Shuru
Apke Nagar Ki App…
ತೀರ್ಥಹಳ್ಳಿ ಶ್ರೀ ಮಾರಿಕಾಂಬ ದೇವಿಯ ಜಾತ್ರೆ : ಪ್ರಧಾನ ಅರ್ಚಕರಾದ ಐತಾಳ್‌ರವರು ಹೇಳಿದ್ದೇನು.....? ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ಇಂದಿನಿಂದ ಪ್ರಾರಂಭವಾಗಿದ್ದು ಏನೆಲ್ಲಾ ವಿಶೇಷತೆ ಇರುತ್ತದೆ ಎಂಬುದನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ಐತಾಳ್‌ರವರು ತಿಳಿಸಿದ್ದಾರೆ.
ರಶ್ಮಿ ಶ್ರೀಕಾಂತ್ ನಾಯಕ್
ತೀರ್ಥಹಳ್ಳಿ ಶ್ರೀ ಮಾರಿಕಾಂಬ ದೇವಿಯ ಜಾತ್ರೆ : ಪ್ರಧಾನ ಅರ್ಚಕರಾದ ಐತಾಳ್‌ರವರು ಹೇಳಿದ್ದೇನು.....? ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ಇಂದಿನಿಂದ ಪ್ರಾರಂಭವಾಗಿದ್ದು ಏನೆಲ್ಲಾ ವಿಶೇಷತೆ ಇರುತ್ತದೆ ಎಂಬುದನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ಐತಾಳ್‌ರವರು ತಿಳಿಸಿದ್ದಾರೆ.
More news from ಕರ್ನಾಟಕ and nearby areas
- ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿರುವುದಿಲ್ಲ ಎಂಬುದು ತಿಳಿದು ಬಂದಿದೆ.1
- ಸಮರ್ಥ ಶಿವಯೋಗಿ ಕಾಗಿನಲ್ಲಿ ಎಂಬ ಆರು ವರ್ಷದ ಬಾಲಕ ಗುತ್ತಲ ಪಟ್ಟಣದಿಂದ ಕುರವತ್ತಿ ಬಸವೇಶ್ವರ ರಥೋತ್ಸವಕ್ಕೆ ಬರಿಗಾಲಲ್ಲಿ ಪಾದಯಾತ್ರೆಯನ್ನು 2. ತಾಸು 30 ನಿಮಿಷ್ಯಕ್ಕೆ ಕುರವತ್ತಿ ತಲುಪಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.4
- ಅರಕಲಗೂಡು ತಾಲೂಕು ಕೊಡಕಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ, ಶ್ರೀ ಮಾರಮ್ಮ ಮತ್ತು ಶ್ರೀ ಗ್ರಾಮ ದೇವತೆ, ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನಗಳ ಉದ್ಘಾಟನಾ ಸಮಾರಂಭ ಫೆಬ್ರವರಿ 19ರಿಂದ 27ರ ತನಕ ಜರುಗಲಿದೆ ಎಂದು ಗ್ರಾಮದ ಮುಖಂಡ ಕೊಡಕಹಳ್ಳಿ ಅಶೋಕ್ ತಿಳಿಸಿದರು. ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳು, ಉತ್ಸವ ಅದ್ದೂರಿಯಾಗಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಮಂಜು ಸೇರಿದಂತೆ ವಿವಿಧ ಗಣ್ಯರು, ಮಠಾಧೀಶರು, ಮುಖಂಡರು ಭಾಗವಹಿಸುವರು. ಈ ದೇವರ ಕಾರ್ಯದಲ್ಲಿ ಕೊಡಕಹಳ್ಳಿ ಸೇರಿದಂತೆ ಸುತ್ತಾಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು. #templeopening #Kodakahalli #villegevibes❤️ #Arkalgud #temple #News5Kannada1
- "ಶ್ರೀಶಾರದಾಶ್ರಮದಿಂದ ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ":- ಮಾತಾಜೀ ತ್ಯಾಗಮಯೀ. ಚಳ್ಳಕೆರೆ:-ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಿಂದ ಪ್ರತಿ ತಿಂಗಳು ಚಳ್ಳಕೆರೆ ತಾಲೂಕಿನ ಅಲೆಮಾರಿ ಕುಟುಂಬಗಳಿಗೆ ದಿನಬಳಕೆಯ ವಸ್ತುಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು. ನಗರದ ಹೊರವಲಯದ ಭರಮಸಾಗರ ರಸ್ತೆಯ ಮೈರಾಡ್ ಕಾಲೋನಿಯ ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಸಿ ಕಿಟ್ ಮತ್ತು ಪಾತ್ರೆ-ತಟ್ಟೆ-ಲೋಟ ವಿತರಿಸಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಬುಡಗ ಜಂಗಮ ಅಲೆಮಾರಿಗಳ ಮುಖಂಡ ಬಲರಾಮ ಮಾತನಾಡಿ ದಾನದಿಂದ ಮನುಷ್ಯ ಧನ್ಯತೆಯನ್ನು ಪಡೆಯುತ್ತಾನೆ. ಇಂತಹ ಪವಿತ್ರವಾದ ಕಾರ್ಯಕ್ರಮವನ್ನು ನಗರದ ಶ್ರೀಶಾರದಾಶ್ರಮವು ಮಾಡುತ್ತಿರುವುದು ನಮ್ಮಂತಹ ಅಲೆಮಾರಿ ಕುಟುಂಬಗಳಿಗೆ ಉಪಯೋಗವಾಗುತ್ತಿದ್ದು ನೆಮ್ಮದಿಯ ಜೀವನ ನಡೆಸಲು ಸಹಾಯವಾಗುತ್ತಿದೆ ಎಂದು ಕೃತಜ್ಞತೆ ಸಲ್ಲಿಸಿದರು. ಸಮಾಜ ಸೇವಕ ಮತ್ತು ಶ್ರೀಶಾರದಾಶ್ರಮದ ಸದ್ಭಕ್ತ ಯತೀಶ್ ಎಂ ಸಿದ್ದಾಪುರ ಮಾತನಾಡಿ ಸ್ವಾಮಿ ವಿವೇಕಾನಂದರು ತಿಳಿಸಿದಂತೆ ಇಂದು ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಬಳಕೆಯ ವಸ್ತುಗಳ ವಿತರಣೆಯ ಮೂಲಕ "ಜೀವ ಸೇವೆಯೇ ಈಶ ಸೇವೆ"ಯ ಸಿದ್ಧಾಂತವನ್ನು ಶ್ರೀಶಾರದಾಶ್ರಮವು ಅನುಸರಿಸಿ ಅನುಷ್ಠಾನಕ್ಕೆ ತರುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು. ದಿನಸಿ ಕಿಟ್ ಗಳ ವಿತರಣಾ ಸಮಾರಂಭದಲ್ಲಿ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ, ಎಂ ಗೀತಾ ನಾಗರಾಜ್,ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ,ಗೀತಾ ಪ್ರಕಾಶ್, ಅಂಬುಜಾ,ವಿದ್ಯಾ,ಕವಿತಾ, ಸರಸ್ವತಿ, ಸಂತೋಷ್, ಚೆನ್ನಕೇಶವ, ಹೃತಿಕ್,ಭಾವನಾ, ರಾಘವೇಂದ್ರ,ಡಾ.ಭೂಮಿಕ ಸೇರಿದಂತೆ ಬುಡಗ ಜಂಗಮ ನಿವಾಸಿಗಳು ಉಪಸ್ಥಿತರಿದ್ದರು.1
- ಕಲ್ಕುಂಟೆ ಗೇಟ್ ಬಳಿ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ಕಲ್ಕುಂಟೆ ಗೇಟ್ ಬಳಿ ಘಟನೆ ನಡೆದಿದ್ದು ಬೈ್ಕ ಸವಾರ ಗಂಬೀರವಾಗಿ ಗಾಯಗೊಂಡಿದ್ದು ಆತನನ್ನ ಚಿಕಿತ್ಸೆಗೆಂದು ಆಸ್ಪತ್ರೆಗೆ ಧಾಖಲಿಸಲಾಗಿದೆ1
- Post by ಚಂದು ಕನ್ನಡಿಗ ಚಳ್ಳಕೆರೆ1
- ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಸುರಪಗಟ್ಟಿ ಗ್ರಾಮದ ಶ್ರೀ ಹನುಮಂತಪ್ಪ ಮೆತ್ತಿಗಟ್ಟಿ ಇವರಿಗೆ ಸೇರಿದ ಮೆಕ್ಕೆ ಜೋಳದ ಮೇವುಗೆ ಆಕಸ್ಮಿಕ ಬೆಂಕಿ ತಗಲಿ ಅಪಾರ ಪ್ರಮಾಣದ ಮೇವು ಸುಟ್ಟು ಕರಲಾಗಿದೆ, ಗ್ರಾಮದ ನಾಗರಿಕರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ಆರಿಸಿದ್ದರು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಹಾನಿಯಾದ ಬಗ್ಗೆ ತಹಶೀಲ್ದಾರ್ ಗೆ ಮಾಹಿತಿ ನೀಡಲಾಯಿತು,2
- ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ಇಂದಿನಿಂದ ಪ್ರಾರಂಭವಾಗಿದ್ದು ಏನೆಲ್ಲಾ ವಿಶೇಷತೆ ಇರುತ್ತದೆ ಎಂಬುದನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ಐತಾಳ್‌ರವರು ತಿಳಿಸಿದ್ದಾರೆ.3