ ಪುನಸ್ಕಾರವನ್ನು ನಡೆಸಿಕೊಂಡು ಬರುತ್ತಿದ್ದು ,ಇಂದು ನಾಲ್ಕನೇ ವರ್ಷದ ಪ್ರಯುಕ್ತ ವಿಶೇಷವಾಗಿ ಪೂಜಾ ಕಾರ್ಯಕ್ರಮವನ್ನು ನಡೆಸಿ ಬಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡಿದ್ದೇವೆ.
ಅಪಾರ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಟ್ಟದ ರಾಣಿ ಅಮ್ಮನವರ ಸೇವಾ ಟ್ರಸ್ಟಿನ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    6 hrs ago
  • ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ
    1
    ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ
ಅಲಗಾಡುತ್ತಿದೆ ರಾಷ್ಟ್ರೀಯ  ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ
ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ.
ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ  ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು
ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ.
ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ   ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    14 hrs ago
  • All About,Could you please Sir ji, Clear about your statement for "Concrete Road Aane ke Inkamath Hai" *ಭಾರತ ನಲ್ಲಿ ವೈರಲ್*
    1
    All About,Could you please Sir ji, Clear about your statement for "Concrete Road Aane ke Inkamath Hai"
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ಕೊಳ್ಳೇಗಾಲ. ಪಾಳ್ಯ ಕೆರೆಗಳಿಗೆ ನೀರು ಹರಿಸುವಂತೆ ಗ್ರಾಮದ ಕೆರೆ ಅಚ್ಚುಕಟ್ಟುದಾರರು ಮತ್ತು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ನೀರಾವರಿ ಕಚೇರಿ ಮುಂದೆ ಪಾಳ್ಯ ಗ್ರಾಮದ ರೈತರು ಕುಳಿತು ಘೋಷಣೆಯ ಮೂಲಕ ಪ್ರತಿಭಟಿಸಿ, ನಂತರ ಕಚೇರಿಯ ಟೆಕ್ನಿಕಲ್ ಅಸಿಸ್ಟೆಂಟ್ ಪುಣ್ಯಶ್ರೀ ರವರಿಗೆ ಮನವಿಪತ್ರ ಸಲ್ಲಿಸಿದರು. ನಂತರ ಯುವ ರೈತ ಹರೀಶ್ ಮಾತನಾಡಿ, ನಮ್ಮ ಪಾಳ್ಯ ಗ್ರಾಮದ ಕೆರೆಗಳಿಗೆ ನೀರು ಬೀಡದೇ ಕಬಿನಿ ಜಲಾಶಯದ ನೀರು ಕಳೆದ 15 ದಿನಗಳಿಂದ ಚಾನಲ್ ಮೂಲಕ ಕಾವೇರಿ ನದಿಗೆ ಹರಿಸುತ್ತಿದ್ದಾರೆ. ಇದ್ದರಿಂದ ಪಾಳ್ಯ ಗ್ರಾಮದ ಸಾವಿರಾರು ಎಕರೆ ಜಮೀನುಗಳು ಸರಿಯಾದ ಸಮಯಕ್ಕೆ ಮಳೆಯಾಗದೇ ಹಾಗೂ ಜಲಾಶಯದಿಂದ ನೀರು ಬೀಡದೇ ಒಣಗುತ್ತಿದೆ ಎಂದು ಆರೋಪಿಸಿದರು. ರೈತರು ಐದಾರು ಬಾರಿ ಬಂದು ಮನವಿ ಸಲ್ಲಿಸಿದ್ದರೂ ಕೂಡ ಯಾವುದೇ ಅಧಿಕಾರಿಗಳು ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದ್ದರಿಂದ ಕೂಡಲೇ ಪಾಳ್ಯ ಗ್ರಾಮದ ಚಿಕ್ಕ ಕೆರೆ ಹಾಗೂ ದೊಡ್ಡ ಕೆರೆಗೆ ನೀರು ತುಂಬಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯ ಮಾಡಿದರು. ಪ್ರತಿಭಟನೆಯಲ್ಲಿ ಪಾಳ್ಯ ಗ್ರಾಮದ ಸಿದ್ದಪ್ಪನಾಯಕ, ಸೀಗನಾಯಕ, ದೊಡ್ಡರಾಜನಾಯಕ, ತಂಬಡಿ ಬಸವರಾಜಪ್ಪ, ನಂಜುಂಡಸ್ವಾಮಿ, ಪಕಾಲಿನಾಯಕ, ದೊಡ್ಡಸೀಗನಾಯಕ, ರಾಜಪ್ಪ, ಪಾರ್ಥ, ರೈತ ಮುಖಂಡರು ಇದ್ದರು.
    4
    ಕೊಳ್ಳೇಗಾಲ. ಪಾಳ್ಯ ಕೆರೆಗಳಿಗೆ ನೀರು ಹರಿಸುವಂತೆ ಗ್ರಾಮದ ಕೆರೆ ಅಚ್ಚುಕಟ್ಟುದಾರರು ಮತ್ತು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ನೀರಾವರಿ ಕಚೇರಿ ಮುಂದೆ ಪಾಳ್ಯ ಗ್ರಾಮದ ರೈತರು ಕುಳಿತು ಘೋಷಣೆಯ ಮೂಲಕ ಪ್ರತಿಭಟಿಸಿ, ನಂತರ ಕಚೇರಿಯ ಟೆಕ್ನಿಕಲ್ ಅಸಿಸ್ಟೆಂಟ್ ಪುಣ್ಯಶ್ರೀ ರವರಿಗೆ ಮನವಿಪತ್ರ ಸಲ್ಲಿಸಿದರು.
ನಂತರ ಯುವ ರೈತ ಹರೀಶ್ ಮಾತನಾಡಿ, ನಮ್ಮ ಪಾಳ್ಯ ಗ್ರಾಮದ ಕೆರೆಗಳಿಗೆ ನೀರು ಬೀಡದೇ ಕಬಿನಿ ಜಲಾಶಯದ ನೀರು ಕಳೆದ 15 ದಿನಗಳಿಂದ ಚಾನಲ್ ಮೂಲಕ ಕಾವೇರಿ ನದಿಗೆ ಹರಿಸುತ್ತಿದ್ದಾರೆ. ಇದ್ದರಿಂದ ಪಾಳ್ಯ ಗ್ರಾಮದ ಸಾವಿರಾರು ಎಕರೆ ಜಮೀನುಗಳು ಸರಿಯಾದ ಸಮಯಕ್ಕೆ ಮಳೆಯಾಗದೇ ಹಾಗೂ ಜಲಾಶಯದಿಂದ ನೀರು ಬೀಡದೇ ಒಣಗುತ್ತಿದೆ ಎಂದು ಆರೋಪಿಸಿದರು.
ರೈತರು ಐದಾರು ಬಾರಿ ಬಂದು ಮನವಿ ಸಲ್ಲಿಸಿದ್ದರೂ ಕೂಡ ಯಾವುದೇ ಅಧಿಕಾರಿಗಳು ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದ್ದರಿಂದ ಕೂಡಲೇ ಪಾಳ್ಯ ಗ್ರಾಮದ ಚಿಕ್ಕ ಕೆರೆ ಹಾಗೂ ದೊಡ್ಡ ಕೆರೆಗೆ ನೀರು ತುಂಬಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯ ಮಾಡಿದರು. 
ಪ್ರತಿಭಟನೆಯಲ್ಲಿ ಪಾಳ್ಯ ಗ್ರಾಮದ ಸಿದ್ದಪ್ಪನಾಯಕ, ಸೀಗನಾಯಕ, ದೊಡ್ಡರಾಜನಾಯಕ, ತಂಬಡಿ ಬಸವರಾಜಪ್ಪ, ನಂಜುಂಡಸ್ವಾಮಿ, ಪಕಾಲಿನಾಯಕ, ದೊಡ್ಡಸೀಗನಾಯಕ,  ರಾಜಪ್ಪ, ಪಾರ್ಥ, ರೈತ ಮುಖಂಡರು ಇದ್ದರು.
    user_ಎನ್. ನಟರಾಜ್
    ಎನ್. ನಟರಾಜ್
    Kollegal, Chamarajanagara•
    4 hrs ago
  • ಮೈಸೂರು ಅರಣ್ಯ ಭವನದಲ್ಲಿ ಆನೆಗಳ ವೀಕ್ಷಣೆಗೆ ನಿರ್ಬಂಧಗಳ ಬಿಗಿ – ದೂರದಿಂದಲೇ ದರ್ಶನ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ನಗರದಲ್ಲಿ ಗಜಪಡೆಯ ಸಂಚಾರ ಆರಂಭವಾಗಿದ್ದು, ಅರಣ್ಯ ಭವನದಲ್ಲಿ ತಂಗಿರುವ ಆನೆಗಳನ್ನು ನೋಡಲು ಸಾರ್ವಜನಿಕರು ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ ಆನೆಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ವೀಕ್ಷಣೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿದೆ. ಅರಣ್ಯ ಭವನದ ಆವರಣದಲ್ಲಿ ಇರುವ ಆನೆಗಳ ಬಳಿ ತೆರಳಿ ಸೆಲ್ಫಿ, ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಆನೆಗಳೊಂದಿಗೆ ಅತೀ ಸಮೀಪದಲ್ಲಿ ನಿಂತು ಚಿತ್ರ ತೆಗೆಯುವುದು ಅಪಾಯಕಾರಿಯಾಗಿರುವುದರಿಂದ ಸಾರ್ವಜನಿಕರು ನಿಗದಿತ ಅಂತರದಿಂದಲೇ ಆನೆಗಳನ್ನು ವೀಕ್ಷಿಸುವಂತೆ ಸೂಚಿಸಲಾಗಿದೆ. ಇದರಿಂದ ಆನೆಗಳಿಗೆ ಯಾವುದೇ ರೀತಿಯ ತೊಂದರೆ, ಆತಂಕ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ. ಆನೆಗಳನ್ನು ಹತ್ತಿರದಿಂದ ನೋಡಲು ಸಾಧ್ಯವಾಗದಿದ್ದರೂ, ಅರಣ್ಯ ಭವನದ ಸುತ್ತಮುತ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ದೂರದಿಂದಲೇ ಗಜಪಡೆಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಅರಣ್ಯ ಭವನದ ಮುಖ್ಯ ಗೇಟ್ ಬಳಿಯಲ್ಲಿ ಜನರು ನಿಂತು ಆನೆಗಳ ಚಲನವಲನವನ್ನು ವೀಕ್ಷಿಸುತ್ತಿರುವ ದೃಶ್ಯ ಕಂಡುಬರುತ್ತಿದೆ. ದಸರಾ ಗಜಪಡೆ ಮೈಸೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಆನೆಗಳನ್ನು ನೋಡಲು ಪ್ರವಾಸಿಗರು ಮತ್ತು ಸ್ಥಳೀಯರಲ್ಲಿ ಉತ್ಸಾಹ ಹೆಚ್ಚಾಗಿದೆ. ಆನೆಗಳೊಂದಿಗೆ ಫೋಟೋ ಅಥವಾ ಸೆಲ್ಫಿ ಪಡೆಯುವ ಆಸೆ ಸಹಜವಾದರೂ, ಅವು ಕಾಡುಪ್ರಾಣಿಗಳಾಗಿರುವುದರಿಂದ ಕ್ಷಣಮಾತ್ರದ ಅಜಾಗರೂಕತೆಯೂ ಅಪಾಯಕ್ಕೆ ಕಾರಣವಾಗಬಹುದು. ಹೀಗಾಗಿ ಸಾರ್ವಜನಿಕರು ಅರಣ್ಯ ಇಲಾಖೆ ವಿಧಿಸಿರುವ ನಿಯಮಗಳನ್ನು ಪಾಲಿಸಿ, ಆನೆಗಳಿಂದ ಸುರಕ್ಷಿತ ಅಂತರ ಕಾಯ್ದುಕೊಂಡು ವೀಕ್ಷಣೆ ಮಾಡಬೇಕಾಗಿದೆ. ಆನೆಗಳಿಗೂ ಯಾವುದೇ ತೊಂದರೆಯಾಗದಂತೆ ಸಹಕರಿಸುವುದು ದಸರಾ ಸಂಭ್ರಮವನ್ನು ಸುರಕ್ಷಿತವಾಗಿ ಕಣ್ತುಂಬಿಕೊಳ್ಳಲು ಅಗತ್ಯವಾಗಿದೆ. ಅರಣ್ಯ ಭವನದ ಗೇಟ್ ಸುತ್ತಲೂ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಯೂ ಜನರ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ.
    3
    ಮೈಸೂರು ಅರಣ್ಯ ಭವನದಲ್ಲಿ ಆನೆಗಳ ವೀಕ್ಷಣೆಗೆ ನಿರ್ಬಂಧಗಳ ಬಿಗಿ – ದೂರದಿಂದಲೇ ದರ್ಶನ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ನಗರದಲ್ಲಿ ಗಜಪಡೆಯ ಸಂಚಾರ ಆರಂಭವಾಗಿದ್ದು, ಅರಣ್ಯ ಭವನದಲ್ಲಿ ತಂಗಿರುವ ಆನೆಗಳನ್ನು ನೋಡಲು ಸಾರ್ವಜನಿಕರು ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ ಆನೆಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ವೀಕ್ಷಣೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿದೆ.
ಅರಣ್ಯ ಭವನದ ಆವರಣದಲ್ಲಿ ಇರುವ ಆನೆಗಳ ಬಳಿ ತೆರಳಿ ಸೆಲ್ಫಿ, ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಆನೆಗಳೊಂದಿಗೆ ಅತೀ ಸಮೀಪದಲ್ಲಿ ನಿಂತು ಚಿತ್ರ ತೆಗೆಯುವುದು ಅಪಾಯಕಾರಿಯಾಗಿರುವುದರಿಂದ ಸಾರ್ವಜನಿಕರು ನಿಗದಿತ ಅಂತರದಿಂದಲೇ ಆನೆಗಳನ್ನು ವೀಕ್ಷಿಸುವಂತೆ ಸೂಚಿಸಲಾಗಿದೆ. ಇದರಿಂದ ಆನೆಗಳಿಗೆ ಯಾವುದೇ ರೀತಿಯ ತೊಂದರೆ, ಆತಂಕ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ.
ಆನೆಗಳನ್ನು ಹತ್ತಿರದಿಂದ ನೋಡಲು ಸಾಧ್ಯವಾಗದಿದ್ದರೂ, ಅರಣ್ಯ ಭವನದ ಸುತ್ತಮುತ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ದೂರದಿಂದಲೇ ಗಜಪಡೆಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಅರಣ್ಯ ಭವನದ ಮುಖ್ಯ ಗೇಟ್ ಬಳಿಯಲ್ಲಿ ಜನರು ನಿಂತು ಆನೆಗಳ ಚಲನವಲನವನ್ನು ವೀಕ್ಷಿಸುತ್ತಿರುವ ದೃಶ್ಯ ಕಂಡುಬರುತ್ತಿದೆ.
ದಸರಾ ಗಜಪಡೆ ಮೈಸೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಆನೆಗಳನ್ನು ನೋಡಲು ಪ್ರವಾಸಿಗರು ಮತ್ತು ಸ್ಥಳೀಯರಲ್ಲಿ ಉತ್ಸಾಹ ಹೆಚ್ಚಾಗಿದೆ. ಆನೆಗಳೊಂದಿಗೆ ಫೋಟೋ ಅಥವಾ ಸೆಲ್ಫಿ ಪಡೆಯುವ ಆಸೆ ಸಹಜವಾದರೂ, ಅವು ಕಾಡುಪ್ರಾಣಿಗಳಾಗಿರುವುದರಿಂದ ಕ್ಷಣಮಾತ್ರದ ಅಜಾಗರೂಕತೆಯೂ ಅಪಾಯಕ್ಕೆ ಕಾರಣವಾಗಬಹುದು.
ಹೀಗಾಗಿ ಸಾರ್ವಜನಿಕರು ಅರಣ್ಯ ಇಲಾಖೆ ವಿಧಿಸಿರುವ ನಿಯಮಗಳನ್ನು ಪಾಲಿಸಿ, ಆನೆಗಳಿಂದ ಸುರಕ್ಷಿತ ಅಂತರ ಕಾಯ್ದುಕೊಂಡು ವೀಕ್ಷಣೆ ಮಾಡಬೇಕಾಗಿದೆ. ಆನೆಗಳಿಗೂ ಯಾವುದೇ ತೊಂದರೆಯಾಗದಂತೆ ಸಹಕರಿಸುವುದು ದಸರಾ ಸಂಭ್ರಮವನ್ನು ಸುರಕ್ಷಿತವಾಗಿ ಕಣ್ತುಂಬಿಕೊಳ್ಳಲು ಅಗತ್ಯವಾಗಿದೆ. ಅರಣ್ಯ ಭವನದ ಗೇಟ್ ಸುತ್ತಲೂ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಯೂ ಜನರ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    3 hrs ago
  • ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆಯಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ; ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಕನಕಪುರ:ನಗರದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆ (ಟಿ.ಎ.ಪಿ.ಸಿ.ಎಂ.ಎಸ್) ನಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಂಘದ ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಹೇಳಿದರು. ಬುಧವಾರ ನಗರದ ರೈಸ್‍ಮಿಲ್ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ಬಡವರಿಗೆ ನೀಡುವ ಪಡಿತರ ಅಕ್ಕಿ ಮತ್ತು ರಾಗಿಯನ್ನು ಅನಧಿಕೃತವಾಗಿ ಸಂಗ್ರಹಿಸುವುದು ಮತ್ತು ಮಾರಾಟ ಮಾಡುವುದು ಸರ್ಕಾರ ನಿಯಮಗಳ ಪ್ರಕಾರವೇ ಪಡಿತರ ಅಕ್ಕಿಯನ್ನು ಮಾರಾಟ ಮಾಡಲಾಗುತ್ತಿದೆ. ಕೆಲವು ಸಂಘಟನೆಯ ವ್ಯಕ್ತಿಗಳು ದುರುದ್ದೇಶ ಪೂರ್ವಕವಾಗಿ ಪಡಿತರ ಪದಾರ್ಥಗಳ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ನಗರದ ಸಹಕಾರಿ ಸಂಘದ ಗೋಡೌನ್‍ನಿಂದ ಪಡಿತರ ಅಕ್ಕಿ ಹಾಗೂ ರಾಗಿ ಕಳ್ಳ ಸಾಗಣೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಿಕರಣ ನೀಡಿದ ಅವರು, ಪಡಿತರ ಆಹಾರ ಸಾಗಿಸಲು ಸಂಘದ ಸಾಗಾಣಿಕಾ ಲಾರಿಗಳ ಕೊರತೆಯಿಂದ ಪಡಿತರ ಸಾಗಿಸಲು ಸಂಘದ ಆಡಳಿತಾಧಿಕಾರಿಯ ಅನುಮತಿ ಪಡೆದು ಖಾಸಗಿ ಮಿನಿ ಲಾರಿಯಲ್ಲಿ ಪಡಿತರ ಆಹಾರ ಸಾಗಿಸಲಾಗುತ್ತಿತ್ತು, ಈ ಸಂದರ್ಭದಲ್ಲಿ ಆರ್.ಟಿ.ಐ. ಕಾರ್ಯಕರ್ತನೆಂದು ಹೇಳಿಕೊಂಡು ಬಂದ ಕೆ.ಆರ್.ಸುರೇಶ್ ಎಂಬಾತ ಅಕ್ರಮವಾಗಿ ಗೋದಾಮು ಬಳಿ ಬಂದು ಸರಕು ತುಂಬಿದ್ದ ವಾಹನಗಳನ್ನು ತಡೆದು, ಕೆಲ ಸಂಘಟೆನಯ ಮುಖಂಡರುಗಳಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಸುಳ್ಳು ಮಾಹಿತಿ ನೀಡಿ, ಸಂಘಕ್ಕೆ ಹಾಗೂ ಆಡಳಿತ ಮಂಡಳಿಗೆ ಕೆಟ್ಟ ಹೆಸರು ಬರಲಿ ಎಂದು ಸಂಚು ನಡೆಸಿರುವುದಾಗಿ ಆರೋಪಿಸಿದರು. ಉಪಾಧ್ಯಕ್ಷ ಚಿಕ್ಕಣ್ಣ ಮಾತನಾಡಿ, ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವುದಕ್ಕೆ ಸರ್ಕಾರ ಹಲವಾರು ಕಠಿಣ ಕಾನೂನು ತಂದಿದ್ದಾರೆ. ನಮ್ಮ ಸಂಸ್ಥೆಯಿಂದ ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿರುವುದಿಲ್ಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ತರುಲು ನಡೆಸಿರುವ ಹುನ್ನಾರ ಇದಾಗಿದೆ. ಸ್ಥಳೀಯವಾಗಿ ಹಿಂದೂ ಸಂಘಟನೆಯ ಹೆಸರಿನ ಕೆ.ಆರ್.ಸುರೇಶ್ ಹಾಗೂ ಸ್ಥಳೀಯ ಪತ್ರಕರ್ತರಿಬ್ಬರು ಸೇರಿದ ನಮ್ಮ ಸಂಸ್ಥೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಿರಾಕರಿಸಿದ ಹಿನ್ನಲೆಯಲ್ಲಿ ನಮ್ಮ ಸಹಕಾರಿ ಸಂಘದ ತೇಜೋವಧೆ ಮಾಡಲು ಮುಂದಾಗಿದ್ದಾರೆ. ಮುಂದೆ ಇವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು. ನಿರ್ದೇಶಕರಾದ ದೇವರಾಜು, ಶಿವಣ್ಣ ನವರು ಮಾತನಾಡಿ, ನಮ್ಮ ಆಡಳಿತ ಮಂಡಳಿಯ ಅಧಿಕಾರಾವಧಿಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದರು. ನಿರ್ದೇಶಕರಾದ ಶ್ರೀನಿವಾಸ್, ನಾಗರಾಜು, ನಾಗೇಶ್, ಸಿದ್ದರಾಜು, ಪುಟ್ಟಸ್ವಾಮಯ್ಯ ಗೋಷ್ಠಿಯಲ್ಲಿ ಹಾಜರಿದ್ದರು.
    1
    ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆಯಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ; ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್
ಕನಕಪುರ:ನಗರದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆ (ಟಿ.ಎ.ಪಿ.ಸಿ.ಎಂ.ಎಸ್) ನಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಂಘದ ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಹೇಳಿದರು. 
ಬುಧವಾರ ನಗರದ ರೈಸ್‍ಮಿಲ್ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ಬಡವರಿಗೆ ನೀಡುವ ಪಡಿತರ ಅಕ್ಕಿ ಮತ್ತು ರಾಗಿಯನ್ನು ಅನಧಿಕೃತವಾಗಿ ಸಂಗ್ರಹಿಸುವುದು ಮತ್ತು ಮಾರಾಟ ಮಾಡುವುದು ಸರ್ಕಾರ ನಿಯಮಗಳ ಪ್ರಕಾರವೇ ಪಡಿತರ ಅಕ್ಕಿಯನ್ನು ಮಾರಾಟ ಮಾಡಲಾಗುತ್ತಿದೆ. ಕೆಲವು ಸಂಘಟನೆಯ ವ್ಯಕ್ತಿಗಳು ದುರುದ್ದೇಶ ಪೂರ್ವಕವಾಗಿ ಪಡಿತರ ಪದಾರ್ಥಗಳ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. 
ನಗರದ ಸಹಕಾರಿ ಸಂಘದ ಗೋಡೌನ್‍ನಿಂದ ಪಡಿತರ ಅಕ್ಕಿ ಹಾಗೂ ರಾಗಿ ಕಳ್ಳ ಸಾಗಣೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಿಕರಣ ನೀಡಿದ ಅವರು, ಪಡಿತರ ಆಹಾರ ಸಾಗಿಸಲು ಸಂಘದ ಸಾಗಾಣಿಕಾ ಲಾರಿಗಳ ಕೊರತೆಯಿಂದ ಪಡಿತರ ಸಾಗಿಸಲು ಸಂಘದ ಆಡಳಿತಾಧಿಕಾರಿಯ ಅನುಮತಿ ಪಡೆದು ಖಾಸಗಿ ಮಿನಿ ಲಾರಿಯಲ್ಲಿ ಪಡಿತರ ಆಹಾರ ಸಾಗಿಸಲಾಗುತ್ತಿತ್ತು, ಈ ಸಂದರ್ಭದಲ್ಲಿ ಆರ್.ಟಿ.ಐ. ಕಾರ್ಯಕರ್ತನೆಂದು ಹೇಳಿಕೊಂಡು ಬಂದ ಕೆ.ಆರ್.ಸುರೇಶ್ ಎಂಬಾತ ಅಕ್ರಮವಾಗಿ ಗೋದಾಮು ಬಳಿ ಬಂದು ಸರಕು ತುಂಬಿದ್ದ ವಾಹನಗಳನ್ನು ತಡೆದು, ಕೆಲ ಸಂಘಟೆನಯ ಮುಖಂಡರುಗಳಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಸುಳ್ಳು ಮಾಹಿತಿ ನೀಡಿ, ಸಂಘಕ್ಕೆ ಹಾಗೂ ಆಡಳಿತ ಮಂಡಳಿಗೆ ಕೆಟ್ಟ ಹೆಸರು ಬರಲಿ ಎಂದು ಸಂಚು ನಡೆಸಿರುವುದಾಗಿ ಆರೋಪಿಸಿದರು.  
ಉಪಾಧ್ಯಕ್ಷ ಚಿಕ್ಕಣ್ಣ ಮಾತನಾಡಿ, ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವುದಕ್ಕೆ ಸರ್ಕಾರ ಹಲವಾರು ಕಠಿಣ ಕಾನೂನು ತಂದಿದ್ದಾರೆ. ನಮ್ಮ ಸಂಸ್ಥೆಯಿಂದ ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿರುವುದಿಲ್ಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ತರುಲು ನಡೆಸಿರುವ ಹುನ್ನಾರ ಇದಾಗಿದೆ. ಸ್ಥಳೀಯವಾಗಿ ಹಿಂದೂ ಸಂಘಟನೆಯ ಹೆಸರಿನ ಕೆ.ಆರ್.ಸುರೇಶ್ ಹಾಗೂ ಸ್ಥಳೀಯ ಪತ್ರಕರ್ತರಿಬ್ಬರು ಸೇರಿದ ನಮ್ಮ ಸಂಸ್ಥೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಿರಾಕರಿಸಿದ ಹಿನ್ನಲೆಯಲ್ಲಿ ನಮ್ಮ ಸಹಕಾರಿ ಸಂಘದ ತೇಜೋವಧೆ ಮಾಡಲು ಮುಂದಾಗಿದ್ದಾರೆ. ಮುಂದೆ ಇವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು. 
ನಿರ್ದೇಶಕರಾದ ದೇವರಾಜು, ಶಿವಣ್ಣ ನವರು ಮಾತನಾಡಿ, ನಮ್ಮ ಆಡಳಿತ ಮಂಡಳಿಯ ಅಧಿಕಾರಾವಧಿಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದರು. 
ನಿರ್ದೇಶಕರಾದ ಶ್ರೀನಿವಾಸ್, ನಾಗರಾಜು, ನಾಗೇಶ್, ಸಿದ್ದರಾಜು, ಪುಟ್ಟಸ್ವಾಮಯ್ಯ ಗೋಷ್ಠಿಯಲ್ಲಿ ಹಾಜರಿದ್ದರು.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter ಕನಕಪುರ, ರಾಮನಗರ, ಕರ್ನಾಟಕ•
    12 hrs ago
  • ಹಿರಿಯ ಕಾರ್ಮಿಕರಿಗೆ ಶೇ.50 ಕೆಲಸದ ವಿನಾಯಿತಿ ಕುರಿತು ಜಿಪಂನಿಂದ ಜಾಗೃತಿ ಮಂಡ್ಯ-ಯೋಜನೆಯಡಿ ನಿಯಮಿತವಾಗಿ ಕೆಲಸ ದೊರೆಯುತ್ತಿದೆಯೇ, ಕೂಲಿ ಪಾವತಿಯಲ್ಲಿ ವಿಳಂಬವಾಗುತ್ತಿದೆಯೇ ಹಾಗೂ ಇತರೆ ಸಮಸ್ಯೆಗಳಿವೆಯೇ ಎಂಬುದರ ಬಗ್ಗೆ ಕೂಲಿ ಕಾರ್ಮಿಕರಿಂದ ಮಾಹಿತಿ ಪಡೆದ ಅವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಅಗತ್ಯ ಕಾಮಗಾರಿಗಳನ್ನು ಪೂರ್ವಭಾವಿಯಾಗಿ ಗುರುತಿಸಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಾಲುವೆ ಹಾಗೂ ಕೆರೆ ಹೂಳೆತ್ತುವ ಕಾಮಗಾರಿಗಳಲ್ಲಿ ಕೆಲವು ಕಡೆ ಮಣ್ಣು ಗಟ್ಟಿಯಾಗಿರುವುದರಿಂದ ಹೆಚ್ಚಿನ ಶ್ರಮ ವಹಿಸಬೇಕಾಗುತ್ತಿದೆ ಎಂದು ಕಾರ್ಮಿಕರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ, ಮಣ್ಣಿನ ಸ್ವರೂಪ ಹಾಗೂ ಕಾಮಗಾರಿಯ ಕಠಿಣತೆಯನ್ನು ಪರಿಗಣಿಸಿ ಕೆಲಸವನ್ನು ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಕಠಿಣ ಕೆಲಸವನ್ನು ಕೆಲವೇ ಕಾರ್ಮಿಕರಿಗೆ ನಿರಂತರವಾಗಿ ನೀಡದೆ, ಎಲ್ಲರಿಗೂ ಸರದಿಯಂತೆ ಹಂಚಿಕೆ ಮಾಡುವ ಜವಾಬ್ದಾರಿಯನ್ನು ಮೇಟ್‌ಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು. ಹಿರಿಯ ಕಾರ್ಮಿಕರಿಗೆ ಶೇ.50 ಕೆಲಸದ ವಿನಾಯಿತಿ ಕುರಿತು ಜಾಗೃತಿ 60 ವರ್ಷ ಮೇಲ್ಪಟ್ಟ ಹಿರಿಯ ಕೂಲಿ ಕಾರ್ಮಿಕರಿಗೆ ನಿಯಮಾನುಸಾರ ಲಭ್ಯವಿರುವ ಶೇ.50ರಷ್ಟು ಕೆಲಸದ ವಿನಾಯಿತಿ ಕುರಿತು ಅರಿವು ಮೂಡಿಸಬೇಕು ಎಂದು ಸಿಇಒ ತಿಳಿಸಿದರು. ಹಿರಿಯರು, ಮಹಿಳೆಯರು ಹಾಗೂ ಕೂಲಿ ಕಾರ್ಮಿಕರ ದೈಹಿಕ ಸಾಮರ್ಥ್ಯವನ್ನು ಪರಿಗಣಿಸಿ ಮಾನವೀಯ ದೃಷ್ಟಿಕೋನದಿಂದ ಕೆಲಸ ಹಂಚಿಕೆ ಮಾಡಬೇಕು ಎಂದು ನಿರ್ದೇಶನ ನೀಡಿದರು.
    1
    ಹಿರಿಯ ಕಾರ್ಮಿಕರಿಗೆ ಶೇ.50 ಕೆಲಸದ ವಿನಾಯಿತಿ ಕುರಿತು ಜಿಪಂನಿಂದ  ಜಾಗೃತಿ
ಮಂಡ್ಯ-ಯೋಜನೆಯಡಿ ನಿಯಮಿತವಾಗಿ ಕೆಲಸ ದೊರೆಯುತ್ತಿದೆಯೇ, ಕೂಲಿ ಪಾವತಿಯಲ್ಲಿ ವಿಳಂಬವಾಗುತ್ತಿದೆಯೇ ಹಾಗೂ ಇತರೆ ಸಮಸ್ಯೆಗಳಿವೆಯೇ ಎಂಬುದರ ಬಗ್ಗೆ ಕೂಲಿ ಕಾರ್ಮಿಕರಿಂದ ಮಾಹಿತಿ ಪಡೆದ ಅವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಅಗತ್ಯ ಕಾಮಗಾರಿಗಳನ್ನು ಪೂರ್ವಭಾವಿಯಾಗಿ ಗುರುತಿಸಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾಲುವೆ ಹಾಗೂ ಕೆರೆ ಹೂಳೆತ್ತುವ ಕಾಮಗಾರಿಗಳಲ್ಲಿ ಕೆಲವು ಕಡೆ ಮಣ್ಣು ಗಟ್ಟಿಯಾಗಿರುವುದರಿಂದ ಹೆಚ್ಚಿನ ಶ್ರಮ ವಹಿಸಬೇಕಾಗುತ್ತಿದೆ ಎಂದು ಕಾರ್ಮಿಕರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ, ಮಣ್ಣಿನ ಸ್ವರೂಪ ಹಾಗೂ ಕಾಮಗಾರಿಯ ಕಠಿಣತೆಯನ್ನು ಪರಿಗಣಿಸಿ ಕೆಲಸವನ್ನು ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಕಠಿಣ ಕೆಲಸವನ್ನು ಕೆಲವೇ ಕಾರ್ಮಿಕರಿಗೆ ನಿರಂತರವಾಗಿ ನೀಡದೆ, ಎಲ್ಲರಿಗೂ ಸರದಿಯಂತೆ ಹಂಚಿಕೆ ಮಾಡುವ ಜವಾಬ್ದಾರಿಯನ್ನು ಮೇಟ್‌ಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಹಿರಿಯ ಕಾರ್ಮಿಕರಿಗೆ ಶೇ.50 ಕೆಲಸದ ವಿನಾಯಿತಿ ಕುರಿತು ಜಾಗೃತಿ
60 ವರ್ಷ ಮೇಲ್ಪಟ್ಟ ಹಿರಿಯ ಕೂಲಿ ಕಾರ್ಮಿಕರಿಗೆ ನಿಯಮಾನುಸಾರ ಲಭ್ಯವಿರುವ ಶೇ.50ರಷ್ಟು ಕೆಲಸದ ವಿನಾಯಿತಿ ಕುರಿತು ಅರಿವು ಮೂಡಿಸಬೇಕು ಎಂದು ಸಿಇಒ ತಿಳಿಸಿದರು. ಹಿರಿಯರು, ಮಹಿಳೆಯರು ಹಾಗೂ ಕೂಲಿ ಕಾರ್ಮಿಕರ ದೈಹಿಕ ಸಾಮರ್ಥ್ಯವನ್ನು ಪರಿಗಣಿಸಿ ಮಾನವೀಯ ದೃಷ್ಟಿಕೋನದಿಂದ ಕೆಲಸ ಹಂಚಿಕೆ ಮಾಡಬೇಕು ಎಂದು ನಿರ್ದೇಶನ ನೀಡಿದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    11 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.