ಕೆ.ಆರ್.ಪೇಟೆಯ ಟಿ.ಎ.ಪಿ.ಸಿ.ಎಂ.ಎಸ್. ಸಂಸ್ಥೆಯ ಎಂ.ಕೆ. ಬೊಮ್ಮೇಗೌಡ ಸಮುದಾಯ ಭವನದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೂತ್ ಮಟ್ಟದ ಪ್ರತಿನಿಧಿಗಳಿಗಾಗಿ (ಬಿ.ಎಲ್.ಎ-೨) ಎಸ್.ಐ.ಆರ್. ಕುರಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರಕುಮಾರ್ ಅವರು, ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಪ್ರತಿನಿಧಿಗಳ ಮೇಲಿದೆ ಎಂದು ಸಲಹೆ ನೀಡಿದರು. ಚುನಾವಣಾ ಆಯೋಗದ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ನೀಡುವ ಎನ್ಯುಮರೇಷನ್ ಫಾರಂಗಳನ್ನು ಅರ್ಹ ಮತದಾರರು ಸರಿಯಾಗಿ ಭರ್ತಿ ಮಾಡುವಂತೆ ಮಾಡುವುದು, ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಫೋಟೋಗಳನ್ನು ಪಡೆಯುವುದು ಬಿ.ಎಲ್.ಎ-೨ ಪ್ರತಿನಿಧಿಗಳ ಕರ್ತವ್ಯವಾಗಿದೆ. ಅಧಿಕಾರಿಗಳು ಭೇಟಿ ನೀಡದ ಮನೆಗಳಿಗೆ ತೆರಳಿ ಮತದಾರರಿಗೆ ಫಾರಂ ಭರ್ತಿ ಮಾಡಲು ಸಹಕರಿಸುವಂತೆ ಅವರು ಸೂಚಿಸಿದರು. ಹೀಗೆ ಮಾಡುವುದರಿಂದ ಮತದಾರರು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವುದು ಖಚಿತ ಎಂದು ಅವರು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತಾಲ್ಲೂಕು ಕಾಂಗ್ರೆಸ್ ಎಸ್.ಐ.ಆರ್. ಉಸ್ತುವಾರಿ ಹಾಗೂ ಮಾಜಿ ಶಾಸಕ ಕೊಳ್ಳೇಗಾಲ ನಂಜುಂಡಸ್ವಾಮಿ ಮಾತನಾಡಿ, ಬಡವರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಮತಗಳನ್ನು ರಕ್ಷಿಸುವುದು ಬಿ.ಎಲ್.ಎ-೨ ಅವರ ಪ್ರಮುಖ ಜವಾಬ್ದಾರಿ ಎಂದು ತಿಳಿಸಿದರು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಸರ್ಕಾರಿ ಗ್ಯಾರಂಟಿ ಯೋಜನೆಗಳೂ ರದ್ದಾಗಲಿವೆ ಎಂಬುದನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವಂತೆ ಅವರು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳೀಗೌಡ, ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ. ಪ್ರಕಾಶ್ ಸೇರಿದಂತೆ ಪಕ್ಷದ ಹಲವು ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕೆ.ಆರ್.ಪೇಟೆಯ ಟಿ.ಎ.ಪಿ.ಸಿ.ಎಂ.ಎಸ್. ಸಂಸ್ಥೆಯ ಎಂ.ಕೆ. ಬೊಮ್ಮೇಗೌಡ ಸಮುದಾಯ ಭವನದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೂತ್ ಮಟ್ಟದ ಪ್ರತಿನಿಧಿಗಳಿಗಾಗಿ (ಬಿ.ಎಲ್.ಎ-೨) ಎಸ್.ಐ.ಆರ್. ಕುರಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರಕುಮಾರ್ ಅವರು, ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಪ್ರತಿನಿಧಿಗಳ ಮೇಲಿದೆ ಎಂದು ಸಲಹೆ ನೀಡಿದರು. ಚುನಾವಣಾ ಆಯೋಗದ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ನೀಡುವ ಎನ್ಯುಮರೇಷನ್ ಫಾರಂಗಳನ್ನು ಅರ್ಹ ಮತದಾರರು ಸರಿಯಾಗಿ ಭರ್ತಿ ಮಾಡುವಂತೆ ಮಾಡುವುದು, ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಫೋಟೋಗಳನ್ನು ಪಡೆಯುವುದು ಬಿ.ಎಲ್.ಎ-೨ ಪ್ರತಿನಿಧಿಗಳ ಕರ್ತವ್ಯವಾಗಿದೆ. ಅಧಿಕಾರಿಗಳು ಭೇಟಿ ನೀಡದ ಮನೆಗಳಿಗೆ ತೆರಳಿ ಮತದಾರರಿಗೆ ಫಾರಂ ಭರ್ತಿ ಮಾಡಲು ಸಹಕರಿಸುವಂತೆ ಅವರು ಸೂಚಿಸಿದರು. ಹೀಗೆ ಮಾಡುವುದರಿಂದ ಮತದಾರರು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವುದು ಖಚಿತ ಎಂದು ಅವರು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತಾಲ್ಲೂಕು ಕಾಂಗ್ರೆಸ್ ಎಸ್.ಐ.ಆರ್. ಉಸ್ತುವಾರಿ ಹಾಗೂ ಮಾಜಿ ಶಾಸಕ ಕೊಳ್ಳೇಗಾಲ ನಂಜುಂಡಸ್ವಾಮಿ ಮಾತನಾಡಿ, ಬಡವರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಮತಗಳನ್ನು ರಕ್ಷಿಸುವುದು ಬಿ.ಎಲ್.ಎ-೨ ಅವರ ಪ್ರಮುಖ ಜವಾಬ್ದಾರಿ ಎಂದು ತಿಳಿಸಿದರು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಸರ್ಕಾರಿ ಗ್ಯಾರಂಟಿ ಯೋಜನೆಗಳೂ ರದ್ದಾಗಲಿವೆ ಎಂಬುದನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವಂತೆ ಅವರು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳೀಗೌಡ, ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ. ಪ್ರಕಾಶ್ ಸೇರಿದಂತೆ ಪಕ್ಷದ ಹಲವು ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
- ಮೈಸೂರಿನ ಕೆ.ಆರ್. ಮೊಹಲ್ಲಾದ 100 ಅಡಿ ಚಾಮರಾಜ ಡಬಲ್ ರಸ್ತೆಯಲ್ಲಿರುವ ಜೀನತ್ ಉಲ್ ಮಸೀದಿಯ ಅಕ್ರಮಗಳಿಗೆ ಸಂಬಂಧಿಸಿದ ವಾಸ್ತವಾಂಶ ವರದಿಯನ್ನು ಮೈಸೂರು ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಜಿಲ್ಲಾ ವಕ್ಫ್ ಅಧಿಕಾರಿಗಳು ತಡೆಹಿಡಿದಿರುವುದರ ಹಿಂದೆ ಯಾವ ಕಾರಣವಿದೆ ಎಂಬ ಗಂಭೀರ ಪ್ರಶ್ನೆ ಮೂಡಿದೆ. ಈ ಮಸೀದಿಯಲ್ಲಿ ನಡೆದಿರುವ ಅಕ್ರಮಗಳ ವರದಿಯನ್ನು ತಡೆಹಿಡಿದಿರುವುದರ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು, ಇದು ಭಾರತದಲ್ಲಿ ವೈರಲ್ ಆಗುತ್ತಿದೆ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರು ಮತ್ತು ಜಿಲ್ಲಾ ವಕ್ಫ್ ಅಧಿಕಾರಿಗಳು ಈ ವಾಸ್ತವಾಂಶ ವರದಿಯನ್ನು ಯಾವ ಕಾರಣಕ್ಕಾಗಿ ತಡೆಹಿಡಿದಿದ್ದಾರೆ ಎಂದು ಪ್ರಶ್ನಿಸಲಾಗುತ್ತಿದೆ.1
- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ದಸರಾ ಪಾಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಮೈಸೂರು ಸಂಸದ ಯದುವೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ದಸರಾ ಸಂದರ್ಭದಲ್ಲಿ ಪ್ರತಿವರ್ಷ ಪಾಸ್ ವಿತರಣೆಯ ವಿಚಾರವೇ ದೊಡ್ಡ ಗೊಂದಲಕ್ಕೆ ಕಾರಣವಾಗುತ್ತಿದೆ ಎಂದಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಮ್ಮ ಮುಖ್ಯ ಕೆಲಸ ಬಿಟ್ಟು ಪಾಸ್‌ಗಳ ಹಂಚಿಕೆ ವಿಚಾರದಲ್ಲೇ ಸಮಯ ಕಳೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಗೊಂದಲಕ್ಕೆ ಶಾಶ್ವತ ಪರಿಹಾರವಾಗಿ ಗ್ಲೋಬಲ್ ಟೆಂಡರ್ ಮಾದರಿಯಲ್ಲಿ ಪಾಸ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿರುವುದಾಗಿ ಯದುವೀರ್ ತಿಳಿಸಿದ್ದಾರೆ. ಇದೇ ವೇಳೆ, 'ಸರಳ ದಸರಾ' ಎಂಬ ಹೆಸರಿನಲ್ಲಿ ಆಚರಣೆ ನಡೆಸುವುದರಿಂದ ಮೈಸೂರಿನ ಪ್ರವಾಸೋದ್ಯಮಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಆ ರೀತಿಯ ಹೆಸರು ಅಥವಾ ಪರಿಕಲ್ಪನೆಯನ್ನು ಬಳಸಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಈ ಸರ್ಕಾರವು ಸಾರ್ವಜನಿಕರ ಮಾತನ್ನು ಕೇಳುವುದಿಲ್ಲ ಎಂದು ಯದುವೀರ್ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ಮಂಡ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಬಂಧಿಸಿರುವ ವ್ಯಕ್ತಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಷಣ್ಮುಖೇ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಾಗಣ್ಣಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ.1
- ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಕಂಬಳ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದ್ದಾರೆ. ಮೈಸೂರು ದಸರಾವನ್ನು ಬೇರೆ ಕಡೆ ಆಯೋಜಿಸಿದರೆ ಹೇಗೋ, ಹಾಗೆಯೇ ದಸರಾ ಸಮಯದಲ್ಲಿ ಮೈಸೂರಿನಲ್ಲಿ ಕಂಬಳ ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟ ಅವರು, ಈ ವಿಚಾರದಲ್ಲಿ ಕಂಬಳ ಬೇಡ ಎಂಬ ಯದುವೀರ್ ಒಡೆಯರ್ ಅವರ ನಿಲುವಿಗೆ ತಾವು ಸಹಮತ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ. ಈ ವಿಷಯದಲ್ಲಿ ಹಠಮಾರಿತನ ಬಿಟ್ಟು ಜನರ ಮಾತಿಗೆ ಮನ್ನಣೆ ನೀಡುವಂತೆ ಡಿಕೆ ಶಿವಕುಮಾರ್ ಅವರಿಗೆ ವಿಜಯೇಂದ್ರ ಸಲಹೆ ನೀಡಿದ್ದಾರೆ. ತಮಗೆ ಕಂಬಳದ ಮೇಲೆ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಜ್ಯ ಸರ್ಕಾರವು ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ಕಂಬಳ ಆಯೋಜಿಸಲಿ, ಅದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಕಂಬಳಕ್ಕೆ ಅನುದಾನ ನೀಡಿದ್ದನ್ನು ಸ್ಮರಿಸಿದ ಅವರು, ಮೈಸೂರಿನಲ್ಲಿ ದಸರಾ ಸಂಭ್ರಮದ ವೇಳೆ ಕಂಬಳ ಬೇಡ ಎಂಬುದು ಸ್ಥಳೀಯರ ಆಗ್ರಹವಾಗಿದೆ ಎಂದು ಹೇಳಿದ್ದಾರೆ.1
- ತುರುವೇಕೆರೆ ಪಟ್ಟಣದ ತಾಲೂಕು ಕಚೇರಿಯ ಹಿಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್ ಹಲವು ದಿನಗಳಿಂದ ಅನಿಶ್ಚಿತವಾಗಿ ಬಾಗಿಲು ಮುಚ್ಚುತ್ತಿದ್ದು, ಇದರಿಂದ ಬಡ ಕೂಲಿ ಕಾರ್ಮಿಕರು, ಆಶಕ್ತರು, ವಯೋವೃದ್ಧರು ಮತ್ತು ಬೀದಿ ವ್ಯಾಪಾರಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ನಗರ ಹಾಗೂ ಗ್ರಾಮೀಣ ಭಾಗದಿಂದ ಹಸಿವು ನೀಗಿಸಿಕೊಳ್ಳಲು ಬರುವವರಿಗೆ ಗೇಟಿಗೆ ಬೀಗ ಹಾಕಿರುವುದು ನಿತ್ಯದ ಗೋಳಾಗಿದೆ. ಯಾವುದೇ ನಾಮಫಲಕವಿಲ್ಲದ ಈ ಕ್ಯಾಂಟೀನ್ ಮುಂದೆ ಬರುವ ಜನರು, ಗೇಟ್ ಬಂದ್ ಆಗಿರುವುದನ್ನು ಕಂಡು ಹತಾಶರಾಗಿ ಹಿಂತಿರುಗುತ್ತಿದ್ದಾರೆ. ಕ್ಯಾಂಟೀನ್ ಸಿಬ್ಬಂದಿಯನ್ನು ವಿಚಾರಿಸಿದಾಗ ಅವರು ಉಡಾಫೆಯ ಉತ್ತರ ನೀಡುತ್ತಿದ್ದು, ನಾನಾ ನೆಪಗಳನ್ನು ಒಡ್ಡಿ ಆಹಾರ ತಯಾರಿಸದೇ ಸಾರ್ವಜನಿಕರನ್ನು ಕಣ್ಣುಮುಚ್ಚಾಲೆ ಆಟವಾಡಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಸಿದು ಬರುವ ಜನರು ಬಾಗಿಲು ತೆಗೆಯುವಂತೆ ಅಂಗಲಾಚಿದರೂ ಅಧಿಕಾರಿಗಳಿಗೆ ಆ ಆರ್ತನಾದ ಕೇಳಿಸುತ್ತಿಲ್ಲ. ನಿರ್ವಹಣೆಗಾರರ ನಿರ್ಲಕ್ಷ್ಯ ಮತ್ತು ಮನಸೋ ಇಚ್ಛೆಯ ವರ್ತನೆಯಿಂದಾಗಿ ಸರ್ಕಾರ ಹಾಗೂ ವ್ಯವಸ್ಥಾಪಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಮತ್ತೆ ಎಂದಿಗೂ ಕಾರ್ಯನಿರ್ವಹಿಸುತ್ತದೆ ಮತ್ತು ಈ ಸಮಸ್ಯೆಗಳಿಗೆ ಯಾವಾಗ ಶಾಶ್ವತ ಪರಿಹಾರ ಸಿಗುತ್ತದೆ ಎಂಬುದೇ ಈಗ ಸಾರ್ವಜನಿಕರ ಪ್ರಶ್ನೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.2
- ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಿಲ್ಕ್ ಇಂಡಿಯಾ ವತಿಯಿಂದ ವಿಶೇಷ ಸೀರೆ ಮೇಳವನ್ನು ಆಯೋಜಿಸಲಾಗಿದೆ. ಸಾಂಪ್ರದಾಯಿಕ ಹಾಗೂ ಆಧುನಿಕ ವಿನ್ಯಾಸದ ಸೀರೆಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮೇಳವು ಜುಲೈ 10ರಿಂದ 15ರವರೆಗೆ ನಡೆಯಲಿದ್ದು, ಮಹಿಳೆಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಮೇಳದಲ್ಲಿ ಪಶ್ಚಿಮ ಬಂಗಾಳದ ಕಲ್ಕತ್ತಾ ಜಾಮ್ದಾನಿ, ಬಾಲುಚರಿ ಮತ್ತು ತಾಂತ್ ಸೀರೆಗಳು, ತೆಲಂಗಾಣದ ಪೋಚಂಪಳ್ಳಿ ಇಕ್ಕತ್ ಹಾಗೂ ಗಡ್ವಾಲ್, ತಮಿಳುನಾಡಿನ ಕಾಂಚಿಪುರಂ ಪಟ್ಟು, ಮತ್ತು ಕರ್ನಾಟಕದ ಮೈಸೂರು ಸಿಲ್ಕ್, ಇಳಕಲ್ ಹಾಗೂ ಬೆಂಗಳೂರು ಸಿಲ್ಕ್ ಸೇರಿದಂತೆ ದೇಶದ ವಿವಿಧ ಭಾಗಗಳ ಪ್ರಸಿದ್ಧ ಸೀರೆಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ಇವುಗಳ ಜೊತೆಗೆ ಬನಾರಸಿ, ಲಿನೆನ್, ಕಾಟನ್, ಸಾಫ್ಟ್ ಸಿಲ್ಕ್, ಟಸ್ಸರ್, ಆರ್ಗನ್ಜಾ, ಚಂದೇರಿ, ಮಹೇಶ್ವರಿ, ಜಾರ್ಜೆಟ್ ಮತ್ತು ಕ್ರೇಪ್ ಸೇರಿದಂತೆ ಹಬ್ಬ ಹಾಗೂ ಮದುವೆ ಸಮಾರಂಭಗಳಿಗೆ ಸೂಕ್ತವಾದ ವಿವಿಧ ವಿನ್ಯಾಸದ ಸೀರೆಗಳು ಲಭ್ಯವಿವೆ. ಮದುವೆ, ಗೃಹಪ್ರವೇಶ ಮತ್ತು ಹಬ್ಬಗಳಂತಹ ಶುಭ ಸಮಾರಂಭಗಳಿಗೆ ಅಗತ್ಯವಿರುವ ಸೀರೆಗಳನ್ನು ಒಂದೇ ಸ್ಥಳದಲ್ಲಿ ಖರೀದಿಸಲು ಮೇಳ ಅವಕಾಶ ಕಲ್ಪಿಸಿದೆ. ನೇರವಾಗಿ ನೇಕಾರರಿಂದ ಗ್ರಾಹಕರಿಗೆ ಸೀರೆಗಳು ತಲುಪುವ ವ್ಯವಸ್ಥೆ ಇರುವುದರಿಂದ ಗುಣಮಟ್ಟದ ಸೀರೆಗಳು ಕೈಗೆಟುಕುವ ದರದಲ್ಲಿ ದೊರೆಯುತ್ತಿವೆ. ಅಲ್ಲದೆ, ಕೆಲವು ಆಯ್ದ ಸೀರೆಗಳ ಮೇಲೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸಾರ್ವಜನಿಕರಿಗಾಗಿ ಮುಕ್ತವಾಗಿರುವ ಈ ಮೇಳಕ್ಕೆ ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಮಹಿಳೆಯರು ಕುಟುಂಬ ಸಮೇತರಾಗಿ ಆಗಮಿಸುತ್ತಿದ್ದಾರೆ. ಕೈಮಗ್ಗ ನೇಕಾರರಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಮೇಳ ಗಮನ ಸೆಳೆಯುತ್ತಿದೆ.2
- ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತ ವೇಣೂರು ಅವರು ಹೊಸದಾಗಿ ಆರಂಭಿಸಿರುವ 'ಶ್ರೀ ಅನ್ನಪೂರ್ಣೇಶ್ವರಿ ಮೆಸ್'ನ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಜೀವನ ಸಾಧನೆ ಮತ್ತು ಸಂದೇಶಗಳು ದೇಶದ ಯುವಶಕ್ತಿಗೆ ದೊಡ್ಡ ಪ್ರೇರಣೆಯಾಗಿವೆ ಎಂದು ಬಣ್ಣಿಸಿದರು. ಒಂದು ಕಾಲದಲ್ಲಿ ಕೇವಲ ಐದು ರೂಪಾಯಿಗೆ ಉಪಹಾರ ನೀಡುವ ಸಣ್ಣ ಪಾಸ್ಟ್ ಫುಡ್ ಸೆಂಟರ್ ಆರಂಭಿಸಿದ್ದ ವೇಣೂರು, ಇಂದು ಉದ್ಯಮಿಯಾಗಿ ಬೆಳೆದಿರುವುದು ಮೋದಿಯವರ ಪ್ರೇರಣೆಯ ಫಲವೇ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಮಳವಳ್ಳಿ ಕ್ಷೇತ್ರಕ್ಕೂ ತಮಗೂ ಅವಿನಾಭಾವ ಸಂಬಂಧವಿದೆ ಎಂದು ಈ ವೇಳೆ ಅವರು ಸ್ಮರಿಸಿದರು. ಕಾರ್ಯಕ್ರಮದ ವೇಳೆ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ತೆಂಕಹಳ್ಳಿ ಮಹೇಶ್ ಮತ್ತು ಯುವ ಮುಖಂಡ ಕುಮಾರ್ ಅವರನ್ನು ಹುಟ್ಟುಹಬ್ಬದ ಅಂಗವಾಗಿ ಅಭಿನಂದಿಸಿ ಗೌರವಿಸಲಾಯಿತು. ಪಟ್ಟಣಕ್ಕೆ ಆಗಮಿಸಿದ ಅಶ್ವಥ್ ನಾರಾಯಣ್ ಅವರನ್ನು ಕಾರ್ಯಕರ್ತರು ಪಟಾಕಿ ಸಿಡಿಸಿ, ಬೃಹತ್ ಪುಷ್ಪಹಾರದೊಂದಿಗೆ ಅದ್ಧೂರಿಯಾಗಿ ಬರಮಾಡಿಕೊಂಡರು. ಈ ಸಮಾರಂಭದಲ್ಲಿ ಅಪ್ಪಾಜಿಗೌಡ, ಮುದ್ದಮಲ್ಲು, ವೇಣು, ಮಾಜಿ ಅಧ್ಯಕ್ಷ ಕೃಷ್ಣ, ರಾಜೀವ್, ಕೆ.ಸಿ. ನಾಗೇಗೌಡ, ಹಂಚಿಪುರ ಅಶೋಕ್, ಅಲದಹಳ್ಳಿ ಕಾಂತರಾಜು, ಕುಮಾರ್, ಸೈಯದ್ ಸಲಿಂಪಾಷ, ಮಹಾಲಿಂಗು ಸೇರಿದಂತೆ ನೂರಾರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.1
- ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸಬಾರದು ಎಂಬ ಸಂಸದ ಯದುವೀರ್ ಒಡೆಯರ್ ಅವರ ಅಭಿಪ್ರಾಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ತಮ್ಮ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾದ ಸಾಂಪ್ರದಾಯಿಕ ಸ್ವರೂಪವನ್ನು ಬದಲಾಯಿಸುವ ಯಾವುದೇ ಪ್ರಯತ್ನವನ್ನು ಮಾಡಬಾರದು ಎಂದು ಆಗ್ರಹಿಸಿದರು. ದಸರಾ ಸಾಂಪ್ರದಾಯಿಕ ಆಚರಣೆಯ ಕುರಿತು ಮಾತನಾಡಿದ ವಿಜಯೇಂದ್ರ, ಮೈಸೂರು ದಸರಾವನ್ನು ಗುಲ್ಬರ್ಗದಲ್ಲಿ ಆಚರಿಸುತ್ತೇವೆ ಎಂದರೆ ಹೇಗಿರುತ್ತದೆ ಎಂದು ಪ್ರಶ್ನಿಸಿದರು. ಈ ವಿಚಾರದಲ್ಲಿ ಪ್ರತಿಷ್ಠೆ ತೋರದೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಎಂದು ಅವರು ಒತ್ತಾಯಿಸಿದರು. ತಮಗೆ ಕಂಬಳದ ವಿರುದ್ಧ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಂಬಳಕ್ಕೆ ಸರ್ಕಾರದಿಂದ ಅನುದಾನ ನೀಡಲಾಗಿತ್ತು ಎಂಬುದನ್ನು ನೆನಪಿಸಿದರು. ರಾಜ್ಯ ಸರ್ಕಾರ ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ಕಂಬಳ ಆಯೋಜಿಸಿದರೆ ನಮ್ಮ ಸಂಪೂರ್ಣ ಸಹಕಾರ ಇರುತ್ತದೆ ಎಂದು ಅವರು ತಿಳಿಸಿದರು. ಆದರೆ, ಮೈಸೂರು ದಸರಾ ಆಚರಣೆ ವೇಳೆ ಕಂಬಳ ಬೇಡ ಎಂದು ಇಲ್ಲಿನ ಸ್ಥಳೀಯ ಜನರು ಹೇಳುತ್ತಿದ್ದಾರೆ. ಅದನ್ನು ಬಿಟ್ಟು ಬಂಡತನದಿಂದ 'ಮಾಡಿಯೇ ಮಾಡುತ್ತೇವೆ' ಎಂಬ ಧೋರಣೆ ತೋರುವುದು ಸರಿಯಲ್ಲ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದು, ಸರ್ಕಾರ ಜನರ ಅಭಿಪ್ರಾಯಕ್ಕೆ ಗೌರವ ನೀಡಬೇಕು ಎಂದು ಒತ್ತಾಯಿಸಿದ್ದಾರೆ.1